ಕಡಂಗ ಜು.2 NEWS DESK : ಕೊಡಗು ಜಿಲ್ಲಾ ಎಸ್.ಎಸ್.ಎಫ್ ನಾಯಕರು ಹಮ್ಮಿಕೊಂಡ ಜಿಲ್ಲಾ ನಾಯಕರ ಯೂನಿಟ್ ಭೇಟಿ ವೊಯೇಜ್ ಕಾರ್ಯಕ್ರಮ ಕಡಂಗ ಬದ್ರಿಯಾ ಮದರಸ ಸಭಾಂಗಣದಲ್ಲಿ ನಡೆಯಿತು. ಎಸ್ ಎಸ್ ಎಫ್ ಜಿಲ್ಲಾಧ್ಯಕ್ಷ ಝುಬೈರ್ ಸಹದಿ ಮಾಲ್ದಾರೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಲಾಂ ಉದ್ಘಾಟಿಸಿ ಸಂಘಟನೆ ನಡೆದು ಬಂದ ಹಾದಿಗಳನ್ನು ವಿವರಿಸಿದರು. ಎಸ್.ಎಸ್.ಎಫ್ ಜಿಲ್ಲಾ ನಾಯಕರು ಹಮ್ಮಿಕೊಂಡ ಕೊಡಗಿನಲ್ಲಿರುವ ಎಸ್.ಎಸ್.ಎಫ್ ನ 100 ಯುನಿಟ್ ಗಳಿಗೆ ಭೇಟಿ ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದರು. ಎಸ್.ವೈ.ಎಸ್ ಜಿಲ್ಲಾ ನಾಯಕ ಖಮರುದ್ದಿನ್ ಅನ್ವಾರಿ ಮಾತನಾಡಿ, ಇಂದಿನ ಯುಗದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದು,ಮಾದಕ ವಸ್ತು ಮಾರಾಟ ಹಾಗೂ ಅದಕ್ಕೆ ಪ್ರೇರೆಪಿಸುವವರಿಗೆ ಕಠಿಣ ಶಿಕ್ಷೆಯಾಗಬೇಕು. ಸಂಘಟನೆಯಿಂದ ವಿದ್ಯಾರ್ಥಿಗಳಿಗೆ ಶಿಸ್ತು, ಸಮಾಜ ಸೇವೆ ಮುಂತಾದ ವಿಷಯಗಳಲ್ಲಿ ಹೆಚ್ಚಿನ ಮಹತ್ವ ದೊರೆಯಲಿದ್ದು, ವಿದ್ಯಾರ್ಥಿಗಳು ಸಂಘಟನೆಯಲ್ಲಿ ಹೆಚ್ಚಾಗಿ ಗುರುತಿಸಿ ಸಮಾಜಮುಖ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಕರೆ ನೀಡಿದರು.…
ಲೇಖಕ: admin
ಪುತ್ತೂರು ಜು.2 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ 25ನೇ ಅಂತರ್ಕಾಲೇಜು ಅಥ್ಲೆಟಿಕ್ ಸ್ಪರ್ಧೆಯಲ್ಲಿ ಪುರುಷರ ವಿಭಾಗದ ಚಾಂಪಿಯನ್‍ಶಿಪ್ ಟ್ರೋಫಿ ಹಾಗೂ ಮಹಿಳೆಯರ ವಿಭಾಗದ ಚಾಂಪಿಯನ್‍ಶಿಪ್‍ನಲ್ಲಿ ರನ್ನರ್ ಅಪ್ ಟ್ರೋಫಿಯೊಂದಿಗೆ ಸತತ ಮೂರನೇ ಬಾರಿ ಕೂಟದ ಸಮಗ್ರ ಪ್ರಶಸ್ತಿಯನ್ನು ಪಡೆದು ದಾಖಲೆ ನಿರ್ಮಿಸಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮೈಸೂರು ವಿಭಾಗದ ಆಶ್ರಯದಲ್ಲಿ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಾಲ್ಕು ದಿನಗಳ ಕಾಲ ನಡೆದ ಈ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ 200ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳ ಕ್ರೀಡಾಪಟುಗಳು ಭಾಗವಹಿಸಿದ್ದರು. ಜಿದ್ದಾಜಿದ್ದಿನ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆಯನ್ನು ತೋರಿದ ವಿದ್ಯಾರ್ಥಿಗಳು ಇತರ ತಂಡಗಳನ್ನು ಮಣಿಸಿ ಹ್ಯಾಟ್ರಿಕ್ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ :: ಫುರುಷರ ವಿಭಾಗದಲ್ಲಿ :: ಪ್ರಥಮ ವರ್ಷದ ಡಾಟಾ ಸೈನ್ಸ್ ವಿಭಾಗದ ಭುವನ್ ಕುಮಾರ್ ಲಾಂಗ್‍ಜಂಪ್‍ನಲ್ಲಿ ಚಿನ್ನ ಹಾಗೂ 4×100ಮೀ ರಿಲೇಯಲ್ಲಿ ಬೆಳ್ಳಿ, ಪ್ರಥಮ ವರ್ಷದ ಎಲೆಕ್ಟ್ರಾನಿಕ್ಸ್…
ವಿರಾಜಪೇಟೆ ಜು.2 NEWS DESK : ಪಟ್ಟಣದ ಮಗ್ಗುಲ ದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಕಾರ್ಯದರ್ಶಿ ಪ್ರತಿಮಾ ರಂಜನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗಿಡಗಳನ್ನು ನೆಟ್ಟು ಬೆಳೆಸುದರಿಂದ ಮುಂದಿನ ಪೀಳಿಗೆಗೆ ನಾವು ಕೊಡುಗೆ ನೀಡಿದಂತಾಗುತ್ತದೆ ಎಂದರು. ಶಿಕ್ಷಕಿ ಕೀರ್ತನ ಸ್ವಾಮಿ ವನಮಹೋತ್ಸವ ಆಚರಣೆಯ ಮಹತ್ವವನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ನಂತರ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಿಡಗಳನ್ನು ನೆಡುವ ಕುರಿತು ಸಂಸ್ಥೆಯ ವತಿಯಿಂದ ಪ್ರತಿಜ್ಞೆ ಮಾಡಲಾಯಿತು. ಶಾಲಾ ವಿದ್ಯಾರ್ಥಿನಿ ಮರದ ವೇಷ ಭೂಷಣದಲ್ಲಿ ಎಲ್ಲರ ಗಮನ ಸೆಳೆದಳು. ಶಾಲಾ ಮುಖ್ಯ ಶಿಕ್ಷಕಿ ಮೀರಾ ಪೂಣಚ್ಚ, ಶಿಕ್ಷಕರು, ಸಿಬ್ಬಂದಿಗಳು, ಮಕ್ಕಳು ಹಾಜರಿದ್ದರು.
ಮಡಿಕೇರಿ ಜು.2 NEWS DESK : ವೀರ ಯೋಧರ ತವರೂರಾದ ಕೊಡಗಿನಲ್ಲಿ ಹಾಕಿಯನ್ನು ಬೆಳೆಸುತ್ತಾ ಬಂದ ಯೋಧರು ಹಾಗೂ ಪ್ರತಿಭಾವಂತ ಹಾಕಿ ಆಟಗಾರರಲ್ಲಿ ಚೋಳಂಡ ಮುದ್ದಯ್ಯ(ಡಾಲು) ಕೂಡ ಒಬ್ಬರು. ಚೋಳಂಡ ಅಚ್ಚಪ್ಪ ಹಾಗು ಬೆಳ್ಳಿಯವ್ವ( ಕಾವೇರಿ, ತಾಮನೆ ಐಚಂಡ) ದಂಪತಿಯರ ಪುತ್ರನಾಗಿ ಮುದ್ದಯ್ಯನವರು 9 ಮೇ 1947ರಂದು ಕಡಂಗ ಮುರೂರಿನಲ್ಲಿ ಜನಿಸಿದರು. ತಮ್ಮ ಶಿಕ್ಷಣವನ್ನು ಕಾಕೋಟುಪರಂಬು ಹಾಗೂ ವಿರಾಜಪೇಟೆಯಲ್ಲಿ ಮುಗಿಸಿದರು. ಇ.ಒ.ಇ ಗೆ ಸೇರ್ಪಡೆ :: 1969ರಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮೆಕಾನಿಕಲ್ ಇಂಜಿನಿಯರ್ಸ್(ಇ.ಒ.ಇ) ಗೆ ಸೇರ್ಪಡೆಗೊಂಡು 1988 ರಲ್ಲಿ ಅದರಿಂದ ನಿವೃತ್ತಿ ಪಡೆದರು. ಸರ್ವಿಸಸ್ ತಂಡಕ್ಕೆ 1981-84 ವರೆಗೆ 4 ವರ್ಷಗಳ ಕಾಲ ಅತ್ಯುತ್ತಮ ಫುಲ್ ಬ್ಯಾಕ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪಶ್ಚಿಮ ಕಮಾಂಡ್ :: ಇ.ಒ.ಇ ಗೆ ಆಡುವಾಗ ಇವರ ಅದ್ಭುತ ಆಟ ಹಾಗು ಚುರುಕುತನದಿಂದ ಪಶ್ಚಿಮ ಕಮಾಂಡ್ ಗೆ 5 ಬಾರಿ ಆಯ್ಕೆಯಾದರು. 1982 ಮೀರತ್ ನ್ಯಾಷನಲ್ಸ್ :: ಮೀರತ್ ನಲ್ಲಿ ನಡೆದ 52ನೇ ರಂಗಸ್ವಾಮಿ ಕಪ್ ನ್ಯಾಷನಲ್ಸ್…
ಮಡಿಕೇರಿ ಜು.2 NEWS DESK : ಮನೆಯ ಸಮೀಪ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಕಕ್ಕಬ್ಬೆ ನಾಲಡಿ ಗ್ರಾಮದಲ್ಲಿ ನಡೆದಿದೆ. ವಾಟೆಕಾಡು ನಿವಾಸಿ ದೇವಯ್ಯ ಎಂಬವರು ಎಂದಿನಂತೆ ಆಟೋ ರಿಕ್ಷಾ ನಿಲ್ಲಿಸಿ ಮನೆಗೆ ತೆರಳಿದ್ದರು. ರಾತ್ರಿಯ ವೇಳೆ ಕಾಡಾನೆ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿದ್ದು, ಪರಿಣಾಮ ವಾಹನಕ್ಕೆ ಹಾನಿಯಾಗಿದೆ.
ಸುಂಟಿಕೊಪ್ಪ ಜು.2 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಪಾಲಕ ಸಂತ ಅಂತೋಣಿಯವರ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ವಾರ್ಷಿಕೋತ್ಸವದ ಅಂಗವಾಗಿ ಮೂರು ದಿನಗಳ ಕಾಲ ವಿಶೇಷ ಬಲಿಪೂಜೆ, ಆರಾಧನೆ ನಡೆಯಿತು. ರೇ.ಫಾ. ಸಂಜಯ್ ಕುಮಾರ್ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ವಿಶೇಷ ಪ್ರಭೋದನೆ ಮತ್ತು ಬಲಿಪೂಜೆಯನ್ನು ಸಮರ್ಪಿಸಿದರು. 3 ದಿನಗಳು ವಿವಿಧ ಧರ್ಮಕೇಂದ್ರಗಳ ಧರ್ಮಗುರುಗಳು ಆಗಮಿಸಿ ಬಲಿಪೂಜೆ ಆರಾಧನೆಯನ್ನು ಸಲ್ಲಿಸಿದರು. ವಾರ್ಷಿಕೋತ್ಸವದ ಅಂಗವಾಗಿ ಮಧ್ಯಾಹ್ನದ ವೇಳೆಯಲ್ಲಿ ಸಂತ ಸಬಾಸ್ಟೀನ್ ಅವರ ಅಂಬು ಕಾಣಿಕೆ ಹರಕೆಯನ್ನು ಭಕ್ತಾಧಿಗಳು ಸಲ್ಲಿಸಿದರು. ಸಂತ ಅಂತೋಣಿಯವರ ದೇವಾಲಯದಲ್ಲಿ ಹಬ್ಬದ ಅಡಂಬರ ಗಾಯನ ಬಲಿಪೂಜೆ ಮತ್ತು ಪರಮಪ್ರಸಾದ ಆರಾಧನೆಯನ್ನು ಹೆಚ್.ಡಿ.ಕೋಟೆಯ ಸೈಂಟ್ ಮೇರಿಸ್ ಚರ್ಚ್‍ನ ಬರ್ನಾಡ್ ಪ್ರಕಾಶ್ ಬಾರ್ನಿಸ್ ಜಿಲ್ಲೆಯ ವಿವಿಧ ಧರ್ಮಕೇಂದ್ರಗಳ ಧರ್ಮಗುರುಗಳು ಒಗ್ಗೂಡಿ ನೇರವೇರಿಸಿದರು. ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ಒಳಾಂಗಣವನ್ನು ಬಣ್ಣ ಹೂಗಳು, ಬಂಟಿಗ್ಸ್ ಹಾಗೂ ಹೊರಾಂಗಣವನ್ನು ವಿದ್ಯುತ್ ದೀಪಾಗಳಿಂದ ಅಲಂಕಾರಿಸಲಾಗಿತ್ತು. ವಿರಾಜಪೇಟೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ವಂ.ಪಾ.ಮದಲೈಮುತ್ತು, ಅನ್ನಮ್ಮ…
ಮಡಿಕೇರಿ ಜು.1 NEWS DESK : ಕಳೆದ ಎರಡು ದಿನಗಳಿಂದ ಇಳಿಮುಖವಾಗಿದ್ದ ಆರ್ದ್ರಾ ಮಳೆ ಕೊಡಗಿನಲ್ಲಿ ಮತ್ತೆ ಬಿರುಸುಗೊಂಡಿದೆ. ವಿರಾಜಪೇಟೆ ಮತ್ತು ಭಾಗಮಂಡಲ ಭಾಗದಲ್ಲಿ ಕಳೆದ 24 ಗಂಟೆಗಳಲ್ಲಿ ಅಧಿಕ ಮಳೆಯಾಗಿದೆ. ಹಗಲಿನ ವೇಳೆ ಕೊಂಚ ಬಿಡುವು ನೀಡುವ ಮಳೆ ರಾತ್ರಿ ಬಿರುಸುಗೊಳ್ಳುತ್ತಿದೆ. ವಿರಾಜಪೇಟೆಯಲ್ಲಿ 5 ಇಂಚು ಮತ್ತು ಭಾಗಮಂಡಲದಲ್ಲಿ 4 ಇಂಚಿಗೂ ಅಧಿಕ ಮಳೆಯಾಗಿದೆ. ಮಡಿಕೇರಿ ತಾಲ್ಲೂಕು ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿದೆ. ಮಡಿಕೇರಿ ನಗರದಲ್ಲಿ ಮಂಜು ಮತ್ತು ಚಳಿಯ ವಾತಾವರಣ ಮುಂದುವರೆದಿದೆ. ಪೊನ್ನಂಪೇಟೆ ತಾಲ್ಲೂಕು ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಮಾಡು ಗ್ರಾಮದ ಕುದನೆಕೊಡಿರ ಮಣಿ ಬೆಳ್ಳಿಯಪ್ಪ ಎಂಬುವವರ ಮನೆಯ ಗೋಡೆ ಭಾರೀ ಮಳೆಯ ಪರಿಣಾಮ ಕುಸಿದು ಬಿದ್ದಿದೆ. ನಿಟ್ಟೂರು ಗ್ರಾ.ಪಂ ಕಾರ್ಮಾಡು ವಾರ್ಡ್ ಸದಸ್ಯರುಗಳಾದ ಪಡಿಞರಂಡ ಕವಿತಾಪ್ರಭು ಹಾಗೂ ಕಾಟಿಮಾಡ ಶರೀನ್ ಮುತ್ತಣ್ಣ ಅವರು ಅಗತ್ಯ ಕ್ರಮ ಕೈಗೊಳ್ಳಲು ಕಂದಾಯ ಇಲಾಖೆಗೆ ಮನವಿ ಮಾಡಿದ್ದಾರೆ. ಭಾನುವಾರ ರಾತ್ರಿ ಸುರಿದ ಮಳೆಗೆ ವಿರಾಜಪೇಟೆ ನಗರದಲ್ಲಿ ಬರೆ ಕುಸಿದಿದೆ.…
ಮಡಿಕೇರಿ ಜು.1 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆ ಗರಿಗೆದರಿದೆ. ಈಗಾಗಲೇ ಮುಸುಕಿನ ಜೋಳ ಬಿತ್ತನೆ ಕಾರ್ಯವು 77 ಹೆಕ್ಟೇರ್ ಪ್ರದೇಶದಲ್ಲಿ ಪೂರ್ಣಗೊಂಡಿದೆ. ಹಾಗೆಯೇ ಭತ್ತ ಸಸಿಮಡಿ ಕಾರ್ಯ ಆರಂಭವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ ಅವರು ತಿಳಿಸಿದ್ದಾರೆ. ಮೇ ತಿಂಗಳಲ್ಲಿ 138 ಮಿ.ಮೀ.ವಾಡಿಕೆ ಮಳೆಗೆ 280 ಮಿ.ಮೀ. ಮಳೆಯಾಗಿದ್ದು, ಶೇ.102 ರಷ್ಟು ಮಳೆಯಾಗಿತ್ತು. ಜೂನ್ ತಿಂಗಳಲ್ಲಿ 534 ಮಿ.ಮೀ. ವಾಡಿಕೆ ಮಳೆಗೆ 435 ಮಿ.ಮೀ. ಮಳೆಯಾಗಿದ್ದು, ಶೇ.18 ರಷ್ಟು ಮಳೆ ಕಡಿಮೆಯಾಗಿದೆ. ಜುಲೈ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ ಅವರು ಮಾಹಿತಿ ನೀಡಿದ್ದಾರೆ. ಜನವರಿಯಿಂದ ಇಲ್ಲಿಯವರೆಗಿನ ವಾಡಿಕೆ ಮಳೆ 786 ಮಿ.ಮೀ. ಆಗಿದ್ದು, ಈ ಬಾರಿ 775 ಮಿ.ಮೀ. ಮಳೆಯಾಗಿದ್ದು, ಶೇ.4 ರಷ್ಟು ಮಾತ್ರ ಮಳೆ ಕಡಿಮೆಯಾಗಿದೆ. ರೈತರು ಮುಂಗಾರು ಹಂಗಾಮಿನ ಪೂರ್ವ ಸಿದ್ಧ್ದತೆಯಲ್ಲಿದ್ದು, ಜಿಲ್ಲೆಯಲ್ಲಿ ಭತ್ತದ ಸಸಿಮಡಿ ಕಾರ್ಯವು ಪ್ರಗತಿಯಲ್ಲಿರುತ್ತದೆ,…
ಮಡಿಕೇರಿ ಜು.1 NEWS DESK : ರಾಜಕೀಯ ನಂಟು ಹೊಂದಿರುವ ಭೂಮಾಫಿಯಾಗಳು ವಾಣಿಜ್ಯ ದುರುದ್ದೇಶಕ್ಕಾಗಿ ಆದಿಮಸಂಜಾತ ಕೊಡವರ ಪವಿತ್ರ ಕೊಡವ ಲ್ಯಾಂಡ್ ನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಕಪ್ಪು ಹಣ ಚಲಾವಣೆಯಾಗುತ್ತಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‍ಸಿ ವತಿಯಿಂದ ಕಕ್ಕಬ್ಬೆ ಜಂಕ್ಷನ್‍ನಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ವಿಶ್ವದಾದ್ಯಂತ ಇರುವ ಆರ್ಥಿಕ ಅಪರಾಧಿಗಳು, ಕಾಳಸಂತೆಕೋರರು ಹಾಗೂ ರಾಜಕೀಯ ನಂಟು ಹೊಂದಿರುವ ಭೂಮಾಫಿಯಾಗಳು ಕಪ್ಪು ಹಣವನ್ನು ಬಿಳಿ ಮಾಡಲು ಕೊಡವ ಲ್ಯಾಂಡ್ ನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೊಡಗಿನಲ್ಲಿ ರೆಸಾರ್ಟ್ ವ್ಯವಹಾರ ದೊಡ್ಡ ಮಟ್ಟದಲ್ಲಿ ನಡೆಯದಿದ್ದರೂ ಕಾಫಿ ತೋಟಗಳ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಮಾಡಲಾಗುತ್ತಿದೆ. ನಷ್ಟ ತೋರಿಸುವುದಕ್ಕಾಗಿ ರೆಸಾರ್ಟ್‍ಗಳನ್ನು ನಿರ್ಮಿಸುತ್ತಿದ್ದು, ಕಪ್ಪು ಹಣವನ್ನು ಚಲಾವಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.…
ಮಡಿಕೇರಿ ಜು.1 NEWS DESK : ರಾಜ್ಯದಲ್ಲಿ ಕನ್ನಡಿಗರಿಗೆ ಎಲ್ಲಾ ಮಾದರಿ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಟಿ.ಎ.ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಕರವೇ ಜಿಲ್ಲಾಧ್ಯಕ್ಷ ಕೆ.ಎಸ್.ದೀಪಕ್ ಹಾಗೂ ಮಡಿಕೇರಿ ತಾಲೂಕು ಅಧ್ಯಕ್ಷ ಪ್ರದೀಪ್ ಕರ್ಕೇರ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ವೇದಿಕೆಯ ಪ್ರಮುಖರು ಹಾಗೂ ಕಾರ್ಯಕರ್ತರು ಘೋಷಣೆಗಳ ಕೂಗಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಹೊರರಾಜ್ಯದಿಂದ ಬಂದು ನೆಲೆಸಿರುವವರಿಗೆ ಸಿಗುವ ಉದ್ಯೋಗ ಮಾನ್ಯತೆ ಕನ್ನಡಿಗರಿಗೆ ಇಲ್ಲದಂತಾಗಿದೆ.ಇದರಿಂದ ನಾಡಿನ ಜನತೆ ನಿರುದ್ಯೋಗ ಸಮಸ್ಯೆ ಎದುರಿಸುವಂತಾಗಿದೆ ಎಂದರು. ಬೇಡಿಕೆಯ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರಿಗೆ ಸಲ್ಲಿಸಿದರು.






