ಲೇಖಕ: admin

ಮಡಿಕೇರಿ ಜೂ.3 NEWS DESK : ಲೋಕಸಭಾ ಅಧಿವೇಶನದಲ್ಲಿ ಮುಕ್ತವಾಗಿ ಮಾತನಾಡುವ ವಿಶೇಷ ಅವಕಾಶವನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ವಿಧಾನಸಭೆಯ ಮಾಜಿ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು, ರಾಹುಲ್ ರಾಷ್ಟçದ ಜನತೆಯ ಕ್ಷಮೆಯಾಚನೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತ್ಯಂತ ಜವಾಬ್ದಾರಿಯುತ ವಿರೋಧ ಪಕ್ಷದ ಸ್ಥಾನವನ್ನು ಅಲಂಕರಿಸಿರುವ ರಾಹುಲ್ ಗಾಂಧಿ ಅವರು, ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆಯಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ದೊಡ್ಡ ಆಂದೋಲನವನ್ನೇ ನಡೆಸಬೇಕಗುತ್ತದೆ ಎಂದು ಎಚ್ಚರಿಕೆ ನೀಡಿದರು. ರಾಷ್ಟ್ರಪತಿಗಳ ಭಾಷಣ ಎನ್ನುವುದು ಆಳುವ ಪಕ್ಷದ ಸರ್ಕಾರ ಮುನ್ನಡೆಯಬೇಕಾದ ಹಾದಿಯ ಕುರಿತಾದ ದಿಕ್ಸೂಚಿ ಭಾಷಣವಾಗಿರುತ್ತದೆ. ಈ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭ ಸರ್ಕಾರ ಮುನ್ನಡೆಸುವ ಬಗ್ಗೆ ಆರೋಗ್ಯಕರವಾದ ಸಲಹೆ ಸೂಚನೆಗಳನ್ನು ನೀಡಬೇಕಾದ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು, ತಮ್ಮ ಭಾಷಣದ ಬಹುತೇಕ…

Read More

ಮಡಿಕೇರಿ ಜು.3 NEWS DESK : ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯ ಗೌಡಳ್ಳಿ ಗ್ರಾಮದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರಸಂತೆಯ ಚೆಸ್ಕಾಂನಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೊಳೆನರಸೀಪುರ ಮೂಲದ ಸಂದೀಪ್ ಆರ್. (27) ಎಂಬಾತನೇ ಬಂಧಿತ ಆರೋಪಿ. ಇತ್ತೀಚೆಗೆ ಗೌಡಳ್ಳಿ ಗ್ರಾಮದ ನಿವಾಸಿ ಅಣ್ಣಯ್ಯ (76) ಅವರ ಮನೆಗೆ ರಾತ್ರಿ 8.30 ರ ಸುಮಾರಿನಲ್ಲಿ ನುಗ್ಗಿದ ಅಪರಿಚಿತ ವ್ಯಕ್ತಿ ಅಣ್ಣಯ್ಯ ಅವರು ತಲೆಗೆ ಧರಿಸಿದ್ದ ಮಂಕಿ ಕ್ಯಾಪ್ ಅನ್ನು ಹಿಂಭಾಗದಿAದ ಕಣ್ಣುಮುಚ್ಚುವಂತೆ ಎಳೆದು ಕುತ್ತಿಗೆಯಲ್ಲಿದ್ದ ಅಂದಾಜು 27 ಗ್ರಾಂ ತೂಕದ ಚಿನ್ನದ ಸರವನ್ನು ಕದ್ದೊಯ್ದಿದ್ದ ಕುರಿತು ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಪಿಐ ಪ್ರೀತಂ ಡಿ. ಶ್ರೇಯಾಕರ್, ಶನಿವಾರಸಂತೆ ಪೊಲೀಸ್ ಠಾಣೆಯ ಪಿಎಸ್‌ಐ ಗೋವಿಂದ ರಾಜು, ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿAದ 27…

Read More

ಮಡಿಕೇರಿ ಜು.3 NEWS DESK : ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ವಿವಿಧೆಡೆ ಮರ, ಬರೆ ಬಿದ್ದಿದ್ದು, ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ರಾಷ್ಟ್ರೀಯ ಹೆದ್ದಾರಿ ಮಡಿಕೇರಿ- ಸಂಪಾಜೆಯ ದೇವರಕೊಲ್ಲಿ ಬಳಿ ಬೃಹತ್ ಮರವೊಂದು ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕೊಡಗು- ಕೇರಳ ಗಡಿ ಭಾಗದ ಕುಟ್ಟದ ಬಳಿಯೂ ಹೆದ್ದಾರಿಗೆ ಅಡ್ಡಲಾಗಿ ಮರ ಬಿದ್ದಿತ್ತು. ಗ್ರಾಮೀಣ ಭಾಗದ ರಸ್ತೆಗಳಲ್ಲೂ ಮರ ಬಿದ್ದ ಘಟನೆ ನಡೆದಿದ್ದು, ತೆರವು ಕಾರ್ಯಾಚರಣೆ ಮೂಲಕ ವಾಹನಗಳ ಸಂಚಾರಕ್ಕೆ ಅನುವು ಕಲ್ಪಿಸಿಕೊಡಲಾಯಿತು. ಅರಣ್ಯ ಇಲಾಖೆ, ಚೆಸ್ಕಾಂ ಮತ್ತು ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಗ್ರಾಮೀಣ ಭಾಗದಲ್ಲಿ ನಿರಂತರ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು, ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ::: ನೀರಿಗಿಳಿಯದಂತೆ ನಿರ್ಬಂಧ ::: ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ಜಲಪಾತ, ಝರಿ, ನದಿ, ತೊರೆ, ಸಾರ್ವಜನಿಕ ಕೆರೆಗಳು, ಅಣೆಕಟ್ಟು, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ನೀರಿಗಿಳಿಯದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ…

Read More

ಮಡಿಕೇರಿ ಜು. 3 NEWS DESK :  ಕಾಸರಗೋಡು ಜಿಲ್ಲಾ ಕನ್ನಡ ಪತ್ರಕತ೯ರ ಕ್ಷೇಮಾಭಿವೃದ್ಧಿ ಸಂಘವು ನೀಡುವ ಅಶ್ರಫ್ ಶಾ ಮಂತೂರು ದತ್ತಿಪ್ರಶಸ್ತಿಗೆ ಕೊಡಗು ಜಿಲ್ಲೆಯ ಪತ್ರಕತ೯ ಅನಿಲ್ ಹೆಚ್.ಟಿ.   ಆಯ್ಕೆಯಾಗಿದ್ದಾರೆ. ಕಾಸರಗೋಡುವಿನ ಉದ್ಯಮಿ, ಸಮಾಜಸೇವಕ ಅಶ್ರಫ್ ಶಾ ಮಂತೂರು ಅವರು ಸ್ತಾಪಿಸಿರುವ ದತ್ತಿನಿಧಿಗೆ ಈ ವಷ೯ ಅನಿಲ್ ಹೆಚ್.ಟಿ ಅವರನ್ನು ಆಯ್ಕೆ ಮಾಡಿರವುದಾಗಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕತ೯ರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿನಾಯ್ಕಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ  ಕೊಡಗು ಜಿಲ್ಲೆಯ ಮಡಿಕೇರಿಯ ಅನಿಲ್ ಹೆಚ್.ಟಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಈವರೆಗೆ ಕನಾ೯ಟಕದಲ್ಲಿಯೇ ದಾಖಲೆಯಾಗಿರುವ 60 ಪ್ರಶಸ್ತಿಗಳನ್ನು ಪಡೆದಿದ್ದು, ಈ ಸಾಧನೆ ಪರಿಗಣಿಸಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕತ೯ರ ಕ್ಷೇಮಾಭಿವೃದ್ಧಿ ಸಂಘವು ಈ ಬಾರಿ ದತ್ತಿಪ್ರಶಸ್ತಿಗೆ ಅನಿಲ್ ಅವರನ್ನು ಆಯ್ಕೆ ಮಾಡಿದೆ ಎಂದು ರವಿ ನಾಯ್ಕಾಪು ತಿಳಿಸಿದ್ದಾರೆ. ಪ್ರಶಸ್ತಿಯು 10 ಸಾವಿರ ರು, ನಗದು, ಪ್ರಶಸ್ತಿ ಪತ್ರವನ್ನು ಹೊಂದಿದ್ದು, ಜುಲೈ 13 ರಂದು ಬೆಳಗ್ಗೆ 10,30 ಗಂಟೆಗೆ  ಕಾಸರಗೋಡು ಬಳಿಯ ಸೀತಂಗೋಳಿ ಗ್ರಾಮದ ಅಲಯನ್ಸ್…

Read More

ಮಡಿಕೇರಿ ಜು 3 NEWS DESK :  ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದ 2024 -27 ನೇ ಸಾಲಿಗೆ ಅಧ್ಯಕ್ಷರಾಗಿ ಬೆಂಗಳೂರಿನ ರಘುನಾಥ ರೆಡ್ಡಿ ಮತ್ತು ಗೌರವ ಕಾಯ೯ದಶಿ೯ಯಾಗಿ ಮಡಿಕೇರಿಯ ಅಂಬೆಕಲ್ ಜೀವನ್ ಕುಶಾಲಪ್ಪ ಪುನರಾಯ್ಕೆಯಾಗಿದ್ದಾರೆ. ಮಡಿಕೇರಿಯಲ್ಲಿ ನಡೆದ ಕನಾ೯ಟಕ ಔಷಧಿ ವ್ಯಾಪಾರಿಗಳ ಸಂಘದ 66 ನೇ ವಾಷಿ೯ಕ ಮಹಾಸಭೆಯಲ್ಲಿ ನೂತನ ಆಡಳಿತ ಮಂಡಳಿಗೆ ಆಯ್ಕೆ ಪ್ರಕ್ರಿಯೆ ನಡೆದ ಸಂದಭ೯ ರಘುನಾಥ ರೆಡ್ಡಿ ಮತ್ತು ಜೀವನ್ ಅವಿರೋಧವಾಗಿ ಪುನರಾಯ್ಕೆಯಾದರು,  ನೂತನ ಆಡಳಿತ ಮಂಡಳಿಯ ಖಜಾಂಚಿಯಾಗಿ   ಬಿ. ಉಮೇಶ್, ಉಪಾಧ್ಯಕ್ಷರಾಗಿ ಬಿ. ಕೆ. ಪ್ರಸನ್ನ ಕುಮಾರ್, ಶಿವರಾಜ್ ಪಾಟೀಲ್, ಜಂಟಿ ಕಾರ್ಯದರ್ಶಿಯಾಗಿ  ಸತ್ಯನಾರಾಯಣ ಕೇಲ್ಗರ್ ,   ಸಂಘಟನಾ  ಕಾರ್ಯದರ್ಶಿಯಾಗಿ  ವಿಜಯ್ ಕುಮಾರ್ ಎಸ್. ಬುರಲಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಜು.3 NEWS DESK : ಅನಿಯಮಿತವಾಗಿ 2-3 ದಿನ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳುತ್ತಿರುವ ಬಗ್ಗೆ ದಕ್ಷಿಣ ಕೊಡಗಿನ ಕಿರುಗೂರು ಗ್ರಾ.ಪಂ ವ್ಯಾಪ್ತಿಯ ಕಿರುಗೂರು, ಮತ್ತೂರು ಮತ್ತು ಕೋಟೂರು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಾಳಿ, ಮಳೆ, ಸಿಡಿಲು ಇಲ್ಲದಿದ್ದರೂ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಗ್ರಾಮಗಳು ನಿರಂತರವಾಗಿ ಕತ್ತಲೆಯಲ್ಲಿ ಮುಳುಗುತ್ತಿವೆ. ಇದರಿಂದಾಗಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅಡಚಣೆ ಉಂಟಾಗಿದೆ. ಚೆಸ್ಕಾಂ ಗೆ ದೂರು ನೀಡಿದರೂ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ತುರ್ತು ಸಹಾಯವಾಣಿಗೆ ಕರೆ ಮಾಡಿದರೆ ಯಾರೂ ಕರೆಯನ್ನು ಸ್ವೀಕರಿಸುತ್ತಿಲ್ಲ, ಒಂದು ವೇಳೆ ದೂರು ದಾಖಲಿಸಿಕೊಂಡರೂ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಿರುಗೂರು ಗ್ರಾ.ಪಂ ಅಧ್ಯಕ್ಷ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ವಿದ್ಯುತ್ ಸಮಸ್ಯೆ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚೆಸ್ಕಾಂ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲವೆಂದು ಗ್ರಾಮಸ್ಥರು ಗ್ರಾ.ಪಂ ಗೆ ದೂರು ನೀಡುತ್ತಿದ್ದಾರೆ. ವಿದ್ಯುತ್ ವ್ಯತ್ಯಯದ ಕುರಿತು ಅಧಿಕಾರಿಗಳ ಬಳಿ ಕೇಳಿದರೆ ಸಿಬ್ಬಂದಿಗಳ ಕೊರತೆ ಇದೆ…

Read More

ಮಡಿಕೇರಿ ಜು.3 NEWS DESK : ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ ಆರ್.ಪಾಟೀಲ ಅವರು ಜು.5 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೆಡಿಕಲ್ ಕಾಲೇಜ್ ಗೆ ಭೇಟಿ ನೀಡಲಿರುವ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

Read More

ಮಡಿಕೇರಿ ಜು.3 NEWS DESK : ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಇಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ  ಆಯೋಜಿಸಿದ್ದ “ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ” ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿದರು. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಮರಿಗೌಡ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್.‌ ಮಂಜುನಾಥ ಪ್ರಸಾದ್‌, ಇಲಾಖೆಯ ಹಿರಿಯ ಅಧಿಕಾರಿಗಳು, ಪರಿಸರ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಮಡಿಕೇರಿ ಜು.3 NEWS DESK :  ಶಾಲಾ ಮಕ್ಕಳಲ್ಲಿ ಶಿಸ್ತು – ಸಂಯಮ, ಉತ್ತಮ ನಾಯಕತ್ವ ಗುಣ ಬೆಳೆಸಲು ಸಹಕಾರಿಯಾಗಿರುವ ಭಾರತ್  ಸ್ಕೌಟ್ಸ್  ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಹಾಗೂ ಭವಿಷ್ಯದಲ್ಲಿ ತಮ್ಮನ್ನು ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತಮ ವೇದಿಕೆ ಒದಗಿಸುತ್ತದೆ ಎಂದು ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಆಡಳಿತ ) ಸಿ.ರಂಗಧಾಮಪ್ಪ ಹೇಳಿದರು.   ಭಾರತ್ ಸ್ಕೌಟ್ಸ್  ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಘಟಕದ ವತಿಯಿಂದ ಮಡಿಕೇರಿ ನಗರದ ಡಿಡಿಪಿಐ ಕಛೇರಿಯಲ್ಲಿ  ಜಿಲ್ಲೆಯಲ್ಲಿ ಭಾರತ್ ಸ್ಕೌಟ್ಸ್  ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳ ಕುರಿತು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮತ್ತು ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಶಿಕ್ಷಣ ಇಲಾಖೆಯ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಭಾರತ್ ಸ್ಕೌಟ್ಸ್  ಮತ್ತು ಗೈಡ್ಸ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು  ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾಹಿತಿ ನೀಡಿದರು. ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸಂಸ್ಥೆಯ ಘಟಕಗಳ ಮೂಲಕ ಮಕ್ಕಳಲ್ಲಿ ವಿವಿಧ…

Read More

ಬೆಂಗಳೂರು ಜು.3 NEWS DESK : ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ಬಿಜೆಪಿ ಪ್ರತಿಭಟನೆ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹಾಗೂ ಪ್ರತಿಪಕ್ಷದ ನಾಯಕ ಆರ್.‌ಅಶೋಕ್‌ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಬಿಜೆಪಿ ಶಾಸಕರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾದರು. ಈ ಸಂದರ್ಭ ಪೊಲೀಸರು ಮಧ್ಯ ಪ್ರವೇಶಿಸಿ ಪ್ರತಿಭಟನಾ ನಿರತ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದರು. ಬಿಜೆಪಿ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Read More