ಲೇಖಕ: admin

ಮಡಿಕೇರಿ ಜು.18 NEWS DESK : ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಿ.ವೈ.ರಾಜೇಶ್ ಅವರನ್ನು ಮೂಡ ಕಚೇರಿಯಲ್ಲಿ ಭೇಟಿಯಾದ ಕೆ.ನಿಡುಗಣೆ ಗ್ರಾ.ಪಂ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯ ಜಾನ್ಸನ್ ಪಿಂಟೋ ಅವರು ಅಭಿನಂದನೆ ಸಲ್ಲಿಸಿದರು. ನಂತರ ಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿ, ಸನ್ಮಾನಿಸಿ ಶುಭ ಹಾರೈಸಿದರು.

Read More

ಮಡಿಕೇರಿ ಜು.18 NEWS DESK : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಿಲ್ಲಾಡಳಿತಕ್ಕೆ ನೀಡಿರುವ ವರದಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ರೀತಿಯ ವಾಹನಗಳ…

Read More

ಮಡಿಕೇರಿ ಜು.18 NEWS DESK : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಿಲ್ಲಾಡಳಿತಕ್ಕೆ ನೀಡಿರುವ ವರದಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ರೀತಿಯ ವಾಹನಗಳ…

Read More

ಮಡಿಕೇರಿ ಜು.18 NEWS DESK : ಮಾನವ ಸಂಪನ್ಮೂಲ ಇಲಾಖೆಯಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಈಗಾಗಲೇ ಆಹ್ವಾನಿಸಿದ್ದು, ಅರ್ಜಿಯನ್ನು ಸೆ.16 ರೊಳಗೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊಡಗು ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪ್ರಾಥಮಿಕ ಶಾಲೆಯಲ್ಲಿ ಐದನೆಯ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಯ ಪಾಲಕರು ಕೊಡಗು ಜಿಲ್ಲೆಯ ನಿವಾಸಿಯಾಗಿದ್ದು, ವಿದ್ಯಾರ್ಥಿಯೂ ಕೂಡಾ ಕೊಡಗು ಜಿಲ್ಲೆಯಲ್ಲೇ ಓದುತ್ತಿರಬೇಕು. ಅಭ್ಯರ್ಥಿ 2023 ರ ಮೇ, 01 ರಿಂದ 2025 ರ ಜುಲೈ, 31 ರೊಳಗೆ ಜನಿಸಿದವರಾಗಿರಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 16 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು https://navodaya.gov.in ಗಳಲ್ಲಿ ಸೂಕ್ತ ವಿವರ ಮತ್ತು ದಾಖಲೆಗಳನ್ನು ಅಪ್‍ಲೋಡ್ ಮಾಡಬಹುದು ಎಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ…

Read More

ಮಡಿಕೇರಿ ಜು.18 NEWS DESK : ಕೇಂದ್ರ ಸರ್ಕಾರದ ಆಲಿಮ್ಕೋ ಸಂಸ್ಥೆಯಿಂದ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಹಾಗೂ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳನ್ನು ನೀಡುವ ಸಂಬಂಧ ತಾಲ್ಲೂಕುವಾರು ಮೌಲ್ಯಮಾಪನ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ವಿಶೇಷಚೇತನರಿಗೆ ಹಾಗೂ ಹಿರಿಯನಾಗರಿಕರಿಗೆ ಈ ಶಿಬಿರಕ್ಕೆ ಬಂದು ಹೋಗಲು ಅನಾನುಕೂಲವಾಗುವುದರಿಂದ ಮೌಲ್ಯಮಾಪನ ಶಿಬಿರವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಹಾಗೂ ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ.08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ತಿಳಿಸಿದ್ದಾರೆ.

Read More

ಮಡಿಕೇರಿ ಜು.18 NEWS DESK : ಪ್ರಸಕ್ತ(2024-25) ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ.6 ರ ಬಡ್ಡಿ ಸಹಾಯಧನ ನೀಡಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಹೈನುಗಾರಿಕೆಗಾಗಿ ವಿವಿಧ ಬ್ಯಾಂಕ್‍ಗಳಲ್ಲಿ ಸಾಲ ಪಡೆಯುವ ಪ್ರತಿ ಫಲಾನುಭವಿಗಳಿಗೆ ಗರಿಷ್ಠ 65 ಸಾವಿರ ರೂ ಸಾಲದ ಮೊತ್ತಕ್ಕೆ ಶೇ.6 ಬಡ್ಡಿ ಸಹಾಯಧನ (3625 ರೂ.) ನೀಡಲಾಗುತ್ತದೆ. ಪ್ರತಿ ಹಸು/ಎಮ್ಮೆ ಘಟಕದ ಮೊತ್ತ ರೂ:65000, ಶೇ.6 ವಾರ್ಷಿಕ ಬಡ್ಡಿ ಸಹಾಯಧನದ ಪ್ರತಿ ಫಲಾನುಭವಿಗೆ ಗರಿಷ್ಟ ರೂ.3624.50/-(3625), ಆಸಕ್ತ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಅಥವಾ ಸಂಬಂಧಪಟ್ಟ ಪಶು ಆಸ್ಪತ್ರೆಗಳನ್ನು ಸಂರ್ಪಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ತಿಳಿಸಿದ್ದಾರೆ.

Read More

ಮಡಿಕೇರಿ ಜು.18 NEWS DESK : 2023-24ರ ಶೈಕ್ಷಣಿಕ ಸಾಲಿನಲ್ಲಿ ಕೇಂದ್ರ ಸರ್ಕಾರ ರಾಷ್ಟ್ರ ಮಟ್ಟದಲ್ಲಿ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಸಲುವಾಗಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ್(Pಒ USಂ) ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಗೆ ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಅಯ್ಕೆಯಾಗಿದ್ದು, ಈ ಯೋಜನೆಯಡಿ ಸಂಸ್ಥೆಗೆ ಮೂಲಭೂತ ಸೌಕರ್ಯ ಮತ್ತು ನವೀಕರಣ ಕಾಮಗಾರಿಗಾಗಿ 5 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಸರಕಾರ ಕಾಮಗಾರಿಯನ್ನು ಕರ್ನಾಟಕ ಗೃಹ ಮಂಡಳಿಯವರಿಗೆ ನೀಡಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ದಯಾನಂದ ಕೆ.ಸಿ.ತಿಳಿಸಿದ್ದಾರೆ.

Read More

ಮಡಿಕೇರಿ ಜು.18 NEWS DESK : 2024-25ನೇ ಸಾಲಿನ 32ನೇ ರಾಜ್ಯಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳು ಆ.10 ರಂದು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ.ದೇವಯ್ಯ ಅವರ ಗದ್ದೆಯಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಹಾಗೂ ಮಡಿಕೇರಿ ತಾಲೂಕು ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಫ್ ಇಂಡಿಯಾ (ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಕಗ್ಗೊಡ್ಲು ಕಾವೇರಿ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 9.30 ರಿಂದ ಸ್ಪರ್ಧೆಗಳು ನಡೆಯಲಿವೆ. ಸಾರ್ವಜನಿಕ ಪುರುಷ ಮತ್ತು ಮಹಿಳೆಯರ ಹಗ್ಗ ಜಗ್ಗಾಟ (7 ಜನರ ತಂಡ), ಸಾರ್ವಜನಿಕ ಪುರುಷರ ವಾಲಿಬಾಲ್ (4 ಜನರ ತಂಡ), ಸಾರ್ವಜನಿಕ ಮಹಿಳೆಯರಿಗೆ ಥ್ರೋಬಾಲ್ (6 ಜನರ ತಂಡ), ಪ್ರೌಢ…

Read More

ಮಡಿಕೇರಿ ಜು.18 NEWS DESK : ವಿರಾಜಪೇಟೆ ತಾಲೂಕು ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆಯಲ್ಲಿ ಭಾರಿ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಈ ಹಿನ್ನೆಲೆ ಕರಡಿಗೋಡು ಹೊಳೆಕೆರೆ ಬದಿಯಲ್ಲಿ ವಾಸವಿರುವ 9 ಕುಟುಂಬದವರಿಗೆ ಪ್ರವಾಹ ಭೀತಿ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳಾಂತರಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ರಾಮಚಂದ್ರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತರರು ಭೇಟಿ ನೀಡಿ ವೀಕ್ಷಿಸಿದರು.

Read More

ಮಡಿಕೇರಿ ಜು.18 NEWS DESK : ಶೌಚಾಲಯದ ಗುಂಡಿಯಲ್ಲಿ ಸಿಲುಕಿದ್ದ ಕಾಡಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ರಕ್ಷಿಸಿರುವ ಘಟನೆ ಕೊಳತೋಡು ಬೈಗೋಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಗಣೇಶ್ ಎಂಬವರ ಮನೆಯ ಶೌಚಾಲಯದಲ್ಲಿ ಕಾಡಾನೆ ಸಿಲುಕಿಕೊಂಡಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ರಕ್ಷಿಸಿ, ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಡಿಎಫ್‍ಓ ಜಗನ್ನಾಥ್, ಎಸಿಎಫ್ ನೆಹರು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರ್‍ಎಫ್‍ಓ ಕೆ.ಎಂ.ದೇವಯ್ಯ, ಡಿಆರ್‍ಎಫ್‍ಒ ಸಂಜಿತ್ ಸೋಮಯ್ಯ ಸೇರಿದಂತೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Read More