ಮಡಿಕೇರಿ ಮೇ 17 NEWS DESK : ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಅರಣ್ಯ ಇಲಾಖೆ ನಡೆಸುತ್ತಿರುವ ಮರಗಳ ಗಣತಿ ಕಾರ್ಯವನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಅರಣ್ಯ ಭವನದ ಎದುರು ಅರಣ್ಯ ಇಲಾಖೆ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಮರ ಗಣತಿ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು. ರಾಜ್ಯ ಕಾಂಗ್ರೆಸ್ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಮತ್ತು ವಿನಾಕಾರಣ ಬೆಳೆಗಾರರಿಗೆ ಕಿರುಕುಳ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಮರಗಳ ಸರ್ವೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲಾಗುತ್ತಿರುವ ಬಗ್ಗೆ ಅರಿವಿದ್ದರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಉದ್ದೇಶ ಪೂರ್ವಕವಾಗಿಯೇ ಇಂದು ಬೆಂಗಳೂರಿನ ಸಭೆಯ ನೆಪದಲ್ಲಿ ಗೈರು ಹಾಜರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಖಾಸಗಿ ಜಮೀನುಗಳಲ್ಲಿನ…
ಲೇಖಕ: admin
ನಾಗಮಂಗಲ ಮೇ 17 NEWS DESK : ಕಾಡು ಹಂದಿ ದಾಳಿ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮಂಡ್ಯದ ನಾಗಮಂಗಲದಲ್ಲಿ ನಡೆದಿದೆ. ಚಿಂದಗಿರಿ ದೊಡ್ಡಿ ಗ್ರಾಮದ ಪುಟ್ಟಸ್ವಾಮಿ ಎಂಬುವವರ ಪುತ್ರ ಶಿವು (48) ಮೃತ ದುರ್ದೈವಿ. ಮಂಡ್ಯ- ನಾಗಮಂಗಲ ರಸ್ತೆಯಲ್ಲಿ ಬೈಕ್ ನಲ್ಲಿ ಬರುತ್ತಿದ್ದಾಗ ಏಕಾಏಕಿ ಕಾಡು ಹಂದಿ ದಾಳಿ ಮಾಡಿದೆ. ಈ ಸಂದರ್ಭ ಕೆಳಗೆ ಬಿದ್ದ ಶಿವು ಅವರ ತೊಡೆ ಮತ್ತು ಮರ್ಮಾಂಗಕ್ಕೆ ಹಂದಿ ಗುದ್ದಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಶಿವು ಸಂಬಂಧಿಕರು ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಾಗಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಮೇ 17 NEWS DESK : 35 ವರ್ಷ ಪೂರೈಸಿ 36ನೇ ಪುನರ್ ಪ್ರತಿಷ್ಠಾ ಮಹೋತ್ಸವದ ಪರ್ವ ಕಾಲದಲ್ಲಿ ಸಿಂಹಾರೋಹಣಗೈದು ಶಂಖ-ತೋಮರವನ್ನು ಧರಿಸಿ ತ್ರಿಶೂಲ ಧಾರಿಣಿಯಾಗಿ ಸಂಭ್ರಮದಿ ಮೆರೆಯಲ್ಪಡುತ್ತಿರುವ ಭಾರ್ಗವ ಕ್ಷೇತ್ರಾಧಿಪತಿ ಭಕ್ತ ವತ್ಸಲೆ ಮಂಗಳೂರಿನ ಶ್ರೀ ಮಂಗಳಾದೇವಿ ಅಮ್ಮನಿಗೆ ಪುನಃ ಪ್ರತಿಷ್ಠಾ ವರ್ಧಂತಿಯ ಶುಕ್ರವಾರದ ಮಹಾಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು.
ಮಡಿಕೇರಿ ಮೇ 17 NEWS DESK : ರೋಟರಿ ಮಡಿಕೇರಿ ವತಿಯಿಂದ ಗ್ಲೋಬಲ್ ಪ್ರಾಸ್ಟೇಟ್ ಕ್ಯಾನ್ಸರ್ ಫೌಂಡೇಶನ್ ಸಹಯೋಗದಲ್ಲಿ ಮೇ 19 ರಂದು ಪ್ರಾಸ್ಟೇಟ್ ಮತ್ತು ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಮತ್ತು ತಪಾಸಣಾ ಉಚಿತ ಶಿಬಿರ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ನಗರದ ಅಶ್ವಿನಿ ಆಸ್ಪತ್ರೆಯಲ್ಲಿ ಶಿಬಿರ ನಡೆಯಲಿದೆ. ಹೆಚ್‌ಸಿಜಿ, ಯುರೋ-ಆಂಕೊಲಾಜಿಸ್ಟ್ ಡಾ. ಎಸ್.ಕೆ.ರಘುನಾಥ್, ಯುರೋ-ಆಂಕೊಲಾಜಿಸ್ಟ್ ಗಳಾದ ಡಾ.ದೀಪಕ್, ಡಾ. ಎನ್.ಸುನೀತಾ, ರೆಡಿಯೇಷನ್ ಆಂಕೊಲಾಜಿಸ್ಟ್ ಡಾ. ಸಾಗರಿಕಾ ನಿತ್ಯಾನಂದ್ ಪಾಲ್ಗೊಂಡು ಸೂಕ್ತ ಸಮಾಲೋಚನೆ ನಡೆಸಲಿದ್ದಾರೆ. ಹೊಸ ಪಿಎಸ್‌ಎ ಪರೀಕ್ಷೆಯನ್ನು ಸ್ಥಳದಲ್ಲೇ ಮಾಡಲಾಗುವುದು. ಪ್ರಾಸ್ಟೇಟ್ ತಪಾಸಣೆಗೆ ಹಾಜರಾಗುವ ಸಾರ್ವಜನಿಕರು ತಮ್ಮ ವೈದ್ಯಕೀಯ ದಾಖಲಾತಿ ಹಾಗೂ ಪಿಎಸ್‌ಎ ಅನ್ನು ತರುವಂತೆ ರೋಟರಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ 7026699698 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಮೇ 17 NEWS DESK : ಕೊಡಗು ದಂತ ವೈದ್ಯಕೀಯ ಕಾಲೇಜಿನ 22ನೇ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಮುಖ್ಯ ಅಥಿತಿಗಳಾಗಿ ಪಾಲ್ಗೊಂಡಿದ್ದ ಅಮ್ಮತ್ತಿ ಆರ್ ಐ ಹೆಚ್ ಪಿ ಆಸ್ಪತ್ರೆಯ ಎಂ. ಎಂ. ಟ್ರಸ್ಟಿ ಡಾ. ಚೆಂಗಪ್ಪ ಮಾತನಾಡಿ, ವಿದ್ಯಾರ್ಥಿಗಳ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾಜಕ್ಕೆ ದಂತವೈದ್ಯಕೀಯ ಕಾಲೇಜು ಮತ್ತು ದಂತ ವೈದ್ಯರ ಅವಶ್ಯಕತೆ ಬಗ್ಗೆ ಮಾಹಿತಿ ನೀಡಿದರು. ಭಾರತದಲ್ಲಿ ದಂತವೈದ್ಯಕೀಯ ವೃತ್ತಿ ಆರಂಭದಿಂದ ಇತ್ತಿಚಿಗಿನ ಬೆಳವಣಿಗೆಗಳ ಬಗ್ಗೆ ಹೇಳಿದರು. ಕೊಡಗು ದಂತ ವೈದ್ಯಕೀಯ ಕಾಲೇಜಿನ ಡೀನ್ ಡಾ. ಸುನೀಲ್ ಮುದ್ದಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ.ಪೊನ್ನಪ್ಪ ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಎ.ಸಿ.ಜಿಲನ ಸ್ವಾಗತಿಸಿದರು. ಕಾರ್ಯದರ್ಶಿ ಸೂಸನ್ನ ಪರಕ್ಕಟ್ಟು ವಂದಿಸಿದರು. ಕಾರ್ಯಕ್ರಮದಲ್ಲಿ 2023-2024 ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿದರು. ವಿದ್ಯಾರ್ಥಿ ಹಾಗೂ ಶಿಕ್ಷಕ ವೃಂದದವರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಮನ…
ಮಡಿಕೇರಿ ಮೇ 17 NEWS DESK : ಕರ್ನಾಟಕ ಲೋಕಾಯುಕ್ತದ ಮಡಿಕೇರಿ ಡಿವೈಎಸ್‍ಪಿ ಪವನ್ ಕುಮಾರ್ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ಕುಂದುಕೊರತೆ ಸಭೆಯು ನಡೆಯಿತು. ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲನ್ನು ಲೋಕಾಯುಕ್ತ ಡಿವೈಎಸ್‍ಪಿ ಅವರ ಮುಂದೆ ಮಂಡಿಸಿದರು. ಜಾತಿ, ಆದಾಯ ಸೇರಿದಂತೆ ವಿವಿಧ ಪ್ರಮಾಣ ಪತ್ರ ಪಡೆಯಲು ಹರಸಾಹಸ ಪಡಬೇಕಿದೆ ಎಂದು ಸಾರ್ವಜನಿಕರೊಬ್ಬರು ದೂರಿದರು. ಸಕಾಲದಲ್ಲಿ ಇಷ್ಟು ದಿನದೊಳಗೆ ಪ್ರಮಾಣ ಪತ್ರ ನೀಡಬೇಕು ಎಂಬ ಆದೇಶ ಇದ್ದರೂ ಸಹ, ಸತಾಯಿಸುತ್ತಿದ್ದಾರೆ. ಜಾತಿ, ಆದಾಯ ಮತ್ತಿತರ ಪ್ರಮಾಣ ಪತ್ರ ಪಡೆಯಲು ಅಗತ್ಯ ದಾಖಲಾತಿಯ ಮಾಹಿತಿ ಫಲಕವನ್ನು ಅಳವಡಿಸಿದ್ದಲ್ಲಿ ಒದಗಿಸಲಾಗುವುದು, ಆದರೆ ಸತಾಯಿಸುವುದು ಏಕೆ ಎಂದು ಸಾರ್ವಜನಿಕರೊಬ್ಬರು ಅವಲತ್ತುಕೊಂಡರು. ಈ ಬಗ್ಗೆ ಪ್ರತಿಕ್ರಿಯಿಸಿದ ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್ ಅವರು ಯಾರು ಸತಾಯಿಸುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡಿದ್ದಲ್ಲಿ ಲೋಕಾಯುಕ್ತ ನಿಯಮನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಇದೊಂದು ಗಂಭೀರ ವಿಚಾರವಾಗಿದ್ದು, ಯಾರನ್ನು ಸಹ…
ಸೋಮವಾರಪೇಟೆ ಮೇ 17 NEWS DESK : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೊಂಡಕ್ಕೆ ಉರುಳಿ ಮನೆಯ ಮೇಲೆ ಬಿದ್ದಿರುವ ಘಟನೆ ಹೊಸತೋಟ ಗ್ರಾಮದಲ್ಲಿ ನಡೆದಿದೆ. ಸೋಮವಾರಪೇಟೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಕಾಗಡಿಕಟ್ಟೆಯ ಸೂರ್ಯ ಎಂಬಾತ ಚಾಲಿಸುತ್ತಿದ್ದ ಕಾರು ಹೊಸತೋಟದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಎಡಬದಿಯ ಗುಂಡಿಗೆ ಮಗುಚಿಕೊಂಡಿದೆ. ಪರಿಣಾಮ ಸನಿಹದಲ್ಲಿಯೇ ಇದ್ದ ಖತೀಜ ಎಂಬುವವರ ಮನೆಗೆ ಹಾನಿಯಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ಹೊಸತೋಟದ ತಿರುವಿನಲ್ಲಿ ಆಗಾಗ್ಗೆ ಇಂತಹ ಅವಘಡಗಳು ಸಂಭವಿಸುತ್ತಿದ್ದು, ಲೋಕೋಪಯೋಗಿ ಇಲಾಖೆ ಇತ್ತ ಗಮನ ಹರಿಸಿ ರಸ್ತೆ ಬದಿಗೆ ಕ್ರಾಸ್ ಬ್ಯಾರಿಯರ್ ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಹರದೂರು ಗ್ರಾ.ಪಂ.ಸದಸ್ಯ ಸಲೀಂ ಆಗ್ರಹಿಸಿದ್ದಾರೆ.
ಸೋಮವಾರಪೇಟೆ ಮೇ 17 NEWS DESK : ಪುಷ್ಪಗಿರಿ ಎಫ್‍ಪಿಓ ಮತ್ತು ಭುವನ ಮಂದಾರ ಸಂಸ್ಥೆಯ ಸಹಭಾಗಿತ್ವದಲ್ಲಿ ಮೇ 20ರಂದು “ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳನ್ನು ಪುನರ್ ಪ್ರತಿಷ್ಠಿಸಿ ಮಣ್ಣನ್ನು ಜೀವಂತಗೊಳಿಸುವ ವಿಧಾನ” ಗಳ ಕುರಿತು ಮಾಹಿತಿ ಕಾರ್ಯಾಗಾರ ಸೋಮವಾರಪೇಟೆಯಲ್ಲಿ ನಡೆಯಲಿದೆ. ಪಟ್ಟಣದ ಭಾರತ್ ಪೆಟ್ರೋಲಿಯಂ ಮುಂಭಾಗದ ಸಹಕಾರ ಒಕ್ಕೂಟದ ಸಭಾಂಗಣದಲ್ಲಿ ಬೆಳಿಗ್ಗೆ 10.45ಕ್ಕೆ ನಡೆಯಲಿರುವ ಕಾರ್ಯಾಗಾರದಲ್ಲಿ ರಾಸಾಯನಿಕ ರಹಿತ ವ್ಯವಸಾಯ ಮತ್ತು ಫಲವತ್ತಾದ ಮಣ್ಣನ್ನು ಕಾಪಾಡಿಕೊಳ್ಳುವ ಬಗ್ಗೆ ತಜ್ಞರು ಮಾಹಿತಿ ನೀಡಲಿದ್ದಾರೆ. ಆಸಕ್ತ ರೈತರು ಕಾರ್ಯಾಗಾರದಲ್ಲಿ ಪಾಲ್ಗೊಳ್ಳಬಹುದು ಎಂದು ಭುವನ ಮಂದಾರ ಸಂಸ್ಥೆಯ ಮುಖ್ಯಸ್ಥ ಕಾಲಿಸ್ತ ಡಿಸಿಲ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಮವಾರಪೇಟೆ ಮೇ 17 NEWS DESK : ಕುಸುಬೂರು-ಹಳ್ಳದಿಣ್ಣೆ ಗ್ರಾಮದ ನಿವಾಸಿ ಮುದಾರು (83) ಅನಾರೋಗ್ಯದಿಂದ ನಿಧನರಾದರು. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಗುರುವಾರ ಸ್ವ ಗ್ರಾಮದಲ್ಲಿ ನಡೆಯಿತು.
ಸೋಮವಾರಪೇಟೆ ಮೇ 17 NEWS DESK : ರೋಟರಿ ಸಂಸ್ಥೆಯು ಸ್ಥಳೀಯ ಜನರ ಸಮಸ್ಯೆಗಳ ಪರಿಹಾರಕ್ಕೆ ಶಾಶ್ವತ ಯೋಜನೆಗಳನ್ನು ಹಮ್ಮಿಕೊಂಡಲ್ಲಿ ಮಾತ್ರ ಅವುಗಳ ಪ್ರಯೋಜನ ಜನರಿಗೆ ಸಿಗಲಿದೆ ಎಂದು ರೋಟರಿ ಜಿಲ್ಲಾ ಪ್ರಾಂತಪಾಲ ಹೆಚ್.ಆರ್.ಕೇಶವ್ ಹೇಳಿದರು. ಸೋಮವಾರಪೇಟೆ ರೋಟರಿ ಕ್ಲಬ್ ಆಫ್ ಸೋಮವಾರಪೇಟೆ ಹಿಲ್ಸ್ ವತಿಯಿಂದ ಕರ್ಕಳ್ಳಿ ರೋಟರಿ ಭವನದಲ್ಲಿ ನಡೆದ ಪ್ರಾಂತಪಾಲರ ಭೇಟಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಪಂಚದಲ್ಲಿನ ಸೇವಾ ಸಂಸ್ಥೆಗಳಲ್ಲಿ ಮುಂಚೂಣಿಯಲ್ಲಿರುವ ರೋಟರಿ ವರ್ಷಂಪ್ರತಿ ಸಮಾಜಸೇವಾ ಕಾರ್ಯದಲ್ಲಿ ತೊಡಗಿಕೊಂಡಿದೆ. ರೋಟರಿಗೆ ಕೊಟ್ಟ ಹಣ ನಿಜವಾದ ಬಡವರಿಗೆ ತಲುಪುತ್ತದೆ. ದುಡಿದ ಹಣದಲ್ಲಿ ಒಂದಷ್ಟನ್ನು ದಾನ ಮಾಡಬೇಕು ಎಂದು ಹೇಳಿದರು. ಸಹಾಯಕ ರಾಜ್ಯಪಾಲ ಎಂ.ಡಿ.ಲಿಖಿತ್ ಮಾತನಾಡಿ, ರೋಟರಿ ಸಂಸ್ಥೆಯಿಂದ ಸಮಾಜದಲ್ಲಿ ಮಾಡುತ್ತಿರುವ ಸಾಮಾಜಿಕ ಸೇವಾ ಕಾರ್ಯದ ಪ್ರಯೋಜನಗಳು ಒಂದಿಲ್ಲೊಂದು ರೀತಿಯಲ್ಲಿ ನಮಗೆ ವಾಪಾಸ್ಸು ಸಿಗುತ್ತಿದೆ. ದೀರ್ಘಾವಧಿಯವರೆಗೆ ಜನರ ಸೇವೆಗೆ ದೊರಕುವಂತಹ ಯೋಜನೆಗಳನ್ನು ಮಾಡಬೇಕಿದೆ ಎಂದು ಹೇಳಿದರು. ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷ ವಸಂತ್ ನಂಗಾರು ವಹಿಸಿದ್ದರು. ಈ ಸಂದರ್ಭ ಕಾರ್ಯದರ್ಶಿ…






