ಲೇಖಕ: admin

ಮಡಿಕೇರಿ ಮೇ 28 NEWS DESK : ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜೂ. 1 ರ ಸಂಜೆ 4 ಗಂಟೆಯಿಂದ ಜೂ. 3 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

Read More

ಮಡಿಕೇರಿ ಮೇ 28  NEWS DESK : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಫೀಡರ್‍ಗಳ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಮೇ, 29 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಮಡಿಕೇರಿ ನಗರ, ತಾಳತ್‍ಮನೆ, ಕಾಟಕೇರಿ, ಮದೆನಾಡು, ಜೋಡುಪಾಲ, ಬೋಯಿಕೇರಿ, ಮಕ್ಕಂದೂರು, ಗಾಳಿಬೀಡು, ಕುಂಡಮೇಸ್ತ್ರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಇ ಕೋರಿದ್ದಾರೆ.

Read More

ಮಡಿಕೇರಿ ಮೇ 28 NEWS DESK : ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಜನಪರ ಚಳುವಳಿಗಳ ಒಕ್ಕೂಟ ಮೇ 30 ರಂದು ಹಮ್ಮಿಕೊಂಡಿರುವ “ನಮ್ಮೆಲ್ಲರ ಹೋರಾಟದ ನಡಿಗೆ ಹಾಸನದ ಕಡೆಗೆ” ಬೃಹತ್ ಪ್ರತಿಭಟನಾ ಮೆರವಣಿಗೆಗೆ ಕೊಡಗು ಜಿಲ್ಲಾ ಸಿಐಟಿಯು ಸಂಘಟನೆ ಬೆಂಬಲ ನೀಡಲಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಜ್ವಲ್ ರೇವಣ್ಣ ನಡೆಸಿದ್ದಾರೆ ಎನ್ನಲಾಗಿರುವ ಮಹಿಳಾ ದೌರ್ಜನ್ಯದಿಂದ ಇಡೀ ದೇಶ ತಲೆ ತಗ್ಗಿಸುವಂತ್ತಾಗಿದೆ. ಮಹಿಳೆಯರಿಗೆ ರಕ್ಷಣೆ ನೀಡಬೇಕಾದ ಜನಪ್ರತಿನಿಧಿಯೇ ದೌರ್ಜನ್ಯ ನಡೆಸಿರುವುದು ಅತ್ಯಂತ ಹೇಯ ಕೃತ್ಯವೆಂದು ಆರೋಪಿಸಿದರು. ಆದಿವಾಸಿಗಳು, ಅಮಾಯಕರು ಯಾವುದೇ ದೊಡ್ಡ ತಪ್ಪು ಮಾಡದಿದ್ದರೂ ತಕ್ಷಣ ಬಂಧಿಸುವ ಆಡಳಿತ ವ್ಯವಸ್ಥೆ ಪ್ರಜ್ವಲ್ ಅವರ ವಿರುದ್ಧ ಗಂಭೀರ ಆರೋಪಗಳಿದ್ದರೂ ವಿದೇಶಕ್ಕೆ ಪಲಾಯನ ಮಾಡಲು ಅವಕಾಶ ನೀಡಿದೆ. ಎಲ್ಲೋ ಕುಳಿತು ರಾಜಾರೋಷವಾಗಿ ವಿಡಿಯೋ ಮಾಡಿ ಮೇ 31 ಕ್ಕೆ ಬರುವುದಾಗಿ…

Read More

ಮಡಿಕೇರಿ ಮೇ 28 NEWS DESK : ಗರಗಂದೂರು “ಬಿ” ಗ್ರಾಮದ ಶ್ರೀ ಗುರು ಬಸವೇಶ್ವರ ದೇವಳದ ವಾರ್ಷಿಕ ಪೂಜೋತ್ಸವವು ಶ್ರದ್ಧಭಕ್ತಿಯಿಂದ ನಡೆಯಿತು. ಮುಂಜಾನೆಯಿಂದ ಗಣಪತಿ ಹೋಮ, ಶ್ರೀ ದೇವರ ಮಹಾಪೂಜೆ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಗ್ರಾಮದ ವಿವಿಧಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಸುಮಾರು 300 ವರ್ಷಗಳ ಹಳೆಯ ಶ್ರೀ ಗುರುಬಸವೇಶ್ವರ ದೇವಸ್ಥಾನವನ್ನು 2011ರ ಇಸವಿಯಲ್ಲಿ ರೋಹಿತ್ ಅವರ ಮುಂದಾಳತ್ವದಲ್ಲಿ ಮತ್ತು ಗ್ರಾಮಸ್ಥರ ಹಾಗೂ ದಾನಿಗಳ ನೆರವಿನಲ್ಲಿ ಜೀರ್ಣೋದ್ಧಾರ ಮಾಡಲಾಯಿತು. 2011 ರಿಂದ ಇಂದಿನವರೆಗೂ ಸಿ.ಕೆ.ರೋಹಿತ್ ಅವರು ದೇವಾಲಯ ಸಮಿತಿಯ ಅಧ್ಯಕ್ಷತೆ ವಹಿಸಿಕೊಂಡಿದ್ದು, ಪ್ರಸ್ತುತ ಸಾಲಿನಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕೆ.ಡಿ.ವೀರಪ್ಪ, ಖಜಾಂಜಿಯಾಗಿ ಲಿಖಿತ್ ದಾಮೋದರ್, ಕಾರ್ಯದರ್ಶಿಯಾಗಿ  ಅಜಿತ್ ಕುಮಾರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಉಪ ಗ್ರಾಮಗಳಿಂದ 13 ಜನ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.

Read More

ಕಡಂಗ ಮೇ 28 NEWS DESK : ವಿರಾಜಪೇಟೆಯಿಂದ ನಾಪೋಕ್ಲುವಿಗೆ ತೆರಳುವ ಹಾಗೂ ಕಡಂಗ ಮತ್ತು ಕಾಕೋಟುಪರಂಬುವಿಗೆ ಸಂಪರ್ಕ ಕಲ್ಪಿಸುವ ಕುಂಜಲಗೇರಿ ರಸ್ತೆ ಸಂಪೂರ್ಣವಾಗಿ ಹದಗಿಟ್ಟಿದ್ದು, ಪಾದಾಚಾರಿಗಳು ಹಾಗೂ ವಾಹನ ಚಾಲಕರ ಸಂಚಾರಕ್ಕೆ ಅಡಚಣೆಯನ್ನುಂಟು ಮಾಡುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಕೋಟುಪರಂಬು ಗ್ರಾ.ಪಂ ವ್ಯಾಪ್ತಿಗೆ ಒಳಪಡುವ ಕುಂಜಿಲಗೇರಿ ಗ್ರಾಮದ ರಸ್ತೆಯು ಕಳೆದ 15 ವರ್ಷಗಳಿಂದ ಸಂಪೂರ್ಣವಾಗಿ ಹದಗೆಟ್ಟಿದ್ದು, ಗ್ರಾಮಸ್ಥರು ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಹಲವು ವರ್ಷಗಳಿಂದ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರು ಶಾಸಕರು, ಸಂಸದರು, ಪರಿಷತ್ ಸದಸ್ಯರು ಹಾಗೂ ಜಿಲ್ಲಾ ಪಂಚಾಯ್ತಿ ತಾಲ್ಲೂಕು ಪಂಚಾಯಿತಿ ಸದಸ್ಯರಿಗೆ ಮನವಿ ಸಲ್ಲಿಸಲಾಗಿದ್ದು, ಇಲ್ಲಿಯವರೆಗೆ ಯಾವುದೇ ಸ್ಪಂದನೆ ದೊರೆತ್ತಿಲ್ಲವೆಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು. ಕಡಂಗ, ಪಾರಣೆ ಮುಖ್ಯ ರಸ್ತೆಯಲ್ಲಿ ಹೋಗುವಾಗ ಕುಂಜಲಗೇರಿಯ ವಲ್ಲಂಡ ಕೊಟ್ಟ್ ಎಂಬಲ್ಲಿ ಮುಖ್ಯ ರಸ್ತೆಯು ಸಹ ಈ ರಸ್ತೆಯಿಂದ ಮಳೆಗಾಲದಲ್ಲಿ ಬರುವ ಕೆಸರಿನಿಂದ ದುಸ್ಥಿತಿಯಲ್ಲಿದ್ದು, ರಸ್ತೆ ದುರಸ್ತಿ ಆಗ್ರಹಿಸಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೆ ಕೇವಲ ಭರವಸೆಗಳಷ್ಟೇ ನೀಡುತ್ತಿದ್ದಾರೆ…

Read More

ಮಡಿಕೇರಿ ಮೇ 28 NEWS DESK : ಕೊಡವ ಮಕ್ಕಡ ಕೂಟದ ವತಿಯಿಂದ ಹಿರಿಯ ಸಾಹಿತಿಗಳಾದ ಬಾಚರಣಿಯಂಡ ಅಪ್ಪಣ್ಣ ಹಾಗೂ ರಾಣು ಅಪ್ಪಣ್ಣ ಅವರು ಬರೆದ “ಅಲಾಸ್ಕ” ಪ್ರವಾಸ ಕಥನ ಕನ್ನಡ ಪುಸ್ತಕವನ್ನು ಮಡಿಕೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ನಗರದ ಪತ್ರಿಕಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಐ.ಎ.ಪಿ. ಪ್ರೈವೆಟ್ ಲಿಮಿಟೆಡ್‍ನ ಸಿ.ಇ.ಒ ಮುಕ್ಕಾಟಿರ ಸೋಮಣ್ಣ ಅವರು ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ಕೊಡವ ಮಕ್ಕಡ ಕೂಟದಿಂದ ಬರಹಗಾರರನ್ನು ಪ್ರೋತ್ಸಾಹಿಸವ ಕಾರ್ಯ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪುಸ್ತಕಗಳು ಹೊರ ಬರಲಿ ಎಂದು ಶುಭ ಹಾರೈಸಿದರು. ಹಿರಿಯ ಸಾಹಿತಿ ಹಾಗೂ “ಅಲಾಸ್ಕ” ಪುಸ್ತಕದ ಬರಹಗಾರ ಬಾಚರಣಿಯಂಡ ಪಿ.ಅಪ್ಪಣ್ಣ ಅವರು ಮಾತನಾಡಿ, ಹೃದಯವಂತ ಸಾಹಿತ್ಯ ಪೋಷಕರು ಇದ್ದಾಗ ಮಾತ್ರ ಸಾಹಿತ್ಯ ಕ್ಷೇತ್ರ ಅಗಾಧ ರೂಪದಲ್ಲಿ ಬೆಳೆಯಲು ಸಾಧ್ಯ ಎಂದರು. 2015ರಲ್ಲಿ ಯು.ಎಸ್.ಎ ಯ ಪ್ರತ್ಯೇಕವಾದ ಭೂ ಸ್ವರೂಪ ಮತ್ತು ವಿಶಿಷ್ಟ ಸಂಸ್ಕøತಿಯ ಮೂಲ ನಿವಾಸಿಗಳನ್ನು ಹೊಂದಿರುವ ಅಲಾಸ್ಕ ಪ್ರದೇಶವನ್ನು ಅಧ್ಯಯನ ಮಾಡಿ ದಿನಚರಿಯನ್ನಾಗಿಸಲಾಯಿತು. ಇದನ್ನು ಆಧರಿಸಿ ಪುಸ್ತಕ…

Read More

ಮಡಿಕೇರಿ ಮೇ 28 NEWS DESK : ಮಡಿಕೇರಿ ತಾಲ್ಲೂಕು ಹಿಂದೂ ಮಲಯಾಳಿ ಸಂಘದ ನೂತನ ಆಡಳಿತ ಮಂಡಳಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಕೆ.ವಿ.ಧರ್ಮೇಂದ್ರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಸ್.ದಿನೇಶ್ ಆಯ್ಕೆಯಾಗಿದ್ದಾರೆ. ನಗರದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಕೆ.ಎಸ್.ರಮೇಶ್, ಖಜಾಂಚಿಯಾಗಿ ಎಂ.ಪಿ.ರವಿ, ಉಪಾಧ್ಯಕ್ಷರುಗಳಾಗಿ ಪಿ.ಟಿ.ಉತ್ತಮನ್, ವಿಜಯ ಕುಮಾರ್, ಟಿ.ವಿ.ಗೋಪಿನಾಥ್, ಕಾರ್ಯದರ್ಶಿಯಾಗಿ ಹೆಚ್.ಪಿ.ಅಶೋಕ್, ಸಹ ಖಜಾಂಚಿಯಾಗಿ ಪಿ.ವಿ.ಸುಬ್ರಮಣಿ, ಸಂಘಟನಾ ಕಾರ್ಯದರ್ಶಿಯಾಗಿ ಟಿ.ಆರ್.ಪ್ರಮೋದ್ ಸಹ ಸಂಘಟನಾ ಕಾರ್ಯದರ್ಶಿಯಾಗಿ ಒ.ಎನ್.ಬಾಬು, ಕಚೇರಿ ಕಾರ್ಯದರ್ಶಿಗಳಾಗಿ ಕೆ.ಕೆ.ಮೋಹನ್, ಪ್ರಚಾರ ಸಮಿತಿ ಸಂಚಾಲಕರಾಗಿ ರವಿ ಅಪ್ಪು ಕುಟ್ಟನ್ ಹಾಗೂ ಪ್ರಚಾರ ಸಮಿತಿ ಸಹ ಸಂಚಾಲಕರಾಗಿ ಪ್ರಕಾಶ್ (ಉಣ್ಣಿ ), ಯುವ ಘಟಕದ ಅಧ್ಯಕ್ಷರಾಗಿ ಆರ್.ಅರವಿಂದ, ಉಪಾಧ್ಯಕ್ಷರಾಗಿ ಕೆ.ಎ.ಹರೀಶ್, ಕಾರ್ಯದರ್ಶಿಯಾಗಿ ಎಸ್.ಸಂದೀಪ್, ಸಹ ಕಾರ್ಯದರ್ಶಿಯಾಗಿ ಮನು ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ರದೀಶ್ ಅವರುಗಳು ಸರ್ವಾನುಮತದಿಂದ ಆಯ್ಕೆಯಾದರು. ನೂತನ ನಿರ್ದೇಶಕರುಗಳಾಗಿ ಚಂದ್ರ, ಎನ್.ಸಿ.ಸುನಿಲ್, ಪ್ರಭಾಕರ್, ಎಂ.ಎಂ.ಸುರೇಶ್, ಪಿ.ಪಿ.ಶ್ರೀಧರ್, ಸಿ.ಕೆ.ಹರೀಶ್, ಗೌರವ ಸಲಹೆಗಾರರಾಗಿ ಟಿ.ಆರ್.ವಾಸುದೇವ, ಟಿ.ಕೆ.ಸುಧೀರ್,…

Read More

ಮಡಿಕೇರಿ ಮೇ 28 NEWS DESK : ವಿಧಾನ ಪರಿಷತ್ ಗೆ ನಡೆಯುವ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯನೂರ್ ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಕೆ.ಕೆ.ಮಂಜುನಾಥ್ ಸ್ಪರ್ಧಿಸಿದ್ದು, ಜೂ.3 ರಂದು ನಡೆಯುವ ಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳೂ ಗೆಲ್ಲುವ ವಿಶ್ವಾಸವನ್ನು ವಿರಾಜಪೇಟೆ ಕ್ಷೇತ್ರದ ಶಾಸಕರು, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ವ್ಯಕ್ತಪಡಿಸಿದರು. ಗೋಣಿಕೊಪ್ಪಲು ಸಿಲ್ವರ್ ಸ್ಕೈ ಸಭಾಂಗಣದಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಕಳೆದ ಒಂದು ವರ್ಷದಲ್ಲಿ ಕೊಡಗಿನಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯ ಹಾಗೂ ಗ್ಯಾರಂಟಿ ಯೋಜನೆಗಳಿಂದಾಗಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಅಭಿಪ್ರಾಯಪಟ್ಟರು. ಪದವೀಧರ ಕ್ಷೇತ್ರದ ಮತದಾರರನ್ನು ಶಾಲಾ ಕಾಲೇಜಿಗೆ ತೆರಳಿ ಮತಯಾಚನೆ ಮಾಡುತ್ತಿದ್ದು, ದೂರವಾಣಿ ಮೂಲಕವೂ ಸಂಪರ್ಕಿಸಲಾಗುತ್ತಿದೆ. ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ 1800 ಕ್ಕೂ ಅಧಿಕ ಮತದಾರರು ಇರುವದಾಗಿ ಮಾಹಿತಿ ನೀಡಿದರು. ಶಿಕ್ಷಕರಿಗೆ ಹಲವು ಸಮಸ್ಯೆಗಳಿವೆ. ಹೊಸಾ ಪಿಂಚಣಿ ಯೋಜನರ 7ನೇ ವೇತನ ಆಯೋಗದ ಶಿಫಾರಸ್ಸನ್ನು ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆಯನ್ನು ಶಿಕ್ಷಕರಿಗೆ ಜಾರಿಗೊಳಿಸಲು ಸರ್ಕಾರ…

Read More

ಮಡಿಕೇರಿ ಮೇ 28 NEWS DESK : ಕುಶಾಲನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿರುದ್ಧ ಕುಶಾಲನಗರ ತಾಲ್ಲೂಕು ಸಮಾನ ಮನಸ್ಕರ ವತಿಯಿಂದ ಪ್ರಾಧಿಕಾರದ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕುಶಾಲನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸದೆ ದರ್ಪದಿಂದ ವರ್ತಿಸುತ್ತಿದ್ದು ಕಚೇರಿಗೆ ಬರುವ ಸಾಮಾನ್ಯ ಜನರೊಂದಿಗೆ ಸರ್ವಾಧಿಕಾರಿ ಧೋರಣೆ ತಾಳುತ್ತಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸುವಂತೆ ಪಟ್ಟುಹಿಡಿದರು. ತಪ್ಪಿದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಪ್ರತಿಭಟನೆಯ ಮಾಹಿತಿ ತಿಳಿದ ಮಡಿಕೇರಿ ಉಪವಿಭಾಗಾಧಿಕಾರಿ ವಿನಾಯಕ್ ನಾರ್ವಡೆ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾಕಾರರ ದೂರುಗಳನ್ನು ಆಲಿಸಿ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಕುಶಾಲನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಿಗೆ ಸಂಬಂಧಿಸಿದಂತೆ ಸಾರ್ವಜನಿಕರು ದೂರು ಬಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ದೂರಿನ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗವುದು. ಕಚೇರಿಯಲ್ಲಿ ಸಿಸಿ ಕ್ಯಾಮರಾ ಹಾಗೂ ಬಯೋಮೆಟ್ರಿಕ್ ಅಳವಡಿಸುವ…

Read More

ಮಡಿಕೇರಿ ಮೇ 28 NEWS DESK : ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ. ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪಾಲಿಮರ್/ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ ಮತ್ತು ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್ ಕೈಗಾರಿಕಾ ವಲಯದಲ್ಲಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ಸಿಪೆಟ್ 2024-25ನೇ ಸಾಲಿನ ಉದ್ಯೋಗಾದಾರಿತ ಮತ್ತು ಉದ್ಯೋಗ ಖಚಿತ ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಕ್ಕೆ ಆನ್‍ಲೈನ್/ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (ಡಿಪಿಟಿ), ಡಿಪ್ಲೊಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ(ಡಿಪಿಎಂಟಿ)–3 ವರ್ಷದ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರಾದ ಆರ್.ಟಿ.ನಾಗರಳ್ಳಿ ಅವರು ತಿಳಿಸಿದ್ದಾರೆ. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ(ವಿಜ್ಞಾನ) ಪರೀಕ್ಷೆಯಲ್ಲಿ ತೇರ್ಗಡೆಯಾದವರು/ ಹಾಜರಾದವರು ಆನ್‍ಲೈನ್/ ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.…

Read More