ಲೇಖಕ: admin

ನಾಪೋಕ್ಲು, NEWS DESK ಸೆ.27: ಸಮೀಪದ ಸಣ್ಣಪುಲಿಕೋಟು ಗ್ರಾಮದ ಐತಿಹಾಸಿಕ ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ವಾರ್ಷಿಕ ಸೋಣ ತಿಂಗಳ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾಲಾಯ ಹರಕೆ ಪೂಜಾ ವಿಧಿ ವಿಧಾನಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು. ದೇವಾಲಯದ ತಕ್ಕರಾದ ದಾಮೋದರ್ ಮಾತನಾಡಿ, “ಸಣ್ಣಪುಲಿಕೋಟುವಿನ ಕಡೋಡಿ ಶ್ರೀ ಮಹಾವಿಷ್ಣು ದೇವಾಲಯವು ಕಡೋಡಿ, ಕುಯ್ಯಮುಡಿ ಕುಟುಂಬಸ್ಥರು ಹಾಗೂ ಊರವರ ಪವಿತ್ರ ಶ್ರದ್ಧಾಭಕ್ತಿಯ ಕೇಂದ್ರವಾಗಿದೆ. ಸೋಣ ತಿಂಗಳಿನ ಒಂದು ತಿಂಗಳ ಕಾಲ ದೇವಾಲಯದಲ್ಲಿ ನಿತ್ಯ ದೀಪ ಬೆಳಗಿಸಿ, ಪೂಜೆ ಸಲ್ಲಿಸಲಾಗುತ್ತದೆ. 30 ದಿನಗಳ ಪೂಜಾ ಕೈಂಕರ್ಯಗಳ ಬಳಿಕ ಭಕ್ತರು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ತಮ್ಮ ಹರಕೆಗಳನ್ನು ತೀರಿಸುವುದು ಇಲ್ಲಿನ ಸಂಪ್ರದಾಯವಾಗಿದೆ” ಎಂದು ತಿಳಿಸಿದರು. ವಾರ್ಷಿಕ ಸೋಣ ತಿಂಗಳ ಕಾಲಾಯ ಹರಕೆ ಪೂಜಾ ವಿಧಿ ವಿಧಾನದಲ್ಲಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಕುಯ್ಯಮುಡಿ ಲವ, ಪದಾಧಿಕಾರಿಗಳು ಹಾಗೂ ಸದಸ್ಯರು, ಕಡೋಡಿ ಕುಟುಂಬಸ್ಥರು ಸೇರಿದಂತೆ ನೂರಾರು ಭಕ್ತಾದಿಗಳು ಭಾಗವಹಿಸಿದ್ದರು. ಭಕ್ತರು ತಮ್ಮ ಭಕ್ತಿ ಅನುಸಾರ ಹರಕೆ ಹಾಗೂ ಕಾಣಿಕೆಗಳನ್ನು ಸಮರ್ಪಿಸಿ ದೇವರ…

Read More

ಸುಂಟಿಕೊಪ್ಪ, NEWS DESK ಸೆ.27: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರು ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡುವುದೇ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್) ಉದ್ದೇಶವಾಗಿದೆ ಎಂದು ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಕೆ.ಪಿ. ಚಂದ್ರ ಹೇಳಿದರು. ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಘಟಕದ ವತಿಯಿಂದ ಆಯೋಜಿಸಿದ್ದ ಎನ್‌ಎಸ್‌ಎಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎನ್‌ಎಸ್‌ಎಸ್ ಯುವಜನರಲ್ಲಿ ನಿಸ್ವಾರ್ಥ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ ಹಾಗೂ ಸಮುದಾಯ ಅಭಿವೃದ್ಧಿಯ ಪ್ರಜ್ಞೆಯನ್ನು ಬೆಳೆಸುವ ಪ್ರಮುಖ ಸಂಸ್ಥೆಯಾಗಿದೆ. ಎನ್‌ಎಸ್‌ಎಸ್ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳು ಸಮಯಪ್ರಜ್ಞೆ, ಶಿಸ್ತು ಹಾಗೂ ಸೇವಾ ಮನೋಭಾವವನ್ನು ಬೆಳೆಸಿಕೊಂಡು ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸಿಕೊಂಡರೆ ಉತ್ತಮ ಸಮಾಜ ಹಾಗೂ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಹೇಳಿದರು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆಶಯದಂತೆ, ಗಾಂಧೀಜಿ ಜನ್ಮ ಶತಾಬ್ದಿ ವರ್ಷವಾದ 1969ರ ಸೆಪ್ಟೆಂಬರ್ 24ರಂದು ರಾಷ್ಟ್ರೀಯ ಸೇವಾ ಯೋಜನೆ ಅಸ್ತಿತ್ವಕ್ಕೆ ಬಂದಿತು. ಇಂದು…

Read More

ಕುಂಜಿಲ, NEWS DESK ಸೆ.27: ಖುತುಬುಲ್ ಆರಿಫೀನ್ ರಾತೀಬ್ ಸಂಘಟನೆಯ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್ ಸೆಪ್ಟೆಂಬರ್ 29ರಂದು ಸಂಜೆ 6 ಗಂಟೆಗೆ ಪಯ್’ನರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಪಯ್’ನರಿ ಮಖಾಮ್ ಝಿಯಾರತ್, ಮುಹಿಯುದ್ದೀನ್ ರಾತೀಬ್, ರಿಫಾಯಿಯ ಕುತ್ತ್ ರಾತೀಬ್ ಹಾಗೂ ದುವಾ ಮಜ್ಲಿಸ್ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕರಿಗೆ ಕಾರ್ಯಕ್ರಮದ ಕುರಿತು ಮಾಹಿತಿ ತಲುಪಿಸುವುದು, ಸಮುದಾಯದ ಜನರನ್ನು ಒಗ್ಗೂಡಿಸುವುದು ಹಾಗೂ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಕಾರ್ಯಕ್ರಮದ ಅಂತ್ಯದಲ್ಲಿ ತಬರ್ರುಖ್ ವಿತರಣೆ ನಡೆಯಲಿದ್ದು, ಮಹಿಳೆಯರಿಗಾಗಿ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Read More

ಮಡಿಕೇರಿ, NEWS DESK ಸೆ.26: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನವು ಶ್ರೀಮಂಗಲದ ಕೃಷ್ಣ ಕನ್ವೆನ್ಷನ್ ಸಭಾಂಗಣದಲ್ಲಿ ಶನಿವಾರ ನಡೆಯಿತು. ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಅಭಿಯಾನದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಹವಾಲು ಹಾಗೂ ಮನವಿಗಳನ್ನು ಸಲ್ಲಿಸಿದರು. ಅರಣ್ಯ, ಕಂದಾಯ, ಭೂ ದಾಖಲೆ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ವಿದ್ಯುತ್, ಬಸ್ ಸಂಪರ್ಕ, ಆರೋಗ್ಯ ಸೇವೆ, ಸಣ್ಣ ನೀರಾವರಿ ಸೇರಿದಂತೆ ವಿವಿಧ ಇಲಾಖೆಗೆ ಸಂಬಂಧಿಸಿದಂತೆ 134ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು. ಅಭಿಯಾನದಲ್ಲಿ ಮಾತನಾಡಿದ ಶಾಸಕ ಎ.ಎಸ್. ಪೊನ್ನಣ್ಣ ಅವರು, ನಿವೇಶನ, ಮನೆ ನಿರ್ಮಾಣ, ವಿದ್ಯುತ್ ಸಂಪರ್ಕ ಸೇರಿದಂತೆ ಹಲವು ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗಿದೆ. ತಂದೆ-ತಾಯಿ ಇಲ್ಲದ ಕುಟುಂಬವೊಂದಕ್ಕೆ ₹1.80 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣಕ್ಕೆ ಸಹಾಯಧನ ಒದಗಿಸಲಾಗಿದೆ. ಇತ್ಯರ್ಥವಾಗದ ಅರ್ಜಿಗಳನ್ನು ಶೀಘ್ರದಲ್ಲಿ ಬಗೆಹರಿಸಲಾಗುವುದು ಎಂದು ತಿಳಿಸಿದರು.…

Read More

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಸೆ.24ರಂದು ಸಂಜೆ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪಾರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಿತು. ಸೆ.25ರಂದು ಬೆಳಿಗ್ಗೆ ಚಂಡಿಕಾ ಹೋಮ, ಮಧ್ಯಾಹ್ನ ಪೂರ್ಣಾಹುತಿ, ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನೆರವೇರಿತು. ಸಂಜೆ ವಾರ್ಷಿಕೋತ್ಸವದ ಅಂಗವಾಗಿ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಟಾವಧಾನ ಸೇವೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಿತು. ಸೆ.26ರಂದು ಗುರು ಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ ಹಾಗೂ ತತ್ವಕಲಶಾಭಿಷೇಕ ನೆರವೇರಿತು. ಮಧ್ಯಾಹ್ನ ಮಹಾಪೂಜೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಿತು. ಬಳಿಕ ನೂರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

Read More

ಮಡಿಕೇರಿ, NEWS DESK ಸೆ.26: ಜಗತ್ತಿಗೆ ಶಾಂತಿಯ ಸಂದೇಶ ಸಾರಿದ ಪ್ರವಾದಿ ಮಹಮ್ಮದ್ ಅವರ ಸರಳ ಜೀವನ ಸಮಾಜಕ್ಕೆ ಆದರ್ಶವಾಗಬೇಕು. ಪ್ರತಿಯೊಬ್ಬರೂ ತಮ್ಮ ಧರ್ಮವನ್ನು ಪ್ರೀತಿಸುತ್ತಾ ಇತರ ಧರ್ಮಗಳನ್ನು ಗೌರವಿಸಬೇಕು ಎಂದು ಶಿಕ್ಷಣ ತಜ್ಞ ರಫೀಕ್ ಮಾಸ್ಟರ್ ಹೇಳಿದರು. ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಈದ್ ಮಿಲಾದ್ ಪ್ರಯುಕ್ತ ಆಯೋಜಿಸಿದ್ದ ‘ಪ್ರವಾದಿ-ಮಾನವ ಕುಲಕ್ಕೆ ನೀಡಿದ ಕೊಡುಗೆಗಳು’ ಎಂಬ ವಿಷಯದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ತಮ್ಮ ಧರ್ಮವನ್ನು ಪ್ರೀತಿಸುತ್ತಾ ಇತರ ಧರ್ಮಗಳಿಗೆ ಗೌರವ ಸೂಚಿಸುವುದೇ ನಿಜವಾದ ಮಾನವತಾವಾದ. ವ್ಯವಸ್ಥೆ ಸರಿಯಿಲ್ಲ ಎಂದು ದೂಷಿಸುವ ಬದಲು ವ್ಯವಸ್ಥೆಯೊಳಗೆ ಪ್ರವೇಶಿಸಿ ಅದನ್ನು ಸರಿಪಡಿಸುವ ಪ್ರಯತ್ನ ನಡೆಯಬೇಕು. ತಪ್ಪು ಕಲ್ಪನೆಗಳನ್ನು ಬದಿಗೊತ್ತಿ ವಿಶಾಲ ಮನೋಭಾವದಿಂದ ಅಧ್ಯಯನ ನಡೆಸಿದಾಗ ಸತ್ಯವನ್ನು ಅರಿಯಲು ಸಾಧ್ಯವಾಗುತ್ತದೆ. ಪ್ರವಾದಿ ಮಹಮ್ಮದ್ ಅವರು ಅತ್ಯಂತ ಸರಳ ಜೀವನ ನಡೆಸಿದ ಮಹಾನ್ ವ್ಯಕ್ತಿಯಾಗಿದ್ದರು ಎಂದು ರಫೀಕ್ ಮಾಸ್ಟರ್ ಹೇಳಿದರು. ಕೊಡಗು ಉಮ್ಮತ್ ಒನ್ ಸಂಸ್ಥೆಯು ಶಿಕ್ಷಣ,…

Read More

ವಿರಾಜಪೇಟೆ, NEWS DESK ಸೆ.26: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು) ವತಿಯಿಂದ ದಾವಣಗೆರೆಯಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಇಬ್ಬರು ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಯಲಿಯಂಗಾಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಶ್ವಿನಿ ಎಂ.ಎಸ್. ಹಾಗೂ ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಜಾನ್ ಪೌಲ್ ಡಿಸೋಜ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿದ ಇಬ್ಬರೂ ಶಿಕ್ಷಕರಿಗೆ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲುವಾಗಿಲು, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷೆ ಕಮಲಮ್ಮ ಹಾಗೂ ಪದಾಧಿಕಾರಿಗಳು ಆತ್ಮೀಯವಾಗಿ ಅಭಿನಂದಿಸಿ, ಅವರ ಮುಂದಿನ ಶೈಕ್ಷಣಿಕ ಸೇವೆಗೆ ಶುಭ ಹಾರೈಸಿದರು. ಸಮಾರಂಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಅಶ್ವಿನ್ ಕುಮಾರ್, ಸಾಂಸ್ಕೃತಿಕ ಕಾರ್ಯದರ್ಶಿ ಪದ್ಮಾ ಹೆಚ್.ಎನ್., ಜಿಲ್ಲಾ ಸಂಚಾಲಕ ಲೋಕೇಶ್, ಜಿಲ್ಲಾ ಕಾರ್ಯಾಧ್ಯಕ್ಷೆ ಜಯಮಾಲಾ…

Read More

ಸುಂಟಿಕೊಪ್ಪ, NEWS DESK ಸೆ.26: ವಿದ್ಯಾರ್ಥಿಗಳಿಗೆ ಕೇವಲ ಪುಸ್ತಕದ ಜ್ಞಾನ ನೀಡುವುದಷ್ಟೇ ಶಿಕ್ಷಕರ ಕರ್ತವ್ಯವಲ್ಲ. ಅವರಲ್ಲಿ ವ್ಯಕ್ತಿತ್ವ ವಿಕಸನ, ನೈತಿಕತೆ, ಗೌರವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಲಯನ್ಸ್ ಕ್ಲಬ್ ಪ್ರಾಂತೀಯ-6, ವಲಯ-3ರ ಅಧ್ಯಕ್ಷ ಮದನ್ ಮಾದಯ್ಯ ಹೇಳಿದರು. ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶುಕ್ರವಾರ ಸಂಜೆ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಸಾಮಾಜಿಕ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವಸ್ಥ ಹಾಗೂ ಸದೃಢ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮೌಲ್ಯಾಧಾರಿತ ಶಿಕ್ಷಣದ ಮೂಲಕ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ನೈತಿಕತೆ, ಗೌರವ ಮತ್ತು ಮಾನವೀಯ ಗುಣಗಳನ್ನು ಬೆಳೆಸುತ್ತಾರೆ. ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಅತ್ಯಂತ ಶ್ರೇಷ್ಠ ಸ್ಥಾನವಿದ್ದು, ಅಜ್ಞಾನವೆಂಬ ಕತ್ತಲೆಯನ್ನು ದೂರ ಮಾಡಿ ಜ್ಞಾನವೆಂಬ ಬೆಳಕಿನತ್ತ ಕರೆದೊಯ್ಯುವ ದಾರಿದೀಪವಾಗಿ ಶಿಕ್ಷಕರು ಕಾರ್ಯನಿರ್ವಹಿಸುತ್ತಾರೆ ಎಂದು ಹೇಳಿದರು. ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುವುದರ ಜೊತೆಗೆ ವಿಜ್ಞಾನ, ಪರಿಸರ ಹಾಗೂ ವೈಜ್ಞಾನಿಕ ಚಟುವಟಿಕೆಗಳ…

Read More

ಕುಶಾಲನಗರ, NEWS DESK ಸೆ.26: ಕೂಡಿಗೆ ಆಂಜೆಲಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ತಾಲ್ಲೂಕು, ಜಿಲ್ಲಾ ಹಾಗೂ ವಲಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶಾಲಾ ಆವರಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ವಿವಿಧ ಕ್ರೀಡಾ ವಿಭಾಗಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದ ಸಿಸ್ಟರ್ ಮೇರಿ ಮಚ್ಚಾಡೋ ಹಾಗೂ ಸಿಸ್ಟರ್ ಅನಿತಾ ಡಿಸೋಜಾ ಅವರು, ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ತಂಡಭಾವನೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು. ಮುಂದಿನ ಹಂತಗಳಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳ ಪರಿಶ್ರಮ, ದೈಹಿಕ ಶಿಕ್ಷಣ ಶಿಕ್ಷಕರ ಮಾರ್ಗದರ್ಶನ ಹಾಗೂ ಶಾಲೆಯ ನಿರಂತರ ಪ್ರೋತ್ಸಾಹದಿಂದ ಈ ಗಮನಾರ್ಹ ಕ್ರೀಡಾ ಸಾಧನೆ ಸಾಧ್ಯವಾಗಿದೆ. ಆಂಜೆಲಾ ವಿದ್ಯಾನಿಕೇತನದ…

Read More

ಮಡಿಕೇರಿ, NEWS DESK ಸೆ.26: 2030ರ ವೇಳೆಗೆ ದೇಶದಲ್ಲಿ ಮಲೇರಿಯಾ ಪ್ರಕರಣಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳ ಭಾಗವಾಗಿ, ಸಬ್ ನ್ಯಾಷನಲ್ ಮಲೇರಿಯಾ ಎಲಿಮಿನೇಷನ್ ವ್ಯಾಲಿಡೇಶನ್ (SNMEV) ರಾಷ್ಟ್ರೀಯ ತಂಡ ಕೊಡಗು ಜಿಲ್ಲೆಗೆ ಮೂರು ದಿನಗಳ ಭೇಟಿ ನೀಡಿ ಪರಿಶೀಲನೆ ನಡೆಸಿತು. ತಂಡವು ಸೋಮವಾರಪೇಟೆ ತಾಲೂಕು ಆಸ್ಪತ್ರೆ, ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ, ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ, ಸುಂಟಿಕೊಪ್ಪ ಉಪಕೇಂದ್ರ, ಮಡಿಕೇರಿ ತಾಲೂಕಿನ ನಗರ ಆರೋಗ್ಯ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆಗಳಿಗೆ ಭೇಟಿ ನೀಡಿತು. ಕಳೆದ ಐದು ವರ್ಷಗಳಿಂದ ಜಿಲ್ಲೆಯಲ್ಲಿ ಮಲೇರಿಯಾ ನಿಯಂತ್ರಣ ಹಾಗೂ ನಿರ್ಮೂಲನೆಗಾಗಿ ಕೈಗೊಳ್ಳಲಾಗಿರುವ ಕ್ರಮಗಳು, ರೋಗಿಗಳ ಚಿಕಿತ್ಸಾ ಅನುಸರಣೆ ಮತ್ತು ದಾಖಲಾತಿ ನಿರ್ವಹಣೆಯನ್ನು ತಂಡ ಪರಿಶೀಲಿಸಿತು. ದೆಹಲಿಯ ಡಾ. ಕಲ್ಪನಾ ಬರುವ ಅವರ ನೇತೃತ್ವದಲ್ಲಿ ಪರಿಶೀಲನೆ ನಡೆದಿದ್ದು, ಕೇಂದ್ರ ತಂಡದ ಡಾ. ಆರ್. ತೇನಾಂಬಿಗೈ, ಡಾ. ಬಿಜೀತ್ ಬಿಸ್ವಾ ಹಾಗೂ ಡಾ. ಶ್ಯಾಮ್ ಬಂದು ರಾತ್ ಅವರು ತಂಡದಲ್ಲಿದ್ದರು.…

Read More