ಲೇಖಕ: admin

ಮಡಿಕೇರಿ ಜು.17 NEWS DESK : ಕಿರುಗೂರು, ಬಾಳೆಲೆ, ಪೊನ್ನಪ್ಪಸಂತೆ, ಮಾಯಮುಡಿ ಮತ್ತು ನಿಟ್ಟೂರು ಗ್ರಾ.ಪಂ ವ್ಯಾಪ್ತಿಯ ಬಾಳೆಲೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಅನೇಕ ದಿನಗಳಿಂದ ಔಷಧಿಯ ಕೊರತೆ ಎದುರಾಗಿದೆ. ತಕ್ಷಣ ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಿರುಗೂರು ಗ್ರಾ.ಪಂ ಅಧ್ಯಕ್ಷ ಹಾಗೂ ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆರೋಗ್ಯ ರಕ್ಷಾ ಸಮಿತಿಯ ಸಭೆ ಸಕಾಲದಲ್ಲಿ ನಡೆಯುತ್ತಿಲ್ಲ. ಅಪರೂಪಕ್ಕೊಮ್ಮೆ ನಡೆಯುವ ಸಭೆಗೆ ತಾಲ್ಲೂಕು ವೈದ್ಯಾಧಿಕಾರಿಗಳು ಹಾಜರಾಗುತ್ತಿಲ್ಲ. ಗ್ರಾಮಸ್ಥರ ಸಮಸ್ಯೆಯನ್ನು ಯಾರ ಬಳಿ ಹೇಳಿಕೊಳ್ಳಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ಜುಲೈ 16 ರಂದು ಬಾಳೆಲೆ ಆರೋಗ್ಯ ರಕ್ಷಾ ಸಮಿತಿಯ ಸಭೆ ನಡೆಯಿತು. ಸರ್ಕಾರದ ಸುತ್ತೋಲೆ ಪ್ರಕಾರ ಮೂರು ತಿಂಗಳಿಗೊಮ್ಮೆ ನಡೆಯಬೇಕಾದ ಸಭೆ ಒಂದು ವರ್ಷದ ನಂತರ ನಡೆದಿದೆ. ಆರೋಗ್ಯ ಕೇಂದ್ರಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರ ಕುಂದು ಕೊರತೆಯ ಬಗ್ಗೆ ಗಮನ ಹರಿಸುವುದು ಈ ಸಭೆಯ ಉದ್ದೇಶವಾಗಿದೆ. ಆದರೆ…

Read More

ಸುಂಟಿಕೊಪ್ಪ ಜು.17 NEWS DESK : ಕಾರು ಮತ್ತು ಆಟೋ ನಡುವೆ ಅಪಘಾತ ಸಂಭವಿಸಿರುವ ಘಟನೆ ಕೆದಕಲ್‍ನ 7ನೇ ಮೈಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಆಟೋ ಚಾಲಕ ಕಂಬಿಬಾಣೆಯ ಸಚ್ಚಿನ್ ಹಾಗೂ ಆಟೋದಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಸುಂಟಿಕೊಪ್ಪ ಪಿಎಸ್‍ಐ ಶ್ರೀಧರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.

Read More

ಮಡಿಕೇರಿ ಜು.17 NEWS DESK : ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ನೂತನವಾಗಿ ಆಯ್ಕೆಯಾದ ಸಂಸದರಿಗೆ, ವಿಧಾನ ಪರಿಷತ್ ಸದಸ್ಯರಿಗೆ ಅಭಿನಂದನೆ ಸಲ್ಲಿಕೆ, ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣಾ ಸಮಾರಂಭ ಹಾಗೂ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ಜು.19 ರಂದು ಮಡಿಕೇರಿಯಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೆಳಗಿನ ಕೊಡವ ಸಮಾಜದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೊಡಗು-ಮೈಸೂರು ಲೋಕಸಭಾ ಸದಸ್ಯ ಯದುವೀರ್ ಒಡೆಯರ್, ಮಂಗಳೂರು ಲೋಕಸಭಾ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಹಾಗೂ ವಿಧಾನ ಪರಿಷತ್ ಗೆ ಆಯ್ಕೆಯಾದ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಭೋಜೇಗೌಡ ಅವರಿಗೆ ಅಭಿನಂದನೆ ಹಾಗೂ ಕಾರ್ಯಕರ್ತರು, ಮತದಾರರಿಗೆ ಧನ್ಯವಾದ ಸಲ್ಲಿಸಲಾಗುವುದು. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾಕುಶಾಲಪ್ಪ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಕೊಡಗಿನ ಎಲ್ಲಾ ಬಿಜೆಪಿ ಪದಾಧಿಕಾರಿಗಳು, ತಾಲ್ಲೂಕು ಮಂಡಲದ…

Read More

ಮೈಸೂರು ಜು.16 NEWS DESK : ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಮೈಸೂರಿನ ಕುಕ್ಕರಹಳ್ಳಿ ಕರೆಯ ಸುತ್ತಮುತ್ತ ಸ್ವಚ್ಛತಾ ಅಭಿಯಾನ ನಡೆಯಿತು. ವಿಶ್ವವಿದ್ಯಾಲಯದ ರೈಲ್ವೆ ಗೇಟ್ ಬಳಿ ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅಭಿಯಾನಕ್ಕೆ ಚಾಲನೆ ನೀಡಿದರು. ನಂತರ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸೇರಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು.

Read More

ಮಡಿಕೇರಿ ಜು.17 NEWS DESK : ಜಿಲ್ಲೆಯ ಮೂಲನಿವಾಸಿಗಳ ಶ್ರದ್ಧಾಭಕ್ತಿಯ ಕೇಂದ್ರವಾಗಿರುವ ಭಾಗಮಂಡಲ-ತಲಕಾವೇರಿಯಲ್ಲಿ ಕರ ವಸೂಲಿಯ ನೆಪದಲ್ಲಿ ವಾಹನಗಳನ್ನು ತಡೆದು ಟೋಲ್ ಶುಲ್ಕ ಎಂಬಂತೆ ಹಣ ವಸೂಲಿ ಮಾಡುತ್ತಿದ್ದು, ತಕ್ಷಣವೇ ಇದನ್ನು ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಮೂಲ ನಿವಾಸಿಗಳನ್ನು ಒಂದುಗೂಡಿಸಿ ಹೋರಾಟ ನಡೆಸಲಾಗುವುದೆಂದು ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಎಚ್ಚರಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾವೇರಿ ಮಾತೆಯನ್ನು ತಮ್ಮ ಕುಲದೇವಿಯಾಗಿ ಪೂಜಿಸುತ್ತಿರುವ ಕೊಡವರು ಸೇರಿದಂತೆ ಆರಾಧಿಸುತ್ತಿರುವ ಜಿಲ್ಲೆಯ ಇತರ ಮೂಲನಿವಾಸಿಗಳಿಗೆ ತಮ್ಮದೇಯಾದ ಆಚಾರ-ವಿಚಾರ, ಧಾರ್ಮಿಕ ಆಚರಣೆಗಳಿದ್ದು, ಇತರ ಜಿಲ್ಲೆಗಳನ್ನು ತೆಗೆದುಕೊಂಡರೆ ಇದು ವಿಭಿನ್ನ ಹಾಗೂ ವಿಶೇಷ ಎನ್ನಬಹುದು. ನಾವು ಭಾಗಮಂಡಲ ತಲಕಾವೇರಿಗೆ ಹಿರಿಯರು ನಮಗಾಗಿ ಬಿಟ್ಟು ಹೋಗಿರುವ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಲು ಹಾಗೂ ಅಗಲಿದ ನಮ್ಮ ಪೂರ್ವಿಕರಿಗೆ ಮೋಕ್ಷವನ್ನು ಬಯಸಿ ಈ ಪುಣ್ಯ ಕ್ಷೇತ್ರಕ್ಕೆ ಭೇಟಿ ನೀಡುತ್ತೇವೆ ಹೊರತು ಮೋಜು ಮಸ್ತಿಗಾಗಿ ಬರುವವರಲ್ಲ ಎನ್ನುವುದನ್ನು ಸ್ಥಳೀಯ ಪಂಚಾಯತ್ ಅಥವಾ…

Read More

ಮಡಿಕೇರಿ ಜು.17 NEWS DESK : ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ನೂತನ ಅಧ್ಯಕ್ಷ ಬಿ.ವೈ.ರಾಜೇಶ್ ಯಲ್ಲಪ್ಪ ಸೇರಿದಂತೆ ಸದಸ್ಯರುಗಳಾದ ಸುದಯ್ ನಾಣಯ್ಯ, ಕಾನೆಹಿತ್ಲು ಮೊಣ್ಣಪ್ಪ, ಆರ್.ಪಿ.ಚಂದ್ರಶೇಖರ್ ಹಾಗೂ ಮೀನಾಜ್ ಪ್ರವೀಣ್ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ, ಶುಭಹಾರೈಸಿದರು. ಈ ಸಂದರ್ಭ ಕಾಂಗ್ರೆಸ್ ಮುಖಂಡ ಟಿ.ಪಿ.ರಮೇಶ್, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್ ಮತ್ತಿತರರು ಹಾಜರಿದ್ದರು.

Read More

ಮಡಿಕೇರಿ ಜು.17 NEWS DESK : ಎಸ್‌ಕೆಎಸ್‌ಎಸ್‌ಎಫ್ ಹಾಗೂ ಎಸ್‌ವೈಎಸ್ ಕೊಡ್ಲಿಪೇಟೆ ಶಾಖೆ ವತಿಯಿಂದ  ನೂರ್ ಮಹಲ್ ನಲ್ಲಿ ಮಜ್ಲಿಸುನ್ನೂರ್ ಕಾರ್ಯಕ್ರಮ ಹಾಗೂ ಮಸ್ಜಿದುನ್ನೂರ್ ಜುಮಾ ಮಸೀದಿಯ ನೂತನ ಆಡಳಿತ ಸಮಿತಿ ಮತ್ತು ಸಲಹಾ ಸಮಿತಿ ಪದಾಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಸ್ಜಿದುನ್ನೂರ್ ಆಡಳಿತ ಸಮಿತಿ ನೂತನ ಅಧ್ಯಕ್ಷ ಸಿದ್ದೀಕ್ ಹಾಜಿ, ಪ್ರಧಾನ ಕಾರ್ಯದರ್ಶಿ ಎಂ.ಎಂ.ಹನೀಫ್ , ಉಪಾಧ್ಯಕ್ಷ ಡಿ.ಎ.ಸುಲೈಮಾನ್ ,ಕೋಶಾಧಿಕಾರಿ ಹೆಚ್.ಇ.ಬಾಸಿತ್, ಕಾರ್ಯಕಾರಿ ಕಾರ್ಯದರ್ಶಿ ಬಿ.ಯು.ಮುನೀರ್ ಹಾಗೂ ಜೊತೆ ಕಾರ್ಯದರ್ಶಿ ಅಬ್ದುಲ್ ರಶೀದ್ ಸೇರಿದಂತೆ ಇತರೆ 8 ಮಂದಿ ಕಾರ್ಯಕಾರಿಣಿ ಸದಸ್ಯರುಗಳನ್ನು ಹಾಗೂ ನೂತನವಾಗಿ ಆಯ್ಕೆಯಾದ ಸಲಹಾ ಸಮಿತಿಯ ಹೆಚ್.ಇ.ಸುಲೈಮಾನ್, ಕೆ.ಕೆ.ಸುಲೈಮಾನ್ ಹಾಜಿ, ಕೆ.ಎ.ಇಬ್ರಾಹಿಂ ಮಲ್ಲಳ್ಳಿ, ಡಿ.ಎ.ಸುಲೈಮಾನ್ ಮತ್ತು ಉಸ್ತಾದ್ ಶಾಫಿ ಫೈಝಿ  ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ತಜಲ್ಲಿಯಾತ್ ಮದರಸ ಮುಖ್ಯೋಪಾಧ್ಯಾಯರಾದ ರಝಾಕ್ ಫೈಝಿ, ಸ್ವಾಲಿಹ್ ರಹ್ಮಾನಿ, ರಶೀದ್ ಅಮೀನಿ, ಎಸ್‌ಕೆಎಸ್‌ಎಸ್‌ಎಫ್ ಶಾಖಾ ಪ್ರಧಾನ ಕಾರ್ಯದರ್ಶಿ ಬಾಸಿತ್ ಹಾಜಿ, ಎಸ್‌ವೈಎಸ್ ಉಪಾಧ್ಯಕ್ಷ ಅಬ್ದುಲ್ ರಹ್ಮಾನ್ ಮತ್ತು ಸಮಿತಿಯ ನೇತಾರರು, ಸದಸ್ಯರುಗಳು, ಜಮಾಅತ್…

Read More

ಮಡಿಕೇರಿ ಜು.17 NEWS DESK : ಕರ್ನಾಟಕ ಹಾಕಿ ತಂಡದ ಉಪನಾಯಕಿಯಾಗಿ ಕೊಡಗು ವಿದ್ಯಾಲಯ ಶಾಲೆಯ ವಿದ್ಯಾರ್ಥಿನಿ ಪರ್ಲಿನ್ ಪೊನ್ನಮ್ಮ ಆಯ್ಕೆಯಾಗಿದ್ದಾರೆ. ಜೂ.26ರಂದು ನಡೆದ ಹಾಕಿ ಕರ್ನಾಟಕ ಸಬ್ ಜೂನಿಯರ್ ಪುರುಷ ಹಾಗೂ ಮಹಿಳೆಯರ ಹಾಕಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳಾದ ನಮನ್ ಆರ್, ಆದಿತ್ಯ ದಿನಕರ್, ಚರೀಶ್ ಉತ್ತಯ್ಯ, ಪರ್ಲ್ಲಿನ್ ಪೊನ್ನಮ್ಮ, ನೀತು ಚೌದರಿ, ಜಾಸ್ಮಿನ್ ಫೆಲ್ಲಾ ಹಾಗೂ ವರ್ಣ ಬೋಜಮ್ಮ ರಾಜ್ಯ ಮಟ್ಟದ ಹಾಕಿ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ. ಇವರ ಪೈಕಿ ಪರ್ಲ್ಲಿನ್ ಪೊನ್ನಮ್ಮ ಇದೇ ತಿಂಗಳು 19 ರಿಂದ 26ರವರೆಗೆ ಕೊಲ್ಲಂನಲ್ಲಿ ನಡೆಯುವ ಹಾಕಿ ಇಂಡಿಯಾ  ದಕ್ಷಿಣ ವಲಯ ಮಟ್ಟದ ಹಾಕಿ ಚಾಂಪಿಯನ್ ಶಿಪ್ ಗೆ ಕರ್ನಾಟಕ ಹಾಕಿ ತಂಡದ ಉಪನಾಯಕಿಯಾಗಿ ಆಯ್ಕೆಯಾಗಿದ್ದಾಳೆ. ಈಕೆ ಮಡಿಕೇರಿಯ ವಕೀಲರಾದ ಅಚ್ಚಪಂಡ ಗಿರಿ ಹಾಗೂ ಪದ್ಮ ದಂಪತಿ ಪುತ್ರಿ.

Read More

ನಾಪೋಕ್ಲು ಜು.17 NEWS DESK : ಕುಶಾಲನಗರ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರದ ನಾಮ ನಿರ್ದೇಶಕ ಸದಸ್ಯರಾಗಿ ಆಯ್ಕೆ ಆಗಿರುವ ವಿ.ಎಸ್.ಸಜಿ ಅವರನ್ನು ಸಿರೋ ಮಲಬಾರ್ ಕ್ರೈಸ್ತ ಸಭೆಯ ವತಿಯಿಂದ ಸಿದ್ದಾಪುರದಲ್ಲಿ ಸನ್ಮಾನಿಸಲಾಯಿತು. ಸಂತ ಮೇರಿಯಮ್ಮ ದೇವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧರ್ಮ ಕೇಂದ್ರದ ಧರ್ಮ ಗುರು ಜೋಜಿ ವಡಕ್ಕೇವಿಟ್ಟಿಲ್ ಸಜಿ ಅವರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಧರ್ಮ ಕೇಂದ್ರದ ಕಾರ್ಯದರ್ಶಿ ಫ್ರಾನ್ಸಿಸ್, ಪ್ರಮುಖರಾದ ಜೋಸ್ ಚೂಳಕ್ಕಲ್, ಶ್ಯಾಂ ಬಾಬು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.

Read More