ಲೇಖಕ: admin

ಸುಂಟಿಕೊಪ್ಪ ಜು.19 NEWS DESK : ವರ್ಕ್‍ಶಾಪ್ ಮಾಲೀಕರ ಸಂಘದ ಅಧ್ಯಕ್ಷರಾಗಿ ಬಿ.ಎಸ್.ರಮೇಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಣಿಕಂಠ ಆಯ್ಕೆಯಾಗಿದ್ದಾರೆ. ಸುಂಟಿಕೊಪ್ಪ ಕೊಡವ ಸಮಾಜದಲ್ಲಿ ಸಂಘದ ಅಧ್ಯಕ್ಷ ಪಿ.ಆರ್.ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ವರ್ಕ್‍ಶಾಪ್ ಮಾಲೀಕರ ಸಂಘದ 22ನೇ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಉಪಾಧ್ಯಕ್ಷರಾಗಿ ತಂಗವೇಲು, ಖಜಾಂಚಿಯಾಗಿ ಸಂದೀಪ್, ಸಂಘಟನಾ ಕಾರ್ಯದರ್ಶಿಯಾಗಿ ಫೆಲಿಕ್ಸ್ ಡಿಸೋಜ, ಸಹ ಕಾರ್ಯದರ್ಶಿಯಾಗಿ ರಜಾಕ್, ಗೌರವ ಅಧ್ಯಕ್ಷರಾಗಿ ವಿ.ಎ.ಸಂತೋಷ್, ಪಿ.ಆರ್.ಸುಕುಮಾರ್, ಕೆ.ಪಿ.ವಿನೋದ್ ಹಾಗೂ 9 ಜನರನ್ನು ಸಮಿತಿ ಸದಸ್ಯರಾಗಿ ನೇಮಕ ಮಾಡಲಾಯಿತು.

Read More

ಸುಂಟಿಕೊಪ್ಪ ಜು.19 NEWS DESK : ಸುಂಟಿಕೊಪ್ಪ, ಮಾದಾಪುರ, ಸೋಮವಾರಪೇಟೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯು ಕಳೆದ 3 ವರ್ಷಗಳ ಹಿಂದೆಯೇ ಅಪಾಯದ ಅಂಚಿನಲ್ಲಿದ್ದು, ಲೋಕೋಪಯೋಗಿ ಇಲಾಖೆ ಈ ರಸ್ತೆಗೂ ನಮಗೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸೋಮವಾರಪೇಟೆ ರಾಜ್ಯ ಹೆದ್ದಾರಿಯಲ್ಲಿರುವ ಕೆಂಚೆಟ್ಟಿ ತೋಟದ ಸಮೀಪದಲ್ಲಿರುವ ಮೋರಿಯೊಂದು ಕಳೆದ ಮೂರು ವರ್ಷಗಳಿಂದಲ್ಲೂ ಅಪಾಯದ ಅಂಚಿನಲ್ಲಿದೆ. ತಡೆಗೋಡೆಗಳು ಕುಸಿಯಲಾರಂಭಿಸಿದೆ. ನಿತ್ಯ ಈ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತಿದ್ದು, ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಈ ರಸ್ತೆ ಬಹಳ ಕಿರಿದಾಗಿದ್ದು, ಮುಂಭಾಗದಿಂದ ಆಗಮಿಸುವ ವಾಹನಗಳಿಗೆ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಸಂಬಂಧಿಸಿದ ಇಲಾಖೆಯವರು ಸ್ಥಳ ಪರಿಶೀಲಿಸಿ, ತಡೆಗೋಡೆ ನಿರ್ಮಿಸಲು ಮುಂದಾಗುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Read More

ವಿರಾಜಪೇಟೆ ಜು.19 NEWS DESK : ಮಾಧ್ಯಮ ಮತ್ತು ಆಡಳಿತ ವ್ಯವಸ್ಥೆಯಿಂದ ಸಮಾಜದ ಅಭಿವೃದ್ದಿ ಕಾಣಬಹುದು ಎಂದು ವಿರಾಜಪೇಟೆ ತಹಶೀಲ್ದಾರ್ ಹೆಚ್.ಎನ್. ರಾಮಚಂದ್ರ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಎ-ಜೆಡ್ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಮತ್ತು ಪ್ರಶಸ್ತಿ ಪ್ರದಾನ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಸಮಾಜದ ಓರೆಕೋರೆಗಳನ್ನು ತಿದ್ದುವ ಮೂಲಕ ಉತ್ತಮ ಸಮಾಜವನ್ನು ರೂಪಿಸುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು, ಮಾಧ್ಯಮದಿಂದ ಸಮಾಜವನ್ನು ತಿದ್ದುವ ಕಾರ್ಯ ನಡೆಯುತ್ತಿದೆ. ಆಡಳಿತ ವ್ಯವಸ್ಥೆಗೆ ಕೂಡ ಮಾಧ್ಯಮದ ಕೊಡುಗೆ ಅಪಾರ. ಸರ್ಕಾರದ ಯಾವುದೇ ಕಾರ್ಯಕ್ರಮಗಳು ಜನರಿಗೆ ತಲುಪಲು ಮಾಧ್ಯಮದ ಕೊಡುಗೆ ಹೆಚ್ಚಿದೆ. ಪತ್ರಿಕೆಗಳನ್ನು ಓದುವುದರಿಂದ ಸಮಸ್ಯೆಗಳನ್ನು ತಿಳಿಯಲು ಸಾಧ್ಯವಾಗುತ್ತದೆ. ಅಲ್ಲದೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪತ್ರಿಕಾ ವರದಿಗಳು ಮತ್ತು ಪತ್ರಕರ್ತರ ಸಹಕಾರ ಕೂಡಾ ಅತ್ಯಗತ್ಯವಾಗಿದೆ. ತಾಲ್ಲೂಕಿನ ಪತ್ರಕರ್ತರ ಮೂಲಕ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿದೆ. ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಶ್ಲಾಘನೀಯ ಎಂದರು.…

Read More

ಮಡಿಕೇರಿ ಜು.19  NEWS DESK : ಕುಶಾಲನಗರದ ಶ್ರೀ ಶಿರಡಿ ಸಾಯಿ ಟ್ರಸ್ಟ್ ವತಿಯಿಂದ ಜು.21 ರಂದು ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ಗುರು ಪೂರ್ಣಿಮೆ ವಿಶೇಷ ಪೂಜೆ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 6 ಗಂಟೆಗೆ ಕಾಕಡ ಆರತಿ, 6.30 ಗಂಟೆಗೆ ಗಣಪತಿ ಹೋಮ, 7 ಗಂಟೆಗೆ ಪಂಚಾಮೃತ ಅಭಿಷೇಕ, 8 ಗಂಟೆಯಿಂದ 11 ಗಂಟೆಯ ವರೆಗೆ ಮೂಲ ವಿಗ್ರಹಕ್ಕೆ ಕ್ಷೀರಾಭಿಷೇಕ, 9 ಗಂಟೆಯಿಂದ 12 ಗಂಟೆಯವರೆಗೆ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು, ಮಧ್ಯಾಹ್ನ 12.30 ಗಂಟೆಗೆ ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ಜರುಗಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಶ್ರೀ ಶಿರಡಿ ಸಾಯಿ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಕಾರ್ಯಕಾರಿ ಮಂಡಳಿಯ ಸದಸ್ಯರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ 9481818183, 9448504827, 9483094830 ಸಂಪರ್ಕಿಸಬಹುದಾಗಿದೆ. 

Read More

ಮಡಿಕೇರಿ ಜು.19 NEWS DESK : ಪ್ರಸಕ್ತ (2024-25) ಸಾಲಿಗೆ ಮಡಿಕೇರಿ ತಾಲ್ಲೂಕಿನಲ್ಲಿ ಹೊಸದಾಗಿ ಪ್ರಾರಂಭಿಸಲಾದ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ಮತ್ತು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಮಡಿಕೇರಿ ಇಲ್ಲಿಗೆ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗ, ಪರಿಶಿಷ್ಟ ಜಾತಿ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೌಲಭ್ಯಗಳ ವಿವರ: ಉಚಿತ ದಾಖಲಾತಿ(ಶುಲ್ಕ ರಹಿತ), ಉಚಿತ ಹಾಸ್ಟೇಲ್ ಸೌಲಭ್ಯ, ಮೆನು ಚಾರ್ಟ್ ಪ್ರಕಾರ ಪೌಷ್ಟಿಕ ಆಹಾರ ಪೂರೈಕೆ, ಪ್ರತಿ ತಿಂಗಳಿಗೆ ಉಚಿತ “ಶುಚಿ ಸಂಭ್ರಮ ಕಿಟ್” (ಸೋಪು, ಪೇಸ್ಟ್, ಬ್ರಷ್, ತೆಂಗಿನಎಣ್ಣೆ), ಉಚಿತ ಆರೋಗ್ಯ ತಪಾಸಣೆ, ಗ್ರಂಥಾಲಯ ಹಾಗೂ ಕಂಪ್ಯೂಟರ್ ಸೌಲಭ್ಯಗಳು ಆಸಕ್ತ ವಿದ್ಯಾರ್ಥಿಗಳು, ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ರವರ ಕಚೇರಿ ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-1) ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲ್ಲೂಕು ರವರ ಕಚೇರಿಯಿಂದ ಅರ್ಜಿಯನ್ನು…

Read More

ಮಡಿಕೇರಿ ಜು.19 NEWS DESK : ಎಡೆಬಿಡದೆ ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಕೊಡಗು ತತ್ತರಗೊಂಡಿದೆ. ನದಿ, ತೊರೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಬರೆಗಳು ಜರಿಯುತ್ತಿವೆ, ರಸ್ತೆಗಳು ಜಲಾವೃತಗೊಳ್ಳುತ್ತಿವೆ. ಅನೇಕ ಮನೆಗಳು ಕುಸಿದು ಬಿದ್ದಿದ್ದು, ಅಪಾಯದಂಚಿನ ಹಲವು ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಸ್ಥಳಾಂತರ ::: ವಿರಾಜಪೇಟೆ ತಾಲೂಕು ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆಯಲ್ಲಿ ಭಾರಿ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನೆಲೆ ಕರಡಿಗೋಡು ಹೊಳೆಕೆರೆ ಬದಿಯಲ್ಲಿ ವಾಸವಿರುವ 9 ಕುಟುಂಬದವರಿಗೆ ಪ್ರವಾಹ ಭೀತಿ ಇರುವುದರಿಂದ ಸ್ಥಳಾಂತರಿಸಲಾಗಿದೆ. ಈ ಸಂಬಂಧ ತಹಶೀಲ್ದಾರರಾದ ರಾಮಚಂದ್ರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತರರು ಭೇಟಿ ನೀಡಿ ವೀಕ್ಷಿಸಿದರು. ಕುಂಜಿಲ ಗ್ರಾಮದ ಖದಿಸಮ್ಮ ಎಂಬುವವರ ವಾಸದ ಮನೆ ಹಾನಿಯಾಗಿದ್ದು, ಮನೆಯು ಬೀಳುವ ಸ್ಥಿತಿಯಲ್ಲಿದೆ. ಈ ಹಿನ್ನೆಲೆ ಕುಟುಂಬದವರನ್ನು ಸ್ಥಳಾಂತರಿಸಲಾಗಿದೆ. ಮಡಿಕೇರಿ ಮೂರ್ನಾಡು ಮುಖ್ಯ ರಸ್ತೆಯ ಕಗ್ಗೊಡ್ಲು ಗ್ರಾಮದ ಮುತ್ತಪ್ಪ ಎಂಬುವರ ಅಂಗಡಿ ಮತ್ತು ಮನೆಗೆ ಹೆಚ್ಚಿನ ಮಳೆಯಿಂದಾಗಿ ಹೊಳೆ ತುಂಬಿ ನೀರು…

Read More

ಮಡಿಕೇರಿ ಜು.19 NEWS DESK : ಭಾರತದ ಸೈನ್ಯದ ಯುದ್ಧ ಸಾಮರ್ಥ್ಯ ಹೆಚ್ಚಳದೊಂದಿಗೆ ಯುವ ಸಮೂಹಕ್ಕೆ ಉದ್ಯೋಗ ದೊರಕಿಸಿಕೊಡುವ ಕೇಂದ್ರದ ಅಗ್ನಿವೀರ್ ನೇಮಕಾತಿಯ ಕುರಿತು ಅನಗತ್ಯ ಗೊಂದಲ ಸೃಷ್ಟಿ ಸರಿಯಲ್ಲ. ಇದೊಂದು ಅತ್ಯುತ್ತಮವಾದ ಯೋಜನೆ ಎಂದು ಬಿಜೆಪಿ ಪೂರ್ವ ಸೈನಿಕರ ಪ್ರಕೋಷ್ಟದ ರಾಜ್ಯ ಸಂಚಾಲಕÀ ಮೇಜರ್ ಓಡಿಯಂಡ ಎಸ್.ಚಿಂಗಪ್ಪ ಸಮರ್ಥಿಸಿದ್ದಾರೆ. ಮಡಿಕೇರಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷವಾದ ಕಾಂಗ್ರೆಸ್ ಅಗ್ನಿವೀರ್ ಸೇರ್ಪಡೆಯ ಕುರಿತು ಸುಳ್ಳು ಆಪಾದನೆಗಳ ಮೂಲಕ ಗೊಂದಲ ಮೂಡಿಸುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು. ಪ್ರಸ್ತುತ ಯುದ್ಧದ ವಿಧಾನಗಳಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಇದಕ್ಕೆ ಪೂರಕವಾಗಿ ಯುವ ಸಮೂಹವನ್ನು ಸೈನ್ಯಕ್ಕೆ ಸೇರ್ಪಡೆಗೊಳಿಸುವ ಮೂಲಕ ಭಾರತೀಯ ಸೈನ್ಯವನ್ನು ಶಕ್ತಿಯುತವಾಗಿ ಕಟ್ಟುವ ಚಿಂತನೆಗಳು ಅಗ್ನಿವೀರ್ ನೇಮಕಾತಿಯಲ್ಲಿ ಅಡಗಿದೆ. 2022 ರಿಂದ ಯೋಜನೆ ಆರಂಭವಾಗಿದ್ದು, ಅತ್ಯಂತ ಉತ್ಸಾಹದಿಂದ ಯುವ ಸಮೂಹ ಸೇರ್ಪಡೆಗೊಳ್ಳುತ್ತಿದೆ ಎಂದು ತಿಳಿಸಿದರು. ಭಾರತೀಯ ಸೈನ್ಯದ ಸೈನಿಕರ ಸರಾಸರಿ ವಯೋಮಿತಿ 32 ಇದ್ದು, ಇದನ್ನು ಇಳಿಸುವ ಮೂಲಕ ಸೈನ್ಯದಲ್ಲಿ ಮತ್ತಷ್ಟು…

Read More

ಮಡಿಕೇರಿ ಜು.18 NEWS DESK  : ನೇಪಾಳದ ಪೋಕಾರದಲ್ಲಿ ಇದೇ ಜು.26ರಿಂದ 30 ರವರೆಗೆ ನಡೆಯುವ ಅಂತರಾಷ್ಟ್ರೀಯ ಥ್ರೋಬಾಲ್ ಚಾಂಪಿಯನ್ ಶಿಪ್ ಗೆ ಭಾರತ ತಂಡಕ್ಕೆ ವಿರಾಜಪೇಟೆಯ ಎಸ್‌ಎಂಎಸ್‌ಪಿ ಕಾಲೇಜ್ ನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪಾರೇರ ತ್ರಿಶಾ ಆಯ್ಕೆಯಾಗಿದ್ದಾಳೆ. ಈಕೆ ಮಡಿಕೇರಿ ತಾಲ್ಲೂಕಿನ ಮರಗೋಡು ಗ್ರಾಮದ ಪಾರೇರ ಯತೀಶ್ ಹಾಗೂ ದೇವಕಿ ದಂಪತಿಯ ಪುತ್ರಿ.

Read More

ಸೋಮವಾರಪೇಟೆ ಜು.18 NEWS DESK : ಸೋಮವಾರಪೇಟೆ ಶಾಲಾ ರಸ್ತೆಯ ನಿವಾಸಿ ಗುಂಡಿಮನೆ ಮಂಜುನಾಥ್ ಗುರುವಾರ ಸಂಜೆ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಕರ್ಕಳ್ಳಿಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ. ಮೃತರು ಪತ್ನಿ, ಮೂವರು ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Read More

ಮಡಿಕೇರಿ ಜು.18 NEWS DESK : ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಬಹುತೇಕ ಕಡೆಗಳಲ್ಲಿ ಪ್ರವಾಹದಿಂದ ಭೀತಿ ಎದುರಾಗಿದೆ. ವಿರಾಜಪೇಟೆ ತಾಲೂಕು ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆಯಲ್ಲಿ ಅಧಿಕ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನೆಲೆ ಹೊಳೆಕೆರೆ ಬದಿಯ ಕುಟುಂಬಗಳನ್ನು ಸ್ಥಳಾಂತರಿಸಲಾಗುತ್ತಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಭೇಟಿ ನೀಡಿ ಸಂಕಷ್ಟಕ್ಕೆ ಸಿಲುಕಿರುವ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿ ಧೈರ್ಯ ತುಂಬಿದರು. ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Read More