ಮಡಿಕೇರಿ ಜೂ.22 NEWS DESK : ಬೆಲೆ ಏರಿಕೆಯ ನೆಪವೊಡ್ಡಿ ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ ರಾಜಕೀಯ ದುರುದ್ದೇಶದಿಂದ ಕೂಡಿದೆ ಮತ್ತು ಜನಪ್ರಿಯ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಗುರಿಯಾಗಿಸಿದ ಕೀಳು ಮಟ್ಟದ ರಾಜಕಾರಣವಾಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿದ ಬಿಜೆಪಿಯ ವರ್ತನೆ ಖಂಡನೀಯವೆAದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ 10 ವರ್ಷಗಳ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ದುರಾಡಳಿತದ ಫಲವಾಗಿ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರಿದೆ. ಬಡವರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ನಿತ್ಯ ಕಷ್ಟದ ಜೀವನ ನಡೆಸುತ್ತಿದ್ದಾರೆ. ಈ ಬಗ್ಗೆ ತಲೆ ಕೆಡಿಸಿಕೊಳ್ಳದ ಬಿಜೆಪಿ 5 ಪ್ರಮುಖ ಗ್ಯಾರಂಟಿಗಳ ಮೂಲಕ ಜನಪ್ರಿಯತೆ ಗಳಿಸಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಅರ್ಥಹೀನ ಪ್ರತಿಭಟನೆ ನಡೆಸುತ್ತಿದೆ. ಕೇಂದ್ರ ಸರಕಾರದ ಆರ್ಥಿಕ ನೀತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ರಾಜ್ಯ ಸರಕಾರದ ಗ್ಯಾರಂಟಿಗಳು ವರದಾನವಾಗಿದೆ. ಜನ ಗ್ಯಾರಂಟಿ ಯೋಜನೆಯ…
ಲೇಖಕ: admin
ಮಡಿಕೇರಿ ಜೂ.22 NEWS DESK : ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಮತ್ತು ಹುಣುಸೂರು ಮಾರ್ಗವಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ- ಸಿದ್ದಾಪುರ ಅರಣ್ಯ ವ್ಯಾಪ್ತಿಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ಸಂಚರಿಸುವವರಿಗೆ ದರೋಡೆಕೋರರ ಆತಂಕವಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊAಡ ಪ್ರಕರಣದ ತನಿಖೆ ನಡೆಸಿರುವ ಕೊಡಗು ಪೊಲೀಸರು ಇದೊಂದು ಸುಳ್ಳು ಸುದ್ದಿ ಎನ್ನುವುದನ್ನು ಖಾತ್ರಿ ಪಡಿಸಿದ್ದಾರೆ. ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊAಡಿರುವ ಮಾಹಿತಿ ಕೇವಲ ಊಹಾಪೋಹವಾಗಿದೆ. ಪಿರಿಯಾಪಟ್ಟಣ- ಹುಣುಸೂರು- ವಿರಾಜಪೇಟೆ- ಸಿದ್ದಾಪುರ ಮಾರ್ಗದಲ್ಲಿ ಆತಂಕದ ವಾತಾವರಣವಿಲ್ಲ. ಯಾವುದೇ ವೇಳೆಯಲ್ಲಿ ಪ್ರಯಾಣಿಸಬಹುದಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಪಷ್ಟಪಡಿಸಿದ್ದಾರೆ. ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿದ್ದು, ಸುಳ್ಳು ಸುದ್ದಿ, ವದಂತಿಗಳನ್ನು ಹರಡುವುದು, ಶಾಂತಿ ಸೌಹಾರ್ದತೆಗೆ ದಕ್ಕೆ ತರಬಹುದಾದ ಮಾಹತಿಗಳನ್ನು ಹಂಚಿಕೊAಡಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಸ್‌ಪಿ ಎಚ್ಚರಿಕೆ ನೀಡಿದ್ದಾರೆ.
ಮಡಿಕೇರಿ ಜೂ.22 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿಯನ್ನು ದಹಿಸುವ ಮೂಲಕ ಬಿಜೆಪಿ ಕೊಡಗಿನ ಜನರ ಭಾವನೆಗೆ ದಕ್ಕೆ ತಂದಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆರೋಪಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಅವರು, ಅಣುಕು ಶವಯಾತ್ರೆ ಮಾಡಿ, ಪ್ರತಿಕೃತಿ ದಹಿಸಿ ವಿಕೃತಿ ಮೆರೆಯುವುದು ಕೊಡಗಿನ ಸಂಸ್ಕೃತಿಯಲ್ಲ. ಬಿಜೆಪಿಯ ಈ ವರ್ತನೆ ಖಂಡನೀಯವೆಂದು ತಿಳಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 100ರ ಗಡಿ ದಾಟಿಸಿದೆ. ಅಡುಗೆ ಅನಿಲ, ರಸಗೊಬ್ಬರ, ಕೃಷಿ ಪರಿಕರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದುಪ್ಪಟ್ಟಾಗಿದೆ. ಜನಸಾಮಾನ್ಯರು ಬೆಲೆ ಏರಿಕೆಯ ಹೊರೆಯಿಂದ ಕಷ್ಟದ ಜೀವನ ಸಾಗಿಸುತ್ತಿದ್ದಾರೆ. ಆದರೂ ಕಾಂಗ್ರೆಸ್ ಪಕ್ಷ ಬಿಜೆಪಿ ಮಂದಿಯ ಪ್ರತಿಕೃತಿ ದಹಿಸಿ ವಿಕೃತಿ ಮೆರೆಯುವ ಕಾರ್ಯಕ್ಕೆ ಮುಂದಾಗಿಲ್ಲ. ಬಿಜೆಪಿ ತನ್ನ ಕೀಳು ಮಟ್ಟದ ರಾಜಕಾರಣವನ್ನು ಪೊನ್ನಣ್ಣ…
ಮಡಿಕೇರಿ ಜೂ.22 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪದವಿಪೂರ್ವ ಕಾಲೇಜುಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅಭಿವೃದ್ಧಿ ಹಾಗೂ ಕೊಠಡಿಗಳ ನಿರ್ಮಾಣದ ಕುರಿತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರು ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತ ಸಚಿವ ಎಸ್.ಮಧು ಬಂಗಾರಪ್ಪ ಅವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕೂಡಿಗೆ ಜೂ.22 NEWS DESK : ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ತಮ್ಮ ಹುಟ್ಟುಹಬ್ಬವನ್ನು ಕೂಡಿಗೆ ಶಕ್ತಿ ವೃದ್ಧಾಶ್ರಮದಲ್ಲಿ ಸರಳವಾಗಿ ಆಚರಿಸಿಕೊಂಡರು. ನಂತರ ವಯೋವೃದ್ಧರ ಯೋಗ ಕ್ಷೇಮ ವಿಚಾರಿಸಿ, ವೃದ್ಧರಿಗೆ ಊಟದ ವ್ಯವಸ್ಥೆಯನ್ನು ಏರ್ಪಡಿಸಿದರು. ಈ ಸಂದರ್ಭ ಮಾತನಾಡಿದ ಸಮಾಜ ಸೇವಕರು ಹಾಗೂ ದಾನಿಗಳಾದ ಹರಪಳ್ಳಿ ರವೀಂದ್ರ, ಜನ್ಮ ದಿನವನ್ನು ವೃದ್ಧರೊಂದಿಗೆ ಆಚರಣೆ ಮಾಡುತ್ತಿರುವುದು ಮನಸ್ಸಿಗೆ ಬಹಳ ಸಂತೋಷ ಹಾಗೂ ನೆಮ್ಮದಿಯನ್ನು ನೀಡುತ್ತದೆ. ಆದ್ದರಿಂದ ಇಲ್ಲಿನ ವೃದ್ಧರಿಗೆ ಒಂದೊತ್ತಿನ ಆಹಾರವನ್ನು ನೀಡಿ, ಅವರೊಂದಿಗೆ ಜನ್ಮ ದಿನವನ್ನು ರವೀಂದ್ರ ಅಭಿಮಾನಿ ಬಳಗದ ವತಿಯಿಂದ ಆಚರಣೆ ಮಾಡುತ್ತಿದ್ದಾರೆ ಎಂದರು. ಕೂಡಿಗೆ ರಾಜೇಗೌಡ ಮಾತನಾಡಿ. ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು ಹಾಗೂ ಸಮಾಜ ಸೇವಕರು ಹಾಗೂ ದಾನಿಗಳಾದ ಹರಪಳ್ಳಿ ರವೀಂದ್ರಣ್ಣ ಅವರ ಹುಟ್ಟುಹಬ್ಬವನ್ನು ಕೂಡಿಗೆಯ ಶಕ್ತಿ ವೃದ್ಧಾಶ್ರಮದ ವಯೋ ವೃದ್ಧರ ಜೊತೆ ಆಚರಣೆ ಮಾಡುತ್ತಿರುವುದು ಶಕ್ತಿ ವೃದ್ಧಾಶ್ರಮದ ವಯೋವೃದ್ಧರಿಗೆ ತುಂಬಾ ಖುಷಿ ತಂದಂತೆ ಹಾಗಿದೆ ಹಾಗಾಗಿ ಈ ಬಾರಿ ಕೂಡಿಗೆಯ ಶಕ್ತಿ ವೃದ್ಧಾಶ್ರಮದಲ್ಲಿ…
ವಿರಾಜಪೇಟೆ ಜೂ.22 NEWS DESK : ವಿರಾಜಪೇಟೆಯ ಪ್ರಗತಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಆಡಳಿತಾಧಿಕಾರಿ ಅಂತರಾಷ್ಟ್ರೀಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಮತ್ತು ಸುಷ್ಮಾ ತಿಮ್ಮಯ್ಯ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಯೋಗಾಸನದ ಮಹತ್ವದ ಕುರಿತು ಮಾಹಿತಿ ನೀಡಿ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು. ಈ ಸಂದರ್ಭ ಪ್ರಾಂಶುಪಾಲರಾದ ವಿಮಲ್ ಪ್ರಭು ಮತ್ತು ಕ್ರೀಡಾ ಸಂಯೋಜಕ ಶಿವಶಕ್ತಿ ಸೇರಿದಂತೆ ಶಾಲೆಯ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಇದ್ದರು.
ವಿರಾಜಪೇಟೆ ಜೂ.22 NEWS DESK : ಯೋಗಾಭ್ಯಾಸವು ಎಲ್ಲಾ ಧರ್ಮಗಳಲ್ಲಿ, ಎಲ್ಲಾ ದೇಶದ ಜನರ ನಡುವೆ ಸಾಮರಸ್ಯವನ್ನು ಬೆಳೆಸುತ್ತದೆ ಎಂದು ಪಾಲಿಬೆಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಎಂ.ಬಿ.ಪಾರ್ವತಿ ಅಭಿಪ್ರಾಯ ವ್ಯಕ್ತಪಡಿಸಿದರು. ಪಾಲೆಬೆಟ್ಟದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಯೋಗ ಶಾರೀರಿಕ ಹಾಗೂ ಮಾನಸಿಕ ನೆಮ್ಮದಿಯನ್ನು ವೃದ್ಧಿಸುತ್ತದೆ. ಜನರಲ್ಲಿ ಐಕ್ಯತೆ ಮತ್ತು ಸಾಮರಸ್ಯವನ್ನು ಬೆಳೆಸುತ್ತದೆ ಯೋಗವನ್ನು ಪ್ರತಿನಿತ್ಯ ಮಾಡುವುದರಿಂದ ಶ್ರದ್ಧೆ ಹಾಗೂ ಉತ್ತಮ ಆರೋಗ್ಯ ಬೆಳವಣಿಗೆಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾಲೇಜಿನ ಕನ್ನಡ ಉಪನ್ಯಾಸಕಿ ಪಿ.ಆರ್.ಸವಿತಾ ವಿದ್ಯಾರ್ಥಿಗಳಿಗೆ, ತ್ರಿಕೋನಾಸನ, ವಿತ್ಕಟಾಸನ ಪರಿವೃತ್ತ ತ್ರಿಕೋನಸನ, ಅರ್ಧ ಚಕ್ರಾಸನ, ವೀರಭದ್ರಸನ ಹಾಗೂ ಸೂರ್ಯ ನಮಸ್ಕಾರವನ್ನು ಮಾಡಿಸಿದರು. ಈ ಸಂದರ್ಭ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಪಿ.ಆರ್.ಶಿವದಾಸ್, ಉಪನ್ಯಾಸಕಿ ಕೆ.ಕೆ.ಸುನಿತ ಸೇರಿದಂತೆ ಎಲ್ಲಾ ಉಪನ್ಯಾಸಕರು, ಕಚೇರಿ ಸಿಬ್ಬಂದಿ ಶಾಲಿನಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ವಿರಾಜಪೇಟೆ ಜೂ 22 NEWS DESK : ದೇವಣಗೇರಿ ಬಿ.ಸಿ. ಪ್ರೌಢಶಾಲೆಯಲ್ಲಿ 10ನೇ ಅಂತರಾಷ್ಟ್ರೀಯ ಯೊಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಆಡಳಿತ ಮಂಡಳಿ ಆಡಳಿತಾಧಿಕಾರಿ ಹಾಗೂ ಯೋಗ ಗುರುಗಳಾದ ಪಿ.ಎ. ಲಕ್ಷ್ಮಿ ನಾರಾಯಣ ಮಾತನಾಡಿ, ಯೋಗ ಎಂದರೆ ಆಸನ ಅಲ್ಲ, ಅದೊಂದು ಜೀವನ ಪದ್ಧತಿ, ಇದರ ಮೂಲ ಪುರುಷ ಪತಂಜಲಿಯವರು ಎಂದರಲ್ಲದೆ ಯೋಗದಿಂದ ಆಗುವ ಹಲವಾರು ಉಪಯೋಗ, ಯೋಗದಿಂದ ಶರೀರದ ಆರೋಗ್ಯ, ಮಾನಸಿಕ ಆರೋಗ್ಯ, ಭಾಷೆಯ ಶುದ್ಧತೆ, ವಿದ್ಯಾರ್ಥಿಗಳು ಯೋಗವನ್ನು ಕಲಿತರೆ ಆಗುವ ಉಪಯೋಗವನ್ನು ತಿಳಿಸಿದರು. ಪ್ರತಿದಿನ ಯೋಗವನ್ನು ಮಾಡುವಂತೆ ಸಲಹೆ ನೀಡಿದ ಅವರು, ವಿದ್ಯಾರ್ಥಿಗಳು ತಾವೂ ಕಲಿತು ಇತರರರಿಗೂ ಕಲಿಸುವಂತೆ ತಿಳಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬೀನಂಡ ಎಸ್.ಪೂಣಚ್ಚ, ಆರೋಗ್ಯವಂತ ಜೀವನ ನಡೆಸಲು ಯೋಗ ತುಂಬಾ ಸಹಕಾರಿ. ವಿದ್ಯಾರ್ಥಿಗಳು ಪ್ರತಿನಿತ್ಯ ಯೋಗಾಭ್ಯಸ ಮಾಡುವಂತೆ ಸಲಹೆ ನೀಡಿದರು.…
ವಿರಾಜಪೇಟೆ ಜೂ.22 NEWS DESK : ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಯೋಗ ಪ್ರಶಸ್ತಿ ವಿಜೇತೆ ವಿ.ಕೆ.ಲಲಿತಾ ಮಾತನಾಡಿ, ದೇಹ ಮತ್ತು ಮನಸ್ಸು ಶುಭ್ರವಾಗಿಟ್ಟುಕೊಂಡು ಒತ್ತಡ ರಹಿತ ಜೀವನ ನಡೆಸುವಲ್ಲಿ ಯೋಗದ ಮಹತ್ವವನ್ನು ವಿವರಿಸಿದರು. ಯೋಗ ಶಿಕ್ಷಣದ ಉಪ ಸಂಯೋಜಕ ಕೆ.ಎಸ್.ರಾಜಶೇಖರ್ ನಿರ್ದೇಶನದಲ್ಲಿ ವಿದ್ಯಾರ್ಥಿ ಶಿಕ್ಷಕರಿಂದ ಯೋಗ ಪ್ರಾತ್ಯಕ್ಷಿಕೆ ನಡೆಯಿತು. ಉಪನ್ಯಾಸಕಾರದ ಡಾ. ಎಂ.ವಾಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಯೋಗ ಶಿಕ್ಷಣದ ಸಂಯೋಜಕರಾದ ಪದ್ಮಲತಾ ಹಾಗೂ ಎಲ್ಲಾ ಶಿಕ್ಷಕ ಶಿಕ್ಷಕೇತರ ವೃಂದದವರು ಹಾಗೂ ಎಲ್ಲಾ ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು. ಶಿಕ್ಷಣಾರ್ಥಿಗಳಾದ ಅನುಷಾ ಹಾಗೂ ಮನೋಜ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಮಡಿಕೇರಿ ಜೂ.22 NEWS DESK : ಶಾಸಕ ಸ್ಥಾನಕ್ಕೆ ಎಲ್ಲೂ ಚ್ಯುತಿ ಬಾರದ ರೀತಿಯಲ್ಲಿ ಜನಪರ ಮತ್ತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿರುವ ಅಜಾತ ಶತ್ರು ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸುವ ಮೂಲಕ ಬಿಜೆಪಿ ಕೊಡಗಿನ ಪ್ರಬುದ್ಧ ರಾಜಕಾರಣಕ್ಕೆ ಕಳಂಕ ತಂದಿದೆ ಎಂದು ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟನೆ ಮಾಡಲು ಸ್ವಾತಂತ್ರ್ಯವಿದೆ. ಆದರೆ ಯಾವುದೇ ತಪ್ಪು ಮಾಡದ, ಉತ್ತಮ ವ್ಯಕ್ತಿತ್ವದ ಜನನಾಯಕರೊಬ್ಬರನ್ನು ಗುರಿ ಮಾಡಿ ರಾಜಕೀಯ ಕಾರಣಕ್ಕಾಗಿ ಅಗೌರವ ತೋರುವುದು ಖಂಡನೀಯವೆಂದು ತಿಳಿಸಿದ್ದಾರೆ. ರಾಜ್ಯಕ್ಕೆ ಮುಖ್ಯಮಂತ್ರಿಯನ್ನು ನೀಡಿದ ಹೆಗ್ಗಳಿಕೆಯನ್ನು ಹೊಂದಿರುವ ಕೊಡಗು ಜಿಲ್ಲೆಯಲ್ಲಿ ಅನೇಕ ಪ್ರಬುದ್ಧ ರಾಜಕಾರಣಿಗಳಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಕೊಡಗು ತನ್ನದೇ ಆದ ಘನತೆಯನ್ನು ಉಳಸಿಕೊಂಡಿದೆ. ಇದೇ ಪ್ರಬುದ್ಧತೆ ಎ.ಎಸ್.ಪೊನ್ನಣ್ಣ ಅವರ ಬಳಿ ಇರುವುದರಿಂದಲೇ ಅವರು ಇಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿದ್ದಾರೆ. ಮುಂದೊಂದು ದಿನ ರಾಜಕೀಯವಾಗಿ ಉನ್ನತ ಸ್ಥಾನವನ್ನು ಅಲಂಕರಿಸಬಲ್ಲ ಎಲ್ಲಾ ಸಾಮಥ್ರ್ಯ ಹೊಂದಿರುವ ಪೊನ್ನಣ್ಣ ಅವರನ್ನು ಹೇಗಾದರು ಮಾಡಿ…






