ಲೇಖಕ: admin

ಮಡಿಕೇರಿ ಜು.18 NEWS DESK : ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಕಳೆದ 9 ವರ್ಷಗಳಿಂದ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಆರ್.ಪಿ.ಚಂದ್ರಶೇಖರ್ ಅವರಿಗೆ ಶಾಲೆಯ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲೆ ಪಿ.ಕೆ.ನಳಿನಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ, ಶಾಲೆಯ ದೈಹಿಕ ಶಿಕ್ಷಕ ಶ್ರೀನಿವಾಸ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಚಂದ್ರಶೇಖರ್ ಅವರನ್ನು ಸನ್ಮಾನಿಸಿ, ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಆರ್.ಪಿ.ಚಂದ್ರಶೇಖರ್, ಶಾಲೆಯ ಅಭಿವೃದ್ಧಿಗೆ ಮುಂದೆಯೂ ಸಹಕಾರ ನೀಡುವುದಾಗಿ ಚಂದ್ರಶೇರ್ ತಿಳಿಸಿದರು. ಉಪ ಪ್ರಂಶುಪಾಲೆ ಕೆ.ವಿ.ಶಶಿಕಲಾ ಪ್ರಾಸ್ತಾವಿಕ ನುಡಿಗಳನ್ನಾಡಿ, ಶಾಲೆಯ ಅಭಿವೃದ್ಧಿಗೆ ಚಂದ್ರಶೇಖರ್ ಅವರು ಶ್ರಮ ವಹಿಸಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ವಿದ್ಯಾರ್ಥಿನಿಯರಾದ ಮೇಘನಾ ಹಾಗೂ ಶ್ರೇಷ್ಟ ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಆಂಗ್ಲ ಭಾಷಾ ಶಿಕ್ಷಕಿ ಐರಿನ್ ಉಷಾ ನಿರೂಪಿಸಿದರು. ವಿದ್ಯಾರ್ಥಿಗಳಾದ ಶಿವಕುಮಾರ್, ಚಂದ್ರ ಸ್ವರಚಿತ ಧನ್ಯವಾದ ಸಮರ್ಪಣೆ ಗಾಯನ ಮಾಡಿದರು. ಸಮಾಜ ವಿಜ್ಞಾನ ಶಿಕ್ಷಕಿ ಮಂದಾಕಿನಿ ವಂದಿಸಿದರು.

Read More

ಮಡಿಕೇರಿ ಜು.18 NEWS DESK : ತೀವ್ರ ಮಳೆಯಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಕ್ಕೆ (ಚೆಸ್ಕಾಂ) ರೂ.1.17 ಕೋಟಿ ನಷ್ಟ ಸಂಭವಿಸಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಏಪ್ರಿಲ್‍ನಿಂದ ಇಲ್ಲಿಯವರೆಗೆ ನಷ್ಟದ ಮೊತ್ತ ಇದಾಗಿದ್ದು, ವಿದ್ಯುತ್ ಕಂಬ, ಟ್ರಾನ್ಸ್‍ಫಾರ್ಮರ್‍ಗಳನ್ನು ಬದಲಿಸಿ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಜಿಲ್ಲೆಯಲ್ಲಿ 1606 ಕಂಬಗಳು ಹಾನಿಯಾಗಿದ್ದು, 110 ಸರಿಪಡಿಸಲು ಬಾಕಿ ಇವೆ. 1.5 ಕಿ.ಮೀ ವಿದ್ಯುತ್ ವಾಹಕ ಅಳವಡಿಸಲಾಗಿದೆ. ಮಳೆಯಿಂದ ಹಾನಿಗೀಡಾದ 43 ಟ್ರಾನ್ಸ್‍ಫಾರ್ಮರ್‍ಗಳನ್ನು ಹೊಸದಾಗಿ ಅಳವಡಿಸಿ ಕ್ರಮವಹಿಸಲಾಗಿದೆ. 235 ಖಾಯಂ ಲೈನ್‍ಮೆನ್‍ಗಳಿದ್ದು, ಮಳೆಗಾಲಕ್ಕಾಗಿ ವಿವಿಧೆಡೆಗಳಿಂದ 40 ಲೈನ್‍ಮೆನ್‍ಗಳನ್ನು ನೇಮಿಸಿಕೊಳ್ಳಲಾಗಿದೆ. ಇದರೊಂದಿಗೆ ತಾತ್ಕಾಲಿಕವಾಗಿ 62 ಗ್ಯಾಂಗ್‍ಮೆನ್‍ಗಳನ್ನು ನಿಯೋಜಿಸಿಕೊಂಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತೀವ್ರ ಮಳೆಯ ನಡುವೆ ಚೆಸ್ಕಾಂ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿರುವುದು ಜಿಲ್ಲೆಯಲ್ಲಿ ಕಂಡುಬರುತ್ತಿದೆ.

Read More

ಭಾಗಮಂಡಲ ಜು.18 NEWS DESK : ಕೊಡಗು ಜಿಲ್ಲೆಯ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಎಡೆಬಿಡದೆ ಧಾರಾಕಾರ ಮಳೆಯಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದ್ದು, ಪ್ರವಾಹದ ನೀರು ಶ್ರೀಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ಆವರಿಸಿದೆ. ಅಕ್ಕಪಕ್ಕದ ಅಂಗಡಿಗಳು ಜಲಾವೃತಗೊಂಡಿವೆ. ಕಳೆದ 24 ಗಂಟೆಗಳಲ್ಲಿ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಆರು ಇಂಚಿಗೂ ಅಧಿಕ ಮಳೆಯಾಗಿದೆ. ಮಳೆಯ ಪ್ರಮಾಣ ಹೆಚ್ಚಾಗಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಎತ್ತರ ಪ್ರದೇಶ ಮತ್ತು ತಗ್ಗು ಪ್ರದೇಶದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಗ್ರಾಮ ಪಂಚಾಯಿತಿ ಈಗಾಗಲೇ ಸೂಚನೆ ನೀಡಿದೆ.

Read More

ಮಡಿಕೇರಿ ಜು.18 NEWS DESK : ಮಡಿಕೇರಿ ಕೊಡವ ಸಮಾಜವು ಕೊಡವ ಜನಾಂಗದ ಮೊತ್ತಮೊದಲ ಸಮಾಜವಾಗಿದ್ದು, ದಾನಿಗಳ ಸಹಕಾರದಿಂದ ಪುನರ್ ನವೀಕರಣಗೊಳ್ಳುವ ಮೂಲಕ ಅಭಿವೃದ್ಧಿಯತ್ತ ಸಾಗುತಿದೆ. ಇನ್ನಷ್ಟು ಅಭಿವೃದ್ಧಿ ಕಾರ್ಯ ನಡೆಯ ಬೇಕೆಂದರೆ ಎಲ್ಲರ ಸಹಕಾರ ಅಗತ್ಯ ಎಂದು ‌ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ. ಮುತ್ತಪ್ಪ ಹೇಳಿದರು. ‌ಮಡಿಕೇರಿ ಕೊಡವ ಸಮಾಜದ ವಾರ್ಷಿಕ‌ ಮಹಾಸಭೆಯಅಧ್ಯಕ್ಷತೆ ವಹಿಸಿ‌ ಅವರು ಮಾತನಾಡಿದರು. ಮಡಿಕೇರಿಯಲ್ಲಿ ಕೊಡವ ಸಂಘವಾಗಿ ಪ್ರಾರಂಭಗೊಂಡು ನಂತರದಲ್ಲಿ ಕೊಡವ ಸಮಾಜವಾಗಿ ರೂಪುಗೊಂಡಿತು. ಆಡಳಿತ‌ ಮಂಡಳಿಯು ಹಲವು ಅಭಿವೃದ್ಧಿ ಕಾರ್ಯವನ್ನು ಮಾಡಿದೆ. ಸಮಾಜದ ಅಧೀನ ಸಂಸ್ಥೆಯಾದ ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯು ಹಲವು ವರ್ಷಗಳಿಂದ ಶೇ.100 ರಷ್ಟು ಫಲಿತಾಂಶ ಪಡೆಯುವ ಮೂಲಕ ಅಭಿವೃದ್ಧಿಯತ್ತ ಸಾಗುತಿದೆ. ಚೈನ್ ಗೇಟ್ ಬಳಿ ಇರುವ ಸಮಾಜದ ಜಾಗದಲ್ಲಿ ನೂತನ ಕಟ್ಟಡ ನಿರ್ಮಾಣ, ಪೆಟ್ರೋಲ್ ಬಂಕ್ ಹಾಗೂ ವಿವಿಧ ಅಭಿವೃದ್ಧಿ ಕಾರ್ಯ ನಡೆಸಲು ಸಿದ್ದತೆ ನಡೆಸಲಾಗುತ್ತಿದೆ ಎಂದರು. ಸಮಾಜದ ಅಭಿವೃದ್ಧಿಗೆ ಕೊಡವ ಅಭಿವೃದ್ಧಿ ನಿಗಮದಿಂದ 10…

Read More

ಮಡಿಕೇರಿ ಜು.18 NEWS DESK : ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ನದಿ, ತೊರೆ, ಹಳ್ಳಕೊಳ್ಳ, ಜಲಾಶಯಗಳಲ್ಲಿನ ನೀರಿನ ಮಟ್ಟ ಏರಿಕೆಯಾಗಿದೆ. ಹಲವೆಡೆ ಮನೆಗಳಿಗೆ ಹಾನಿಯಾಗಿದೆ. ಹೆಚ್ಚಿನ ಮಳೆಯಿಂದ ಮಡಿಕೇರಿ ತಾಲ್ಲೂಕು ಸಂಪಾಜೆ ಹೋಬಳಿ ಮದೆ ಗ್ರಾಮದ ಮನೋಹರಿ ಹಾಗೂ ಸಂಪಾಜೆ ಗ್ರಾಮದ ಬಂಡನ ಸರೋಜನಿ ಎಂಬುವರ ಮನೆಯ ಮುಂದಿನ ಬರೆ ಕುಸಿದಿದ್ದು, ಸೋಮವಾರಪೇಟೆ ತಾಲೂಕಿನ ಬಿಳಕಿಕೊಪ್ಪ ಗ್ರಾಮದ ಸರಸ್ವತಿ ಎಂಬವರ ಮನೆ ಮೇಲೆ ತೀವ್ರ ಮಳೆಯಿಂದ ಮರ ಬಿದ್ದು ಮನೆ ಹಾನಿಯಾಗಿದೆ. ಕೊಡ್ಲಿಪೇಟೆ ಹೋಬಳಿ ಅವರೇದಾಳು ಗ್ರಾಮದ ಮೀನಾಕ್ಷಿ ರಂಗಯ್ಯ ಎಂಬುವರ ಮನೆ ಮೇಲ್ಚವಣಿ ಮುರಿದು ಬಿದ್ದಿದೆ. ಸೋಮವಾರಪೇಟೆ ಹೋಬಳಿ ಮೂವತ್ತೋಕ್ಲು ಗ್ರಾಮದ ಜಾನು ಬೇಡು ಅವರ ಮನೆ ಗೋಡೆ ವ್ಯಾಪಕ ಮಳೆಯಿಂದ ಕುಸಿದಿದೆ.  ಕುಶಾಲನಗರ ಹೋಬಳಿ ಮಾದಾಪಟ್ಟಣ ಗ್ರಾಮದ ನಿವಾಸಿ ಜಯಮ್ಮ ಅವರ ವಾಸದ ಮನೆಯ ಗೋಡೆ ಹಾಗೂ ಮೇಲ್ಛಾವಣಿ ಹಾನಿಯಾಗಿದ್ದು, ತಹಶೀಲ್ದಾರ್ ಕಿರಣ್ ಗೌರಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿದ್ದಾರೆ. ಸೋಮವಾರಪೇಟೆ ಹೋಬಳಿಯ ದೊಡ್ಡಬೂರು ಗ್ರಾಮದ…

Read More

ನಾಪೋಕ್ಲು ಜು.18 NEWS DESK : ನಾಪೋಕ್ಲು ವ್ಯಾಪ್ತಿಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಗಾಳಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಕೊಟ್ಟಮುಡಿ, ಹೊದ್ದುರು, ಬಲಮುರಿಗಳಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ರಸ್ತೆಗಳು ಜಲಾವೃತವಾಗಿದೆ. ನಾಪೋಕ್ಲು -ಮೂರ್ನಾಡು ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಹೊದ್ದೂರು ಗ್ರಾಮದ ಬೊಳಿಬಾಣೆಯಲ್ಲಿ ರಸ್ತೆಯ ಮೇಲೆ ನಾಲ್ಕು ಅಡಿಗಳಷ್ಟು ನೀರು ಹರಿಯುತ್ತಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಚೆರಿಯಪರಂಬು ಕಲ್ಲುಮೊಟ್ಟೆ ಸಂಪರ್ಕರಸ್ತೆ, ನಾಪೋಕ್ಲು -ಬಲಮುರಿ ಮಾರ್ಗದ ಮಕ್ಕಿಕಡವು ರಸ್ತೆ ಜಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಮೂರ್ನಾಡು ರಸ್ತೆ ಸಂಪರ್ಕ ಕಡಿತಗೊಂಡಿರುವುದರಿಂದ ವಾಹನ ಸಂಚಾರಕ್ಕೆ ತೊಡಕಾಗಿ ನಾಪೋಕ್ಲು ಕೊಟ್ಟಮುಡಿ, ಕೇಮಾಟ್, ಕುಯ್ಯಂಗೇರಿ ಹೊದ್ದೂರು ಮಾರ್ಗವಾಗಿ ಮೂರ್ನಾಡಿಗೆ ವಾಹನಗಳು ಸಂಚರಿಸುತ್ತಿವೆ. ಅಪಾಯ ಮಟ್ಟ ಮೀರಿ ಪ್ರವಾಹ ಹರಿಯುತ್ತಿರುವ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಗೇಡ್ ಅಳವಡಿಸಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದೆ. ಎಮ್ಮೆಮಾಡು ಹಾಗೂ ಕೈಕಾಡ ಗ್ರಾಮದ ಕುಲ್ಲಚೆಟ್ಟಿ ಕುಟುಂಬಸ್ಥರು ಸೇರಿದಂತೆ ಇನ್ನಿತರರು ಗದ್ದೆಗಳಲ್ಲಿದ್ದ (ಅಗೆ) ಬತ್ತದ ಸಸಿ ಸೇರಿದಂತೆ ಬಹುತೇಕ ಗದ್ದೆಗಳು ಜಲವೃತವಾಗಿದೆ. ಮಳೆ ಬಿರುಸು…

Read More

ಸೋಮವಾರಪೇಟೆ ಜು.18 NEWS DESK : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಗಮನ ಹರಿಸಬೇಕು. ಫಲಾನುಭವಿಗಳಿಗೆ ಸರಕಾರದ ಯೋಜನೆಗಳನ್ನು ತಲುಪಿಸಲು ಅಧಿಕಾರಿಗಳು ಕ್ರಮವಹಿಸಬೇಕೆಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜು ನಿರ್ದೇಶನ ನೀಡಿದರು. ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಜನೆಯ ಅನುಷ್ಠಾನದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಶಕ್ತಿ ಯೋಜನೆಯಲ್ಲಿ 2023 ರಿಂದ ಇಲ್ಲಿಯ ವರೆಗೆ 60,77,137 ಮಹಿಳೆಯರು ಸಂಚರಿಸಿದ್ದು, ಸರ್ಕಾರದಿಂದ ಇಪ್ಪತ್ತನಾಲ್ಕು ಕೋಟಿ ಹದಿನಾಲ್ಕು ಲಕ್ಷದ ಒಂಬೈನೂರು ಹಣ ಸಂದಾಯವಾಗಿದೆ. ಜಿಲ್ಲೆಯಲ್ಲಿ ತಿಂಗಳಿಗೆ ಸರಾಸರಿ 16 ಸಾವಿರ ಮಹಿಳೆಯರು ಶಕ್ತಿ ಯೋಜನನೆಯಲ್ಲಿ ಸಂಚರಿಸಿದ್ದಾರೆ. ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕ ಮೆಹಬೂಬ ಹೇಳಿದರು. ಬಸ್ ಚಾಲಕರು ಮಾರ್ಗದಲ್ಲಿ 5 ರಿಂದ 8 ಮಹಿಳಾ ಪ್ರಯಾಣಿಕರು ನಿಂತು ಬಸ್ ನಿಲುಗಡೆಗೆ ಪ್ರಯತ್ನಿಸಿದರು ಬಸ್ ನಿಲ್ಲಿಸುವುದಿಲ್ಲ ಎಂದು…

Read More

ನಾಪೋಕ್ಲು ಜು.18 NEWS DESK : ಬಲ್ಲಮಾವಟ್ಟಿ ಗ್ರಾ.ಪಂ ವ್ಯಾಪ್ತಿಯ ನೆಲಜಿ ಗ್ರಾಮದ ಶ್ರೀ ಇಗ್ಗುತ್ತಪ್ಪ ದೇವಾಲಯದ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ದೋಚಿದ್ದಾರೆ. ಗ್ರಾಮದ ಶ್ರೀ ಭಗವತಿ ದೇವಾಲಯವನ್ನು ಹಿಂಬಾಗಿಲಿನಿಂದ ಪ್ರವೇಶಿಸಿದ್ದ ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ದೋಚಿದ್ದರು. ಘಟನಾ ಸ್ಥಳಕ್ಕೆ ಸ್ವಾನ ಹಾಗೂ ಬೆರಳಚ್ಚು ತಜ್ಞರು, ಪೊಲೀಸ್ ಠಾಣಾ ಅಧಿಕಾರಿ ಮಂಜುನಾಥ್. ಕ್ರೈಂ ಪಿಎಸ್ಐ ಶ್ರೀಧರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವರದಿ : ದುಗ್ಗಳ ಸದಾನಂದ

Read More

ಮಡಿಕೇರಿ ಜು.17 NEWS DESK : ವಾಹನ ಚಾಲಕರ ಸುರಕ್ಷತೆಯ ದೃಷ್ಟಿಯಿಂದ ಮತ್ತು ಸಂಚಾರಿ ನಿಯಮ ಉಲ್ಲಂಘನೆಯನ್ನು ನಿಯಂತ್ರಿಸುವ ದೃಷ್ಟಿಯಿಂದ ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಾಹನ ಮಾಲೀಕರ ಹಾಗೂ ಚಾಲಕರ ಹಿತದೃಷ್ಟಿಯಿಂದ ಪೊಲೀಸ್ ಅಧಿಕಾರಿಗಳು ಮಾಡಿರುವ ಮನವಿ ಹೀಗಿದೆ >> ಚಾಲಕರು ಕಡ್ಡಾಯವಾಗಿ ಪರವಾನಗಿ ಹೊಂದಿರಬೇಕು, ನಾಲ್ಕು ಚಕ್ರ ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಿರಬೇಕು, ಯಾವುದೇ ರೀತಿಯ ವಾಹನ ಚಲಾಯಿಸುವ ಸಂದರ್ಭ ಮದ್ಯಪಾನ ಸೇವಿಸಿರಬಾರದು. ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಕಾನೂನು ಬಾಹಿರವಾಗಿದ್ದು, ಅಂತಹ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಮತ್ತು ದಂಡಕ್ಕೆ ಗುರಿಪಡಿಸಲಾಗುವುದು. ಎಲ್ಲಾ ರೀತಿಯ ವಾಹನ ಚಾಲನಾ ಸಂದರ್ಭ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲಾಗಿದೆ. ರಾತ್ರಿ ವೇಳೆ ವಾಹನ ಸಂಚರಿಸುವ ಸಂದರ್ಭ ಎಲ್ಲಾ ಮಾದರಿಯ ವಾಹನಗಳು ಎಲ್‌ಇಡಿ ಲೈಟ್ ಬಳಕೆಯನ್ನು ಸಂಪೂರ್ಣವಾಗಿ ನಿಷೇದಿಸಲಾಗಿದೆ. ದ್ವಿಚಕ್ರ ವಾಹನ ಚಾಲನೆ ಸಂದರ್ಭ ಚಾಲಕರು ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಉತ್ತಮ ಗುಣಮಟ್ಟದ ಹೆಲ್ಮೆಟ್…

Read More

ಮಡಿಕೇರಿ ಜು.17 NEWS DESK : ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜು.18 ಮತ್ತು 19 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಸೋಮವಾರಪೇಟೆಯ ಶಾಂತಳ್ಳಿಯಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 10 ಇಂಚು ಮಳೆ ಸುರಿದಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ವ್ಯಾಪ್ತಿಯ ಭಾಗಮಂಡಲದಲ್ಲಿ 7 ಇಂಚು ಮಳೆಯಾಗಿದೆ. ::: ಶಾಲೆಗಳಿಗೆ ರಜೆ ::: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ಜು.18 ರಂದು ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಅಂಗನವಾಡಿ ಹಾಗೂ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ರಜೆ ಘೋಷಿಸಿದ್ದಾರೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1347.30 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 594.88 ಮಿ.ಮೀ ಮಳೆಯಾಗಿತ್ತು. ಬ್ರಹ್ಮಗಿರಿಯ ತಪ್ಪಲಿನಲ್ಲಿ ಸುರಿಯುತ್ತಿರುವ ಭಾರೀ ಮಳೆೆಯಿಂದ ಏರ್ಪಟ್ಟಿರುವ ಕಾವೇರಿಯ ಪ್ರವಾಹದಿಂದ ನದಿ ಪಾತ್ರದ ಹಲ ಗ್ರಾಮಗಳ ಸಂಪರ್ಕ ಕಡಿತವಾಗಿದ್ದು, ಬಿರುಮಳೆÉಯಿಂದ ಜಿಲ್ಲೆಯಾದ್ಯಂತ ಅವಘಡಗಳ ಸರಮಾಲೆ ಮುಂದುವರೆದಿದೆ. ಭಾಗಮಂಡಲ ಮತ್ತು ತಲಕಾವೇರಿ ವ್ಯಾಪ್ತಿಯಲ್ಲಿ ಕಿರು…

Read More