ಲೇಖಕ: admin

ಸೋಮವಾರಪೇಟೆ ಜೂ.27 NEWS DESK : ನಾಡಪ್ರಭು ಕೆಂಪೇಗೌಡರ ದೂರದರ್ಶಿತ್ವಕ್ಕೆ ಸಾಕ್ಷಿ ಎಂಬಂತೆ ಸುಮಾರು 500 ವರ್ಷಗಳ ಹಿಂದೆಯೇ ಸಾಮಾಜಿಕ ನ್ಯಾಯದ ಮೂಲಕ ಆದರ್ಶನೀಯ ಆಡಳಿತಗಾರರಾಗಿದ್ದರು ಎಂದು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ತಿಲೊತ್ತಮೆ ಬಣ್ಣಿಸಿದರು. ಸೋಮವಾರಪೇಟೆ ತಾಲ್ಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಐನೂರ ಹದಿನೈದನೆ ಜಯಂತಿ ಕಾಯ್ರ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಕೆಂಪೇಗೌಡರು ಅಂದಿನ ರೈತರು ಮತ್ತು ಕೃಷಿ ಕಾರ್ಮಿಕರು ಸ್ವಾಭಿಮಾನದಿಂದ ಬದುಕಲು ಹಾಗೂ ಕುಲಕಸುಬುಗಳಲ್ಲಿ ತೊಡಗಿದ್ದ ಎಲ್ಲಾ ಸಾಮಾಜಿಕ ವರ್ಗಗಳಿಗೆ ಅನ್ನ, ನೀರು, ಆಶ್ರಯ, ಸಿಗಬೇಕೆಂಬ ದೂರ ದೃಷ್ಟಿ ಹೊಂದಿದ್ದರು ಎಂದರು. ವ್ಯವಸಾಯಕ್ಕೆ ನೀರಿನ ಭದ್ರತೆ ಒದಗಿಸುವ ಹಲವಾರು ಕೆರೆಗಳನ್ನು ಕಟ್ಟಿಸಿದ್ದರು. ನಾವುಗಳು ಇಂದು ಜೀವನಾಡಿಗಳಾಗಿರುವ ಕೆರೆಗಳನ್ನೇ ನಾಶಮಾಡುತ್ತಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು. ಕೇವಲ ಆಚರಣೆಗಷ್ಟೇ ಸೀಮಿತಗೊಳಿಸದೆ ಕೆಂಪೇಗೌಡರ ಆದರ್ಶಗಳನ್ನೂ ಪಾಲಿಸೋಣವೆಂದರು. ವಕೀಲರಾದ ಅಭಿಮನ್ಯು ಕುಮಾರ್…

Read More

ಬೆಂಗಳೂರು ಜೂ.27 NEWS DESK : ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಕೆಂಪೇಗೌಡರ ಸಾಧನೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು.

Read More

ಮಡಿಕೇರಿ ಜೂ.27 NEWS DESK : ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಜೂ‌.30 ರಂದು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷರಾದ ಪಾಣತ್ತಲೆ ಜಗದೀಶ್ ಮಂದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಪಿ.ಎ ನಾಗೇಶ್(ಈಶ್ವರ್) ತಿಳಿಸಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಅಮ್ಮತಿಯ ಪ್ರೌಢಶಾಲಾ ಮೈದಾನದಲ್ಲಿರುವ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಛೇರಿಯಲ್ಲಿ ನಡೆಯಲಿದೆ ಕಚೇರಿಯಲ್ಲಿ ನಡೆಯಲಿರುವ ಸಭೆಗೆ ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಅಸ್ಲಮ್ ಖಾನ್  ಭಾಗವಹಿಸಲಿದ್ದಾರೆ. ಮಹಾಸಭೆಗೆ ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಅಸ್ಲಮ್ ಖಾನ್ ಹಾಗೂ ಶರವಣ ಭಾಗವಹಿಸಲಿದ್ದಾರೆ. ಜಿಲ್ಲಾ ಫುಟ್ಬಾಲ್ ಸಂಸ್ಥೆಯಲ್ಲಿ ನೋಂದಣಿಯಾದ ಕ್ಲಬ್ ಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಕಡ್ಡಾಯವಾಗಿ ಮಹಾಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ನಾಗೇಶ್(ಈಶ್ವರ್) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸುಂಟಿಕೊಪ್ಪ ಜೂ.27 NEWS DESK : ಕಾಡಾನೆ ದಾಳಿಯಿಂದ ಕೃಷಿ ಫಸಲು ನಾಶವಾಗಿದ್ದು, ಬೆಳೆಗಾರರು ಆತಂಕಗೊಂಡಿದ್ದಾರೆ. ಸುಂಟಿಕೊಪ್ಪ ಉಲುಗುಲಿ ಗ್ರಾಮದ ಓಡಿಯಪ್ಪನ ಸುದೇಶ್‍ಕುಮಾರ್ ಅವರ ತೋಟದಲ್ಲಿ ಕಾಡಾನೆ ದಾಳಿ ನಡೆಸಿ ತೆಂಗು, ಕಾಫಿ, ಬಾಳೆ, ಏಲಕ್ಕಿ ಸೇರಿದಂತೆ ಹಲವು ಗಿಡಗಳನ್ನು ನಾಶಗೊಳಿಸಿದೆ. ಕಳೆದ ಎರಡು ಮೂರು ದಿನಗಳಿಂದ ಕಾಡಾನೆ ತೋಟದಲ್ಲೆ ಬೀಡುಬಿಟ್ಟಿದ್ದು, ಕೃಷಿ ಫಸಲುಗಳನ್ನು ನಾಶಪಡಿಸುತ್ತಿವೆ. ಕಾರ್ಮಿಕರು ಹಾಗೂ ಶಾಲಾ ಮಕ್ಕಳು ಆತಂಕ ಪಡುವಂತಾಗಿದೆ. ತಕ್ಷಣವೇ ಅರಣ್ಯ ಇಲಾಖೆ ಕಾಡಾನೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಜೂ.27 NEWS DESK : ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಆರ್ದ್ರಾ ಮಳೆ ತೀವ್ರತೆಯನ್ನು ಪಡೆದುಕೊಂಡಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಕಳೆದ 24 ಗಂಟೆಗಳಲ್ಲಿ ಭಾಗಮಂಡಲದಲ್ಲಿ ದಾಖಲೆಯ 8 ಇಂಚು ಮಳೆಯಾಗಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿ ಮಡಿಕೇರಿ ಮತ್ತು ನಾಪೋಕ್ಲು ರಸ್ತೆ ಜಲಾವೃತಗೊಂಡಿದೆ. ನೂತನ ಮೇಲು ಸೇತುವೆಯಲ್ಲಿ ಸಂಚಾರಕ್ಕೆ ಅವಕಾಶ ನೀಡಿರುವುದರಿಂದ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಗದ್ದೆ, ತೋಟಗಳಿಗೂ ನೀರು ನುಗ್ಗಿದ್ದು, ಕೃಷಿಕ ವರ್ಗ ನಷ್ಟ ಅನುಭವಿಸಿದೆ. ಮಡಿಕೇರಿ ನಗರದಲ್ಲೂ ಮಳೆಯಾಗುತ್ತಿದ್ದು, ತೋಡು, ಚರಂಡಿಗಳು ತುಂಬಿ ಹರಿಯುತ್ತಿವೆ. ಕೆಲವು ಭಾಗದಲ್ಲಿ ಮಳೆಯ ನೀರಿನ ರಭಸಕ್ಕೆ ರಸ್ತೆಗಳ ಡಾಂಬರು ಮತ್ತು ಕಾಂಕ್ರೀಟ್ ಕೊಚ್ಚಿ ಹೋಗಿದೆ. ತ್ಯಾಗರಾಜ ಕಾಲೋನಿಯಲ್ಲಿ ಬರೆ ಬಿದ್ದು ಮೂರು ಮನೆಗಳಿಗೆ ಹಾನಿಯಾಗಿದೆ. ಬೆಟ್ಟ ಮತ್ತು ತಗ್ಗು ಪ್ರದೇಶದಲ್ಲಿರುವ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ನಗರಸಭೆ ಈಗಾಗಲೇ ಸೂಚನೆ ನೀಡಿದೆ. ಬೇತ್ರಿ, ಬಲಮುರಿ, ದುಬಾರೆ, ಕೂಡಿಗೆ,…

Read More

ಸುಂಟಿಕೊಪ್ಪ ಜೂ.27 NEWS DESK : ಇಂದಿನ ಯುವ ಪೀಳಿಗೆ ಮಾದಕ ದ್ರವ್ಯಗಳ ವ್ಯಸಕ್ಕೆ ಬಲಿಯಾಗುವತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಮತ್ತು ಯುವ ಸಮುದಾಯವನ್ನು ಕಾಡುತ್ತಿರುವ ಗಂಭೀರ ಸಮಸ್ಯೆಯಾಗಿದೆ ಎಂದು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀಲತಾ ಅಭಿಪ್ರಾಯ ವ್ಯಕ್ತಪಡಿಸಿದರು. ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಮಾರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಎಚ್ಚರಿಕೆಯ ಸಂದೇಶ ನೀಡಿ ಮತ್ತು ಬರಿಸುವ ಮಾದಕವ್ಯಸನಿಗಳು ನಮ್ಮಗಳ ಶಾರೀರಿಕ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರಿ, ವ್ಯಕ್ತಿಯನ್ನು ಜೀವಚ್ಛವವವಾಗಿ ಮಾಡುತ್ತವೆ ಎಂದರು. ಶರೀರದ ನರಮಂಡಲದ ಮೇಲೆ ಮಾದಕ ವ್ಯಸನಿಗಳಿಂದ ವ್ಯತಿರಿಕ್ತ ಪರಿಣಾಮ ಉಂಟಾಗಿ ವ್ಯಕ್ತಿಯು ಸಾವಿನ ದವಡೆಗೆ ದೂಡಲ್ಪಡುತ್ತದೆ ಎಂದರು. ಅಂತರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ವಿರೋಧಿ ದಿನಚಾರಣೆಯ ಕುರಿತು ಸುಂಟಿಕೊಪ್ಪ ಪೊಲೀಸ್ ಠಾಣೆಯ ಮುಖ್ಯಪೇದೆ ರಮೇಶ್ ಮಾತನಾಡಿ, ಸೈಬರ್ ಕ್ರೈಮ್ ಬ್ರ್ಯಾಂಚ್‍ನಿಂದ ಮಾದಕ ವ್ಯಸನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಉಂಟು ಮಾಡಲು ಆಗಮಿಸಿದ್ದ ಮಾದಕ ವಸ್ತುಗಳಿಗೆ ಜನ…

Read More

ಕಡಂಗ ಜೂ.26 NEWS DESK : ಕೊಡಗಿನ ಸಮಗ್ರ ಅಭಿವೃದ್ಧಿಗಾಗಿ ಪಣತೊಟ್ಟಿರುವ ಜನಪರ, ಜನಪ್ರಿಯ ನಾಯಕ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿಯನ್ನು ಬಿಜೆಪಿ ದಹಿಸಿರುವುದು ಖಂಡನೀಯವೆಂದು ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷಾತೀತ ಮತ್ತು ಜಾತ್ಯತೀತವಾಗಿ ಎಲ್ಲಾ ಜನಾಂಗದವರನ್ನು ಒಗ್ಗಟ್ಟಾಗಿ ಮುನ್ನಡೆಸುತ್ತಿರುವ ಪೊನ್ನಣ್ಣ ಅವರು ಅಭಿವೃದ್ಧಿಯ ಹರಿಕಾರರಾಗಿದ್ದಾರೆ. ಪೊನ್ನಣ್ಣ ಅವರ ಬೆಳವಣಿಗೆಯನ್ನು ಸಹಿಸಲಾಗದೆ ಬಿಜೆಪಿ ಈ ರೀತಿ ವರ್ತಿಸುತ್ತಿದೆ. ಬಿಜೆಪಿ ಕೊಡಗಿನ ಪ್ರಬುದ್ಧ ರಾಜಕಾರಣಕ್ಕೆ ಕಳಂಕ ತಂದಿದೆ ಎಂದು ಅವರು ಆರೋಪಿಸಿದ್ದಾರೆ.

Read More

ಮಡಿಕೇರಿ ಜೂ.26 NEWS DESK : ನಿರಂತರ ಮಳೆಯಾಗುತ್ತಿರುವ ಕಾರಣ ಮುಂಜಾಗೃತಾ ಕ್ರಮವಾಗಿ ಜೂ.27 ರಂದು ಒಂದು ದಿನ ಕೊಡಗು ಜಿಲ್ಲೆಯ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಮಳೆಯ ತೀವ್ರತೆಯನ್ನು ಆಧರಿಸಿ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಜಿಲ್ಲೆಯ ಆಯಾ ವ್ಯಾಪ್ತಿಯ ಶಾಲೆಗಳ ಮುಖ್ಯೋಪಾಧ್ಯಾರಿಗೆ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಉಪನಿರ್ದೇಶಕರ ಅನುಮತಿ ಪಡೆಯುವುದು ಖಡ್ಡಾಯವಾಗಿದೆ.

Read More

ಸೋಮವಾರಪೇಟೆ ಜೂ.26 NEWS DESK : ವಿರಾಜಪೇಟೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ವಿರುದ್ಧ ವಿನಾಕಾರಣ ಹೂಡಲಾಗಿರುವ ಮೊಕದ್ದಮೆಯನ್ನು ವಾಪಾಸ್ ಪಡೆಯದಿದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಸೋಮವಾರಪೇಟೆ ಮಂಡಲ ಬಿಜೆಪಿ ಎಚ್ಚರಿಕೆ ನೀಡಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತೆರಿಗೆ ಹೆಚ್ಚಳದಿಂದ ದಿನನಿತ್ಯ ಬಳಸುವ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಜನರು ಸಂಕಷ್ಟದಲ್ಲಿದ್ದಾರೆ. ತಕ್ಷಣ ಪೆಟ್ರೋಲ್, ಡೀಸೆಲ್ ಮತ್ತು ಹಾಲಿನ ಬೆಲೆ ಇಳಿಕೆ ಮಾಡಬೇಕು ಎಂದು ಮಂಡಲದ ವಕ್ತಾರ ಕಂಠಿ ಕಾರ್ಯಪ್ಪ ಆಗ್ರಹಿಸಿದ್ದಾರೆ. ಸೋಮವಾರಪೇಟೆಯ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಜನರ ಮೇಲೆ ತೆರಿಗೆ ಬರೆ ಹಾಕಲಾಗುತ್ತಿದೆ. ಬಿಟ್ಟಿ ಭಾಗ್ಯಗಳಿಂದ ರಾಜ್ಯದ ಬೊಕ್ಕಸ ಖಾಲಿಯಾಗಿದೆ, ಇದೇ ಕಾರಣಕ್ಕೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಮತ್ತು ತೆರಿಗೆಯನ್ನು ಏರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಬೆಲೆ ಏರಿಕೆಯನ್ನು ವಿರೋಧಿಸಿ ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ ಮತ್ತು ಪ್ರತಿಕೃತಿ ದಹನವನ್ನು ಶಾಸಕರು ವೈಯುಕ್ತಿಕವಾಗಿ ತೆಗೆದುಕೊಳ್ಳಬಾರದು. ಈ ವಿಷಯದಲ್ಲಿ ಜಾತಿಯನ್ನು ತಂದು ಕೆಲವರು…

Read More

ಮಡಿಕೇರಿ ಜೂ.26 NEWS DESK : ಇದೇ ಜೂ.27 ರಿಂದ ಜು.2 ರವರೆಗೆ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೈನಿಕ ಕಲ್ಯಾಣ ಇಲಾಖೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯು ಒಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು, ಯಾರಿಗೂ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು. ವಸತಿ ಊಟೋಪಚಾರ ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸ್ಪಷ್ಟ ನಿರ್ದೇಶನ ನೀಡಿದರು. ಸೈನಿಕ ಭರ್ತಿ ಕಾರ್ಯಾಲಯದ ನಿರ್ದೇಶಕರಾದ ಕರ್ನಲ್ ಗೌರವ್ ತಾಪ ಮಾತನಾಡಿ, ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕಿದೆ. ಲೋಕೋಪಯೋಗಿ, ಸೆಸ್ಕ್, ಪದವಿ ಪೂರ್ವ ಶಿಕ್ಷಣ, ಅಗ್ನಿಶಾಮಕ ದಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವೈದ್ಯಕೀಯ ಶಿಕ್ಷಣ, ಸೆಸ್ಕ್, ಬಿಎಸ್‍ಎನ್‍ಎಲ್ ಹೀಗೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಸಹಕಾರ ನೀಡುವಂತೆ…

Read More