ಲೇಖಕ: admin

ಮಡಿಕೇರಿ ಜು.13 NEWS DESK : ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿಗಳ ಜನ ಆರೋಗ್ಯ ಯೋಜನಾ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನ ಪಡೆಯಲು ಇಂದೇ ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್ ಗಳನ್ನು ನಿಮ್ಮ ಹತ್ತಿರದ ಗ್ರಾಮ ಒನ್ ನಿಂದ ರೇಷನ್‌ಕಾರ್ಡ್ ಲಿಂಕ್ ಆಗಿರುವ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಸಂಖ್ಯೆ ನೀಡಿ ಉಚಿತವಾಗಿ ಪಡೆಯಿರಿ. ಆಯುಷ್ಮಾನ್ ಕಾರ್ಡ್ ಹೊಂದಿರುವ ಬಿಪಿಎಲ್ ಕಾರ್ಡ್ ನ ಪ್ರತೀ ಕುಟುಂಬಗಳಿಗೆ ರೂ.5 ಲಕ್ಷ ವಾರ್ಷಿಕ ಮಿತಿಯೊಳಗೆ ಉಚಿತ ಚಿಕಿತ್ಸೆ, ಎಪಿಎಲ್ ಕಾರ್ಡ್ ನ ಪ್ರತೀ ಕುಟುಂಬಗಳಿಗೆ ಪ್ಯಾಕೇಜ್ ದರದಲ್ಲಿ ಶೇ.30 ರಷ್ಟು ವಾರ್ಷಿಕವಾಗಿ ರೂ.1.5 ಲಕ್ಷದ ಮಿತಿಯೊಳಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸುತ್ತದೆ. ಈ ಕಾರ್ಡ್ ನ ನೆರವಿನಿಂದ ದೇಶದಲ್ಲಿ ಎಲ್ಲೇ ಇದ್ದರೂ ಉಚಿತವಾಗಿ ಚಿಕಿತ್ಸೆಯನ್ನು ಪಡೆಯಲು ಪೋರ್ಟಬಿಲಿಟಿ ಸೌಲಭ್ಯವಿದೆ. ತುರ್ತು ಸಂದರ್ಭದಲ್ಲಿ 171 ಚಿಕಿತ್ಸಾ ವಿಧಾನಗಳಿಗೆ ರೋಗಿಯು ನೇರವಾಗಿ ಸರ್ಕಾರಿ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು.…

Read More

ಸುಂಟಿಕೊಪ್ಪ ಜು.12 NEWS DESK : ಕಾರ್ಮಿಕರ ಮತ್ತು ಚಾಲಕರ ಕೊಡಗು ಜಿಲ್ಲಾಧ್ಯಕ್ಷರಾಗಿ ಕುಶಾಲನಗರದ ಜಿ.ಕುಮಾರ್ ಆಯ್ಕೆಯಾಗಿದ್ದಾರೆ. ಇಲ್ಲಿನ ದ್ವಾರಕ ಸಭಾಂಗಣದಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಅಣ್ಣಾ ಶರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಉಪಾಧ್ಯಕ್ಷರಾಗಿ ಮಹೇಶ್ ಮಾದಪಟ್ಟಣ, ಶಿವಮ್ಮ ಸುಂದರನಗರ,ಸುಲೈಮಾನ್ ನಂಜರಾಯಪಟ್ಟಣ, ಪ್ರಧಾನ ಕಾರ್ಯದರ್ಶಿಯಾಗಿ ಲೋಕೇಶ್( ಲೋಕಿ) ಸುಂಟಿಕೊಪ್ಪ, ಖಜಾಂಚಿಯಾಗಿ ಮಂಜುನಾಥ್ ಚೆನ್ಕಲ್, ಸಹಕಾರ್ಯದರ್ಶಿಗಳಾಗಿ ಕೃಷ್ಣಕುಟ್ಟಿ, ನಂದಿನಿ, ಸಂಘಟನಾ ಕಾರ್ಯದರ್ಶಿಯಾಗಿ ಬಿ.ಎಸ್.ಸಂದೀಪ್, ಮಂಜುಳ, ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಇಬ್ರಾಹಿಂ, ರವಿ, ಸಲಂ,ಕವಿತ, ರತ್ನ, ಸುಮಾ, ಸೂರ್ಯ( ಸೂರಿ), ಆನಂದ, ಅನಿಲ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇದೇ ವೇಳೆ ಕೊಡಗು, ಮೈಸೂರು, ಹಾಸನ ಜಿಲ್ಲೆಯ ಕಾವೇರಿ ಕೃಷಿ ಕಾರ್ಮಿಕರ ಚಾಲಕರ ಸಂಘ ಮತ್ತು ಕಾರ್ಮಿಕರ ಮತ್ತು ಚಾಲಕರ ಸಂಘದ ಅಧ್ಯಕ್ಷರಾಗಿ ಅಣ್ಣಾ ಶರೀಫ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Read More

ಮಡಿಕೇರಿ ಜು.12 NEWS DESK : ಮಡಿಕೇರಿ ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ಅವರು ನಗರದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕುಂದುಕೊರತೆ ಆಲಿಸಿದರು.   ಸಾರ್ವಜನಿಕರೊಬ್ಬರು ಪೊನ್ನಂಪೇಟೆಯಲ್ಲಿ ಐದೂವರೆ ಸೆಂಟ್ ಜಾಗವಿದ್ದು, ಪೌತಿಖಾತೆ ಮಾಡಲು 50 ಸಾವಿರ ರೂ. ಲಂಚದ ಬೇಡಿಕೆ ಇಡುತ್ತಿದ್ದಾರೆ ಎಂದು ಕಣ್ಣೀರು ಸುರಿಸಿದರು. ನಾನು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದು, ವಯಸ್ಸಾಗಿದೆ. ಪೊನ್ನಂಪೇಟೆಗೆ ಹೋಗಿ ಬರಲು ತುಂಬಾ ತೊಂದರೆಯಾಗಿದೆ. ಮಗಳ ಮದುವೆ ಮಾಡಬೇಕಿದ್ದು, ತುಂಬಾ ತೊಂದರೆಯಾಗಿದೆ. ಎರಡು ವರ್ಷದಿಂದ ಪೌತಿಖಾತೆ ಮಾಡಿಕೊಡದೆ ಸತಾಯಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ಅವರು ನಿಮ್ಮ ಕೆಲಸ ಕಾಲ ಮಿತಿಯಲ್ಲಿ ಆದ್ಯತೆ ಮೇಲೆ ಮಾಡಿಸಿಕೊಡಲಾಗುವುದು ಎಂದು ಅವರು ತಿಳಿಸಿದರು. ಮತ್ತೊಬ್ಬ ಮಹಾಲಕ್ಷ್ಮಿ ಅವರು ಜಾಗದ ಖಾತೆ ಮಾಡಿಕೊಡದೆ ಒಂದುವರೆ ವರ್ಷದಿಂದ ಅಲೆದಾಡಿಸುತ್ತಿದ್ದಾರೆ. ಜಾಗದ ಖಾತೆ ಮಾಡಿಸಿಕೊಡುವಂತೆ ಲೋಕಾಯುಕ್ತರಲ್ಲಿ ಮನವಿ ಮಾಡಿದರು. ಈ ಬಗ್ಗೆ ಪೌರಾಯುಕ್ತರಾದ ವಿಜಯ್ ಅವರು ಹೊಸದಾಗಿ ಖಾತೆ…

Read More

ಸುಂಟಿಕೊಪ್ಪ ಜು.12 NEWS DESK : ಕೊಡಗರಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು ರೂ.10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸ್ವಚ್ಛ ಸಂರ್ಕೀಣ ಘಟಕವನ್ನು ಮಡಿಕೇರಿ ಶಾಸಕ ಡಾ.ಮಂತರ್‌ಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಮಾಡಬೇಕಾಗಿದ್ದು, ಪ್ರತಿ ಮನೆ ವ್ಯಾಪ್ತಿಯಲ್ಲಿ ಹಸಿಕಸ ಮತ್ತು ಒಣಕಸ ಬೇರ್ಪಡಿಸಿ ಹಾಕಬೇಕು ಎಂದರು. ಪ್ಲಾಸ್ಟಿಕ್ ಮತ್ತು ಗಾಜುಗಳನ್ನು ಪ್ರತ್ಯೇಕವಾಗಿ ವಿಗಂಡಿಸುವುದರ ಮೂಲಕ ಸ್ವಚ್ಛ ಪರಿಸರ ನಿರ್ಮಾಣಕ್ಕೆ ನಾವೆಲ್ಲರು ಕೈ ಜೋಡಿಸಬೇಕು ಎಂದು ಕರೆ ನೀಡಿದರು. ಕಸವಿಲೇವಾರಿ ಘಟಕ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತಾಗಲು ಗ್ರಾಮದಲ್ಲಿನ ಪ್ರತಿಯೊಬ್ಬರೂ ಪಂಚಾಯಿತಿಯೊಂದಿಗೆ ಕೈ ಜೋಡಿಸುವಂತೆ ಅವರು ಮನವಿ ಮಾಡಿದರು. ಸ್ಥಳೀಯ ಅಭಿವೃದ್ಧಿ ನಿಧಿಯಿಂದ ಕೊಡಗರಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ರೂ.55 ಲಕ್ಷದಷ್ಟು ಅನುದಾನ ನಿಗದಿಯಾಗಿದೆ. ಈ ಪೈಕಿ ಕಾನ್‌ಬೈಲ್ ಮಂಜಿಕೇರೆ ಮುಖ್ಯ ರಸ್ತೆಯನ್ನು ರೂ 5 ಲಕ್ಷ ವೆಚ್ಚದಲ್ಲಿ ದುರಸ್ತಿಗೊಳಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಅಂದಗೋವೆ ಗಿರಿಜನ ಕಾಲೋನಿಯಲ್ಲಿ ವಿದ್ಯುತ್ ಸಂಪರ್ಕ ಕುಡಿಯುವ ನೀರಿನ ಯೋಜನೆ ಅದಷ್ಟು ಶೀಘ್ರವಾಗಿ…

Read More

ಸೋಮವಾರಪೇಟೆ NEWS DESK : ಕಾಂಗ್ರೆಸ್‌ನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ನಂತರ ಐದು ಗ್ಯಾರೆಂಟಿಗಳೊಂದಿಗೆ, ಅಭಿವೃದ್ಧಿ ಕಾಮಗಾರಿಗಳಿಗೂ ಹೆಚ್ಚಿನ ಅನುದಾನ ನೀಡಿದ್ದಾರೆ ಎಂದು ಮಡಿಕೇರಿ ಶಾಸಕ ಡಾ.ಮಂತರ್‌ಗೌಡ ಅಭಿಪ್ರಾಯಿಸಿದರು. 1.65ಕೋಟಿ ರೂ. ವೆಚ್ಚದಲ್ಲಿ ಕಕ್ಕೆಹೊಳೆಗೆ ನಿರ್ಮಾಣವಾಗಿರುವ ಸೇತುವೆಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಅತೀ ಹೆಚ್ಚು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿ ಶಿಥಿಲಗೊಂಡಿದ್ದ ಕಕ್ಕೆಹೊಳೆ ಸೇತುವೆಯಲ್ಲಿ ತೆರಳುತ್ತಿದ್ದರು. ನೂತನ ಸೇತುವೆ ನಿರ್ಮಾಣಕ್ಕೆ ಅನುದಾನ ಕೋರಿದ ಸಂದರ್ಭ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅನುದಾನ ಕಲ್ಪಿಸಿದರು. ಅನುದಾನ ನೀಡಿದ 8 ತಿಂಗಳಲ್ಲೇ ಸೇತುವೆ ಕಾಮಗಾರಿ ಮುಗಿದಿದೆ. ವಿದ್ಯಾರ್ಥಿಗಳಿಗೆ ನಡೆದಾಡಲು ಫುಟ್‌ಪಾತ್ ನಿರ್ಮಿಸಲಾಗಿದೆ. ಇನ್ನು ಮುಂದೆ ನೆಮ್ಮದಿಯಿಂದ ಸಂಚರಿಸಬಹುದು ಎಂದು ಹೇಳಿದರು. ನನ್ನ ಅವಧಿಯಲ್ಲಿ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಐಗೂರು ಸೇತುವೆ ನಿರ್ಮಾಣಕ್ಕೂ ಅನುದಾನ ಸಿಕ್ಕಿದೆ. ಕೂತಿ ರಸ್ತೆ 20 ಕೋಟಿ ರೂ.ವೆಚ್ಚದಲ್ಲಿ ಡಾಮರೀಕರಣಗೊಳ್ಳಲಿದೆ. ಕಕ್ಕೆಹೊಳೆ ಸೇತುವೆ ಸನಿಹದಲ್ಲೇ ಬಸವೇಶ್ವರರ ಪ್ರತಿಮೆಯಿದ್ದು, ನೂತನ ಸೇತುವೆಗೂ ಬಸವೇಶ್ವರರ ಹೆಸರು ಇಡಬೇಕು ಎಂದು ಕಿರಿಕೊಡ್ಲಿಮಠದ ಸದಾಶಿವ…

Read More

ಮಡಿಕೇರಿ ಜು.12 NEWS DESK : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ಕಮ್ಯುನಿಷ್ಟ್(ಮಾಕ್ಸವಾದಿ ಲೆನಿನ್ ವಾದಿ) ಮಾಸ್ ಲೈನ್ ಪಕ್ಷ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪದಾಧಿಕಾರಿಗಳು ಹಾಗೂ ನಿವೇಶನ ರಹಿತರು ಘೋಷಣೆಗಳನ್ನು ಕೂಗಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಸಿಪಿಐ(ಎಂಎಲ್)ನ ರಾಜ್ಯ ಸಮಿತಿ ಸದಸ್ಯ ಡಿ.ಎಸ್.ನಿರ್ವಾಣಪ್ಪ ಮಾತನಾಡಿ, ನಿವೇಶನ ರಹಿತ ಆದಿವಾಸಿಗಳನ್ನು ಲೈನ್ ಮನೆಯಿಂದ ಬಿಡುಗಡೆಗೊಳಿಸಿ ಸ್ವಂತ ಸೂರು ಮತ್ತು ಕೃಷಿ ಭೂಮಿ ನೀಡಬೇಕು, ಅಕ್ರಮ ಸಕ್ರಮ ಯೋಜನೆಡಿಯಲ್ಲಿ ಸಲ್ಲಿಸಿರುವ 50, 53, 57, 94ಸಿ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕು, ಉಳ್ಳವರಿಗೆ ಭೂಮಿ ಗುತ್ತಿಗೆ ನೀಡುವ ಆದೇಶವನ್ನು ರದ್ದುಗೊಳಿಸಬೇಕು, ಅಕ್ರಮ ಒತ್ತುವರಿ ಭೂಮಿಯನ್ನು ತೆರವುಗೊಳಿಸಬೇಕು. ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬಡವರಿಗೆ ಹಾಗೂ ಆದಿವಾಸಿಗಳಿಗೆ ನೀವೇಶನ ಕಾಯ್ದಿರಿಸಬೇಕು, ಆರ್.ಟಿ.ಸಿ.ಯನ್ನು ಸರ್ಕಾರಿ ಪೈಸಾರಿ ಎಂದು ಮಾಡಿರುವುದನ್ನು ರದ್ದುಗೊಳಿಸಬೇಕು, ನಾಗರಹೊಳೆ ಅರಣ್ಯದ ಮಧ್ಯ ಭಾಗದಲ್ಲಿರುವ ಆದಿವಾಸಿಗಳಿಗೆ ಅದೇ ಅರಣ್ಯದಂಚಿನಲ್ಲಿ ಪುನರ್ ವಸತಿ ಕಲ್ಪಿಸಬೇಕು,…

Read More

ಬೆಂಗಳೂರು ಜು.12 NEWS DESK : ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಈ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈ ವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ. ಇದನ್ನು CWRC ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದ ವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ CWRC ಅವರು ಜು.12 ರಿಂದ ಪ್ರತಿ ದಿನ ಒಂದು…

Read More

ಕುಶಾಲನಗರ, ಜು.12 NEWS DESK : ಕುಶಾಲನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದ್ದು, ಜಿಲ್ಲಾಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ‌ವಹಿಸಬೇಕು ಎಂದು ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಪಟ್ಟಣ, ಗ್ರಾಮಾಂತರ ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಭಯದಿಂದ ಸಂಚರಿಸುವಂತಾಗಿದೆ. ಸಣ್ಣ ಪುಟ್ಟ ಮಕ್ಕಳು, ಶಾಲಾ ವಿದ್ಯಾರ್ಥಿಗಳು, ವೃದ್ಧರು‌ ಸೇರಿದಂತೆ ಸಾರ್ವಜನಿಕರು ತಿರುಗಾಡುವ ರಸ್ತೆಯಲ್ಲಿ, ಬೀದಿ ನಾಯಿಗಳು ಗುಂಪು ಗುಂಪಾಗಿ ಸಂಚರಿಸುತ್ತಿವೆ. ಪಾದಚಾರಿಗಳು ಬೀದಿ ನಾಯಿಗಳಿಂದ ದಾಳಿಗೊಳಗಾಗುವ ಆತಂಕದಲ್ಲಿ ರಸ್ತೆ ಸಂಚರಿಸಬೇಕಾಗಿದೆ. ಅಲ್ಲದೇ ಬೀದಿನಾಯಿಗಳು ಶಾಲಾ ವಿದ್ಯಾರ್ಥಿಗಳ ಮೇಲೆ, ಸಾರ್ವಜನಿಕರ ದಾಳಿ ನಡೆಸಿದ ಘಟನೆಗಳು ಕೂಡಾ ನಡೆಯುತ್ತಿವೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು. ಸಣ್ಣ ಪುಟ್ಟ ಮಕ್ಕಳ ಜೀವನದೊಂದಿಗೆ ಅಧಿಕಾರಿಗಳು ಚಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿರುವ ಕೆ.ಬಿ.ಶಂಶುದ್ಧೀನ್, ನೆರೆ ರಾಜ್ಯಗಳಲ್ಲಿ ಪುಟ್ಟ ಮಕ್ಕಳು ಬೀದಿನಾಯಿಗಳಿಂದ ಮೃತಪಟ್ಟ ಘಟನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ನೋಡುತ್ತಲೇ ಇದ್ದೇವೆ. ಆದ್ದರಿಂದ ಜಿಲ್ಲಾಧಿಕಾರಿಗಳು…

Read More

ಮಡಿಕೇರಿ ಜು.12 NEWS DESK : ಮುಡಾ ಹಗರಣದ ವಿರುದ್ಧ ಪ್ರತಿಭಟನೆ ನಡೆಸಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ವಿರೋಧ ಪಕ್ಷದ ಹೋರಾಟವನ್ನು ಹತ್ತಿಕ್ಕುವ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. ಮುಡಾ ಪ್ರಕರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಮತ್ತು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ ಇಂಧನ ಬೆಲೆ ಏರಿಕೆ ಖಂಡಿಸಿ ಕೊಡಗಿನಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭ ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ…

Read More

ಸುಂಟಿಕೊಪ್ಪ ಜು.12 NEWS DESK : ಕಾರ್ಮಿಕರ ಮತ್ತು ಚಾಲಕರ ಸಂಘದ ಕೊಡಗು ಜಿಲ್ಲಾಧ್ಯಕ್ಷರಾಗಿ ಕುಶಾಲನಗರದ ಜಿ.ಕುಮಾರ್ ಆಯ್ಕೆಯಾಗಿದ್ದಾರೆ. ಸುಂಟಿಕೊಪ್ಪದ ದ್ವಾರಕ ಸಭಾಂಗಣದಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಅಣ್ಣಾ ಶರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಉಪಾಧ್ಯಕ್ಷರಾಗಿ ಮಹೇಶ್ ಮಾದಪಟ್ಟಣ, ಶಿವಮ್ಮ ಸುಂದರನಗರ, ಸುಲೈಮಾನ್ ನಂಜರಾಯಪಟ್ಟಣ, ಪ್ರಧಾನ ಕಾರ್ಯದರ್ಶಿಯಾಗಿ ಲೋಕೇಶ್(ಲೋಕಿ) ಸುಂಟಿಕೊಪ್ಪ, ಖಜಾಂಚಿಯಾಗಿ ಮಂಜುನಾಥ್ ಚೆನ್ಕಲ್ ನೇಮಕಗೊಂಡಿದ್ದಾರೆ. ಸಹಕಾರ್ಯದರ್ಶಿಗಳಾಗಿ ಕೃಷ್ಣಕುಟ್ಟಿ, ನಂದಿನಿ, ಸಂಘಟನಾ ಕಾರ್ಯದರ್ಶಿಯಾಗಿ ಬಿ.ಎಸ್.ಸಂದೀಪ್, ಮಂಜುಳ, ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಇಬ್ರಾಹಿಂ, ರವಿ, ಸಲಂ, ಕವಿತ, ರತ್ನ, ಸುಮಾ, ಸೂರ್ಯ(ಸೂರಿ), ಆನಂದ, ಅನಿಲ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇದೇ ವೇಳೆ ಕೊಡಗು, ಮೈಸೂರು, ಹಾಸನ ಜಿಲ್ಲೆಯ ಕಾವೇರಿ ಕೃಷಿ ಕಾರ್ಮಿಕರ ಚಾಲಕರ ಸಂಘ ಹಾಗೂ ಕಾರ್ಮಿಕರ ಮತ್ತು ಚಾಲಕರ ಸಂಘದ ಅಧ್ಯಕ್ಷರಾಗಿ ಅಣ್ಣಾ ಶರೀಫ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Read More