ಮಡಿಕೇರಿ ಮೇ 3 NEWS DESK : ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಬೇಕು. ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗದಂತೆ ಸ್ಥಳೀಯ ಮಟ್ಟದ ಅಧಿಕಾರಿಗಳು ಸಂದರ್ಭಾನುಸಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರಿನ ಪೂರೈಕೆ ಸಮಸ್ಯೆ ಎದುರಾದಲ್ಲಿ ಹತ್ತಿರದ ಶಾಲೆ ಅಥವಾ ಅಂಗನವಾಡಿ ಕೇಂದ್ರಗಳಲ್ಲಿ ಇರುವ ಬೋರ್‍ವೆಲ್‍ಗಳ ನೀರನ್ನು ಬಳಕೆ ಮಾಡಿಕೊಳ್ಳಬೇಕು. ಸಾಧ್ಯವಾಗದಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಮುಂದಾಗುವಂತೆ ತಾಲ್ಲೂಕು ಆಡಳಿತಗಳಿಗೆ ಸೂಚನೆ ನೀಡಿದರು. ತಾಲ್ಲೂಕು ಮಟ್ಟದಲ್ಲಿ ಪ್ರತಿ ಹದಿನೈದು ದಿನಕ್ಕೊಮ್ಮೆ ಟಾಸ್ಕ್‍ಪೋರ್ಸ್ ಸಮಿತಿ ಸಭೆ ಏರ್ಪಡಿಸುವ ಮೂಲಕ ಸಮರ್ಪಕ ನೀರು ಪೂರೈಕೆಯಲ್ಲಿನ ತೊಂದರೆಗಳ ನಿವಾರಣೆಗೆ ಮುಂದಾಗಬೇಕು. ತಾಲ್ಲೂಕು ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಗತಿ ಪರಿಶೀಲನೆಯನ್ನು ಸಂದರ್ಭಾನುಸಾರ ನಡೆಸಿ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ ಕುಡಿಯುವ…
ಲೇಖಕ: admin
ಮಡಿಕೇರಿ ಮೇ 3 NEWS DESK : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯಲ್ಲಿ ಮೇ 7 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ತಿಳಿಸಿದ್ದಾರೆ.
ಮಡಿಕೇರಿ ಮೇ 3 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಪಂದ್ಯಾವಳಿಯ ಶುಕ್ರವಾರದ ಸಂಘರ್ಷಪೂರ್ಣ ಪಂದ್ಯದಲ್ಲಿ ಕೂರ್ಗ್ ಬ್ಲಾಸ್ಟರ್ಸ್ ತಂಡ 5 ರನ್‍ಗಳ ಅಂತರದ ಮಹತ್ವದ ಗೆಲುವನ್ನು ಅಂಜಿಗೇರಿ ನಾಡ್ ತಂಡದ ವಿರುದ್ಧ ದಾಖಲಿಸಿತು. ಮೊದಲು ಬ್ಯಾಟಿಂಗ್‍ಗೆ ಇಳಿದ ಕೂರ್ಗ್ ಬ್ಲಾಸ್ಟರ್ಸ್ ತಂಡ, ಎದುರಾಳಿ ಅಂಜಿಗೇರಿ ನಾಡ್ ತಂಡದ ಬೌಲಿಂಗ್‍ನ್ನು ವಿಶ್ವಾಸದಿಂದ ಎದುರಿಸಿದ್ದಲ್ಲದೆ, ನಿಗದಿತ 20 ಓವರ್‍ಗಳಲ್ಲಿ 7 ವಿಕೆಟ್ ನಷ್ಟಕ್ಕೆ 173 ರನ್‍ಗಳ ಸ್ಪರ್ಧಾತ್ಮಕ ಮೊತ್ತವನ್ನು ಕಲೆ ಹಾಕಿತು. ತಂಡದ ತಿಮ್ಮಯ್ಯ ಅವರು ಕೇವಲ 56 ಬಾಲ್‍ಗಳಿಗೆ 71 ರನ್‍ಗಳನ್ನು ಕಲೆ ಹಾಕಿ ತಂಡದ ಮೊತ್ತವನ್ನು ಹೆಚ್ಚಿಸಲು ಮಹತ್ವದ ಕಾಣಿಕೆ ನೀಡಿದರು. ಗೆಲುವಿನ ಗುರಿ ಬೆನ್ನು ಹತ್ತಿದ ಅಂಜಿಗೇರಿ ನಾಡ್ ತಂಡ, ವಿಶ್ವಾಸಪೂರ್ಣ ಆಟವನ್ನೆ ಪ್ರದರ್ಶಿಸಿತು. ಹೀಗಿದ್ದೂ ಕೊನೆಯ ಓವರ್‍ಗಳಲ್ಲಿ ನಿರೀಕ್ಷಿತ ರನ್‍ಗಳನ್ನು ಕಲೆ ಹಾಕಲು ಸಾಧ್ಯವಾಗದೆ ಅಂತಿಮವಾಗಿ 20…
ಮಡಿಕೇರಿ ಮೇ 3 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮೇ 5 ರಂದು ಮಡಿಕೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‍ನ 110ನೇ ಸಂಸ್ಥಾಪನಾ ದಿನಾಚರಣೆ ನಡೆಯಲಿದೆ. ನಗರದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಕಚೇರಿಯಲ್ಲಿ ಅಪರಾಹ್ನ 3 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೆ.ಆರ್.ನಗರದ ಸಂತ ಅಂತೋಣಿ ಪ್ರೌಢಶಾಲೆಯ ಅಧ್ಯಾಪಕರಾದ ವಿಲ್‍ಫ್ರಡ್ ಕ್ರಾಸ್ತಾ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ.ಪ್ರೇಮ್ ಕುಮಾರ್ ಮುಖ್ಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಮೇ 3 NEWS DESK : ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣದ ನಂತರ ರಾಜ್ಯದಲ್ಲಿ ಜಾತ್ಯತೀತ ಜನತಾದಳ ಸಂಪೂರ್ಣವಾಗಿ ಜನರ ವಿಶ್ವಾಸವನ್ನು ಕಳೆದುಕೊಂಡಿದ್ದು, ಈ ಪಕ್ಷವನ್ನು ವಿಸರ್ಜಿಸುವುದು ಸೂಕ್ತವೆಂದು ಕೊಡಗು ಜಿಲ್ಲಾ ಜೆಡಿಎಸ್ ಮಾಜಿ ವಕ್ತಾರ ಸೂದನ ಎಸ್.ಈರಪ್ಪ ಅಭಿಪ್ರಾಯಪಟ್ಟಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂಸದ ಪ್ರಜ್ವಲ್ ಹಾಗೂ ಶಾಸಕ ಹೆಚ್.ಡಿ.ರೇವಣ್ಣ ಅವರ ವಿರುದ್ಧ ಗಂಭೀರವಾದ ಆರೋಪಗಳು ಕೇಳಿ ಬಂದಿದ್ದು, ಇದು ಜೆಡಿಎಸ್ ಪಕ್ಷಕ್ಕೆ ಮತ್ತು ಕಾರ್ಯಕರ್ತರಿಗೆ ಮುಜುಗರವನ್ನುಂಟು ಮಾಡಿದೆ. ಯಾವುದೇ ಕಾರಣಕ್ಕೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸತ್ಯದ ಪರ ನಿಲ್ಲಬೇಕೆ ಹೊರತು ತಮ್ಮ ಕುಟುಂಬದ ಪರ ನಿಲ್ಲಬಾರದು ಎಂದು ಒತ್ತಾಯಿಸಿದ್ದಾರೆ. ರಾಜ್ಯದ ಜನ ಪಕ್ಷದ ಮೇಲಿಟ್ಟಿದ್ದ ಅಭಿಮಾನಕ್ಕೆ ದ್ರೋಹವಾಗಿದೆ. ಅದರಲ್ಲೂ ಮಹಿಳಾ ಸಮೂಹಕ್ಕೆ ಅವಮಾನವಾಗಿದೆ. ಪ್ರಕರಣದ ಉನ್ನತ ಮಟ್ಟದ ತನಿಖೆಯಿಂದಷ್ಟೇ ಸತ್ಯ ಬಯಲಾಗಲಿದೆ. ಜನ ಬೆಂಬಲ ಕಳೆದುಕೊಂಡ ಪಕ್ಷವನ್ನು ತಕ್ಷಣ ವಿಸರ್ಜಿಸಬೇಕೆಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ಸಿಗರು ಈ ಸನ್ನಿವೇಶವನ್ನು ರಾಜಕೀಯವಾಗಿ ಬಳಸಿಕೊಳ್ಳುವ ಬದಲು ತಮ್ಮ ಪಕ್ಷದೊಳಗಿನ…
ಮಡಿಕೇರಿ ಮೇ 3 NEWS DESK : ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ದೇಶದ ಪ್ರಧಾನಿ ನರೇಂದ್ರಮೋದಿ ಅವರ ಕುರಿತು ನೀಡಿರುವ ಹೇಳಿಕೆ ಖಂಡನೀಯವೆಂದು ಕೊಡಗು ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಅವರು ಇಡೀ ವಿಶ್ವವೇ ಮೆಚ್ಚಿಕೊಂಡಿರುವ ನಾಯಕ ನರೇಂದ್ರಮೋದಿ ಅವರ ಬಗ್ಗೆ “ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ” ಎಂದು ಶಾಸಕ ರಾಜು ಕಾಗೆ ನೀಡಿರುವ ಹೇಳಿಕೆ ಕಾಂಗ್ರೆಸ್ ಪಕ್ಷದ ಕೀಳು ಮಟ್ಟದ ಸಂಸ್ಕøತಿಗೆ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ. ಜನರ ಆಶೀರ್ವಾದದಿಂದ ಮೋದಿ ಅವರು ದೀರ್ಘಾಯುಷ್ಯ ಹೊಂದುತ್ತಾರೆ ಮತ್ತು ಈ ಬಾರಿಯೂ ದೇಶದ ಪ್ರಧಾನಿಯಾಗಿ ಆಡಳಿತ ನಡೆಸಲಿದ್ದಾರೆ. ಸೋಲಿನ ಹತಾಶೆಯಲ್ಲಿರುವ ಕಾಂಗ್ರೆಸ್ಸಿಗರು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಮೋದಿಜೀ ಅವರು ಯಾಕೆ ಸಾಯಬೇಕು? 370ನೇ ವಿಧಿ ರದ್ದು ಮಾಡಿ ಜಮ್ಮು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿ ಪರಿವರ್ತಿಸಿದ್ದಕ್ಕಾಗಿಯೇ,…
ಮಡಿಕೇರಿ ಮೇ 3 NEWS DESK : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರದ, ನೈರುತ್ಯ ಶಿಕ್ಷಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಚುನಾವಣಾ ಕಾರ್ಯಸೂಚಿಯನ್ನು ಹೊರಡಿಸಿದೆ. ಮೇ 9 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ 17 ರಂದು ನಾಮಪತ್ರಗಳ ಪರಿಶೀಲನೆ, ಮೇ 20 ರಂದು ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಜೂ.3 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಜೂನ್ 6 ರಂದು ಮತ ಎಣಿಕೆ ನಡೆಯಲಿದೆ. ಈ ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗಳ ವಯಸ್ಸು 30 ವರ್ಷಗಳಿಗೆ ಕಡಿಮೆ ಇರಕೂಡದು. ಮತ್ತು ಅವರು ಕರ್ನಾಟಕದ ಯಾವುದಾದರು ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು ಮತ್ತು ಅವರು ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಿರಬಾರದು. ಚಾಲ್ತಿಯಲ್ಲಿರುವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವ ಬಗ್ಗೆ ಸಂಬಂಧಿಸಿದ ಮತದಾರರ ನೋಂದಣಾಧಿಕಾರಿ/ ಸಹಾಯಕ…
ಮಡಿಕೇರಿ ಮೇ 3 NEWS DESK : ಮಡಿಕೇರಿ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುವ ಭಾಗಮಂಡಲ ಫೀಡರ್‍ನಲ್ಲಿ ಮಳೆಗಾಲದ ಮುಂಜಾಗ್ರತಾ ನಿರ್ವಹಣೆ ನಡೆಸಬೇಕಾಗಿರುವುದರಿಂದ ಮೇ 4 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 3.30 ಗಂಟೆಯವರೆಗೆ ಬೆಟ್ಟಗೇರಿ, ಚೇರಂಬಾಣೆ, ಭಾಗಮಂಡಲ, ಅಯ್ಯಂಗೇರಿ ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಚೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
ಮಡಿಕೇರಿ ಮೇ 3 NEWS DESK : ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿ ನಿಡ್ತ ಗ್ರಾಮದ ಶ್ರೀ ಬಸವೇಶ್ವರ ಮತ್ತು ಶ್ರೀ ಕನ್ನಂಬಾಡಿಯಮ್ಮ ದೇವಾಲಯದಲ್ಲಿ ಮೇ 6 ರಂದು ವಾರ್ಷಿಕ ಪೂಜೋತ್ಸವ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದಯಾನಂದ ಮತ್ತು ಕುಟುಂಬದವರು ಮನವಿ ಮಾಡಿದ್ದಾರೆ.
ಪುತ್ತೂರು ಮೇ 3 NEWS DESK : ಕೃತಕ ಬುದ್ದಿಮತ್ತೆ ತಂತ್ರಜ್ಞಾನವು ವ್ಯಾಪಕವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಿಲ್ಲದೆ ಭವಿಷ್ಯದ ದಿನಗಳಿಲ್ಲ ಎನ್ನುವವರೆಗೆ ಸರ್ವವ್ಯಾಪಿಯಾಗಿದೆ. ಯಾವುದೇ ತಂತ್ರಜ್ಞಾನವಾದರೂ ಅದರ ಬಳಕೆಯ ವಿಧಾನದ ಮೇಲೆ ಒಳಿತು ಕೆಡುಕುಗಳು ನಿರ್ಧರಿತವಾಗುತ್ತವೆ ಎಂದು ಎಂಐಟಿ ಮಣಿಪಾಲದ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವಿಭಾಗದ ಅಸೋಸಿಯೇಟ್ ಪ್ರೋಫೆಸರ್ ಡಾ.ರಾಘವೇಂದ್ರ ಎಸ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ “ಜ್ಞಾನ ಸಂಗಮ-2024” ಕ್ಕೆ ಚಾಲನೆ ನೀಡಿ ಅವರು ಮಾತಾಡಿದರು. ಯಾವುದೇ ತಂತ್ರಜ್ಞಾನಕ್ಕೆ ಅದರದ್ದೇ ಆದ ಮಿತಿ ಇರುತ್ತದೆ. ಹಾಗಾಗಿ ಸಂಪೂರ್ಣವಾಗಿ ಅದರ ಮೇಲೆ ಅವಲಂಬಿತವಾಗದೆ ಅದರ ಸಹಾಯವನ್ನು ಪಡೆದುಕೊಳ್ಳಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಡಳಿತ…






