ನಾಪೋಕ್ಲು ಜೂ.29 NEWS DESK : ವಿದ್ಯೆ, ಬುದ್ಧಿವಂತಿಕೆ ಯಾರ ಸ್ವತ್ತಲ್ಲ ವಿದ್ಯಾರ್ಥಿಗಳು ತಮ್ಮ ಸ್ವಂತ ಸಾಮರ್ಥ್ಯದಿಂದ ಮುಂದೆ ಬರಬೇಕು ಎಂದು ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೇದುರ ವಿಶಾಲ ಹೇಳಿದರು. ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ 2024- 25ರ ಸಾಲಿನ ವಿದ್ಯಾರ್ಥಿ ಸಂಘದವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಶಾಲಾ ಹಂತದಲ್ಲಿ ರಚಿಸಲಾಗುವ ಸಂಘವು ವಿದ್ಯಾರ್ಥಿಯ ಭವಿಷ್ಯಕ್ಕೆ ಪೂರಕವಾಗಿರುತ್ತದೆ ಎಂದ ಅವರು ಮೌಲ್ಯ ನಿರ್ಣಯವೂ ಸಹ ವಿದ್ಯಾರ್ಥಿಗಳಿಗೆ ಪರಿಪೂರ್ಣತೆಯನ್ನು ಒದಗಿಸುತ್ತದೆ. ವಿದ್ಯಾರ್ಥಿ ದೆಸೆಯಲ್ಲೇ ಮುಂದಿನ ಭವಿಷ್ಯದ ಬಗ್ಗೆ ಕನಸು ಕಂಡು ಅದನ್ನು ನನಸಾಗಿಸಲು ಶಿಸ್ತು, ಸೈಂಯಮ ಮತ್ತು ಶ್ರದ್ಧೆಯಿಂದ ಶ್ರಮಿಸುವಂತಾಗಬೇಕು ಎಂದು ಹಿತವಚನ ನುಡಿದರು. ನಿವೃತ್ತ ಪ್ರಾಂಶುಪಾಲರು ಹಾಗೂ ಸಂಸ್ಥೆಯ ನಿರ್ದೇಶಕರಾದ ಪ್ರೊ.ಕಲ್ಯಾಟಂಡ ಪೂಣಚ್ಚ ಮಾತನಾಡಿ, ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಸಂಸ್ಥೆಯ ಮಾಜಿ ಅಧ್ಯಕ್ಷರ ಕೊಡುಗೆ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿ ಮಕ್ಕಳಿಗೆ ಹಿತವಚನವನ್ನು ನೀಡಿದರು. ಶಾಲೆಯ ಪ್ರಾಂಶುಪಾಲರಾದ ಕಲ್ಯಾಣಂಡ ಶಾರದ ಮಾತನಾಡಿ, ವಿದ್ಯಾರ್ಥಿಗಳು ಜವಾಬ್ದಾರಿಯನ್ನು ಹೊಂದಿ…
ಲೇಖಕ: admin
ನಾಪೋಕ್ಲು ಜೂ.29 NEWS DESK : ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಸರಕಾರ ಹಲವು ನಿಯಮಗಳನ್ನು ಜಾರಿಗೊಳಿಸಿದೆ ಎಂದು ಠಾಣಾಧಿಕಾರಿ ಮಂಜುನಾಥ್ ಹೇಳಿದರು. ಕುಂಜಿಲದ ಆಕ್ಸ್‌ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಅಂಗವಾಗಿ ವಿಷಯ ವಿವರಣೆಯನ್ನು ಅವರು ನೀಡಿದರು. ಸಮಾಜದಲ್ಲಿ ಜರುಗುತ್ತಿರುವ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳು ಹಾಗೂ ಸಂಚಾರಿ ನಿಯಮಗಳ ಕುರಿತು ಮಾಹಿತಿ ನೀಡಿದರು. ಅಂತರ್ಜಾಲ ವಂಚನೆಗಳನ್ನು ವಿವರಿಸಿ ಎಚ್ಚರಿಕೆ ನೀಡಿದರು. ತಂಬಾಕು ಉತ್ಪನ್ನಗಳು ಮಾರಕ ಆದರೂ ಅದನ್ನು ಮಾರಾಟ ಮಾಡುತ್ತಿದ್ದಾರೆ.ಆದರೆ ವಿದ್ಯಾರ್ಥಿಗಳು ಅವುಗಳ ಮೊರೆ ಹೋಗಬಾರದು ಎಂದರು. ಮಾದಕ ವಸ್ತುಗಳ ಬಳಕೆ ವಿರುದ್ಧ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಕ್ರೈಂ ಠಾಣಾಧಿಕಾರಿ ಶ್ರೀಧರ್, ಆಕ್ಸ್‌ಫರ್ಡ್ ಆಂಗ್ಲ ಮಾಧ್ಯಮ ಶಾಲೆಯ ನಿರ್ವಾಹಕ ಅಧಿಕಾರಿ ಶಾಹಿದ್ ಅಲಿ, ಮುಖ್ಯೋಪಧ್ಯಾಯಿನಿ ಕವಿತಾ, ಅಧ್ಯಾಪಕವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಜೂ.29 NEWS DESK : ನಾಪೋಕ್ಲು ಕೊಡವ ಸಮಾಜ ರಸ್ತೆಯಲ್ಲಿ ಕಾಂಕ್ರೀಟ್ ಕಾಮಗಾರಿ ಕೈಗೊಳ್ಳಲಾಗಿದ್ದು ಸಂಚಾರ ಸಮಸ್ಯೆಯನ್ನು ಪರಿಹರಿಸಲಾಗಿದೆ.ರಸ್ತೆಯಲ್ಲಿ ಹೊಂಡ ಗುಂಡಿಗಳಾಗಿದ್ದು ಸಂಚಾರಕ್ಕೆ ತೊಡಕು ಉಂಟಾಗಿ ಈ ಬಗ್ಗೆ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಕೆಆರ್‍ಐಡಿಎಲ್ ವತಿಯಿಂದ 3.70 ಲಕ್ಷ ವೆಚ್ಚದಲ್ಲಿ 52 ಮೀಟರ್ ಉದ್ದದ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡಿದೆ. ರಸ್ತೆ ನಿರ್ಮಾಣದಿಂದಾಗಿ ಮುಂದಿನ 15 ದಿನಗಳು ವಾಹನ ಸಂಚಾರ ನಿಷೇಧಿಸಿ. ನಾಡಕಚೇರಿಗೆ ತೆರಳಲು ಬೈಪಾಸ್ ರಸ್ತೆಯಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜೂ.29 NEWS DESK : ಬೆಲೆ ಏರಿಕೆ ವಿರುದ್ಧ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಸಂದೇಶ ಕಳುಹಿಸಿರುವ ಕಾಂಗ್ರೆಸ್ ವ್ಯಕ್ತಿಯೊಬ್ಬರ ವಿರುದ್ಧ ದೂರು ನೀಡಿದರೂ ಪೊಲೀಸರು ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಪೊಲೀಸರ ನಿರ್ಲಕ್ಷ್ಯವನ್ನು ಖಂಡಿಸಿ ಕೊಡಗು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳೆದುರು ಬಿಜೆಪಿ ವತಿಯಿಂದ ಜು.3ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ.ಅರುಣ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದು, ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಮೊಕದ್ದಮೆಗಳನ್ನು ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ತಮಗೆ ಬಂದ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡರೆ ಪೊಲೀಸರು ಅವರ ವಿರುದ್ಧ ಮೊಕದ್ದಮೆ ಹೂಡಿ ಮೊಬೈಲ್‍ಗಳನ್ನು ವಶಪಡಿಸಿಕೊಂಡು ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಆದರೆ ಕಾಂಗ್ರೆಸಿಗರೊಬ್ಬರು ಬಿ.ಜೆ.ಪಿ ಪಕ್ಷದ ನಾಯಕರುಗಳು ಹಾಗೂ ಕಾರ್ಯಕರ್ತರನ್ನು…
ಮಡಿಕೇರಿ ಜೂ.29 NEWS DESK : ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಕೌಸರ್ ಎಂ.ಬಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಿರಂಜನ್ ಕ್ಸೇವಿಯರ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಹನೀಫ್ ಪಿ.ಎ ಅವರ ಆದೇಶದ ಮೇರೆಗೆ ಪಕ್ಷ ಸಂಘಟನೆಗಾಗಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿರುವುದಾಗಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ತಿಳಿಸಿದ್ದಾರೆ.
ಮಡಿಕೇರಿ ಜೂ.29 NEWS DESK : ಹಾಲಿನ ದರ ಏರಿಕೆ ಮಾಡಿದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿ ಕುಮಾರ್, ಛಲವಾದಿ ನಾರಾಯಣ ಸ್ವಾಮಿ, ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಂ.ರುದ್ರೇಶ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ರೈತ ಮೋರ್ಚಾ ಪದಾಧಿಕಾರಿಗಳು ಮತ್ತು ಪ್ರಮುಖರು ಪಾಲ್ಗೊಂಡಿದ್ದರು.
ಮಡಿಕೇರಿ ಜೂ.29 NEWS DESK : ಹೆಚ್‍ಡಿಎಫ್‍ಸಿ ಬ್ಯಾಂಕ್ ಮಡಿಕೇರಿ ಶಾಖೆ ವತಿಯಿಂದ ಹಾಕತ್ತೂರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಛತ್ರಿ ಮತ್ತು ಬ್ಯಾಗ್‍ಗಳನ್ನು ವಿತರಿಸಲಾಯಿತು. ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕ್ ನ ಆರ್.ಎಂ.ಓ.ನಾರಾಯಣ, ರಾಜೇಂದ್ರ ಹಾಗೂ ಬ್ಯಾಂಕ್ ಅಧಿಕಾರಿಗಳಾದ ಪುನಿತ್ ಪೂಣಚ್ಚ ವಿದ್ಯಾರ್ಥಿಗಳಿಗೆ ಛತ್ರಿ ಹಾಗೂ ಬ್ಯಾಗ್ ಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ನೀತು ಕುಮಾರಿ, ಬ್ಯಾಂಕ್ ನ ಶ್ರೀನಿವಾಸ್., ಹಾಕತ್ತೂರು ತ್ರಿನೇತ್ರ ಯುವಕ ಸಂಘದ ಅಧ್ಯಕ್ಷರಾದ ಪಿ.ಪಿ. ಸುಕುಮಾರ್. ಸ್ಥಾಪಕ ಅಧ್ಯಕ್ಷರಾದ ಪಿ.ಇ.ದಿವಾಕರ್. ಮಾಜಿ ಅಧ್ಯಕ್ಷ ರಾದ ಟಿ.ಕೆ.ಸಂತೋಷ್. ಶಿಕ್ಷಕರಾದ ಎಂ.ವನಜಾ, ಸಿ.ಎಂ.ಮುನೀರ್, ಬಿ.ಎನ್.ಜಯಂತಿ, ಕೆ.ಕೆ.ಪುಷ್ಪ, ಕೆ.ಜಿ.ಭವಾನಿ ಶಂಕರ್, ಸಹನಾ ಹಾಜರಿದ್ದರು.
ಮಡಿಕೇರಿ ಜೂ.29 NEWS DESK : ಫವಿ ಸೇವಾ ಟ್ರಸ್ಟ್ ವತಿಯಿಂದ ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿಗೆ ಲ್ಯಾಪ್‍ಟಾಪ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಪವಿ ಸೇವಾ ಟ್ರಸ್ಟ್ ಸಂಚಾಲಕ ಅಳಮೇಂಗಡ ಮಾಳವಿಕಾ ರಮೇಶ್ ಮಾತನಾಡಿ, ನಾಗರಹೊಳೆ ಅಭಯ ಅರಣ್ಯದಂಚಿನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುತ್ತಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 25 ಲ್ಯಾಪ್‍ಟಾಪ್ ಗಳನ್ನು ವಿದ್ಯಾಸಂಸ್ಥೆಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಅವರಿಗೆ ಹಸ್ತಾಂತರಿಸಲಾಗಿದೆ ಎಂದರು. ಸಂಸ್ಥೆಯ ಉಪಾಧ್ಯಕ್ಷ ಕಾಯಮಾಡ ರಾಜ, ಪ್ರಾಂಶುಪಾಲ ಪ್ರಭು, ಮುಖ್ಯ ಶಿಕ್ಷಕ ಚಂದ್ರಶೇಖರ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಮಡಿಕೇರಿ ಜೂ.29 NEWS DESK : ಕೊಡಗಿನ ಅಪ್ರತಿಮ ಸ್ವಾತಂತ್ರ್ಯ ಸೇನಾನಿಗಳಾದ ಪಂದ್ಯಂಡ ಬೆಳ್ಯಪ್ಪ ಹಾಗೂ ಸೀತಮ್ಮ ಬೆಳ್ಯಪ್ಪ ಜೋಡಿ ಪ್ರತಿಮೆಯನ್ನೊಳಗೊಂಡ ಸ್ಮಾರಕವನ್ನು ಮಡಿಕೇರಿಯ ಕೇಂದ್ರ ಸ್ಥಾನದಲ್ಲಿ ಸ್ಥಾಪಿಸಿ ಅಭಿವೃದ್ಧಿ ಪಡಿಸುವಂತೆ ಯುನೈಟೆಡ್ ಕೊಡವ ಆರ್ಗನೈಜೇಷನ್ – ಯುಕೊ ಅಧ್ಯಕ್ಷ ಕೊಕ್ಕಲೇಮಾಡ ಮಂಜು ಚಿಣ್ಣಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೊಡಗು ಕರ್ನಾಟಕದೊಂದಿಗೆ ವಿಲೀನವಾದ ನಂತರ ಎಲ್ಲಾ ಸರ್ಕಾರಗಳು ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರನ್ನು ನಿರ್ಲಕ್ಷಿಸುತ್ತಲೇ ಬಂದಿದ್ದು, ಕೊಡಗಿನ ಸ್ವಾತಂತ್ರ್ಯ ಇತಿಹಾಸವನ್ನೇ ತಿರುಚಿ ನೈಜ ಇತಿಹಾಸವನ್ನು ಮರೆಮಾಚುವ ಹುನ್ನಾರ ನಡೆಯುತ್ತ ಬಂದಿದೆ ಎಂದು ಆರೋಪಿಸಿರುವ ಅವರು, ಹೀಗೆಯೇ ಮುಂದುವರಿದರೆ ಭಾರತ ಸ್ವಾತಂತ್ರ್ಯ ಇತಿಹಾಸದಲ್ಲಿ ಕೊಡಗು ಕಣ್ಮರೆಯಾಗಲಿದೆ. ಈ ನಿಟ್ಟಿನಲ್ಲಿ ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳು ಶಾಶ್ವತವಾಗಿ ಜನಮಾನಸದಲ್ಲಿ ಉಳಿಯುವಂತೆ ಮಾಡಲು ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ನಿಟ್ಟಿನಲ್ಲಿ ಮೊದಲ ಹಂತದಲ್ಲಿ, ಮಡಿಕೇರಿಯ ಪ್ರಮುಖ ಸ್ಥಳದಲ್ಲಿ ಪಂದ್ಯಂಡ ಬೆಳ್ಯಪ್ಪ ಹಾಗೂ ಸೀತಮ್ಮ ಬೆಳ್ಯಪ್ಪ ನವರ ಪರಿಚಯ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರವನ್ನು…
ವಿರಾಜಪೇಟೆ ಜೂ.29 NEWS DESK : ಮಾದಕ ವ್ಯಸನ ಕೇವಲ ವ್ಯಕ್ತಿಯನ್ನಷ್ಟೇ ಹಾಳು ಮಾಡುವುದಿಲ್ಲ. ಕುಟುಂಬ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತದೆ ಎಂದು ವಿರಾಜಪೇಟೆ ವಿಭಾಗದ ಆರಕ್ಷಕ ಉಪ ಅಧೀಕ್ಷಕರಾದ ಮೋಹನ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಆರಕ್ಷಕ ಇಲಾಖೆ ಮತ್ತು ಕಾವೇರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಅಂತರ್ ರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮ ಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಪ್ರಸ್ತುತ ಸಮಾಜದ ಯುವ ವರ್ಗವು ಮಾದಕವಸ್ತು ಸೇವನೆಗೆ ದಾಸರಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಮಾದಕದ್ರವ್ಯ ವ್ಯಸನಿಯಾದ ವ್ಯಕ್ತಿಯನ್ನು ಕುಟುಂಬ ತ್ಯಜಿಸುತ್ತದೆ.ಅಲ್ಲದೆ ಸಮಾಜದಿಂದ ಧಿಕ್ಕರಿಸುವಂತನಾಗುತ್ತಾನೆ.ಇದು ಜೇಡ ಬಲೆಯಂತೆ ಸುಳಿಯಲ್ಲಿ ಸಿಲುಕಿದ ವ್ಯಕ್ತಿ ಹೊರಬರಲು ಹರ ಸಹಾಸ ಪಡುವ ಪ್ರಮೇಯ ಎದುರಾಗುತ್ತದೆ. ಮಾದಕದ್ರವ್ಯ ಮತ್ತು ವಸ್ತುಗಳ ಉಪಯೋಗ ಹಾಗೂ ಮಾರಾಟ ಕಾನೂನು ಬಾಹಿರವಾಗಿದೆ. ವ್ಯಸನದ ಆರಂಭದಲ್ಲೇ ತ್ಯಜಿಸುವ ಮನಸ್ಸು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ವಿರಾಜಪೇಟೆ ವೃತ್ತ ನಿರೀಕ್ಷ ಶಿವರುದ್ರ…






