ಲೇಖಕ: admin

ಮಡಿಕೇರಿ ಏ.18 NEWS DESK :  ಕೊಡವ ಅಭಿವೃದ್ಧಿ ನಿಗಮ ಘೋಷಣೆಯಾಗುವಲ್ಲಿ ಯುಕೊ ಸಂಘಟನೆಯ ಪಾತ್ರವನ್ನು ಪರಿಗಣಿಸಿ ಪೊನ್ನಂಪೇಟೆಯ ವಸಂತನಗರದ ಶ್ರೀ ಇಗ್ಗುತ್ತಪ್ಪ ಕೊಡವ ಕೂಟದ ವತಿಯಿಂದ ಯುಕೊ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಅವರನ್ನು ಸನ್ಮಾನಿಸಲಾಯಿತು. ಅರುವತೊಕ್ಲುವಿನ ಭರಣಿ ಸಭಾಂಗಣದಲ್ಲಿ ಕೂಟದ ಅಧ್ಯಕ್ಷರಾದ ಚೇಂದಿರ ಅಪ್ಪಯ್ಯ ಅವರ ನೇತೃತ್ವದಲ್ಲಿ ನಡೆದ ಕೂಟದ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಮಂಜು ಚಿಣ್ಣಪ್ಪ ಅವರಿಗೆ ಚಿನ್ನದ ಸ್ಮರಣಿಕೆ ನೀಡಿ ಸನ್ಮಾನಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೂಟದ ಅಧ್ಯಕ್ಷ ಚೇಂದಿರ ಅಪ್ಪಯ್ಯ, ಎಲ್ಲರೂ ಸ್ವಂತಕ್ಕಾಗಿ ದುಡಿಯುವಲ್ಲಿ ನಿರತರಾಗಿರುವಾಗ ಸಮಾಜ ಹಾಗು ಜನಾಂಗಕ್ಕಾಗಿ ದುಡಿಯುವವರನ್ನು ಗೌರವದಿಂದ ಕಾಣಬೇಕಿದೆ. ಈ ನಿಟ್ಟಿನಲ್ಲಿ ಕೊಡವ ಜನಾಂಗದ ಏಳಿಗೆಗಾಗಿ ಅವಿರತವಾಗಿ ಶ್ರಮಿಸುತ್ತಿರುವ ಮಂಜು ಚಿಣ್ಣಪ್ಪ ಹಾಗೂ ಅವರ ಬಳಗದ ಕೊಡುಗೆ ಅಪಾರವಾದುದು. ಕೊಡವ ಅಭಿವೃದ್ಧಿ ನಿಗಮದ ಯಶಸ್ಸು ಸಾಮಾನ್ಯ ವಿಷಯವಲ್ಲ, ಈ ನಿಟ್ಟಿನಲ್ಲಿ ಅವರನ್ನು ಗೌರವಿಸುವುದು ನಮಗೆ ಹೆಮ್ಮೆಯೆನಿಸಿದೆ ಎಂದು ಹೇಳಿದರು. ಹಿರಿಯರಾದ ಕಳ್ಳೆಂಗಡ ಶಂಬು ಮಾತನಾಡಿ, ಕೊಡವ ಅಭಿವೃದ್ಧಿ…

Read More

(*ಬರಹ : ಗೀತಾಂಜಲಿ ಎನ್.ಎಂ ಸೋಮವಾರಪೇಟೆ ) ಮಡಿಕೇರಿ ಏ.18 NEWS DESK : ಮಾನವ ಸಮಾಜದ ಬೆಳವಣಿಗೆ ಕೇವಲ ಇಂದಿನ ಆಧುನಿಕರಣದ ಸಾಧನೆಗಳ ಮೇಲೆ ಮಾತ್ರ ಆಧಾರವಾಗಿಲ್ಲ, ಅದು ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ‘ಪರಂಪರೆಯ’ ಮೇಲೆಯು ಕಟ್ಟಲಾಗಿದೆ. ಈ ‘ಪರಂಪರೆ’ ಎಂಬ ಪದವು ನಮ್ಮ ಪೂರ್ವಿಕರಿಂದ ನಮಗೆ ಬಂದಿರುವ ಸಂಪತ್ತು ಎಂಬ ಅರ್ಥವನ್ನು ಒಳಗೊಂಡಿದೆ. ಇದು ಕೇವಲ ಕಟ್ಟಡಗಳು ಅಥವಾ ಸ್ಮಾರಕಗಳಷ್ಟೇ ಅಲ್ಲ, ಸಂಸ್ಕೃತಿ, ಭಾಷೆ, ಆಚರಣೆಗಳು, ಕಲೆ, ಸಾಹಿತ್ಯ ಮತ್ತು ನೈಸರ್ಗಿಕ ಸಂಪತ್ತುಗಳನ್ನೂ ಒಳಗೊಂಡಿದೆ. ಈ ನಿಟ್ಟಿನಲ್ಲಿ ಜಗತ್ತಿನ ಸಾಂಸ್ಕೃತಿಕ ವೈವಿಧ್ಯತೆಯನ್ನು ಸಂರಕ್ಷಿಸುವ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಏಪ್ರಿಲ್ 18 ಅನ್ನು ವಿಶ್ವ ಪರಂಪರೆಯ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನವನ್ನು “ಅಂತರರಾಷ್ಟ್ರೀಯ ಸ್ಮಾರಕಗಳು ಮತ್ತು ತಾಣಗಳ ದಿನ”ಎಂದೂ ಕರೆಯಲಾಗುತ್ತದೆ.ಈ ದಿನವನ್ನು ಯುನೆಸ್ಕೋದ ವಿಶ್ವ ಪರಂಪರೆಯ ಪಟ್ಟಿಯಿಂದ ಗುರುತಿಸಲ್ಪಟ್ಟ ಅದ್ಭುತ ಸಾಂಸ್ಕೃತಿಕ ಮತ್ತು ನೈಸರ್ಗಿಕ ಸಂಪತ್ತಿನ ಬಗ್ಗೆ ಜಾಗೃತಿ ಮೂಡಿಸಲು ಸಮರ್ಪಿಸಲಾಗಿದೆ.  ಈ ವಿಶ್ವ…

Read More

ಮಡಿಕೇರಿ ಏ.18 NEWS DESK : ಜಾಗತಿಕ ಮಟ್ಟದಲ್ಲಿ ಪ್ರತಿಭಾನ್ವಿತರನ್ನು ಗುರುತಿಸಿ, ಅವರ ಉದ್ಯೋಗ ನೇಮಕಾತಿಗೆ ನೆರವಾಗುವ ಪ್ರಕ್ರಿಯೆಯಲ್ಲಿ ತೊಡಗಿರುವ ವೃತ್ತಿಪರ ಸಂಸ್ಥೆ ಅಡೆಕೊ ಗ್ರೂಪ್‍ನ ಅಂಗ ಸಂಸ್ಥೆಯಾಗಿರುವ ಅಡೆಕೊ ಇಂಡಿಯಾ ಕೊಡಗಿನಲ್ಲಿ ಉದ್ಯೋಗ ಮೇಳ ಆಯೋಜಿಸುವ ಮೂಲಕ ಕರ್ನಾಟಕದಲ್ಲಿ ಬಹು ಹಂತಗಳ ಗ್ರಾಮೀಣ ಉದ್ಯೋಗ ಅವಕಾಶ ಉಪಕ್ರಮಕ್ಕೆ ಚಾಲನೆ ನೀಡಿದೆ. ಮುಂದಿನ ಮೂರು ತಿಂಗಳಲ್ಲಿ 2500 ರಿಂದ 3000 ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ಗುರಿಯೊಂದಿಗೆ ಅಡೆಕೊ ಇಂಡಿಯಾ ಕಾರ್ಯಪ್ರವೃತ್ತವಾಗಿದ್ದು, ಕೊಡಗು ಸಮಾಜದ ಸಹಯೋಗದಲ್ಲಿ ಉದ್ಯೋಗ ಮೇಳ ಆಯೋಜಿಸುವ ಮೂಲಕ ಚಾಲನೆ ನೀಡಲಾಗಿದೆ. ಇದು ಎಲೆಕ್ಟ್ರಾನಿಕ್ಸ್, ತಯಾರಿಕೆ, ಬ್ಯಾಂಕಿಂಗ್, ಹಣಕಾಸು ಸೇವೆ ಮತ್ತು ವಿಮೆ (ಬಿಎಫ್‍ಎಸ್‍ಐ), ದೂರಸಂಪರ್ಕ, ಎಂಜಿನಿಯರಿಂಗ್ ಮತ್ತು ಇತರ ಪ್ರಮುಖ ವಲಯಗಳಲ್ಲಿ 450-500 ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಒದಗಿಸಿದೆ. ಎರಡು ದಿನಗಳ ಕಾರ್ಯಕ್ರಮವನ್ನು ಬೆಂಗಳೂರಿನ ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ, ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯೆ ಶ್ರೀಮತಿ ನಿರ್ಮಲಾ ಎಚ್.ಪಿ, ಗೋಣಿಕೊಪ್ಪಲಿನ…

Read More

ಕುಶಾಲನಗರ ಏ.18 NEWS DESK :  ಕುಶಾಲನಗರ ಶ್ರೀ ಯೋಗಿ ನಾರೇಯಣ ಬಲಿಜ ಸಂಘದ ವತಿಯಿಂದ ಕೈವಾರ ತಾತಯ್ಯ ಅವರ 300 ನೇ ಜಯಂತಿ ಆಚರಿಸಲಾಯಿತು. ಎಪಿಸಿಎಂಎಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಬಲಿಜ ಸಂಘದ ಅಧ್ಯಕ್ಷ ಎನ್.ಪಿ.ಮುನಿಕೃಷ್ಣಪ್ಪ ಉದ್ಘಾಟಿಸಿ ಮಾತನಾಡಿದರು. ಕೈವಾರ ತಾತಯ್ಯ ಅವರ ಕುರಿತು ಪ್ರವಚನ ಮಾಡಿದ ಕೈವಾರ ಕ್ಷೇತ್ರದ ಮಂಕಾಲ ಶ್ರೀ ಹರಿಶರ್ಮ ಅವರು, ಪರಹಿತಕ್ಕಾಗಿ ಜೀವಿಸಿದ ಬುದ್ದ, ಬಸವ, ಕೈವಾರ ತಾತಯ್ಯ, ಮಹಾವೀರ ಮೊದಲಾದ ಮಹಾತ್ಮರನ್ನು ಪೀಳಿಗೆಯಿಂದ ಪೀಳಿಗೆಗೆ ಜನಸಮುದಾಯ ಅರಿಯಬೇಕು. ಅವರು ಸಮಾಜಕ್ಕೆ ನೀಡಿದ ಸಂದೇಶಗಳನ್ನು ಪಾಲಿಸಬೇಕು. ಅಹಿಂಸೆಯ ಜೀವನ ಕಟ್ಟಬೇಕು ಎಂಬುದು ಪ್ರಾತಸ್ಮರಣೀಯರ ಆಶಯವಾಗಿತ್ತು ಎಂದು ಶ್ರೀಹರಿಶರ್ಮಾ ಹೇಳಿದರು. ಕುಶಾಲನಗರ ತಾಲ್ಲೂಕು ಬಲಿಜ ಸಮಾಜದ ಅಧ್ಯಕ್ಷ ಆರ್. ಚಂದ್ರಶೇಖರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಲಿಜ ಸಮಾಜದ ಮಂದಿ ಒಗ್ಗಟ್ಟಾಗಬೇಕಾಗಿದೆ ಎಂದರು. ಬಲಿಜ ಸಂಘದ ಗೌರವ ಅಧ್ಯಕ್ಷ ಆರ್.ಬಾಬು ಮಾತನಾಡಿ, ತಾಲ್ಲೂಕಿನಲ್ಲಿ ಹೆಚ್ಚಿನ ಬಲಿಜ ಕುಟುಂಬಗಳಿವೆ. ಕುಶಾಲನಗರದಲ್ಲಿ ಪ್ರತ್ಯೇಕ…

Read More

ಕುಶಾಲನಗರ ಏ.18 NEWS DESK  :  ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ಕುಶಾಲನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕುಶಾಲನಗರ ಘಟಕ, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಿವೇಕಾನಂದ ಎಜುಕೇಶನಲ್ ಟ್ರಸ್ಟ್ ಆಶ್ರಯದಲ್ಲಿ ನಡೆದ ಕಾರ್ಯಕ್ರಮಕ್ಲೆ ಅಗ್ನಿಶಾಮಕ ಠಾಣಾಧಿಕಾರಿ ಎನ್.ಎ.ರಂಜಿತ್ ಚಾಲನೆ ನೀಡಿದರು. ಅಗ್ನಿ ಅನಾಹುತಗಳ ವಿಧಗಳು, ಅವುಗಳನ್ನು ನಿಯಂತ್ರಿಸುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಠಾಣೆಯ ಸಹಾಯಕ ಅಧಿಕಾರಿ ಲತೇಶ್ ಕುಮಾರ್ ಅವರು ವಿಶೇಷ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ಕಡ್ಡಾಯವಾಗಿ ಸ್ಥಳೀಯ ಅಗ್ನಿಶಾಮಕ ಠಾಣೆ, ಪೊಲೀಸ್ ಠಾಣೆಗಳ ದೂರವಾಣಿ ಸಂಖ್ಯೆ ಸಂಗ್ರಹಿಸಿಟ್ಟುಕೊಳ್ಳುವುದು ಅವಶ್ಯಕ. ಅಪಾಯ ಸಂದರ್ಭಗಳಲ್ಲಿ ತುರ್ತು ಪರಿಸ್ಥಿತಿಯಲ್ಲಿ ಕೂಡಲೆ ಮಾಹಿತಿ ನೀಡಬಹುದಾಗಿದೆ. ಅಗ್ನಿ ಅನಾಹುತಗಳನ್ನು ಎದುರಿಸುವ ವಿಧಾನಗಳ ಬಗ್ಗೆ ಕನಿಷ್ಠ ಅರಿವು ಹೊಂದುವ ಅಗತ್ಯವಿದೆ ಎಂದು ತಿಳಿಸಿದ ಅವರು, ಸಾಮಾನ್ಯ ಅಗ್ನಿ‌ ಅನಾಹುತ, ಅನಿಲಗಳಿಂದ ಉಂಟಾಗುವ ಅನಾಹುತ ಸೇರಿದಂತೆ ವಿವಿಧ ಬಗೆಯ ಅಗ್ನಿ ‌ಅವಘಡಗಳ‌…

Read More

ಮಡಿಕೇರಿ ಏ.18 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.19 ರ ಪಂದ್ಯಗಳು *ಮೈದಾನ 1* ಬೆಳಿಗ್ಗೆ 8.30 ಗಂಟೆಗೆ ಕೂತಂಡ ಮತ್ತು ಅಪ್ಪುಮಣಿಯಂಡ, 10ಕ್ಕೆ ಕಾಂಗಂಡ ಮತ್ತು ಮಾದೆಯಂಡ (ಎಂ.ಬಾಡಗ), ಮಧ್ಯಾಹ್ನ 12ಕ್ಕೆ ಮೂಕೊಂಡ ಮತ್ತು ಅಯ್ಯಲಾಪಂಡ, 1ಕ್ಕೆ ಮಲ್ಲಜ್ಜೀರ ಮತ್ತು ಚಾರಿಮಂಡ, 2ಕ್ಕೆ ಪೆಬ್ಬಟ್ಟಿರ ಮತ್ತು ಅಪ್ಪುಡ ಹಾಗೂ 3 ಗಂಟೆಗೆ ಮುಂಡಚಾಡಿರ ಮತ್ತು ಮುಕ್ಕಾಟಿರ (ಹರಿಹರ ಬೆಳ್ಳೂರು) *ಮೈದಾನ 2*  ಬೆಳಿಗ್ಗೆ 9 ಗಂಟೆಗೆ ಬೋವೇರಿಯಂಡ ಮತ್ತು ಮುಕ್ಕಾಟಿರ (ಕುಂಜಿಲಗೇರಿ), 10ಕ್ಕೆ ಮಾದೇಟಿರ ಮತ್ತು ಬೊಳ್ಳಚೆಟ್ಟಿರ, 11ಕ್ಕೆ ಕರವಂಡ ಮತ್ತು ಅರಮಣಮಾಡ (ಬೇಗೂರು), ಮಧ್ಯಾಹ್ನ 12ಕ್ಕೆ ಕೊಟ್ಟಂಗಡ ಮತ್ತ ತೀತಿರ (ಹುದಿಕೇರಿ), 1ಕ್ಕೆ ಮುಂಡ್ಯೋಳಂಡ ಮತ್ತು ಮಾಚೆಟ್ಟಿರ (ಬಾಳುಗೋಡು), 2ಕ್ಕೆ ಸಣ್ಣುವಂಡ ಮತ್ತು ಬಡುಮಂಡ ಹಾಗೂ 3 ಗಂಟೆಗೆ ಮಲ್ಲಚ್ಚಿರ ಮತ್ತು ಬೇರೆರ *ಮೈದಾನ 3* *ಮಹಿಳಾ ಕ್ರಿಕೆಟ್* ಬೆಳಿಗ್ಗೆ 10…

Read More

ಮಡಿಕೇರಿ ಏ.18 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.18 ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ತೀತಮಾಡ(ಕುಂದ) ಮತ್ತು ಕಾಣತಂಡ ತಂಡಗಳ ನಡುವಿನ ಪಂದ್ಯದಲ್ಲಿ ಕಾಣತಂಡ 30 ರನ್ ಗಳ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕಾಣತಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 94 ರನ್ ಗಳನ್ನು ಸೇರಿಸಿತು. ತೀತಮಾಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 64 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಆದೇಂಗಡ ಮತ್ತು ಗೀಜಿಗಂಡ ನಡುವಿನ ಪಂದ್ಯದಲ್ಲಿ ಗೀಜಿಗಂಡ 15 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗೀಜಿಗಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 60 ರನ್ ಗಳನ್ನು ಸೇರಿಸಿತು. ಆದೇಂಗಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 45…

Read More

ಮಡಿಕೇರಿ ಏ.18 NEWS DESK : ಕೊಡಗು ಜಿಲ್ಲಾ ಮೊಗೇರ ಸಮಾಜ ಸೇವಾ ಸಂಘದಿಂದ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲಿ ಆಯೋಜಿತ ಎರಡು ದಿನಗಳ 10ನೇ ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ”ಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು. ಮಡಿಕೇರಿ ನಗರಸಭಾ ಅಧ್ಯಕ್ಷರಾದ ಪಿ.ಕಲಾವತಿ ಅವರು ಜ್ಯೋತಿ ಬೆಳಗುವ ಮೂಲಕ ಮೊಗೇರ ಕ್ರೀಡಾಕೂಟ ಸಮಾರಂಭಕ್ಕೆ ಚಾಲನೆಯನ್ನಿತ್ತು ಮಾತನಾಡಿ, ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಮೊಗೇರ ಸಮಾಜ ಬಾಂಧವರು ಕ್ರೀಡಾಕೂಟದ ಹಿನ್ನೆಲೆ ಒಂದೆಡೆ ಸಮಾವೇಶಗೊಂಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ, ಕ್ರೀಡಾಕೂಟದ ಯಶಸ್ಸಿಗೆ ಶುಭ ಹಾರೈಸಿದರು. ಕೊಡಗು ಜಿಲ್ಲಾ ಮೊಗೇರ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪಿ.ಬಿ.ಜನಾರ್ಧನ್ ಮಾತನಾಡಿ, ಕಳೆದ ಒಂದು ದಶಕದಿಂದ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳಲ್ಲಿನ ಮೊಗೇರ ಸಮಾಜ ಬಾಂಧವರನ್ನು ಒಗ್ಗೂಡಿಸುವ, ಆ ಮುಖೇನ ಸಮಾಜದ ಸಂಘಟನೆಯನ್ನು ಬಲಪಡಿಸುವ ಪ್ರಯತ್ನವಾಗಿ ಕ್ರೀಡಾಕೂಟವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಪ್ರಸ್ತುತ ನಮ್ಮೆಲ್ಲ ಪ್ರಯತ್ನಗಳಿಂದ ಸಂಘಟನೆ ಸದೃಢವಾಗಿ ಬೆಳೆಯುತ್ತಿರುವುದಾಗಿ ಸಂತಸ ವ್ಯಕ್ತಪಡಿಸಿದರು. ರಾಜ್ಯ ಮಟ್ಟದ ಈ ಕ್ರೀಡಾಕೂಟದಲ್ಲಿ ಕೊಡಗನ್ನು ಒಳಗೊಂಡಂತೆ…

Read More

ಮಡಿಕೇರಿ ಏ.18 NEWS DESK : ಮಹಿಳಾ ಮೀಸಲು ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ನ ಮಹಿಳಾ ವಿರೋಧಿ ಧೋರಣೆ ಜಗಜ್ಜಾಹೀರಾಗಿದ್ದು, ಅದರ ಮುಖವಾಡ ಕಳಚಿಬಿದ್ದಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಪ್ರಮುಖರು ಕೇಂದ್ರದ ಬಿಜೆಪಿ ನೇತೃತ್ವದ ಎನ್‍ಡಿಎ ಸರಕಾರ ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ.33 ಮೀಸಲಾತಿಯನ್ನು ನೀಡಲು ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಸಂದರ್ಭ ಕಾಂಗ್ರೆಸ್ ನೇತೃತ್ವದ ಮಹಿಳಾ ವಿರೋಧಿ ಇಂಡಿಯಾ ಕೂಟ ಅಡ್ಡಿಪಡಿಸಿ ಅದಕ್ಕೆ ಸೋಲಾಗುವಂತೆ ನಡೆದುಕೊಂಡಿದೆ. ಇದು ಕಾಂಗ್ರೆಸ್ ನ ಮಹಿಳಾ ವಿರೋಧಿ ಧೋರಣೆಗಳನ್ನು ಸ್ಪಷ್ಟಪಡಿಸಿದೆ ಎಂದು ಟೀಕಿಸಿದರು. ರಾಷ್ಟ್ರದ ಜನತೆ ಅದರಲ್ಲೂ ಪ್ರಮುಖವಾಗಿ ಮಹಿಳೆಯರು ಕಾಂಗ್ರೆಸ್ ನ ಈ ಧೋರಣೆಯನ್ನು ವಿರೋಧಿಸುವ ಮೂಲಕ ಮುಂದಿನ ಚುನಾವಣೆಗಳಲ್ಲಿ ಇವರಿಗೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ತಿಳಿಸಿದರು. *ವಿಕೇಂದ್ರೀಕರಣ ಬುಡಮೇಲು* ರಾಜ್ಯ ಕಾಂಗ್ರೆಸ್ ಸರಕಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದೆ ಅಧಿಕಾರ ವಿಕೇಂದ್ರೀಕರಣ…

Read More

ಮಡಿಕೇರಿ, NEWS DESK ಏ.18 : ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು. ನಗರದ ಜಿ.ಪಂ.ಸಭಾAಗಣದಲ್ಲಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಬೇಸಿಗೆಯು ಈ ಬಾರಿ ಹೆಚ್ಚಿದ್ದು, ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕು. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಯಾವುದೇ ರೀತಿಯ ದೂರುಗಳು ಬಾರದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಈ ಬಗ್ಗೆ ಗ್ರಾಮೀಣ ಮಟ್ಟದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ನಗರ ವ್ಯಾಪ್ತಿಯಲ್ಲಿ ನಗರಸಭೆ ಆಯುಕ್ತರು, ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಕುಡಿಯುವ ನೀರು ಪೂರೈಕೆಯ ಮೂಲಗಳಲ್ಲಿನ ನೀರಿನ ಲಭ್ಯತೆಯ ಬಗ್ಗೆ ಮಾಹಿತಿ ಹೊಂದಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದರು. ಜಿಲ್ಲೆಯ 40 ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಮಾಹಿತಿ ಇದ್ದು, ಸೂಕ್ತ…

Read More