ಲೇಖಕ: admin

ಬೆಂಗಳೂರು ಜು.20 NEWS DESK : ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಶಾಲೆಗಳ ಮಕ್ಕಳಿಗೆ ವಾರದಲ್ಲಿ ನಾಲ್ಕು ದಿನ ಮೊಟ್ಟೆ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಶನ್‌ ಸಹಭಾಗಿತ್ವದಲ್ಲಿ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ ಆರು ದಿನ ಪೂರಕ ಪೌಷ್ಟಿಕ ಆಹಾರ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಅತ್ಯಗತ್ಯ. ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣದ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯವಾಗಿದೆ ಎಂದರು. ಅನೇಕ ಕಡೆಗಳಲ್ಲಿ ಮಕ್ಕಳು ಹಲವು ಕಾರಣಗಳಿಂದ ಬೆಳಗ್ಗೆ ತಿಂಡಿ ತಿನ್ನದೆ ಶಾಲೆಗೆ ಬರುವುದನ್ನು ನಾನು ನೋಡಿದ್ದೇನೆ. ಅಂತಹ ಮಕ್ಕಳು ಮಧ್ಯಾಹ್ನದವರೆಗೆ ಊಟವಿಲ್ಲದೆ ಉಪವಾಸ ಇರುತ್ತಾರೆ. ಹೊಟ್ಟೆ ಹಸಿದುಕೊಂಡು ತರಗತಿಯಲ್ಲಿ ಕುಳಿತು ಪಾಠ ಕೇಳುವುದು ಕಷ್ಟ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ನೀಡಲು ನಮ್ಮ ಸರ್ಕಾರ ನಿರ್ಧರಿಸಿತು.…

Read More

ಚಿಕ್ಕಮಗಳೂರು ಜು.20 NEWS DESK : ಶೃಂಗೇರಿಯ ಶಾರದಾಂಬೆ ದೇವಾಲಯದಲ್ಲಿ ಆ.15 ರಿಂದ ಭಕ್ತಾದಿಗಳಿಗೆ ವಸ್ತ್ರ ಸಂಹಿತೆ ಕಡ್ಡಾಯವಾಗಲಿದೆ. ದೇವಾಲಯ ಪ್ರವೇಶಿಸುವವರು ಸಂಪ್ರದಾಯಬದ್ಧ ಭಾರತೀಯ ಧಿರಿಸಿನಲ್ಲಿದ್ದರೆ ಮಾತ್ರ ದೇವಾಲಯದಲ್ಲಿ ಹತ್ತಿರದಿಂದ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ದೇವಾಲಯ ಹಾಗೂ ಶೃಂಗೇರಿ ಮಠದ ಆಡಳಿತಾಧಿಕಾರಿಗಳು ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ. ಒಂದು ವೇಳೆ ಭಾರತೀಯ ಉಡುಪುಗಳನ್ನಲ್ಲದೇ ಬೇರೆ ಉಡುಪುಗಳನ್ನು ಧರಿಸಿದರೆ, ದೇವಾಲಯದಲ್ಲಿ ಅರ್ಧ ಮಂಟಪದಿಂದ ಹೊರಭಾಗದಲ್ಲಿ ನಿಂತು ದೇವರ ದರ್ಶನ ಪಡೆಯಬೇಕಾಗುತ್ತದೆ ಅವರಿಗೆ ಒಳ ಭಾಗದಲ್ಲಿರುವ ಪರಿಕ್ರಮಕ್ಕೆ ಪ್ರವೇಶವಿರುವುದಿಲ್ಲ ಎಂದು ಆಡಳಿತಾಧಿಕಾರಿಗಳು ತಿಳಿಸಿದ್ದಾರೆ. ಪುರುಷರು ಧೋತಿ, ಶಲ್ಯ, ಉತ್ತರೀಯ (ಅಂಗವಸ್ತ್ರ) ಮಹಿಳೆಯರು ಸೀರೆ, ಸಲ್ವಾರ್, ದುಪಟ್ಟಾ, ಲಂಗಾ ದಾವಣಿ ಧರಿಸಿ ದೇವಾಲಯವನ್ನು ಪ್ರವೇಶಿಸಬಹುದಾಗಿದೆ.

Read More

ಮಡಿಕೇರಿ ಜು.20 NEWS DESK : ಕಾವೇರಿ ನದಿ ಪಾತ್ರದ ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಸಂತ್ರಸ್ಥರ ಅಹವಾಲು ಆಲಿಸಿದರು. ಪ್ರತಿ ಬಾರಿ ಪ್ರವಾಹದ ಭೀತಿ ಎದುರಿಸುತ್ತಿದ್ದು, ಬದುಕು ದುಸ್ತರವಾಗಿದೆ. ಆದ್ದರಿಂದ ನಮ್ಮನ್ನು ಸ್ಥಳಾಂತರ ಮಾಡಿ, ವಸತಿ ಕಲ್ಪಿಸುವಂತೆ ಕೋರಿದರು. ಕರಡಿಗೋಡು ನದಿ ದಡದಲ್ಲಿ ಸುಮಾರು 70 ಕ್ಕೂ‌ ಹೆಚ್ಚು ಕುಟುಂಬಗಳು ಇದ್ದು, ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು. ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಚಿವರು ಸದ್ಯದಲ್ಲೇ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು  ತಿಳಿಸಿದರು. ಮಾಲ್ದಾರೆ ವ್ಯಾಪ್ತಿಯಲ್ಲಿ ಸಂತ್ರಸ್ತರಿಗಾಗಿ 10 ಎಕರೆ ಜಾಗ ಗುರುತು ಮಾಡಲಾಗಿದ್ದು, ಈ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ…

Read More

ಮೂರ್ನಾಡು ಜು.20 NEWS DESK : ಕಕ್ಕಬ್ಬೆ ಗ್ರಾಮದ ಮಲ್ಮ ಹಾಕಿ ಕ್ಲಬ್ನ ಸದಸ್ಯರು ಸ್ವಯಂ ಪ್ರೇರಿತರಾಗಿ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚುವ ಮೂಲಕ ಶ್ರಮದಾನ ಮಾಡಿದರು. ವಿರಾಜಪೇಟೆಯಿಂದ ಕಕ್ಕಬ್ಬೆ ಮುಖಾಂತರ ಭಾಗಮಂಡಲಕ್ಕೆ ತೆರಳುವ ರಸ್ತೆ ತುಂಬಾ ಹದಗೆಟ್ಟಿದ್ದು, ನಿರಂತರ ಮಳೆಯಿಂದ ರಸ್ತೆಯಲ್ಲಿ ದೊಡ್ಡ ದೊಡ್ಡಗುಂಡಿಗಳಾಗಿವೆ. ವಾಹನ ಸಂಚಾರ ಹಾಗೂ ಸಾರ್ವಜನಿಕರು ನಡೆದಾಡಲು ಪರದಾಡುವಂತಾಗಿತ್ತು. ಈ ನಿಟ್ಟಿನಲ್ಲಿ ಮಲ್ಮ ಹಾಕಿ ಕ್ಲಬ್ನ ಸದಸ್ಯರು ನಿರಂತರ ಮಳೆಯ ನಡುವೆಯು ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು. ಮಲ್ಮ ಹಾಕಿ ಕ್ಲಬ್ನ ಅಧ್ಯಕ್ಷ ಮಾದಂಡ ಸಂದೇಶ್ ಅಪ್ಪಯ್ಯ, ಮಿಲನ್, ದಿವೇಶ್, ಅರ್ಜುನ ಕ್ಲಬ್ ನ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು. ವರದಿ : ಟಿ.ಸಿ. ನಾಗರಾಜ್, ಮೂರ್ನಾಡು   

Read More

ಮಡಿಕೇರಿ ಜು.20 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ವಿರಾಜಪೇಟೆ ಕ್ಷೇತ್ರದ ವಿವಿಧ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಗೋಣಿಕೊಪ್ಪದ ಕಿರೆಹೊಳೆ, ಪೊನ್ನಂಪೇಟೆ ಬಾಲಕರ ಕ್ರೀಡಾ ವಸತಿ ನಿಲಯ,ಬಾಳೆಲೆ ಕಾಳಜಿ ಕೇಂದ್ರ ಮತ್ತು ಬಲ್ಯಮಂಡೂರು ಕಾಳಜಿ ಕೇಂದ್ರಕ್ಕೆ ಭೇಟಿ ಅಲ್ಲಿನ ನಿವಾಸಿಗಳಿಗೆ ದೈರ್ಯ ತುಂಬಿದರು. ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಜಿಲ್ಲಾ ಪೋಲಿಸ್ ವರಿಷ್ಠಧಿಕಾರಿ ಕೆ.ರಾಮರಾಜನ್ ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಜು.20 NEWS DESK : ದಂಪತಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಟೋಳಿ ಗ್ರಾಮದಲ್ಲಿ ನಡೆದಿದೆ. ಶಿಲ್ಪಾ ಸೀತಮ್ಮ (38) ಗುಂಡೇಟಿನಿಂದ ಮೃತಪಟ್ಟಿರುವ ಮಹಿಳೆಯಾಗಿದ್ದು, ಗುಂಡು ಹಾರಿಸಿದ ಪತಿ ನಾಯಕಂಡ ಸಿ.ಬೋಪಣ್ಣ (43) ಬಂದೂಕಿನೊಂದಿಗೆ ಪೊಲೀಸರಿಗೆ ಶರಣಾಗಿದ್ದಾರೆ. ಪತಿ-ಪತ್ನಿ ನಡುವೆ ಕಳೆದ ಕೆಲವು ದಿನಗಳಿಂದ ಕೌಟುಂಬಿಕ ಕಲಹ ನಡೆಯುತ್ತಿದ್ದು, ಇಂದು ಬೆಳಿಗ್ಗೆ ಇದು ವಿಕೋಪಕ್ಕೆ ತಿರುಗಿ ಬೋಪಣ್ಣ ಅವರು ಶಿಲ್ಪಾ ಸೀತಮ್ಮ ಅವರ ಮೇಲೆ ಗುಂಡು ಹಾರಿಸಿರುವುದಾಗಿ ತಿಳಿದು ಬಂದಿದೆ. ನಾಯಕಂಡ ಸಿ.ಬೋಪಣ್ಣ ಅವರು ವಿರಾಜಪೇಟೆ ಪೊಲೀಸರಿಗೆ ಶರಣಾಗಿದ್ದು, ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ. ಕೊಲೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ವಿರಾಜಪೇಟೆ ನಗರ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಅಪರಾಧ ಪತ್ತೆ ದಳದ ತಜ್ಞರ ತಂಡ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Read More

ನಾಪೋಕ್ಲು ಜು.20 NEWS DESK : ನಾಪೋಕ್ಲು ವ್ಯಾಪ್ತಿಯ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ ಮುಂದುವರೆದ ಕಾರಣ ಕಾವೇರಿ ನದಿಯಲ್ಲಿ ಹರಿವಿನ ಪ್ರಮಾಣ ತೀವ್ರ ಹೆಚ್ಚಚ್ಚಾಗಿ ನದಿ, ತೊರೆ, ಗದ್ದೆ, ತೋಟಗಳು ಜಲವೃತಗೊಂಡಿದೆ. ಕೆಲವು ಕಡೆ ರಸ್ತೆಯ ಮೇಲೆ ಪ್ರವಾಹ ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ನಾಪೋಕ್ಲು – ಮೂರ್ನಾಡು ಸಂಪರ್ಕ ರಸ್ತೆಯ ಕಳೆದೆರಡು ದಿನಗಳಿಂದ ಕಾವೇರಿ ಪ್ರವಾಹದಿಂದಾಗಿ ಐದರಿಂದ ಆರು ಅಡಿ ನೀರಿದ್ದು ಕೊಟ್ಟಮುಡಿ ಜಂಕ್ಷನ್ ನಿಂದಲೇ ಸಂಪೂರ್ಣ ಸಂಚಾರ ಸ್ಥಗಿತಗೊಂಡಿದೆ. ಈ ಕಾರಣದಿಂದಾಗಿ ಪರ್ಯಾಯ ಸಂಪರ್ಕ ರಸ್ತೆ ಕಲ್ಪಿಸಲಾಗಿತ್ತು. ನಾಪೋಕ್ಲು, ಕೊಟ್ಟಮುಡಿ, ಕೇಮಾಟ್, ಕುಯ್ಯಂಗೇರಿ ಹೊದ್ದೂರು ಮಾರ್ಗವಾಗಿ ಮೂರ್ನಾಡಿಗೆ ವಾಹನಗಳು ಸಂಚರಿಸುತ್ತಿವೆ. ನಾಪೋಕ್ಲು – ಬೆಟಗೇರಿ, ಮಡಿಕೇರಿ ಸಂಪರ್ಕಿಸುವ ರಸ್ತೆಯ ಕೊಟ್ಟಮುಡಿಯಲ್ಲಿ ಕಾವೇರಿ ಪ್ರವಾಹದಿಂದ ರಸ್ತೆ ಮುಳುಗಡೆಯಾಗುವ ಅಪಾಯ ಮಟ್ಟದಲ್ಲಿದೆ. ಅಪಾಯ ಮಟ್ಟ ಮೀರಿ ಪ್ರವಾಹ ಹರಿಯುತ್ತಿರುವ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಗೇಡ್ ಅಳವಡಿಸಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದೆ. ಕೊಟ್ಟಮುಡಿ ಜಂಕ್ಷನ್ ಸಮೀಪದಲ್ಲಿ ಬಾಡಿಗೆ ಮನೆಗಳಿಗೆ ಕಾವೇರಿ ನದಿಯ ಆವರಿಸಿದ್ದು,…

Read More

ಮಡಿಕೇರಿ ಜು.20 NEWS DESK : ಶಿರಂಗಾಲ ಪಂಚಾಯಿತಿ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಹಾಗೂ ಸಂತ್ರಸ್ತರ ಜೊತೆಯಲ್ಲಿ ಚರ್ಚಿಸಿ ಅವರುಗಳಿಗೆ ಧೈರ್ಯ ತುಂಬಿದರು. ಹಾಗೂ ಅವರಿಗೆ ಅತ್ಯಗತ್ಯ ಇರುವ ಮೂಲಭೂತ ಸೌಕರ್ಯಗಳನ್ನು ಹಾಗೂ ತಾತ್ಕಾಲಿಕವಾಗಿ ವಾಸಿಸಲು ಬೇಕಾದ ವ್ಯೆವಸ್ಥೆ, ಆಹಾರ ಪದಾರ್ಥಗಳನ್ನು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಅನಾರೋಗ್ಯ ಬಳಲುತ್ತಿದ್ದ 2 ಬಡ ಕುಟುಂಬಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ  ವಿ.ಪಿ.ಶಶಿಧರ್, ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ಸುಂಟಿಕೊಪ್ಪ ಜು.20 NEWS DESK : ಗಾಳಿ ಮಳೆಯಿಂದಾಗಿ ಮನೆಯ ಮೇಲೆ ತಡೆಗೋಡೆ ಕುಸಿದು ಅಪಾರ ಪ್ರಾಮಾಣದಲ್ಲಿ ಹಾನಿಯಾಗಿರುವ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ. ಸುಂಟಿಕೊಪ್ಪ ಕಂದಾಯ ಕಚೇರಿ ಸಮೀಪದ ನಿವಾಸಿ ಡಿ.ಎಂ.ಮಂಜುನಾಥ್ ಎಂಬವರ ಮನೆಯ ಮೇಲೆ ತಡೆಗೋಡೆ ಕುಸಿದುಬಿದ್ದಿದ್ದು, ಮನೆಯಗೋಡೆ, ಗೃಹಉಪಯೋಗಿ ವಸ್ತುಗಳು ಹಾನಿಯಾಗಿ ಅಂದಾಜು ರೂ 1.50 ಲಕ್ಷ ಕ್ಕೂ ಹೆಚ್ಚು ನಷ್ಟವುಂಟಾಗಿದೆ ಎಂದು ಡಿ.ಎಂ.ಮಂಜುನಾಥ್ ಕಂದಾಯ ಇಲಾಖೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕರಾದ ಪ್ರಶಾಂತ್, ಗ್ರಾಮ ಆಡಳಿತಾಧಿಕಾರಿ ನಾಗೇಂದ್ರ, ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಸದಸ್ಯ ಬಿ.ಎಂ.ಸುರೇಶ್ ಭೇಟಿ ನೀಡಿ ಪರಿಶೀಲಿಸಿದರು.

Read More

ಸುಂಟಿಕೊಪ್ಪ ಜು.19 NEWS DESK : ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಇಲಾಖೆ ಹಾಗೂ ಶಿಕ್ಷಣ ಫೌಂಡೇಶನ್ ವತಿಯಿಂದ “ಆರ್ಟಿಫಿಷಿಯಲ್ ಇಂಟಲಿಜೆಂನ್ಸ್ ಫಾರ್ ಅಪ್ಸೈಕ್ಲಿಂಗ್”ತರಬೇತಿ ನೀಡಲಾಯಿತು. ಹರದೂರು ಗ್ರಾ.ಪಂ ಯ ಡಿಜಿಟಲ್ ಗ್ರಂಥಾಲಯದಲ್ಲಿ ಆಯೋಜಿಸಲಾದ ತರಬೇತಿ ಶಿಬಿರವನ್ನು ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಉದ್ಘಾಟಿಸಿದರು. “ಆರ್ಟಿಫಿಷಿಯಲ್ ಇಂಟಲಿಜೆಂನ್ಸ್ ಫಾರ್ ಅಪ್ಸೆಕಿಲಿಂಗ್” ತರಬೇತಿಯ ಬಗ್ಗೆ ಗ್ರಾಮ ಡಿಜಿ ವಿಕಸನದ ಜಿಲ್ಲಾ ಸಂಯೋಜಕರಾದ ರಕ್ಷಿತ್ ಹಾಗೂ ಜಿಲ್ಲಾ ವ್ಯವಸ್ಥಾಪಕರಾದ ದಿಲೀಫ್ ಮಾಹಿತಿಯನ್ನು ನೀಡಿದರು. ಈ ಸಂದರ್ಭ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಸರಕಾರದ ಯೋಜನೆಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು. ಈ ತರಬೇತಿ ಶಿಬಿರದಲ್ಲಿ 20 ಕ್ಕೂ ಮಿಕ್ಕಿ ಪಲಾನುಭವಿಗಳು ಭಾಗವಹಿಸಿದರು. ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯ ಮೇಲ್ವಿಚಾರಕಿ ಸಾನ ಸ್ವಾಗತಿಸಿ, ನಿರೂಪಿಸಿದರು.

Read More