ಕುಶಾಲನಗರ, ಜು.4 NEWS DESK : ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು (ಕೂಡ್ಲೂರು) ಪ್ರೌಢಶಾಲೆಯಲ್ಲಿ ಶಾಲೆಯ ರಾಮಾನುಜನ್ ಗಣಿತ ಸಂಘದ ಆಶ್ರಯದಲ್ಲಿ ಕುಶಾಲನಗರ ಬ್ರೈನ್ ಅಕಾಡೆಮಿ ವತಿಯಿಂದ ಮಕ್ಕಳಿಗೆ ಆರಂಭಿಸಲಾದ ಅಬಾಕಸ್ ಕಲಿಕಾ ತರಬೇತಿಗೆ ಕುಶಾಲನಗರ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿನಿರತರ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್ ಚಾಲನೆ ನೀಡಿದರು. ಅಬಾಕಸ್ ತರಬೇತಿ ಪಡೆಯಲಿರುವ ಶಾಲೆಯ 100 ಮಕ್ಕಳಿಗೆ ಕುಶಾಲನಗರ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿನಿರತರ ಸಹಕಾರ ಸಂಘದ ವತಿಯಿಂದ ಸಾಧನಾ ಸಲಕರಣೆ ಮತ್ತು ಅಭ್ಯಾಸ ಮಾರ್ಗದರ್ಶಿ ಪುಸ್ತಕಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಅಬಾಕಸ್ ಕಲಿಕೆಯ ಸಾಧನ ಸಲಕರಣೆ ವಿತರಿಸಿ ಮಾತನಾಡಿದ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿನಿರತರ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್, ಬುದ್ಧಿಮತ್ತೆಯ ಅಬಾಕಸ್ ಕಲಿಕೆಯು ಮಕ್ಕಳಲ್ಲಿ ಏಕಾಗ್ರತೆ, ಕ್ರಿಯಾಶೀಲತೆಯೊಂದಿಗೆ ಸೃಜನಶೀಲತೆ ಬೆಳೆಸುವ ಮೂಲಕ ಅವರ ಬುದ್ಧಿಶಕ್ತಿಯನ್ನು ಉದ್ದೀಪನಗೊಳಿಸಲು ತುಂಬಾ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಅಬಾಕಸ್ ಕಲಿಕೆಯ ತರಬೇತಿಯನ್ನು ಸದುಪಯೋಗಪಡಿಸಿಕೊಂಡು ತಮ್ಮ ಜ್ಞಾನಾಭಿವೃದ್ಧಿ ವೃದ್ಧಿಸಿಕೊಳ್ಳಬೇಕು ಎಂದರು. ತಮ್ಮ ಸಹಕಾರ ಸಂಘದ ವತಿಯಿಂದ ಹಸಿರು ಯೋಜನೆಯಡಿ ಕುಶಾಲನಗರ…
ಲೇಖಕ: admin
ಮಡಿಕೇರಿ ಜು.4 NEWS DESK : ಮಡಿಕೇರಿ ಬನ್ನಿಮಂಟಪದ ಸ್ವಸ್ತಿಕ್ ಯುವ ವೇದಿಕೆ ಯ 23ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಅಂಚೆಮನೆ ಸತೀಶ್ ಕುಟ್ಟಪ್ಪ, ಉಪಾಧ್ಯಕ್ಷರಾಗಿ ವಿಕ್ರಂ ವಿಜಯ್ ಕುಮಾರ್, ಪ್ರದಾನ ಕಾರ್ಯದರ್ಶಿಯಾಗಿ ಡಿ.ಜಯಣ್ಣ ಆಯ್ಕೆಯಾಗಿದ್ದಾರೆ ಎಂದು ಸಮಿತಿ ಯ ಸಂಸ್ಥಾಪಕ ಅಧ್ಯಕ್ಷ ಕುಲದೀಪ್ ಪೂಣಚ್ಚ ತಿಳಿಸಿದ್ದಾರೆ. ಜಂಟಿ ಕಾರ್ಯದರ್ಶಿಯಾಗಿ ಶಿವರಾಜ್, ಸಹ ಕಾರ್ಯದರ್ಶಿಯಾಗಿ ಚರಣ್, ಖಜಾಂಚಿಯಾಗಿ ಹೊಯ್ಸಳ, ಜಂಟಿ ಖಜಾಂಚಿಯಾಗಿ ಮಿಲನ್, ಸಹ ಖಜಾಂಚಿಯಾಗಿ ಪುನೀತ್, ಅಲಂಕಾರ ಸಮಿತಿ ಗೆ ರಮೇಶ್ ಮತ್ತು ಜಗ್ಗಿ, ಮೆರವಣಿಗೆ ಸಮಿತಿ ಗೆ ಸೋನಲ್ ಪೂಜಾರಿ ಹಾಗೂ ಪ್ರಶಾಂತ್ ನೇಮಕಗೊಂಡಿದ್ದಾರೆ. ಆಹಾರ ಸಮಿತಿ ಗೆ ಹೇಮಂತ್ ಕುಮಾರ್ ಹಾಗೂ ಜ್ಞಾನ ಕುಮಾರ್, ಧ್ವನಿವರ್ಧಕ ಸಮಿತಿ ಗೆ ಮನು ಹಾಗೂ ಬ್ರಿಜೇಶ್, ಗೌರವ ಅಧ್ಯಕ್ಷರಾಗಿ ಗಣೇಶ್ ಹಾಗೂ ಮಂಜುನಾಥ್, ನಿರ್ದೇಶಕರಾಗಿ ಎಂ.ಎಸ್.ಪ್ರಸಾದ್, ಸಲಹೆಗಾರರಾಗಿ ಸವಿತಾ ರಾಕೇಶ್, ಪ್ರೇಮ ರಾಮಯ್ಯ, ರಶ್ಮಿ ಪ್ರವೀಣ್ ನೇಮಕಗೊಂಡಿದರೆ ಎಂದು ಕುಲದೀಪ್ ಪೂಣಚ್ಚ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜು.4 NEWS DESK : ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜು.6 ರಂದು ಚೆಟ್ಟಳ್ಳಿಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಬೆಳಿಗ್ಗೆ 10.30 ಗಂಟೆಗೆ ಚೆಟ್ಟಳ್ಳಿ ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹಾಗೂ ಕೊಡವ ಲ್ಯಾಂಡ್ ಪರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಆದಿಮ ಸಂಜಾತ ಕೊಡವರ ಪವಿತ್ರ ಕೊಡವ ಲ್ಯಾಂಡ್ ನ್ನು ಸಂರಕ್ಷಿಸಿಕೊಳ್ಳಲು ಜಿಲ್ಲೆಯಾದ್ಯಂತ ಸಿಎನ್‌ಸಿ ವತಿಯಿಂದ ನಿರಂತರ ಜನಜಾಗೃತಿ ಕಾರ್ಯಕ್ರಮ ನಡೆಯುತ್ತಿದ್ದು, ಕೊಡವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ರಾಜಕೀಯ ನಂಟು ಮತ್ತು ಕಪ್ಪು ಹಣ ಹೊಂದಿರುವ ಭೂಮಾಫಿಯಾಗಳು, ರೆಸಾರ್ಟ್ ದೊರೆಗಳು, ಕಾರ್ಪೋರೇಟ್ ವಲಯಗಳು, ಬಹುರಾಷ್ಟ್ರೀಯ ಕಂಪೆನಿಗಳು, ಅನಿವಾಸಿ ಭಾರತೀಯ ಉದ್ಯಮಪತಿಗಳು, ವಿಶ್ವದಾದ್ಯಂತ ಇರುವ…
ಮಡಿಕೇರಿ ಜು.4 NEWS DESK : ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಚಿಕಿತ್ಸಕರಾಗಿದ್ದ ಡಾ.ಅನಿಲ್ ದವಾನ್ ಅವರಿಗೆ ಉತ್ತಮ ವೈದ್ಯ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ವೈದ್ಯ ರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುಖ್ಯಮಂತ್ರಿ ಮತ್ತು ಅರೋಗ್ಯ ಸಚಿವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಇವರು, ಪ್ರಸ್ತುತ ಕೊಡಗು ಮತ್ತು ಹಾಸನ ಜಿಲ್ಲೆಯ ಆಹಾರ ಮತ್ತು ಗುಣಮಟ್ಟದ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮಡಿಕೇರಿ ಜು.4 NEWS DESK : ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜು.8 ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ 6.30ರಿಂದ ವೀಕ್ಷಿಸಬಹುದು. ‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ “ಅಶ್ವಿನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ ಕಿರುತೆರೆಗೆ ಮರಳಿರುವುದು. ಈ ಧಾರಾವಾಹಿಯಲ್ಲಿ ಮಯೂರಿಯದು ಸಣ್ಣ ಊರಿನ ಬಡ ನರ್ಸ್ ಪಾತ್ರ. ಊರೇ ಮೆಚ್ಚುವ ಉದ್ಯಮಿ ಸಚ್ಚಿದಾನಂದ ಅವರಿಗೆ ಸೇರಿದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ಬಡ ಹುಡುಗಿ ಮಯೂರಿ. ಜನಾನುರಾಗಿ ಸಚ್ಚಿದಾನಂದರ 20 ವರ್ಷದ ಮಗಳಿಗೆ ಅಪ್ಪನನ್ನು ಕಂಡರೆ ಇಷ್ಟವಿಲ್ಲ. ತನ್ನಿಂದ ದೂರಾಗಿ ಬದುಕುತ್ತಿರುವ ಮಗಳ ವಿಶ್ವಾಸವನ್ನು ಮರಳಿ ಗಳಿಸಿಕೊಳ್ಳಲು ಹಲುಬುತ್ತಿರುವ ಸಚ್ಚಿದಾನಂದ ಅವರ ಬದುಕಿನಲ್ಲಿ ಮಯೂರಿಯ ಪ್ರವೇಶವಾಗುತ್ತದೆ. ತಾನು ಆರಾಧಿಸುವ ಸಚ್ಚಿದಾನಂದ್ ಬಾಳನ್ನು ಸರಿದಾರಿಗೆ ತರುವ ಹಾದಿಯಲ್ಲಿ ಮಯೂರಿ ಎದುರಿಸುವ ಸವಾಲುಗಳೇನು ಎಂಬುದೇ ಮುಂದಿನ ಕತೆ.…
ಮಡಿಕೇರಿ ಜು.4 NEWS DESK : ಪ್ರಸಕ್ತ (2024-25) ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಪಾರ್ಸಿ ಹಾಗೂ ಸಿಖ್ ಸಮುದಾಯ ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೆಆರ್‍ಎಫ್ ಮಾದರಿಯಲ್ಲಿ ಫೆಲೋಶಿಪ್ ನೀಡಲು ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಲ್ಲಿ https://sevasindhu.karnataka.gov.in ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‍ಎಂಸಿ ಕಾಲೇಜು ಹತ್ತಿರ, ಮಡಿಕೇರಿ, ಇವರನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08272 – 225528, ಮಾಹಿತಿ ಕೇಂದ್ರ, ಮಡಿಕೇರಿ 08272 -220214 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.
ಮಡಿಕೇರಿ ಜು.4 NEWS DESK : 2023-24 ನೇ ಸಾಲಿನ ಮಡಿಕೇರಿ ನಗರಸಭಾ ನಿಧಿ ಹಾಗೂ 2024-25 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿ ಅನುದಾನದಡಿ ಅನುಮೋದಿತ ಕ್ರೀಯಾಯೋಜನೆಯಂತೆ ಶೇ.24.10 ರ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ, ಶೇ 7.25 ರ ಇತರೆ ಬಡ ಜನರ ಕಲ್ಯಾಣ ಕಾರ್ಯಕ್ರಮ ಹಾಗೂ ಶೇಕಡ 5 ರ ಅಂಗವಿಕಲರ ಅಭಿವೃದ್ಧಿ ಯೋಜನೆಯ, ವೈಯುಕ್ತಿಕ ಕಾರ್ಯಕ್ರಮದಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅನುದಾನ ಹಾಗೂ ವಿವರ ಇಂತಿದೆ. ಬಡಜನರ ಕಲ್ಯಾಣ ಕಾರ್ಯಕ್ರಮ: ಆಯ್ದ ಇತರೆ ಬಡ ಸಣ್ಣ ಉದ್ದಿಮೆದಾರರಿಗೆ ಸಹಾಯಧನ ರೂ.0.1 ಲಕ್ಷ, ಇತರೆ ಬಡಜನರ ಶಸ್ತ್ರಚಿಕಿತ್ಸೆಗೆ ಸಹಾಯಧನ ರೂ.0.77, ಇತರೆ ಬಡಜನರ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಸಹಾಯಧನ 2.94 ಲಕ್ಷ ರೂ., ಸ್ವಂತ ಉದ್ಯೋಗಕ್ಕಾಗಿ ಬ್ಯಾಂಕ್ ಮೂಲಕ ಸಾಲ ಪಡೆದ ಫಲಾನುಭವಿಗಳಿಗೆ ಸಹಾಯ ಧನ, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ವೈದ್ಯಕೀಯ ಧನ ಸಹಾಯ ರೂ.1.18 ಲಕ್ಷ, ಅಂಗವಿಕಲರ ಕಲ್ಯಾಣ ಕಾರ್ಯಕ್ರಮ: ಅಂಗವಿಕಲರಿಗೆ ಪೋಷಣಾ ವೆಚ್ಚ…
ವಿರಾಜಪೇಟೆ ಜು.4 NEWS DESK : ವಿರಾಜಪೇಟೆಯ ವಿವೇಕ ಜಾಗೃತ ಬಳಗ ಹಾಗೂ ಸರ್ವೋದಯ ಶಿಕ್ಷಣ ಮಹಾ ವಿದ್ಯಾಲಯ ವತಿಯಿಂದ ಪಂಜರುಪೇಟೆಯಲ್ಲಿರುವ ಸರ್ವೋದಯ ಮಹಾವಿದ್ಯಾಲಯದಲ್ಲಿ ಜು. 5ರಂದು ರಕ್ತದಾನ ಶಿಬಿರ ನಡೆಯಲಿದೆ ಎಂದು ವಿವೇಕ ಜಾಗೃತ ಬಳಗದ ಹೆಚ್.ಡಿ.ಲೋಕೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಶಿಬಿರ ನಡೆಯಲಿದ್ದು, ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಈ ಸಂದರ್ಭದಲ್ಲಿ ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ ವಾಣಿ ಪುಷ್ಪರಾಜ್- 9110473574 ಹಾಗೂ ಲೋಕೇಶ್ -9980398152 ಈ ಸಂಖ್ಯೆಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ತಿಳಿಸಿದರು.
ವಿರಾಜಪೇಟೆ ಜು.4 NEWS DESK : ದೇವಣಗೇರಿ ಬಿ.ಸಿ.ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನ ಆಚರಿಸಲಾಯಿತು. ವಿರಾಜಪೇಟೆಯ ಆರಕ್ಷಕ ಠಾಣೆಯ ಚಂದ್ರಶೇಖರ್ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ, ವಿಷಯ ವಿವರಣೆಯನ್ನು ನೀಡಿದರು. ಸಮಾಜದಲ್ಲಿ ಜರುಗುತ್ತಿರುವ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮ ಹಾಗೂ ಸಂಚಾರಿ ನಿಯಮಗಳನ್ನು ವಿವರಿಸಿದರು. ಅಂತರ್ಜಾಲ ವಂಚನೆಗಳನ್ನು ವಿವರಿಸಿ ಎಚ್ಚರಿಕೆ ನೀಡಿದರು. ತಂಬಾಕು ಉತ್ಪನ್ನಗಳು ಮಾರಕ ಆದರೂ ಅದನ್ನು ಮಾರಾಟ ಮಾಡುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳು ಅವುಗಳ ಮೊರೆ ಹೋಗಬಾರದು ಎಂದರಲ್ಲದೆ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಹಾಗೂ ಬಳಕೆ ಮಾಡುವುದು ಅಪರಾಧ ಹಾಗೂ ಆರೋಗ್ಯದ ದೃಷ್ಟಿಯಿಂದ ಯಾವುದೆ ತಂಬಾಕು ಹಾಗೂ ಮದ್ಯಪಾನ ಸೇವನೆ ಮಕ್ಕಳಿಗೆ ಮಾರಕವಾಗಿ ಜೀವನದಲ್ಲಿ ಸದಾ ಅಂಗವಿಕಲತೆಯಿಂದ, ರೋಗದಿಂದ ಬಳಲಬೇಕಾಗತ್ತದೆ ಎಂದು ತಿಳಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಹೆಚ್.ಡಿ ಲೋಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪ್ರತಿಜ್ಞಾವಿಧಿ ಬೋಧಿಸಿ ದಿನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ವಿರಾಜಪೇಟೆ ಆರಕ್ಷಕ ಠಾಣೆ ಆರಕ್ಷಕರಾದ ವಿಜು,…
ಸುಂಟಿಕೊಪ್ಪ,ಜು.4 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಂಟಿಕೊಪ್ಪ ವಲಯದ ಕಾನ್ ಬೈಲ್ ಕಾರ್ಯಕ್ಷೇತ್ರದ ಶ್ರೀ ಬಸವೇಶ್ವರ ದೇವಾಲಯಕ್ಕೆ ದೇಣಿಗೆ ವಿತರಿಸಲಾಯಿತು. ನಾಕೂರು-ಶಿರಂಗಾಲ ಶ್ರೀ ಬಸವೇಶ್ವರ ದೇವಾಲಯದ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ವತಿಯಿಂದ ರೂ 1.50 ಲಕ್ಷ ಗಳನ್ನು ಸುಂಟಿಕೊಪ್ಪ ವಲಯದ ಕಾನ್ ಬೈಲ್ ಕಾರ್ಯಕ್ಷೇತ್ರದ ಮೂಲಕ ಜಿಲ್ಲಾ ನಿರ್ದೇಶಕರಾದ ಲೀಲಾವತಿ, ತಾಲ್ಲೂಕು ಯೋಜನಾಧಿಕಾರಿ ಪುರುಷೋತ್ತಮ್ ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ಎನ್.ಧರ್ಮಪ್ಪ ಡಿ.ಡಿ. ಹಸ್ತಾಂತರಿಸಿದರು. ಈ ಸಂದರ್ಭ ನಾಕೂರು ಶಿರಂಗಾಲ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಗೂಳಪ್ಪ ಕೂತಿನರ್, ಕಾನ್ ಬೈಲ್ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಯಶೋಧ ಬಸವರಾಜ್ ಹಾಗೂ ಒಕ್ಕೂಟದ ಅಧ್ಯಕ್ಷೆ ಭವ್ಯ, ಸಹಕಾರ್ಯದರ್ಶಿ ಅರ್ಚನಾ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬ್ಯಾಂಕಿನ ನಿರ್ದೇಶಕ ಕೆ.ಆರ್.ಮಂಜುನಾಥ್,ರಾಮಯ್ಯ,ಬ್ರಿಜೇಶ್,ಸಿ.ಡಿ.ಗಣೇಶ್,ದಿಲೀಪ್, ಪಂಚಾಕ್ಷರಿ,ಚಿದ್ದು, ಶಿವಕುಮಾರ್,ವಸಂತ,ವಿವೇಕ್,ಜಿ.ಪಂ.ಮಾಜಿ ಸದಸ್ಯೆ ಕುಮುದಾಧರ್ಮಪ್ಪ ಹಾಗೂ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಮತ್ತಿತರರು ಹಾಜರಿದ್ದರು.






