ಲೇಖಕ: admin

ಮಡಿಕೇರಿ ಮೇ 17 NEWS DESK  : ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್ ನಮ್ಮೆ (ಬೇಡು ಹಬ್ಬ) ಮೇ 18 ಹಾಗೂ 19ರಂದು ನಡೆಯಲಿದೆ ಎಂದು ತಕ್ಕಮುಖ್ಯಸ್ಥರು ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ  ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಹಬ್ಬ ಸಂಭ್ರಮದಿಂದ ನಡೆಯಲಿದ್ದು, ಮೇ 11ಕ್ಕೆ ದೇವ ಕಟ್ಟ್ ಬೀಳುವ ಮೂಲಕ ವಿವಿಧ ಕಟ್ಟುಪಾಡುಗಳು ಆಚರಣೆಯಲ್ಲಿದೆ. ಮೇ 18 ರಂದು  ಜೋಡುಬೀಟಿಯಲ್ಲಿರುವ ಗುಂಡಿಯತ್ ಅಯ್ಯಪ್ಪ ದೇವರ ಅವುಲ್ ಎಂಬ ವಿಶೇಷ ಆಚರಣೆ ನಡೆಯಲಿದೆ. ಇಲ್ಲಿ ಕೊಡವ ಜನಾಂಗದವರೇ ಪೂಜಾರಿಗಳಾಗಿದ್ದಾರೆ (ಚಮ್ಮಟೀರ ಹಾಗೂ ಮೂಕಳೇರ). ಮಧ್ಯಾಹ್ನದ ನಂತರ ಊರುತಕ್ಕರಾದ ಚಮ್ಮಟೀರ ಕುಟುಂಬದ ಬಲ್ಯಮನೆಯಿಂದ ಪೊಲವಪ್ಪ ಹೊರಡುವ ಮೂಲಕ ಎರಡು ದಿನಗಳ ಹಬ್ಬಕ್ಕೆ ಚಾಲನೆ ದೊರೆಯಲಿದೆ. ಚಮ್ಮಟೀರ ಕುಟುಂಬದ ಬಲ್ಯಮನೆಯಿಂದ ಹೊರಟ ಪೊಲವಪ್ಪ ತೆರೆ…

Read More

ವಿರಾಜಪೇಟೆ ಮೇ 17 NEWS DESK : ವನದೇವರುಗಳ ಆರಾಧನೆ ಮತ್ತು ಕುಲ ಕುಟುಬಗಳ ಆರಾಧನಾ ಪದ್ಧತಿಗಳು ನೂರಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಬಡಕಡ ಕುಟುಂಬದ ತೆರೆ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾ.ಪಂ ವ್ಯಾಪ್ತಿಯ ಕಲ್ಲುಬಾಣೆಯ ಬಡಕಡ ಕುಟುಂಬದ ಐನ್‍ಮನೆಯಲ್ಲಿ ಪಾಷಾಣ ಮೂರ್ತಿ, ಪಂಜುರ್ಲಿ, ಗುಳಿಗ, ಕೊರತಿ ದೈವಗಳ ತೆರೆ ಮಹೋತ್ಸವವು ನೆರವೇರಿತು. ಎರಡು ದಿನಗಳ ಕಾಲ ನಡೆದ ವಿವಿಧ ಧಾರ್ಮಿಕ ಕಾರ್ಯದಲ್ಲಿ ಕುಟುಂಬದ ಮುಖ್ಯಸ್ಥರು, ಬಂಧುಗಳು, ನೆರೆಯ ಗ್ರಾಮದ ಗ್ರಾಮಸ್ಥರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಆಗಮಿಕ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ, ಪ್ರಸಾದ ವಿತರಣೆ ನಡೆಯಿತು.

Read More

ಪಾವಗಡ ಮೇ 17 NEWS DESK : ರಾಜ್ಯವ್ಯಾಪಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಸಿಡಿಲಬ್ಬರಕ್ಕೆ ಜನ ಬೆಚ್ಚಿ ಬೀಳುತ್ತಿದ್ದಾರೆ. ಗುರುವಾರ ರಾತ್ರಿ ಸಿಡಿಲು ಬಡಿದು ದನದ ಕೊಟ್ಟಿಗೆ ಹೊತ್ತಿ ಉರಿದು ಹಸುವೊಂದು ಸಜೀವ ದಹನವಾದ ಘಟನೆ ಪಾವಗಡ ತಾಲ್ಲೂಕಿನ ವೈ.ಎನ್ ಹೊಸಕೋಟೆ ಹೋಬಳಿಯ ರಂಗಸಮುದ್ರ ಗ್ರಾಮದಲ್ಲಿ ನಡೆದಿದೆ. ಸಿಡಿಲಿನಿಂದ ಅಗ್ನಿ ತಕ್ಷಣ ವ್ಯಾಪಿಸಿ ಕರಿಯಪ್ಪ ಎಂಬುವವರಿಗೆ ಸೇರಿದ ಕೊಟ್ಟಿಗೆ ಸುಟ್ಟು ಭಸ್ಮವಾಗಿದೆ. ಒಂದು ಹಸು ಸಜೀವ ದಹನವಾದರೆ ಉಳಿದ ಮೂರು ಹಸುಗಳಿಗೆ ಗಂಭೀರ ಗಾಯಗಳಾಗಿವೆ. ಹಸುಗಳನ್ನು ರಕ್ಷಿಸಲು ಹೋದ ಕರಿಯಪ್ಪ ಹಾಗೂ ಅವರ ಮೊಮ್ಮಗ ಮಹಾಲಿಂಗನಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More

ಮಡಿಕೇರಿ ಮೇ 17 NEWS DESK : ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹಿರಿಯ ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ ಅವರನ್ನು ಕುಶಾಲನಗರದ ನಿವಾಸದಲ್ಲಿ ಭೇಟಿಯಾದರು. ಯೋಗಕ್ಷೇಮ ವಿಚಾರಿಸಿದ ಸಚಿವರು ಹಳೆಯ ನೆನಪುಗಳನ್ನು ಮೆಲುಕು ಹಾಕಿ, ಆರೋಗ್ಯ ಕಾಪಾಡಿಕೊಳ್ಳುವಂತೆ ಶುಭ ಹಾರೈಸಿ ಮರಳಿದರು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಕಾಂಗ್ರೆಸ್ ಯುವ ಮುಖಂಡ ನಂದಿನೆರವಂಡ ಮಧು ಮತ್ತಿತರ ಪ್ರಮುಖರು ಹಾಜರಿದ್ದರು.

Read More

ಮಡಿಕೇರಿ ಮೇ 16 NEWS DESK : ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಆಡಿಟೋರಿಯಂನಲ್ಲಿ ನಡೆದ ವರ್ಲ್ಡ್ ರೆಕಾರ್ಡ್ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವಿದ್ಯಾರ್ಥಿಗಳು ಕೊಡವ ನೃತ್ಯ ಮಾಡುವುದರ ಮೂಲಕ ವಿಶ್ವ ದಾಖಲೆ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಚೈತನ್ಯ, ಲಾವಣ್ಯ, ಲಕ್ಷ, ತೇಜಸ್ವಿನಿ, ಚೈತ್ರ, ಅಪೇಕ್ಷಿತ,  ಅನು ಶ್ರೀ, ಕಾವ್ಯ ಶ್ರೀ, ಶ್ರೇಯಾ ಸೋಮಣ್ಣ, ಸಾನ್ವಿ ಹಾಗೂ ನೃತ್ಯ ಶಾಲೆಯ ಸಂಸ್ಥಾಪಕರಾದ ವಿದುಷಿ ಪ್ರೇಮಾಂಜಲಿ ಆಚಾರ್ಯ  ಭಾಗವಹಿಸಿದ್ದರು.

Read More

ಹುಣುಸೂರು ಮೇ 16 NEWS DESK : ಎರಡು ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹುಣುಸೂರು ತಾಲ್ಲೂಕಿನ ಹಿರಿಕ್ಯಾತನಹಳ್ಳಿ ರಸ್ತೆಯಲ್ಲಿ ನಡೆದಿದೆ. ಮರೂರು ಕಾವಲ್ ಗ್ರಾಮದ ನಿವಾಸಿ ಸಾಗರ್(35) ಮೃತ ದುರ್ದೈವಿ. ಸ್ನೇಹಿತ ಹರೀಶ್‌ರೊಂದಿಗೆ ಬೈಕ್ ನಲ್ಲಿ ಕೆ.ಆರ್.ನಗರದ ಹೆಬ್ಬಾಳು ಗ್ರಾಮದಿಂದ ಸ್ವಗ್ರಾಮ ಮರೂರು ಕಾವಲ್‌ಗೆ ಹಿಂದಿರುಗುತ್ತಿದ್ದ ವೇಳೆ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತೀವ್ರಗಾಯಗೊಂಡ ಸಾಗರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಎರಡೂ ಬೈಕ್ ಗಳ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಡಿಕೇರಿ ಮೇ 16 NEWS DESK : ರಾಷ್ಟ್ರೀಯ ಡೆಂಗ್ಯು ಕುರಿತು ಜಾಗೃತಿ ದಿನಾಚರಣೆ ಮತ್ತು ನಿಯಂತ್ರಣ ಸಂಬಂಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಗುರುವಾರ ಮಾನವ ಸರಪಳಿ ಕಾರ್ಯಕ್ರಮ ಜರುಗಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸತೀಶ್ ಕುಮಾರ್, ಡಾ.ಶ್ರೀನಿವಾಸ ಬಿ ಎಲ್ ಜಿಲ್ಲಾ ಸರ್ವೇಕ್ಷಣಾಧಿಕಾರಿ ,(ಸಮಗ್ರ ರೋಗಗಳ ಕಣ್ಗಾವಲು ಮತ್ತು ನಿಯಂತ್ರಣ ಘಟಕ,) ಡಾ.ಮಧುಸೂದನ್ ,ಜಿಲ್ಲಾ ಆರ್ ಸಿ ಎಚ್ ಅಧಿಕಾರಿ,ಡಾ.ಚೇತನ್ ಮಡಿಕೇರಿ ತಾಲ್ಲೂಕು ಅಧಿಕಾರಿ ಮತ್ತು ಇತರರು ಪಾಲ್ಗೊಂಡಿದ್ದರು.

Read More

ಗುಂಡ್ಲುಪೇಟೆ ಮೇ 16 NEWS DESK : ಸುಮಾರು 4 ವರ್ಷದ ಹುಲಿಯ ಮೃತ ದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗದಲ್ಲಿ ಹುಲಿ ಮೃತದೇಹ ಪತ್ತೆಯಾಗಿದ್ದು, ಲಿಂಗ ಗುರುತಿಸಲು ಸಾಧ್ಯವಾಗಿಲ್ಲ. ವನ್ಯಜೀವಿಯ ಜೊತೆಗಿನ ಕಾದಾಟದಿಂದ ಹುಲಿ ಮೃತಪಟ್ಟಿರುವ ಸಂಶಯವಿದ್ದು, ಸುಮಾರು 12ರಿಂದ 15 ದಿನಗಳಾಗಿರಬಹುದೆಂದು ಅರಣ್ಯ ಇಲಾಖಾ ಪಶು ವೈದ್ಯಾಧಿಕಾರಿ ಡಾ.ವಾಸಿಂ ಮಿರ್ಜಾ ತಿಳಿಸಿದ್ದಾರೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ, ಎನ್.ಬೇಗೂರು ವಲಯ ವಲಯ ಅರಣ್ಯಾಧಿಕಾರಿ ಮಂಜುನಾಥ ಡಿ ಬಾಗೇವಾಡಿ, ಗುಂಡ್ರೆ ವಲಯದ ವಲಯ ಅರಣ್ಯಾಧಿಕಾರಿ ಅಮೃತೇಶ್ ಬಿ.ಬಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಸೋಮವಾರಪೇಟೆ ಮೇ 16 NEWS DESK : ಸೋಮವಾರಪೇಟೆ ತಾಲ್ಲೂಕಿನ ಕುಂಬಾರಗಡಿಗೆ ಗ್ರಾಮದಲ್ಲಿ ನಡೆದ ಅಪ್ರಾಪ್ತೆ ಮೀನಾ (16) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮೃತೆಯ ಕುಟಂಬದವರನ್ನು ಗುರುವಾರ ಭೇಟಿ ಮಾಡಿ ಸಾಂತ್ವನ ಹೇಳಿದರು. ಪೊಲೀಸರು ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ, ಹತ್ಯೆ ಆರೋಪಿ ಪ್ರಕಾಶನಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಎಲ್ಲಾ ರೀತಿಯ ಕ್ರಮ ತೆಗದುಕೊಳ್ಳಲಿದೆ ಎಂದು  ಸುದ್ದಿಗಾರರಿಗೆ ತಿಳಿಸಿದರು. ಸರ್ಕಾರದಿಂದ ವಿಶೇಷ ಅಭಿಯೋಜಕರನ್ನು ನೇಮಿಸಿ, ವಿಶೇಷ ನ್ಯಾಯಾಲಯದಲ್ಲಿ ತ್ವರಿತ ವಿಚಾರಣೆ ನಡೆಸಲಾಗುವುದು ಎಂದು ಹೇಳಿದರು. ಇಂತಹ ಘೋರ ಕೃತ್ಯ ನಡೆಸುವವರಿಗೆ ಕಠಿಣ ಶಿಕ್ಷೆಯಾಗಲೇಬೇಕು. ಬಡ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದರು. ಪ್ಲಾಸ್ಟಿಕ್ ಹೊದಿಕೆಯ ಗುಡಿಸಿನ ಒಳಗೆ ಮೃತಳ ತಂದೆ, ತಾಯಿ, ಸಹೋದರ, ಸಹೋದರಿಯೊಂದಿಗೆ ಮಾತಾನಾಡಿದ ಗೃಹಸಚಿವರು ಸಂಕಷ್ಟವನ್ನು ಕೇಳಿ ಮರುಗಿದರು. ವೈಯುಕ್ತಿಕವಾಗಿ ಧನ ಸಹಾಯ ಮಾಡಿದರು. ಚುನಾವಣಾ ನೀತಿ ಸಂಹಿತೆಯಿರುವ ಕಾರಣ ಸಧ್ಯಕ್ಕೆ ಏನನ್ನು ಹೇಳಲು ಸಾಧ್ಯವಿಲ್ಲ. ಚುನಾವಣೆ ಮುಗಿದ ನಂತರ…

Read More

ಸುಂಟಿಕೊಪ್ಪ ಮೇ 16 NEWS DESK : ಸ್ಯಾಂಡಲ್ ತೋಟದ ನಿವಾಸಿ ಬಾಲಕೃಷ್ಣ (ಮೆಕಾನಿಕ್ ಬಾಲೇಟ) (62) ಎಂಬವರು ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಸುಂಟಿಕೊಪ್ಪದ ಹಿಂದೂ ರುದ್ರಭೂಮಿಯಲ್ಲಿ ನೇರವೇರಿತು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರಿಗೆ ಸುಂಟಿಕೊಪ್ಪ ವರ್ಕ್‍ಶಾಫ್ ಮಾಲೀಕರ ಸಂಘದ ಅಧ್ಯಕ್ಷ ಹಾಗೂ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಸಂತಾಪ ಸೂಚಿಸಿದ್ದಾರೆ.

Read More