ಲೇಖಕ: admin

ಮಡಿಕೇರಿ ಜು.8 NEWS DESK : ಅಂತರರಾಷ್ಟ್ರೀಯ ಸೇವಾ ಸಂಸ್ಥೆಯಾಗಿ ಜಗದಗಲ ಖ್ಯಾತಿ ಗಳಿಸಿರುವ ರೋಟರಿ ಸಂಸ್ಥೆಯು ನಾಯಕತ್ವ ಗುಣ ಬೆಳೆಸಲು ನೆರವಾಗುವುದರೊಂದಿಗೆ ಸದಸ್ಯರಲ್ಲಿರುವ ಪ್ರತಿಭೆಯ ಅನಾವರಣಕ್ಕೂ ವೇದಿಕೆಯಾಗಿ ಸಮಾಜ ಸೇವೆಗೆ ಪ್ರೇರಪಣೆ ನೀಡುತ್ತದೆ ಎಂದು ಸುಳ್ಯ ರೋಟರಿ ಸಂಸ್ಥೆಯ ಮಾಜಿ ಸಹಾಯಕ ಗವನ೯ರ್ ಡಾ. ಪಿ.ಕೆ.ಕೇಶವ್ ಹೇಳಿದ್ದಾರೆ. ಮಡಿಕೇರಿ ರೋಟರಿ ಸಭಾಂಗಣದಲ್ಲಿ ರೋಟರಿ ಮಡಿಕೇರಿ ವುಡ್ಸ್ ನ ನೂತನ ಅಧ್ಯಕ್ಷರಾಗಿ ಹರೀಶ್ ಕಿಗ್ಗಾಲು ಮತ್ತು ಕಾಯ೯ದಶಿ೯ಯಾಗಿ ಕಿರಣ್ ಕುಂದರ್ ಹಾಗೂ ತಂಡದ ಪದಗ್ರಹಣ ನೆರವೇರಿಸಿ ಮಾತನಾಡಿದ ಡಾ. ಪಿ.ಕೆ.ಕೇಶವ್, ಸರಿಯಾದ ವೇದಿಕೆಗಳು ದೊರಕದೇ ಇದ್ದಾಗ ಅಸಾಮಾನ್ಯ ವ್ಯಕ್ತಿ ಕೂಡ ಸಾಮಾನ್ಯನಾಗಿಬಿಡುತ್ತಾನೆ, ರೋಟರಿಯಂಥ ನಾಯಕತ್ವ ಬೆಳೆಸುವ ಸಂಸ್ಥೆಗಳು ಅಸಮಾನ್ಯ ವ್ಯಕ್ತಿತ್ವದವರೊಂದಿಗೆ ಸಾಮಾನ್ಯನನ್ನೂ ಅಸಮಾನ್ಯ ವ್ಯಕ್ತಿತ್ವದ ನಾಯಕನನ್ನಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಹೀಗಾಗಿ ರೋಟರಿಯಂಥ ಸೇವಾ ಸಂಸ್ಥೆಗಳಲ್ಲಿ ಸೇಪ೯ಡೆಯಾಗಿ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಟಿ20 ವಿಶ್ವಕಪ್ ನಲ್ಲಿ ಭಾರತ ತಂಡ ಹೇಗೆ ಎಲ್ಲಾ ಆಟಗಾರರ ಸಾಮಥ್ಯ೯…

Read More

ಮಡಿಕೇರಿ ಜು.8 NEWS DESK : ಆಂಧ್ರಪ್ರದೇಶದ ಕಡಪದಲ್ಲಿ ಜು.10ರಿಂದ ನಡೆಯಲಿರುವ ಹಾಕಿ ಇಂಡಿಯಾ ದಕ್ಷಿಣ ವಲಯ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಮಕ್ಕಂದೂರು ಗ್ರಾಮದ, ಪ್ರಸ್ತುತ ಬೆಂಗಳೂರಿನ ಕ್ರೀಡಾ ವಸತಿ ನಿಲಯದಲ್ಲಿರುವ ವಿಶ್ವಜಿತ್ ಕೆ.ವಿ ಹಾಕಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಮಕ್ಕಂದೂರಿನ ಕುಂಭಗೌಡನ ವಿನೋದ್ ಕುಮಾರ್ ಹಾಗೂ ಜಲಜಾಕ್ಷಿ ದಂಪತಿಯ ಪುತ್ರ ವಿಶ್ವಜಿತ್, ಬೆಂಗಳೂರಿನ ಅಲ್- ಅಮೀನ್ ಕಾಲೇಜ್ ನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Read More

ಮಡಿಕೇರಿ ಜು.8 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನಾಚರಣೆ ಅಂಗವಾಗಿ ಜು.9 ರಂದು ಭಾಗಮಂಡಲದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಕೋಳಿಬೈಲು ವೆಂಕಟೇಶ್ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 7 ಗಂಟೆಯಿಂದ 7.30ರ ವರೆಗೆ ತಲಕಾವೇರಿಯಲ್ಲಿ ವಿಶೇಷ ಪೂಜೆ, 8 ಗಂಟೆಗೆ ತಲಕಾವೇರಿಯಲ್ಲಿ ಪತ್ರಿಕಾಗೋಷ್ಠಿ, 8.30ಕ್ಕೆ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ತುಲಭಾರ, 9 ಗಂಟೆಗೆ ಭಾಗಮಂಡಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಅರಿವಿನ ಮೂಲಕ ಮಕ್ಕಳೊಂದಿಗೆ ಜನ್ಮದಿನ ಆಚರಣೆ, 9.30 ಗಂಟೆಗೆ ಭಾಗಮಂಡಲದ ಮಾರುಕಟ್ಟೆಯಿಂದ ಸ್ವಚ್ಛತಾ ಅಭಿಯಾನ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Read More

ಕಡಂಗ ಜು.8 NEWS DESK : ಬದ್ರಿಯಾ ಸುನ್ನಿ ಮದರಸದ ನೂತನ ನವಿಕೃತ ಕಟ್ಟಡವನ್ನು ಮಗ್ರಿಬ್ ನಮಾಜ್ ಬಳಿಕ ಉದ್ಘಾಟಿಸಲಾಯಿತು. ಬದ್ರಿಯಾ ಮಸೀದಿಯ ಮುದರಿಸ್ ಸತ್ತಾರ್ ಅಹ್ಸನಿ ಮದರಸ ಕೊಠಡಿಯನ್ನು ಉದ್ಘಾಟಿಸಿ, ಮಾತನಾಡಿ ದಾನಿಗಳ ಸಹಕಾರದಿಂದ ಉತ್ತಮ ಕಟ್ಟಡ ನಿರ್ಮಾಣವಾಗಿದೆ ಇದಕ್ಕೆ ಪ್ರಯತ್ನ ಪಟ್ಟ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ ಪ್ರಾರ್ಥಿಸಿದರು. ಈ ಸಂದರ್ಭ ಬದ್ರಿಯಾ ಜಮಾಅತ್ ಅಧ್ಯಕ್ಷ ಕೆ.ಇ.ಉಸ್ಮಾನ್, ಕೆ.ಎಂ.ಜೆ ಅಧ್ಯಕ್ಷ ಸುಲೈಮಾನ್, ಎಸ್ ವೈ ಎಸ್ ಅಧ್ಯಕ್ಷ ಅಶ್ರಫ್, ಮೊಯ್ದು ಕುಟ್ಟಿ ಮುಸ್ಲಿಯಾರ್, ಬದ್ರಿಯಾ ಜಮಾಅತ್ ಉಪಾಧ್ಯಕ್ಷ ಅಬ್ದುಲ್ ರಝಕ್, ಪ್ರಧಾನ ಕಾರ್ಯದರ್ಶಿ ರಾಶೀದ್, ಕೋಶಾಧಿಕಾರಿ ರಜಾಕ್, ಸದರ್ ಮುಹಲೀಮ್ ಹುಸೈನಾರ್ ಸಅದಿ, ರಝಕ್ ಮುಸ್ಲಿಯಾರ್, ರಫೀಕ್ ಮುಸ್ಲಿಯಾರ್, ಹಿರಿಯರಾದ ಹಸೈನಾರ್, ಬದ್ರಿಯಾ ಯು.ಎ.ಇ. ಸಮಿತಿಯ ಉಪಾಧ್ಯಕ್ಷ ರಶೀದ್ ಅಶ್ರಫಿ, ಮುಸ್ತಫಾ ಜಿದ್ದಾ, ಜಮಾಅತ್ ಪದಾಧಿಕಾರಿಗಳಾದ ಸಹದ್, ನೌಫಲ್, ಕರೀಂ, ಎಸ್ ವೈ ಎಸ್, ಕೆ.ಎಂ.ಜೆ, ಎಸ್.ಎಸ್.ಎಫ್. ಕಾರ್ಯಕರ್ತರು, ಮತಿತ್ತರು ಹಾಜರಿದ್ದರು. ವರದಿ : ನೌಫಲ್ 

Read More

ನಾಪೋಕ್ಲು ಜು.8 NEWS DESK : ನರಿಯಂದಡ ಗ್ರಾ.ಪಂ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಕುಂಜಿಲ, ಕಕ್ಕಬ್ಬೆ ಗ್ರಾ.ಪಂ ವ್ಯಾಪ್ತಿಯಲ್ಲಿಯ ಮರ೦ದೊಡ ಗ್ರಾಮದಲ್ಲಿ ರೈತರು ಬೆಳೆದ ಕಾಫಿ ಗಿಡಗಳನ್ನು ಕಾಡಾನೆಗಳು ತುಳಿದು ನಾಶಪಡಿಸುತ್ತಿವೆ. ಕಾಡಾನೆಗಳ ಹಾವಳಿಯಿಂದ ಕಾಫಿ ಮತ್ತಿತರ ಬೆಳೆಗಳು ನಾಶವಾಗಿದ್ದು, ರೈತರು ಸಂಕಷ್ಟ ಅನುಭವಿಸುವಂತಾಗಿದೆ. ನಿಡುಮಂಡ ಹರೀಶ ಹಾಗೂ ಅಶೋಕ್, ಭೀಮಯ್ಯ ಅವರ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳು ಕಾಫಿ ಗಿಡಗಳನ್ನು ತುಳಿದು ನಾಶಪಡಿಸಿವೆ. ಸಂಬಂಧಪಟ್ಟ ಅರಣ್ಯ ಇಲಾಖೆ ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರಿಸಬೇಕು. ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಜು.8 NEWS DESK : ಆಂಧ್ರಪ್ರದೇಶದ ಕಡಪದಲ್ಲಿ ಜು 10 ರಿಂದ 17ವರೆಗೆ ನಡೆಯುವ ಎರಡನೇ ಹಾಕಿ ಇಂಡಿಯಾ ದಕ್ಷಿಣ ವಲಯ ಚಾಂಪಿಯನ್ ಶಿಪ್ ಜೂನಿಯರ್ ಕರ್ನಾಟಕ ತಂಡಕ್ಕೆ ಕೊಡಗಿನ ಏಳು ಆಟಗಾರರು ಆಯ್ಕೆಗೊಂಡಿದ್ದಾರೆ. ಬೆಂಗಳೂರಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಈ ತಂಡದಲ್ಲಿ ಕೊಡಗಿನ ಕ್ರೀಡಾಪಟುಗಳಿಗೆ ಹೆಚ್ಚಿನ ಸ್ಥಾನ ಲಭಿಸಿದೆ. ನೂತನ ತಂಡದಲ್ಲಿ ನಾಪೋಕ್ಲು ಗ್ರಾಮದವರಾದ ಬಿದ್ದಾಟಂಡ ಬೋಪಣ್ಣ, ಬಿದ್ದಾಟಂಡ ಅಖಿಲ್, ಕುಲ್ಲೇಟೀರ ವಚನ್ ಮತ್ತು ಕಕ್ಕಬ್ಬೆ ಯವಕಪಾಡಿ ಗ್ರಾಮದ ಚೊಯಮಾಡ ಆಕಾಶ್ ಬಿದ್ದಪ್ಪ, ವಿರಾಜಪೇಟೆಯ ತೀತಮಾಡ ಯಶ್ವಥ್, ಹೃತಿಕ್ ಅಯ್ಯಪ್ಪ ಹಾಗೂ ಅಶ್ವಥ್ ಆಯ್ಕೆಗೊಂಡಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಜು.8 NEWS DESK : ಮಾತೃವಂದನಾ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿದ್ದು, ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕೃತ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೋಂದಣಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆ ಮಾಹಿತಿಯ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್, ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್(ಯಾವುದಾದರು ಪ್ರತಿ) ಸಲ್ಲಿಸಬೇಕು. ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ. ಮೊದಲ ಮಗುವಿಗೆ…

Read More

NEWS DESK : ದೇಶದಾದ್ಯಂತ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿಯಿರುವ 6128 ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಐಬಿಪಿಎಸ್ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಅಭ್ಯರ್ಥಿಗಳ ಆಯ್ಕೆ ಹಾಗೂ ನೇಮಕಾತಿ ಸ್ವರೂಪ ಕುರಿತ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಗುಮಾಸ್ತ (ಕ್ಲರ್ಕ್) ಹುದ್ದೆಗೆ ಸೇರಬೇಕು ಎಂಬ ಕನಸು ಹೊತ್ತವರಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್ ) ಸಿಹಿ ಸುದ್ದಿಯೊಂದನ್ನು ನೀಡಿದೆ. ದೇಶದ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿಯಿರುವ ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಕ್ಕಾಗಿ ‘ಸಾಮಾನ್ಯ ಪ್ರವೇಶ ಪರೀಕ್ಷೆ'(CRP ಗುಮಾಸ್ತರು XIV)ನಡೆಸುತ್ತಿದ್ದು, ಸೋಮವಾರ ಅಧಿಸೂಚನೆ ಹೊರಡಿಸಿದೆ. ಈ ಬಾರಿ 11 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿಯಿರುವ 6128 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ನಮ್ಮ ರಾಜ್ಯದಲ್ಲಿ 457 ಹುದ್ದೆಗಳು ಖಾಲಿ ಇವೆ. ಎಂದಿನಂತೆ, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನವಾಗಿರುತ್ತದೆ. ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಿದ್ದು ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ…

Read More

ಮಡಿಕೇರಿ ಜು.8 NEWS DESK : ಮಡಿಕೇರಿ ನಗರ ವ್ಯಾಪ್ತಿಯ ದುಸ್ಥಿತಿಯಲ್ಲಿರುವ ಬಸ್ ತಂಗುದಾಣಗಳನ್ನು ಆಧುನೀಕರಣಗೊಳಿಸಲು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ  ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ನಗರಸಭೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಜನರಲ್ ತಿಮ್ಮಯ್ಯ ವೃತ್ತ, ಜಿಲ್ಲಾ ಆಸ್ಪತ್ರೆ, ಚೈನ್ ಗೇಟ್, ಮೂರ್ನಾಡು ರಸ್ತೆ, ಮಂಗಳೂರು ರಸ್ತೆಯ ಬಸ್ ತಂಗುದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು ತ್ವರಿತಗತಿಯಲ್ಲಿ ಹೈ ಟೆಕ್ ತಂಗುದಾಣಗಳನ್ನು ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಚೈನ್ ಗೇಟ್ ಬಳಿ ಇದ್ದ ತಂಗುದಾಣ ಕೆಡವಿದ ಸ್ಥಳದಿಂದ ಸ್ವಲ್ಪ ಮುಂದಕ್ಕೆ ಸುರಕ್ಷಿತ ಮತ್ತು ಸುಸಜ್ಜಿತ ಬಸ್ ತಂಗುದಾಣ ನಿರ್ಮಾಣಕ್ಕೆ ಸೂಚನೆ ನೀಡಿದರು. ಮೂರ್ನಾಡು ರಸ್ತೆಯಲ್ಲಿನ ಶೌಚಾಲಯ ವೀಕ್ಷಣೆ ಮಾಡಿದ ಶಾಸಕರು 20 ಲಕ್ಷ ರೂ ವೆಚ್ಚದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ನಕಾಶೆ ಮತ್ತು ಅಂದಾಜು ಪಟ್ಟಿಯನ್ನು ಸಲ್ಲಿಸುವಂತೆ ಪೌರಾಯುಕ್ತರಿಗೆ ನಿರ್ದೇಶನ ನೀಡಿದರು. ಈ ಸಂಧರ್ಭ ಮಡಿಕೇರಿ ನಗರಸಭೆ ಪೌರಾಯುಕ್ತ ವಿಜಯ್,…

Read More

  ಸುಂಟಿಕೊಪ್ಪ ಜು.8 NEWS DESK : ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ವನ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ, ಪ್ರಸ್ತುತ ಸನ್ನಿವೇಶದಲ್ಲಿ ಪರಿಸರದ ಮೇಲೆ ಆಗುತ್ತಿರುವ ಅಪಾಯಕಾರಿ ಚಟುವಟಿಕೆಗಳ ಕುರಿತು ಮಾಹಿತಿಯನ್ನು ನೀಡಿ, ಪರಿಸರ ಸಂರಕ್ಷಣೆಯು ನಮ್ಮೆಲ್ಲಾರ ಆದ್ಯ ಕರ್ತವ್ಯವಾಗಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ಪರಿಸರ ಮಾಲಿನ್ಯವನ್ನು ಉಂಟು ಮಾಡುವ ಯಾವುದೇ ಕೆಲಸದಲ್ಲಿ ವಿದ್ಯಾರ್ಥಿಗಳು ತೊಡಗಬಾರದೆಂದರು. ಕಾರ್ಯಕ್ರಮದಲ್ಲಿ ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಹಾಗೂ ನಿಸರ್ಗ ಇಕೋಕ್ಲಬ್ ಸಂಚಾಲಕಿ ಪದ್ಮಾವತಿ ದಿನದ ಮಹತ್ವದ ಕುರಿತು ಮಾತನಾಡಿ, ವಿಶ್ವಪರಿಸರ ದಿನಾಚರಣೆಯ -2024 ರ ಘೋಷವಾಕ್ಯವಾದ “ಭುಮಿಯ ಪುನರತ್ತಾನ ಹಾಗೂ ಮರುಭುಮಿ ತಡೆಗಟುವಿಕೆ” ವಿಚಾರದ ಬಗ್ಗೆ ಮಾಹಿತಿಯನ್ನು ನೀಡಿದರು. ಅರಣ್ಯನಾಶದಿಂದಾಗಿ ಭೂಮಿ ಮರುಭೂಮಿಯಾಗುತ್ತಿರುವ ಬಗ್ಗೆ ಗಂಭೀರ ಸಮಸ್ಯೆಯ ಕುರಿತು ವಿದ್ಯಾರ್ಥಿಗಳಿಗೆ ಎಚ್ಚರಿಕೆಯ ಸಂದೇಶ ನೀಡಿದರು. ನದಿಮೂಲ ಜಲಮೂಲಗಳು ಬರಿದಾಗುತ್ತಿರುವ ಬಗ್ಗೆ ಮಾಹಿತಿ ನೀಡಿದರು. ಅರಣ್ಯ ನಾಶದಿಂದಾಗಿ ಪ್ರಸ್ತುತವಾಗಿ ತಾಪಮಾನವು…

Read More