ಲೇಖಕ: admin

ನವದೆಹಲಿ ಜು.10 NEWS DESK : ಹಾಲಿನ ಟ್ಯಾಂಕರ್ ಗೆ ಹಿಂಬದಿಯಿಂದ ಡಬ್ಬಲ್ ಡೆಕ್ಕರ್ ಬಸ್ ಡಿಕ್ಕಿಯಾದ ಪರಿಣಾಮ ಬಸ್ ನಲ್ಲಿದ್ದ 18 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಲಕ್ನೋ ಆಗ್ರೋ ಎಕ್ಸ್ಪ್ರೆಸ್ ವೇಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮುಂಜಾನೆ 5.15ರ ಸುಮಾರಿಗೆ ಖಾಸಗಿ ಬಸ್ ಬಿಹಾರದ ಮೋತಿಹಾರಿಯಿಂದ ದೆಹಲಿಗೆ ಆಗಮಿಸುತ್ತಿದ್ದ ವೇಳೆ ಉನ್ನಾವೋ ಸಮೀಪ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 18 ಮಂದಿ ಪ್ರಾಣ ಕಳೆದುಕೊಂಡಿದ್ದು, ತೀವ್ರವಾಗಿ ಗಾಯಗೊಂಡಿರುವ 19 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಬಸ್ ನ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಘಟನೆ ಬಗ್ಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಷಾದ ವ್ಯಕ್ತಪಡಿಸಿದ್ದು, ಗಾಯಾಳುಗಳ ಚಿಕಿತ್ಸೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಭೀಕರ ಅಪಘಾತದ ಕುರಿತು ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

Read More

ಬೆಂಗಳೂರು ಜು.10 NEWS DESK : ವಿಶ್ವದ ಕಾಫಿ ಬೆಳೆಯುವ ಅಗ್ರಗಣ್ಯ ರಾಷ್ಟ್ರಗಳಾದ ಬ್ರೆಜಿಲ್‌ ಮತ್ತು ಕೊಲಂಬಿಯಾದಲ್ಲಿ ಜಾರಿಯಲ್ಲಿರುವ ಮಾದರಿಯನ್ನು ಭಾರತದಲ್ಲಿಯೂ ಅಳವಡಿಸಿಕೊಂಡು ಕಾಫಿ ಬೆಳೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಪಾಲುದಾರರನ್ನು ಒಗ್ಗೂಡಿಸುವ ವಿನೂತನ ಪ್ರಯತ್ನಕ್ಕೆ ಕಾಫಿ ಮಂಡಳಿಯು ಕೈ ಹಾಕಿದೆ. ಕಾಫಿ ಬೆಳೆಗಾರರರು, ಸಂಸ್ಕರಣೆದಾರರು, ಸಂಗ್ರಹಕಾರರು, ಮಾರಾಟಗಾರರು, ರೋಸ್ಟರ್ಸ್, ರಾಫ್ತುದಾರರು, ಕೆಫೆ ಚೈನ್ಗಳ ಮಾಲೀಕರನ್ನು ಒಟ್ಟುಗೂಡಿಸಿ ಹೊರ ದೇಶಗಳ ಮಾದರಿಯಲ್ಲಿ ಸ್ಥಳೀಯವಾಗಿಯೇ ಬ್ರ್ಯಾಂಡ್ ಬಿಲ್ಡಿಂಗ್ ಮಾಡಲು ಕಾಫಿ ಮಂಡಳಿಯು ದಿಟ್ಟ ಹೆಜ್ಜೆ ಇಟ್ಟಿದೆ. ಇದರ ಮೊದಲ ಹಂತವಾಗಿ ದೇಶದ ಎಲ್ಲ ಪಾಲುದಾರರಿಗೆ ತಮ್ಮ ಸಲಹೆಗಳನ್ನು ನೀಡಲು ಮಂಡಳಿಯು ಆಹ್ವಾನ ನೀಡಿದ್ದು ಸ್ಥಳಿಯವಾಗಿ ದೊರೆತಿರುವ ಪ್ರೋತ್ಸಾಹದಿಂದಲೇ ಬ್ರೆಜಿಲ್ನ ಕಾಫಿ ವಿಶ್ವದಲ್ಲಿ ತುಂಬಾ ಜನಪ್ರಿಯತೆ ಗಳಿಸಿದೆ. ವಿಶ್ವದ ಅತ್ಯಂತ ದೊಡ್ಡ ಕಾಫಿ ಉತ್ಪಾದಕ ದೇಶವಾದ ಬ್ರೆಜಿಲ್‌ ನಲ್ಲಿ ಅಲ್ಲಿನ ಸರ್ಕಾರ ಅಲ್ಲಿನ ಜನರಿಗೆ ಕಾಫಿಯ ಮಹತ್ವವನ್ನು ಸಾರುವ ವ್ಯಾಪಕ ಪ್ರಚಾರ ನಡೆಸಿ ಅಲ್ಲಿ ಸೇವನೆಯನ್ನು ಮೊದಲು ಹೆಚ್ಚಿಸಲಾಯಿತು. ನಂತರ ಬ್ರೆಜಿಲ್‌ ಕಾಫಿ ವಿದೇಶದಲ್ಲೂ…

Read More

ಕಡಂಗ ಜು.10 NEWS DESK : ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರ 50ನೇ ಹುಟ್ಟುಹಬ್ಬದ ಪ್ರಯುಕ್ತ ನರಿಯಂದಡ ಗ್ರಾ.ಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ಕಡಂಗ, ಅರಪಟ್ಟು, ಪೊದವಾಡ ಗ್ರಾಮದಲ್ಲಿ ನರಿಯಂದಡ ವಲಯ ಅಧ್ಯಕ್ಷರಾದ ಕೋಡಿರ ವಿನೋದ್ ನಾಣ್ಯಯ್ಯ ಅವರ ನೇತೃತ್ವದಲ್ಲಿ ಪಟ್ಟಣದ ರಸ್ತೆ ಬದಿಗಳಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭಗ್ರಾ.ಪಂ ಸದಸ್ಯರಾದ ರಾಣಿ ಗಣಪತಿ, ಕವಿತಾ ಪ್ರಕಾಶ್, ಸಿ.ಇ.ಸುಬೀರ್, ಮೊಹಮ್ಮದ್ ಎಡಪಾಲ, ಪಿ.ಡಿ.ಓ.ಅಶಾಕುಮಾರಿ, ಕಾಂಗ್ರೆಸ್ ಮುಖಾ0ಡರಾದ ಶಾಫಿ ಎಡಪಲಾ, ರಹೀಮ್, ಝಕರಿಯ, ರಾಜಿಕ್, ಸಿದ್ದಿಕ್, ಹಂಝ, ರಜಾಕ್, ಕುಂಜಿ ಅಹಮದ್, ಮುನೀರ್, ಆಸಿಫ್, ರೌಫ್ ಇನ್ನಿತರರು ಪಾಲ್ಗೊಂಡಿದ್ದರು. ವರದಿ : ನೌಫಲ್ ಕಡಂಗ   

Read More

ಕುಶಾಲನಗರ ಜು.10 NEWS DESK : ಅಪೇಕ್ಷಿತ ಪ್ರಮಾಣದಲ್ಲಿ ಸಮಾಜ ಸೇವೆಯ ಕೊರತೆ ಎದ್ದು ಕಾಣುತ್ತಿದೆ ಎಂದು ಹಿಂದು ಜನಜಾಗೃತಿ ಸಮಿತಿಯ ಪ್ರಮುಖರಾದ ಶ್ರೀನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ದೇವಾಲಯಗಳ ಒಕ್ಕೂಟ ಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿಯೊಬ್ಬರೂ ಆಧ್ಯಾತ್ಮಿಕ ಹಾಗೂ ವ್ಯವಹಾರಿಕ ಶಿಕ್ಷಣ ಸಿದ್ದಾಂತಗಳ ಪಾಲನೆ ಮಾಡಬೇಕಾಗಿದೆ, ನಾಮ ಜಪ ಮೂಲಕ ಭಗವಂತನ ಅನುಗ್ರಹ ಸಾಧ್ಯ ಎಂದರು. ಆಧ್ಯಾತ್ಮಿಕ ಸಾಧನೆ ಮೂಲಕ ಆನಂದ ಹಾಗೂ ತೃಪ್ತಿ ದೊರೆಯುತ್ತದೆ ಎಂದು ಹೇಳಿದರು. ಗುರು ಪೂರ್ಣಿಮಾ ಮಹತ್ವದ ಬಗ್ಗೆ ಮಾತನಾಡಿದ ಅವರು ಈ ತಿಂಗಳ 21ರಂದು ಕುಶಾಲನಗರ ಗೌಡ ಸಮಾಜ ಸಭಾಂಗಣದಲ್ಲಿ ನಡೆಯುವ ಗುರು ಪೂರ್ಣಿಮಾ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಶಾಲನಗರ ದೇವಾಲಯ ಒಕ್ಕೂಟದ ಅಧ್ಯಕ್ಷ ಎಂ.ಕೆ.ದಿನೇಶ್ ದೇವಾಲಯಗಳ ಒಕ್ಕೂಟದ ಮಹತ್ವದ ಬಗ್ಗೆ ಮಾಹಿತಿ ತಿಳಿಸಿದರು. ಕಳೆದ ಏಳು ವರ್ಷಗಳಿಂದ ನಿರಂತರವಾಗಿ ಒಕ್ಕೂಟದ ಮೂಲಕ ಮಾಡಿರುವ ಕಾರ್ಯ ಸಾಧನೆಗಳ ಬಗ್ಗೆ ತಿಳಿಸಿದರು. ಒಕ್ಕೂಟದ ಮೂಲಕ…

Read More

ಮಡಿಕೇರಿ ಜು.10 NEWS DESK : ಸಾರ್ವಜನಿಕರ ಕುಂದುಕೊರತೆಯನ್ನು ಶೀಘ್ರ ಪರಿಹರಿಸುವಲ್ಲಿ ಆಯಾಯ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆ ನಿಟ್ಟಿನಲ್ಲಿ ಈ ಬಾರಿ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಾಸಕರಾದ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಜುಲೈ 13 ರಂದು ಬೆಳಗ್ಗೆ 10 ಗಂಟೆಗೆ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ‘ಜನಸ್ಪಂದನ ಸಭೆ’ ನಡೆಯಲಿದೆ. ಸಾರ್ವಜನಿಕರು ಈ ಅವಕಾಶ ಬಳಸಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಕೋರಿದ್ದಾರೆ.

Read More

ಮಡಿಕೇರಿ ಜು.9 NEWS DESK : ಕೊಡಗು ಜಿಲ್ಲೆಯನ್ನು ಕಾಡುತ್ತಿರುವ ಕಾಡಾನೆಗಳ ಉಪಟಳ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ರ‍್ಯಾಪಿಡ್ ರ‍್ಯಾಸ್ಪನ್ಸ್ ತಂಡಕ್ಕೆ ಮತ್ತಷ್ಟು ಬಲ ತುಂಬಲಾಗುವುದು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಭರವಸೆ ನೀಡಿದ್ದಾರೆ. ತಮ್ಮ 50ನೇ ಜನ್ಮ ದಿನದ ಪ್ರಯುಕ್ತ ಇಂದು ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಡಾನೆ ಮತ್ತು ಮಾನವ ಸಂಘರ್ಷ ತಪ್ಪಿಸುವಲ್ಲಿ ಹಲವು ಕಾರ್ಯಕ್ರಮ ರೂಪಿಸಲಾಗಿದೆ. ಆ ನಿಟ್ಟಿನಲ್ಲಿ ರೈಲ್ವೆ ಬ್ಯಾರಿಕೇಡ್‌ಗಳ ನಿರ್ಮಾಣ ಮಾಡಲಾಗುವುದು. ರ‍್ಯಾಪಿಡ್ ರ‍್ಯಾಸ್ಪನ್ಸ್ ತಂಡವನ್ನು ಮತ್ತಷ್ಟು ಬಲಪಡಿಸಲಾಗುವುದು, ಈ ಸಂಬಂಧ ಅರಣ್ಯ ಸಚಿವರ ಜತೆಗೂ ಚರ್ಚಿಸಲಾಗಿದೆ ಎಂದು ಪೊನ್ನಣ್ಣ ಹೇಳಿದರು. ನಾಡಿನಲ್ಲಿ ಉತ್ತಮ ಮಳೆ ಆಗುತ್ತಿದ್ದು, ಎಲ್ಲರಲ್ಲಿ ಸಂತಸ, ಸಮೃದ್ಧಿ ತರುವಂತಾಗಲಿ ಎಂದು ಪ್ರಾರ್ಥಿಸಲಾಗಿದೆ. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದ ಮನೆ, ರಸ್ತೆ, ಸೇತುವೆ ಹಾನಿ ಬಗ್ಗೆ ಮುಖ್ಯಮಂತ್ರಿ…

Read More

ಮಡಿಕೇರಿ ಜು.9 NEWS DESK : ಚಿರತೆ ದಾಳಿಗೆ ಒಂದೂವರೆ ವರ್ಷದ ಕರು ಬಲಿಯಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮದ ಹಾಡಿಯೊಂದರ ಬಳಿ ನಡೆದಿದೆ. ಹಾಡಿಯ ನಿವಾಸಿ ಜಯ ಎಂಬುವವರಿಗೆ ಸೇರಿದ ಕರು ಮನೆಯ ಸಮೀಪ ಮೇಯುತ್ತಿದ್ದಾಗ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ಇದರಿಂದ ಹಾಡಿಯ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ. ವಿಷಯವರಿತ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಆರ್‌ಆರ್‌ಟಿ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿರತೆಯ ಚಲನವಲನ ಪತ್ತೆ ಮಾಡಲು ಕ್ಯಾಮರಾಗಳನ್ನು ಅಳವಡಿಸಲಾಗಿದೆ.

Read More

ಮಡಿಕೇರಿ ಜು.9 NEWS DESK : ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿ ಹಾಗೂ ಪವಿತ್ರ ಕ್ಷೇತ್ರ ಶ್ರೀಭಗಂಡೇಶ್ವರ ದೇವಾಲಯಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಮತ್ತು ಕುಟುಂಬದವರು ಮಂಗಳವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಎ.ಎಸ್.ಪೊನ್ನಣ್ಣ ಅವರ 50 ನೇ ಜನ್ಮ ದಿನದ ಪ್ರಯುಕ್ತ ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು. ಬಳಿಕ ಮಹಾ ಗಣಪತಿ ದೇವಾಲಯದಲ್ಲಿ ಪೂಜೆ, ನಂತರ ಶ್ರೀಭಗಂಡೇಶ್ವರ ದೇವಾಲಯದ ಆವರಣದಲ್ಲಿ ವಿಶೇಷ ಪ್ರಾರ್ಥನೆ, ನಂತರ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಾಡಿನಲ್ಲಿ ಮತ್ತಷ್ಟು ಮಳೆ ಬೆಳೆಯಾಗಿ ಕೃಷಿಕರು ಸೇರಿದಂತೆ ಎಲ್ಲರಲ್ಲಿ ಸಮೃದ್ಧಿ, ಸಂತಸ ತರುವಂತಾಗಲಿ ಎಂದು ಪ್ರಾರ್ಥಿಸಿದರು. ಬಳಿಕ ಶ್ರೀಮಹಾವಿಷ್ಣು ದೇವರಲ್ಲಿ ಪೂಜೆ ಸಲ್ಲಿಸಿದ ನಂತರ ಸುಬ್ರಮಣ್ಯ ದೇವರಲ್ಲಿ ಪ್ರಾರ್ಥಿಸಿ ಕಲ್ಲುಸಕ್ಕರೆಯ ತುಲಾಭಾರ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದೇವಂಗೋಡಿ ಹರ್ಷ ಅವರು ಬಡವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕರು ಕೈಲಾದ ಸಹಾಯ ಹಾಗೂ ಸಹಕಾರ…

Read More

ಕುಶಾಲನಗರ ಜು.9 NEWS DESK : ಯಾವುದೇ ಸಮಸ್ಯೆಗಳನ್ನು ಹೆಚ್ಚಾಗಿ ಪ್ರತಿಬಿಂಬಿಸುವುದಕ್ಕಿಂತ ಅವುಗಳ ಪರಿಹಾರದ ಕಡೆಗೆ ಹೆಚ್ಚು ಆದ್ಯತೆ ಕೊಡುವ ವರದಿಗಳನ್ನು ಮಾಡುವುದು ಹೆಚ್ಚು ಸಮಾಜಮುಖಿಯಾದ ಕೆಲಸವಾಗುತ್ತದೆ ಎಂದು ಕೊಡಗು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕ ಹಾಗೂ ಕೊಡಗು ವಿಶ್ವ ವಿದ್ಯಾಲಯದ ಆಶ್ರಯದಲ್ಲಿ ವಿಶ್ವ ವಿದ್ಯಾಲಯದ ಜ್ಞಾನ ಕಾವೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆ ಹಾಗೂ ಜ್ಞಾನಗಂಗಾ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ನಾಲ್ಕು ಆಧಾರಗಳೆನಿಸಿದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾ ರಂಗಗಳು ಸಮಾಜಮುಖಿಯಾಗಿ ಕೆಲಸ ಮಾಡಬೇಕು. ವಿಶೇಷವಾಗಿ ಪತ್ರಿಕಾ ರಂಗ ಸಮಾಜದ ಆಗು ಹೋಗುಗಳನ್ನು ವಿಭಿನ್ನತೆಯಿಂದ ನೋಡಿ ಸ್ಪಷ್ಟತೆಯಿಂದ ವರದಿ ಮಾಡಬೇಕೆಂದು ಸಲಹೆ ನೀಡಿದರು. ಕೊಡಗಿನ ಪತ್ರಕರ್ತರು ಪ್ರಮಾಣಿಕತೆ ಅಧ್ಯಯನಶೀಲತೆ ಮತ್ತು ಸ್ಪಷ್ಟತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಮುಂಬರುವ ದಿನಗಳಲ್ಲೂ ಈ ಪರಂಪರೆ ಮುಂದುವರೆಯಲಿ ಎಂದು ಆಶಿಸಿ, ಕೊಡಗು ವಿಶ್ವ…

Read More

ಮಡಿಕೇರಿ ಜು.9 NEWS DESK  : ಕಾಡಾನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೇವರಕಾಡು ಪೈಸಾರಿಯಲ್ಲಿ ನಡೆದಿದೆ. ಗ್ರಾಮದ ಗೌರಿ (65) ಮೃತ ಮಹಿಳೆ. ಸಂಜೆ ಎಂದಿನಂತೆ ಕೂಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ಸ್ಥಳಕ್ಕೆ ತಿತಿಮತಿ ಎಸಿಎಫ್ ಗೋಪಾಲ್, ಆರ್‍ಎಫ್‍ಓ ಗಂಗಾಶಧರ್ ಸೇರಿದಂತೆ ಸಿಬ್ಬಂದಿಗಳು ಹಾಗೂ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಕಾರ್ಯದರ್ಶಿ ಎ.ಜೆ.ಬಾಬು, ದೇವಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಬಸಂತ್ ಕುಮಾರ್, ತಿತಿಮತಿ ಗ್ರಾ.ಪಂ ಸದಸ್ಯ ಅಪ್ರೋಸ್ ಭೇಟಿ ನೀಡಿ ಪರಿಶೀಲಿಸಿದ್ದು, ಮೃತದೇಹವನ್ನು ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿ ಗೋಣಿಕೊಪ್ಪ ಠಾಣಾಧಿಕಾರಿ ರೂಪಾದೇವಿ ಬೀರಾದರ್, ವೃತ್ತ ನಿರೀಕ್ಷಕ ಶಿವರಾಜ್ ಮುಧೋಳ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.   

Read More