ಮಡಿಕೇರಿ ಜು.9 NEWS DESK : ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಹೆಚ್ಚುಗೊಳಿಸುವ ಮೂಲಕ ಪರಿಷತ್ತನ್ನು ಗಟ್ಟಿಗೊಳಿಸಬೇಕಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಅದಕ್ಕಾಗಿ ಈಗಾಗಲೇ ಎಲ್ಲಾ ಕಾರ್ಯಕಾರಿ ಮಂಡಳಿಯ ಸದಸ್ಯರು, ತಾಲೂಕು ಅಧ್ಯಕ್ಷರುಗಳು, ಹೋಬಳಿ ಅಧ್ಯಕ್ಷರುಗಳು, ಶ್ರಮ ಪಡುತ್ತಿದ್ದು ಒಂದು ಸಾವಿರಕ್ಕೂ ಹೆಚ್ಚು ಸದಸ್ಯತ್ವ ನೋಂದಾಯಿಸಲಾಗಿದೆ. ಈ ವರ್ಷದ ಕೊನೆಯೊಳಗಾಗಿ 10,000 ಸದಸ್ಯರನ್ನು ಹೊಂದುವ ಗುರಿ ಹೊಂದಿದ್ದು ಎಲ್ಲರೂ ಸಹಕರಿಸಬೇಕು ಎಂದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಪರಿಷತ್ತಿನ ಕಾರ್ಯಕಾರಿ ಮಂಡಳಿಯ ಎಲ್ಲಾ ಸದಸ್ಯರುಗಳು ಒಂದಾಗಿ ಎಲ್ಲಾ ಶಾಲೆ ಕಾಲೇಜುಗಳನ್ನು ಭೇಟಿಯಾಗಿ ಸದಸ್ಯತ್ವವನ್ನು ಅಭಿಯಾನದ ರೀತಿಯಲ್ಲಿ ತೊಡಗಿಸಿಕೊಂಡು ಕಾರ್ಯ ನಿರ್ವಹಿಸಬೇಕು. ಪರಿಷತ್ತಿನಲ್ಲಿ ಈ ವರ್ಷ 35 ದತ್ತಿನಿಧಿ ಕಾರ್ಯಕ್ರಮಗಳಿದ್ದು ಅವನ್ನು ಶಾಲಾ ಕಾಲೇಜುಗಳಲ್ಲಿ ನಡೆಸುವ ಮೂಲಕ ಕನ್ನಡ ನಾಡು…
ಲೇಖಕ: admin
ಮಡಿಕೇರಿ ಜು.9 NEWS DESK : ಶ್ರೀ ರಾಜೇಶ್ವರಿ ವಿದ್ಯಾಲಯ ವತಿಯಿಂದ ನಡೆದ ಎಸ್.ಆರ್.ವಿ ಹೊನಲು ಬೆಳಕಿನ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಟೀಮ್ ಬ್ರದರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಟೀಮ್ ಭಗವತಿ ರನ್ನರ್ಸ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ತೃತೀಯ ಹಾಗೂ ನಾಲ್ಕನೇ ಸ್ಥಾನವನ್ನು ಟೀಮ್ ಒನ್ ಟಚ್ ಮತ್ತು ವೈಲ್ಡ್ ಮಾಸ್ಟರ್ಸ್ ತಂಡ ಪಡೆದು ಕೊಂಡಿತು. ನಗರದ ಗಾಂಧಿ ಮೈದಾನದಲ್ಲಿ ನಡೆದ ಹೊನಲು ಬೆಳಕಿನ ಪಂದ್ಯಾವಳಿಯಲ್ಲಿ ಒಟ್ಟು ಹತ್ತು ತಂಡಗಳು ಚಾಂಪಿಯನ್ ಟ್ರೋಫಿಗಾಗಿ ಸೆಣಸಾಡಿದವು. ಇದಕ್ಕೂ ಮೊದಲು ನಡೆದ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಟೀಮ್ ಬ್ರದರ್ಸ್ ತಂಡವು ಟೀಮ್ ಒನ್ ಟಚ್ ವಿರುದ್ಧ ಪೆನಲ್ಟಿಯಲ್ಲಿ 1-0 ಜಯ ಸಾಧಿಸಿ ನೇರವಾಗಿ ಫೈನಲ್ ಗೆ ಅರ್ಹತೆ ಪಡೆದುಕೊಂಡಿತು. ಟೀಮ್ ಭಗವತಿ ಹಾಗೂ ವೈಲ್ಡ್ ಮಾಸ್ಟರ್ಸ್ ತಂಡದ ನಡುವೆ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಟೀಮ್ ಭಗವತಿ ತಂಡವು ಪೆನಲ್ಟಿ ಶೂಟ್ ಔಟ್ ನಲ್ಲಿ 8-7 ರ ಜಯ ಪಡೆದು ಕ್ವಾಲಿಫಯರ್‍ಗೆ ಲಗ್ಗೆ ಇಟ್ಟಿತು.…
ಮಡಿಕೇರಿ ಜು.9 NEWS DESK : ಬಿಳಿಗೇರಿ ಪ್ಲಾಂಟರ್ಸ್ ಕ್ಲಬ್ ವತಿಯಿಂದ ಜು.13 ಮತ್ತು 14 ರಂದು 4ನೇ ವರ್ಷದ ‘ಹಿಂದೂ ಕೆಸರುಗದ್ದೆ ಕ್ರೀಡಾಕೂಟ’ ಬಿಳಿಗೇರಿ ಅರ್ವತ್ತೋಕ್ಲು ಗ್ರಾಮದ ತುಂತಜೆ ಕುಟುಂಬಸ್ಥರ ಗದ್ದೆಯಲ್ಲಿ ನಡೆಯಲಿದೆ ಎಂದು ಪ್ಲಾಂಟರ್ಸ್ ಕ್ಲಬ್ ಅಧ್ಯಕ್ಷ ಕೊಡೆಕಲ್ಲು ಅರವಿಂದ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಸರುಗದ್ದೆ ಕ್ರೀಡಾಕೂಟದ ಆರಂಭಿಕ ದಿನವಾದ ಜು.13 ರಂದು ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ದ್ವಿತೀಯ ದಿನದಂದು ವಾಲಿಬಾಲ್, ಓಟದ ಸ್ಪರ್ಧೆ, ಹಗ್ಗಜಗ್ಗಾಟ, ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ (.22 ಮತ್ತು ಟುವೆಲ್ತ್ ಬೋರ್ ವಿಭಾಗಗಳಲ್ಲಿ)ಮೊದಲಾದವು ವಿವಿಧ ವಿಭಾಗಗಳಲ್ಲಿ ನಡೆಯಲಿದೆ ಎಂದರು. ಕಾರ್ಯದರ್ಶಿ ದರ್ಶನ್ ದಂಬೆಕೋಡಿ ಮಾತನಾಡಿ, ಅಂದು ಬೆಳಗ್ಗೆ 9 ಗಂಟೆಗೆ ಆರಂಭಗೊಳ್ಳಲಿರುವ ಕ್ರೀಡಾಕೂಟವನ್ನು ಕೃಷಿಕರಾದ ತುಂತಜೆ ಚಂದ್ರಶೇಖರ್, ತುಂತಜೆ ಜನಾರ್ಧನ, ಮಾಜಿ ಕ್ಯಾಪ್ಟನ್ ತುಂತಜೆ ದಯಾನಂದ, ಅರ್ವತ್ತೋಕ್ಲು ಪೆರಾತ ಕ್ಲಬ್ ಅಧ್ಯಕ್ಷ ಬಾಲಾಡಿ ಪ್ರತಾಪ್, ತುಂತಜ್ಜೆ ರಂಜಿತ್, ತುಂತಜ್ಜೆ ತಿಮ್ಮಯ್ಯ, ತುಂತಜ್ಜೆ ಧರ್ಮಾವತಿ ಹಾಗೂ ಪ್ಲಾಂಟರ್ಸ್ ಕ್ಲಬ್ ಅಧ್ಯಕ್ಷ ಅರವಿಂದ್…
ಮಡಿಕೇರಿ ಜು.9 NEWS DESK : ಭಾರೀ ವಾಹನಗಳ ಸಂಚಾರಕ್ಕೆ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದರೂ ಇಂದಿಗೂ ಗ್ರಾಮೀಣ ರಸ್ತೆಗಳಲ್ಲಿ ಭಾರೀ ವಾಹನಗಳಲ್ಲಿ ಮರಗಳ ಸಾಗಾಟ ನಿರಾತಂಕವಾಗಿ ನಡೆಯುತ್ತಿದೆ. ರಸ್ತೆಗಳು ಸಂಪೂರ್ಣ ಹದಗೆಟ್ಟು ಗ್ರಾಮೀಣರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಡಿಕೇರಿ ತಾಲ್ಲೂಕು ಬಿಳಿಗೇರಿ ಗ್ರಾಮದ ಬೆಳೆಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬೆಳೆಗಾರ ಮಂಞ್ಞೀರ ಉಮೇಶ್ ಅಪ್ಪಣ್ಣ ಮಾತನಾಡಿ, ಮುಂಗಾರಿನ ಅವಧಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದರು ಕುಂಬಳದಾಳು ಗ್ರಾಮ ವ್ಯಾಪ್ತಿಯ ಬಿಳಿಗೇರಿ ರಸ್ತೆಯಲ್ಲಿ ಟಿಪ್ಪರ್‍ಗಳ ಮೂಲಕ ಭಾರೀ ಪ್ರಮಾಣದ ಕಲ್ಲು, ಮಣ್ಣು, ಮರಳು ಸಾಗಾಟವಾಗುತ್ತಿದೆ. ಮತ್ತೊಂದೆಡೆ ಭಾರೀ ವಾಹನಗಳಲ್ಲಿ ಸಿಲ್ವರ್ ಓಕ್ಸ್ ಮತ್ತು ಇತರೆ ಮರಗಳ ಸಾಗಾಟ ನಡೆಯುತ್ತಿದೆ ಎಂದು ಆರೋಪಿಸಿದರು. ಬಿಳಿಗೇರಿ ಗ್ರಾಮಕ್ಕೆ ತೆರಳಲು ಉತ್ತಮವಾಗಿದ್ದ ರಸ್ತೆ ಭಾರೀ ವಾಹನಗಳ ಸಂಚಾರದಿಂದ ಹದಗೆಡಲಾರಂಭಿಸಿದೆ. ಹಲವೆಡೆ ರಸ್ತೆ ಬದಿ ಹಾಳಾಗಿದ್ದರೆ, ವಿವಿಧೆಡೆ ಗುಂಡಿಗಳು ನಿರ್ಮಾಣವಾಗಿದೆ. ಕಡಿದ ಮರಗಳನ್ನು ಎಳೆಯಲು ಜೆಸಿಬಿ ಮತ್ತು ಕ್ರೈನ್‍ಗಳನ್ನು ಬಳಸಲಾಗುತ್ತಿದೆ ಎಂದು ಅಸಮಾಧಾನ…
ಮಡಿಕೇರಿ ಜು.9 NEWS DESK : ಅಪಘಾತ ಅಥವಾ ಆಕಸ್ಮಿಕವಾಗಿ ನಡೆಯಲಾಗದ ಸ್ಥಿತಿಯಲ್ಲಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಯಾವುದೇ ಧರ್ಮದ ಕಡು ಬಡವರಿಗೆ ಅನುಕೂಲವಾಗುವಂತೆ ಮಾನವೀಯ ಸ್ನೇಹಿತರ ಒಕ್ಕೂಟವು (ಶರತ್ತುಗಳಿಗೆ ಒಳಪಟ್ಟು ಎರವಲು ರೂಪದಲ್ಲಿ) ವೀಲ್ ಚೇರ್ (ಗಾಲಿ ಕುರ್ಚಿ)ಸೌಲಭ್ಯವನ್ನು ಉಚಿತವಾಗಿ ನೀಡಲಿದೆ. ಅರ್ಹ ಫಲಾನುಭವಿಗಳು 9900500814, 9964076698 ಸಂಖ್ಯೆಯನ್ನು ಸಂಪರ್ಕಿಸುವಂತೆ ಒಕ್ಕೂಟ ಕೋರಿದೆ.
ಮಡಿಕೇರಿ ಜು.9 NEWS DESK : ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಅಧಿಕಾರಿಗಳು ಸಿದ್ಧರಾಗಿರುವಂತೆ ಮತ್ತು 24 ಗಂಟೆಯೂ ಅಲರ್ಟ್ ಆಗಿರುವಂತೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೇರೆ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಕೊಡಗಿನ ಮಳೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ವಿವಿಧ ಇಲಾಖೆಗಳಿಗೆ ತಿಳಿಸಿದ್ದಾರೆ. ಎನ್‍ಡಿಆರ್‍ಎಫ್, ಕರ್ನಾಟಕ ಸ್ಟೇಟ್ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಅಥಾರಿಟಿ ಹಾಗೂ ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರಿನ ಉನ್ನತ ಅಧಿಕಾರಿಗಳೊಂದಿಗೆ ಶಾಸಕರು ಸಂಪರ್ಕದಲ್ಲಿದ್ದಾರೆ.
ಮಡಿಕೇರಿ ಜು.9 NEWS DESK : ದೃಶ್ಯ ಹಾಗೂ ಛಾಯಾ ಚಿತ್ರೀಕರಣದಲ್ಲಿ ಪರಿಣಿತರಾಗಿರುವ ಪಾಲಿಬೆಟ್ಟದ ಆರ್.ಜಾನ್ ಅವರು ಕರ್ನಾಟಕ ಛಾಯಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ ಹಾಗೂ ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಬೆಂಗಳೂರಿನ ಅರಮನೆ ಮೈದಾನದ “ತ್ರಿಪುರ ವಾಸಿನಿ” ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಟ್ಟದ ಪೋಟೋ ಟುಡೇ ವಸ್ತು ಪ್ರದರ್ಶನದಲ್ಲಿ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದ ಮೈಕಲ್ ಸ್ಟುಡಿಯೋ ಮಾಲೀಕ ಆರ್.ಜಾನ್ ಅವರಿಗೆ ಕರ್ನಾಟಕ ಛಾಯಾ ರತ್ನ ರಾಜ್ಯ ಪ್ರಶಸ್ತಿ ನೀಡಿ ಗಣ್ಯರು ಗೌರವಿಸಿದ್ದಾರೆ. ದಕ್ಷಿಣ ಕೊಡಗಿನಿಂದ ರಾಜ್ಯ ಮಟ್ಟದ ಛಾಯಾ ರತ್ನ ಪ್ರಶಸ್ತಿ ಗೆ ಭಾಜನರಾದ ಜಾನ್ ಅವರನ್ನ ದಕ್ಷಿಣ ಕೊಡಗು ಫೋಟೋಗ್ರಾಫರ್ ಅಸೋಸಿಯೇಷನ್ ಅಧ್ಯಕ್ಷ ರವೀಂದ್ರ ಅಭಿನಂದಿಸಿದ್ದಾರೆ. ಸಮಾರಂಭದಲ್ಲಿ ಉಪಾಧ್ಯಕ್ಷ ಶರತ್, ಕಾರ್ಯದರ್ಶಿ ರಾಮದಾಸ್, ಗೌರವ ಅಧ್ಯಕ್ಷ ದಾಡು ಜೋಸೆಫ್, ಮಾಜಿ ಅಧ್ಯಕ್ಷರುಗಳಾದ ಶಿವಕುಮಾರ್, ಪಾಲಿಬೆಟ್ಟ ಮೈಕಲ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಮಡಿಕೇರಿ ಜು.9 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷೆ ಗೌರು ಎಂ.ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಿತು. ವಿರಾಜಪೇಟೆಯ ಸೇಂಟ್ ಆನ್ಸ್ ಶಾಲೆಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೆಡಿಡಿಎ ಅಧ್ಯಕ್ಷ ಜೋಸೆಫ್ ಸ್ಯಾಮ್ ಪಾಲ್ಗೊಂಡು ಸರ್ಕಾರ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು. ಕಿವುಡರ ಸಂಘಕ್ಕೆ ಅಪಾರ ಸೇವೆಸಲ್ಲಿಸಿದ ಹಿರಿಯ ಸದಸ್ಯ ಪ್ರಕಾಶ್, ರಾಜಮಣಿ ಅವರನ್ನು ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಭೆಯಲ್ಲಿ ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟದ ಜೆ.ವಿ.ಮಹೇಶ್ ವರ್ಮ, ಡಿ.ಡಿ.ಡಬ್ಲ್ಯೂ ಅಧಿಕಾರಿ ಸಿ.ಪ್ರದಾನ್, ಜಿಲ್ಲಾ ಕಾರ್ಯದರ್ಶಿ ರಂಜಿತ್, ಉಪಾಧ್ಯಕ್ಷ ಶಂಕರ ನಾರಾಯಣ, ಖಜಾಂಚಿ ಸುರೇಶ್ ಸೇರಿದಂತೆ ಮತ್ತಿತರ ಸದಸ್ಯರು ಹಾಜರಿದ್ದರು. ವಿರಾಜಪೇಟೆ ತಾಲ್ಲೂಕು ಕಾರ್ಯದರ್ಶಿ ರಂಜಿತ್ ವಾರ್ಷಿಕ ವರದಿಯನ್ನು ಓದಿದರು. ಸುರೇಶ್ ವರ್ಮಾ ನಿರೂಪಿಸಿ, ವಂದಿಸಿದರು.
ಬೆಂಗಳೂರು ಜು.9 NEWS DESK : ರಾಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯ 320 ಕಿ.ಮಿ ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಇದರಿಂದ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು ಎಂದು ಹೇಳಿದರು. ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಕೂಡಾ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಸಿದ್ಧಪಡಿಸಬೇಕು. ಪ್ರವಾಸೋದ್ಯಮ ಮೂಲಸೌಲಭ್ಯಗಳು ಅತ್ಯಂತ ಕಡಿಮೆಯಿದೆ. ಮಧುಗಿರಿಯಲ್ಲಿರುವ ಏಕಶಿಲಾ ಬೆಟ್ಟ ಹಿಂದಿನ ಬಾರಿ ಸರ್ಕಾರ ಇದ್ದಾಗ ಅಭಿವೃದ್ಧಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರೂ, ಇದುವರೆಗೆ ಯಾವುದೇ ಅಭಿವೃದ್ಧಿಯಾಗಿಲ್ಲ, ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಿದರೆ ಮಾತ್ರ ಬಂಡವಾಳ ಹೂಡಿಕೆದಾರರು ಮುಂದೆ…
ಮಡಿಕೇರಿ ಜು.9 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ 50ನೇ ಜನ್ಮ ದಿನಾಚರಣೆಯ ಪ್ರಯುಕ್ತ ಮೇಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಹಾಕತ್ತೂರು ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂ ಮೇಕೇರಿ ಗ್ರಾ.ಪಂ ಹಾಲಿ ಸದಸ್ಯ ಎಂ.ಯು.ಹನೀಫ್ ಮಾತನಾಡಿ ಅಭಿವೃದ್ಧಿ ಕಾರ್ಯಗಳ ಮೂಲಕವೇ ಜನಪ್ರಿಯತೆ ಗಳಿಸಿರುವ ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನವನ್ನು ಅರ್ಥಪೂರ್ಣಗೊಳಿಸುವ ಉದ್ದೇಶದಿಂದ ಸ್ವಚ್ಛತಾ ಶ್ರಮದಾನದ ಮೂಲಕ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು. ಇದೇ ಸಂದರ್ಭ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಜನ್ಮದಿನದ ಸಂಭ್ರಮವನ್ನು ಹಂಚಿಕೊಳ್ಳಲಾಯಿತು. ಪಂಚಾಯಿತಿ ಸದಸ್ಯ ಕೀರ್ತನ್ ಕಾಂಗೀರ, ಕಾಂಗ್ರೆಸ್ ವಲಯ ಕಾರ್ಯದರ್ಶಿ ಎಂ.ಯು.ರಫೀಕ್ ಮತ್ತಿತರರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.






