ಮಡಿಕೇರಿ ಜು.14 NEWS DESK : ಕರುನಾಡು ಕಂಡ ಮೇರು ಸಾಹಿತಿ, ಪತ್ರಕರ್ತ, ಕುಲಪುರೋಹಿತ ಎಂಬ ಬಿರುದಿಗೆ ಭಾಜನರಾಗಿದ್ದ ಆಲೂರು ವೆಂಕಟರಾಯರ ಜನ್ಮ ದಿನಾಚರಣೆಯನ್ನು, ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶನದಂತೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಾರಾಣೆಯಲ್ಲಿ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಗೆ, ರಾಯರ ಕುರಿತ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿ, ವಿಜೇತರಿಗೆ ಚಪ್ಪಾಳೆಗಳ ಮೂಲಕ ಅಭಿನಂದಿಸಿ, ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನೂ ಪ್ರೋತ್ಸಾಹಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ವೇದಪ್ರಸಾದ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಶಿಕ್ಷಕ ಕಿಶೋರ್‌ಕುಮಾರ್ ಅವರು ವಿದ್ಯಾರ್ಥಿಗಳಿಗೆ ಆಲೂರು ವೆಂಕಟರಾಯರ ಭಾವಚಿತ್ರದೊಂದಿಗೆ, ರಾಯರ ಬದುಕು ಸಾಧನೆಯನ್ನು ವಿವರಿಸಿದರು. ಶಿಕ್ಷಕಿಯರಾದ ಸುಮಿತ್ರ, ಮಂಜುಳ ಅವರು ರಸಪ್ರಶ್ನೆ ಸ್ಪರ್ಧೆ ನಡೆಸಿದರು.
ಲೇಖಕ: admin
ಸುಂಟಿಕೊಪ್ಪ ಜು.14 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ವೀರಾ ಡಿಸೋಜ ವರ್ಗಾವಣೆಗೊಂಡಿದ್ದು, ಅವರಿಗೆ ಸಂತ ಅಂತೋಣಿ ದೇವಾಲಯದ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಸಂತ ಅಂತೋಣಿಯವರ ದೇವಾಲಯದ ಧರ್ಮಗುರುಗಳಾದ ವಿಜಯಕುಮಾರ್ ಹಾಗೂ ಪಾಲನಾ ಸಮಿತಿಯವರು ಶುಭ ಹಾರೈಸಿದರು. ವೀರಾ ಡಿಸೋಜ ಅವರು ಇದೀಗ ಶಿವಮೊಗ್ಗ ಜಿಲ್ಲೆಯ ಸಾಗರ ಜೋಗಾಕ್ಕೆ ವರ್ಗಾವಣೆಗೊಂಡಿದ್ದಾರೆ. ಈ ಸಂದರ್ಭ ದೇವಾಲಯ ಪಾಲನಾ ಸಮಿತಿ ಕಾರ್ಯದರ್ಶಿ ಸ್ವೆಲ್ವರಾಜ್, ಗ್ಯಾಬ್ರಿಯಲ್ ಡಿಸೋಜ, ರೋಸ್‌ಮೇರಿ ರಾಡ್ರಿಗಸ್, ಗ್ರೇಸಿ, ಕನ್ಯಾಸ್ತ್ರೀಯರು ಹಾಗೂ ಕ್ರೈಸ್ತ ಭಾಂದವರು ಇದ್ದರು.
ಸುಂಟಿಕೊಪ್ಪ ಜು.14 NEWS DESK : ಪಿಯುಸಿ ವಿದ್ಯಾರ್ಥಿಗಳ ವ್ಯಾಸಂಗ ಭವಿಷ್ಯದ ಪ್ರಮುಖ ಘಟ್ಟವಾಗಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿಚಲಿತರಾಗದೆ ವಿದ್ಯಭ್ಯಾಸದ ಕಡೆಗೆ ಹೆಚ್ಚಿನ ಗಮನಹರಿಸಬೇಕೆಂದು ಸುಂಟಿಕೊಪ್ಪ ಪೊಲೀಸ್‌ಠಾಣೆಯ ಪಿಎಸ್‌ಐ ಶ್ರೀಧರ್ ಹೇಳಿದರು. ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿದ ಅವರು ಹದಿಹರೆಯದಲ್ಲಿ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಮೊಬೈಲ್‌ನ ದಾಸರಾಗಬಾರದು, ರಸ್ತೆ ಸುರಕ್ಷತೆ ಬಗ್ಗೆ ಆರಿತುಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಅವರು ಉದ್ಘಾಟಿಸಿ ಮಾತನಾಡಿ ಕಾಲೇಜಿನ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಹೇಳಿ ಸಂಘಕ್ಕೆ ಶುಭಹಾರೈಸಿದರು. ಜೀವಶಾಸ್ತç ಉಪನ್ಯಾಸಕಿಯಾದ ಪದ್ಮಾವತಿ ಪ್ರತಿಜ್ಞಾನ ವಿಧಿ ಭೋಧಿಸಿದರು. ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ ಮಾತನಾಡಿ ವಿದ್ಯಾರ್ಥಿಗಳಲ್ಲಿ ವ್ಯಾಸಂಗದ ಅವಧಿಯಲ್ಲಿಯೇ ಅವರುಗಳು ನಾಯಕತ್ವ ಗುಣಗಳನ್ನು ಬೆಳೆಸುವ ದೃಷ್ಟಿಯಿಂದ ಕಾಲೇಜಿನಲ್ಲಿ ಪ್ರಜಾಸತ್ತಾತ್ಮಕ ನೀತಿಯನ್ನು ಚುನಾವಣೆ ನಡೆಸಿ ವಿದ್ಯಾರ್ಥಿ ಸಂಘವನ್ನು ರಚಿಸಲಾಗಿದೆ ಎಂದು ಹೇಳಿದರು. ಕಾಲೇಜಿನ…
ಮಡಿಕೇರಿ ಜು.14 NEWS DESK : ಕಳೆದ 37 ವರ್ಷಗಳಿಂದ ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ಹಿಂದು ಜಾಗರಣ ವೇದಿಕೆಯ ಕೊಡಗು ಜಿಲ್ಲಾ ಸಂಯೋಜಕರಾಗಿ ಕುಕ್ಕೇರ ಅಜಿತ್ ಪುನರಾಯ್ಕೆಯಾಗಿದ್ದಾರೆ. ಕುಶಾಲನಗರದಲ್ಲಿ ಇಂದು ರಾಜ್ಯ ಪ್ರಮುಖರ ನೇತೃತ್ವದಲ್ಲಿ ನಡೆದ ಬೈಠಕ್ ನಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸಹ ಸಂಯೋಜಕರಾಗಿ ಸೋಮವಾರಪೇಟೆಯ ಬೋಜೆಗೌಡ, ಪೊನ್ನಂಪೇಟೆಯ ಶರತ್ , ಮಡಿಕೇರಿ ಶಾಂತಿನಿಕೇತನ ಚೇತನ್, ಬಿಟ್ಟಂಗಾಲದ ಯೋಗೇಶ್ ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಕಪಿಲ್ ಮಡಿಕೇರಿ, ಕುಮಾರ್ ಮೇಕೇರಿ, ಶಾಂತೆಯಂಡ ತಿಮ್ಮಯ್ಯ, ಹರೀಶ್ ಕುಶಾಲನಗರ, ಸುನೀಲ್ ಮಾದಾಪುರ, ವಿನಯ್ ಮಡಿಕೇರಿ, ರಾಜೀವ್ ಕುಶಾಲನಗರ, ಭವನ್ ಮೇಕೇರಿ ನೇಮಕಗೊಂಡಿದ್ದಾರೆ. ಮಡಿಕೇರಿ ತಾಲ್ಲೂಕು ಸಂಯೋಜಕರಾಗಿ ದುರ್ಗೇಶ್ , ವೀರಾಜಪೇಟೆ ತಾಲ್ಲೂಕು ಸಂಯೋಜಕರಾಗಿ ರವೀಂದ್ರ, ಪೊನ್ನಂಪೇಟೆ ತಾಲ್ಲೂಕು ಸಂಯೋಜಕರಾಗಿ ಸುಳ್ಳಿಮಾಡ ಸಂಪತ್ , ಕುಶಾಲನಗರ ತಾಲ್ಲೂಕು ಸಂಯೋಜಕರಾಗಿ ದಿನೇಶ್ ಅವರುಗಳನ್ನು ನೇಮಕ ಮಾಡಲಾಗಿದೆ. ಇದರೊಂದಿಗೆ ಜಿಲ್ಲಾ ಸಮಿತಿ ಹಾಗೂ ಜಿಲ್ಲೆಯ 5 ತಾಲ್ಲೂಕುಗಳಿಗೆ 80 ಕ್ಕೂ ಹೆಚ್ಚು ಪದಾಧಿಕಾರಿಗಳನ್ನು ಆಯ್ಕೆ…
ಮಡಿಕೇರಿ ಜು.14 NEWS DESK : ವಿರಾಜಪೇಟೆ ತಾಲ್ಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2023 ನೇ ಸಾಲಿನ ಅತ್ಯುತ್ತಮ ಶೈಕ್ಷಣಿಕ ವರದಿ ವಾರ್ಷಿಕ ಪ್ರಶಸ್ತಿಗೆ ಬಡಕಡ ರಜಿತ ಕಾರ್ಯಪ್ಪ ಭಾಜನರಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ “8 ಶಾಲೆಗಳಲ್ಲಿ ಏಕೋಪಾಧ್ಯಾಯರು! ” ಎಂಬ ಶೈಕ್ಷಣಿಕ ವರದಿಗೆ ಈ ಪ್ರಶಸ್ತಿ ಲಭಿಸಿದೆ. 17 ರಂದು ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಬೆಂಗಳೂರು ಜು.14 NEWS DESK : ನಾಳೆಯಿಂದ ಪ್ರಾರಂಭವಾಗುವ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ ಹಾಗೂ ಅಧಿವೇಶನದಲ್ಲಿ ಖುದ್ದು ಹಾಜರಿದ್ದು, ಸಚಿವರಿಗೆ ತಮ್ಮ ಇಲಾಖೆಗಳ ವಿಷಯಗಳ ಕುರಿತ ಮಾಹಿತಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ದಿನಾಂಕ 14-7-2024 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ವಿವಿಧ ಇಲಾಖೆಗಳಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇರುವ ವಿಷಯಗಳ ಕುರಿತು ಇಲಾಖಾ ಕಾರ್ಯದರ್ಶಿಗಳಿಂದ ಮುಖ್ಯಮಂತ್ರಿಗಳು ಸವಿಸ್ತಾರವಾಗಿ ಮಾಹಿತಿ ಪಡೆದರು. ಚರ್ಚೆಯ ಸಾಧ್ಯತೆ ಇರುವ ವಿಷಯಗಳ ಕುರಿತು ದತ್ತಾಂಶಗಳನ್ನು ಸಂಗ್ರಹಿಸಲು ಸಹ ಸೂಚನೆ ನೀಡಿದರು. ಎಲ್ಲ ಕಾರ್ಯದರ್ಶಿಗಳೂ, ಇಲಾಖಾ ಮುಖ್ಯಸ್ಥರು ಅಧಿವೇಶನದಲ್ಲಿ ಹಾಜರಿರಬೇಕು. ಸಚಿವರಿಗೆ ಸಮರ್ಪಕವಾಗಿ ಮಾಹಿತಿ ನೀಡಬೇಕು. ಆಯಾ ಇಲಾಖಾ ಸಚಿವರು ಚರ್ಚೆಯ ವಿಷಯಗಳಿಗೆ ಉತ್ತರಿಸಬೇಕು. ಅಗತ್ಯವಿದ್ದರೆ ನಾನು…
ಮಡಿಕೇರಿ ಜು.14 NEWS DESK : ಮಡಿಕೇರಿಯ ಸಕಾ೯ರಿ ಬಾಲಕರ ಬಾಲಮಂದಿರದ 27 ಮಕ್ಕಳಿಗೆ ರೋಟರಿ ವುಡ್ಸ್ ನಿಂದ ಬೆಚ್ಚನೆಯ ಜಕೀ೯ನ್ ವಿತರಿಸಲಾಯಿತು. ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ರೋಟರಿ ವುಡ್ಸ್ ನಿದೇ೯ಶಕ, ಬಾಲಸುಬ್ರಹ್ಮಣ್ಯ ಅವರು ಕೊಡುಗೆಯಾಗಿ ನೀಡಿದ ಜಕೀ೯ನ್ ಗಳನ್ನು ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲು, ಕಾಯ೯ದಶಿ೯ ಕಿರಣ್ ಕುಂದರ್ ಸಮ್ಮುಖದಲ್ಲಿ ಕೇಂದ್ರದ ಆಪ್ತಸಮಾಲೋಚಕ ನಾಗಭೂಷಣ್ , ಕಛೇರಿ ಸಿಬ್ಬಂದಿ ಹೆಚ್, ಸೂರಜ್ ಅವರಿಗೆ ಹಸ್ತಾಂತರಸಲಾಯಿತು. ಈ ಸಂದಭ೯ ಮಾತನಾಡಿದ ಹರೀಶ್ ಕಿಗ್ಗಾಲು, ರೋಟರಿ ಸಂಸ್ಥೆಯು ಈ ವಷ೯ದಲ್ಲಿ ಅನೇಕ ವಿಭಿನ್ನ ಕಾಯ೯ಕ್ರಮಗಳನ್ನು ಆಯೋಜಿಸಲಿದೆ, ಮಳೆಗಾಲದಲ್ಲಿ ಹೆಚ್ಚುತ್ತಿರುವ ಛಳಿಯನ್ನು ಗಮನಿಸಿ ರೋಟರಿ ವುಡ್ಸ್ ಮೂಲಕ ಉದ್ಯಮಿ ಬಾಲಸುಬ್ರಹ್ಮಣ್ಯ ನೀಡಿದ ಜಕೀ೯ನ್ ಗಳನ್ನು ಮಕ್ಕಳಿಗೆ ನೀಡಿದ್ದೇವೆ ಶಾಲೆಗೆ ಮಳೆಯಲ್ಲಿ ತೆರಳುವ ಸಂದಭ೯ ಈ ಬೆಚ್ಚನೆಯ ಧಿರಿಸು ಮಕ್ಕಳನ್ನು ಬೆಚ್ಚಗಿಡಲು ನೆರವಾಗಲಿದೆ ಎಂದರು. ರೋಟರಿ ವುಡ್ಸ್ ನ ಕೊಡುಗೆಯನ್ನು ನಾಗಭೂಷಣ್ ಶ್ಲಾಘಿಸಿದರು, ರೋಟರಿ ವುಡ್ಸ್ ನಿದೇ೯ಶಕರಾದ ಧನಂಜಯ ಶಾಸ್ತ್ರೀ,…
ವಿರಾಜಪೇಟೆ ಜು.14 NEWS DESK : ವಿರಾಜಪೇಟೆಯ ರೋಟರಿ ಶಾಲೆಯಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ವಿರಾಜಪೇಟೆಯ ವೃತ್ತ ನಿರೀಕ್ಷಕರಾದ ಶಿವರುದ್ರ ಉಪಸ್ಥಿತರಿದ್ದು ಶಾಲಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಎಂ.ಬಿ. ಮಾದಪ್ಪ ವಹಿಸಿದ್ದರು. ಶಾಲಾ ಸಂಸತ್ತಿಗೆ ಚುನಾವಣೆಯ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳು ವಿವಿಧ ಇಲಾಖೆಯ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಹೆಚ್.ಜೆ. ವಿಶಾಲಾಕ್ಷಿ ಹಾಗೂ ರೋಟರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಹಸೀನಾ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು, ಮತ್ತು ಪೋಷಕರು ಉಪಸ್ಥಿತರಿದ್ದರು.
ಮಡಿಕೇರಿ ಜು.14 NEWS DESK : ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಿದ್ದರಿಂದ 5 ಸಾವಿರ ಕ್ಯುಸೆಕ್ ನೀರನ್ನು ಭಾನುವಾರ ಸಂಜೆ ನದಿಗೆ ಹರಿಬಿಡಲಾಯಿತು. ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳಾಗಿದ್ದು, ಇಂದಿನ ಮಟ್ಟ 2854.65 ಅಡಿಗಳಾಗಿದ್ದು, ಸಂಜೆಯ ವೇಳೆ ಜಲಾಶಯದ ಒಳಹರಿವಿನ ಪ್ರಮಾಣ 6820 ಕ್ಯುಸೆಕ್‌ಗಳಿಗೆ ಏರಿಕೆಯಾದ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ನದಿಗೆ ಹರಿ ಬಿಡಲಾಗಿದೆಯೆಂದು ಜಲಾಶಯದ ಕಾರ್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮಿ ಐ.ಕೆ. ತಿಳಿಸಿದ್ದಾರೆ. ಭಾನುವಾರ ಮಧ್ಯಾಹ್ನದ ವೇಳೆ 4500 ಕ್ಯುಸೆಕ್ ನೀರು ಹರಿದು ಬರುತ್ತಿದ್ದರೆ, ಸಂಜೆಯ ವೇಳೆ ಈ ಪ್ರಮಾಣ ಏರಿಕೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಶೀಘ್ರವೇ ಜಲಾಶಯದ ನೀರಿನ ಮಟ್ಟ ಗರಿಷ್ಠ ಮಿತಿಯನ್ನು ತಲುಪಬಹುದೆಂದು ಹಾರಂಗಿ ಜಲಾಶಯದ ಕಾರ್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮಿ ಐ.ಕೆ. ತಿಳಿಸಿದ್ದಾರೆ. ಈ ಹಿನ್ನೆಲೆ ಕಾವೇರಿ ನದಿ ಪಾತ್ರದಲ್ಲಿ ನೆಲೆಸಿರುವವರು ತಮ್ಮ ಆಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ…
ಮಡಿಕೇರಿ ಜು.14 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮಹಿಳಾ ಘಟಕ ಕದಳಿ ವೇದಿಕೆಯ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷರಾಗಿ ವಿರಾಜಪೇಟೆಯ ಆರ್ಜಿ ಗ್ರಾಮದ ಸಾಹಿತಿ ರಜಿತಾ ಕಾರ್ಯಪ್ಪ ಅವರನ್ನು ನೇಮಕ ಮಾಡಲಾಗಿದೆ. ತಾಲ್ಲೂಕಿನಾದ್ಯಂತ ವಚನ ಸಾಹಿತ್ಯವನ್ನು ಮನೆ ಮನೆಗೆ ಮುಟ್ಟಿಸುವಂತಹ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕದಳಿ ವೇದಿಕೆ ಕೊಡಗು ಜಿಲ್ಲಾಧ್ಯಕ್ಷೆ ಜಲಜಾ ಶೇಖರ್ ನೇಮಕ ಮಾಡಿದ್ದಾರೆ.






