ಲೇಖಕ: admin

ಮಡಿಕೇರಿ ಜೂ.29 NEWS DESK  : ಕೊಡಗು ಪತ್ರಕರ್ತರ ಸಂಘ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಜು.1 ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆ ನಡೆಯಲಿದೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ಅವರ ಅಧ್ಯಕ್ಷತೆಯಲ್ಲಿ ಬೆಳ್ಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಮ್ಯಾನೆಂಜಿಂಗ್‌ ಟ್ರಸ್ಟಿ ಎಂ.ಪಿ.ಕೇಶವ ಕಾಮತ್‌ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಸಾಹಿತಿಗಳು, ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ ದೇರ್ಲ ಆಗಮಿಸಲಿದ್ದಾರೆ. ಗಡಿನಾಡ ಸಂಚಾರಿ ಸಂಪಾದಕ ಟಿ.ಪಿ.ರಮೇಶ್ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಹಿರಿಯ ಪತ್ರಕರ್ತರಾದ ಶಕ್ತಿ ದಿನಪತ್ರಿಕೆಯ ಸಂಪಾದಕರಾದ ಜಿ. ಚಿದ್ವಿಲಾಸ್‌, ಗಡಿನಾಡ ಸಂಚಾರಿ ಸಂಪಾದಕ ಟಿ.ಪಿ.ರಮೇಶ್ ,ಸುಂಟಿಕೊಪ್ಪದ ಸಂಯುಕ್ತ ಕರ್ನಾಟಕ ವರಿಗಾರರಾದ ಕೆ.ಹೆಚ್.‌ಶಿವಣ್ಣ, ಗೋಣಿಕೊಪ್ಪಲು ಸುದ್ದಿ ಸಂಸ್ಥೆ ಸಂಪಾದಕ ಟಿ.ಎಲ್.‌ ಶ್ರೀನಿವಾಸ್‌ ಹಾಗೂ ಸೋಮವಾರಪೇಟೆ ವಿಜಯ ಕರ್ನಾಟಕ ವರದಿಗಾರ ತೇಲಪಂಡ ಕವನ್‌ ಕಾರ್ಯಪ್ಪ ಇವರುಗಳನ್ನು ಸನ್ಮಾನಿಸಲಾಗುವುದು ಎಂದು ಕೊಡಗು…

Read More

ಮಡಿಕೇರಿ ಜೂ.29 NEWS DESK : ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ‘ಗ್ಲಾಸ್ ಬ್ರಿಡ್ಜ್’ಗಳನ್ನು ಸೆಪ್ಟೆಂಬರ್, 15 ರವರೆಗೆ ಸ್ಥಗಿತಗೊಳಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೆಪ್ಟೆಂಬರ್, 15 ರವರೆಗೆ ಗ್ಲಾಸ್ ಬ್ರಿಡ್ಜ್ ಸ್ಥಗಿತ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಿಂದ ಆದೇಶ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿಲ್ಲೆಯಲ್ಲಿ ಯಾವುದೇ ರೀತಿಯ ಸುರಕ್ಷತೆ ಇಲ್ಲದೆ ಗ್ಲಾಸ್ ಬ್ರಿಡ್ಜ್‍ಗಳ ನಿರ್ಮಾಣ ಮಾಡಲಾಗಿದೆ. ಸುರಕ್ಷತೆ ಇಲ್ಲದಿರುವ ಗ್ಲಾಸ್ ಬ್ರಿಡ್ಜ್‍ಗಳಿಗೆ ಪಿಡಿಒಗಳು ಹೇಗೆ ಎನ್‍ಒಸಿ ನೀಡುತ್ತಾರೆ. ಸಭೆಯ ನಡಾವಳಿ ಮಾಡಿಕೊಂಡು ಎನ್‍ಒಸಿ ನೀಡಿದರೆ ಸಾಕೆ, ಸುರಕ್ಷತೆ ಬೇಡವೇ ಎಂದು ಜಿಲ್ಲಾಧಿಕಾರಿ ಅವರು ಪ್ರಶ್ನಿಸಿದರು. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ‘ಗ್ಲಾಸ್ ಬ್ರಿಡ್ಜ್’ ವೀಕ್ಷಣೆಗೆ ಭೇಟಿ ನೀಡುವುದರಿಂದ ಏನಾದರೂ ತೊಂದರೆಯಾದಲ್ಲಿ ಯಾರೂ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ ಎಂದು ಪಂಚಾಯತ್ ರಾಜ್ ಅಧಿಕಾರಿಗಳಿಗೆ ಎಚ್ಚರಿಸಿದರು. ಜಿಲ್ಲೆಯಲ್ಲಿ ಉತ್ತಮ…

Read More

ಮಡಿಕೇರಿ ಜೂ.28 NEWS DESK : ಇಡೀ ಮನುಕುಲದ ಮಹಾನ್ ಶಕ್ತಿಯಾಗಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಇತ್ತೀಚಿನ ಸಾಮಾಜಿಕ ಮತ್ತು ಜಾತಿ ವ್ಯವಸ್ಥೆಯು ಒಂದು ಸಮುದಾಯಕ್ಕೆ ಸೀಮಿತಗೊಳಿಸಿರುವುದು ಸರಿಯಲ್ಲ ಎಂದು ಮಡಿಕೇರಿಯ ಆರ್.ಆರ್.ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಬಿ.ಸಿ.ನವೀನ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಗರಸಭೆಯ ಪೌರಕಾರ್ಮಿಕರಿಗೆ ಸ್ವೆಟರ್ ಹಾಗೂ ಶ್ರೀ ಶಕ್ತಿ ವೃದ್ಧಾಶ್ರಮದ ಸಂಧ್ಯಾಕಾಲದ ಬಂಧುಗಳಿಗೆ ಬಟ್ಟೆ ವಿತರಣೆ ಮಾಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ.ಬಿ.ಸಿ.ನವೀನ್ ಕುಮಾರ್, ಡಾ.ಅಂಬೇಡ್ಕರ್ ಅವರು ಶೋಷಿತ ಸಮಾಜದ ಧ್ವನಿಯಾಗಿ, ಆತ್ಮಸಾಕ್ಷಿಯನ್ನು ಜಾಗೃತಗೊಳಿಸುವ ಕೆಲಸವನ್ನು ಶಿಕ್ಷಣದ ಮೂಲಕ ಮಾಡಿದ್ದಾರೆ. ಅವರೊಬ್ಬರು ಪರಿಪೂರ್ಣ ವ್ಯಕ್ತಿತ್ವ ಹೊಂದಿರುವವರು. ಜ್ಞಾನ, ಬದ್ಧತೆ ಮತ್ತು ಸಾಮಾಜಿಕ ಕಳಕಳಿ ಹೊಂದಿರುವ ಅವರು ಕೇವಲ ಒಂದು ಜಾತಿಗೆ ಸೀಮಿತರಾಗಿಲ್ಲ ಎಂದರು. ಅಂಬೇಡ್ಕರ್ ಅವರು ಈ ಸಮಾಜದ ಶೋಷಿತ ವರ್ಗ,…

Read More

ಮಡಿಕೇರಿ ಜೂ.28 NEWS DESK : ದೇವಭಾಷೆಗೆ ಸರಿಸಮವಾಗಿ ಕನ್ನಡ ಭಾಷೆಯನ್ನು ನಾಡು ಭಾಷೆಯಾಗಿ ಬೆಳೆಸುವಲ್ಲಿ ಮತ್ತು ವಚನಗಳ ಮೂಲಕವೇ ಜನಸಾಮಾನ್ಯರಿಗೆ ತಲುಪಿಸುವಲ್ಲಿ ಶರಣರು ನೀಡಿದ ಕೊಡುಗೆಗಳು ಸಾಮಾನ್ಯವಾದುದ್ದಲ್ಲವೆಂದು ಅರಮೇರಿ ಕಳಂಚೇರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅರಮೇರಿ ಕಳಂಚೇರಿ ಮಠ ಮತ್ತು ಎಸ್‌ಎಂಎಸ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಅರಮೇರಿ ಮಠದಲ್ಲಿ ನಡೆದ ಧರ್ಮಚಿಂತಾಮಣಿ ಮಹಾಶರಣ ಲಿಂಗೈಕ ಮಾಗನೂರು ಬಸಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಕರ್ನಾಟಕದ ಇತಿಹಾಸದಲ್ಲಿ 12ನೇ ಶತಮಾನವು ಚಿರಸ್ಮರಣೀಯವಾಗಿದ್ದು, ಈ ಶತಮಾನವನ್ನು ಶರಣಯುಗವೆಂದು ಕರೆಯುತ್ತಾರೆ. ಶಿವಶರಣರು ವಚನ ಸಾಹಿತ್ಯಸೌಧದ ಮೂಲಕ ನಾಡುನುಡಿಗಾಗಿ ದುಡಿದು ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದವರೆಂದು ಸ್ವಾಮೀಜಿ ಹೇಳಿದರು. ಧ್ವನಿ ಇಲ್ಲದವರ ಧ್ವನಿಯಾಗಿ ಶರಣರು ವಚನಗಳನ್ನು ಜನಸಮುದಾಯಕ್ಕೆ ನೀಡುವುದರ ಮೂಲಕ ತಾರತಮ್ಯ ಸಮಾಜವನ್ನು ಸಮಸಮಾಜವಾಗಿ ನಿರ್ಮಿಸಲು ಅವಿತರವಾಗಿ ಶ್ರಮಿಸಿದರು. ಶರಣರು ವಚನಗಳನ್ನು ಸುಲಲಿತ ಕನ್ನಡದಲ್ಲಿ ಹೇಳುವ ಮೂಲಕ ಜನ ಸಾಮಾನ್ಯರ ಬದುಕಿಗೆ…

Read More

ನವದೆಹಲಿ, ಜೂ.28 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು (NH748ಂ), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿಗಳು ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು. ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು. ರಾಜ್ಯ ಸರ್ಕಾರದ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿರುವ ಇತರ…

Read More

ಮಡಿಕೇರಿ ಜೂ.28 NEWS DESK : ಕಳೆದ ಐದಾರು ವರ್ಷಗಳಿಂದ ಸ್ಥಗಿತವಾಗಿದ್ದ ಸೋಮವಾರಪೇಟೆ ತಾಲ್ಲೂಕಿನ ಕುಗ್ರಾಮ ಸೂರ್ಲಬ್ಬಿಯನ್ನು ಸಂಪರ್ಕಿಸುವ ಬಸ್ ಸಂಚಾರ ಗ್ರಾಮಸ್ಥರ ಪ್ರತಿಭಟನೆಯಿಂದ ಪುನರಾರಂಭಗೊಂಡಿದೆ. ಇಂದು ಬೆಳಗ್ಗೆ ಸೂರ್ಲಬ್ಬಿ ವಿಭಾಗದ ಹತ್ತಾರು ಗ್ರಾಮಸ್ಥರು ಮಡಿಕೇರಿಗೆ ಆಗಮಿಸಿ, ಕೆಎಸ್‍ಆರ್‍ಟಿಸಿ ಡಿಪೋ ಮುಖ್ಯ ದ್ವಾರದಲ್ಲೆ ಪ್ಲಾಸ್ಟಿಕ್ ಟಾರ್ಪಾಲ್ ಹರಡಿಕೊಂಡು ಕುಳಿತು ಪ್ರತಿಭಟನೆ ನಡೆಸಿ ತಕ್ಷಣ ಮಡಿಕೇರಿಯಿಂದ ಸೂರ್ಲಬ್ಬಿವರೆಗೆ ಬಸ್ ಪುನರಾರಂಭಕ್ಕೆ ಒತ್ತಾಯಿಸಿದರು. ಗ್ರಾಮಸ್ಥರ ಪ್ರತಿಭಟನೆಯಿಂದ ಕೆಲ ಕಾಲ ಡಿಪೋ ಅಧಿಕಾರಿಗಳು ಏನು ಮಾಡಲು ತೋಚದೆ ಕಕ್ಕಾಬಿಕ್ಕಿಯಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ಬಗ್ಗೆ ಗಮನ ಹರಿಸಿ ಬಸ್ ಸಂಚಾರ ಪುನರಾರಂಭಿಸಲಾಗುವುದು, ಪ್ರತಿಭಟನೆಯಿಂದ ಹಿಂದಕ್ಕೆ ಸರಿಯಿರಿ ಎಂದು ಅಧಿಕಾರಿಗಳು ಮನವಿ ಮಾಡಿದರು. ಈ ಬಗ್ಗೆ ಲಿಖಿತ ರೂಪದಲ್ಲಿ ಭರವಸೆ ನೀಡಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದರು. ಅಂತಿಮವಾಗಿ ಪ್ರತಿಭಟನಾಕಾರರ ಆಗ್ರಹಕ್ಕೆ ಮಣಿದ ಸಹಾಯಕ ಸಂಚಾರಿ ಮೇಲ್ವಿಚಾರಕ ಈರಸಪ್ಪ ಅವರು, ತಕ್ಷಣವೇ ಜಾರಿಗೆ ಬರುವಂತೆ ಬಸ್ ಮಾರ್ಗವನ್ನು ಪ್ರಾರಂಭಿಸುವುದಾಗಿ ತಿಳಿಸಿದರು. ಸೂರ್ಲಬ್ಬಿ ಗ್ರಾಮ ಅತ್ಯಂತ ಕುಗ್ರಾಮ ಎಂಬ ಹಣೆಪಟ್ಟಿ…

Read More

ಮಡಿಕೇರಿ ಜೂ.28 NEWS DESK : ಕೊಡಗು ಸೈನಿಕ ಶಾಲೆಗೆ ನವದೆಹಲಿ ರಕ್ಷಣಾ ಸಚಿವಾಲಯ (ಸೇನಾ ವಿಭಾಗ)ದ ಕೇಂದ್ರ ಕಚೇರಿಯ ನೇಮಕಾತಿ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ನವನೀತ್ ಸಿಂಗ್ ಸರ್ನಾ (ಎ.ವಿ.ಎಸ್.ಎಂ, ಎಸ್.ಎಂ.ವಿ.ಎಸ್.ಎಂ) ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಪ್ರೇರಣಾತ್ಮಕ ಸಂವಾದ ನಡೆಸಿದರು. ಶಾಲೆಯ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ಸಶಸ್ತ್ರ ಪಡೆಗಳಲ್ಲಿ ವೃತ್ತಿಜೀವನವದ ಆಯ್ಕೆ ಮಾಡಿಕೊಳ್ಳುವ ಕುರಿತು ಶಾಲಾ ವಿದ್ಯಾರ್ಥಿಗಳಿಗೆ ಸಮಗ್ರವಾದ ಮಾಹಿತಿಯನ್ನು ನೀಡುವುದರೊಂದಿಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಗಳನ್ನು ತಲುಪುವವರೆಗೂ ಉತ್ಸಾಹದಿಂದ, ಅವಿರತವಾಗಿ ಕಾರ್ಯನಿರತರಾಗಿರಬೇಕೆಂದು ಕರೆ ನೀಡಿದರು. ಯು.ಪಿ.ಎಸ್.ಸಿ, ಎನ್.ಡಿ.ಎ ಮತ್ತು ವಿವಿಧ ರಕ್ಷಣಾ ತರಬೇತಿ ಅಕಾಡೆಮಿಗಳ ಸೇರ್ಪಡೆಗೆ ಅತ್ಯವಶ್ಯಕವಾಗಿ ನಡೆಸಬೇಕಾದ ಸಿದ್ಧತೆಯ ಕುರಿತು ಮಾರ್ಗದರ್ಶನ ನೀಡಿದರು. ಭಾರತೀಯ ರಕ್ಷಣಾ ಪಡೆಗಳ ವಿವಿಧ ವಿಭಾಗಗಳು, ಶ್ರೇಣಿಯ ರಚನೆ ಮತ್ತು ಭಾರತೀಯ ಸಶಸ್ತ್ರ ಪಡೆಗಳು ನೀಡುತ್ತಿರುವ ಸಾಹಸ ಚಟುವಟಿಕೆಗಳ ಹಾಗೂ ಕಾರ್ಯವಿಧಾನಗಳ ತಂತ್ರಗಳ ಸರಣಿಯ ಕುರಿತು ಮಾರ್ಗದರ್ಶನ ನೀಡಿದರು. ರಕ್ಷಣಾ ಪಡೆಗಳಲ್ಲಿ…

Read More

ಮಡಿಕೇರಿ ಜೂ.28 NEWS DESK : ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ನೇರ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೊರಬೇಕು ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿಯ ಎಸ್‍ಟಿ ಮೋರ್ಚಾ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಸ್‍ಟಿ ಮೋರ್ಚಾದ ಪ್ರಮುಖರು, ಮಾಜಿ ಶಾಸಕರುಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಬೇಕು ಎಂದು ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ ರಾಜ್ಯ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ತನಿಖೆಯನ್ನು ವಿಳಂಬ ಮಾಡುತ್ತಿದೆ. ಆರೋಪ ಎದುರಿಸುತ್ತಿರುವ ಮಾಜಿ ಸಚಿವ ನಾಗೇಂದ್ರ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ, ಅಧಿಕಾರಿಗಳನ್ನು ಹೊಣೆ ಮಾಡಿ ತನಿಖೆ ನಡೆಸಲಾಗುತ್ತಿದೆ. ಇದು ಹಗರಣವನ್ನು ಮುಚ್ಚಿ ಹಾಕುವ ಹುನ್ನಾರವಾಗಿದೆ ಎಂದು ಟೀಕಿಸಿದರು. ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ…

Read More

ವಿರಾಜಪೇಟೆ ಜೂ.28 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರ ಹೆಸರಿನಲ್ಲಿ ಕೆದಮುಳ್ಳೂರು ವಲಯ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಗ್ರಾಮದಲ್ಲಿ ಈಶ್ವರ ಮತ್ತು ಚಾಮುಂಡಿ ದೇವರ ದೇವಾಲಯದಲ್ಲಿ ವಲಯ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ ಶಾಸಕರ ಧೀರ್ಘಾಯುಷ್ಯ ಮತ್ತು ಅಭಿವೃದ್ದಿ ಕಾರ್ಯಗಳು ಉತ್ತಮವಾಗಿ ನಡೆಯಲಿದೆ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಕೆದಮುಳ್ಳೂರು ವಲಯ ಕಾಂಗ್ರೆಸ್ ಅಧ್ಯಕ್ಷ ನಡಿಕೇರಿಯಂಡ ಮಹೇಶ್ ಮಾತನಾಡಿ, ಪ್ರತಿಭಟನೆ ಸಂದರ್ಭ ಶಾಸಕರ ಪ್ರತಿಕೃತಿ ದಹನ ಮಾಡಿರುವುದು ಖಂಡನೀಯ. ಪ್ರತಿಭಟನೆಯನ್ನು ಮುಂದಿಟ್ಟುಕೊಂಡು ಇಂತಹ ಕಾರ್ಯಕ್ಕೆ ಯಾವುದೇ ರಾಜಕೀಯ ಪಕ್ಷಗಳು ಮುಂದಾಗಬಾರದು. ಶಾಸಕರಾಗಿ ಆಯ್ಕೆಗೊಂಡು ಒಂದು ವರ್ಷದ ಅವಧಿಯಲ್ಲಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳು ಸೇರಿದಂತೆ ಅಭಿವೃದ್ದಿ ಕಾರ್ಯಗಳು ನಡೆಯುತ್ತಿದೆ ಎಂದರು. ಕೆದಮುಳ್ಳೂರು ಗ್ರಾ.ಪಂ ಅಧ್ಯಕ್ಷ ಮಾಳೆಟೀರ ಜೇಫ್ರಿ ಉತ್ತಪ್ಪ, ಸದಸ್ಯರಾದ ಮಾಳೆಟೀರ ಪ್ರಶಾಂತ್ ಉತ್ತಪ್ಪ, ಡಿ.ಸಿ.ಸಿ ಸದಸ್ಯರಾದ ಬೆಲ್ಲು ಬೋಪಯ್ಯ,…

Read More

ಮಡಿಕೇರಿ ಜೂ.28 NEWS DESK : ಕರ್ನಾಟಕ ಜಾನಪದ ಅಕಾಡೆಮಿಯು 2022ನೇ ಸಾಲಿನಲ್ಲಿ (ದಿನಾಂಕ:01.01.2022 ರಿಂದ 31.12.2022ರವರೆಗೆ) ಹಾಗೂ 2023ನೇ ಸಾಲಿನಲ್ಲಿ (ದಿನಾಂಕ:01.01.2023 ರಿಂದ 31.12.2023ರವರೆಗೆ) ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತು ಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ. ಲೇಖಕರು/ ಪ್ರಕಾಶಕರು/ ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ದಿನಾಂಕ:20-07-2024ರೊಳಗೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಕೋರಿದೆ. 

Read More