ಆನವಟ್ಟಿ ಮೇ 22 NEWS DESK : ಡಾ.ಧನಂಜಯ ಸರ್ಜಿ ಅವರ ವೈದ್ಯ ವೃತ್ತಿಯ ಅನುಭವ ಹಾಗೂ ಪದವೀಧರರ ಸಂಪೂರ್ಣ ಸಮಸ್ಯೆಗಳ ಅರಿವು ಅವರಿಗಿರುವುದರಿಂದ ಪರಿಷತ್ ಗೆ ಆಯ್ಕೆ ಮಾಡಿದರೆ ಪದವೀಧರರು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಾರೆಂಬ ವಿಶ್ವಾಸವಿದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು. ನೈರುತ್ಯ ಪದವೀದರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆ ವಾಸವಿ ಕಲ್ಯಾಣ ಮಂಟಪದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸೊರಬ ಮಂಡಲ ಮತದಾರರ ಮತ್ತು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರ ಗೆಲುವಿಗಾಗಿ ಎಲ್ಲ ಮುಖಂಡರು , ಕಾರ್ಯಕರ್ತರು ಒಂದಾಗಿ ಶ್ರಮಿಸೋಣ ಎಂದರು. ಈ ಹಿಂದೆ ಬಿಜೆಪಿಯಲ್ಲಿದ್ದುಕೊಂಡು ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದ ಆಯನೂರು ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ ಕೇಳುತ್ತಿದ್ದಾರೆಂದರೆ ಕಳೆದ ಪರಿಷತ್ ಚುನಾವಣೆಯಲ್ಲಿ ಹಿಂದೆ ಮತ ನೀಡಿದ ಪದವೀದರ ಮತದಾರರನ್ನು ತಿರಸ್ಕರಿಸಿದ್ದಾರೆ ಎಂದರ್ಥ ಎಂದು ಟೀಕಿಸಿದರು. ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ…
ಲೇಖಕ: admin
ಮಡಿಕೇರಿ ಮೇ 22 NEWS DESK : ಕೊಡಗು ಜಿಲ್ಲೆಯಲ್ಲಿರುವ ಸರ್ಕಾರಿ/ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ 2024-25 ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಎಸ್‍ಎಸ್‍ಎಲ್‍ಸಿ ಉತ್ತೀರ್ಣಗೊಂಡಿರುವ ಅಭ್ಯರ್ಥಿಗಳು ಜೂ.3 ರವರೆಗೆ ಆನ್‍ಲೈನ್ www.cite.karnataka.gov.in ಮೂಖಾಂತರ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಕಚೇರಿ ವೇಳೆಯಲ್ಲಿ ಭೇಟಿ ನೀಡಿ ಪಡೆಯಬಹುದು ಅಥವಾ ದೂ.ಸಂ. 08272-298357 ನ್ನು ಸಂಪರ್ಕಿಸಬಹುದು ಎಂದು ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಧರ ತಿಳಿಸಿದ್ದಾರೆ.
ಮಡಿಕೇರಿ ಮೇ 22 NEWS DESK : 2024ನೇ ಸಾಲಿಗೆ ಜೂನ್, ಜುಲೈ ತಿಂಗಳಿನಲ್ಲಿ ನಡೆಯಲಿರುವ ಎಲ್ಲಾ ಪದವಿ ಕಾರ್ಯಕ್ರಮಗಳ ದ್ವಿತೀಯ, ಚತುರ್ಥ ಹಾಗೂ 6ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಸಲು ದಂಡಶುಲ್ಕ ರಹಿತ ಮೇ, 25 ಹಾಗೂ ದಂಡ ಶುಲ್ಕದೊಂದಿಗೆ ಮೇ 31 ಕೊನೆಯ ದಿನವಾಗಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ರಾಘವ ತಿಳಿಸಿದ್ದಾರೆ.
ಮಡಿಕೇರಿ ಮೇ 22 NEWS DESK : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯು 2024ರ ಜು.1 ರಿಂದ 6 ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್ ಸಹಕಾರ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕುಗಳ ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್ ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.500 ಶಿಷ್ಯವೇತನ ಮತ್ತು ವಿಶೇಷ ನಿರುದ್ಯೋಗ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.600 ಶಿಷ್ಯವೇತನ ನೀಡಲಾಗುವುದು ಹಾಗೂ ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಉಚಿತ ವಸತಿ ಗೃಹದ ವ್ಯವಸ್ಥೆ ಇರುತ್ತದೆ. ಅರ್ಜಿ ಫಾರಂನ್ನು ಪ್ರಾಂಶುಪಾಲರು, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಮುತ್ತಪ್ಪ ದೇವಸ್ಥಾನದ ಹತ್ತಿರ,…
ಮಡಿಕೇರಿ ಮೇ 22 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ಕುರಿತ 45 ದಿನಗಳ ಉಚಿತ ತರಬೇತಿಯು ಜು.10 ರಿಂದ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆಯೊಂದಿಗೆ ಆಂಗ್ಲ ಭಾಷೆಯನ್ನು ಸಹ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್…
ಮಡಿಕೇರಿ ಮೇ 22 NEWS DESK : ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜೂ.1 ರ ಸಂಜೆ 5 ಗಂಟೆಯಿಂದ ಜೂ.3 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಮಡಿಕೇರಿ ಮೇ 22 NEWS DESK : ಇದೇ ಜೂನ್ ಮೊದಲ ವಾರದಲ್ಲಿ `ಮುಂಗಾರು’ ಆರಂಭವಾಗುವ ನಿರೀಕ್ಷೆ ಇದ್ದು, ಪೂರ್ವ `ಮುಂಗಾರು’ ಕೃಷಿಕರಲ್ಲಿ ಸಂತಸ ತಂದಿದೆ. ಕೊಡಗು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ ಮತ್ತು ಮುಸುಕಿನ ಜೋಳ ಪ್ರಮುಖ ಬೆಳೆಯಾಗಿದ್ದು, ಕೃಷಿ ಚಟುವಟಿಕೆಗೆ ಭೂಮಿ ಹದ ಮಾಡುವ ಕಾರ್ಯ ನಡೆದಿದೆ. ಜೂ.15 ರ ನಂತರ ಭತ್ತ ಸಸಿಮಡಿ ಕಾರ್ಯ ಆರಂಭವಾಗಲಿದೆ. ಹಾಗೆಯೇ ಮುಂಗಾರು ಆರಂಭದಲ್ಲಿ ಮುಸುಕಿನ ಜೋಳ ಬಿತ್ತನೆ ಕಾರ್ಯ ಸುರುವಾಗಲಿದೆ. ಜಿಲ್ಲೆಯಲ್ಲಿ ಜನವರಿಯಿಂದ ಮೇ ತಿಂಗಳ ಅಂತ್ಯಕ್ಕೆ ವಾಡಿಕೆ ಮಳೆ 252 ಮಿ.ಮೀ. ಆಗಿದ್ದು, ಈಗಾಗಲೇ ಈ ಬಾರಿ ಸರಾಸರಿ 248 ಮಿ.ಮೀ. ಮಳೆಯಾಗಿರುವುದು ವಿಶೇಷವಾಗಿದೆ. ಅದರಲ್ಲೂ ಮೇ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಜಿಲ್ಲೆಯಲ್ಲಿ 32,500 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳುವ ಗುರಿ ಇದ್ದು, ಇದರಲ್ಲಿ 29 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ. 3,500 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆಯುವ ಗುರಿ ಹೊಂದಲಾಗಿದೆ,…
ಮಡಿಕೇರಿ ಮೇ 22 NEWS DESK : ಕೊಡಗು ಧಮ್ಮ ವಿಜಯ ಸಂಘಟನೆ ವತಿಯಿಂದ ಮೇ 23 ರಂದು ವೈಶಾಖ ಬುದ್ಧಪೂರ್ಣಿಮೆ ಕಾರ್ಯಕ್ರಮ ನಡೆಯಲಿದೆ. ನಗರದ ಅಂಬೇಡ್ಕರ್ ಭವನದಲ್ಲಿ ಸಂಜೆ 6.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅಕ್ಕಾ ಐಎಎಸ್ ಅಕಾಡೆಮಿ ಸಂಸ್ಥಾಪಕ ಡಾ.ಶಿವಕುಮಾರ ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಮೇ 22 NEWS DESK : ವಿಶಾಲವಾದ ಮರಗಳ ನೆರಳಿನಲ್ಲಿ ಹಾಗೂ ಪಶ್ಚಿಮ ಘಟ್ಟಗಳ ಕಾವಲಿನ ಅಡಿಯಲ್ಲಿ, ಕೊಡಗಿನ ಹಾಕಿಯ ಇತಿಹಾಸದ ಪಯಣವನ್ನು ಆರಂಭಿಸಿದಾಗ, ಈ ದಾರಿಯನ್ನು ಸುಗಮಗೊಳಿಸಿದವರನ್ನು ನೆನೆಯುತ್ತಾ, ಕೊಡಗಿನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಹಾಕಿ ಆಟಗಾರರಲ್ಲಿ ಕರ್ತಮಾಡ ರಿಕ್ಕಿ ಗಣಪತಿಯವರು ಕೂಡ ಒಬ್ಬರು. ಬಿರುನಾಣಿ ಗ್ರಾಮದ ದಿವಂಗತ ಕರ್ತಮಾಡ ಚಂಗಪ್ಪ ಹಾಗೂ ಸ್ವಾತಿ (ತಾಮನೆ ಮನೆಯಪಂಡ) ದಂಪತಿಯರ ಪುತ್ರನಾಗಿ ರಿಕ್ಕಿ ಗಣಪತಿಯವರು 29 ಮಾರ್ಚ್ 1968ರಂದು ಜನಿಸಿದರು. ಗೋಣಿಕೊಪ್ಪಲು ಸೆಂಟ್ ಥಾಮಸ್ ಶಾಲೆಯಲ್ಲಿ ಓದುತ್ತಿರುವಾಗಲೇ, ಪೊನ್ನಂಪೇಟೆಯ ಪುಚ್ಚಿಮಾಡ ಹರೀಶ್ ಮಾಸ್ಟರ್ ಅವರ ತರಬೇತಿಯಲ್ಲಿ ಹಾಕಿಯ ಭವಿಷ್ಯಕ್ಕೆ ಮುನ್ನುಡಿ ಬರೆದರು. ಪ್ರೌಢ ಶಿಕ್ಷಣವನ್ನು ಪೊನ್ನಂಪೇಟೆ ಶಾಲೆಯಲ್ಲಿ, ಪದವಿ ಪೂರ್ವ ಶಿಕ್ಷಣವನ್ನು ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಪೂರ್ಣಗೊಳಿಸಿದರು. ಅಲ್ಲಿನ ದೈಹಿಕ ಶಿಕ್ಷಣ ಶಿಕ್ಷಕ ದೇವಯ್ಯನವರು ಇವರಿಗೆ ಹಾಕಿಯ ತರಬೇತಿಯಲ್ಲಿ ಮಾರ್ಗದರ್ಶನ ನೀಡಿದರು. ಇವರು ಪದವಿಯನ್ನು ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜಿನಲ್ಲಿ ಪಡೆದರು. ಕಾಲೇಜು ದಿನಗಳಲ್ಲಿಯೂ ಅನೇಕ ಹಾಕಿ ಪಂದ್ಯಾವಳಿಗಳಲ್ಲಿ…
ಮಡಿಕೇರಿ ಮೇ 22 NEWS DESK : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 17.60 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.44 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 248.07 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 136 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.13 ಮಿ.ಮೀ. ಕಳೆದ ವರ್ಷ ಇದೇ ದಿನ 19.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 353.72 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 199.03 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 147.55 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 75.81 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ…






