ಲೇಖಕ: admin

ಮಡಿಕೇರಿ ಜು.14 NEWS DESK :  ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮಹಿಳಾ ಘಟಕ ಕದಳಿ ವೇದಿಕೆಯ ಪೊನ್ನಂಪೇಟೆ  ತಾಲ್ಲೂಕು ಅಧ್ಯಕ್ಷರಾಗಿ ಮಾಯಮುಡಿ ಧನುಗಾಲ ಗ್ರಾಮದ  ಶೋಭಾ ರಾಣಿ  ಅವರನ್ನು ನೇಮಕ ಮಾಡಲಾಗಿದೆ. ತಾಲ್ಲೂಕಿನಾದ್ಯಂತ ವಚನ ಸಾಹಿತ್ಯವನ್ನು ಮನೆ ಮನೆಗೆ ಮುಟ್ಟಿಸುವಂತಹ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕದಳಿ ವೇದಿಕೆ ಕೊಡಗು ಜಿಲ್ಲಾಧ್ಯಕ್ಷೆ ಜಲಜಾ ಶೇಖರ್ ನೇಮಕ ಮಾಡಿದ್ದಾರೆ.

Read More

ಮಡಿಕೇರಿ ಜು.14 NEWS DESK : ಆರೋಗ್ಯ ಇಲಾಖೆಯ ಹಿರಿಯ ನರ್ಸಿಂಗ್ ಅಧಿಕಾರಿ ಮಡಿಕೇರಿಯ ಬಂಗಾಡುಮನೆ ವಸಂತಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಪ್ರತಿಷ್ಠಿತ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಕಾರಣಕ್ಕಾಗಿ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯೊಂದಿಗೆ ಬೆಸ್ಟ್ ನರ್ಸಿಂಗ್ ಆಫೀಸರ್ ಪ್ರಶಸ್ತಿ ಪತ್ರವನ್ನು ಇವರು ಪಡೆದಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಂಗ್ಲೋ ಇಂಡಿಯನ್ ಯುನಿಟಿ ಸೆಂಟರ್ ಸಹಯೋಗದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ ಅವರು ವಸಂತಿ ಅವರಿಗೆ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ 25 ವರ್ಷಗಳ ಕಾಲ ಉತ್ತಮ ಸೇವೆ ಸಲ್ಲಿಸಿರುವ ಬಂಗಾಡುಮನೆ ವಸಂತಿ ಅವರು, ಪ್ರಸ್ತುತ ಬಡ್ತಿ ಹೊಂದಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಹಿರಿಯ ನರ್ಸಿಂಗ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ…

Read More

ಮಡಿಕೇರಿ ಜು.13 NEWS DESK : ಕೊಂಡಂಗೇರಿ ಎಲಿಯನ್ -ಗಾಡ್ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೆ ಜಾತ್ಯತೀತ ಜನತಾದಳದ ವತಿಯಿಂದ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ಅಶ್ವಿನಿ, ಶಿಕ್ಷಕರಾದ ಯಮುನ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪಿ.ಎ.ಅಬ್ಬಾಸ್, ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರಾದ ಲೋಕೇಶ್, ಬೇಬಿ, ವಿರಾಜಪೇಟೆ ತಾಲ್ಲೂಕು ಯುವ ಜೆಡಿಎಸ್ ಅಧ್ಯಕ್ಷ ಸೈಫುದ್ದೀನ್, ನಜೀರ್ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ ಜು.13 NEWS DESK : ತಾಂತ್ರಿಕ ದೋಷದಿಂದ ಕಾರೊಂದು ಅಗ್ನಿಗಾಹುತಿಯಾದ ಘಟನೆ ಮಡಿಕೇರಿ ನಗರದ ಸಂಪಿಗೆಕಟ್ಟೆ ಬಳಿ ನಡೆದಿದೆ. ಮಡಿಕೇರಿ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಕಾರು ಸುಟ್ಟು ಕರಕಲಾಗಿದೆ. ಅಗ್ನಿ ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶನಿವಾರ ಬೆಳಗ್ಗೆ ಮಡಿಕೇರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ತಡೆಗೋಡೆಯೊಂದಕ್ಕೆ ಡಿಕ್ಕಿಯಾದ ಕಾರಣ ಹೆದ್ದಾರಿ ಬದಿ ನಿಲ್ಲಿಸಲಾಗಿತ್ತು. ಸಂಜೆ ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದರು. ಬೆಂಗಳೂರಿನ ಶ್ರೀನಿವಾಸ್ ಎಂಬುವವರಿಗೆ ಸೇರಿದ ಕಾರು ಇದಾಗಿದೆ. ಮಡಿಕೇರಿ ಸಂಚಾರಿ ಪೊಲೀಸರು ಹಾಗೂ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯಿಂದ ಹೆದ್ದಾರಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

Read More

ವಿರಾಜಪೇಟೆ ಜು.13 NEWS DESK : ತಿತಿಮತಿ ಸರ್ಕಾರಿ ಪಿಯು ಕಾಲೇಜಿನ 2024-25 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಡಾ.ರಾಜೇಂದ್ರ ಪ್ರಸಾದ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಹತಾಶರಾಗದೇ ಏಕಾಗ್ರತೆಯಿಂದ ತಮ್ಮ ಗುರಿಮುಟ್ಟಬೇಕು ಎಂದು ಸಲಹೆ ನೀಡಿದರು. ದ ಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು. ತಿತಿಮತಿ ವಿಎಸ್ಎಸ್ ಎನ್ ನ ಅಧ್ಯಕ್ಷ ರಾಮಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಈ ಹಂತದಿಂದಲೇ ನಾಯಕತ್ವ ಗುಣವನ್ನು ಅಳವಡಿಸಿಕೊಳ್ಳಬೇಕು. ಮತ್ತು ವಿದ್ಯಾರ್ಥಿ ಸಂಘದಲ್ಲಿ ತನ್ನ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದರು. ಸ್ಥಳೀಯರು ಹಾಗೂ ಸಮಾಜ ಸೇವಕರಾದ ಮನು ನಂಜಪ್ಪ ಮಾತನಾಡಿ, ವಿದ್ಯಾರ್ಥಿಗಳು ಜೀವನದ ಪ್ರತೀ ಹಂತದಲ್ಲೂ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಚಾರ್ಲ್ಸ್ ಡಿಸೋಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿತಿಮತಿ ಗ್ರಾ.ಪಂ ಸದಸ್ಯ ಅನೂಪ್ ಕುಮಾರ್, ತಿತಿಮತಿ ಪ್ರೌಢ ಶಾಲೆಯ ಮುಖ್ಯ…

Read More

ಮಡಿಕೇರಿ ಜು.13 NEWS DESK : ಕೊಂಡಂಗೇರಿ ಸರಕಾರಿ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಸಿ ವಿದ್ಯಾರ್ಥಿ ನಾಯಕರುಗಳನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಮಂತ್ರಿಯಾಗಿ ಹೆಚ್.ಯು.ಮೊಹಮ್ಮದ್ ಹರ್ಷಾದ್, ಕ್ರೀಡಾ ಮಂತ್ರಿಯಾಗಿ ಹೆಚ್.ಎಂ.ಅಬ್ದುಲ್ ರಹಿಮಾನ್ ಅಜಿನಾಸ್, ಶಿಸ್ತು ಪಾಲನಾ ಮಂತ್ರಿಯಾಗಿ ಅಬೂಬಕರ್ ಸಿದ್ದೀಕ್ ಆಯ್ಕೆಯಾದರು. ಸ್ವಚ್ಛತಾ ಮಂತ್ರಿಯಾಗಿ ಕೆ.ಯು.ಫಾತಿಮತ್ ಫಾಹಿಜಾ, ತೋಟಗಾರಿಕಾ ಮಂತ್ರಿಯಾಗಿ ಪಿ.ಜೆ.ಫೈಜಲ್, ಹಣಕಾಸು ಮಂತ್ರಿಯಾಗಿ ಬಿ.ಎ.ಮೊಹಮ್ಮದ್ ಅಫ್ನಾನ್, ಆರೋಗ್ಯ ಮಂತ್ರಿಯಾಗಿ ಎಂ.ಎಸ್.ಶಮ್ನ, ವಾರ್ತಾ ಮಂತ್ರಿಯಾಗಿ ಆರ್.ಎ.ಆಯಿಷತು ಸಹಲ, ಸಾಂಸ್ಕೃತಿಕ ಮಂತ್ರಿಯಾಗಿ ಟಿ.ಐ.ಮೊಹಮ್ಮದ್ ಇಸಾಕ್, ನೀರಾವರಿ ಮಂತ್ರಿಯಾಗಿ ಎ.ಎಂ.ತೋಹ ಅವರನ್ನು ವಿದ್ಯಾರ್ಥಿಗಳು ಮತಚಲಾಯಿಸುವ ಮೂಲಕ ಆಯ್ಕೆ ಮಾಡಿದರು. ವಿರೋಧ ಪಕ್ಷದ ನಾಯಕನಾಗಿ ಪಿ.ಹೆಚ್.ಮೊಹಮ್ಮದ್ ಮಿಸ್ಹಾಬ ಆಯ್ಕೆ ಮಾಡಲಾಯಿತು. ಶಾಲಾ ಮುಖ್ಯ ಶಿಕ್ಷಕರಾದ ಜೆ.ಸಿ.ಜಯಂತಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ, ಮುಂದಿನ ದಿನಗಳಲ್ಲಿ ನಾಯಕರು ಮಾಡಬೇಕಾದ ಕರ್ತವ್ಯಗಳ ಬಗ್ಗೆ ವಿವರಿಸಿದರು. ಶಾಲೆಯ ಆಂಗ್ಲ ಭಾಷಾ ಶಿಕ್ಷಕರಾದ ಬಿ.ಎಂ.ಲವಿನ್ ಮತದಾನ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಶಾಲೆಯ ಇಐಅ ಕ್ಲಬ್…

Read More

ಸಿದ್ದಾಪುರ ಜು.13 NEWS DESK : ಅಭಿವೃದ್ಧಿ ಎಂಬ ಹೆಸರಿನಲ್ಲಿ ಕೊಡಗು ಜಿಲ್ಲೆಯ ಪರಿಸರವು ಹಾಳಾಗುತ್ತಿದ್ದು, ಪ್ರತಿ ಗ್ರಾಮಗಳಲ್ಲಿ ತ್ಯಾಜ್ಯ, ಪ್ಲಾಸ್ಟಿಕ್ ಸಮಸ್ಯೆಗೆ ಮುಕ್ತಿ ನೀಡುವ ಸಲುವಾಗಿ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ತ್ಯಾಜ್ಯ ವಿಲೇವಾರಿ ವೈಜ್ಞಾನಿಕ ಘಟಕವನ್ನು ಪ್ರಾರಂಭಿಸುವುದರೊಂದಿಗೆ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಜಿಲ್ಲೆಯನಾಗಿಸಬೇಕೆಂದು  ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯ ಮುಕೋಂಡ ವಿಜು ಸುಬ್ರಮಣಿ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಸಿದ್ದಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಪ್ರಜ್ಞಾವಂತ ನಾಗರಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸ್ವಚ್ಛ ಪರಿಸರ ನಿರ್ಮಾಣದ ಜಿಲ್ಲೆಯನ್ನಾಗಿ ಮಾರ್ಪಾಡಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು. ಅಭಿವೃದ್ಧಿ ಎಂಬ ಹೆಸರಿನಲ್ಲಿ ಜಿಲ್ಲೆಯ ಪರಿಸರವು ಹಾಳಾಗುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಕೊಡಗಿನ ನಾಗರಿಕರು ನೀರು, ನೆರ್ಮಲ್ಯ ಮತ್ತು ಸ್ವಚ್ಛತಾ ಅಭಿಯಾನಗಳೆಂಬ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪರಿಸರ ಸ್ನೇಹಿ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದರ ಜೊತೆಗೆ ಕೊಡಗು ಜಿಲ್ಲಾ ಪಂಚಾಯತ್ ನ ಅಧಿಕಾರಿಗಳು…

Read More

ಮಡಿಕೇರಿ ಜು.13 NEWS DESK : ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷರಾಗಿ ಸಿ.ಕೆ.ಬೋಪಣ್ಣ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ನಡೆದ ವಿಶ್ವ ಹಿಂದೂ ಪರಿಷತ್ ನ ಕರ್ನಾಟಕ ದಕ್ಷಿಣ ವಿಶೇಷ ಪ್ರಾಂತ ಬೈಠಕ್ ನಲ್ಲಿ ರಾಷ್ಟ್ರೀಯ ಪ್ರಮುಖರ ಸಮ್ಮುಖದಲ್ಲಿ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಯಿತು ಎಂದು ಜಿಲ್ಲಾ ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ ತಿಳಿಸಿದ್ದಾರೆ.

Read More

ಮಡಿಕೇರಿ ಜು.13 NEWS DESK  : ಕೊಡಗು ಜಿಲ್ಲಾ ವಿಶ್ವವಾಣಿ ಪತ್ರಿಕೆಯ ವರದಿಗಾರ ಹಾಗೂ ಕೊಡಗು ಪತ್ರಕರ್ತರ ಸಂಘದ ಹಿರಿಯ ಸಲಹೆಗಾರ ಅನಿಲ್ ಹೆಚ್.ಟಿ. ಅವರಿಗೆ ಕಾಸರಗೋಡುವಿನ ಉದ್ಯಮಿ, ಸಮಾಜಸೇವಕ ಅಶ್ರಫ್ ಶಾ ಮಂತೂರು ಅವರು ಸ್ಥಾಪಿಸಿರುವ ದತ್ತಿ ನಿಧಿ ಪ್ರಶಸ್ತಿ ಲಭಿಸಿದೆ. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಜಂಟಿ ಆಶ್ರಯದಲ್ಲಿ ಕಾಸರಗೋಡು ಸೀತಂಗೋಳಿ ಗ್ರಾಮದ ಲಯನ್ಸ್ ಸಭಾಭವನದಲ್ಲಿ ನಡೆದ  ದತ್ತಿನಿಧಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ಪಿ.ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭ ಶಾಸಕ ಎ.ಕೆ.ಎಂ.ಅಶ್ರಫ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ, ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕೆಯುಡಬ್ಲ್ಯೂಜೆ ಕೇರಳ ಘಟಕ ಅಧ್ಯಕ್ಷ ಅಬ್ದುಲ್ ರೆಹಮಾನ್, ಸುಬ್ಬಯ್ಯಕಟ್ಟಿ ಮತ್ತಿತರರು ಹಾಜರಿದ್ದರು.

Read More

ಮಂಗಳೂರು ಜು.13 NEWS DESK : ಮಾಧ್ಯಮ ಪ್ರತಿನಿಧಿಗಳು ಹಮ್ಮಿಕೊಂಡಿರುವ ಹಸಿರೇ ಉಸಿರು ಸೇರಿದಂತೆ ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾದ ಮಹತ್ವದ ಕಾರ್ಯಕ್ರಮವಾಗಿದೆ ಎಂದು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆ ಗಾರರಾದ ಕೆ.ವಿ.ಪ್ರಭಾಕರ್ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಅರಣ್ಯ ಇಲಾಖೆ ಸಹಾಭಾಗಿತ್ವದಲ್ಲಿ ನಗರದ ಕದ್ರಿ ಪಾರ್ಕ್ ನಲ್ಲಿ ಹಮ್ಮಿಕೊಂಡ ‘ಹಸಿರೇ ಉಸಿರು’ ವನ ಮಹೋತ್ಸವ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಾಧ್ಯಮ ಪ್ರತಿನಿಧಿಗಳು ತಮ್ಮ ವೃತ್ತಿಯ ಜೊತೆ ಗ್ರಾಮ ವಾಸ್ತವ್ಯ, ವನಮಹೋತ್ಸವ, ಸರಕಾರಿ ಶಾಲೆ, ಅಂಗನವಾಡಿಗಳಿಗೆ ನೆರವು ಸೇರಿದಂತೆ ಸಾಮಾಜಿಕ ಹೊಣೆಗಾರಿಕೆಯನ್ನುಅರಿತು ಕಾರ್ಯ ನಿರ್ವಹಿಸುತ್ತಿರುವುದು ಮಾದರಿಯಾಗಿದೆ ಎಂದು ಪ್ರಭಾಕರ್ ಶುಭ ಹಾರೈಸಿದರು. ಈ ಸಂದರ್ಭ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರು ಸಾಮಾಜಿಕ ಬದ್ಧತೆಯನ್ನು ಮರೆಯ ಬಾರದು. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ ಸಾಮಾಜಿಕ ಬದ್ಧತೆಯೊಂದಿಗೆ…

Read More