ಲೇಖಕ: admin

ಸೋಮವಾರಪೇಟೆ ಮೇ 17 NEWS DESK  : ಪುಷ್ಪಗಿರಿ ಎಫ್‍ಪಿಓ ಮತ್ತು ಭುವನ ಮಂದಾರ ಸಂಸ್ಥೆಯ ಸಹಭಾಗಿತ್ವದಲ್ಲಿ ಮೇ 20ರಂದು “ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳನ್ನು ಪುನರ್ ಪ್ರತಿಷ್ಠಿಸಿ ಮಣ್ಣನ್ನು ಜೀವಂತಗೊಳಿಸುವ ವಿಧಾನ” ಗಳ ಕುರಿತು ಮಾಹಿತಿ ಕಾರ್ಯಾಗಾರ ಸೋಮವಾರಪೇಟೆಯಲ್ಲಿ ನಡೆಯಲಿದೆ. ಪಟ್ಟಣದ ಭಾರತ್ ಪೆಟ್ರೋಲಿಯಂ ಮುಂಭಾಗದ ಸಹಕಾರ ಒಕ್ಕೂಟದ ಸಭಾಂಗಣದಲ್ಲಿ ಬೆಳಿಗ್ಗೆ 10.45ಕ್ಕೆ ನಡೆಯಲಿರುವ ಕಾರ್ಯಾಗಾರದಲ್ಲಿ ರಾಸಾಯನಿಕ ರಹಿತ ವ್ಯವಸಾಯ ಮತ್ತು ಫಲವತ್ತಾದ ಮಣ್ಣನ್ನು ಕಾಪಾಡಿಕೊಳ್ಳುವ ಬಗ್ಗೆ ತಜ್ಞರು ಮಾಹಿತಿ ನೀಡಲಿದ್ದಾರೆ. ಆಸಕ್ತ ರೈತರು ಕಾರ್ಯಾಗಾರದಲ್ಲಿ ಪಾಲ್ಗೊಳ್ಳಬಹುದು ಎಂದು ಭುವನ ಮಂದಾರ ಸಂಸ್ಥೆಯ ಮುಖ್ಯಸ್ಥ ಕಾಲಿಸ್ತ ಡಿಸಿಲ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸೋಮವಾರಪೇಟೆ ಮೇ 17 NEWS DESK : ಕುಸುಬೂರು-ಹಳ್ಳದಿಣ್ಣೆ ಗ್ರಾಮದ ನಿವಾಸಿ ಮುದಾರು (83) ಅನಾರೋಗ್ಯದಿಂದ ನಿಧನರಾದರು. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಗುರುವಾರ ಸ್ವ ಗ್ರಾಮದಲ್ಲಿ ನಡೆಯಿತು.

Read More

ಸೋಮವಾರಪೇಟೆ ಮೇ 17 NEWS DESK : ರೋಟರಿ ಸಂಸ್ಥೆಯು ಸ್ಥಳೀಯ ಜನರ ಸಮಸ್ಯೆಗಳ ಪರಿಹಾರಕ್ಕೆ ಶಾಶ್ವತ ಯೋಜನೆಗಳನ್ನು ಹಮ್ಮಿಕೊಂಡಲ್ಲಿ ಮಾತ್ರ ಅವುಗಳ ಪ್ರಯೋಜನ ಜನರಿಗೆ ಸಿಗಲಿದೆ ಎಂದು ರೋಟರಿ ಜಿಲ್ಲಾ ಪ್ರಾಂತಪಾಲ ಹೆಚ್.ಆರ್.ಕೇಶವ್ ಹೇಳಿದರು. ಸೋಮವಾರಪೇಟೆ ರೋಟರಿ ಕ್ಲಬ್ ಆಫ್ ಸೋಮವಾರಪೇಟೆ ಹಿಲ್ಸ್ ವತಿಯಿಂದ ಕರ್ಕಳ್ಳಿ ರೋಟರಿ ಭವನದಲ್ಲಿ ನಡೆದ ಪ್ರಾಂತಪಾಲರ ಭೇಟಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಪಂಚದಲ್ಲಿನ ಸೇವಾ ಸಂಸ್ಥೆಗಳಲ್ಲಿ ಮುಂಚೂಣಿಯಲ್ಲಿರುವ ರೋಟರಿ ವರ್ಷಂಪ್ರತಿ ಸಮಾಜಸೇವಾ ಕಾರ್ಯದಲ್ಲಿ ತೊಡಗಿಕೊಂಡಿದೆ. ರೋಟರಿಗೆ ಕೊಟ್ಟ ಹಣ ನಿಜವಾದ ಬಡವರಿಗೆ ತಲುಪುತ್ತದೆ. ದುಡಿದ ಹಣದಲ್ಲಿ ಒಂದಷ್ಟನ್ನು ದಾನ ಮಾಡಬೇಕು ಎಂದು ಹೇಳಿದರು. ಸಹಾಯಕ ರಾಜ್ಯಪಾಲ ಎಂ.ಡಿ.ಲಿಖಿತ್ ಮಾತನಾಡಿ, ರೋಟರಿ ಸಂಸ್ಥೆಯಿಂದ ಸಮಾಜದಲ್ಲಿ ಮಾಡುತ್ತಿರುವ ಸಾಮಾಜಿಕ ಸೇವಾ ಕಾರ್ಯದ ಪ್ರಯೋಜನಗಳು ಒಂದಿಲ್ಲೊಂದು ರೀತಿಯಲ್ಲಿ ನಮಗೆ ವಾಪಾಸ್ಸು ಸಿಗುತ್ತಿದೆ. ದೀರ್ಘಾವಧಿಯವರೆಗೆ ಜನರ ಸೇವೆಗೆ ದೊರಕುವಂತಹ ಯೋಜನೆಗಳನ್ನು ಮಾಡಬೇಕಿದೆ ಎಂದು ಹೇಳಿದರು. ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷ ವಸಂತ್ ನಂಗಾರು ವಹಿಸಿದ್ದರು. ಈ ಸಂದರ್ಭ ಕಾರ್ಯದರ್ಶಿ…

Read More

ಮಡಿಕೇರಿ ಮೇ 17 NEWS DESK : ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕೊಡವ ಕೇರಿಯ 17ನೇ ವಾರ್ಷಿಕ ಮಹಾಸಭೆಯು ನಗರದ ಬಾಲಭವನದಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೇರಿಯ ಸದಸ್ಯರು ಹಾಗೂ ABBOTT ಲ್ಯಾಬರೇಟರೀಸ್ (ಸೇಲ್ಸ್)ನ ನಿವೃತ್ತ ಪ್ರಧಾನ ವ್ಯವಸ್ಥಾಪಕ ಕೀಪಾಡಂಡ ಬಿ.ಮೊಣ್ಣಪ್ಪ, ಇಂದಿನ ಯುವ ಪೀಳಿಗೆಗೆ ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒತ್ತು ನೀಡಬೇಕು. ಆ ಮೂಲಕ ಶೈಕ್ಷಣಿಕ ಪ್ರಗತಿಯೊಂದಿಗೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕೇರಿಯ ಅಧ್ಯಕ್ಷ ಚೋಳಪಂಡ ಎಂ.ವಿಜಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷರಾದ ಪೂಳಂಡ ಮಧು ಬೋಪಣ್ಣ, ನಿರ್ದೇಶಕರಾದ ಚಾಮೇರ ಚೀಯಣ್ಣ, ಕೊಚ್ಚೆರ ಕವನ್, ಪುದಿಯತಂಡ ಅಪ್ಪಯ್ಯ, ಮತ್ರಂಡ ಅಕ್ಷಿತ ಪುನೀತ್ ಪಾಲ್ಗೊಂಡಿದ್ದರು. ಚೊಟ್ಟಂಡ ದೇಚಮ್ಮ ಪ್ರದೀಪ್ ಪ್ರಾರ್ಥಿಸಿದರು. ಬೊಳ್ಳಜಿರ ಯಮುನಾ ಅಯ್ಯಪ್ಪ ಅತಿಥಿ ಪರಿಚಯ ಮತ್ತು ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ಮಂದನೆರವಂಡ ಸಂಜು ಅಚ್ಚಯ್ಯ ಕಳೆದ ವರ್ಷದ ವರದಿ ಮತ್ತು ಲೆಕ್ಕ ಪತ್ರವನ್ನು ಮಂಡಿಸಿದರು. ಚೊಟ್ಟಂಡ ದಿವ್ಯಾ ಪ್ರದೀಪ್ ಸ್ವಾಗತಿಸಿ,…

Read More

ಮಡಿಕೇರಿ ಮೇ 17 NEWS DESK : ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಅತ್ಯುತ್ತಮ ನಿರ್ದೇಶಕಿ ಪ್ರಶಸ್ತಿ ಗಳಿಸಿ ಹೆಸರು ಮಾಡಿರುವ ಕೊಡಗಿನ ನಿರ್ದೇಶಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಅವರ ನಿರ್ದೇಶನದಲ್ಲಿ ಮತ್ತೊಂದು ಕನ್ನಡ ಚಿತ್ರ ತೆರೆಗೆ ಬರಲಿದೆ. ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ನಿರ್ಮಾಣ ಮತ್ತು ನಿರ್ದೇಶನದ ಬಹು ನಿರೀಕ್ಷಿತ “ಕೌಮುದಿ” ಕನ್ನಡ ಚಲನಚಿತ್ರಕ್ಕೆ ಕನಕಪುರದ ಶ್ರೀ ಬಿಸಿಲು ಮಾರಮ್ಮ ದೇವಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮುಹೂರ್ತ ನೆರವೇರಿಸಲಾಯಿತು. ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರು ಈ, ಸಹ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಕಲನ ನಾಗೇಶ್ ಎನ್, ಛಾಯಾಗ್ರಹಣ ಪಿವಿಆರ್ ಸ್ವಾಮಿ ಗೂಗಾರೆದೊಡ್ಡಿ, ಚಿತ್ರಕಥೆ ನಾಗೇಶ್ ಎನ್, ಎಸ್.ಹರೀಶ್ ಹಾಗೂ ಶ್ರೀ ಸುರೇಶ್ ಸಂಗೀತ ನೀಡಿದ್ದಾರೆ. ತಾರಾಂಗಣದಲ್ಲಿ ಪ್ರಶಸ್ತಿ ವಿಜೇತ ನಟಿ, ಬಿಗ್ ಬಾಸ್ ಖ್ಯಾತಿಯ ಅಕ್ಷತಾ ಪಾಂಡವಪುರ, ನೀನಾಸಂ ನಟರಾಜ್, ಶ್ರೀಧರ್, ಪಿ.ಬಿ.ರಾಜು ನಾಯಕ, ರೋಹಿಣಿ, ಕುಮಾರಿ ಅಂಕಿತಾ, ಕುಮಾರಿ ದೀಪಿಕಾ,…

Read More

ವಿರಾಜಪೇಟೆ ಮೇ 17 NEWS DESK : ಬ್ರಹ್ಮಲೀನರಾದ ಶ್ರೀ ವಿವೇಕಾನಂದ ಶರಣ ಸ್ವಾಮೀಜಿ ಅವರ 16ನೇ ದಿನದ ಶೋಡಶಿ ಪೂಜೆಯನ್ನು ಸಾಧು-ಸಂತರು ಹಾಗೂ ಭಕ್ತರ ಸಮ್ಮುಖದಲ್ಲಿ ನೆರವೇರಿಸಲಾಯಿತು. ವಿರಾಜಪೇಟೆಯ ಅಪ್ಪಯ್ಯಸ್ವಾಮಿ ರಸ್ತೆಯ ಕಾವೇರಿ ಆಶ್ರಮದಲ್ಲಿ ನಡೆದ ಪೂಜಾ ಕಾರ್ಯದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಶ್ರೀ ಪುರುಷೋತ್ತಮನಂದ ನಾಥ ಸ್ವಾಮೀಜಿ, ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ ಪರ ಹಿತಾನಂದ ಸ್ವಾಮೀಜಿ, ಓಂಕಾರ ಆಶ್ರಮದ ಪೀಠಾಧಿಪತಿಗಳು, ಶ್ರೀ ಆಚಾರ್ಯ ಮಹಾ ಮಂಡಲೇಶ್ವರ, ಡಾ.ಮಧುಸೂದಾನಂದಪುರಿ ಸ್ವಾಮೀಜಿ, ಬೆಂಗಳೂರಿನ ಶ್ರೀ ಕೈಲಾಸ ಆಶ್ರಮದ ಶ್ರೀ ಬುದ್ಧಾನಂದಪುರಿ ಸ್ವಾಮೀಜಿ, ಊಟಿ ಕೈಲಾಸ ಆಶ್ರಮದ ಸುಗುಣಾನಂದ ಪುರಿ ಸ್ವಾಮೀಜಿ, ಬೆಂಗಳೂರಿನ ವಿಶ್ವ ಒಕ್ಕಲಿಗರ ಮಠದ ಶ್ರೀ ರಮಣನಂದನಾಥ ಸ್ವಾಮೀಜಿ, ಬೆಂಗಳೂರಿನ ರಾಮಕೃಷ್ಣ ಕುಟೀರ ಆಶ್ರಮದ ಶಾಂತನಂದ ಸ್ವಾಮೀಜಿ ಮತ್ತು ಭಕ್ತರು ಭಾಗವಹಿಸಿದ್ದರು. ಇದೇ ವೇಳೆ ಗುರುಗಳ ಸ್ಮರಣೆ ಮೂಲಕ 16ನೇ ದಿನದ ಮಹೇಶ್ವರಿ ಪೂಜೆ ನೆರವೇರಿಸಲಾಯಿತು. 

Read More

ಕುಶಾಲನಗರ ಮೇ 17 NEWS DESK : ಕುಶಾಲನಗರ ಬೈಚನಹಳ್ಳಿಯ ಶ್ರೀ ವನದುರ್ಗ ಆದಿಶಕ್ತಿ ಅಂತರಘಟ್ಟ ಅಮ್ಮನವರ 9ನೇ ವರ್ಷದ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಆದಿಶಕ್ತಿ ಅಂತರ್ಗಟ್ಟೆ ಅಮ್ಮ ದೇವಸ್ಥಾನ ಸೇವಾ ಸಮಿತಿ ಆಶ್ರಯದಲ್ಲಿ ದೇವಾಲಯದಲ್ಲಿ ಮುಂಜಾನೆಯಿಂದಲೆ ಗಣಪತಿ ಪೂಜೆ, ಗಣಪತಿ ಹೋಮ, ದುರ್ಗಾ ಹೋಮ, ನವಕ ಪೂಜೆ ನಂತರ ಶ್ರೀದೇವಿಗೆ ಪಂಚಾಮೃತ ಅಭಿಷೇಕ ಮತ್ತಿತರ ಪೂಜಾ ಕಾರ್ಯಕ್ರಮಗಳು ನೆರವೇರಿತು. ಅರ್ಚಕರಾದ ಕೃಷ್ಣಮೂರ್ತಿ ಭಟ್, ಉಮೇಶ್ ಭಟ್, ಗಿರೀಶ್ ಭಟ್ ಮತ್ತು ದೇವಾಲಯದ ಅರ್ಚಕರಾದ ಬಿ.ಸಿ.ಸ್ವಾಮಿ ಅವರುಗಳ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ಜರುಗಿದವು. ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ದೇವಾಲಯಕ್ಕೆ ಫಲ ತಾಂಬೂಲಗಳೊಂದಿಗೆ ಆಗಮಿಸಿ ಸಾಮೂಹಿಕ ಪೂಜೆ ಸಲ್ಲಿಸಿದರು. ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆಯಿತು. ದೇವಾಲಯ ಸಮಿತಿಯ ಗೌರವ ಅಧ್ಯಕ್ಷ ಬಿ.ಸಿ.ಗೋವಿಂದರಾಜ್, ಅಧ್ಯಕ್ಷ ವಿ.ಗಿರೀಶ್, ಉಪಾಧ್ಯಕ್ಷರಾದ ಬಿ.ಎಸ್.ಗಣೇಶ್, ಕಾರ್ಯದರ್ಶಿ ಬಿ.ವಿ.ಜಗದೀಶ್ , ಸಹಕಾರ್ಯದರ್ಶಿ ಬಿ.ಎಸ್.ರವಿಕುಮಾರ್, ಖಜಾಂಚಿ ವಿ.ಡಿ.ಜಗದೀಶ್ ಮತ್ತಿತರರು ಇದ್ದರು.

Read More

ಮಡಿಕೇರಿ ಮೇ 17 NEWS DESK : ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಮೇ 24 ರಿಂದ 26ರ ವರೆಗೆ ‘ಮಾವು ಮತ್ತು ಹಲಸಿನ ಮೇಳ’ ನಡೆಯಲಿದೆ ಎಂದು ಕೊಡಗು ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕೊಡಗು ಜಿಲ್ಲಾ ಹಾಪ್ ಕಾಮ್ಸ್‍ನ ಮುಖ್ಯ ಕಚೇರಿಯ ಆವರಣದಲ್ಲಿ ಅತ್ಯಪರೂಪದ ವಿವಿಧ ಬಗೆಯ ಮಾವು ಮತ್ತು ಹಲಸಿನ ಹಣ್ಣಿನ ಮೇಳ ನಡೆಯಲಿದ್ದು, ಬೆಳೆಗಾರರಿಗೆ ತಾವು ಬೆಳೆದ ಹಣ್ಣುಗಳ ಮಾರಾಟಕ್ಕೆ ಅನುವು ಮಾಡಿಕೊಡುವ ಮತ್ತು ವಿವಿಧ ತಳಿಯ, ವಿಭಿನ್ನ ರುಚಿಯ ಮಾವು ಹಲಸನ್ನು ಗ್ರಾಹಕರಿಗೆ ಪರಿಚಯಿಸುವ ಉದ್ದೇಶದಿಂದ ಮೇಳವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಮೇ 24 ರಂದು ಬೆಳಿಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ್ ಮೇಳವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ಜಿ.ಪಂ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ತೋಟಗಾರಿಕೆ…

Read More

ಮಡಿಕೇರಿ ಮೇ 17 NEWS DESK : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 20.15 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 150.74 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 112.72 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 39.50 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 206.31 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 160.65 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 92.45 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 71.01 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ…

Read More

ಮಡಿಕೇರಿ ಮೇ 17 NEWS DESK : ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಅರಣ್ಯ ಇಲಾಖೆ ನಡೆಸುತ್ತಿರುವ ಮರಗಳ ಗಣತಿ ಕಾರ್ಯವನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಅರಣ್ಯ ಭವನದ ಎದುರು ಅರಣ್ಯ ಇಲಾಖೆ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಮರ ಗಣತಿ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು. ರಾಜ್ಯ ಕಾಂಗ್ರೆಸ್ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಮತ್ತು ವಿನಾಕಾರಣ ಬೆಳೆಗಾರರಿಗೆ ಕಿರುಕುಳ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಮರಗಳ ಗಣತಿ ಕಾರ್ಯವನ್ನು ತಕ್ಷಣ ಸ್ಥಗಿತಗೊಳಿಸದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರರಾದ ಸುಬ್ರಮಣ್ಯ ಉಪಾಧ್ಯಾಯ, ಬಿ.ಕೆ.ಅರುಣ್…

Read More