ಮಡಿಕೇರಿ ಜೂ.24 NEWS DESK : ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿ, ಬೆದರಿಸಿ, ಹಿಟ್ಲರ್ ಸಂಸ್ಕೃತಿ ಅನುಸರಿಸಿ ಬಿಜೆಪಿಯನ್ನು ಬಗ್ಗು ಬಡಿಯುವುದು ತಿರುಕನ ಕನಸು. ಕೊಡಗಿನಲ್ಲಿ ಹಿಟ್ಲರ್ ಸಂಸ್ಕೃತಿ ನಡೆಯಲ್ಲ ಎಂದು ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾ ಬಿಜೆಪಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷವಾಗಿ ಆಡಳಿತ ಪಕ್ಷದ ಜನವಿರೋಧಿ ಧೋರಣೆಗಳನ್ನು ವಿರೋಧಿಸುವುದು ಕರ್ತವ್ಯವಾಗಿದೆ. ಅದರಂತೆ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ವೈಜ್ಞಾನಿಕವಾಗಿ ಏರಿಕೆ ಮಾಡಿದ ಕಾರಣಕ್ಕಾಗಿ ಬಿಜೆಪಿ ವಿರಾಜಪೇಟೆಯಲ್ಲಿ ಪ್ರತಿಭಟನೆ ಮಾಡಿದೆ. ಇದನ್ನೇ ನೆಪ ಮಾಡಿಕೊಂಡು ಪ್ರತಿಭಟನೆ ಮಾಡಿದವರ ವಿರುದ್ಧವೇ ಪ್ರಕರಣ ದಾಖಲಿಸುವುದು ಖಂಡನೀಯವೆಂದರು. ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಜಾರಿಗೆ ತಂದ ಕಾಂಗ್ರೆಸ್‌ಗೆ ಪ್ರಜಾಪ್ರಭುತ್ವ ವ್ಯವಸ್ಥೆ ಎಂದರೆ ಏನೆಂದೇ ತಿಳಿದಿಲ್ಲ. ಸರ್ವಾಧಿಕಾರಿ ಧೋರಣೆ ಅನುಸರಿಸಿದವರ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಚರಿತ್ರೆ ಹೇಳುತ್ತದೆ. ಕೊಡಗು ಜಿಲ್ಲೆಯ ಜನ ಬುದ್ಧಿವಂತರಾಗಿದ್ದು, ಈಗಾಗಲೇ ಲೋಕಸಭಾ…
ಲೇಖಕ: admin
ಮಡಿಕೇರಿ ಜೂ.24 NEWS DESK : ಜಿಲ್ಲೆಯ ಇಬ್ಬರು ಶಾಸಕರು ಕೇವಲ ಒಂದು ವರ್ಷದಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ 200 ಕೋಟಿ ರೂ.ಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಬಿಜೆಪಿಯ ‘ಅಭಿವೃದ್ಧಿ ಶೂನ್ಯ’ ಟೀಕೆ ಅರ್ಥಹೀನವೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪ್ರತಿಭಟನೆಯ ಸಂದರ್ಭ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿರುವುದು ಬೇಸರದ ವಿಚಾರ. ಆರ್ಥಿಕ ಕ್ರೋಢೀಕರಣಕ್ಕೆ ಯಾವುದೇ ಸರ್ಕಾರಗಳು ಅಧಿಕಾರಕ್ಕೆ ಬಂದಾಗ ದರ ಹೆಚ್ಚಳ ಮಾಡುವುದು ಸರ್ವೇ ಸಾಮಾನ್ಯವೆಂದು ಅಭಿಪ್ರಾಯಪಟ್ಟರು. ಚುನಾವಣೆ ಸಮೀಪಿಸುತ್ತಿರುವ ಹಂತಗಳಲ್ಲಿಯೂ ಇಂಧನ ದರ ಹೆಚ್ಚಳ ನಡೆದಿದೆ. ಕೇಂದ್ರ ಸರ್ಕಾರ ಸುಮಾರು 70 ರೂ. ಇದ್ದ ಇಂಧನ ದರ 100 ರೂ.ಗಳ ಗಡಿ ದಾಟಿಸಿದ ಹಂತದಲ್ಲಿಯೂ ಕಾಂಗ್ರೆಸ್ ಪಕ್ಷ ಪ್ರತಿಕೃತಿ ದಹಿಸುವಂತಹ ಕಾರ್ಯಕ್ಕೆ ಮುಂದಾಗಿಲ್ಲವೆAದು ಸ್ಪಷ್ಟಪಡಿಸಿದರು. ಜಿಲ್ಲೆಯ ನೂತನ ಶಾಸಕರಿಂದ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು,…
ಮಡಿಕೇರಿ ಜೂ.24 NEWS DESK : ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮಾಫಿಯಾದಿಂದ ಕೊಡವ ಲ್ಯಾಂಡ್ ನ್ನು ರಕ್ಷಿಸಿಕೊಳ್ಳಲು ಸಮಸ್ತ ಕೊಡವರು ಒಗ್ಗೂಡಿ ಹೋರಾಟ ನಡೆಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಕರೆ ನೀಡಿದ್ದಾರೆ. ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ತಕ್ಷಣ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಹೋರಾಟದ ನೇತೃತ್ವ ವಹಿಸಿ ಮಾತನಾಡಿದ ಎನ್.ಯು.ನಾಚಪ್ಪ ಅವರು, ಭೂಮಾಫಿಯಾಗಳು ಹಾಗೂ ರಾಜಕೀಯ ಬೆಂಬಲಿತರು ಕೊಡಗಿನ ಕಾವೇರಿ ಜಲಾನಯನ ಪ್ರದೇಶದ ಭೂಮಿಗಳನ್ನು ದೊಡ್ಡ ಮಟ್ಟದಲ್ಲಿ ಖರೀದಿಸುತ್ತಿದ್ದು, ಕಪ್ಪು ಹಣದ ಚಲಾವಣೆಯಾಗುತ್ತಿದೆ. ಬೃಹತ್ ಕಾಫಿ ತೋಟಗಳ ಖರೀದಿಯ ನಂತರ ಅಕ್ಕಪಕ್ಕದ ಸಣ್ಣ ಹಿಡುವಳಿದಾರರ ಭೂಮಿಯನ್ನು ಹಣದ ಆಮಿಷವೊಡ್ಡಿ ಕಬಳಿಸಲಾಗುತ್ತಿದೆ. ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಬಡ್ಡಿ ರಹಿತ ಸಾಲದ ದೊಡ್ಡ ಪ್ರಮಾಣದ ಹಣವನ್ನು ಗ್ರಾಮ ಗ್ರಾಮಗಳಲ್ಲಿ ಬಂಡವಾಳದ ರೂಪದಲ್ಲಿ ಹೂಡಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲೂ ಹಣ ಬಳಕೆಯಾಗುತ್ತಿದ್ದು, ದೊಡ್ಡ…
ಮಡಿಕೇರಿ ಜೂ.24 NEWS DESK : ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಡಿಯಲ್ಲಿ ರಾಜ್ಯದ ನಾಲ್ಕು ವಿಭಾಗಗಳಾದ ಬೆಂಗಳೂರು, ಮೈಸೂರು ವಿಭಾಗದ ಮಂಗಳೂರು, ಬೆಳಗಾವಿ ವಿಭಾಗದ ಧಾರವಾಡ ಮತ್ತು ಕಲಬುರಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಗಳನ್ನು ನಡೆಸಲಾಗುತ್ತಿದೆ. ಈ ಸಂಬಂಧ ಪಿಯುಸಿ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 40 ರಷ್ಟು, ಎಸ್.ಸಿ/ಎಸ್.ಟಿಗೆ ಶೇಕಡ 35ರಷ್ಟು ಅಂಕ ಪಡೆದ ಅಭ್ಯರ್ಥಿಗಳು ಈ ತರಬೇತಿಗೆ ಅರ್ಹರಾಗಿದ್ದಾರೆ. ಹಾಲಿ ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ‘ಡಿ’ ದರ್ಜೆಯ ಗ್ರಂಥಾಲಯ ಸಹವರ್ತಿಗಳು ಸಂಬಂಧಪಟ್ಟ ಉಪ ನಿರ್ದೇಶಕರು/ ಮುಖ್ಯ ಗ್ರಂಥಾಲಯಾಧಿಕಾರಿಗಳ ಮುಖಾಂತರ, ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಚಾರಕರು ಸಂಬಂಧಪಟ್ಟ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಮುಖಾಂತರ ಹಾಗೂ ಇತರೆ ಸಂಸ್ಥೆಯಿಂದ ಬರುವ ಅಭ್ಯರ್ಥಿಗಳು ತಮ್ಮ ಸಂಸ್ಥೆಯ ಮುಖ್ಯಸ್ಥರ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿಯ ಜೊತೆಗೆ ಪಿ.ಯು.ಸಿ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಸೇವೆಗೆ ಸೇರಿದ ದಿನಾಂಕ, ವೇತನ ಪ್ರಮಾಣಪತ್ರ, ನಡವಳಿಕೆ ಪ್ರಮಾಣ ಪತ್ರಗಳ ಪ್ರತಿ ಲಗತ್ತಿಸಬೇಕು. ಸಾಮಾನ್ಯ ಅಭ್ಯರ್ಥಿಗಳು ಪಿಯುಸಿ ಅಂಕಪಟ್ಟಿ,…
ಮಡಿಕೇರಿ ಜೂ.24 NEWS DESK : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್6 ಭಾಗಮಂಡಲ ಫೀಢರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಜೂನ್, 25 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಕೋಪಟ್ಟಿ, ಚೆಟ್ಟಿಮಾನಿ, ಭಾಗಮಂಡಲ, ಅಯ್ಯಂಗೇರಿ, ತಲಕಾವೇರಿ, ಚೇರಂಗಾಲ, ಕೋರಂಗಾಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಜೂ.24 NEWS DESK : ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರಿಂದ ಮೂಲ ನಿವಾಸಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿರುವ ಜಬ್ಬೂಮಿ ಸಂಘಟನೆಯ ಸಂಚಾಲಕ ಚೊಟ್ಟೇಕ್‍ಮಾಡ ರಾಜೀವ್ ಬೋಪಯ್ಯ ಅವರು, ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗಿನಲ್ಲಿ ಪ್ರವಾಸಿಗರ ದೌರ್ಜನ್ಯ ಮಿತಿ ಮೀರುತ್ತಿದೆ, ಇದಕ್ಕೆ ರಾಜಕೀಯ ಮತ್ತು ಕೋಮು ಬಣ್ಣ ಬಳಿಯಲಾಗುತ್ತಿದೆ. ವಿನಾಕಾರಣ ಮಹಿಳಾ ದೌರ್ಜನ್ಯದ ಆರೋಪ ಹೊರಿಸಿ ಸ್ಥಳೀಯ ಮೂಲ ನಿವಾಸಿಗಳ ಆತ್ಮಸ್ಥೈರ್ಯ ಕುಗ್ಗಿಸುವ ಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಉತ್ತರ ಕೊಡಗಿನ ಮಾದಾಪುರ ಸಮೀಪದ ಕೋಟೆಬೆಟ್ಟದ ತಪ್ಪಲಿನಲ್ಲಿ ಇತ್ತೀಚೆಗೆ ಕ್ಷುಲ್ಲಕ ವಿಚಾರಕ್ಕೆ ಕಲಹ ನಡೆದಿದೆ. ಇದಕ್ಕೆ ಮೊದಲಿಗೆ ರಾಜಕೀಯ ಬಣ್ಣ ಬಳಿಯಲು ಯತ್ನಿಸಿದ್ದು, ನಂತರ ಸ್ಥಳೀಯರಿಂದ ಸರಗಳ್ಳತನ ಎಂದು ಬಿಂಬಿಸಿ, ವೀಡಿಯೋ ಮತ್ತು ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡಲಾಗಿದೆ. ಸ್ಥಳೀಯರು ವಾಸ್ತವಾಂಶದ ವಿವರವನ್ನು ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಪಡಿಸಿದ…
ಮಡಿಕೇರಿ ಜೂ.24 NEWS DESK : ಸುವರ್ಣ ಕರ್ನಾಟಕ 50ರ ಸಂಭ್ರಮದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶ್ರೀ ಅರಮೇರಿ ಕಳಂಚೇರಿ ಮಠ ಮತ್ತು ಎಸ್.ಎಂ. ಎಸ್ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಜೂ.27 ರಂದು ಆರೋಢ ದಾಸೋಹಿ ಧರ್ಮ ಚಿಂತಾಮಣಿ ಮಹಾಶರಣ ಲಿಂ. ಮಾಗನೂರು ಬಸಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ದಾವಣಗೆರೆಯ ಸುನಂದಾದೇವಿ ಮತ್ತು ಸಂಗಮೇಶ್ವರ ಗೌಡ ಅವರು ಶರಣ ತತ್ವ ಪ್ರಚಾರ ಮತ್ತು ಶರಣ ವಿಚಾರಗಳನ್ನು ತಿಳಿಯಪಡಿಸುವುದ್ದಕೋಸ್ಕರ ಸ್ಥಾಪಿಸಿರುವ ದತ್ತಿ ಕಾರ್ಯಕ್ರಮವು ಮಧ್ಯಾಹ್ನ 1 ಗಂಟೆಗೆ ಅರಮೇರಿ ಕಳಚೇರಿ ಮಠದ ಎಸ್.ಎಂ.ಎಸ್ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ದಿವ್ಯಸಾನಿದ್ಯವನ್ನು ಅರಮೆರಿ ಕಳಂಚೇರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ವಹಿಸಲಿದ್ದು, ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಅಖಿಲ ಭಾರತ ವೀರಶೈವ ಸಮಾಜದ ಅಧ್ಯಕ್ಷರಾದ ಹೆಚ್.ವಿ.ಶಿವಪ್ಪ…
ಮಡಿಕೇರಿ ಜೂ.24 NEWS DESK : ಕೊಡಗು ಜಿಲ್ಲೆಯ ಕುಶಾಲನಗರ ಸಮುದಾಯ ಆರೋಗ್ಯ ಆಸ್ಪತ್ರೆಗೆ ಮತ್ತು ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಗೆ ತಲಾ 1.75 ಕೋಟಿ ರೂ. ಮತ್ತು ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಗೆ 2 ಕೋಟಿ ರೂ. ಒಟ್ಟು ಸುಮಾರು 5 ಕೋಟಿಯಷ್ಟು ಆಸ್ಪತ್ರೆ ಅಭಿವೃದ್ಧಿಗೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ ಹೇಳಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ವತಿಯಿಂದ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಆರಂಬಿಸಲಾಗಿರುವ `ಡಯಾಲಿಸಿಸ್ ಘಟಕ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳನ್ನು ಆರಂಭಿಸಿ ಸುಮಾರು 800 ಯಂತ್ರಗಳನ್ನು ಅಳವಡಿಸಲಾಗಿದೆ. ಹೊಸ ತಾಲ್ಲೂಕು ಕೇಂದ್ರಗಳಲ್ಲಿಯೂ ಸಹ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೊಸ ಹೊಸ ಪ್ರಯೋಗಗಳನ್ನು ಮಾಡಿ ಸುಲಭವಾಗಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದೆ ಎಂದು ಸಚಿವರು ಹೇಳಿದರು. ಈಗಾಗಲೇ ಕುಶಾಲನಗರ ಸಮುದಾಯ ಆರೋಗ್ಯ…
ಮಡಿಕೇರಿ ಜೂ.24 NEWS DESK : ಜಿಲ್ಲೆಯಲ್ಲಿ ಒತ್ತುವರಿ ಮಾಡಿಕೊಂಡಿರುವ ಸರಕಾರಿ ಜಾಗವನ್ನು ಕಡಿಮೆ ದರಕ್ಕೆ ಗುತ್ತಿಗೆ ನೀಡುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ವಿವಿಧ ಬೇಡಿಕೆಗಳ ಈಡೇರಿಗಾಗಿ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಆರ್.ಭರತ್, ಕಾಂಗ್ರೆಸ್ ಸರಕಾರ ಬಿಜೆಪಿ ಸರಕಾರ ತೆಗೆದುಕೊಂಡ ನಿರ್ಧಾರದಂತೆ ಉಳ್ಳವರಿಗೆ ಗುತ್ತಿಗೆ ಆಧಾರದಲ್ಲಿ ಜಮೀನನ್ನು ನೀಡಲು ಮುಂದಾಗಿದೆ. ಇದರಿಂದ ಕಡು ಬಡತನದಲ್ಲಿರುವ ಆದಿವಾಸಿ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ವಂಚನೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜನವಿರೋಧಿ ಆದೇಶವನ್ನು ತಕ್ಷಣ ಹಿಂಪಡೆಯಬೇಕು, ಸರಕಾರಿ ಒತ್ತುವರಿ ಜಾಗವನ್ನು ತೆರವುಗೊಳಿಸಿ ಜಿಲ್ಲೆಯ ನಿವೇಶನ ರಹಿತರಿಗೆ ನೀಡಬೇಕು, 2018-19ರಲ್ಲಿ ಮಹಾಮಳೆಯಿಂದ ಮನೆಕಳೆದುಕೊಂಡಿರುವ ನಿವೇಶನ ರಹಿತ ಕುಟುಂಟಗಳಿಗೆ ನಿವೇಶನ ನೀಡಬೇಕು, ನಿರಾಶ್ರಿತರ ಹೊಸ ಪಟ್ಟಿಯನ್ನು ತಯಾರಿಸಬೇಕು ಎಂದು ಒತ್ತಾಯಿಸಿದರು.…
ಸುಂಟಿಕೊಪ್ಪ ಜೂ.24 NEWS DESK : ದೈವ ಮಂದಿರಗಳು ಮನುಷ್ಯನ ಮಾನಸಿಕ ನೆಮ್ಮದಿಯ ಸುಂದರ ತಾಣಗಳು ಎಂದು ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಕುಶಾಲನಗರ ತಾಲ್ಲೂಕಿನ ನಾಕೂರು-ಶಿರಂಗಾಲ ಗ್ರಾಮದಲ್ಲಿ ಸ್ಥಳೀಯ ಬಸವೇಶ್ವರ ಸೇವಾ ಸಮಿತಿ ವತಿಯಿಂದ ಬಸವೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನೆ ಮತ್ತು ಬ್ರಹ್ಮ ಕಲಶೋತ್ಸವ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಇಂದಿನ ಆಧುನಿಕತೆಯ ನಾಗಾಲೋಟದ ಕಾಲಘಟ್ಟದಲ್ಲಿ ಮನುಷ್ಯ ಸಂಪತ್ತಿನ ಹಿಂದೆ ಓಡುತ್ತಿದ್ದಾನೆ ಹೊರತು ಅವನಿಗೆ ಬೇಕಾದಂತಹ ಸಂತಸ ಹಾಗೂ ಸಮಧಾನ ಸಿಗುತ್ತಿಲ್ಲ. ಹಾಗಾಗಿ ಮನುಷ್ಯನಿಗೆ ಬೇಕಾದಂತಹ ಶಾಂತಿ ಹಾಗೂ ನೆಮ್ಮದಿ ದೇವ ಮಂದಿರಗಳಲ್ಲಿ ದೊರಕುತ್ತದೆ ಎಂದು ಶ್ರೀಗಳು ಹೇಳಿದರು. ಪ್ರಕೃತಿ ಮನುಷ್ಯನಿಗೆ ಬೇಕಾದಂತಹ ಎಲ್ಲವನ್ನು ನೀಡುತ್ತಿದೆ. ಆದರೆ ಪ್ರಕೃತಿಗೆ ನಾವೇನು ಕೊಡುತ್ತಿದ್ದೇವೆ ಎಂಬ ಆತ್ಮಾವಲೋಕನದ ತುರ್ತು ಅಗತ್ಯವಿದೆ. ಮನುಷ್ಯರಾದ ನಾವೆಲ್ಲರೂ ಪರಸ್ಪರ ಸ್ನೇಹ, ವಿಶ್ವಾಸ ಹಾಗೂ ಸಹಬಾಳ್ವೆಯಿಂದ ಜೀವನ ಕಟ್ಟಬೇಕೆಂದು ಶ್ರೀಗಳು ಭಕ್ತರಿಗೆ ಕರೆಕೊಟ್ಟರು. ಎರಡು ದಿನಗಳ ಕಾಲ…






