ಲೇಖಕ: admin

ಕುಶಾಲನಗರ ಜು.21 NEWS DESK : ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಗಿಡಗಳ ಸಂರಕ್ಷಣೆ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕಾಗಿದೆ ಎಂದು ಹಿರಿಯ ವೈದ್ಯರು ಹಾಗೂ ರೋಟರಿ ಸದಸ್ಯರಾದ ಡಾ ದೇವದಾಸ್ ಭಟ್ ಕರೆ ನೀಡಿದ್ದಾರೆ. ಅವರು ಕುಶಾಲನಗರದಲ್ಲಿ ತಾಲೂಕು ಕಾರ್ಯದರ್ಶಿತ ಪತ್ರಕರ್ತರ ಸಂಘ ಮತ್ತು ರೋಟರಿ ಕುಶಾಲನಗರ, ಅರಣ್ಯ ಇಲಾಖೆ ಸಹಯೋಗದಲ್ಲಿ ನಡೆದ ಹೆದ್ದಾರಿ ಬದಿಯಲ್ಲಿ ನೆರಳು ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪಟ್ಟಣದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಸಂಘ ಸಂಸ್ಥೆಗಳ ಮೂಲಕ ಬೆಳೆಸಿದ ಮರ ಗಿಡಗಳಿಗೆ ಹಾನಿಯಾಗದಂತೆ ನಾಗರಿಕರು  ಎಚ್ಚರ ವಹಿಸಬೇಕು. ಪ್ರತಿಯೊಬ್ಬರೂ ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಉತ್ತಮ ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕಾಗಿದೆ ಎಂದು ಹೇಳಿದರು. ಈ ಸಂದರ್ಭ ಮಾತನಾಡಿದ ಕುಶಾಲನಗರ ತಾಲೂಕು ಕಾರ್ಯಗತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ ಎನ್ ಚಂದ್ರಮೋಹನ್ ಸಂಘದ ಬೆಳ್ಳಿ ಹಬ್ಬದ ಅಂಗವಾಗಿ ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯಲ್ಲಿ 25 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ  ಎಂದರು. ಕುಶಾಲನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣ…

Read More

ಗುಂಡ್ಲುಪೇಟೆ ಜು.20 NEWS DESK : ಕಾರು ಮತ್ತು ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಎಪಿಎಂಸಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ-766 ರಲ್ಲಿ ಶನಿವಾರ ರಾತ್ರಿ ನಡೆದಿದೆ. ಚಾಮರಾಜನಗರ ಅಂಬೇಡ್ಕರ್ ಬಡಾವಣೆ ನಿವಾಸಿಗಳಾದ ಮಹೇಶ್ ಹಾಗೂ ದರ್ಶನ್ ಮೃತ ದುರ್ದೈವಿಗಳು. ಚಾಲಕ ಕಿಟ್ಟಿ ಹಾಗೂ ಸಚಿನ್ ಗಾಯಾಳುಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಂಡ್ಲುಪೇಟೆಯಿಂದ ಮೈಸೂರು ಕಡೆಗೆ ಬರುತ್ತಿದ್ದ ಕಾರು, ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Read More

ಚೆಟ್ಟಳ್ಳಿ ಜು.20 NEWS DESK : ಚೆಟ್ಟಳ್ಳಿ- ಮಡಿಕೇರಿ ಮುಖ್ಯ ರಸ್ತೆಯಲ್ಲಿ ಭೂಕುಸಿತಗೊಂಡ ಪ್ರದೇಶಕ್ಕೆ ಮಡಿಕೇರಿ‌ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಬೇಟಿ ನೀಡಿ ಪರಿಶೀಲಿಸಿದರು. ಭೂಕುಸಿತದ ಮಣ್ಣನ್ನು ತೆರವುಗೊಳಿಸಲು ಲೋಕೋಪಯೋಗಿ ಇಲಾಖಾ ಅಧಿಕಾರಿಗಳಿಗೆ ಆದೇಶಿಸಿದರು. ಚೆಟ್ಟಳ್ಳಿ- ಮಡಿಕೇರಿ ಮುಖ್ಯರಸ್ತೆ ಅಪಾಯದಿಂದ ಕೂಡಿದೆ, ಅಡಚಣೆ ಉಂಟು ಮಾಡುತ್ತಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಬಗ್ಗೆ  ಸ್ಥಳೀಯರು ಹಾಗೂ ವಕೀಲ ಕಾಡೇಮಾಡ ವಿನ್ಸಿ ಅಪ್ಪಯ್ಯ ಅವರು ಶಾಸಕರ ಗಮನ ಸೆಳೆದರು. ಪ್ರಮುಖರಾ ಸುನಿತ‌ ಮಂಜುನಾಥ್, ಚೆಟ್ಟಳ್ಳಿ ಪಂಚಾಯಿತಿ ಅಧ್ಯಕ್ಷರಾದ ಸಿಂಧು, ಸದಸ್ಯ ತೀರ್ಥಕುಮಾರ್, ಕಾಂಗ್ರೆಸ್ ವಲಯಾಧ್ಯಕ್ಷ ಮಹಮದ್ ರಫಿ, ಕಾರ್ಯದರ್ಶಿ ಜುಬೇರ್ ಮತ್ತಿತರರು ಹಾಜರಿದ್ದರು.

Read More

ಅಂಕೋಲ ಜು.20 NEWS DESK : ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕು ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಹಲವರು ದಾರುಣ ಸಾವನ್ನಪ್ಪಿದ ಸ್ಥಳಕ್ಕೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿದರು. ಮಳೆ, ನೆರೆ, ಪರಿಹಾರ ಕಾರ್ಯ, ರಸ್ತೆ ತೆರವು ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದರು ಹಾಗೂ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ವಿಧಾನಸಭೆಯ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಸೇರಿದಂತೆ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.

Read More

ಮಡಿಕೇರಿ ಜು.20 NEWS DESK : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಶನಿವಾರ ಮಡಿಕೇರಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿಯ ಕರ್ತೋಜಿ ಬಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಹಾಗೆಯೇ ಕೊಯನಾಡು ಬಳಿ ಮಳೆಯಿಂದ ಹಾನಿಯಾಗಿರುವ ಸರ್ಕಾರಿ ಶಾಲೆಗೆ ಭೇಟಿ ನೀಡಿ ವೀಕ್ಷಿಸಿದರು. ಹೆದ್ದಾರಿಗೆ ಸಂಬಂಧಿಸಿದಂತೆ ಇಲ್ಲಿನ ಸ್ಥಳೀಯರೊಂದಿಗೆ ಸಮಾಲೋಚಿಸಿದ ಸಚಿವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. ಸ್ಥಳೀಯರು ಮಾತನಾಡಿ ಗುಡ್ಡದ ಮಣ್ಣನ್ನು ರಸ್ತೆಗೆ ಸಾಗಿಸುತ್ತಿದ್ದು, ಈ ಕೆಲಸ ಮೊದಲು ಸ್ಥಗಿತವಾಗಬೇಕು ಎಂದು ಸಚಿವರ ಗಮನಕ್ಕೆ ತಂದರು. 2018 ರ ನಂತರ ಗುಡ್ಡದ ಮಣ್ಣು ಕುಸಿಯುತ್ತಿದೆ. ಅದಕ್ಕೂ ಮೊದಲು ಸಮಸ್ಯೆ ಇರಲಿಲ್ಲ. ರಸ್ತೆ ಅಗಲೀಕರಣವಾದಂತೆ ಸಮಸ್ಯೆಗಳು ಹೆಚ್ಚಾದವು ಎಂದು ಸ್ಥಳೀಯರೊಬ್ಬರು ತಿಳಿಸಿದರು‌.     ಸದ್ಯ ಇರುವ ರಸ್ತೆಯನ್ನು ಸರಿಪಡಿಸಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಬೇಕು. ಸಾಧ್ಯವಾದಲ್ಲಿ ತಡೆಗೋಡೆ ನಿರ್ಮಾಣ ಮಾಡಬೇಕು. ಇಲ್ಲದಿದ್ದಲ್ಲಿ ಎಲ್ಲರಿಗೂ…

Read More

ಸೋಮವಾರಪೇಟೆ ಜು.20 NEWS DESK : ಸೋಮವಾರಪೇಟೆ ತಾಲ್ಲೂಕಿನಾದ್ಯಂತ ಮಳೆಯ ರಭಸ ತುಸು ಕಡಿಮೆಯಾಗಿದ್ದು, ಶಾಂತಳ್ಳಿ ಹೋಬಳಿಯ ಗ್ರಾಮೀಣ ಭಾಗದಲ್ಲಿ ಭತ್ತ ನಾಟಿಗೆ ಸಿದ್ದಗೊಂಡಿದ್ದ ಗದ್ದೆಗಳು ಜಲಾವೃತವಾಗಿವೆ. ಕುಂದಳ್ಳಿ, ಕನ್ನಳ್ಳಿ, ಬೇಕನಹಳ್ಳಿ ಗ್ರಾಮಗಳಲ್ಲಿ ಭತ್ತ ಗದ್ದೆಯಲ್ಲು ಹೂಳು ಸಂಗ್ರಹವಾಗಿದೆ. ಮರಗಳು ವಿದ್ಯುತ್ ಮಾರ್ಗದ ಮೇಲೆ ಬಿದ್ದು, ಹಲವು ಗ್ರಾಮಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಿದೆ. ವಿದ್ಯುತ್ ಮಾರ್ಗ ಸರಿಪಡಿಸಲು ಸೆಸ್ಕ್ ಸಿಬ್ಬಂದಿಗಳು ಹರಸಾಹಸ ಮಾಡುತ್ತಿದ್ದಾರೆ. ಬಳಗುಂದ ಗ್ರಾಮದಲ್ಲಿ 33ಕೆವಿ ವಿದ್ಯುತ್ ಮಾರ್ಗದ ತಂತಿ ಮೇಲೆ ಶುಕ್ರವಾರ ರಾತ್ರಿ ಮರಬಿದ್ದು ಹಾನಿಯಾಗಿ, ರಾತ್ರಿಯೇ ಸೆಸ್ಕ್ ಸಿಬ್ಬಂದಿಗಳು ಮಾರ್ಗ ದುರಸ್ತಿಪಡಿಸಿ, ಶನಿವಾರ ಮಧ್ಯಾಹ್ನದ ಹೊತ್ತಿಗೆ ಪಟ್ಟಣ ಮತ್ತು ಗ್ರಾಮೀಣ ಭಾಗಗಳಿಗೆ ವಿದ್ಯುತ್ ಕಲ್ಪಿಸಿ, ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮಳೆಹಾನಿಯಾಗಿರುವ ಪ್ರದೇಶ ಮತ್ತು ಈ ಹಿಂದಿನ ವರ್ಷಗಳಲ್ಲಿ ಭೂಕುಸಿತ ಸಂಭವಿಸಿದ ಸ್ಥಳಗಳಿಗೆ ಉಪವಿಭಾಗಾಧಿಕಾರಿ ವಿನಾಯಕ ನರ್ವಡೆ, ತಾಲ್ಲೂಕು ತಹಸೀಲ್ದಾರ್ ನವೀನ್ ಹಾಗು ಕಂದಾಯ ನಿರೀಕ್ಷಕ ದಾಮೋದರ್ ಭೇಟಿ ನೀಡಿ ಪರಿಶೀಲಿಸಿದರು. ತೋಳೂರುಶೆಟ್ಟಳ್ಳಿ ಗ್ರಾಮದ ವಿ.ಕೆ.ಇಂದಿರಾ ಅವರ ಮನೆಯ…

Read More

ಕುಶಾಲನಗರ ಜು.20 NEWS DESK : ಕನಿಷ್ಠ ವೇತನ ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಜು.23 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟ ಧರಣಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಗ್ರಾಮ ಪಂಚಾಯಿತಿ ನೌಕರರ ಸಂಘದ ಕೊಡಗು ಜಿಲ್ಲಾ ಅಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಭರತ್ ಗ್ರಾ.ಪಂ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರ, ಡಾಟಾ ಎಂಟ್ರಿ ಆಪರೇಟರ್ ,ನೀರು ಗಂಟಿಗಳು, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು. ಪ್ರಸಕ್ತ ದಿನನಿತ್ಯದ ಬಳಕೆ ವಸ್ತುಗಳ ಮೇಲೆ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ರೂ.31 ಸಾವಿರ ನಿಗದಿಗೊಳಿಸಬೇಕು ಸೇರಿದಂತೆ ಸುಮಾರು 19 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಬೆಲೆ ಏರಿಕೆ ಗಗನಕ್ಕೆ ಏರಿದೆ, ಈ ಮೂಲಕ ಸಾಮಾನ್ಯ ಕಾರ್ಮಿಕನ ಬದುಕು ಅತಂತ್ರವಾಗಿದೆ, ಕೂಲಿ ವೇತನ ಕನಿಷ್ಠ ದರದಲ್ಲಿ ಇದೆ.…

Read More

ಸುಂಟಿಕೊಪ್ಪ ಜು.20 NEWS DESK : ಬ್ಯಾಂಕ್‍ ಆಫ್ ಬರೋಡ ಗದ್ದೆಹಳ್ಳ ಶಾಖೆಯ ವತಿಯಿಂದ ಬ್ಯಾಂಕಿನ 117ನೇ ಸಂಸ್ಥಾಪನ ದಿನವನ್ನು ಆಚರಿಸಲಾಯಿತು. ಸುಂಟಿಕೊಪ್ಪ ಶಾಖಾ ಕಚೇರಿಯಲ್ಲಿ ಗ್ರಾಹಕರಿಗೆ ಸಿಹಿ ಹಂಚಿ ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ಬ್ಯಾಂಕಿನ ವ್ಯವಸ್ಥಾಪಕ ಸೀಲಂ ಸ್ವರೂಪ್, ಬ್ಯಾಂಕ್‍ಆಫ್ ಬರೋಡವು ದೇಶ ವಿದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ ಅಲ್ಲದೆ ಗ್ರಾಹಕರಿಗೆ ಉತ್ತಮ ಸೇವೆಯನ್ನು ಸಲ್ಲಿಸುತ್ತಿದೆ. ಗ್ರಾಹಕರ ಸಹಕಾರದಿಂದ 100 ಕೋಟಿಗೂ ಅಧಿಕ ವ್ಯವಹಾರವನ್ನು ನಡೆಸುತ್ತಿದೆ ಎಂದರು. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎ.ಲೋಕೇಶ್‍ಕುಮಾರ್ ಮಾತನಾಡಿ, ಹೆಚ್ಚಿನ ಗ್ರಾಹಕರನ್ನು ಹೊಂದಿರುವ ಬ್ಯಾಂಕ್‍ಆಪ್ ಬರೋಡ ಉತ್ತಮವಾಗಿ ಕಾರ್ಯನಿರ್ವಹಿಸಿ ಅಧಿಕ ವ್ಯವಹಾರವನ್ನು ನಡೆಸಿ ಸಾರ್ವಜನಿಕರಲ್ಲಿ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಂಡಿದೆ ಮುಂದಿನ ದಿನಗಳಲ್ಲಿ ಅಭಿವೃದ್ಧಿಯತ್ತ ಸಾಗಲಿ ಎಂದರು. ಈ ಸಂದರ್ಭ ಬ್ಯಾಂಕಿನ ಅಧಿಕಾರಿಗಳಾದ ಚಂದ್ರಶೇಖರ್ ರೆಡ್ಡಿ , ಚಿನ್ನಬಾಬು, ಸಿಬ್ಬಂದಿಗಳಾದ ಸಂತೋಷ್, ಎ.ಚೆನ್ನಮ್ಮ, ಪುಷ್ಪಾವತಿ ಶಾಂತಪ್ಪ, ಹಾಗೂ ಕಾಫಿ ಬೆಳೆಗಾರರಾದ ಎಸ್.ಬಿ. ಜಯರಾಜ್, ಜೆ.ಸಂಜಯ್, ವ್ಯಾಪಾರಸ್ಥರಾದ ಮುರಳಿಧರ್ ಕಾಮತ್, ರವಿ, ಜೋಸೆಫ್,…

Read More

ಕುಶಾಲನಗರ ಜು.20 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಗ್ರಾಮದಲ್ಲಿ ಬೃಹತ್ ಗಾತ್ರದ ಕಲ್ಲು ಕುಸಿದು ಮನೆಗೆ ಹಾನಿಯಾಗಿದ್ದು, ಸ್ಥಳಕ್ಕೆ ಸ್ಥಳೀಯ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನವಗ್ರಾಮದ ವಿಶೇಷ ಚೇತನರಾದ ಗುರುಮೂರ್ತಿ ಅವರ ಮನೆಗೆ ಬೃಹತ್ ಗಾತ್ರದ ಕಲ್ಲು ಬಿದ್ದು ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮನೆಯವರಿಗೆ ಯಾವುದೇ ಅನಾಹುತ ಸಂಭವಿಸಲಿಲ್ಲ. ಮಳೆಯ ಅವಾಂತರದಿಂದ ಅಪಘಾತ ಸಂಭವಿಸಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಗುರು ಮೂರ್ತಿ ಆಗ್ರಹಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಗ್ರಾ.ಪಂ ಸದಸ್ಯ  ಕೆ.ಬಿ.ಶಂಶುದ್ಧೀನ್, ಮಳೆಯಿಂದಾಗಿ ಬೃಹತ್ ಗಾತ್ರದ ಕಲ್ಲು ಕುಸಿದು ಬಿದ್ದಿದೆ. ಇದರಿಂದಾಗಿ ಗುರುಮೂರ್ತಿರವರ ಮನೆಗೆ ಹಾನಿಯಾಗಿದೆ. ಇವರು ವಿಶೇಷ ಚೇತನರಾಗಿದ್ದು, ಅಧಿಕಾರಿಗಳು ಇವರ ಸಮಸ್ಯೆಯನ್ನು ವಿಶೇಷವಾಗಿ ಪರಿಗಣಿಸಿ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷ ಬಾಸ್ಕರ್ ನಾಯಕ್, ಪಿಡಿಓ ಸಂತೋಷ್, ಗ್ರಾಮ ಲೆಕ್ಕಿಗ ಗುರುದರ್ಶನ್, ಸಿಬ್ಬಂದಿ ಲೋಕೇಶ್ ಇದ್ದರು.

Read More

ಮಡಿಕೇರಿ ಜು.20 NEWS DESK : ಪ್ರಸಕ್ತ(2024-25) ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪೋಷಕರ ವಾರ್ಷಿಕ ಆದಾರ ರೂ.6 ಲಕ್ಷಗಳ ಒಳಗಿದ್ದಲ್ಲಿ 2 ವರ್ಷಗಳ ಕೋರ್ಸ್‍ಗೆ ಗರಿಷ್ಟ ರೂ.20 ಲಕ್ಷ ಹಾಗೂ ರೂ.6 ಲಕ್ಷದಿಂದ ರೂ. 15 ಲಕ್ಷಗಳ ಒಳಗಿದ್ದಲ್ಲಿ 2 ವರ್ಷಗಳ ಕೋರ್ಸ್‍ಗೆ ರೂ.10 ಲಕ್ಷಗಳ ಗರಿಷ್ಟ ಮಿತಿಯಲ್ಲಿ ವಿದ್ಯಾರ್ಥಿ ವೇತನ ಪಾವತಿಸಲಾಗುವುದು. https://sevasindhu.karnataka.in/sevasindhu/Department services ಈ ಆನ್‍ಲೈನ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 30 ಕೊನೆಯ ದಿನವಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಇಲಾಖಾ ವೆಬ್‍ಸೈಟ್ https://dom.karnataka.gov.in ಹಾಗೂ ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‍ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಇವರನ್ನುಹಾಗೂ ಕಚೇರಿ ದೂ.ಸಂ.08272-225528 ಮತ್ತು ಮಾಹಿತಿ ಕೇಂದ್ರ, ಮಡಿಕೇರಿ 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ…

Read More