ಲೇಖಕ: admin

ಮಡಿಕೇರಿ ಫೆ.28 NEWS DESK : ಗಂಭೀರ ಆರೋಪ ಎದುರಿಸುತ್ತಿರುವ ಜೆಫ್ರಿ ಎಪ್ಸ್ಟೀನ್ ನೊಂದಿಗೆ ಸಂಪರ್ಕ ಹೊಂದಿರುವ ಟೀಕೆಗೆ ಗುರಿಯಾಗಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ಸಚಿವ ಹಾಗೂ ಬಿಜೆಪಿ ಮುಖಂಡ ಹರ್ ದೀಪ್ ಸಿಂಗ್ ಪುರಿ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಬಂಧಿಸಬೇಕು ಎಂದು ಒತ್ತಾಯಿಸಿ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ಶುಕ್ರವಾರ ಸಂಜೆ ಮಡಿಕೇರಿ ನಗರದ ಇಂದಿರಾಗಾಂಧಿ ವೃತ್ತದಿಂದ ಮೊಂಬತ್ತಿ ಹಿಡಿದು ಹಳೆ ಖಾಸಗಿ ಬಸ್ ನಿಲ್ದಾಣದವರೆಗೆ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಹರ್ ದೀಪ್ ಸಿಂಗ್ ಪುರಿ, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಜಿ.ಆರ್.ಪುಷ್ಪಲತಾ ಮಾತನಾಡಿ ಬಾಲಕಿಯರನ್ನು ಅಪಹರಿಸಿ ಪ್ರಭಾವಿಗಳನ್ನು ಅಪರಾಧ ಕೃತ್ಯದಲ್ಲಿ ಭಾಗಿಯಾಗುವಂತೆ ಮಾಡಿದ ಆರೋಪ ಎದುರಿಸುತ್ತಿರುವ ಜೆಫ್ರಿ ಎಪ್ಸ್ಟೀನ್ ನೊಂದಿಗೆ ಕೇಂದ್ರ ಸಚಿವ ಹರ್ ದೀಪ್ ಸಿಂಗ್ ಪುರಿ ಸಂಪರ್ಕ ಹೊಂದಿರುವುದು ಬಹಿರಂಗವಾಗಿದ್ದರೂ ಪ್ರಧಾನಿ…

Read More

ಮಡಿಕೇರಿ ಫೆ.28 NEWS DESK : ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಮೇಲೆ ನಡೆದಿರುವ ಹಲ್ಲೆ ಪ್ರಕರಣ ಖಂಡನೀಯವಾಗಿದ್ದು, ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಎಂ.ಪಿ.ಸುನಿಲ್ ಸುಬ್ರಮಣಿ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಗಲಿನ ವೇಳೆಯಲ್ಲೇ ರಾಜಾರೋಷವಾಗಿ ಹಲ್ಲೆ ಮಾಡಲಾಗಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಈ ರೀತಿಯ ಘಟನೆಗಳು ನಡೆಯುತ್ತಿರುತ್ತದೆ ಎಂದು ಆರೋಪಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ 100 ವರ್ಷ ತುಂಬಿದ ಹಿನ್ನೆಲೆ ಎಲ್ಲರೂ ಸೇರಿ ಪೀತಿ ಮತ್ತು ಶಾಂತಿಯಿಂದ ಹಿಂದೂ ಸಂಗಮ ಕಾರ್ಯಕ್ರಮವನ್ನು ರಾಜ್ಯವ್ಯಾಪಿ ಮಾಡಲಾಗುತ್ತಿದೆ. ಬಲ್ಲಮಾವಟಿಯಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದ್ದ ಹಿನ್ನೆಲೆ ಗೌತಮ್ ಪಿಕ್ ಅಪ್ ವಾಹನದಲ್ಲಿ ತೆರಳುತ್ತಿದ್ದರು, ಧ್ವನಿವರ್ಧಕವನ್ನು ಕೂಡ ಬಳಸಿರಲಿಲ್ಲ. ಈ ಹಂತದಲ್ಲಿ ದಾಳಿ ಮಾಡಲಾಗಿದ್ದು, ಹಲ್ಲೆ ಮಾಡಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.…

Read More

ಮಡಿಕೇರಿ ಫೆ.28 NEWS DESK : ಬಡವರ ಮತಗಳಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ಇಲ್ಲಿಯವರೆಗೆ ಬಡವರಿಗೆ ನಿವೇಶನ ಮತ್ತು ವಸತಿ ಸೌಲಭ್ಯವನ್ನು ನೀಡದೆ ವಂಚಿಸಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ ಹಾಗೂ ಎಐಟಿಯುಸಿಯ ಕೊಡಗು ಜಿಲ್ಲಾ ಘಟಕಗಳು ಜಂಟಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿವೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಟಿಯುಸಿ ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರು 2007 ರಿಂದ ನಮ್ಮ ಸಂಘಟನೆ ಕೊಡಗು ಜಿಲ್ಲೆಯಲ್ಲಿರುವ ಎಲ್ಲಾ ನಿವೇಶನ ಮತ್ತು ವಸತಿ ರಹಿತ ಬಡವರಿಗೆ, ದಲಿತರಿಗೆ, ಕಾರ್ಮಿಕರಿಗೆ, ಸರ್ವ ದುಡಿಯುವ ವರ್ಗಕ್ಕೆ ನಿವೇಶನ ಹಾಗೂ ವಸತಿಯನ್ನು ನೀಡಬೇಕೆಂದು ಹೋರಾಟ ನಡೆಸುತ್ತಲೇ ಬಂದಿದೆ. ಆದರೆ ಇಲ್ಲಿಯವರೆಗೆ ಅಧಿಕಾರಕ್ಕೆ ಬಂದ ಯಾವುದೇ ಸರಕಾರಗಳು ಬಡವರ ಈ ಬೇಡಿಕೆಗಳನ್ನು ಈಡೇರಿಸಿಲ್ಲ. ರಾಜಕೀಯ ಪಕ್ಷಗಳಿಗೆ ಬಡವರ ಮತಗಳು ಬೇಕು, ಆದರೆ ಬಡವರಿಗೆ ನಿವೇಶನ ಮತ್ತು ವಸತಿ ಸೌಲಭ್ಯ ಕಲ್ಪಿಸಬೇಕು ಎನ್ನುವ ಜವಾಬ್ದಾರಿ ಇಲ್ಲದಾಗಿದೆ. ಪ್ರಸ್ತುತ ಇರುವ ಕಾಂಗ್ರೆಸ್ ಸರಕಾರ ಕೂಡ ಶೋಷಿತರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ಅಸಮಾಧಾನ…

Read More

ಮಡಿಕೇರಿ NEWS DESK ಫೆ.28 : ಹಿಂದೂ ಸಂಘಟನೆಯ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಮೇಲೆ ನಡೆದಿರುವ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೌತಮ್ ಅವರನ್ನು ಭೇಟಿಯಾದ ಅವರು ಸಾಂತ್ವನ ಹೇಳಿ ಧೈರ್ಯ ತುಂಬಿದರು. ನಂತರ ಮಾತನಾಡಿದ ಎನ್.ಯು.ನಾಚಪ್ಪ ನಾಪೋಕ್ಲು ಘಟನೆ ಅತ್ಯಂತ ದುರದೃಷ್ಟಕರ, ಮುಗ್ಧ ಕೊಡವ ಯುವಕನ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಕೃತ್ಯವಾಗಿದೆ. ತನ್ನದೇ ತಾಯ್ನಾಡಿನಲ್ಲಿ ಸೂಕ್ಷ್ಮಾತಿ ಸೂಕ್ಷ್ಮ ಅಲ್ಪಸಂಖ್ಯಾತ ಆದಿಮಸಂಜಾತ ಕೊಡವ ಯುವಕನ ಮೇಲೆ ನಡೆದ ಈ ದೌರ್ಜನ್ಯ ಆತಂಕಕಾರಿ ಬೆಳವಣಿಗೆಯಾಗಿದೆ. ಇದು ತಮ್ಮದೇ ನೆಲದಲ್ಲಿ ಆದಿಮಸಂಜಾತ ಕೊಡವರಿಗೆ ಇರುವ ಸಾಮಾಜಿಕ ಅಭದ್ರತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಎನ್.ಯು.ನಾಚಪ್ಪ, ಈ ಹಿಂದೆ ಕೂಡ ಆರೋಪಿಗಳು ಅಮಾಯಕರ ಮೇಲೆ ಹಲ್ಲೆ ನಡೆಸಿರುವ ಕುರಿತು ಮಾಹಿತಿ ಇದ್ದು, ಇಂತಹ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ಪೊಲೀಸ್ ಇಲಾಖೆ…

Read More

ಬೆಂಗಳೂರು, ಫೆಬ್ರವರಿ 28, 2026: ಐಟಿ ಸಿಟಿ ಬೆಂಗಳೂರು ಮತ್ತು ವಾಣಿಜ್ಯ ನಗರಿ ಮುಂಬೈ ನಡುವೆ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಮಹತ್ವದ ಕ್ರಮ ಕೈಗೊಂಡಿದೆ. ಮಾರ್ಚ್ 1ರ ಭಾನುವಾರ ಬೆಂಗಳೂರಿನಿಂದ ಮುಂಬೈಗೆ ‘ಒನ್‌ ವೇ ಕಾಯ್ದಿರಿಸದ ವಿಶೇಷ ಎಕ್ಸ್‌ಪ್ರೆಸ್ ರೈಲು’ ಓಡಿಸಲು ನಿರ್ಧರಿಸಲಾಗಿದೆ. ರೈಲು ಸಂಚಾರದ ವೇಳಾಪಟ್ಟಿ (Schedule) ರೈಲು ಸಂಖ್ಯೆ: 06541 (SMVT ಬೆಂಗಳೂರು – ಲೋಕಮಾನ್ಯ ತಿಲಕ್ ಟರ್ಮಿನಸ್) ಹೊರಡುವ ಸಮಯ: ಮಾರ್ಚ್ 1 (ಭಾನುವಾರ) ಸಂಜೆ 7:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ನಿಲ್ದಾಣದಿಂದ. ತಲುಪುವ ಸಮಯ: ಮಾರ್ಚ್ 2 (ಸೋಮವಾರ) ರಾತ್ರಿ 11:30 ಗಂಟೆಗೆ ಮುಂಬೈನ ಎಲ್‌ಟಿಟಿ (LTT) ನಿಲ್ದಾಣಕ್ಕೆ. ನಿಲುಗಡೆ ನಿಲ್ದಾಣಗಳು (Stoppages) ಈ ವಿಶೇಷ ರೈಲು ಕರ್ನಾಟಕ ಮತ್ತು ಮಹಾರಾಷ್ಟ್ರದ ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ: ಕರ್ನಾಟಕ: ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಲೋಂಡಾ, ಬೆಳಗಾವಿ ಹಾಗೂ ಘಟಪ್ರಭಾ. ಮಹಾರಾಷ್ಟ್ರ:…

Read More

ಬೆಂಗಳೂರು, ಫೆಬ್ರವರಿ 28, 2026: ಕರ್ನಾಟಕ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಇಂದು ಶನಿವಾರದಂದು ಅದ್ಧೂರಿಯಾಗಿ ಆರಂಭಗೊಂಡಿದೆ. ಮೊದಲ ದಿನ ಕನ್ನಡ ಮತ್ತು ಅರೇಬಿಕ್ ಪತ್ರಿಕೆಗಳೊಂದಿಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿದ್ದಾರೆ. ನೋಂದಣಿ ಮತ್ತು ವಿಭಾಗವಾರು ವಿವರ ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ: ತರಗತಿ ವಿದ್ಯಾರ್ಥಿಗಳು (Freshers): 6,46,801 ಪುನರಾವರ್ತಿತ ಅಭ್ಯರ್ಥಿಗಳು: 50,540 ಖಾಸಗಿ ಅಭ್ಯರ್ಥಿಗಳು: 13,022 ವಿಭಾಗವಾರು: ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂದರೆ 2,92,645 ಮಂದಿ, ವಾಣಿಜ್ಯದಲ್ಲಿ 2,11,174 ಹಾಗೂ ಕಲಾ ವಿಭಾಗದಲ್ಲಿ 1,42,982 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಹೈಟೆಕ್ ಕಣ್ಗಾವಲು ಮತ್ತು ಭದ್ರತೆ ರಾಜ್ಯದ 1,217 ಕೇಂದ್ರಗಳಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ವೆಬ್‌ಕಾಸ್ಟಿಂಗ್: ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಜಿಲ್ಲಾ ಕೇಂದ್ರಗಳಿಂದಲೇ ನೇರ ವೀಕ್ಷಣೆ (Webcasting) ಮಾಡುವ ವ್ಯವಸ್ಥೆ ಜಾರಿಯಲ್ಲಿದೆ. ವದಂತಿಗಳಿಗೆ ಬ್ರೇಕ್: ಪ್ರಶ್ನೆಪತ್ರಿಕೆ ಸೋರಿಕೆ…

Read More

ಬೆಂಗಳೂರು, ಫೆಬ್ರವರಿ 28, 2026: ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ಆದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) 19ನೇ ಆವೃತ್ತಿಯ ಆರಂಭಕ್ಕೆ ದಿನಾಂಕ ನಿಗದಿಯಾಗಿದೆ. ಮೂಲಗಳ ಪ್ರಕಾರ, ಈ ಬಾರಿಯ ಟೂರ್ನಿಯು ಮಾರ್ಚ್ 28, ಶನಿವಾರದಂದು ಆರಂಭವಾಗಲಿದ್ದು, ಮಹಾ ಫೈನಲ್ ಪಂದ್ಯವು ಮೇ 31 ರಂದು ನಡೆಯಲಿದೆ. ಪ್ರಮುಖ ಮುಖ್ಯಾಂಶಗಳು: ಎರಡು ದಿನ ವಿಳಂಬ: ಮೊದಲು ಮಾರ್ಚ್ 26ಕ್ಕೆ ಟೂರ್ನಿ ಆರಂಭಿಸಲು ನಿರ್ಧರಿಸಲಾಗಿತ್ತು. ಆದರೆ, ಆಂತರಿಕ ಕಾರಣಗಳಿಂದಾಗಿ ಇದನ್ನು ಎರಡು ದಿನ ಮುಂದೂಡಲಾಗಿದೆ. ಚುನಾವಣಾ ಎಫೆಕ್ಟ್: ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಅಸ್ಸಾಂ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳ ಕಾರಣದಿಂದಾಗಿ ಪೂರ್ಣ ಪ್ರಮಾಣದ ವೇಳಾಪಟ್ಟಿ ಪ್ರಕಟಿಸಲು ವಿಳಂಬವಾಗುತ್ತಿದೆ. ಹೀಗಾಗಿ ಬಿಸಿಸಿಐ ಎರಡು ಹಂತಗಳಲ್ಲಿ ವೇಳಾಪಟ್ಟಿ ಬಿಡುಗಡೆ ಮಾಡಲು ಚಿಂತಿಸಿದೆ. ಆಡಳಿತ ಮಂಡಳಿ ಸಭೆ: ಮುಂದಿನ ವಾರ ನಡೆಯಲಿರುವ ಐಪಿಎಲ್ ಆಡಳಿತ ಮಂಡಳಿ ಸಭೆಯಲ್ಲಿ ಅಧಿಕೃತ ವೇಳಾಪಟ್ಟಿ ಮತ್ತು ಆರಂಭಿಕ ಪಂದ್ಯದ ಸ್ಥಳದ ಬಗ್ಗೆ ಅಂತಿಮ ತೀರ್ಮಾನ ಹೊರಬೀಳಲಿದೆ. ಆರ್‌ಸಿಬಿ…

Read More

ಲಾ ಪಾಜ್ (ಬೊಲಿವಿಯಾ), ಫೆಬ್ರವರಿ 28, 2026: ಬೊಲಿವಿಯಾದ ಎಲ್ ಆಲ್ಟೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಹೊಸ ಕರೆನ್ಸಿ ನೋಟುಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಸರಕು ವಿಮಾನವೊಂದು (Cargo Plane) ಪತನಗೊಂಡು ಭೀಕರ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ದಳದ ಮುಖ್ಯಸ್ಥ ಪಾವೆಲ್ ಟೋವರ್ ತಿಳಿಸಿದ್ದಾರೆ. 🚨 BREAKING NEWS A #Bolivian Air Force C-130 Hercules cargo plane carrying newly printed banknotes has crashed near El Alto, close to La Paz. At least 15 people are dead.#sstvi #WilliamEst #AVFC pic.twitter.com/QS0gogxmYG — Eyes on the Globe (@eyes_globe) February 28, 2026 ಘಟನೆಯ ವಿವರ: ಹೆದ್ದಾರಿಯ ಮೇಲೆ ಅಪ್ಪಳಿಸಿದ ವಿಮಾನ ತಾಂತ್ರಿಕ ದೋಷ: ವಾಯುಪಡೆಗೆ ಸೇರಿದ ಹರ್ಕ್ಯುಲಸ್ ಸಿ-130 (Hercules…

Read More

ಟೆಹರಾನ್/ಜೆರುಸಲೇಂ, ಫೆಬ್ರವರಿ 28, 2026: ಮಧ್ಯಪ್ರಾಚ್ಯದಲ್ಲಿ ಮಹಾಯುದ್ಧದ ಭೀತಿ ಆವರಿಸಿದೆ. ಶನಿವಾರ ಮುಂಜಾನೆ ಇರಾನ್ ರಾಜಧಾನಿ ಟೆಹರಾನ್ ಮೇಲೆ ಇಸ್ರೇಲ್ ಸೇನೆ ಭೀಕರ ಕ್ಷಿಪ್ಪಣಿ ದಾಳಿ ನಡೆಸುವ ಮೂಲಕ ಪ್ರತ್ಯಾಕ್ರಮಣ ಮಾಡಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರ ಭವನಗಳನ್ನೇ ಗುರಿಯಾಗಿಸಿ ಈ ದಾಳಿ ನಡೆದಿದ್ದು, ಇಡೀ ಟೆಹರಾನ್ ಸರಣಿ ಸ್ಫೋಟಗಳಿಂದ ನಡುಗಿಹೋಗಿದೆ. ಪೂರ್ವಯೋಜಿತ ದಾಳಿ ಮತ್ತು ಅಮೆರಿಕದ ಸಾಥ್ ಇಸ್ರೇಲ್ ನಡೆಸಿದ ಈ ಕಾರ್ಯಾಚರಣೆಯು ಸಂಪೂರ್ಣವಾಗಿ ಪೂರ್ವಯೋಜಿತವಾಗಿದ್ದು, ಅಮೆರಿಕದ ಜೊತೆ ಸಂಯೋಜಿತವಾಗಿತ್ತು ಎಂದು ಇಸ್ರೇಲಿ ರಕ್ಷಣಾ ಅಧಿಕಾರಿಗಳು ದೃಢಪಡಿಸಿದ್ದಾರೆ. ಕಾರಣವೇನು? ಇರಾನ್ ತನ್ನ ಅಣು ಅಸ್ತ್ರ ಮತ್ತು ಬ್ಯಾಲಿಸ್ಟಿಕ್ ಕ್ಷಿಪ್ಪಣಿ ಕಾರ್ಯಕ್ರಮಗಳನ್ನು ಮುಂದುವರಿಸಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಮತ್ತು ಇಸ್ರೇಲ್ ಈ ಹಿಂದೆಯೇ ಎಚ್ಚರಿಸಿದ್ದವು. ದಿಢೀರ್ ದಾಳಿ: ಇರಾನ್ ತನ್ನ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ದಾಳಿ ನಡೆಸಿದ್ದೇವೆ…

Read More

ಮಡಿಕೇರಿ NEWS DESK ಫೆ.28 : ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವ ಆರೋಪಿಯನ್ನು ಗಡಿಪಾರು ಮಾಡಬೇಕೆಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಿಂದೂ ಧರ್ಮದ ಜಾಗೃತಿಗಾಗಿ ಶಾಂತಿಯುತವಾಗಿ ಜಿಲ್ಲಾವ್ಯಾಪಿ ಹಿಂದೂ ಸಂಗಮ ಕಾರ್ಯಕ್ರಮಗಳನ್ನು ನಡೆಸುತ್ತಾ ಬರಲಾಗುತ್ತಿದೆ. ಈ ನಡುವೆ ಬಲ್ಲಮಾವಟಿಯಲ್ಲಿ ಕಾರ್ಯಕ್ರಮ ನಡೆಸಬೇಕಾದ ಹೊತ್ತಿನಲ್ಲೇ ಅಶಾಂತಿ ಹಾಗೂ ಕೋಮುಗಲಭೆ ಸೃಷ್ಟಿಸುವ ಹುನ್ನಾರವನ್ನು ಕೆಲವರು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಹಿಂದೂ ಕಾರ್ಯಕರ್ತನ ಮೇಲೆ ನಡೆದಿರುವ ಹಲ್ಲೆ ಖಂಡನೀಯ. ಹಲ್ಲೆ ಪ್ರಕರಣದ ಓರ್ವ ಆರೋಪಿ ಇತ್ತೀಚೆಗೆ ಭದ್ರತಾ ಕಾಯ್ದೆ 107 ಅಡಿ ತಾಲ್ಲೂಕು ದಂಡಾಧಿಕಾರಿಗಳ ಸಮಕ್ಷಮದಲ್ಲಿ ಬಾಂಡ್ ಗೆ ಸಹಿ ಮಾಡಿದ್ದಾನೆ ಎಂಬ ಮಾಹಿತಿ ಲಭ್ಯವಿದೆ. ಇದೀಗ ಬಾಂಡ್ ನಿಯಮ ಉಲ್ಲಂಘನೆ ಮಾಡಿರುವ ಘಟನೆ ನಡೆದಿದ್ದು, ಆರೋಪಿಯನ್ನು ತಕ್ಷಣ ಕೊಡಗು ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದ್ದಾರೆ.

Read More