ಮಡಿಕೇರಿ ಏ.17 NEWS DESK : ಯುವ ಪೀಳಿಗೆ ಇತರ ಜಿಲ್ಲೆಯಲ್ಲಿ ಉದ್ಯೋಗ ಪಡೆದರೂ, ಎಷ್ಟೇ ಹಣ, ಕೀರ್ತಿ ಗಳಿಸಿದರೂ ತಮ್ಮ ಬಾಲ್ಯ, ಬೆಳೆದ ಪರಿಸರ ಮತ್ತು ಆಸರೆಯಾದ ಊರನ್ನು ಮರೆಯಬಾರದು ಎಂದು ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಎಸ್.ಸುರೇಶ್ ನಂಜಪ್ಪ ಸಲಹೆ ನೀಡಿದ್ದಾರೆ. ಬೆಂಗಳೂರು ಕೊಡವ ಸಮಾಜದ ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ, ಕಾವೇರಿ ಪ್ಲೆಸ್‍ಮೆಂಟ್‍ಸೆಲ್ ಹಾಗೂ ಅಡೆಕ್ಕೊ ಇಂಡಿಯಾ ಸಂಸ್ಥೆ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹುಟ್ಟಿದ ಊರು ನಮಗೆ ಸಂಸ್ಕಾರ, ಸಂಸ್ಕೃತಿ ಮತ್ತು ಬದುಕಿನ ಪಾಠ ಕಲಿಸಿಕೊಡುತ್ತದೆ. ಆ ಊರಿನ ಮಣ್ಣಿನ ಋಣ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವು ಎಷ್ಟೇ ಹಣ, ಕೀರ್ತಿ ಪಡೆದರೂ ಅವಕಾಶವಿದ್ದಾಗ ಕೊಡಗಿನ ಅಭಿವೃದ್ಧಿಗೆ ಅಥವಾ ಇಲ್ಲಿನ ಜನರ ಸಹಾಯಕ್ಕೆ ನಿಲ್ಲುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಚಿರಿಯಪಂಡ ಎಸ್.ಸುರೇಶ್ ನಂಜಪ್ಪ ಕರೆ ನೀಡಿದರು.…
ಲೇಖಕ: admin
ಬೆಂಗಳೂರು, ಏ.17 NEWS DESK : ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ ಸುಧಾರಣೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ‘ಕರ್ನಾಟಕ ಲೋಕಾಯುಕ್ತ’ ಸಂಸ್ಥೆಯು ತನ್ನ ಯಶಸ್ವಿ ನಾಲ್ಕು ದಶಕಗಳ ಪಯಣವನ್ನು ಪೂರೈಸಿದ್ದು, ಈ ಅಂಗವಾಗಿ 2026ರ ಏಪ್ರಿಲ್ 18, ಶನಿವಾರದಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟನೆ ನೆರವೇರಿಸಲಿದ್ದಾರೆ. ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಲೋಕಾಯುಕ್ತರಾದ ಬಿ.ಎಸ್. ಪಾಟೀಲ್, ಉಪಲೋಕಾಯುಕ್ತರುಗಳಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಅವರ ಘನ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮವು ಜರುಗಲಿದೆ. ಈ ಸಂದರ್ಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಅವರು ಲೋಕಾಯುಕ್ತ ನಿಯತಕಾಲಿಕೆಯನ್ನು ಬಿಡುಗಡೆ ಮಾಡುವ ಜೊತೆಗೆ ಚುನಾಯಿತ ಪ್ರತಿನಿಧಿಗಳ ಆಸ್ತಿ ಮತ್ತು ಹೊಣೆಗಾರಿಕೆಗಳ ಹೊಸ ಪೋರ್ಟಲ್ ಹಾಗೂ ಆನ್‍ಲೈನ್ ತನಿಖಾ ಮಾಡ್ಯೂಲ್‍ಗೆ ಚಾಲನೆ ನೀಡಲಿದ್ದಾರೆ. ಇದೇ…
ಮಡಿಕೇರಿ ಏ.17 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ವತಿಯಿಂದ ವಿರಾಜಪೇಟೆಯ ರೋಟರಿ ಶಾಲೆಯಲ್ಲಿ ಆಯೋಜಿತವಾಗಿದ್ದ ಕಾರ್ಯಕ್ರಮವನ್ನು ಏ.26 ಕ್ಕೆ ಮುಂದೂಡಲಾಗಿದೆಯೆಂದು ಸಂಘದ ಪ್ರಧಾನ ಕಾರ್ಯದರ್ಶಿ ರಂಜಿತ್ ಪುದಿಯತಂಡ ತಿಳಿಸಿದ್ದಾರೆ. ರೋಟರಿ ಶಾಲೆಯಲ್ಲಿ ಇದೇ ಏ.5 ರಂದು ಕಾರ್ಯಕ್ರಮವನ್ನು ಆಯೋಜಿತವಾಗಹಿತ್ತಾದರು, ಅನಿವಾರ್ಯ ಕಾರಣಗಳ ಹಿನ್ನೆಲೆಯಲ್ಲಿ ನಡೆಸಲು ಸಾಧ್ಯವಾಗಿಲ್ಲ. ಇದೀಗ ಕಾರ್ಯಕ್ರಮವನ್ನು ಏ.26 ರಂದು ಆಯೋಜಿಸಲು ನಿರ್ಧರಿಸಲಾಗಿದೆಯೆಂದು ಮಾಹಿತಿ ನೀಡಿದ್ದಾರೆ.
ಮಡಿಕೇರಿ ಏ.17 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.18 ರಿಂದ ಮಹಿಳಾ ಕ್ರಿಕೆಟ್ ಆರಂಭಗೊಳ್ಳಲಿದೆ. *ಮೈದಾನ 3* ಬೆಳಿಗ್ಗೆ 9 ಗಂಟೆಗೆ ಮುಂಡಂಡ ಮತ್ತು ಕಟ್ಟೇರ, 11.30ಕ್ಕೆ ಮೊಣ್ಣಂಡ ಮತ್ತು ಮುಕ್ಕಾಟಿರ (ಪುಲಿಕೋಟ್), ಮಧ್ಯಾಹ್ನ 12.30ಕ್ಕೆ ತೆಕ್ಕಡ ಮತ್ತು ಮೇರಿಯಂಡ, 1.30ಕ್ಕೆ ಆದೇಂಗಡ ಮತ್ತು ಅಲ್ಲುಮಾಡ, 2.15ಕ್ಕೆ ತಾಚಮಂಡ ಮತ್ತು ಕೊಟ್ರಮಾಡ, 3ಕ್ಕೆ ಕಾಯಪಂಡ ಮತ್ತು ಬಾಳೆಯಡ ಹಾಗೂ 4 ಗಂಟೆಗೆ ಮೇವಡ ಮತ್ತು ಮಾಚೆಟ್ಟಿರ (ಬಾಳುಗೋಡು)
ಮಡಿಕೇರಿ ಏ.17 NEWS DESK : ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಹಾಗೂ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘವ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಟರ್ಫ್ ‘ಸೌಹಾರ್ದ ಕಪ್’ ಪಂದ್ಯಾವಳಿಯಲ್ಲಿ ಮೀಡಿಯಾ ಸೂಪರ್ ಕಿಂಗ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸಿದ್ದಾಪುರದ ಟರ್ಫ್ ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ನಡೆದ ಪಂದ್ಯಾವಳಿಯಲ್ಲಿ 8 ತಂಡಗಳು ಪಾಲ್ಗೊಂಡಿತ್ತು. ಫೈನಲ್ ಪಂದ್ಯಾವಳಿಯಲ್ಲಿ ಕಾವೇರಿ ತಂಡದ ಪರವಾಗಿ ಜಯಪ್ರಕಾಶ್ ಅವರ 26 ರನ್ ಗಳ ಸಹಾಯದಿಂದ ತಂಡ 49 ರನ್ ಗಳಿಸಿತು. ಮೀಡಿಯಾ ಸೂಪರ್ ಕಿಂಗ್ಸ್ ತಂಡದ ಇಸ್ಮಾಯಿಲ್28, ರೆಜಿತ್ 18 ರನ್ ಗಳನ್ನು ಗಳಿಸಿ ಸುಲಭ ಜಯ ಸಾಧಿಸಿತು. ಇದಕ್ಕೂ ಮೊದಲು ನಡೆದ ಕ್ವಾಲಿಫೈಯರ್ ಪಂದ್ಯದಲ್ಲಿ ಕಾವೇರಿ ಮಿಡಿಯಾ ತಂಡ ಮಿಡಿಯಾ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತು. ಎಲಿಮಿನೇಟರ್ ಪಂದ್ಯದಲ್ಲಿ ಬ್ರಾಡ್ ಕಾಸ್ಟ್ ಇಬ್ನಿ ಬ್ಲಾಸ್ಟರ್ ತಂಡ ಮೀಡಿಯಾ ರೋಯಲ್ಸ್ ತಂಡವನ್ನು ಮಣಿಸಿತು. ಎರಡನೇ ಕ್ಲಾಲಿಫೈಯರ್…
ಮಡಿಕೇರಿ ಏ.17 NEWS DESK : ನಗರ ವ್ಯಾಪ್ತಿಯ ಕಸ ವಿಲೇವಾರಿ ಮಾಡುವ ವಾಹನಗಳಲ್ಲೆ, ಕುಡಿಯುವ ನೀರಿನ ಘಟಕಗಳಿಗೆ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ ಮಾಡಲಾಗುತ್ತಿದೆಯೆಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಮತ್ತು ಮಡಿಕೇರಿ ಬ್ಲಾಕ್ ಯೂತ್ ಕಾಂಗ್ರೆಸ್ ನಗರಸಭೆಯ ವಿರುದ್ಧ ಗಂಭೀರ ಆರೋಪ ಮಾಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೋಚನ ಚೇತನ್ ಮಾತನಾಡಿ, ಗುರುವಾರ ರಾತ್ರಿ ನಗರಸಭಾ ಕಚೇರಿಯ ಮುಂಭಾಗದಲ್ಲೆ ಇದ್ದ ಕಸವಿಲೇವಾರಿ ವಾಹನಕ್ಕೆ ಕಸ ಹಾಕಲು ಬಂದ ವರ್ತಕರಿಗೆ, ಕಸ ಹಾಕದಂತೆ ಪೌರ ಕಾರ್ಮಿಕರು ತಡೆಯುವುದರೊಂದಿಗೆ ಗಲಾಟೆ ಉಂಟಾಗಿತ್ತೆಂದು ತಿಳಿಸಿದರು. ಈ ಸಂದರ್ಭ ಅಲ್ಲಿದ್ದ ಕಸವಿಲೇವಾರಿ ವಾಹನವನ್ನು ಪರಿಶೀಲಿಸಿದಾಗ, ವರ್ತಕರು ತಂದು ಹಾಕಿದ ಕಸದೊಂದಿಗೆ ನೀರು ಸರಬರಾಜು ಘಟಕಗಳಿಗೆ ಪೂರೈಸುವ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಇರುವುದು ಕಂಡು ಬಂತು. ಇದೇ ಕಾರಣಕ್ಕಾಗಿ ಪೌರ ಕಾರ್ಮಿಕರು, ನೀರಿನ ಘಟಕಗಳಿಗೆ ಪೂರೈಸುವ ವಾಹನಕ್ಕೆ ಕಸ ಹಾಕಬಾರದೆಂದು ಹೇಳುತ್ತಿದ್ದರೆಂದು ಮಾಹಿತಿ ನೀಡಿದರು. ಈ ಬಗ್ಗೆ ತಾವು…
ಮಡಿಕೇರಿ ಏ.17 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.17 ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಓಡಿಯಂಡ ಮತ್ತು ಅಮ್ಮುಣಿಚಂಡ ತಂಡಗಳ ನಡುವಿನ ಪಂದ್ಯದಲ್ಲಿ ಓಡಿಯಂಡ ತಂಡಕ್ಕೆ 9 ವಿಕೆಟ್‍ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಮ್ಮುಣಿಚಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 41 ರನ್ ಗಳನ್ನು ಗಳಿಸಿತು. ಓಡಿಯಂಡ ಕೇವಲ 1.5 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 43 ರನ್ ಗಳನ್ನು ಸೇರಿಸಿ ಗೆಲುವು ದಾಖಲಿಸಿತು. ಕೊಚ್ಚೇರ ಮತ್ತು ಚೆಯ್ಯಂಡ (ಬಲಂಬೇರಿ) ನಡುವಿನ ಪಂದ್ಯದಲ್ಲಿ ಕೊಚ್ಚೇರ 13 ರನ್ ಗಳಿಂದ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೊಚ್ಚೇರ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 75 ರನ್ ಗಳನ್ನು ಸೇರಿಸಿತು. ಚೆಯ್ಯಂಡ 6 ಓವರ್ ಗಳಲ್ಲಿ 5…
ಬೆಂಗಳೂರು NEWS DESK ಏ.17 : ಶರಣ್ಯ ಹಾಗೂ ಶ್ರೀನಂದಾ ನಾಪತ್ತೆ ಪ್ರಕರಣದ ನಂತರ ಕೊನೆಗೂ ಅರಣ್ಯ ಸಚಿವರು ಎಚ್ಚೆತ್ತುಕೊಂಡಿದ್ದಾರೆ. ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಸ್ಪಷ್ಟ ಸೂಚನೆ ನೀಡಿದ್ದಾರೆ. ಇತ್ತೀಚೆಗೆ ಕೊಡಗಿನ ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳದಿಂದ ಚಾರಣಕ್ಕೆ ಬಂದಿದ್ದ ಮಹಿಳೆ ಶರಣ್ಯ ನಾಪತ್ತೆಯಾಗಿ ಕಾಡಿನಲ್ಲಿ 3 ದಿನ ಕಳೆದ ಪ್ರಕರಣ ಹಾಗೂ ಅರಣ್ಯ ವ್ಯಾಪ್ತಿಗೆ ಒಳಪಡದ ಚಿಕ್ಕಮಗಳೂರಿನ ಮಾಣಿಕ್ಯಧಾರಾ ಬಳಿ ನಾಪತ್ತೆಯಾಗಿ ಶವವಾಗಿ ಪತ್ತೆಯಾದ ಬಾಲಕಿ ಶ್ರೀನಂದಾ ಪ್ರಕರಣದ ಹಿನ್ನೆಲೆಯಲ್ಲಿ ಚಾರಣಿಗರ ಸುರಕ್ಷತೆಗಾಗಿ ಎಸ್.ಓ.ಪಿ. ರೂಪಿಸಲು ಸೂಚಿಸಿರುವುದಾಗಿ ಅವರು ತಿಳಿಸಿದರು. ಚಾರಣಿಗರ ಸುರಕ್ಷತೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ ಬಿಡುಗಡೆ ಮಾಡಿ ಮಾತನಾಡಿದ ಅರಣ್ಯ ಸಚಿವರು ಪ್ರತಿ 10 ಚಾರಣಿಗರಿಗೆ ಒಬ್ಬರು ಸ್ಥಳೀಯ ಪ್ರಕೃತಿ ಮಾರ್ಗದರ್ಶಕರಿರುತ್ತಾರೆ.…
ಮಡಿಕೇರಿ NEWS DESK ಏ.17 : ಕೊಡಗು ಗೌಡ ಯುವ ವೇದಿಕೆಯ ವತಿಯಿಂದ ಗೌಡ ಜನಾಂಗ ಬಾಂಧವರಿಗಾಗಿ 27ನೇ ವರ್ಷದ ಕ್ರೀಡಾಕೂಟ “ಕುಟುಂಬ 2026” ಇದೇ ಮೇ 1ರಿಂದ 16ರ ವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಗೌಡ ಯುವ ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಶಿತ್ ಮಾದಯ್ಯ 2000ನೇ ಇಸವಿಯಲ್ಲಿ ಕೆದಂಬಾಡಿ ಕುಟುಂಬಸ್ಥರ ನೇತೃತ್ವದಲ್ಲಿ ಆರಂಭವಾದ ಗೌಡ ಜನಾಂಗದ ಕ್ರೀಡಾಕೂಟ ನಂತರದ ವರ್ಷಗಳಲ್ಲಿ ತುಮ್ತಜೆ ಗಣೇಶ್ ಅವರ ಸಾಂಸ್ಕೃತಿಕ ಅಕಾಡೆಮಿ ಆಶ್ರಯದಲ್ಲಿ ಸಾಗಿ ಬಂತು. ನಂತರ 2013ನೇ ಇಸವಿಯಿಂದ ಕೊಡಗು ಗೌಡ ಯುವ ವೇದಿಕೆ ಗೌಡ ಸಮುದಾಯಕ್ಕಾಗಿ ಈ ಕ್ರೀಡಾಕೂಟವನ್ನು ಮುಂದುವರಿಸುತ್ತಾ ಬಂದಿದೆ ಎಂದರು. ಕಳೆದ ಮೂರು ವರ್ಷಗಳಿಂದ ಆಯೋಜಿಸುತ್ತಾ ಬಂದಿರುವ ಜಿಪಿಎಲ್ ಗೌಡ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಅತ್ಯಂತ ಯಶಸ್ಸನ್ನು ಕಂಡಿದೆ. ಕೊಡಗು ಗೌಡ ಯುವ ವೇದಿಕೆಯ ನೂತನ ಸಮಿತಿ ಬಾಳಾಡಿ ಮನೋಜ್ ಅವರ ಅಧ್ಯಕ್ಷತೆಯಲ್ಲಿ ಜನಾಂಗದ ಮಹತ್ವಾಕಾಂಕ್ಷೆಯ “ಗೌಡ…
ನಾಪೋಕ್ಲು ಏ.16 NEWS DESK : ಸ್ಥಳೀಯ ಹಿಂದೂ ಮಲಯಾಳಿ ಸಂಘದ ವತಿಯಿಂದ ವಿಷು ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಘದ ಕಚೇರಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ದೇವರ ಮೂರ್ತಿಯನ್ನು ಶೃಂಗರಿಸಿ ದೀಪ ಬೆಳಗಿ ಫಲ ಪುಷ್ಪಗಳನ್ನು ಅರ್ಪಿಸಲಾಯಿತು. ನಂತರ ಜನಾಂಗ ಬಾಂಧವರಿಗೆ ವಿಷು ಕಣಿ ಕೊನ್ನಪೂ ವಿತರಣಾ ಮಾಡಲಾಯಿತು. ಬಳಿಕ ಹಬ್ಬವನ್ನು ಸಾಂಪ್ರದಾಯಕವಾಗಿ ಆಚರಿಸಿ ಪರಸ್ಪರ ಶುಭಾಶಯ ಕೋರಿಕೊಂಡು. ಸಂಘದ ಅಧ್ಯಕ್ಷ ಕೆ.ಕೆ.ಅನಿಲ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಕೆ.ಕೆ.ಅನಿಲ್ ಮತ್ತು ಪೊನ್ನು ಮುತ್ತಪ್ಪ ದೇವಾಲಯ ಅಧ್ಯಕ್ಷರು ಚಂದ್ರ ದಿನದ ಮಹತ್ವದ ಬಗ್ಗೆ ಮಾತನಾಡಿ ಶುಭ ಹಾರೈಸಿದರು, ಈ ಸಂದರ್ಭ ಸಂಘದ ಉಪಾಧ್ಯಕ್ಷರು ಅಭಿಲಾಷ್ ,ಮಹಿಳಾ ಘಟಕ ಅಧ್ಯಕ್ಷರು ಸುಮಿತ್ರಾ ವಿನೋದ್, ಪೊನ್ನು ಮುತ್ತಪ್ಪ ದೇವಾಲಯ ಅಧ್ಯಕ್ಷರು ಚಂದ್ರ, ಕಾರ್ಯದರ್ಶಿ ರಮೇಂದ್ರ ,ಸಹಕಾರ್ಯದರ್ಶಿ ಮಹೇಶ್ ಮೆನನ್ ಖಜಾಂಚಿ ವಿಶ್ವನಾಥ್ , ಆಡಳಿತ ಮಂಡಳಿಯ ಸದಸ್ಯರು ಮೋಹನ್,ಉತ್ತಮ, ಶಿವ ಕೆ.ಡಿ ,ಮಹೇಶ್ ಕೆ,ಸತೀಶ್, ವಿನಿಲ್,ರಘು ಟಿ.ಕೆ, ಪ್ರಸಾದ್, ಸುಧಾಬಾಲಕೃಷ್ಣ, ವಿಮಲ,ಶೀಲಾ , ಪ್ರಮೀಳಾ,…






