ನಾಪೋಕ್ಲು ಮೇ 23 NEWS DESK : ಬೇಸಿಗೆ ಶಿಬಿರಗಳ ಆಯೋಜನೆಯಿಂದ ಮಕ್ಕಳ ಮನಸ್ಸನ್ನು ಬದಲಾಯಿಸಬಹುದು ಎಂದು ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಹೇಳಿದರು. ಪೇರೂರಿಯನ್ಸ್ ಕ್ಲಬ್ ವತಿಯಿಂದ ಸಮೀಪದ ಪೇರೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಬೇಸಿಗೆ ಶಿಬಿರದ ಸಮರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಮಕ್ಕಳು ಮೊಬೈಲ್ ಮೊರೆ ಹೋಗುತ್ತಿದ್ದಾರೆ. ತಂಟೆ ಮಾಡುವ ಮಕ್ಕಳನ್ನು ಸುಮ್ಮನಾಗಿರಿಸಲು, ಅಳುವ ಮಗುವನ್ನು ಸಮಾಧಾನಗೊಳಿಸಲು ಪೋಷಕರೇ ಇಂದು ಮಕ್ಕಳ ಕೈಗೆ ಮೊಬೈಲ್ ಕೊಡುವ ವ್ಯವಸ್ಥೆಗೆ ತಲುಪಿದೆ. ಪರೀಕ್ಷೆಗಳು ಕಳೆದ ನಂತರ ಮಕ್ಕಳು ಸಮಯವನ್ನು ವ್ಯರ್ಥ ಮಾಡುವ ಬದಲು ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಹವ್ಯಾಸಗಳನ್ನು ವೃದ್ಧಿಸಿಕೊಳ್ಳಬಹುದು ಎಂದರು. ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ನಂತರ ಬೇಸಿಗೆ ಶಿಬಿರಗಳನ್ನು ಆಯೋಜಿಸುವ ಪರಿಪಾಠ ವಿವಿಧಡೆ ನಡೆಯುತ್ತಾ ಬಂದಿದೆ. ಹಾಕಿ, ಕ್ರಿಕೆಟ್ ಸೇರಿದಂತೆ ಕ್ರೀಡಾ ಹಾಗೂ ವೃತ್ತಿಪರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವುದು ಮುಖ್ಯ ಅಲ್ಲ. ಅದಕ್ಕಿಂತಲೂ…
ಲೇಖಕ: admin
ಮಡಿಕೇರಿ ಮೇ 23 NEWS DESK : ನೈರುತ್ಯ ಪಧವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಪುತ್ತಿಗೆ ಮಠದ ಪೀಠಾಧಿಪತಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಮಡಿಕೇರಿ ಮೇ 23 NEWS DESK : ನೈರುತ್ಯ ಪಧವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಉಡುಪಿಯ ಶ್ರೀ ಕೃಷ್ಣ ದೇಗುಲಕ್ಕೆ ಭೇಟಿ ನೀಡಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ , ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಡಿಕೇರಿ ಮೇ 23 NEWS DESK : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 35.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.62 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 283.86 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 138.62 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 17.98 ಮಿ.ಮೀ. ಕಳೆದ ವರ್ಷ ಇದೇ ದಿನ 3.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 371.70 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 202.53 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 52.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 199.65 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 75.81 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 86.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ…
ಮಡಿಕೇರಿ ಮೇ 23 NEWS DESK : ಕಿರುಗೂರು ಶ್ರೀ ಕುಟ್ಟಿಚಾತನ್ ಹಾಗೂ ಚಾಮುಂಡಿ ದೇವರ ಉತ್ಸವವು ಮೇ 26 ಮತ್ತು 27ರಂದು ನಡೆಯಲಿದೆ. ಮೇ 26 ರಂದು ರಾತ್ರಿ 7 ಗಂಟೆಗೆ ಶ್ರೀ ಕುಟ್ಟಿಚಾತನ್, ಚಾಮುಂಡಿ ದೇವರ ಉತ್ಸವವು ಪ್ರಾರಂಭವಾಗಿ ಮೇ 27ರ ರಾತ್ರಿ 8ಗಂಟೆಯವರಗೆ ವಿವಿಧ ದೇವತಾ ಕಾರ್ಯಗಳೊಂದಿಗೆ ನಡೆಯಲಿದೆಯೆಂದು ಕಿರುಗೂರು ಶ್ರೀ ಕುಟ್ಟಿಚಾತ, ಚಾಮುಂಡಿ ದೇವಸ್ಥಾನದ ಅಡಳಿತ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿದೆ.
ಮಡಿಕೇರಿ ಮೇ 23 NEWS DESK : ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಆನಂದಪುರ ಬೆಕ್ಕಿನಕಲ್ಮಠದ ಜಗದ್ಗುರು ಡಾ.ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭ ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್.ದತ್ತಾತ್ರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಮತ್ತಿತರರು ಹಾಜರಿದ್ದರು.
ವಿರಾಜಪೇಟೆ ಮೇ 23 NEWS DESK : ಕೊಡಗು ಹಾಕಿ ಕ್ರೀಡಾ ಪ್ರೇಮಿಗಳ ತವರೂರು. ಇಲ್ಲಿನ ಜನರು ಕ್ರೀಡೆಗೆ ತೋರಿಸುತ್ತಿರುವ ಪ್ರೀತಿಯೇ ಇದಕ್ಕೆ ಕಾರಣ ಎಂದು ಒಡಿಸ್ಸಾದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಹಾಕಿ ಕೋಚ್ ಬಿ.ಜೆ.ಕಾರ್ಯಪ್ಪ ಅಭಿಪ್ರಾಯಪಟ್ಟರು. ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಮತ್ತು ಬಿಬಿಎ ವಿಭಾಗದ ಸಹಯೋಗದಲ್ಲಿ ಪೊನ್ನಂಪೇಟೆಯ ಹಾಕಿ ಟರ್ಫ್ ಮೈದಾನದಲ್ಲಿ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಮಾತನಾಡಿದರು. ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಭಾಗವಹಿಸಲು ಅನೇಕ ಅವಕಾಶಗಳಿದ್ದು, ವಿದ್ಯಾರ್ಥಿಗಳು ಅದರ ಸದುಪಯೋಗವನ್ನು ಪಡೆಯುವಂತಾಗಬೇಕು ಎಂದು ಕಿವಿ ಮಾತು ಹೇಳಿದರು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಸೆಂಟ್ ಆನ್ಸ್ ಪಿಯು ಕಾಲೇಜಿನ ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಉತ್ತಮ ಸಾಧನೆ ಮಾಡಬೇಕು ಎಂದರು. ವಿವಿಧ ಕಾಲೇಜುಗಳ ತಂಡಗಳು ಉತ್ಸಾಹದಿಂದ ಭಾಗವಹಿಸಿದ್ದು ಪಂದ್ಯಾಟದಲ್ಲಿ ಗೆಲುವನ್ನು ಸಾಧಿಸಲಿ ಎಂದು ಶುಭ ಹಾರೈಸಿದರು.…
ಮಡಿಕೇರಿ ಮೇ 23 NEWS DESK : ಕಳೆದ ಎರಡು ದಿನಗಳ ಹಿಂದೆ ಕುಶಾಲನಗರ ಪಟ್ಟಣ ಮತ್ತು ಹೊರವಯಗಳಲ್ಲಿ ಸುರಿದ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲಿಸಿದರು. ಕುಶಾಲನಗರದ ಸಾಯಿ ಬಡಾವಣೆ, ಕುವೆಂಪು ಬಡಾವಣೆ, ಹೊರವಲಯದ ಗುಮ್ಮನಕೊಲ್ಲಿ, ಹಾರಂಗಿ ರಸ್ತೆ ವ್ಯಾಪ್ತಿಯ ಬಡಾವಣೆಗಳಿಗೆ ಮತ್ತು ಕುಡ್ಲೂರು ವ್ಯಾಪ್ತಿಯಲ್ಲಿ ತಡೆಗೋಡೆ ಕುಸಿತದಿಂದ ಉಂಟಾಗಿರುವ ಹಾನಿ ಬಗ್ಗೆ ಪರಿಶೀಲಿಸಿದರು. ಕುಶಾಲನಗರದ ಸಾಯಿ ಬಡಾವಣೆ, ಕುವೆಂಪು ಬಡಾವಣೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ತಡೆಗೋಡೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕರು ಆದಷ್ಟು ಬೇಗನೇ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾಯಿ ಬಡಾವಣೆಯಲ್ಲಿ ಶಾಸ್ವತವಾಗಿ ಪ್ರವಾಹ ತಪ್ಪಿಸಲು ಅತ್ಯಾಧುನಿಕ ತಂತ್ರಜ್ಞಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಹೇಳಿದರು. ರಾಜಕಲುವೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದೆಂದರು. ಈ ಸಂದರ್ಭ ಜಿ.ಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಮಾಜಿ ಸದಸ್ಯ ವಿ.ಪಿ.ಶಶಿಧರ್, ಪುರಸಭೆ ಸದಸ್ಯ ಪ್ರಮೋದ್ ಮುತ್ತಪ್ಪ, ಹರೀಶ್ ಮತ್ತು…
ಗುಂಡ್ಲುಪೇಟೆ ಮೇ 22 NEWS DESK : ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಊಟಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಗರಗನಹಳ್ಳಿ ಗೇಟ್ ಬಳಿ ಇಂದು ನಡೆದಿದೆ. ಆಲುತ್ತೂರು ಗ್ರಾಮದ ಬೈಕ್ ಸವಾರ ಮಲ್ಲೇಶ್(23) ಮೃತ ಯುವಕ. ಹಿಂಬದಿಯಲ್ಲಿ ಕುಳಿತಿದ್ದ ಮಾನಸ ಎಂಬುವವರಿಗೆ ತೀವ್ರ ಗಾಯಾಳುಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಲತ್ತೂರು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಬೈಕ್ ಮತ್ತು ಮೈಸೂರು ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿ ತೀವ್ರವಾಗಿ ಗಾಯಗೊಂಡ ಮಲ್ಲೇಶ್ ಅವರನ್ನು ಪ್ರಥಮ ಚಿಕಿತ್ಸೆಯ ನಂತರ ಮೈಸೂರು ಆಸ್ಪತ್ರೆಯಲ್ಲಿ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟರು. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೋಮವಾರಪೇಟೆ ಮೇ 22 NEWS DESK : ಗೌಡಳ್ಳಿ, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡುಕೋಣಗಳ ಉಪಟಳ ಜಾಸ್ತಿಯಾಗಿದ್ದು ಕೃಷಿಕರು ಕಂಗಾಲಾಗಿದ್ದಾರೆ. ನಿಡ್ತ, ಮಾಲಂಬಿ, ಯಡವನಾಡು ಮೀಸಲು ಅರಣ್ಯಗಳಿಂದ ಕಾಡುಕೋಣಗಳು ಬೆಳಗ್ಗಿನ ಜಾವದಲ್ಲಿ ಕಾಫಿ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿವೆ. ಅರಣ್ಯದಂಚಿನ ಗ್ರಾಮಗಳಲ್ಲಿ ಕೂಲಿ ಕಾರ್ಮಿಕರು ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಕೃಷಿಕರು ಭಯಪಡುತ್ತಿದ್ದಾರೆ. ಬುಧವಾರ ಬೆಳಿಗ್ಗೆ ಹಿರಿಕರ, ಹೆಗ್ಗುಳ ಮತ್ತು ಚಿಕ್ಕಾರ ಗ್ರಾಮಗಳ ತೋಟಗಳಲ್ಲಿ ಕಾಡುಕೋಣಗಳು ಹಾವಳಿ ಎಬ್ಬಿಸಿರುವ ಗ್ರಾಮಸ್ಥರು ತಿಳಿಸಿದ್ದಾರೆ. ಕಾಫಿ ತೋಟದೊಳಗೆ ಬೆಳಗ್ಗಿನ ಜಾವ ಆಹಾರ ಸೇವಿಸಿ, ಗುದ್ದಾಟ ನಡೆಸಿರುವುದರಿಂದ ಕಾಫಿಗಿಡಗಳು ಹಾಳಾಗಿವೆ. ಎಚ್.ಪಿ.ಸುರೇಶ್, ರಾಜಪ್ಪ, ಜಿ.ಕೆ.ಸುರೇಶ್ ಎಂಬವರುಗಳ ಕಾಫಿ ತೋಟಗಳಲ್ಲಿ ಗಿಡಗಳು ಹಾಳಾಗಿವೆ. ಕಾಡಾನೆಗಳಿಂದ ಕಾಟ ಕಡಿಮೆಯಾದಂತೆ ಕಾಡುಕೋಣಗಳ ಹಾವಳಿ ಪ್ರಾರಂಭವಾಗಿದೆ. ಬೆಳಗ್ಗಿನ ಜಾವ ಕಾಫಿ ತೋಟಗಳಿಗೆ ಕಾಲ್ನಡಿಗೆಯಲ್ಲಿ ತೆರಳಲು ಭಯವಾಗುತ್ತದೆ. ಹಗಲಿನ ವೇಳೆ ಕೆಲಸಕ್ಕೆ ಕೂಲಿ ಕಾರ್ಮಿಕರು ಬರುತ್ತಿಲ್ಲ. ಅರಣ್ಯ ಇಲಾಖೆ ಕಾಡಕೋಣಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು ಎಂದು ಕಾಫಿ ಬೆಳೆಗಾರ ಎಚ್.ಪಿ.ತ್ರಿಲೋಕ್ ಒತ್ತಾಯಿಸಿದ್ದಾರೆ. :: ಅಭಿಪ್ರಾಯ…






