ಮಡಿಕೇರಿ ಜು.12 NEWS DESK : ವಿರಾಜಪೇಟೆ ತಾಲ್ಲೂಕಿನ ವಿರಾಜಪೇಟೆ-ಕರಡ ಜಿಲ್ಲಾ ಮುಖ್ಯ ರಸ್ತೆಯ ಕಿ.ಮೀ 16.40 ರಲ್ಲಿ ರಸ್ತೆ ಬದಿ ಬಿರುಕು ಬಿಟ್ಟು ಕುಸಿಯುತ್ತಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಸೆಪ್ಟೆಂಬರ್, 09 ರವರೆಗೆ (ದಿನಾಂಕ 09.09.2024ರ ವರೆಗೆ) ವಿರಾಜಪೇಟೆ ತಾಲ್ಲೂಕಿನ ವಿರಾಜಪೇಟೆ-ಕರಡ ಜಿಲ್ಲಾ ಮುಖ್ಯ ರಸ್ತೆಯ ತೆರಮೆಮೊಟ್ಟೆಯ (ಸರಪಳಿ ಕಿ.ಮೀ 16.40 ತೋರ ಹತ್ತಿರ) ಕುಸಿದಿರುವ ಭಾಗದಲ್ಲಿನ 400 ಮೀಟರ್ ರಸ್ತೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ. ಸಾರ್ವಜನಿಕರು ತೋರ–ಕೆದಮುಳ್ಳೂರು-ಬೋಯಿಕೇರಿ ಮಾರ್ಗ, ತೋರ-ಹೆಗ್ಗಳ–ಆರ್ಜಿ ಮಾರ್ಗವಾಗಿ ಬದಲಿ ರಸ್ತೆ ಬಳಸಬಹುದಾಗಿದೆ. ಅವಶ್ಯವಿರುವ ಸಂಜ್ಞೆ / ಸೂಚನಾ ಫಲಕವನ್ನು ಅಳವಡಿಸಲು ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಸೂಚನೆ ನೀಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜು.12 NEWS DESK : ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜು.13 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಮತ್ತಿತರ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು: ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್…
ಮಡಿಕೇರಿ ಜು.11 NEWS DESK : ಪರಿಶುದ್ಧ ಕನ್ನಡ ಬಳಕೆಯ ಮೂಲಕವೇ ಸುಮಧುರ ನಿರೂಪಣಾ ಶೈಲಿಯಿಂದ ಕನ್ನಡಿಗರ ಮನಗೆದ್ದಿದ್ದ ನಿರೂಪಕಿ ಹಾಗೂ ನಟಿ ಅಪರ್ಣಾ(51) ನಿಧನ ಹೊಂದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅಪರ್ಣ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.
ಸುಂಟಿಕೊಪ್ಪ ಜು.11 NEWS DESK : ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ರೂ.9.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸ್ವಚ್ಛ ಸಂಕೀರ್ಣ ಘಟಕವನ್ನು ಮಡಿಕೇರಿ ಕ್ಷೇತ್ರದ ಶಾಸಕÀ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು ಕಂಬಿಬಾಣೆ ವ್ಯಾಪ್ತಿಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಕಾಡಾನೆಗಳು ರಾತ್ರಿ ಹಗಲೆನ್ನದೆ ಗ್ರಾಮದಲ್ಲಿ ಸಂಚರಿಸಿ ಆತಂಕ ಸೃಷ್ಟಿಸುತ್ತಿರುವ ಬಗ್ಗೆ ಗ್ರಾ.ಪಂ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಗಮನ ಸೆಳೆದಾಗ ಸ್ಪಂದಿಸಿದ ಶಾಸಕರು, ರೈಲ್ವೆ ಕಂಬಿಗಳ ಬೇಲಿ ನಿರ್ಮಾಣ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಜಿಲ್ಲಾ ಪಂಚಾಯತ್ ರಾಜ್ ಅಭಿಯಂತರ ಫಯಾಜ್ ಆಹ್ಮದ್ ಮಾತನಾಡಿ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಈಗಾಗಲೇ ಸರಕಾರದಿಂದ ಅಂದಾಜು 51 ಲಕ್ಷ ರೂ. ಮತ್ತು ಅತ್ತೂರು ನಲ್ಲೂರು ಸರಕಾರಿ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ದುರಸ್ತಿಗಾಗಿ ರೂ.1.80 ಲಕ್ಷ ರೂ. ಮೊತ್ತವನ್ನು ಬಿಡುಗಡೆಗೊಂಡಿದೆ ಎಂದು ತಿಳಿಸಿದರು. ಈ ಸಂದರ್ಭ ತಾ.ಪಂ ನಿರ್ವಾಹಣಾಧಿಕಾರಿ ವೀರಣ್ಣ, ಗ್ರಾ.ಪಂ ಅಧ್ಯಕ್ಷೆ…
ಕುಶಾಲನಗರ ಜು.11 NEWS DESK : ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಆರೋಗ್ಯ ಇಲಾಖೆ ಕುಶಾಲನಗರ ತಾಲೂಕು ಆರೋಗ್ಯ ಇಲಾಖೆ, ಸರಕಾರಿ ಇಂಜಿನಿಯರಿಂಗ್ ಕಾಲೇಜು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜು ಪ್ರಾಂಶುಪಾಲರಾದ ಡಾ.ಸತೀಶ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಜನಸಂಖ್ಯಾ ಸ್ಫೋಟದಿಂದ ದೇಶದ ಅಭಿವೃದ್ಧಿಗೆ ಅಡ್ಡಿ ಉಂಟಾಗುತ್ತಿದೆ. ಅಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ತೊಡಕು ಉಂಟಾಗುವುದು ಸಹಜವಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿಗಳಾದ ಕೊಡಗು ವಿಶ್ವವಿದ್ಯಾಲಯದ ಉಪನ್ಯಾಸಕರಾದ ಡಾ.ಲೋಕೇಶ್ ಭರಣಿ ಅವರು ದಿನದ ಮಹತ್ವದ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕುಶಾಲನಗರ ಕಾರ್ಯದರ್ಶಿ ಪತ್ರಕರ್ತರ ಸಂಘದ ಅಧ್ಯಕ್ಷ ಎಂ ಎನ್ ಚಂದ್ರಮೋಹನ್ ಜನಸಂಖ್ಯಾ ಸ್ಫೋಟದಿಂದ ಆಗುತ್ತಿರುವ ಪ್ರಸಕ್ತ ಪರಿಣಾಮದ ಬಗ್ಗೆ ಮಾಹಿತಿ ನೀಡಿದರು. ಕುಶಾಲನಗರ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ ಇಂದೂಧರ್ ಅವರು ಪ್ರಾಸ್ತಾವಿಕ…
ಮಡಿಕೇರಿ ಜು.11 NEWS DESK : ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಮೊಮ್ಮಗನೇ ಅಜ್ಜಿಯನ್ನು ಹತ್ಯೆ ಮಾಡಿರುವ ಆರೋಪದಡಿ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರವರ ಜಾನಕಿ(48) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಲೈನ್‌ಮನೆಯೊಂದರಲ್ಲಿ ವಾಸವಿದ್ದ ಜಾನಕಿ ಹಾಗೂ ಮೊಮ್ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಕಲಹ ಏರ್ಪಟ್ಟಿದೆ. ಈ ಸಂದರ್ಭ ಮೊಮ್ಮಗ ಹಲ್ಲೆ ಮಾಡಿದ್ದು, ಜಾನಕಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿರಾಜಪೇಟೆ ಪೊಲೀಸರು ಜಾನಕಿಯ ಪತಿ ಅಪ್ಪು ಅವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಜು.11 NEWS DESK : ಜಗತ್ತಿನಲ್ಲಿಯೇ ರೋಟರಿ ಸಂಸ್ಥೆಯು ಅತ್ಯಂತ ಕ್ರಿಯಾಶೀಲ ಸೇವಾ ಸಂಸ್ಥೆಯಾಗಿ ಖ್ಯಾತವಾಗಿದ್ದು, ರೋಟರಿಯ ಸಾಮಾಜಿಕ ಹೊಣೆಯನ್ನು ಅತ್ಯಂತ ಯಶಸ್ಸಿಯಾಗಿ ಮುಂದುವರೆಸುವ ಮಹತ್ವದ ಹೊಣೆಗಾರಿಕೆ ಸದಸ್ಯರೆಲ್ಲರ ಮೇಲಿದೆ ಎಂದು ಮೈಸೂರಿನ ಉದ್ಯಮಿ, ರೋಟರಿ ಪ್ರಮುಖ ಯಶಸ್ವಿ ಸೋಮಶೇಖರ್ ಕರೆ ನೀಡಿದ್ದಾರೆ. ನಗರದ ಗೌಡ ಸಮಾಜದ ಸಭಾಂಗಣದಲ್ಲಿ ರೋಟರಿ ಮಡಿಕೇರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷರಾಗಿ ಪೊನ್ನಚ್ಚನ ಮಧುಸೂದನ್ ಮತ್ತು ಕಾಯ೯ದಶಿ೯ಯಾಗಿ ಕಟ್ಟೆಮನೆ ಸೋನಜಿತ್ ಅವರಿಗೆ ಪದಗ್ರಹಣ ನೆರವೇರಿಸಿ ಅವರು ಮಾತನಾಡಿದರು. ಜಾಗತಿಕವಾಗಿ 119 ವಷ೯ಗಳ ಭವ್ಯ ಇತಿಹಾಸ ಹೊಂದಿರುವ ರೋಟರಿ ಸಂಸ್ಥೆಯು ಪ್ರತೀ ವಷ೯ ಕೋಟ್ಯಾಂತರ ಜನರಿಗೆ ಸೇವೆಯ ಮೂಲಕ ನೆರವು ನೀಡುತ್ತಲೇ ಬಂದಿದೆ, ರೋಟರಿ ಸದಸ್ಯರು ನೀಡುವ ದೇಣಿಗೆ ಜಗತ್ತಿನ ಯಾವುದೋ ಒಂದು ಭಾಗದಲ್ಲಿ ಸಂತ್ರಸ್ಥರಿಗೆ ತಲುಪುತ್ತಿದೆ ಎಂದು ಹೇಳಿದ ಸೋಮಶೇಖರ್, ರೋಟರಿ ಸಂಸ್ಥೆಯಲ್ಲಿ ಪ್ರತೀ ಜುಲೈನಲ್ಲಿ ಆಡಳಿತ ಮಂಡಳಿಯ ಬದಲಾವಣೆ ಮಾದರಿಯಾಗಿದ್ದು ಪ್ರಕೖತ್ತಿ ನಿಯಮವಾದ ಸೂಯೋ೯ದಯ ಮತ್ತು ಸೂಯ೯ಸ್ತಮನಾದಂತೆಯೇ ರೋಟರಿಯಲ್ಲಿಯೂ ಅಧಿಕಾರದ…
ಮಡಿಕೇರಿ ಜು.11 : ಕಾಡಾನೆ ಹಾವಳಿ ಹಾಗೂ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ, ನರಿಯಂದಡ ಗ್ರಾಮ ಪಂಚಾಯ್ತಿ ಹಾಗೂ ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರಿಯಂದಡ, ಕೋಕೇರಿ, ಚೇಲಾವರ, ಕರಡ, ಅರಪಟ್ಟು, ಪೊದವಾಡ, ಮರಂದೋಡ, ಕಕ್ಕಬೆ ಗ್ರಾಮಸ್ಥರು ಚೆಯ್ಯಂಡಾಣೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಾಪೋಕ್ಲು-ವಿರಾಜಪೇಟೆ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಈ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ತೋಟಗಳಿಗೆ ಲಗ್ಗೆ ಇಟ್ಟು ಕೃಷಿ ಫಸಲುಗಳನ್ನು ಧ್ವಂಸಗೊಳಿಸುತ್ತಿವೆ. ಸುಮಾರು 70ರಿಂದ 80ಕ್ಕೂ ಹೆಚ್ಚು ಕಾಡಾನೆಗಳು ಈ ವ್ಯಾಪ್ತಿಯಲ್ಲಿ ನಿರಂತರ ದಾಳಿ ನಡೆಸುತ್ತಿದ್ದರೂ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡಿಲ್ಲ ಹಾಗೂ ನಿರಂತರ ವಿದ್ಯುತ್ ಸಮಸ್ಯೆಯಿಂದ ಗ್ರಾಮಸ್ಥರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅರಣ್ಯ ಇಲಾಖೆ ಹಾಗು ಚೆಸ್ಕಾಂ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ರಸ್ತೆ ತಡೆ ನಡೆಸಲು ಗ್ರಾಮಸ್ಥರು ಮುಂದಾದ ಸಂದರ್ಭ ಪೊಲೀಸ್ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಹಾಗೂ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್…
ಮಡಿಕೇರಿ ಜು.11 NEWS DESK : ವಿರಾಜಪೇಟೆಯಲ್ಲಿರುವ ‘ಶ್ರೀ ಕಾವೇರಿ ಆಶ್ರಮ’ ಧಾರ್ಮಿಕ ಸಂಸ್ಥೆಯಾಗಿದ್ದು, ಇದರ ವಿರುದ್ಧ ಬರುತ್ತಿರುವ ಆರೋಪಗಳನ್ನು ಅಲ್ಲಗಳೆದಿರುವ ಶ್ರೀ ಕಾವೇರಿ ಆಶ್ರಮ ಟ್ರಸ್ಟ್‍ನ ಪದಾಧಿಕಾರಿಗಳು, ಆಶ್ರಮವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅತ್ಯಂತ ಸುವ್ಯವಸ್ಥಿತವಾಗಿ ನಡೆಯುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶ್ರೀಕಾವೇರಿ ಆಶ್ರಮ ಟ್ರಸ್ಟ್‍ನ ಟ್ರಸ್ಟಿಗಳಾದ ಎನ್.ಯು. ಅಯ್ಯಪ್ಪ ಅವರು, ಶ್ರೀ ಅಪ್ಪಯ್ಯ ಸ್ವಾಮಿಗಳಿಂದ 1941 ರಲ್ಲಿ ಉದ್ಘಾಟನೆಗೊಂಡ ಶ್ರೀ ಕಾವೇರಿ ಆಶ್ರಮವು ನಿರಂತರವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜನರಲ್ಲಿ ಆಧ್ಯಾತ್ಮಿಕ ಚಿಂತನೆ ಮೂಡಿಸುವ ಕೇಂದ್ರವಾಗಿ ನಡೆದುಕೊಂಡು ಬಂದಿದೆ. ಅಪ್ಪಯ್ಯ ಸ್ವಾಮಿಗಳ ಕಾಲಾನಂತರ ಶ್ರೀ ವಿವೇಕಾನಂದ ಶರಣ ಸ್ವಾಮೀಜಿಗಳು 1983 ರಿಂದ ಆಶ್ರಮದ ಜವಾಬ್ದಾರಿಯನ್ನು ವಹಿಸಿಕೊಂಡುದಲ್ಲದೆ, 1998 ರಿಂದ ಆಶ್ರಮದಲ್ಲಿಯೇ ನೆಲೆಸಿ ಮುತುವರ್ಜಿಯಿಂದ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬಂದಿದ್ದರೆಂದು ಹೇಳಿದರು. ಶ್ರೀಕಾವೇರಿ ಆಶ್ರಮದ ಅಡಿಯಲ್ಲಿ ಕೂಡಿಗೆಯ ಕೃಷ್ಣಾಶ್ರಮ ಮತ್ತು ಮೈಸೂರಿನ ಆಶ್ರಮ ಕಾರ್ಯನಿರ್ವಹಿಸುತ್ತಿರುವುದಲ್ಲದೆ, ಸದ್ಗುರು ಅಪ್ಪಯ್ಯ ಸ್ವಾಮಿ ಶಿಕ್ಷಣ ಸಂಸ್ಥೆಯು ವ್ಯವಸ್ಥಿತವಾಗಿ ನಡೆಯುತ್ತಿದೆ. ಹೀಗಿದ್ದೂ, ಕೆಲವರು ಶ್ರೀಕಾವೇರಿ ಆಶ್ರಮದ ಆಡಳಿತ…
ಮಡಿಕೇರಿ ಜು.11 NEWS DESK : ಜಲಜೀವನ್ ಮಿಷನ್, ರಾಷ್ಟ್ರೀಯ ತೋಟಗಾರಿಕಾ ಮಿಷನ್, ಪ್ರಧಾನಮಂತ್ರಿ ಆವಾಜ್ ಯೋಜನೆ, ಸ್ವಚ್ಛ ಭಾರತ್ ಮಿಷನ್, ಎನ್‍ಆರ್‍ಎಲ್‍ಎಂ, ಸಂಜೀವಿನಿ, ಲೀಡ್ ಬ್ಯಾಂಕ್ ವತಿಯಿಂದ ಹಲವು ಕಾರ್ಯಕ್ರಮಗಳು ಸೇರಿದಂತೆ ಕೇಂದ್ರ ಪುರಸ್ಕೃತ ಯೋಜನೆಗಳು ವಿವಿಧ ಇಲಾಖೆಗಳಲ್ಲಿ ಜಾರಿಗೊಂಡಿದ್ದು, ಇವುಗಳನ್ನು ಸಮರ್ಪಕವಾಗಿ ಕಾಲಮಿತಿಯಲ್ಲಿ ಪ್ರಗತಿ ಸಾಧಿಸುವಂತೆ ಕೊಡಗು-ಮೈಸೂರು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಪ್ರತೀ ಮನೆಗೂ ನಲ್ಲಿ ನೀರು ಸಂಪರ್ಕ ಕಲ್ಪಿಸಬೇಕು. ನದಿ ಮೂಲ ಸೇರಿದಂತೆ ಮತ್ತಿತರ ಜಲ ಮೂಲಗಳಿಂದ ಕಡ್ಡಾಯವಾಗಿ ನಲ್ಲಿ ನೀರು ಸಂಪರ್ಕ ಕಲ್ಪಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು, ಒಂಟಿಯಂಗಡಿ ಮತ್ತಿತರ…






