ಮಡಿಕೇರಿ ಜು.8 NEWS DESK : ಮದೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರ್ತೋಜಿ ಬಳಿ ಮಳೆಯಿಂದಾಗಿ ರಸ್ತೆಯ ಒಂದು ಬದಿ ಉಬ್ಬಿಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಎಚ್ಚರಿಕೆ ಫಲಕ ಅಳವಡಿಸಿದ್ದಾರೆ.
ಲೇಖಕ: admin
ಸೋಮವಾರಪೇಟೆ ಜು.8 NEWS DESK : ಸಮಯದ ಸದುಪಯೋಗ, ನಿರಂತರ ಕಲಿಕೆಯಿಂದ ವಿದ್ಯಾರ್ಥಿಗಳು ಅಧಿಕ ಅಂಕಗಳನ್ನು ಗಳಿಸಬಹುದು ಎಂದು ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಹೇಳಿದರು. ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘ ಹಾಗೂ ಫ್ರೇಶರ್ಸ್ ಡೇ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಮಾಧ್ಯಮದಲ್ಲಿ ಶಿಕ್ಷಣ ಕೊಡಬೇಕೆಂಬ ಉದ್ದೇಶದಿಂದ ಒಕ್ಕಲಿಗರ ಸಂಘ ಸಂಸ್ಥೆಯನ್ನು ಹುಟ್ಟು ಹಾಕಿದೆ. ಶೇ.99ರಷ್ಟು ಮಂದಿ ಗ್ರಾಮೀಣ ವಿದ್ಯಾರ್ಥಿಗಳು ನಮ್ಮ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸತತ 7ನೇ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದ ಹೆಗ್ಗಳಿಕೆ ಶಾಲೆಗಿದೆ. ಪ್ರಸಕ್ತ ವರ್ಷ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲೂ ಶೇ.100 ಫಲಿತಾಂಶ ಸಿಕ್ಕಿದೆ. ಹಿಂದಿನ ವರ್ಷದಿಂದ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ತೆರೆಯಲಾಗಿದೆ ಎಂದು ಹೇಳಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರುಗಳಾಗಿ ಕೆ.ಎಲ್.ಕೀರ್ತನ್, ಎಚ್.ಆರ್.ಜೀವಿತ, ಉಪಾಧ್ಯಕ್ಷರುಗಳಾಗಿ ಪೂರ್ಣಚಂದ್ರ, ಸ್ನೇಹ, ಕ್ರೀಡಾ ಮಂತ್ರಿಗಳಾಗಿ ಕೃಷಿ, ಅಮೂಲ್ಯ, ಶಿಸ್ತುಪಾಲನ ಮಂತ್ರಿಗಳಾಗಿ ಮಿಥುನ್,…
ಮಡಿಕೇರಿ ಜು.8 NEWS DESK : ಅರಣ್ಯ ಇಲಾಖೆಯ ವಿರಾಜಪೇಟೆ ಪ್ರಾದೇಶಿಕ ವಿಭಾಗ ತಿತಿಮತಿ ವಲಯದ ವತಿಯಿಂದ ದೇವರಪುರದಲ್ಲಿ ವನಮಹೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆಯ ಶಾಸಕರಾದ ಎ.ಎಸ್.ಪೊನ್ನಣ್ಣ ಭಾಗವಹಿಸಿ ಗಿಡನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಈ ಸಂದರ್ಭ ಕಾಂಚನ್ ಪೊನ್ನಣ್ಣ ಮತ್ತು ಅರಣ್ಯ ಅಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಜು.8 NEWS DESK : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು ಜು.11 ರಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ.ಸಿಇಒ ತಿಳಿಸಿದ್ದಾರೆ.
ಮಡಿಕೇರಿ ಜು.8 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಬಡವರ ಆರ್ಥಿಕ ಸಬಲೀಕರಣಕ್ಕೆ ಪ್ರಯತ್ನಿಸಿದೆ. ಆ ನಿಟ್ಟಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ ರೂ.2000 ನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಇದುವರೆಗೆ 1,15,229 ಮಂದಿ ಮಹಿಳೆಯರು ನೋಂದಣಿ ಮಾಡಿದ್ದು, ಇವರಲ್ಲಿ 1,14,056 ಮಂದಿ ಮಹಿಳೆಯರಿಗೆ ಮಂಜೂರಾಗಿ ಶೇ.98.98 ರಷ್ಟು ಸಾಧನೆ ಮಾಡಲಾಗಿದೆ. ತಾಲ್ಲೂಕುವಾರು ಗಮನಿಸಿದಾಗ ಮಡಿಕೇರಿ ತಾಲ್ಲೂಕಿನಲ್ಲಿ 30,341 ಮಂದಿ ಮಹಿಳೆಯರು ನೋಂದಣಿಯಾಗಿದ್ದು, ಇವರಲ್ಲಿ 30169 ಮಂದಿ ಮಹಿಳೆಯರಿಗೆ ಮಂಜೂರಾತಿ ದೊರೆತಿದ್ದು, ಶೇ.99.43 ರಷ್ಟು ಸಾಧನೆ ಮಾಡಲಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ 24,238 ಮಂದಿ ಮಹಿಳೆಯರು ಹೆಸರು ನೋಂದಾಯಿಸಿದ್ದು, ಇವರಲ್ಲಿ 24,124 ಮಂದಿ ಮಹಿಳೆಯರಿಗೆ ಮಂಜೂರಾತಿ ದೊರೆತಿದ್ದು, ಶೇ.99.53 ರಷ್ಟು ಸಾಧನೆ ಮಾಡಲಾಗಿದೆ. ಕುಶಾಲನಗರ ತಾಲ್ಲೂಕಿನಲ್ಲಿ 22,108 ಫಲಾನುಭವಿಗಳು ನೋಂದಣಿಯಾಗಿದ್ದು, ಇವರಲ್ಲಿ 21,830 ಮಂದಿ ಮಹಿಳೆಯರಿಗೆ…
ವಿರಾಜಪೆಟೆ ಜು.8 NEWS DESK : ವಿರಾಜಪೇಟೆಯ ಪ್ರಗತಿ ಶಾಲೆಯಲ್ಲಿ ವಿದ್ಯಾರ್ಥಿ ಸಂಘವನ್ನು ವಿರಾಜಪೇಟೆ ವೃತ್ತ ನಿರೀಕ್ಷಕರಾದ ಶಿವರುದ್ರಪ್ಪಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಈ ಶಾಲೆಯಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆ ನಡೆಯುತ್ತಿದೆ. ನನ್ನ ಮೂವತ್ತು ವರ್ಷಗಳ ಸೇವೆಯಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದೆ, ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ನಾಯಕನಾಗುವ ಎಲ್ಲಾ ಗುಣಗಳಿವೆ ಎಂದು ನುಡಿದರು. ಪ್ರಗತಿ ಶಾಲೆಯ ವ್ಯವಸ್ಥಾಪಕರಾದ ಮಾದಂಡ ತಿಮ್ಮಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ಶಾಲೆಯಲ್ಲಿ ವಿಧ್ಯಾಭ್ಯಾಸಗಳ ಜೊತೆಯಲ್ಲಿ ವಿವಿಧ ರೀತಿಯ ಚಟುವಟಿಕೆಗಳಿಗೆ ಹೆಚ್ಚಿನ ಪ್ರಮಾಣದ ಒತ್ತು ನೀಡಲಾಗುತ್ತಿದೆ. ಮಕ್ಕಳು ಹಾಗೂ ಪೋಷಕರು ಉತ್ತಮ ರೀತಿಯಲ್ಲಿ ನಮಗೆ ಸಹಕಾರ ನೀಡುತ್ತಾರೆ ಎಂದು ತಿಳಿಸಿದರು. ವೇದಿಕೆಯಲ್ಲಿ ನೂತನ ಸಾಲಿನ ನಾಯಕರಿಗೆ ಜವಾಬ್ದಾರಿ ನೀಡುವ ಕಾರ್ಯಕ್ರಮ ನಡೆಯಿತು. ಶಾಲಾ ನಾಯಕನಾಗಿ 9ನೇ ತರಗತಿ ಉಮರ ಸುಲ್ತಾನ್, ಉಪನಾಯಕಿಯಾಗಿ ಕೆ.ಎ.ದಿಯಾ, ಕ್ರೀಡಾ ನಾಯಕನಾಗಿ ಬಿ.ಜಿ.ಶಿಶಿರ ಸುಗಂಧ್,…
ಮಡಿಕೇರಿ ಜು.8 NEWS DESK : ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿರುತ್ತದೆ. ಜಲಾಶಯವು ಶೀಘ್ರವೇ ಗರಿಷ್ಟ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಆದ್ದರಿಂದ ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಕೋರಲಾಗಿದೆ.
ಮಡಿಕೇರಿ ಜು.8 NEWS DESK : ಆಂಧ್ರಪ್ರದೇಶದ ಕಡಪಾದಲ್ಲಿ ಜು.10ರಿಂದ 17 ರವರೆಗೆ ನಡೆಯಲಿರುವ 2ನೇ ಹಾಕಿ ಇಂಡಿಯಾ ಜೂನಿಯರ್ ಮಹಿಳಾ ದಕ್ಷಿಣ ವಲಯ ಚಾಂಪಿಯನ್ ಶಿಪ್ ನಲ್ಲಿ ಬೇಂಗೂರು ಗ್ರಾಮದ ಪಟ್ಟಮಾಡ ಶ್ರೀಷ್ಮ ಬೊಳ್ಳಮ್ಮ ಹಾಕಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಬೇಂಗೂರಿನ ಪಟ್ಟಮಾಡ ರವಿನ್ ಮುತ್ತಣ್ಣ ಹಾಗೂ ಮಿಲನ್ ಮುತ್ತಣ್ಣ ಅವರ ಪುತ್ರಿ ಶ್ರೀಷ್ಮ ಬೊಳ್ಳಮ್ಮ ಬೆಂಗಳೂರಿನ ಸಂತ ಜೋಸೆಫರ ಕಾಲೇಜ್ ನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.
ಕುಶಾಲನಗರ ಜು.8 NEWS DESK : ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಲ್ಲಿ ಹಿರಿಯ ಪತ್ರಕರ್ತರಿಗೆ ಪುಲಿಯಂಡ ರಾಮ್ ದೇವಯ್ಯ ಅವರು ಜ್ಞಾನಗಂಗಾ ಶಾಲೆಯ ಹೆಸರಿನಲ್ಲಿ ಸ್ಥಾಪಿಸಿರುವ ವಾರ್ಷಿಕ ದತ್ತಿ ಪ್ರಶಸ್ತಿಗೆ ಹೊಸದಿಗಂತ ಪತ್ರಿಕೆಯ ಜಿಲ್ಲಾ ವರದಿಗಾರ ಕೆ. ತಿಮ್ಮಪ್ಪ ಭಾಜನರಾಗಿದ್ದಾರೆ. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಕೊಡಗು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಜು.9 ರಂದು ಕೊಡಗು ವಿಶ್ವವಿದ್ಯಾಲಯದ ಚಿಕ್ಕ ಅಳುವಾರ ಜ್ಞಾನಕಾವೇರಿ ಸಭಾಂಗಣದಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯುವ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಕೊಡಗು ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೊ.ಅಶೋಕ್ ಸಂಗಪ್ಪ ಆಲೂರ ಉದ್ಘಾಟಿಸಲಿದ್ದಾರೆ. ಗೌರವ ಉಪಸ್ಥಿತಿಯನ್ನು ಕೊಡಗು ವಿಶ್ವ ವಿದ್ಯಾಲಯದ ರಿಜಿಸ್ಟ್ರಾರ್ (ಪರಿಕ್ಷಾಂಗ) ಡಾ.ಸೀನಪ್ಪ ವಹಿಸಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರು ಹಾಗೂ ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತಶಯನ ಮುಖ್ಯ ಭಾಷಣ ಮಾಡಲಿದ್ದಾರೆ. ಕುಶಾಲನಗರ ರೋಟರಿಯ ಅಧ್ಯಕ್ಷ ಎಂ.ಡಿ.ರಂಗಸ್ವಾಮಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕೊಡಗು ಪತ್ರಕರ್ತರ…
ಮಡಿಕೇರಿ ಜು.8 NEWS DESK : ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ ನೂತನ ಅಧ್ಯಕ್ಷೆಯಾಗಿ ಆಗ್ನೇಸ್ ಮುತ್ತಣ್ಣ ಮತ್ತು ಕಾಯ೯ದಶಿ೯ಯಾಗಿ ರಶ್ಮಿ ಪ್ರವೀಣ್ ಅಧಿಕಾರ ಸ್ವೀಕರಿಸಿದರು. ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಇನ್ನರ್ ವೀಲ್ ನ ನಿಕಟಪೂವ೯ ಜಿಲ್ಲಾಧ್ಯಕ್ಷೆ ಪೂಣಿ೯ಮಾ ರವಿ ಪದಗ್ರಹಣ ನೆರವೇರಿಸಿದರು. ಕಾಯ೯ಕ್ರಮದಲ್ಲಿ ಮಡಿಕೇರಿ ನಗರಸಭೆಯ ಪೌರಕಾಮಿ೯ಕರಾದ ಲಕ್ಷ್ಮಿ ಮತ್ತು ಲಕ್ಷ್ಮಮ್ಮ ಅವರನ್ನು ಸನ್ಮಾನಿಸಲಾಯಿತು. ರೋಟರಿ ಮಡಿಕೇರಿಯ ಅಧ್ಯಕ್ಷ ಸುದಯ್ ನಾಣಯ್ಯ ಅವರು ಲಲಿತಾರಾಘವನ್ ಸಂಪಾದಕತ್ವದಲ್ಲಿ ಪ್ರಕಟಿತ ಗಿರಿಶೖಂಗ ವಾತಾ೯ಸಂಚಿಕೆ ಬಿಡುಗಡೆಗೊಳಿಸಿದರು. ವೇದಿಕೆಯಲ್ಲಿ ಇನ್ನರ್ ವೀಲ್ ಖಜಾಂಜಿ ದಿವ್ಯ ಮುತ್ತಣ್ಣ, ನಿಕಟಪೂವ೯ ಅಧ್ಯಕ್ಷೆ ಕನ್ನು ದೇವರಾಜ್ ಉಪಸ್ಥಿತರಿದ್ದರು. ಡಾ.ರೇಣುಕಾ ಸುಧಾಕರ್ ಪ್ರಾಥಿ೯ಸಿ, ಲತಾ ಚೆಂಗಪ್ಪ, ಶಫಾಲ್ಲಿ ರೈ, ಗುಲಾಬಿ ಜನಾರ್ಧನ್, ನಮಿತಾ ರೈ, ರಾಧಿಕ ವಿಶ್ವನಾಥ್ ನಿವ೯ಹಿಸಿದ ಕಾಯ೯ಕ್ರಮದಲ್ಲಿ ಬೊಳ್ಳು ಮೇದಪ್ಪ ವಂದಿಸಿದರು.






