ಲೇಖಕ: admin

ವಿರಾಜಪೇಟೆ ಜು.11 NEWS DESK  : ಕುಶಾಲನಗರ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ಮತ್ತು ಡ್ಶಾನ್ಸ್ ಇವೆಂಟ್ ಸ್ಟುಡಿಯೊ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಸಂತ ಅನ್ನಮ್ಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಎಂ.ಶ್ರೀದೇವಿ ಸೋಲೊ ವಿಭಾಗದಲ್ಲಿ ದ್ವಿತೀಯ ಸ್ಥಾನಗಳಿಸಿದ್ದಾಳೆ. ವಿರಾಜಪೇಟೆ ತಾಲೂಕಿನ ಕೆ.ಬೋಯಿಕೇರಿ ಗ್ರಾಮದ ಮುರುಗೇಶ್ ಮತ್ತು ತುಳಸಿ ಅವರ ಪುತ್ರಿಯಾಗಿರುವ ಶ್ರೀದೇವಿ, ವಿರಾಜಪೇಟೆಯ ಟೀಮ್ ಇಂಟೋಫೀಸ್ ನೃತ್ಯ ಶಾಲೆಯ ನೃತ್ಯ ಸಂಯೋಜಕ ವಿಷ್ಣು ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.

Read More

ಮಡಿಕೇರಿ ಜು.11 NEWS DESK : ಮುಡಾ ಒಂದು ಹಗರಣವೇ ಅಲ್ಲ, ಮುಖ್ಯಮಂತ್ರಿಗಳ ಪತ್ನಿಗೆ ಪರ್ಯಾಯವಾಗಿಯಷ್ಟೆ ನಿವೇಶನ ನೀಡಲಾಗಿದೆ ಎಂದಾದಲ್ಲಿ ಒಟ್ಟು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ‘ಕ್ಲೀನ್ ಚಿಟ್’ ಪಡೆದುಕೊಳ್ಳಲಿ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಆಗ್ರಹಿಸಿದ್ದಾರೆ. ದಿಶಾ ಸಮಿತಿಯ ಸಭೆಯಲ್ಲಿ ಪಾಲ್ಗೊಳ್ಳಲು ಮಡಿಕೇರಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಮೈಸೂರು ಸಂಸ್ಥಾನದ ಅವಧಿಯಲ್ಲಿ ಆರಂಭವಾದ ಮುಡಾ, ಬಡವರಿಗೆ ನಿವೇಶನಗಳನ್ನು ಒದಗಿಸುವ ಸಂಸ್ಥೆಯಾಗಿತ್ತು. ಆದರೆ, ಇಂದು ಉಳ್ಳವರ ಪರ ಕಾರ್ಯನಿರ್ವಹಿಸುವ ಇಲಾಖೆಯಾಗಿದೆ ಎಂದು ಟೀಕಿಸಿದರು. ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು. ರಾಜ್ಯ ಸರ್ಕಾರ ಆಡಳಿತದಲ್ಲಿ ಸಂಪೂರ್ಣವಾಗಿ ವಿಫಲವಾಗುತ್ತಿರುವುದು ಮತ್ತು ಇಂತಹ ಹಗರಣಗಳು ನಡೆಯುತ್ತಿರುವುದರಿಂದ ಜನರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಯದುವೀರ್ ಆರೋಪಿಸಿದರು.

Read More

ಮಡಿಕೇರಿ ಜು.11 NEWS DESK : ಕನ್ನಡೇತರ ನಾಮ ಫಲಕಗಳನ್ನು ತೆರವುಗೊಳಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು  ಪ್ರತಿಭಟನೆ ನಡೆಸಿದರು. ಕುಶಾಲನಗರ ಪಟ್ಟಣದ ಗಣಪತಿ ದೇವಾಲಯ ಬಳಿ ಜಮಾಯಿಸಿದ ವೇದಿಕೆಯ ಪ್ರಮುಖರು ಮತ್ತು ಕಾರ್ಯಕರ್ತರು ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಒತ್ತು ನೀಡುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸಂಸ್ಥೆಗಳು ಸೇರಿದಂತೆ ರಾಜ್ಯದಲ್ಲಿರುವ ವಿವಿಧ ವಾಣಿಜ್ಯ ಹಾಗೂ ಇತರೆ ಕಚೇರಿಗಳ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60 ಭಾಗವನ್ನು ಕನ್ನಡಕ್ಕೆ ಮೀಸಲಿಡಬೇಕು ಈ ಬಗ್ಗೆ ರಾಜ್ಯ ಸರ್ಕಾರದ ಸ್ಪಷ್ಟ ಆದೇಶವಿದ್ದರೂ ಸಹ ಬಹುತೇಕ ವಾಣಿಜ್ಯ ಹಾಗೂ ಸರ್ಕಾರಿ ಕಚೇರಿಗಳ ನಾಮಫಲಕಗಳು ಕನ್ನಡ ಭಾಷೆಯನ್ನು ನಿರ್ಲಕ್ಷ ಮಾಡುತ್ತಿರುವುದು ಕಂಡು ಬಂದಿದೆ. ಈ ನಿಟ್ಟಿನಲ್ಲಿ ತಕ್ಷಣ ಅಗತ್ಯ ಬದಲಾವಣೆಗೆ ಗಡುವು ನೀಡುವುದಾಗಿ ಎಚ್ಚರಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎನ್.ದೀಪಕ್ ಮತ್ತು ಕುಶಾಲನಗರ ತಾಲೂಕು ಅಧ್ಯಕ್ಷ ಬಿ.ಡಿ.ಅಣ್ಣಯ್ಯ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಮೆರವಣಿಗೆ ಮೂಲಕ ಕುಶಾಲನಗರ ಪುರಸಭೆ ಕಚೇರಿ ಬಳಿ…

Read More

ವಿರಾಜಪೇಟೆ ಜು.11 NEWS DESK : ಬಿಳುಗುಂದ ಸರಕಾರಿ ಪ್ರೌಢಶಾಲೆಯ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ರಚನೆಯ ಪ್ರಯುಕ್ತ ಶಾಲೆಯ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ಚುನಾವಣೆ ನಡೆಯಿತು. ಈ ಚುನಾವಣೆಯು ನೈಜ ಮತದಾನದ ಎಲ್ಲಾ ಪ್ರಕ್ರಿಯೆಗಳನ್ನು ಒಳಗೊಂಡಂತೆ ಕ್ರಮಬದ್ಧವಾಗಿ ನಡೆಯಿತು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಚುನಾವಣೆಯ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಜಯಶೀಲರಾದ ವಿದ್ಯಾರ್ಥಿಗಳ ಮಂತ್ರಿಮಂಡಲದ ರಚನೆಯ ಬಳಿಕ ವಿದ್ಯಾರ್ಥಿ ಸಂಘದ ಉದ್ಘಾಟನೆ ನಡೆಯಿತು. ಎಸ್‍ಡಿಎಂಸಿ ಅಧ್ಯಕ್ಷ ಇಸ್ಮಾಯಿಲ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಅರುಣ ಅನ್ಸಿ ಡಿಸೋಜ, ಮತದಾರರ ಸಾಕ್ಷರತಾ ಕ್ಲಬ್‍ನ ಸಂಚಾಲಕರಾದ ವಿ.ಕೆ.ಲೀಲಾವತಿ, ಶಿಕ್ಷಕಿಯರಾದ ಅನಿತ, ಲಿನ್ನಿ, ಸುನಿತ, ಗಂಗಮ್ಮ, ಪಿ.ಎಸ್.ಭವ್ಯ, ಎಸ್.ಡಿ.ಎಂಸಿ ಸದಸ್ಯರು, ಪೋಷಕರು ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು. 

Read More

ಮಡಿಕೇರಿ ಜು.11 NEWS DESK : ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಅಲ್ಪಸಂಖ್ಯಾತರಿಗೆ ನಿಗಮ, ಮಂಡಳಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಉನ್ನತ ಹುದ್ದೆಗಳನ್ನು ನೀಡದೆ ಕಡೆಗಣಿಸಲಾಗಿದೆ ಎಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಮೂರ್ನಾಡು ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲು ಅಲ್ಪಸಂಖ್ಯಾತರ ಮತಗಳ ಕ್ರೋಢೀಕರಣವೇ ಕಾರಣವಾಗಿದೆ. ಸುಮಾರು 80 ಸಾವಿರ ಮುಸಲ್ಮಾನರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿ ಗೆಲುವು ತಂದು ಕೊಟ್ಟಿದ್ದಾರೆ. ಆದರೆ ಇತ್ತೀಚೆಗೆ ನೇಮಕಗೊಂಡ ಮೂಡ, ಕುಡಾ ಸೇರಿದಂತೆ ವಿವಿಧ ಆಡಳಿತ ಮಂಡಳಿಗಳಲ್ಲಿ ಮುಸಲ್ಮಾನರಿಗೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲವೆಂದು ಟೀಕಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ನೀಡಬೇಕೆನ್ನುವ ಹಲವು ವರ್ಷಗಳ ಬೇಡಿಕೆ ಇಲ್ಲಿಯವರೆಗೆ ಈಡೇರಿಲ್ಲ. ಮತಬ್ಯಾಂಕ್ ನ ಋಣ ಸಂದಾಯಕ್ಕಾಗಿ ಕೊಡಗಿನ ಅಲ್ಪಸಂಖ್ಯಾತರೊಬ್ಬರಿಗೆ ವಿಧಾನ ಪರಿಷತ್ ಸ್ಥಾನವನ್ನು ನೀಡಬೇಕಾಗಿತ್ತು. ಆದರೆ ಕಾಂಗ್ರೆಸ್ ಅದರ ಬಗ್ಗೆ ಆಸಕ್ತಿಯನ್ನೇ…

Read More

ಬೇಕಾಗುವ ಸಾಮಾಗ್ರಿಗಳು: 5 ಚೂರು ಮಾಡಿದ ಏಡಿ, ಅರ್ಧ ತೆಂಗಿನ ತುರಿ, ಒಂದು ಲೋಟ ವಿನಿಗರ್‌, ಆರು ಒಣಮೆಣಸಿನಕಾಯಿ, ಒಂದು ಚಮಚ ಜೀರಿಗೆ, 2 ಬೆಳ್ಳುಳ್ಳಿ ಎಸಳು, 2 ಈರುಳ್ಳಿ, 8 ಲವಂಗ, ತುಪ್ಪ, ಒಂದು ಚಮಚ ಗರಂ ಮಸಾಲಾ, ಮುಕ್ಕಾಲು ಕಟ್ಟು ಕೊತ್ತಂಬರಿ ಸೊಪ್ಪು, 4 ಎಸಳು ಕರಿಬೇವು, ರುಚಿಗೆ ಉಪ್ಪು. ಮಾಡುವ ವಿಧಾನ: ಅರ್ಧ ಲೋಟ ವಿನಿಗರ್‌ನಲ್ಲಿ ಏಡಿಯ ಚೂರುಗಳನ್ನು ಹಾಕಿ ಮುಕ್ಕಾಲು ಗಂಟೆ ನೆನೆಯಲು ಬಿಡಿ. ಈರುಳ್ಳಿ, ಮೆಣಸಿನಕಾಯಿ ಜೀರಿಗೆ, ಬೆಳ್ಳುಳ್ಳಿ, ಲವಂಗ, ಕೊತ್ತಂಬರಿ ಸೊಪ್ಪುಗಳನ್ನು ನುಣ್ಣಗೆ ರುಬ್ಬಿಕೊಳ್ಳಿ. ದಪ್ಪತಳದ ಅಗಲವಾದ ಪಾತ್ರೆಗೆ ತುಪ್ಪ ಹಾಕಿ ಅದರೊಳಗೆ ವಿನಿಗರ್‌ನಲ್ಲಿರುವ ಏಡಿ ತುಂಡುಗಳನ್ನು ಹಿಂಡಿ ತೆಗೆದು ಹುರಿದುಕೊಳ್ಳಿ. ಅದು ಕೆಂಪಗಾಗುತ್ತಾ ಬಂದಾಗ ಉಪ್ಪು ಮತ್ತು ರುಬ್ಬಿದ ಮಸಾಲೆಯನ್ನು ಹಾಕಿ ಕೆದಕಿ. ಕರಿಬೇವು, ತೆಂಗಿನ ತುರಿ ಹಾಕಿ ಸಣ್ಣ ಉರಿಯಲ್ಲಿ 12 ನಿಮಿಷ ಬೇಯಿಸಿ ಕೆಳಗಿಳಿಸಿದರೆ ರುಚಿಯಾದ ಚಿಲ್ಲಿ ಕ್ರ್ಯಾಬ್‌ ಸಿದ್ಧ.

Read More

ಮಡಿಕೇರಿ ಜು.11 NEWS DESK : ಮಡಿಕೇರಿಯ ಆರೋಗ್ಯ ಇಲಾಖೆಯ ಸರ್ವೇಲೆನ್ಸ್‌ ಕಚೇರಿಗೆ ಶಾಸಕ ಡಾ.ಮಂತರ್‌ ಗೌಡ ದಿಢೀರ್‌ ಭೇಟಿ ನೀಡಿದರು. ಅಧಿಕಾರಿಗಳೊಂದಿಗೆ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಪಡೆದು, ಡೆಂಗ್ಯೂ ಪ್ರಕರಣಗಳು ಕಡಿಮೆಯಾಗುವಂತೆ ಜಾಗೃತಿವಹಿಸಬೇಕು, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವಂತೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು, ಆಸ್ಪತ್ರೆ ವ್ಯಾಪ್ತಿಯಲ್ಲೂ ಶುಚಿತ್ವ ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. 

Read More

ಮಡಿಕೇರಿ ಜು.11 NEWS DESK : ವಾಟೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಹಾಗೂ ಪೂರ್ವ ಪ್ರಾಥಮಿಕ ತರಗತಿಗಳ ಗಳನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ  ವಹಿಸಿದ್ದರು.

Read More

ಮಡಿಕೇರಿ ಜು.11 NEWS DESK : ವ್ಯಕ್ತಿಯೊಬ್ಬರನ್ನು ಅಟ್ಟಾಡಿಸಿ ಆತಂಕ ಸೃಷ್ಟಿಸಿದ ಕಾಡಾನೆ ಶೆಡ್ ನ್ನು ಧ್ವಂಸಗೊಳಿಸಿದ ಘಟನೆ ಮಡಿಕೇರಿ ತಾಲ್ಲೂಕಿನ ಊರುಬೈಲು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಪಲ್ತಾಡು ದೇವಸ್ಯ ರವಿ ಎಂಬುವವರು ರಬ್ಬರ್ ಟ್ಯಾಪಿಂಗ್ ಕೆಲಸ ಮುಗಿಸಿ ಶೆಡ್ ಗೆ ಹಿಂತಿರುಗುತ್ತಿದ್ದಾಗ ಕಾಡಾನೆ ದಿಢೀರ್ ಪ್ರತ್ಯಕ್ಷವಾಗಿದೆ. ರವಿ ಅವರ ಮೇಲೆ ದಾಳಿ ಮಾಡಲು ಯತ್ನಿಸಿದಾಗ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ಪಕ್ಕದಲ್ಲೇ ಇದ್ದ ರಬ್ಬರ್ ಶೆಡ್ ನ ಮೇಲೆ ಕೋಪ ತೀರಿಸಿಕೊಂಡ ಕಾಡಾನೆ ಅದನ್ನು ಧ್ವಂಸಗೊಳಿಸಿ ಅಲ್ಲಿಂದ ಕಾಲ್ಕಿತ್ತಿತು. ಕಳೆದ 15 ದಿನಗಳಿಂದ ಊರುಬೈಲು ಮತ್ತು ಅಕ್ಕಪಕ್ಕದ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದೆ. ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಾಡಾನೆ ಉಪಟಳ ತಡೆಗೆ ಅರಣ್ಯ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಆನೆ ದಾಳಿಯಿಂದ ಉಂಟಾದ ಹಾನಿಗೆ ತಕ್ಷಣ ಪರಿಹಾರ ನೀಡಬೇಕೆಂದು ಸಾಮಾಜಿಕ ಕಾರ್ಯಕರ್ತ…

Read More

ವಿರಾಜಪೇಟೆ ಜು.11 NEWS DESK : ಪಟ್ಟಣದ ಸಂತ ಅನ್ನಮ್ಮ ಪ್ರೌಢ ಶಾಲೆಯಲ್ಲಿ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಜೇಮ್ಸ್ ಡೊಮಿನಿಕ್  ಉದ್ಘಾಟಿಸಿ ಮಾತನಾಡಿ,  ಮಕ್ಕಳ ಸೂಪ್ತ ಪ್ರತಿಭೆ ಹೊರಹೊಮ್ಮಲು ಪ್ರತಿಭಾ ದಿನಾಚರಣೆ ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಇದನ್ನು ಮುಕ್ತವಾಗಿ ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕೆಂದರು. ಸಂತ ಅನ್ನಮ್ಮ ಪಿಯು ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ಮದಲೈ ಮುತ್ತು ಮಾತನಾಡಿ, ಶಾಲಾ ಹಂತದಲ್ಲಿ ಪ್ರತಿಭಾ ದಿನಾಚರಣೆ ಅತೀ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಮಾಡಿಕೊಳ್ಳಬೇಕು ಮತ್ತು ಶಾಲೆಯ ಏಳಿಗೆಗೆ ಶ್ರಮಿಸಬೇಕು ಎಂದು ಕಿವಿಮಾತು ಹೇಳಿ, ಕಾರ್ಯಕ್ರಮ ಸ್ವರೂಪವನ್ನು ಶ್ಲ್ಯಾಘಿಸಿದರು. ಪ್ರತಿಭಾ ದಿನಾಚರಣೆ ಪ್ರಯುಕ್ತ ಶಾಲೆಯ ಎಂಟನೇ ತರಗತಿಯ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡರು. ಮತ್ತು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲಾ ಮುಖ್ಯಪಾಧ್ಯಾಯರುಗಳಾದ ಸಿಸ್ಟರ್ ರೋಸಿ, ಸಿಸ್ಟರ್…

Read More