ಮಡಿಕೇರಿ ಜು.15 NEWS DESK : ಹಳ್ಳಿಗಟ್ಟು ಮಾರಮ್ಮ ದೇವರ ವಾರ್ಷಿಕ ಉತ್ಸವವು ಜು.16 ರಂದು ನಡೆಯಲಿದೆ ಎಂದು ಶ್ರೀ ಗುಂಡಿಯತ್ ಅಯ್ಯಪ್ಪ, ಭದ್ರಕಾಳಿ ಹಾಗೂ ಮಾರಮ್ಮ ದೇವರ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಪ್ರತಿವರ್ಷದಂತೆ ಈ ಬಾರಿಯೂ ಕಕ್ಕಡ ಮಾಸಕ್ಕೆ ಒಂದು ದಿನ ಮುಂಚಿತವಾಗಿ ನಡೆಯಲಿದೆ. ಜು.16 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 3 ಗಂಟೆಯವರೆಗೆ ನಡೆಯಲಿದ್ದು, ಒಂದು ವಾರಗಳ ನಂತರ ಕಕ್ಕಡ ಮಾಸದಲ್ಲಿ ನಡೆಯುವ ಮತ್ತೊಂದು ಮಾರಿಗುಡಿ ಹಬ್ಬ ಜು.22 ರಂದು ನಡೆಯಲಿದೆ. ಹರಕೆ ಕಾಣಿಕೆ ಸಲ್ಲಿಸುವವರು ಈ ಎರಡು ದಿನಗಳಲ್ಲಿ ಯಾವ ದಿವಸ ಬೇಕಾದರೂ ಸಲ್ಲಿಸಬಹುದಾಗಿದೆ. ಊರಿನವರು ಮಾತ್ರವಲ್ಲದೆ ಯಾರು ಬೇಕಾದರೂ ಹಬ್ಬದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಜೋಡುಬೀಟಿಯಿಂದ ಮೂಕಳೇರ ಹಾಗೂ ಮಚ್ಚಿಯಂಡ ಬಲ್ಯಮನೆಗೆ ಹೋಗುವ ರಸ್ತೆಯಲ್ಲಿರುವ ಈ ದೇವಸ್ಥಾನಕ್ಕೆ ಪುರಾತನ ಕಾಲದ ಇತಿಹಾಸವಿದ್ದು ವರ್ಷಕ್ಕೆ ಎರಡು ಬಾರಿ ಮಾತ್ರ ಇಲ್ಲಿ ಪೂಜೆ ಪುನಸ್ಕಾರ ಹಾಗೂ…
ಲೇಖಕ: admin
ಬೆಂಗಳೂರು, ಜು.15 NEWS DESK : ವಿಧಾನಸೌಧದ ಪಶ್ಚಿಮ ದ್ವಾರವನ್ನು ನವೀಕರಿಸಲಾಗಿದ್ದು, ನವೀಕೃತ ಬಾಗಿಲನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ನನನ್ನೂ ಒಳಗೊಂಡಂತೆ, ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕ ಮಿತ್ರರು ಸೇರಿ ಸಂತೋಷದಿಂದ ಉದ್ಘಾಟಿಸಿದ್ದೇವೆ ಎಂದು ಹೇಳಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಉಪಸ್ಥಿತರಿದ್ದರು.
ಮಡಿಕೇರಿ ಜು.15 NEWS DESK : ರಾಷ್ಟ್ರಮಟ್ಟದ ಚಾಂಪಿಯನ್‍ಶಿಪ್ ನಲ್ಲಿ ವಿರಾಜಪೇಟೆಯ ಕಾವೇರಿ ಶಾಲೆ ವಿದ್ಯಾರ್ಥಿನಿ ಚಿನ್ನದ ಪದಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ. ಗೋವಾದಲ್ಲಿ ನಡೆದ ಅಖಿಲ ಭಾರತ ರಾಷ್ಟ್ರಮಟ್ಟದ ಬಾಲಕಿಯರ ಥ್ರೋ ಬಾಲ್ ಚಾಂಪಿಯನ್ ಶಿಪ್‍ನಲ್ಲಿ ಕಾವೇರಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಬಿ.ಎಸ್.ತನ್ಯ ರೈ ಚಿನ್ನದ ಪದಕ ಪಡೆದು ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿ ತಂದಿದ್ದಾಳೆ. ಈ ತಂಡ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾಗಿರುತ್ತಾರೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯನಿಯರು ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಅಭಿನಂದನೆ ಸಲ್ಲಿಸಿದರು.
ಮಡಿಕೇರಿ ಜು.15 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಒಳಹರಿವಿನ ಪ್ರಮಾಣದಲ್ಲಿ ಏರಿಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಲಾಶಯದಿಂದ 20,000 ಕ್ಯುಸೆಕ್ ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ.
ಮಡಿಕೇರಿ ಜು.15 NEWS DESK : ವಿರಾಜಪೇಟೆ ತಾಲ್ಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಐವರು ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಅವರು ತಮ್ಮ ತಂದೆ ದಿವಂಗತ ಎ.ಕೆ.ಸುಬ್ಬಯ್ಯ ಹಾಗೂ ತಾಯಿ ದಿವಂಗತ ಎ.ಎಸ್ ಪೊನ್ನಮ್ಮ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ಕ್ರೀಡಾ ಗ್ರಾಮದಲ್ಲಿ ಮೈದಾನದ ಕೊರತೆ” ವರದಿಗೆ ಎ.ಎನ್.ವಾಸು ಪಡೆದುಕೊಂಡಿದ್ದಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ಆರ್.ಸವಿತಾ ರೈ ಅವರು ತಮ್ಮ ತಂದೆ ಕೃಷಿಕರಾಗಿದ್ದ ದಿವಂಗತ ಬಿ.ಎಸ್.ರಂಗನಾಥ ರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕೃಷಿ ವರದಿಗೆ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ “ಮಿಶ್ರ ಕೃಷಿಯಲ್ಲಿ ದಂಪತಿ ಸಾಧನೆ” ವರದಿಗೆ ಪಿ.ವಿ.ಅಂತೋಣಿ ಪಡೆದುಕೊಂಡಿದ್ದಾರೆ. ಸಿದ್ದಾಪುರದ ಸಮಾಜ ಸೇವಕರಾದ ಕೆ.ಯು.ಅಬ್ದುಲ್ ಮಜೀದ್ ಅವರು ತಮ್ಮ ತಂದೆ ದಿವಂಗತ ಉಸ್ಮಾನ್ ಹಾಜಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿಗೆ ಕೊಡಗು ಚಾನಲ್…
ಮಡಿಕೇರಿ ಜು.15 NEWS DESK : ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗಿದ್ದು, ಅಲ್ಲಲ್ಲಿ ಮರದ ರೆಂಬೆಗಳು ಮುರಿದುಬಿದ್ದು ಮನೆಗಳಿಗೆ ಹಾನಿಯಾಗಿದೆ. ಸುಂಟಿಕೊಪ್ಪ ಹೋಬಳಿಯ ಅಂದಾಗೋವೆ ಗ್ರಾಮದ ಅಬ್ಬಾಸ್ ಎಂಬವರ ಮನೆಯ ಮೇಲ್ಛಾವಣಿಯ ಶೀಟುಗಳು ಗಾಳಿ ಮಳೆಗೆ ಹಾನಿಗೊಂಡಿದೆ.
ಮಡಿಕೇರಿ ಜು.15 NEWS DESK : ಕಕ್ಕಬ್ಬೆ ಭಾಗದ ಹಲವರು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಡಿಸಿಸಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ ಹಾಗೂ ಗ್ರಾ.ಪಂ ಮಾಜಿ ಅಧ್ಯಕ್ಷ ಕಲಿಯಂಡ ಸಂಪಬ್ ಅಯ್ಯಪ್ಪ ಮುಂದಾಳತ್ವದಲ್ಲಿ ವಿರಾಜಪೇಟೆಯ ಶಾಸಕ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.
ಮಡಿಕೇರಿ ಜು.14 NEWS DESK : ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಗಾಳಿಗೆ ಮರದ ಕೊಂಬೆ ಬಿದ್ದು ಸುಮಾರು ಆರು ಕಾರುಗಳು ಜಖಂಗೊಂಡಿವೆ. ವಿವಿಧೆಡೆ ಮನೆಗಳಿಗೆ ಹಾನಿಯಾಗಿದೆ, ಮರಗಳು, ವಿದ್ಯುತ್ ಕಂಬಗಳು ಬಿದ್ದಿವೆ. ವಿದ್ಯುತ್ ತಂತಿ ಬಿದ್ದು ಹಸುವೊಂದು ಮೃತಪಟ್ಟಿದೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.15 ರಂದು ರಜೆ ಘೋಷಿಸಲಾಗಿದೆ. ಕಳೆದೆರಡು ದಿನಗಳಿಂದ ಶಾಂತವಾಗಿದ್ದ ಮಳೆ ಭಾನುವಾರದಿಂದ ಮತ್ತೆ ತೀವ್ರತೆಯನ್ನು ಪಡೆದುಕೊಂಡಿದೆ. ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಬೆಟ್ಟಗುಡ್ಡದ ಮೇಲೆ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕ ಮನೆ ಮಾಡಿದೆ. ಮಡಿಕೇರಿ ನಗರದಿಂದ ಗಾಳಿಬೀಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಬಿದ್ದಿವೆ. ಚೆಸ್ಕಾಂ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ತೆರವು ಕಾರ್ಯಾಚರಣೆ ನಡೆಸಿದರು. ಭಾರೀ ಗಾಳಿಗೆ ಮರದ ಕೊಂಬೆ ಬಿದ್ದು ಆರು ಕಾರುಗಳು ಜಖಂಗೊಂಡಿರುವ ಘಟನೆ ಸೋಮವಾರಪೇಟೆಯ ರೆಸಾರ್ಟ್ವೊಂದರ ಸಮೀಪ…
ಮಡಿಕೇರಿ ಜು.14 NEWS DESK : ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ (ಜು.15 ರಂದು) ಜಿಲ್ಲೆಯ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶರಾದ ರಂಗಧಾಮಪ್ಪ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು ಅವರು ತಿಳಿಸಿದ್ದಾರೆ.
ಮಡಿಕೇರಿ ಜು.14 NEWS DESK : ಗಾಳಿ ಮಳೆ ತೀವ್ರತೆಯನ್ನು ಪಡೆದುಕೊಳ್ಳುತ್ತಿರುವುದರಿಂದ ಮಡಿಕೇರಿ, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜು.15 ರಂದು ಒಂದು ದಿನ ರಜೆ ಘೋಷಿಸಲಾಗಿದೆ.






