ಲೇಖಕ: admin

ಮಡಿಕೇರಿ ಜು.19 NEWS DESK : ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಡಿಕೇರಿ ತಾಲ್ಲೂಕಿನ ಮರಗೋಡು ಗ್ರಾ.ಪಂ ವ್ಯಾಪ್ತಿಯ ಜನತಾ ಕಾಲೋನಿ ನಿವಾಸಿ ಬಿ.ಬಿ.ಸುಜಾತ (58) ಎಂಬುವವರಿಗೆ ಸೇರಿದ ಮನೆ ನೆಲಸಮವಾಗಿದೆ. ಮನೆಯ ಸಾಮಾಗ್ರಿಗಳೆಲ್ಲವು ಅವಶೇಷಗಳಡಿ ಸಿಲುಕಿ ನಾಶವಾಗಿದೆ. ಅನಾರೋಗ್ಯಪೀಡಿತರಾಗಿರುವ ಸುಜಾತ ಅವರು ತಮ್ಮ ಪುತ್ರಿಯ ಮನೆಯಲ್ಲಿ ವಾಸವಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ, ಗ್ರಾ.ಪಂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲಿಸಿದರು. ಸರ್ಕಾರ ಬಿ.ಬಿ.ಸುಜಾತ ಅವರಿಗೆ ನೂತನ ಮನೆ ನಿರ್ಮಿಸಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಜು.19 NEWS DESK : ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳನ್ನು ಹೋಲಿಸಿದರೆ ಶುಕ್ರವಾರ ಮಳೆ ಕೊಂಚ ಶಾಂತವಾಗಿದೆ. ಆದರೆ ಪ್ರವಾಹ ಪರಿಸ್ಥಿತಿ ಹಾಗೇ ಮುಂದುವರೆದಿದ್ದು, ಆತಂಕದ ವಾತಾವರಣವಿದೆ. ಮನೆ, ರಸ್ತೆ, ಸೇತುವೆಗಳು ಜಲಾವೃತಗೊಂಡು ಹಾನಿಗೊಳಗಾಗಿದ್ದರೆ, ಭಾರೀ ಗಾಳಿಯಿಂದ ವಿದ್ಯುತ್ ಕಂಬಗಳು ಮತ್ತು ಮರಗಳು ನೆಲಕ್ಕುರುಳಿವೆ. ಹಲವು ಕಡೆ ಬರೆ ಕುಸಿತದಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಜು.20 ರಂದು ಕೂಡ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ ಮತ್ತು ಅಂಗನವಾಡಿ, ಶಾಲೆಗಳಿಗೆ ರಜೆ ನೀಡಲಾಗಿದೆ. ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗ್ಗಿನ ವರೆಗೆ ಜಿಲ್ಲಾವ್ಯಾಪಿ ಧಾರಾಕಾರ ಮಳೆ ಸುರಿದಿದ್ದು, ಬಹುತೇಕ ಪ್ರದೇಶಗಳು ಪ್ರವಾಹಕ್ಕೆ ಸಿಲುಕಿದ್ದವು. ಆದರೆ ಕ್ರಮೇಣ ಮಳೆ ಕ್ಷೀಣಗೊಳ್ಳುತ್ತಿದ್ದಂತೆ ಪ್ರವಾಹದ ಪರಿಸ್ಥಿತಿ ಕೂಡ ಶಾಂತವಾಗತೊಡಗಿತು. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 10 ಇಂಚಿಗೂ ಅಧಿಕ ಮಳೆಯಾಗಿದೆ. ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ಆವರಿಸಿದ್ದ ಪ್ರವಾಹದ ನೀರು ಹಗಲಿನ ವೇಳೆ ಮಳೆ…

Read More

ಸೋಮವಾರಪೇಟೆ ಜು.19 NEWS DESK : ಸೋಮವಾರಪೇಟೆ ತಾಲ್ಲೂಕಿನಾದ್ಯಂತ ಶುಕ್ರವಾರ ವರುಣನ ಅರ್ಭಟ ಮುಂದುವರಿದಿದ್ದು, ಹಾನಿಯ ಪ್ರಮಾಣ ಹೆಚ್ಚಾಗುತ್ತಿದೆ. ಶಿಥಿಲಗೊಂಡಿರುವ ಬಡವರ ಮನೆಗಳ ಗೋಡೆಗಳು ಕುಸಿಯಲು ಪ್ರಾರಂಭಿಸಿವೆ. ಶಾಂತಳ್ಳಿ ಹೋಬಳಿಯಲ್ಲಿ ಬಿರುಗಾಳಿ ಸಹಿತ ಮಳೆ ಧಾರಕಾರವಾಗಿ ಸುರಿಯುತ್ತಿವೆ. ಮಲ್ಲಳ್ಳಿ ಜಲಪಾತಕ್ಕೆ ತೆರಳುವ ರಸ್ತೆಯ ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದ್ದು, ಪ್ರವಾಸಿಗರು ತೆರಳದಂತಾಗಿದೆ. ಸೋಮವಾರಪೇಟೆ, ಕುಂದಳ್ಳಿ ಮಾರ್ಗವಾಗಿ ಸಕಲೇಶಪುರ ಮಾರ್ಗದ ರಸ್ತೆಯಲ್ಲಿರುವ ಕೊಡಗಿನ ಗಡಿ ಮಾಗೇರಿ-ಬಾಣಗೇರಿ ಸೇತುವೆಯ ನೀರಿನಿಂದ ಅವೃತ್ತವಾಗಿದ್ದು, ಸಂಚಾರ ಸ್ಥಗಿತಗೊಂಡಿದೆ. ಬಿಳಕಿಕೊಪ್ಪ ಗ್ರಾಮದ ನಿವಾಸಿ ಸರಸ್ವತಿ ಎಂಬುವರ ಮನೆ ಮೇಲೆ ಮರಬಿದ್ದು ಹಾನಿಯಾಗಿದೆ. ಮೂವತ್ತೊಕ್ಲು ಗ್ರಾಮದ ಜಾನುಬೇಡು ಎಂಬವರ ಮನೆ, ದೊಡ್ಡಬ್ಬೂರು ಗ್ರಾಮದ ಗೌರಿರಾಜು ಮನೆ, ಕುಂಬೂರು ಗ್ರಾಮದ ಶಿವಪ್ಪ ಅವರ ಮನೆ, ಬಜೆಗುಂಡಿಯ ನಾಗು, ಚೌಡ್ಲು ಗ್ರಾಮದ ಪಾರ್ವತಿ ಎಂಬುವರುಗಳ ಮನೆಯ ಗೋಡೆ ಕುಸಿದು ಹಾನಿಯಾಗಿದೆ. ಕೂತಿ ಗ್ರಾಮದ ಸಮೀಪದ ಯಡದಂಟೆ ಗ್ರಾಮಕ್ಕೆ ತೆರಳುವ ರಸ್ತೆಯ ಪಕ್ಕದಲ್ಲೇ 10 ಅಡಿ ಅಳಕ್ಕೆ ಗುಂಡಿ ನಿರ್ಮಾಣವಾಗಿದ್ದು, ರಸ್ತೆ ಕುಸಿಯುವು…

Read More

ಮಡಿಕೇರಿ ಜು.19 NEWS DESK : ಕೊಡಗು ಮತ್ತು ಮೈಸೂರು ವಿಭಿನ್ನವಾದ ಸಂಸ್ಕೃತಿ ಹಾಗೂ ಪ್ರಕೃತಿಯನ್ನು ಹೊಂದಿದೆ. ಕೊಡಗು ಕೊಡಗಾಗಿ, ಮೈಸೂರು ಮೈಸೂರಾಗಿಯೇ ಉಳಿಯಬೇಕು ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ಮಡಿಕೇರಿಯ ಕೆಳಗಿನ ಕೊಡವ ಸಮಾಜದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ವಿಶಿಷ್ಟ ಆಚಾರ ವಿಚಾರಗಳನ್ನು ಹೊಂದಿರುವ ಕೊಡಗು ಜಿಲ್ಲೆಯ ಸಂಸ್ಕೃತಿ ಮತ್ತು ಪ್ರಕೃತಿಯನ್ನು ನಾವೆಲ್ಲರೂ ಉಳಿಸಬೇಕು. ಅದಕ್ಕೆ ಪೂರಕವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು. ಲೋಕಸಭಾ ಚುನಾವಣೆಯ ಸಂದರ್ಭ ಅನೇಕರು ಅಪಪ್ರಚಾರಗಳನ್ನು ಮಾಡಿದರು. ಆದರೆ ಇದು ಯಾವುದಕ್ಕೂ ಕಿವಿಗೊಡದೆ ಪ್ರಧಾನಿ ನರೇಂದ್ರಮೋದಿ ಅವರು ಕಳೆದ 10 ವರ್ಷಗಳ ಕಾಲ ಮಾಡಿದ ಅಭಿವೃದ್ಧಿಯ ಸಾಧನೆಯ ಆಧಾರದಲ್ಲಿ ಮತ್ತು ಕಾರ್ಯಕರ್ತರೆಲ್ಲರ ಶ್ರಮದಿಂದ ಚುನಾವಣೆಯನ್ನು ಎದುರಿಸಿ ಜನರ ಆಶೀರ್ವಾದ ಪಡೆದೆವು. ಮುಂಬರುವ ಜಿ.ಪಂ ಮತ್ತು ತಾ.ಪಂ ಚುನಾವಣೆಗಳಲ್ಲೂ ಗೆಲುವಿಗಾಗಿ ಶ್ರಮಿಸೋಣವೆಂದು ಯದುವೀರ್ ಒಡೆಯರ್ ಹೇಳಿದರು. ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ ಹಾಗೂ…

Read More

ಮಡಿಕೇರಿ ಜು.19 NEWS DESK : ಕೊಡಗು ಜಿಲ್ಲೆಯ ಮಡಿಕೇರಿ ನಗರ, ಕುಶಾಲನಗರ, ಅತ್ತೂರು ಮತ್ತಿತರ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸಾಂತ್ವನ ಹೇಳಿ ಅಭಯ ನೀಡಿದರು. ಎನ್.ಡಿ.ಎಂ.ಎಫ್ ಮೂಲಕ ತಕ್ಷಣ ಪರಿಹಾರವನ್ನು ಒದಗಿಸಲು ಮತ್ತು ಅವರ ಮನೆಗಳನ್ನು ಮರುನಿರ್ಮಾಣ ಮಾಡುವವರೆಗೆ ಸಂತ್ರಸ್ತ ಕುಟುಂಬಗಳಿಗೆ ತಾತ್ಕಾಲಿಕ ಆಶ್ರಯವನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ಕುಶಾಲನಗರ ತಾಲೂಕಿನ ಜಲಾವೃತ ಪ್ರದೇಶಗಳಿಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ, ಜನತೆಯ ಅಹವಾಲನ್ನು  ಆಲಿಸಿದರು. ಕುಶಾಲನಗರ ತಾಲೂಕಿನ ಮಾದಾಪಟ್ಟಣ ಹಾಗೂ ಅತ್ತೂರು ಗ್ರಾಮ ಸೇರಿದಂತೆ‌ ವಿವಿಧ ಭಾಗದ ಜಲಾವೃತವಾಗಿ ತೊಂದರೆಗೊಳಗಾದ ಜನತೆಯ ಅಹವಾಲನ್ನು ಆಲಿಸಿದರು. ಜನತೆಯೊಂದಿಗೆ ತಾವಿರುವುದಾಗಿ ಭರವಸೆ ನೀಡಿದರು. ಮೈಸೂರು ಜಿಲ್ಲೆಯ  ಕುಶಾಲನಗರದ ಸಾಯಿ ಬಡಾವಣೆಗೆ ಭೇಟಿ ನೀಡಿದ ಸಂಸದರು ಮಳೆಯಿಂದ ಹಾನಿಯಾದ ಪ್ರದೇಶಗಳನ್ನು ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಾಯಿ ಬಡಾವಣೆಯ ನಿವಾಸಿಗಳು ಪ್ರವಾಹದಿಂದ ಉಂಟಾಗುವ ತೊಂದರೆ ಬಗ್ಗೆ ಸಂಸದರ…

Read More

ಮಡಿಕೇರಿ ಜು.19 NEWS DESK : ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನ-ಜಾನುವಾರು ಹಾಗೂ ಆಸ್ತಿಪಾಸ್ತಿ ರಕ್ಷಣೆಗೆ ಮುಂದಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ವಿಡಿಯೋ ಸಂವಾದ ಮೂಲಕ ಮಾತನಾಡಿದ ಅವರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇನ್ನೂ ಎರಡು ಮೂರು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಈಗಾಗಲೇ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಸಾರ್ವಜನಿಕರ ರಕ್ಷಣೆ ಮಾಡುವುದು ಅತಿಮುಖ್ಯ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅವರು ತಾಕೀತು ಮಾಡಿದರು. ಜಿಲ್ಲೆಯ 103 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಾಸ್ಕ್‍ಪೋರ್ಸ್ ಸಮಿತಿಯನ್ನು ರಚಿಸಿ ಪ್ರವಾಹ, ಬರೆಕುಸಿತ ಮತ್ತಿತರ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದರು. ಪ್ರಾಕೃತಿಕ ವಿಕೋಪ ಸಂಬಂಧ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಎಲ್ಲಾ ಹಂತದ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ…

Read More

ಮಡಿಕೇರಿ ಜು.19 NEWS DESK : ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2024-25 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.5 ಸಾವಿರಗಳ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆಗಸ್ಟ್, 10 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಪಡೆಯ ಬಯಸುವ ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಸಂಪರ್ಕಿಸಬಹುದು. ಇಲಾಖಾ ವೆಬ್‍ಸೈಟ್ www.dom.karnataka.gov.in ಮತ್ತು ಕಚೇರಿ ದೂರವಾಣಿ ಸಂಖ್ಯೆ 08272-225528/ 220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.

Read More

ಮಡಿಕೇರಿ ಜು.19 NEWS DESK : ಕೊಡವ ಸಾಹಿತ್ಯ ಅಕಾಡೆಮಿಯ ವತಿಯಿಂದ ಪಾಂಡಂಡ ಕುಟ್ಟಣಿ ಕುಟ್ಟಪ್ಪ ಇವರ ಜ್ಞಾಪಕಾರ್ತವಾಗಿ ಅವರ ಮಗ ಪಾಂಡಂಡ ಬೋಪಣ್ಣನವರ ಸಹಕಾರದೊಂದಿಗೆ ಕರಡದಲ್ಲಿ ಆ.14 ರಂದು ಕರ್ನಾಟಕ “ಬೇಲ್‍ನಮ್ಮೆ” ನಡೆಯಲಿದೆ. ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಜಿಲ್ಲೆಯ ಶಾಸಕರು ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಜು.19 NEWS DESK : ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಜುಲೈ, 21 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಕೋರಿದ್ದಾರೆ.

Read More

ಮಡಿಕೇರಿ ಜು.19 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತ್ಯೋತ್ಸವ ಕಾರ್ಯಕ್ರಮವು ಜು.21 ರಂದು ಬೆಳಗ್ಗೆ 10.30 ಗಂಟೆಗೆ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More