ಮಡಿಕೇರಿ ಮೇ 24 NEWS DESK : ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆಯಾದ ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಸಂಸ್ಥೆ ವತಿಯಿಂದ ನಗರದ ಅಂಚೆ ಕಚೇರಿಯ ಎದುರು ಇರುವ ಹೈಟೆಕ್ ಮಾರಾಟ ಮಳಿಗೆಯ ಆವರಣದಲ್ಲಿ ಮೇ 26 ರವರೆಗೆ ನಡೆಯುವ `ಮಾವು ಮತ್ತು ಹಲಸು ಮೇಳವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಉದ್ಘಾಟಿಸಿದರು. ಮಾವು ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಲ್ಲಿಕಾ, ಸಿಂಧೂರ, ಬಾದಾಮಿ, ರಸಪುರಿ, ತೋತಾಪುರಿ ಸೇರಿದಂತೆ ವಿವಿಧ ರೀತಿಯ ಮಾವು ಮತ್ತು ಹಲಸು ಮಾರಾಟಕ್ಕೆ ಇವೆ ಎಂದರು. ಮಾವು ಮತ್ತು ಹಲಸು ಪ್ರಿಯರಿಗೆ ಆರೋಗ್ಯದಾಯಕ ಹಣ್ಣುಗಳನ್ನು ಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸುವುದು ಮಾವು ಮೇಳದ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಮಾವು ಮತ್ತು ಹಲಸು ಬೆಳೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿವಿಧ ಜಿಲ್ಲೆಗಳಲ್ಲಿ ಮಾವು ಮತ್ತು ಹಲಸು ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಮಾವು ಮೇಳದಲ್ಲಿ ರಾಮನಗರ, ಕೋಲಾರ ಮತ್ತಿತರ ಜಿಲ್ಲೆಗಳಿಂದ ಮಾವು ಮತ್ತು ಹಲಸು ಹಣ್ಣು ಮಾರಾಟಗಾರರು…
ಲೇಖಕ: admin
ಸೋಮವಾರಪೇಟೆ ಮೇ 23 NEWS DESK : ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಜಕ್ಕನಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಚ್.ಸಿ.ಮನೋಹರ್ (38) ಪಿರಿಯಾಪಟ್ಟಣ ಹಿಟ್ನಳ್ಳಿಯಲ್ಲಿ ನಡೆದ ಅಪಘಾತದಲ್ಲಿ ಮೃತರಾಗಿದ್ದಾರೆ. ಗುರುವಾರ ಸಂಜೆ ಕೆಲಸ ಮುಗಿಸಿ ತಮ್ಮ ಬೈಕ್ ನಲ್ಲಿ ಪಿರಿಯಾಪಟ್ಟಣದ ತಮ್ಮ ಮನೆಗೆ ತೆರಳುವ ಸಂದರ್ಭ ತಿರುವಿನಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್ ಗೆ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೃಪಟ್ಟಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಮೂರು ವರ್ಷದ ಪುತ್ರನನ್ನು ಅಗಲಿದ್ದಾರೆ.
ಗುಂಡ್ಲುಪೇಟೆ ಮೇ 23 NEWS DESK : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇಂದಿನಿಂದ ಕಾಡಾನೆಗಳ ಲೆಕ್ಕ ಆರಂಭಗೊಂಡಿದೆ. ಒಟ್ಟು 13 ವಲಯದ 113 ಬೀಟ್ ಗಳಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆದುಕೊಂಡು ಆನೆಗಳ ಲೆಕ್ಕ ಹಾಕಿದ್ದಾರೆ. ಅಭಯಾರಣ್ಯದಲ್ಲಿ ಆನೆ ಗಣತಿ ಮೂರು ದಿನಗಳ ಕಾಲ ನಡೆಯಲಿದ್ದು, ಮೊದಲ ದಿನ ಅರಣ್ಯದಲ್ಲಿ ನಡೆದುಕೊಂಡು ಗಣತಿ ಆರಂಭಿಸಿದ್ದಾರೆ. ಎರಡನೇ ದಿನ ಆನೆ ಲದ್ದಿಯನ್ನು ಪತ್ತೆಹಚ್ಚಿ ಒಂಟಿ ಆನೆಯೋ, ಗುಂಪುಗಳ ಆನೆಯೋ ಎಂದು ಅಂದಾಜು ಲೆಕ್ಕ ಹಾಕಲಾಗುತ್ತದೆ. ಮೂರನೇ ದಿನ ಕೆರೆಗಳ ಬಳಿ ಸಿಬ್ಬಂದಿ ಬೆಳಗ್ಗೆಯಿಂದ ಸಂಜೆವರೆಗೆ ಕಾದು ಆನೆಗಳು ನೀರು ಕುಡಿಯುವಾಗ ಬರುವ ಆನೆಗಳ ಲೆಕ್ಕವನ್ನು ಹಾಕಲಿದ್ದಾರೆ.
ಮೈಸೂರು ಮೇ 23 NEWS DESK : ಜನಸ್ಪಂದನ ಟ್ರಸ್ಟ್ ಮತ್ತು ಮಾನವಮಂಟಪ ಇವರ ವತಿಯಿಂದ ಕುವೆಂಪು ನಗರದ ಚಿಕ್ಕಮ್ಮನಿಕೇತನ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ “ಅಂತರ್ಜಾತಿ ವಿವಾಹಿತರ ಸಭೆ ಹಾಗೂ ಲಕ್ಷಾಂತರ ಅಂತರ್ಜಾತಿ ದಂಪತಿಗಳ ನೋಂದಣಿ ಮಾಡುವ ವೆಬ್ ಸೈಟ್” ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಮೈಸೂರು ಮೇ 23 NEWS DESK : ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವ ಮಹೇಶ್ ಕಾಳೇಗೌಡ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇದೇ ಸಂದರ್ಭ ಕಲುಷಿತ ನೀರು ಕುಡಿದು ಮೃತಪಟ್ಟ ಕನಕರಾಜು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ವೈಯುಕ್ತಿಕವಾಗಿ ನಗದು ಪರಿಹಾರ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದಿಂದ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. ಮೃತ ಕಾಂತರಾಜು ಅವರ ಸಹೋದರ ರವಿಗೆ ಕೆಲಸ ಕೊಡಿಸುವ ಭರವಸೆ ನೀಡಿದರು.
ಮಡಿಕೇರಿ ಮೇ 23 NEWS DESK : ಶ್ರೀ ಮುತ್ತಪ್ಪ ಮಹಿಳಾ ವೇದಿಕೆ ವತಿಯಿಂದ ನಗರದ ಶ್ರೀ ಮುತ್ತಪ್ಪ ದೇವಾಲಯದಲ್ಲಿರುವ ಭಗವತಿ ದೇವಿಯ ವಾರ್ಷಿಕ ಪೊಂಗಾಲ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಕೊಡಗಿನ ಪುರಾತನ ದೇವಾಲಯಗಳಲ್ಲೊಂದಾದ ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಪಾರ್ವತಿ, ಸರಸ್ವತಿ, ಮಹಾಲಕ್ಷ್ಮಿ ಸಂಕಲ್ಪದಲ್ಲಿರುವ ಶ್ರೀ ಭಗವತಿ ದೇವಿಗೆ ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ನಂತರ ದೇವಾಲಯದ ಆವರಣದಲ್ಲಿ ನೂರಾರು ಮಹಿಳೆಯರು ಏಕಕಾಲದಲ್ಲಿ ಸೌದೆ ಸೌದೆ ಒಲೆಯನ್ನು ಬಳಸಿ ಮಣ್ಣಿನ ಮಡಕೆಯಲ್ಲಿ ಸಿಹಿ ಪೊಂಗಲ್ ತಯಾರಿಸಿ ದೇವರಿಗೆ ಅರ್ಪಿಸಿದರು. ಇದು ಕೇವಲ ಮಹಿಳೆಯರು ಮಾತ್ರ ನಡೆಸುವ ಪುಣ್ಯ ಕಾರ್ಯವಾಗಿದ್ದು, ಪೊಂಗಾಲ ಸಮರ್ಪಣೆಯಿಂದ ಮನೆಯಲ್ಲಿ ಆರೋಗ್ಯ ಶಾಂತಿ, ನೆಮ್ಮದಿ ನೆಲೆಸುವ ನಂಬಿಕೆ ಇದೆ ಎಂದು ಶ್ರೀ ಮುತ್ತಪ್ಪ ಮಹಿಳಾ ವೇದಿಕೆಯ ಅಧ್ಯಕ್ಷೆ ಶಾರದ ರಾಮನ್ ಮಾಹಿತಿ ನೀಡಿದರು.
ಮಡಿಕೇರಿ ಮೇ 23 NEWS DESK : ರಾಜ್ಯಾದ್ಯಂತ ‘ಪೂರ್ವ ಮುಂಗಾರು’ ಉತ್ತಮವಾಗಿದ್ದು, ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಆ ನಿಟ್ಟಿನಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಕೀತು ಮಾಡಿದ್ದಾರೆ. ಬರ ನಿರ್ವಹಣೆ ಮತ್ತು ‘ಮುಂಗಾರು’ ಪೂರ್ವ ಸಿದ್ಧತೆ ಕುರಿತು ವಿಡಿಯೋ ಸಂವಾದ ಮೂಲಕ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಗುರುವಾರ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಅವರು ಮಾತನಾಡಿದರು. ರಾಜ್ಯಾದ್ಯಂತ ಈಗಾಗಲೇ ಪೂರ್ವ ಮುಂಗಾರು ಉತ್ತಮವಾಗಿ ಆಗುತ್ತಿರುವ ಹಿನ್ನೆಲೆ ಹಲವು ಕಡೆಗಳಲ್ಲಿ ಬಿತ್ತನೆ ಕಾರ್ಯ ಆರಂಭವಾಗಿದೆ. ಆದ್ದರಿಂದ ಸಮರ್ಪಕವಾಗಿ ಬಿತ್ತನೆ ಬೀಜ ವಿತರಿಸುವುದು ಹಾಗೂ ರಸಗೊಬ್ಬರ ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯಾದ್ಯಂತ ಉತ್ತಮವಾಗಿ ಮಳೆಯಾಗುತ್ತಿದ್ದರೂ ಸಹ, ಕೆಲವು ಕಡೆಗಳಲ್ಲಿ ಕುಡಿಯುವ ನೀರು ಸಮಸ್ಯೆ ಇದ್ದು, ಕುಡಿಯುವ ನೀರು ಸರಿಯಾಗಿ ಸರಬರಾಜು ಮಾಡಬೇಕು. ಜೊತೆಗೆ ಕುಡಿಯುವ ನೀರನ್ನು ಪ್ರತೀನಿತ್ಯ ಪರೀಕ್ಷಿಸಬೇಕು ಎಂದು ಮುಖ್ಯಮಂತ್ರಿ ಅವರು ಕಟ್ಟುನಿಟ್ಟಿನ…
ಮಡಿಕೇರಿ ಮೇ 23 NEWS DESK : ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 9 ತಿಂಗಳ ತೋಟಗಾರಿಕೆ ತರಬೇತಿಯು 2024ರ ಜು.1 ರಿಂದ 2025 ರ ಮಾ.31 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್‍ನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದೆ. ಅರ್ಜಿ ಸಲ್ಲಿಸಲು ಜೂ.3 ರ ಸಂಜೆ 5.30 ಗಂಟೆಗೆ ಕೊನೆಯ ದಿನವಾಗಿದೆ. ಅರ್ಜಿಯನ್ನು ಈ ಕಚೇರಿಯಿಂದ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯ ವಲಯ, ಮಡಿಕೇರಿ ಕಚೇರಿಯನ್ನು ಬೆಳಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು ಮತ್ತು ಅಂತರ್ಜಾಲ https://horticulturedir.karnataka.gov.in ದಲ್ಲಿ ಅರ್ಜಿ ಪಡೆಯಬಹುದು. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ, ತಾಯಿ, ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ, ತಾಯಿಯವರ ಒಪ್ಪಿಗೆ ಪತ್ರ ಮತ್ತಿತರ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯ…
ಮಡಿಕೇರಿ ಮೇ.23 NEWS DESK : ಪ್ರಸಕ್ತ(2024-25) ಸಾಲಿಗೆ ಕೊಡ್ಲಿಪೇಟೆ ಕ್ಯಾತೆ ಗ್ರಾಮದ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ 2024-25ನೇ ಸಾಲಿಗೆ ಗಣಿತ ಉಪನ್ಯಾಸಕರು(1), ರಸಾಯನಶಾಸ್ತ್ರ ಉಪನ್ಯಾಸಕರು(1), ಜೀವಶಾಸ್ತ್ರ, ಭೌತಶಾಸ್ತ್ರ, ಕನ್ನಡ, ಆಂಗ್ಲ ಭಾಷೆ ಉಪನ್ಯಾಸಕರು( ತಲಾ 1), ಕನ್ನಡ ಶಿಕ್ಷಕರು(1), ಆಂಗ್ಲ ಭಾಷೆ ಶಿಕ್ಷಕರು(1), ಸಮಾಜ ವಿಜ್ಞಾನ ಶಿಕ್ಷಕರು(1), ವಿಜ್ಞಾನ ಶಿಕ್ಷಕರು(1), ಗಣಕಯಂತ್ರ ಶಿಕ್ಷಕರು(1), ಸ್ಟಾಪ್ ನರ್ಸ್ ಶಿಕ್ಷಕರು(1) ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು(1) ಹಾಗೂ ವಿರಾಜಪೇಟೆಯ ಪೆರುಂಬಾಡಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಗಣಕಯಂತ್ರ ಶಿಕ್ಷಕರು(01) ಮತ್ತು ಸ್ಟಾಪ್ ನರ್ಸ್ ಶಿಕ್ಷಕರು(1) ವಿಷಯಗಳಿಗೆ ಅನುಗುಣವಾಗಿ ಅತಿಥಿ ಉಪನ್ಯಾಸಕರು ಮತ್ತು ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನವಾಗಿದೆ. ಅರ್ಹ ಅಭ್ಯರ್ಥಿಗಳು ಕಡೆಯ ದಿನಾಂಕದೊಳಗೆ ಜಿಲ್ಲಾ ಕಚೇರಿಗೆ ಅಥವಾ ಸಂಬಂಧಪಟ್ಟ ಶಾಲೆಗಳಿಗೆ ಅರ್ಜಿ ಸಲ್ಲಿಸಬಹುದು. ಉಪನ್ಯಾಸಕರ ಮತ್ತು ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆ ಎಂಎಸ್ಸಿ ಮತ್ತು ಬಿ.ಎಡ್ ಆಗಿರಬೇಕು. ಗಣಕಯಂತ್ರ ಶಿಕ್ಷಕರಿಗೆ…
ಮಡಿಕೇರಿ ಮೇ 23 NEWS DESK : ಪೊನ್ನಂಪೇಟೆ ಹಾಕಿ ಟರ್ಫ್ ಮೈದಾನದಲ್ಲಿ ನಡೆದ ಅಂತರ್ ಕಾಲೇಜು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ ಪ್ರಶಸ್ತಿಯನ್ನು ಮಡಿಕೇರಿಯ ಪೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ತನ್ನ ಮುಡಿಗೇರಿಸಿಕೊಂಡಿದ್ದು, ರನ್ನರ್ಸ್ ಅಪ್ ಪ್ರಶಸ್ತಿಗೆ ಮೂರ್ನಾಡು ಪ್ರಥಮ ದರ್ಜೆ ಕಾಲೇಜು ತಂಡ ಭಾಜನವಾಗಿದೆ. ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಬಿ.ಬಿ.ಎ. ವಿಭಾಗ ಮತ್ತು ದೈಹಿಕ ಶಿಕ್ಷಣ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆದ ಪಂದ್ಯಾವಳಿಯಲ್ಲಿ ರಾಜ್ಯದ ಪ್ರತಿಷ್ಠಿತ 16 ಕಾಲೇಜುಗಳ 124 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಂತಿಮ ಪಂದ್ಯದಲ್ಲಿ ಮಡಿಕೇರಿಯ ಎಫ್.ಎಂ.ಸಿ. ಕಾಲೇಜು ಎ ತಂಡ ಟೈಬ್ರೇಕರ್ ಮೂಲಕ 6-5 ಗೋಲುಗಳ ಅಂತರದಿಂದ ಮೂರ್ನಾಡು ಪ್ರಥಮ ದರ್ಜೆ ಕಾಲೇಜು ಎ ತಂಡದ ವಿರುದ್ಧ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟವನ್ನು ತನ್ನದಾಗಸಿಕೊಂಡಿತು. ನಿಗದಿತ ಅವಧಿಯಲ್ಲಿ ಈ ತಂಡಗಳು ತಲಾ 3 ಗೋಲು ಗಳಿಸಿದ್ದವು. ವಿಜೇತ ತಂಡಗಳಿಗೆ ಟ್ರೋಫಿ ಮತ್ತು ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಪಂದ್ಯಾವಳಿಯ ಉತ್ತಮ ಗೋಲು…






