ಲೇಖಕ: admin

ಮಡಿಕೇರಿ ಮೇ 28 NEWS DESK : ಆರೋಗ್ಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ತನ್ನನ್ನು ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷದ ವರಿಷ್ಠರು ನಿಲ್ಲಿಸಿದ್ದಾರೆ, ತನ್ನ ವಿರುದ್ಧ ಮಾತನಾಡಲು ಯಾವುದೇ ವಿಚಾರಗಳು ಇಲ್ಲದಿರುವ ಹಿನ್ನೆಲೆಯಲ್ಲಿ ಅನಗತ್ಯ ಅಪಪ್ರಚಾರವನ್ನಷ್ಟೆ ಮಾಡಲಾಗುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ತಿಳಿಸಿದರು. ಮಡಿಕೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ತಾನು ತನ್ನ ಹತ್ತನೇ ವಯಸ್ಸಿನಿಂದಲೆ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯಲ್ಲಿ ತೊಡಗಿಸಿಕೊಂಡು ಬಂದವನು. ಚುನಾವಣಾ ಸ್ಪರ್ಧೆಗೆ ತನಗೆ ಅವಕಾಶ ನೀಡುವುದಕ್ಕೂ ಮುನ್ನ ತಾನು ಸಂಘದ ವಿಕಾಸ ಸೇವಾ ಟ್ರಸ್ಟ್ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದೆ. ಅದಕ್ಕೆ ರಾಜೀನಾಮೆಯನ್ನಿತ್ತು ಇದೀಗ ಚುನಾವಣಾ ಸ್ಪರ್ಧೆಗೆ ಇಳಿದಿದ್ದೇನೆ ಎಂದರು. ಬಿಜೆಪಿಯಿಂದ ಸ್ಪರ್ಧಿಸುವುದಕ್ಕೂ ಮುನ್ನ ಕಾಂಗ್ರೆಸ್‍ನಿಂದ ಸ್ಪರ್ಧಿಸುವ ಒತ್ತಡವಿತ್ತಾದರು, ಪಕ್ಷ ಮತ್ತು ಸಂಘ ಪರಿವಾರದ ಮುಖಂಡರು ತನ್ನ ಸ್ಪರ್ಧೆಗೆ ಅವಕಾಶ ನೀಡಿದ್ದಾರೆ. ಪ್ರಸ್ತುತ ರಾಜಕೀಯ ವಾತಾವರಣ ಬಿಜೆಪಿಗೆ ಪೂರಕವಾಗಿದ್ದು, ತನ್ನ ಗೆಲುವು ನಿಶ್ಚಿತವಾಗಿದೆ. ನನ್ನ ವಿರುದ್ಧ ಮಾತನಾಡಿರುವ ರಘುಪತಿ ಭಟ್ಟರಿಗೆ ಈ ಹಿಂದೆ…

Read More

ಮಡಿಕೇರಿ ಮೇ 28 NEWS DESK : ಸರಕಾರ ಮತ್ತು ಪದವೀಧರರ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುವ ಮೂಲಕ ಪದವೀಧರರ ಸಮಸ್ಯೆಗಳಿಗೆ ಪರಿಹಾರವನ್ನು ಕಂಡು ಕೊಳ್ಳುವ ಚಿಂತನೆ ತನ್ನದೆಂದು ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ತಿಳಿಸಿದ್ದಾರೆ. ಮಡಿಕೇರಿ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ತಾನು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿದಿದ್ದೇನೆ. ರಾಜಕೀಯ ಪಾವಿತ್ರ್ಯತೆಯನ್ನು ಉಳಿಸಿಕೊಳ್ಳುವುದು ನನ್ನ ಬದ್ಧತೆಯಾಗಿದೆ ಎಂದು ಹೇಳಿದರು. ಉದ್ಯೋಗಿಗಳಿಗೆ ಇಎಸ್‍ಐ ಮೂಲಕ ಉಚಿತ ಆರೋಗ್ಯ ಸೇವೆ ಪಡೆಯಲು 18 ಸಾವಿರ ವೇತನ ಮಿತಿ ಇದ್ದು, ಅದನ್ನು 21 ಸಾವಿರಕ್ಕೆ ಏರಿಸುವ ಪ್ರಸ್ತಾಪವಿದೆ. ಈ ನಿಟ್ಟಿನಲ್ಲಿ ವೇತನದ ಮಿತಿ ಮತ್ತಷ್ಟು ಹೆಚ್ಚಿಸಿ ಖಾಸಗಿ ವಲಯದ ಸಿಬ್ಬಂದಿಗೆ ಉಚಿತ ಆರೋಗ್ಯ ಸೇವೆ ದೊರಕಿಸಿಕೊಡುವ ಕೆಲಸ ಮಾಡಲಾಗುವುದು. ಅದರೊಂದಿಗೆ ಸರಕಾರಿ ಉದ್ಯೋಗಿಗಳಿಗಿರುವ ಜ್ಯೋತಿ ಸಂಜಿವಿನಿ ಆರೋಗ್ಯ ಸೇವೆ ಅನುದಾನಿತ, ಅನುದಾನರಹಿತ ಶಿಕ್ಷಕರಿಗೂ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆದು…

Read More

ಮಡಿಕೇರಿ ಮೇ 28 NEWS DESK : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮತ್ತು ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಎಸ್‍ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಿಗಮದ ಅನುದಾನದಲ್ಲಿ ಅವ್ಯವಹಾರ ನಡೆದಿದೆ ಎಂದು ಕೆಲವು ಪ್ರಭಾವಿಗಳ ಹೆಸರು ಪ್ರಸ್ತಾಪಿಸಿ ಡೆತ್ ನೋಟ್ ಬರೆದಿಟ್ಟು ಅಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಖಂಡನೀಯ ಮತ್ತು ಅತ್ಯಂತ ಗಂಭೀರ ವಿಚಾರವಾಗಿದೆ ಎಂದು ತಿಳಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಬಳಕೆಯಾಗಬೇಕಿದ್ದ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಲು ಪ್ರಭಾವಿಗಳು ಒತ್ತಡ ಹೇರಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿರುವುದನ್ನು ಗಮನಿಸಿದರೆ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಸ್ಪಷ್ಟವಾಗುತ್ತದೆ. ಇದೇ ಕಾರಣಕ್ಕೆ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಟಿತಗೊಂಡಿದೆ ಎಂದು…

Read More

ಮಡಿಕೇರಿ ಮೇ 28 NEWS DESK : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ’(ಸಸ್ಟೈನೇಬಲ್ ಗ್ರೌಂಡ್ ವಾಟರ್ ಮ್ಯಾನೇಜ್‍ಮೆಂಟ್ ಫಾರ್ ವಾಟರ್ ಸೆಕ್ಯುರಿಟಿ) ಎಂಬ ವಿಷಯದ ಕುರಿತು ಜೂನ್, 19 ರಿಂದ ಜೂನ್, 21 ರವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳಿಂದ ನುರಿತ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸ ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು ಭಾಗವಹಿಸಲು ಅವಕಾಶವಿದೆ. ಅಲ್ಲದೇ ಈ ಸಮ್ಮೇಳನದಲ್ಲಿ ರಿಸರ್ಚ್ ಪೇಪರ್ ಮಂಡಿಸಬಹುದಾಗಿದ್ದು, ಆಯ್ಕೆಯಾದ ರಿಸರ್ಚ್ ಪೇಪರ್‍ಗಳಿಗೆ ನಗದು ಬಹುಮಾನ ನೀಡಲಾಗುವುದು. ಈ ಸಮ್ಮೇಳನದಲ್ಲಿ ಭಾಗವಹಿಸಲು ಜೂನ್, 10 ರೊಳಗೆ ಗೂಗಲ್ ಫಾರ್ಮ್ (https://forms.gle/QDXV64LDibFbHydc9) ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಕಾರ್ಯಕ್ರಮ ಸಂಯೋಜಕರು (ಮೊ. 9845258894 ಮತ್ತು 9743084194) ಅಥವಾ ಅಕಾಡೆಮಿಯ ವೆಬ್‍ಸೈಟ್ www.kstacademy.in ವೀಕ್ಷಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ…

Read More

ಮಡಿಕೇರಿ ಮೇ 28 NEWS DESK : ತಾಜ್ ಯೂತ್ ಕ್ಲಬ್ ಕುಶಾಲನಗರ ಹಾಗೂ ಕೊಡಗು ಜಿಲ್ಲಾ‌ ಮುಸ್ಲಿಂ ಕಪ್ ಫುಟ್ಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ಕುಶಾಲನಗರದ ಜಿ.ಎಂ.ಪಿ‌ ಶಾಲಾ ಮೈದಾನದಲ್ಲಿ ನಡೆದ 5ನೇ ವರ್ಷದ ಕೊಡಗು ಜಿಲ್ಲಾ ಮಟ್ಟದ ಮುಸ್ಲಿಂ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಅಲ್-ಅಮೀನ್ ಪಾಲಿಬೆಟ್ಟ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ. ದ್ವಿತೀಯ ಸ್ಥಾನವನ್ನು ರೋಜಾರಿಯನ್ಸ್ ಗೋಣಿಕೊಪ್ಪ ತಂಡ ಪಡೆದುಕೊಂಡಿತು. ಎರಡು ಬಲಿಷ್ಠ ತಂಡಗಳಾದ ಅಲ್-ಅಮೀನ್ ಪಾಲಿಬೆಟ್ಟ ಹಾಗೂ ರೋಜಾರಿಯನ್ಸ್ ಗೋಣಿಕೊಪ್ಪ ತಂಡಗಳ ನಡುವಿನ ಫೈನಲ್ ಪಂದ್ಯವು 20-20 ನಿಮಿಷಗಳಲ್ಲಿ ಮೊದಲಾರ್ಧದಲ್ಲಿ ಎರಡು ತಂಡವು ಸಮಬಲದ ಹೋರಾಟ ನಡೆಯಿತು. ದ್ವಿತೀಯಾರ್ಧದಲ್ಲಿ ರೋಜಾರಿಯನ್ಸ್ ತಂಡವು ಆಕ್ರಮಣಕಾರಿ ಆಟಕ್ಕೆ ‌ಮುಂದಾಗಿ ತಂಡದ ಮುನ್ನಡೆ ಆಟಗಾರ ಸುಹೈಲ್ ಅವರ ಗೋಲುಬಾರಿಸುವುದರ ಮೂಲಕ 1-0 ಗೋಲುಗಳ ಅಂತರದಿಂದ ಮುನ್ನಡೆ ಪಡೆಯಿತು. ದ್ವಿತೀಯಾರ್ಧದ ಕೊನೆಯ ಮೂರು ನಿಮಿಷ ಬಾಕಿ ಉಳಿದಿರುವಾಗ ಅಲ್-ಅಮೀನ್ ತಂಡಕ್ಕೆ ಅದೃಷ್ಟ ಲಕ್ಷ್ಮಿಯಿಂತೆ ಫೀಲ್ಡ್ ನಲ್ಲಿ ಪೆನಾಲ್ಟಿ ಏರಿಯಾದಲ್ಲಿ ಎದುರಾಳಿ ತಂಡದ ಆಟಗಾರನ ಕೈ ಚೆಂಡು…

Read More

ಮಡಿಕೇರಿ ಮೇ 28 NEWS DESK : ವಿಶ್ವ ಪರಿಸರ ದಿನಾಚರಣೆ-2024 ರ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ, ಕೊಡಗು ವತಿಯಿಂದ ಪರಿಸರ ಸಂರಕ್ಷಣೆ ಕುರಿತು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಾಲಾ ಮಕ್ಕಳಿಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯು ಎ.ಎಲ್.ಜಿ. ಕ್ರೆಸೆಂಟ್ ಶಾಲೆ(ಮಹದೇವಪೇಟೆ, ಚೌಡೇಶ್ವರಿ ದೇವಸ್ಥಾನದ ಹತ್ತಿರ, ಮಡಿಕೇರಿ)ಯಲ್ಲಿ ಜೂ.1 ರಂದು ಬೆಳಗ್ಗೆ 9.30 ಗಂಟೆಗೆ ನಡೆಯಲಿದೆ. (ಡ್ರಾಯಿಂಗ್ ಶೀಟ್ ಮಾತ್ರ ನೀಡಲಾಗುವುದು. ಚಿತ್ರ ಕಲೆಗೆ ಬೇಕಾಗುವ ಬಣ್ಣ ಇನ್ನಿತರೆ ವಸ್ತುಗಳನ್ನು ವಿದ್ಯಾರ್ಥಿಗಳೇ ತರಬೇಕು) ಈ ವರ್ಷದ ಘೋಷಣ ವಾಕ್ಯವು “ಭೂ ಮರುಸ್ಥಾಪನೆ, ಮರುಭೂಮೀಕರಣ ಹಾಗು ಬರ ತಡೆಯುವಿಕೆ” (Land Restoration, Desertification and Drought Resilience) ಆಗಿರುತ್ತದೆ. ಸ್ಫರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ಸ್ಥಳದಲ್ಲಿಯೇ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಎಂ.ಜಿ.ರಘುರಾಮ್, ಪರಿಸರ ಅಧಿಕಾರಿಗಳು, 9845026348, ಆಸ್ಟಿನ್ ಕೆ.ಎ. ಯೋಜನಾ ಸಹಾಯಕರನ್ನು 7760738447 (ಕಚೇರಿ: 08272-221855) ಹಾಗೂ ಸ್ಥಳೀಯ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ…

Read More

ಮಡಿಕೇರಿ ಮೇ 28 NEWS DESK : ಕೊಡಗು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನೈಋತ್ಯ ಪದವಿಧರ ಮತ್ತು ಶಿಕ್ಷಕರ ಕ್ಷೇತ್ರದ ಸಭೆ ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೈಋತ್ಯ ಪದವಿಧರ ಮತ್ತು ಶಿಕ್ಷಕರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಎಸ್.ಎಲ್.ಭೋಜೇಗೌಡ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಸುಜಾಕುಶಾಲಪ್ಪ, ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ ಮತ್ತು ಅಪ್ಪಚ್ಚು ರಂಜನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ನೆಲ್ಲಿರ ಚಲನ್ ಕುಮಾರ್, ವಿ.ಕೆ.ಲೋಕೇಶ್, ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರ ಮಂಡಲ ಅಧ್ಯಕ್ಷ  ಉಮೇಶ್ ಸುಬ್ರಮಣಿ, ಡಾ.ನವೀನ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್, ಮಡಿಕೇರಿ ಗ್ರಾಮಾಂತರ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ವಕ್ತಾರರಾದ ಸುಬ್ರಹ್ಮಣ್ಯ ಉಪಾಧ್ಯಾಯ ಹಾಗೂ ಸುವಿನ್ ಗಣಪತಿ ಹಾಗೂ ಪದಾಧಿಕಾರಿಗಳು, ಮತ್ತು ಕಾರ್ಯಕರ್ತರು ಹಾಜರಿದ್ದರು.

Read More

ಮಡಿಕೇರಿ ಮೇ 28 NEWS DESK : ಸೊರಬ ವಿಧಾನಸಭಾ ಕ್ಷೇತ್ರದ ಮೂಡಿ ಹಾಗೂ ಆನವಟ್ಟಿ ಮಹಾಶಕ್ತಿ ಕೇಂದ್ರದಲ್ಲಿ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿ ಪರವಾಗಿ ಮತಯಾಚನೆ ನಡೆಯಿತು. ಇದೆ ಜೂ.3 ರಂದು ನಡೆಯಲಿರುವ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಡಾ.ಧನಂಜಯ್ ಸರ್ಜಿ  ಪರವಾಗಿ ಹಾಗೂ ಮೈತ್ರಿ ಪಕ್ಷದ ಜೆಡಿಎಸ್ ಅಭ್ಯರ್ಥಿ ಭೋಜೇಗೌಡರ ಪರವಾಗಿ ಮತದಾರರ ಮನೆ ಮನೆಗೆ ಭೇಟಿ ನೀಡಿ ಮತ ಯಾಚಿಸಲಾಯಿತು. ಈ ಸಂದರ್ಭ ಸೊರಬ ಮಂಡಲದ ಅಧ್ಯಕ್ಷ ಪ್ರಕಾಶ್ ತಲ್ಕಾಲುಕೊಪ್ಪ, ವಿಭಾಗದ ಸಹ ಸಂಘಟನಾ ಕಾರ್ಯದರ್ಶಿ ನಟರಾಜ್ , ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಅಗಸನಹಳ್ಳಿ, ಸ್ಥಳೀಯ ಮುಖಂಡ ವಿನಯ್ ಶೆರ್ವಿ, ಶಿವನ ಗೌಡ್ರು, ಕೊಟ್ರೇಶ ಸ್ವಾಮಿ, ಹೊನ್ನಪ್ಪ ವಿನಯ ಗುತ್ತೇರ್, ಕರಿಯಪ್ಪ, ವಿಶ್ವನಾಥ್ ಹಾಗೂ ಅನೇಕ ಕಾರ್ಯಕರ್ತರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಮೇ 28 NEWS DESK : ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮೇ, 29 ರಿಂದ ಪುನರ್ ಆರಂಭವಾಗಲಿದ್ದು, ಮೇ, 31 ರಂದು ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಪ್ರಾರಂಭೋತ್ಸವ ಜರುಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಹಾಗೂ ನೋಡಲ್ ಅಧಿಕಾರಿ ಎಂ.ಮಹದೇವಸ್ವಾಮಿ ತಿಳಿಸಿದ್ದಾರೆ. ಪ್ರಸಕ್ತ (2024-25) ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳನ್ನು ಪುನರ್ ಆರಂಭಿಸುವ ಸಂಬಂಧ ಅಗತ್ಯ ಪೂರ್ವ ಸಿದ್ಧತೆಯು ಮೇ 29 ರಂದು ನಡೆಯಲಿದೆ. ಶಾಲಾ ಆವರಣ, ಶಾಲಾ ಕೊಠಡಿ ಹಾಗೂ ಶೌಚಾಲಯ ಸ್ವಚ್ಚತೆ, ಕುಡಿಯುವ ನೀರು, ಸಂಪು, ಟ್ಯಾಂಕ್ ಸ್ವಚ್ಚತೆ, ಅಡುಗೆ ಮನೆ ಪಾತ್ರೆಗಳು, ಆಹಾರ ಧಾನ್ಯಗಳ ವ್ಯವಸ್ಥೆ, ಶಾಲಾ ವೇಳಾಪಟ್ಟಿ, ತರಗತಿ ವೇಳಾಪಟ್ಟಿ, ಶಿಕ್ಷಕರಿಗೆ ವಿಷಯ ಮತ್ತು ತರಗತಿ ಹಂಚಿಕೆ ಮತ್ತಿತರ ಕಾರ್ಯಗಳು ನಡೆಯಲಿವೆ ಎಂದು ವಿವರಿಸಿದರು. ಮೇ 30 ರಂದು ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಪೋಷಕರ ಜೊತೆ ಪೂರ್ವಭಾವಿ ಸಭೆಯು ಆಯಾಯ ಶಾಲೆಗಳಲ್ಲಿ ನಡೆಯಲಿದೆ. ಮೇ 31 ರಂದು…

Read More

ಮಡಿಕೇರಿ ಮೇ.28 NEWS DESK : ಕೊಡಗು ಜಿಲ್ಲೆಯಲ್ಲಿ 2023-24 ನೇ ಸಾಲಿನ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಫ್ರೂಟ್ಸ್ ಐಡಿ ಮುಖಾಂತರ ಫೇಸ್-1 ರಿಂದ ಫೇಸ್-9 ಹಂತದವರೆಗೆ ಒಟ್ಟು 11,935 ಫಲಾನುಭವಿ ರೈತರಿಗೆ ರೂ.191.42 ಲಕ್ಷ ಬೆಳೆ ಪರಿಹಾರ ಪಾವತಿಯಾಗಿರುತ್ತದೆ. ಫೇಸ್-1 ರಿಂದ ಫೇಸ್-9 ನೇ ಹಂತದವರೆಗೆ ಪ್ರತಿ ಫಲಾನುಭವಿಗೆ ಕನಿಷ್ಠ ಬೆಳೆ ಪರಿಹಾರ ಮೊತ್ತ ರೂ. 1,000 ಹಾಗೂ ಗರಿಷ್ಠ ಮೊತ್ತ ರೂ. 2,000 ಗಳಾಗಿರುತ್ತದೆ. ಫೇಸ್-10 ರಲ್ಲಿ 5365 ಫಲಾನುಭವಿ ರೈತರಿಗೆ ರೂ.283.66 ಲಕ್ಷ ಬೆಳೆ ಪರಿಹಾರ ಪಾವತಿಯಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.  

Read More