ಲೇಖಕ: admin

ಮಡಿಕೇರಿ ಜು.11 NEWS DESK : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ವತಿಯಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ/ಸಿಇಟಿ/ನೀಟ್ ಮುಖಾಂತರ) ಎಂಬಿಬಿಎಸ್, ಬಿಡಿಎಸ್, ಬಿ.ಇ/ಬಿಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲ ನೀಡಲಾಗುತ್ತದೆ. ಸಿಇಟಿ/ನೀಟ್ ಮೂಲಕ ಪ್ರವೇಶ ಪಡೆಯ ಬಯಸುವ ವಿದ್ಯಾರ್ಥಿಗಳಿಗೆ “ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್ ಸೈಟ್ https://kmdconline.karnataka.gov.in/ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿ ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ…

Read More

ಮಡಿಕೇರಿ ಜು.10 NEWS DESK : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಇಬ್ಬರು ಹಾಗೂ ಮತ್ತೋರ್ವ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಕೊಡಗು ಜಿಲ್ಲೆಯ ಕುಟ್ಟ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 12 ಗಂಟೆಯೊಳಗೆ ಪ್ರಕರಣದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ನಾಥಂಗಾಲ ನಿವಾಸಿ ನವೀಂದ್ರ(24), ಅಕ್ಷಯ್(27), ಕೇರಳ ರಾಜ್ಯ ತೋಲ್ಪಟ್ಟಿ ನಡುಂದನ ಕಾಲೋನಿ ನಿವಾಸಿಗಳಾದ ರಾಹುಲ್(21), ಮನು(25) ಹಾಗೂ ಸಂದೀಪ್(27) ಬಂಧಿತ ಆರೋಪಗಳಾಗಿದ್ದಾರೆ. ::: ಪ್ರಕರಣ ಹಿನ್ನೆಲೆ ::: ಜು.9ರ ಮಧ್ಯಾಹ್ನ 3.15 ಗಂಟೆಗೆ ಕುಟ್ಟದಿಂದ ನಾಗರಹೊಳೆ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ಹಾಗೂ ಮೂರು ಮಂದಿ ಯುವಕರು ತೆರಳುತ್ತಿದ್ದರು. ಈ ವೇಳೆ ಕುಟ್ಟ ಕಡೆಯಿಂದ ಬರುತ್ತಿದ್ದ ಕಾರನ್ನು ತಡೆದು ಕಾರಿನಲ್ಲಿದ್ದ ಇಬ್ಬರು ಅಪರಿಚಿತರೊಂದಿಗೆ ತಮ್ಮನ್ನು ನಾಗರಹೊಳೆ ಕಡೆ ಬಿಡುವಂತೆ ಕೇಳಿ, ಕಾರಿನಲ್ಲಿ 5 ಮಂದಿ ಪ್ರಯಾಣಿಸಿದ್ದಾರೆ. ಸ್ವಲ್ಪ ದೂರ ತೆರಳಿದ ನಂತರ ರಸ್ತೆ ಬದಿಯ…

Read More

ಮಡಿಕೇರಿ ಜು.10 NEWS DESK : ಸಿದ್ದಾಪುರ ಸಮೀಪದ ಗುಹ್ಯ ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ವ್ಯಾಪಕ ಉಪಟಳ ನೀಡುತ್ತಿದ್ದ ನಾಲ್ಕು ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ನಡೆಯಿತು. ಕಾಡಾನೆಗಳು ಕೃಷಿ ಫಸಲು ನಾಶ ಮಾಡುವುದರೊಂದಿಗೆ, ಮನೆಯಂಗಳದಲ್ಲು ಕಾಣಿಸಿಕೊಂಡು ಹೂ ಕುಂಡಗಳನ್ನು ಕಿತ್ತೆಸೆದು ನಾಶ ಮಾಡುವ ಮೂಲಕ ಬೆಳೆೆಗಾರರಲ್ಲಿ ಆತಂಕ ಮೂಡಿಸಿತ್ತು. ಶಾಲಾ ಮಕ್ಕಳು, ಕಾರ್ಮಿಕರು, ಬೆಳೆಗಾರರು ಗ್ರಾಮ ವ್ಯಾಪ್ತಿಯಲ್ಲಿ ಸಂಚರಿಸಲು ಭಯಪಡುವ ಸ್ಥಿತಿ ನಿರ್ಮಾಣವಾಗಿತ್ತು. ಗ್ರಾಮಸ್ಥರ ಒತ್ತಾಯದ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮಳೆಯ ನಡುವೆ ಕಾರ್ಯಾಚರಣೆ ನಡೆಸಿ ಕಾಡಾನೆಗಳನ್ನು ಕಾಡಿಗಟ್ಟುವ ಪ್ರಯತ್ನ ಮಾಡಿದರು. ಅರಣ್ಯ ಇಲಾಖೆಯ ಆರ್‌ಆರ್‌ಟಿ ತಂಡದ ಅಚ್ಚಯ್ಯ, ವಿನೋದ್, ಪ್ರವೀಣ್, ಸಚಿನ್, ವಿನೋದ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ನೆಲ್ಲಿಹುದಿಕೇರಿ ಬೆಟ್ಟದಕಾಡು, ನಲ್ವತ್ತೆಕರೆ, ವಾಲ್ನೂರು, ಅತ್ತಿಮಂಗಲ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲೂ ಕಾಡಾನೆಗಳ ಹಿಂಡು ಕೃಷಿ ಫಸಲನ್ನು ತಿಂದು ಧ್ವಂಸಗೊಳಿಸಿದೆ. ಅರಣ್ಯ ಇಲಾಖೆ ಎಷ್ಟೇ ಕಾರ್ಯಾಚರಣೆ ನಡೆಸಿದರೂ ಕಾಡಾನೆಗಳ ಹಿಂಡು ತೋಟಗಳಲ್ಲಿಯೇ ಆಶ್ರಯ ಪಡೆದುಕೊಳ್ಳುತ್ತಿವೆ. ಈ…

Read More

ಮಡಿಕೇರಿ ಜು.10 NEWS DESK : ಸರ್ಕಾರದ ಯೋಜನೆಯ ಯಶಸ್ವಿ ಅನುಷ್ಠಾನದಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮಸಭೆ ಅತ್ಯವಶ್ಯಕ ಎಂದು ಕೊಡಗು ಜಿ.ಪಂ. ಉಪ ಕಾರ್ಯದರ್ಶಿ ಧನರಾಜು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಾಮಾಜಿಕ ಪರಿಶೋಧನೆ ಗ್ರಾಮಸಭೆಯ ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಅನುಷ್ಠಾನ ಗೊಳಿಸಿದೆ. ಇಂತಹ ಯೋಜನೆಗಳು ಮತ್ತು ಅದಕ್ಕೆ ವಿನಿಯೋಗಿಸಿದ ಹಣವು ಸೂಕ್ತವಾಗಿ ಬಳಕೆಯಾಗಿರುವ ಬಗ್ಗೆ ಪರಿಶೀಲಿಸಿ ಮಾಹಿತಿ ನೀಡುವುದು ಸಾಮಾಜಿಕ ಪರಿಶೋಧನೆಯ ಆದ್ಯ ಕರ್ತವ್ಯವಾಗಿದೆ. ಇಂತಹ ವರದಿಗಳನ್ನು ಗ್ರಾಮಸಭೆಯ ಮೂಲಕ ಪರಿಶೀಲಿಸುವುದು ತಾಲೂಕು ನೋಡಲ್ ಅಧಿಕಾರಿಗಳ ಕರ್ತವ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಸಾಮಾಜಿಕ ಗ್ರಾಮಸಭೆಯನ್ನು ಕೈಗೊಳ್ಳುವ ಬಗೆ ಮತ್ತು ವರದಿಗಳನ್ನು ಪರಿಶೀಲಿಸುವ ಕುರಿತು ತರಬೇತಿ ಹಮ್ಮಿಕೊಂಡಿದ್ದು, ಇದರ ಉಪಯೋಗವನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲ್ಪಟ್ಟ ತಾಲೂಕು ಮಟ್ಟದ ಅಧಿಕಾರಿಗಳು ಪಡೆದುಕೊಳ್ಳಬೇಕು ಎಂದರು. ಇದೇ ವೇಳೆ 15 ನೇ ಹಣಕಾಸು ಯೋಜನೆಯ ಬಗ್ಗೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ, ಮಹಾತ್ಮಗಾಂಧಿ…

Read More

ಮಡಿಕೇರಿ ಜು.10 NEWS DESK : ಮದೆ ಮಹೇಶ್ವರ ವಿದ್ಯಾಸಂಸ್ಥೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು. ಕಾಲೇಜಿನ ಹಳೆಯ ವಿದ್ಯಾರ್ಥಿ, ಮಡಿಕೇರಿ ನಗರದ ನಿವಾಸಿ, ಪ್ರಸ್ತುತ ಕುಟುಂಬ ಸಮೇತರಾಗಿ ದುಬೈಯಲ್ಲಿ ನೆಲೆಸಿರುವ ಹ್ಯಾರಿಸ್ ಅವರು ನೀಡಿರುವ ಸಮವಸ್ತ್ರಗಳನ್ನು ಮದೆ ಮಹೇಶ್ವರ ವಿದ್ಯಾಸಂಘದ ಅಧ್ಯಕ್ಷ ಹುದೇರಿ ರಾಜೇಂದ್ರ, ಪ್ರಮುಖರಾದ ಉಣ್ಣಿಕೃಷ್ಣ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿದರು. ವಿದ್ಯಾರ್ಥಿಗಳಿಗೆ ಸಮವಸ್ತ್ರದಂತೆ ಸಮಯ ಪಾಲನೆ, ಶಿಸ್ತು ಮತ್ತು ಓದು ಬರಹದಲ್ಲಿ ಹೆಚ್ಚಿನ ಆಸಕ್ತಿಯನ್ನು ವಹಿಸಿ ಮುಂದೆ ತಂದೆ ತಾಯಿಯರಿಗೆ ಮತ್ತು ಊರಿಗೆ ಕೀರ್ತಿಯನ್ನು ತರಬೇಕು ಎಂದು ಕಿವಿಮಾತು ಹೇಳಿದರು. ಕನ್ನಡ ಉಪನ್ಯಾಸಕ ಶ್ರೀನಿವಾಸ್, ಆಂಗ್ಲ ಭಾಷಾ ಉಪನ್ಯಾಸಕ ಹೇಮಂತ್ ಇದ್ದರು. ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು ಬೆಳ್ಳಯ್ಯ ಸ್ವಾಗತಿಸಿದರು. ಉಪನ್ಯಾಸಕಿ ಯೋಗಿತಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಪರಶುರಾಮಪ್ಪ ವಂದಿಸಿದರು.   

Read More

ಮಡಿಕೇರಿ ಜು.10 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002ರ ನ.4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡಿದೆ. ಈ ಸಂಸ್ಥೆ ಮೂಲಕ ‘ಸಾಂತ್ವನ ಮಹಿಳಾ ಸಹಾಯವಾಣಿ’ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5182 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5168 ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. 2024-25ನೇ ಆರ್ಥಿಕ ಸಾಲಿನಲ್ಲಿ 65 ಪ್ರಕರಣಗಳು ದಾಖಲಾಗಿ 54 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 14 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ.55 ಸಾವಿರ ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2024-25 ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ. ಆ ದಿಸೆಯಲ್ಲಿ ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು…

Read More

ಮಡಿಕೇರಿ ಜು.10 NEWS DESK : ಕೊಡಗು ಜಿಲ್ಲೆಯಲ್ಲಿ ವಾಸಿಸುತ್ತಿರುವ ಯರವರನ್ನು ಗುಲಾಮಗಿರಿಯಿಂದ ಮುಕ್ತಗೊಳಿಸಿ ಸ್ವತಂತ್ರವಾಗಿ ಕೃಷಿ ಮಾಡಿಕೊಂಡು ಜೀವನ ಸಾಗಿಸಲು ಜಮೀನು ನೀಡುವಂತೆ ಒತ್ತಾಯಿಸಿ ಕಳೆದ 20 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಹೋರಾಟ ಫಲ ನೀಡದ ಕಾರಣ ಸ್ವಾತಂತ್ರ್ಯ ದಿನವಾದ ಆ.15 ರಂದು ಜಿಲ್ಲಾ ನ್ಯಾಯಾಲಯದ ಎದುರು ಅರೆಬೆತ್ತಲೆ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿರುವುದಾಗಿ ಯರವ ಯುವ ಒಕ್ಕೂಟದ ಗೌರವಾಧ್ಯಕ್ಷ ಪಿ.ಎಸ್.ಮುತ್ತ ತಿಳಿಸಿದ್ದಾರೆ. “ಯರವರಿಗೆ ಬದುಕಲು ಭೂಮಿ ಕೊಡಿ” ಎಂದು 2003 ರಿಂದ ನಿರಂತರ ಹೋರಾಟ ನಡೆಸುತ್ತಾ ಬಂದಿದ್ದರೂ ಜಿಲ್ಲಾಡಳಿತ ಯಾವುದೇ ಸ್ಪಂದನೆ ನೀಡಿಲ್ಲವೆಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ. 2015ರ ಆ.15 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಅರೆಬೆತ್ತಲೆ ಸತ್ಯಾಗ್ರಹ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಅಂದಿನ ಜಿಲ್ಲಾಡಳಿತ “ಯರವರ” ಸಮೀಕ್ಷೆ ನಡೆಸಿ ಸುಮಾರು 11 ಸಾವಿರ ಕುಟುಂಬಗಳು ತೋಟದ ಲೈನ್‍ಗಳಲ್ಲಿ ನೆಲೆಸಿ ಜೀವನ ನಡೆಸುತ್ತಿದ್ದಾರೆ. ಅವರಿಗೆ ಪುನರ್‍ವಸತಿ ಕಲ್ಪಿಸಬೇಕು ಎಂದು ವರದಿ ನೀಡಿತ್ತು. ಆದರೆ, ಇಲ್ಲಿಯವರೆಗೆ ಯಾವುದೇ…

Read More

ಮಡಿಕೇರಿ ಜು.10 NEWS DESK : ಮಣ್ಣಿನ ರಕ್ಷಣೆಯ ಮೂಲಕ ಉತ್ತಮ ಗುಣಮಟ್ಟದ ಅಭಿವೃದ್ಧಿಯೊಂದಿಗೆ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಪಡೆಯುವಲ್ಲಿ ಸುಸ್ಥಿರ ಕೃಷಿಪದ್ಧತಿಯನ್ನು ಕಾಫಿ ಉತ್ಪಾದನೆಯಲ್ಲಿ ಅಳವಡಿಕೊಳ್ಳುವ ಮೂಲಕ ಅಭಿವೃದ್ಧಿ ಪಡಿಸಬೇಕೆಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ.ಅಶೋಕ್ ಎಸ್.ಆಲೂರ ತಿಳಿಸಿದರು. ಚೆಟ್ಟಳ್ಳಿಯ ಕಾಫಿ ಉಪ ಸಂಶೋಧನಾ ಕೇಂದ್ರದಲ್ಲಿ ಕಾಫಿಮಂಡಳಿ ಹಾಗೂ ಸುಡಾನ್ ಕಾಫಿ ಪೈ.ಲಿ. ಸಹಯೋಗದಲ್ಲಿ ಆಯೋಜಿಸಿದ ಕಾಫಿ ಅಭಿವೃದ್ಧಿ ಯೋಜನೆ ಅಡಿ ಕೊಡಗಿನ ಪ್ರದೇಶದ ಕಾಫಿ ಬೆಳೆಗಾರರಿಗೆ ಸುಸ್ಥಿರ ಕಾಫಿ ಉತ್ಪಾದನೆಗೆ ಉತ್ತಮ ಕೃಷಿಪದ್ಧತಿಗಳ ಸಾಮಥ್ರ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸಣ್ಣ ಹಾಗೂ ಅತೀ ಸಣ್ಣ ಬೆಳೆಗಾರರು ಒಟ್ಟಾಗಿ ಕೃಷಿಯಲ್ಲಿ ತೊಡಗಿಸಿಕೊಂಡಾಗ ಮಾತ್ರ ನೂತನ ವೈಜ್ಞಾನಿಕ ಕ್ರಮವನ್ನು ಅನುಸರಿಸಲು ಸಾಧ್ಯ ಎಂದರು. ಕಾಫಿ ಮಂಡಳಿಯ ಸದಸ್ಯರಾದ ಟಿ.ಕೆ.ಕಿಶೋರ್ ಕುಮಾರ್ ಮಾತನಾಡಿ, ಕಾಫಿ ತೋಟಗಳಲ್ಲಿ ಉತ್ತಮ ತಳಿಯ ಗಿಡಗಳನ್ನು ಬೆಳೆಸುವ ಮೂಲಕ ಹೆಚ್ಚಿನ ಇಳಿವರಿ ಸಾಧ್ಯ, ಚೆಟ್ಟಳ್ಳಿ ಕಾಫಿ ಸಂಶೋಧನಾ ಕೇಂದ್ರದಲ್ಲಿ ಉತ್ತಮ ಇಳುವರಿ ನೀಡುವ ಕಾಫಿ ಗಿಡಗಳನ್ನು…

Read More

ಮಡಿಕೇರಿ ಜು.10 NEWS DESK : ಬುದ್ಧ ಪ್ರತಿಷ್ಠಾನ ಕೊಡಗು ಶಾಖೆ ವತಿಯಿಂದ 102ನೇ ವಕೀಲರ ದಿನದ ಅಂಗವಾಗಿ ಜು.13 ರಂದು ವಕೀಲರಿಗೆ ಗೌರವ ಸಮರ್ಪಣೆ ಮತ್ತು ಬುದ್ಧ ಪೂರ್ಣಿಮೆ ಅಂಗವಾಗಿ ಶಕ್ತಿ ವೃದ್ಧಾಶ್ರಮದ ಮಾತೃಪಿತೃಗಳಿಗೆ ವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಲಿದೆ ಬುದ್ಧ ಪ್ರತಿಷ್ಠಾನದ ಜಿಲ್ಲಾ ಧಮ್ಮಾಚಾರಿ ಹೆಚ್.ಪಿ.ಶಿವಕುಮಾರ್ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿಯ ಶಕ್ತಿ ವೃದ್ಧಾಶ್ರಮದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ವಕೀಲರ ಸಂಘದ ಜಿಲ್ಲಾಧ್ಯಕ್ಷ ಎಂ.ಎ.ನಿರಂಜನ್ ಉದ್ಘಾಟಿಸಲಿದ್ದು, ಮುಖ್ಯ ಭಾಷಣಕಾರರಾಗಿ ವಕೀಲ ಕೆ.ಆರ್.ವಿದ್ಯಾಧರ್ ಪಾಲ್ಗೊಳ್ಳಲಿದ್ದಾರೆ. ಅತಿಥಿಗಳಾಗಿ ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಕಾವೇರಿ ಮಹಾ ಆರತಿ ಬಳಗದ ಸಂಚಾಲಕರಾದ ವನಿತ ಚಂದ್ರಮೋಹನ್, ಸೋಮವಾರಪೇಟೆ ವಕೀಲರಾದ ಬಿ.ಇ.ಜಯೇಂದ್ರ, ಮಡಿಕೇರಿ ಅಡ್ವೊಕೇಟ್ ನಾಗೇಶ್‍ಕುಮಾರ್, ಕುಶಾಲನಗರ ಪುರಸಭೆಯ ನೂತನ ಕಾನೂನು ಸಲಹೆಗಾರ ಕೆ.ಸಿ.ಶಿವಮೂರ್ತಿ, ಕುಶಾಲನಗರ ಎಪಿಪಿ ಹೆಚ್.ಎನ್.ಜಾನಕಿ, ವಕೀಲರಾದ ದಿವ್ಯ ನಂಜಪ್ಪ, ಜೆ.ಆರ್.ತುಳಸಿ, ವಿರಾಜಪೇಟೆ ಕ.ದ.ಸಂ.ಸ.ರಾಜ್ಯ ಸಮಿತಿ ಸದಸ್ಯ ಪಳನಿ ಪ್ರಕಾಶ್, ಶಕ್ತಿವೃದ್ಧಾಶ್ರಮದ ವ್ಯವಸ್ಥಾಪಕ ಸತೀಶ್, ಬುದ್ಧ ಪ್ರತಿಷ್ಠಾನದ…

Read More

ಮಡಿಕೇರಿ ಜು.10 NEWS DESK : ಬ್ಯಾಂಕಿಂಗ್ ಉದ್ಯೋಗಿಗಳ ಕನ್ನಡ ಕೂಟದ ವತಿಯಿಂದ ಜು.17 ರಂದು ಬ್ಯಾಂಕಿಂಗ್ ಪರೀಕ್ಷೆ ಕುರಿತು ಶಿವಮೊಗ್ಗದಲ್ಲಿ ಮಾಹಿತಿ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ  ಚಂದನ ಸಭಾಂಗಣ, ಕುವೆಂಪು ರಂಗಮಂದಿರದ ಬಳಿ ಕಾರ್ಯಕ್ರಮ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಖ್ಯಾತ ಬ್ಯಾಂಕಿಂಗ್ ಪರೀಕ್ಷೆ ತರಬೇತುದಾರರಾದ ಆರ್.ಕೆ.ಬಾಲಚಂದ್ರ ಪಾಲ್ಗೊಳ್ಳಲಿದ್ದಾರೆ. ಆಸಕ್ತರು ಗೂಗಲ್ ಫಾರ್ಮ್  https://docs.google.com/forms/d/e/1FAIpQLScrjW_gavx-41Gv6bnPCxACn3j2qtqz9GO_rL5biFQdpv5RnQ/viewform?usp=pp_url ತುಂಬುವ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಹರೀಶ್ ಕುಮಾರ್ 9743461647, ಮಂಜುನಾಥ್ – 9742475368, ಸೌಮ್ಯ-9481836251 ಸಂಪರ್ಕಿಸಬಹುದಾಗಿದೆ.

Read More