ಮಡಿಕೇರಿ ಜೂ.28 NEWS DESK : ಪಾರಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯೋಪದ್ಯಾಯರಾದ ವೇದಪ್ರಸಾದ್ ಅವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ಕೆಡುಕುಗಳು ಮತ್ತು ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ಮಾದಕ ದ್ರವ್ಯಗಳ ನಿರ್ಮೂಲನೆಯ ಕುರಿತು ಹಾಗೂ ಅವ್ಯಾಹತವಾಗಿ ನಡೆಯುತ್ತಿರುವ ಕಳ್ಳ ಸಾಗಣೆಯ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದರಲ್ಲದೆ, ಸಾಮಾಜಿಕ ಪಿಡುಗು ನಿವಾರಿಸಿ, ಸಮ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ದೆಸೆಯಿಂದಲೇ ಸರ್ವರೂ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಸಹ ಶಿಕ್ಷಕ ಕಿಶೋರ್ ಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕಿಯರಾದ ಸುಮಿತ್ರ, ಮಂಜುಳ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಲೇಖಕ: admin
ಮಡಿಕೇರಿ ಜೂ.27 NEWS DESK : ನಿರಂತರ ಮಳೆಯಿಂದಾಗಿ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕೊಯನಾಡು ಸರ್ಕಾರಿ ಶಾಲೆಯ ಹಿಂಭಾಗದ ಗುಡ್ಡದ ಮಣ್ಣು ಕುಸಿದು ಶಾಲೆಯ ಗೋಡೆ ಮತ್ತು ಕಿಟಕಿಗೆ ಹಾನಿಯಾಗಿದೆ. ದೊಡ್ಡ ದೊಡ್ಡ ಕಲ್ಲು ಸಹಿತ ಮಣ್ಣು ಬಂದ ರಭಸಕ್ಕೆ ಶಾಲೆಯ ಗೋಡೆಯ ಒಂದು ಭಾಗ ಮತ್ತು ಕಿಟಕಿಯೊಂದು ಬಿದ್ದಿದೆ. ತರಗತಿಯೊಳಗೆ ಗೋಡೆ, ಗುಡ್ಡದ ಮಣ್ಣು ಮತ್ತು ಕಲ್ಲು ಬಿದ್ದಿದ್ದು, ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದ್ದ ಕಾರಣ ಭಾರೀ ಅನಾಹುತವೊಂದು ತಪ್ಪಿದೆ. ::: ದುಬಾರೆಯಲ್ಲಿ ನಿರ್ಬಂಧ ::: ಕೊಡಗು ಜಿಲ್ಲೆಯ ಹೆಸರುವಾಸಿ ಪ್ರವಾಸಿತಾಣ ದುಬಾರೆ ಭಾಗದಲ್ಲಿ ನಿರಂತರ ಮಳೆಯಿಂದ ನದಿ ತುಂಬಿ ಹರಿಯುತ್ತಿದೆ. ಮುಂಜಾಗೃತಾ ಕ್ರಮವಾಗಿ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ರ‍್ಯಾಫ್ಟಿಂಗ್ ಜಲಕ್ರೀಡೆಯನ್ನು ಮಳೆಯ ಕಾರಣ ಈಗಾಗಲೇ ಸ್ಥಗಿತಗೊಳಿಸಲಾಗಿದೆ.
*ರಾಜ್ಯದ ಹಿತ ದೃಷ್ಟಿಯಿಂದ ಸೇರಿರುವ ಸಭೆ ಇದಾಗಿದ್ದು ಇದರಲ್ಲಿ ರಾಜಕೀಯ ಇಲ್ಲ: ಸಿ.ಎಂ.ಸಿದ್ದರಾಮಯ್ಯ* ಕೇಂದ್ರ ಸರ್ಕಾರಕ್ಕೆ ಹಲವು ಮನವಿ, ಪ್ರಸ್ತಾವನೆ ಸಲ್ಲಿಸಿದ್ದೇವೆ. ಅವುಗಳು ಸಾಕಾರಗೊಳ್ಳಲು ಪ್ರಯತ್ನಿಸಬೇಕು ಎನ್ನುವ ಕಾರಣದಿಂದ ಈ ಸಭೆ* *ಇದು ಕೇಂದ್ರ ಸರ್ಕಾರದ ವಿರುದ್ಧ ಮಾಡುವ ಆರೋಪವಲ್ಲ. ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲ ಅಭಿವೃದ್ಧಿಗಾಗಿ ರಾಜಕೀಯ ಮರೆತು ಚರ್ಚೆ: ಸಿಎಂ* ದೆಹಲಿ ಜೂ 27 NEWS DESK : ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೋರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ನಡೆದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಮಂತ್ರಿಗಳು ತಮ್ಮ ಪ್ರಸ್ತಾವಿಕ ಮಾತುಗಳಲ್ಲಿ ಮಂಡಿಸಿದ ವಿಚಾರಗಳ ಹೈಲೈಟ್ಸ್ ಗಳು… *ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. ಕೇಂದ್ರದ ಹಣಕಾಸು ಮಂತ್ರಿ ತಮ್ಮ ಬಜೆಟ್ ನಲ್ಲೇ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ.…
ಮಡಿಕೇರಿ ಜೂ.27 NEWS DESK : ಕೊಡಗಿನ ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆ ಪುಸ್ತಕಗಳ ಮೂಲಕ ಎಲ್ಲರಿಗೂ ಪರಿಚಯವಾಗುತ್ತಿದ್ದು, ಇದು ಉತ್ತಮ ಬೆಳವಣಿಗೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ತಿಳಿಸಿದ್ದಾರೆ. ನಗರದ ಭಾರತೀಯ ವಿದ್ಯಾಭವನದಲ್ಲಿ ಹಿರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ಅವರ “ಪಾರು” ಇಂಗ್ಲೀಷ್ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪುಸ್ತಕಗಳ ಮೂಲಕ ಸಂಸ್ಕೃತಿಯ ಪರಿಚಯವಾಗುತ್ತದೆ ಮತ್ತು ಸಾಹಿತ್ಯದ ಬೆಳವಣಿಗೆಯಾಗುತ್ತದೆ. ಆಚಾರ, ವಿಚಾರಗಳನ್ನು ಉಳಿಸಿ ಬೆಳೆಸುವ ಶಕ್ತಿ ಕೂಡ ಪುಸ್ತಕಗಳಿಗಿದೆ. ಆದ್ದರಿಂದ ಹೆಚ್ಚು ಹೆಚ್ಚು ಪುಸ್ತಕಗಳು ರಚನೆಯಾಗಬೇಕು ಎಂದರು. ಆಧುನಿಕತೆಯ ಭರಾಟೆಯಿಂದಾಗಿ ಹಿಂದಿನ ಪ್ರೀತಿ, ವಿಶ್ವಾಸ, ಅಭಿಮಾನ ಇಂದು ಕಾಣುತ್ತಿಲ್ಲ. ಹಿರಿಯರು ಅಂದು ಅನುಭಿಸಿದ ಅನುಭವಗಳನ್ನು ಇಂದು ಪುಸ್ತಕದ ಮೂಲಕ ಓದಿ ತಿಳಿದುಕೊಳ್ಳುವಂತಾಗಿದೆ ಎಂದು ಮಹೇಶ್ ನಾಚಯ್ಯ ಬೇಸರ ವ್ಯಕ್ತಪಡಿಸಿದರು. ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸಮಾಜದಲ್ಲಿ ನಡೆಯುವ ವಿಭಿನ್ನ ವಿಚಾರಗಳ…
ಮಡಿಕೇರಿ ಜೂ.27 NEWS DESK : ಪ್ರಸಕ್ತ (2024-25) ಸಾಲಿಗೆ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮದಡಿ ಮ್ಯಾನುಯಲ್ ಸ್ಕಾವೆಂಜರ್ ಕುಟುಂಬದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಗರಿಷ್ಟ ರೂ. 50 ಲಕ್ಷ ಹಾಗೂ ಸೇವಾ ಘಟಕಗಳನ್ನು ಸ್ಥಾಪಿಸಲು ಗರಿಷ್ಟ ರೂ. 20 ಲಕ್ಷ ಸಾಲ ಬ್ಯಾಂಕುಗಳ ಮುಖಾಂತರ ನೀಡಲಾಗುವುದು. ಆಸಕ್ತಿವುಳ್ಳ ಅಭ್ಯರ್ಥಿಗಳು ಆನ್‍ಲೈನ್ ಪಿಎಂಇಜಿಪಿ ವೆಬ್‍ಸೈಟ್: ತಿತಿತಿ.ಞviಛಿoಟಿಟiಟಿe.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ರವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಜೂ.27 NEWS DESK : ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ವಾಸವಾಗಿರುವ ಸಾರ್ವಜನಿಕರು ಕುಶಾಲನಗರ ಪುರಸಭೆಯ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) (ಹಂತ -4) ಯೋಜನೆ ಅಡಿ ವಿವಿಧ ವೈಯಕ್ತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಸೌಲಭ್ಯ ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಜುಲೈ, 06 ರ ಸಂಜೆ 5.30 ಗಂಟೆಯೊಳಗೆ ಮುಖ್ಯಾಧಿಕಾರಿಗಳು ಪುರಸಭೆ ಕುಶಾಲನಗರ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಕುಶಾಲನಗರ ಪುರಸಭೆ ಕಚೇರಿಯಲ್ಲಿ ಪಡೆದುಕೊಳ್ಳಬಹುದು ಎಂದು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ(ಮುನಿಸಿಪಾಲಿಟಿ)(ಹಂತ-4) ಯೋಜನೆ ಅಡಿ ಪರಿಶಿಷ್ಟ ಜಾತಿ ಜನಾಂಗದ ವ್ಯಕ್ತಿ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಮೀಸಲು. ಸೌಲಭ್ಯಗಳ ವಿವರ: 2022-23 ರಿಂದ 2024-25 ನೇ ಸಾಲಿಗೆ ವಿವಿಧ ವಸತಿ ಯೋಜನೆ ಪಕ್ಕಾಮನೆ ನಿರ್ಮಿಸಲು ಸರಕಾರದ ಇತರೆ ವಸತಿಯೋಜನೆ ಅಡಿ ಹೊಂದಾಣಿಕೆ ಮೊತ್ತ ಪಾವತಿಸಲು ಸಹಾಯಧನ, 10ನೇ ತರಗತಿ ಮೇಲ್ಪಟ್ಟು ವಿವಿಧ ಹಂತಗಳಲ್ಲಿ ವ್ಯಾಸಂಗ…
ಮಡಿಕೇರಿ ಜೂ.27 NEWS DESK : ಬೆಂಗಳೂರು ನಿರ್ಮಾತೃ, ಆದರ್ಶ ಆಡಳಿತಗಾರ, ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯ ಹೃದಯ ಭಾಗದಲ್ಲಿ ನಿರ್ಮಾಣ ಮಾಡುವಂತಾಗಲು ಜಾಗ ಗುರುತಿಸುವಂತೆ ಜಿಲ್ಲಾಡಳಿತಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಒಕ್ಕಲಿಗರ ಸಂಘ ಮತ್ತು ಕೊಡಗು ಗೌಡ ಸಮಾಜಗಳ ಸಹಕಾರದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಂಗಳೂರು ನಿರ್ಮಾಣದಲ್ಲಿ ಕೆಂಪೇಗೌಡರ ಕೊಡುಗೆ ಅಪಾರವಾಗಿದೆ. ಆ ನಿಟ್ಟಿನಲ್ಲಿ ಕೆಂಪೇಗೌಡ ಅವರ ಪ್ರತಿಮೆ ನಿರ್ಮಿಸುವಂತಾಗಲು ಜಾಗ ಗುರುತಿಸಿದಲ್ಲಿ, ವಿವಿಧ ಸಂಘಟನೆಗಳ ಜೊತೆಗೂಡಿ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಲಾಗುವುದು ಎಂದು ಶಾಸಕರು ಹೇಳಿದರು. ಬೆಂಗಳೂರು ಬೆಳೆಯುತ್ತಿದೆ. ಮಾಹಿತಿ ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ತನ್ನದೇ ಆದ ಸ್ಥಾನ ಹೊಂದಿದೆ. ಕುಡಿಯುವ ನೀರು ಸೇರಿದಂತೆ ಇತರ ಮೂಲ ಸೌಲಭ್ಯ ಕಲ್ಪಿಸಬೇಕಿದೆ. ಸ್ವಚ್ಛತೆಗೆ ಆದ್ಯತೆ…
ಮಡಿಕೇರಿ ಜೂ.27 NEWS DESK : ವಿಶ್ವರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ಜೂ.28 ರಂದು ನಗರಸಭೆ ಪೌರಕಾರ್ಮಿಕರಿಗೆ ಸ್ವೆಟರ್ ಹಾಗೂ ಶ್ರೀ ಶಕ್ತಿ ವೃದ್ಧಾಶ್ರಮದ ಹಿರಿಯರಿಗೆ ಬಟ್ಟೆ ವಿತರಣಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕದಸಂ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ವಹಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಮಡಿಕೇರಿಯ ಆರ್.ಆರ್.ಆಸ್ಪತ್ರೆಯ ಮಕ್ಕಳ ತಜ್ಞ ಡಾ.ನವೀನ್ ಪಾಲ್ಗೊಳ್ಳಲಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಯ ಉಪ ವೈದ್ಯಧಿಕಾರಿ ಡಾ.ಹೆಚ್.ವಿ.ದೇವದಾಸ್ ಪೌರಕಾರ್ಮಿಕರಿಗೆ ಸ್ವೆಟರ್ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ನಗರಸಭೆ ಆಯುಕ್ತ ವಿಜಯ, ಸಮಾಜ ಸೇವಕ ಬಿ.ಆರ್.ಪ್ರದೀಪ್ ಕರ್ಕೆರ, ಕದಸಂ ಮೈಸೂರು-ಕೊಡಗು ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ಮಡಿಕೇರಿ ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಭಾಗವಹಿಸಲಿದ್ದಾರೆ.
ಮಡಿಕೇರಿ ಜೂ.27 NEWS DESK : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣ ಮತ್ತು ರಾಜ್ಯ ಸರ್ಕಾರದಿಂದ ಪರಿಶಿಷ್ಟರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.28 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನಲ್ಲಿ ಕೊಡಗು ಜಿಲ್ಲಾ ಬಿಜೆಪಿ ಎಸ್‍ಟಿ ಮೋರ್ಚಾದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಎಸ್‍ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ತಿಳಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಪರಿಶಿಷ್ಟರ ಅಭ್ಯುದಯಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಅಲ್ಲದೆ ಹೆಚ್ಚು ಅನುದಾನ ಮೀಸಲಿಡಲಾಗಿತ್ತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೂಡ ಪರಿಶಿಷ್ಟರ ಅಭಿವೃದ್ಧಿಗಾಗಿ ಹಣ ನೀಡುತ್ತಿದೆ. ಆದರೆ ಈಗಿನ ರಾಜ್ಯ ಕಾಂಗ್ರೆಸ್ ಸರ್ಕಾರ ಬಿಟ್ಟಿ ಭಾಗ್ಯಗಳನ್ನು ಈಡೇರಿಸಲು ಪರಿಶಿಷ್ಟರ ಕಲ್ಯಾಣ ಇಲಾಖೆಗಳ ಅನುದಾನವನ್ನು ಬಳಸಿಕೊಳ್ಳುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲೂ ಇದೇ ರೀತಿಯ ಅನ್ಯಾಯವಾಗಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು…
ಮಡಿಕೇರಿ ಜೂ.27 NEWS DESK : ಇತ್ತೀಚಿನ ದಿನಗಳಲ್ಲಿ ಕಿರಿಯ ವಯಸ್ಸಿನವರು ಹೃದಯಾಘಾತಕ್ಕೊಳಗಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊಡಗು ಜಿಲ್ಲೆಯ ನೆಲಜಿ ಗ್ರಾಮದಲ್ಲಿ ಯುವತಿಯೊಬ್ಬಳು ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ನಡೆದಿದೆ. ಮಡಿಕೇರಿ ತಾಲ್ಲೂಕಿನ ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಎಂಬುವವರ ಪುತ್ರಿ ನಿಲಿಕಾ ಪೊನ್ನಪ್ಪ (24) ಮೃತ ಯುವತಿ. ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಉದ್ಯೋಗದಲ್ಲಿದ್ದ ಇವರು ಇಂದು ಬೆಳಿಗ್ಗೆ ಕರ್ತವ್ಯಕ್ಕೆ ತೆರಳಲೆಂದು ಮನೆಯಲ್ಲಿ ತಯಾರಿ ನಡೆಸುತ್ತಿದ್ದರು. ಈ ಸಂದರ್ಭ ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ. ಪುತ್ರಿಯನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.






