ನಾಪೋಕ್ಲು ಜೂ.22 NEWS DESK : ಕಾವೇರಿ ರಿವರ್ ಸೇವಾ ಟ್ರಸ್ಟ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕರ್ನಾಟಕ ಜನಜಾಗೃತಿ ವೇದಿಕೆ, ಯೋಜನೆಯ ಶೌರ್ಯ ತಂಡ ಸಂಯುಕ್ತ ಆಶ್ರಯದಲ್ಲಿ ನಮಾಮಿ ಕಾವೇರಿ ಯೋಜನೆಗೆ ತಲಕಾವೇರಿ ಕ್ಷೇತ್ರದಲ್ಲಿ ಸಂಕಲ್ಪ ಮಾಡುವ ಮೂಲಕ ಚಾಲನೆ ನೀಡಲಾಯಿತು. ಕಾವೇರಿ ನದಿ ಸಂರಕ್ಷಣೆಯ ನಿಟ್ಟಿನಲ್ಲಿ ನೇರವಾಗಿ ಕಲುಷಿತ ತಪ್ಪಿಸುವ ಸಂಬಂಧ ನದಿ ತಟದ ಜನರಿಗೆ ನದಿ ಸಂರಕ್ಷಣೆಯ ಬಗ್ಗೆ ಅರಿವು ಜಾಗೃತಿ ಮೂಡಿಸುವ ಯೋಜನೆ ಇದಾಗಿದ್ದು, ಕ್ಷೇತ್ರದಲ್ಲಿ ಸಂಕಲ್ಪ ಮಾಡುವ ಮೂಲಕ ಭಾಗಮಂಡಲ, ನಾಪೋಕ್ಲು ವ್ಯಾಪ್ತಿಯಲ್ಲಿ ಗ್ರಾಮ ಮಟ್ಟದಲ್ಲಿ ನಮಾಮಿ ಕಾವೇರಿ ತಂಡಗಳನ್ನು ರಚಿಸಲಾಯಿತು. ಕಾವೇರಿ ರಿವರ್ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ಮಾತನಾಡಿ, ಜೀವನದಿ ಕಾವೇರಿ ಇತ್ತೀಚಿನ ದಿನಗಳಲ್ಲಿ ಹಲವಾರು ರೀತಿಯಲ್ಲಿ ಕಲುಷಿತಗೊಳ್ಳುವ ಮೂಲಕ ತನ್ನ ಮೂಲ ಅಸ್ತಿತ್ವವನ್ನು ಕಳೆದುಕೊಳ್ಳುವಂತಾಗಿದೆ. ಈ ಸಂಬಂಧ ಸ್ಥಳೀಯರ ಪಾಲ್ಗೊಳ್ಳುವಿಕೆ ಮೂಲಕ ನದಿಯ ಸಂರಕ್ಷಣೆಗಾಗಿ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶದೊಂದಿಗೆ ಗ್ರಾಮ ಮಟ್ಟದ ತಂಡಗಳನ್ನು ರಚಿಸುವ ಚಿಂತನೆ…
ಲೇಖಕ: admin
ನಾಪೋಕ್ಲು ಜೂ.22 NEWS DESK : ನಾಪೋಕ್ಲು ಹೋಬಳಿ ವ್ಯಾಪ್ತಿಯ ವಿವಿಧ ಶಾಲಾ ಕಾಲೇಜು, ಸಂಘ ಸಂಸ್ಥೆಗಳು, ಆಯುಷ್ ಆರೋಗ್ಯ ಕ್ಷೇಮ ಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಬಲ್ಲಮಾವಟಿ ಆಯುಷ್ ಆರೋಗ್ಯ ಕ್ಷೇಮ ಕೇಂದ್ರದದಲ್ಲಿ ಯೋಗಾಸಕ್ತರು, ಆರೋಗ್ಯಕಾಂಕ್ಷಿಗಳು,ಪ್ರೌಢಶಾಲಾ ವಿದ್ಯಾರ್ಥಿಗಳು, ಆಯುಷ್ ಆರೋಗ್ಯ ಕ್ಷೇಮ ಕೇಂದ್ರದ ಸಭಾಂಗಣದಲ್ಲಿ ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು. ಯೋಗ ತರಬೇತುದಾರರಾಗಿ ಕೆ.ಬಿ.ಪವಿತ್ರ,ಎನ್.ಎಸ್.ಪುಷ್ಪ ಪಾಲ್ಗೊಂಡಿದ್ದು, ವಿವಿಧ ಹಂತದ ಯೋಗ ಪ್ರದರ್ಶಿಸಿದರು. ಆಯುಷ್ ಆರೋಗ್ಯ ಕ್ಷೇಮ ಕೇಂದ್ರ ವೈದ್ಯಾಧಿಕಾರಿ ಡಾ.ಶುಭಾ ಮಾತನಾಡಿ, ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಸಹಕಾರಿ ಎಂದರು. ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಜೂ.23 NEWS DESK : ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ಅಂತಾರಾಷ್ಟ್ರಿಯ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಟ್ರಸ್ಟಿನ ಮಾಜಿ ಅಧ್ಯಕ್ಷ ಕಲ್ಯಾಟoಡ ಪ್ರೊ.ಪೂಣಚ್ಚ ಮಾತನಾಡಿ, ಉತ್ತಮ ಆರೋಗ್ಯ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಯೋಗ ಮುಖ್ಯ ಪಾತ್ರ ವಹಿಸುತ್ತದೆ ಎಂದರು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಮುಖ್ಯ ಶಿಕ್ಷಕಿ ಶಾರದಾ ದಿನದ ಮಹತ್ವದ ಬಗ್ಗೆ ಮಾತನಾಡಿ. ಮಕ್ಕಳಿಗೆ ಯೋಗದ ಬಗ್ಗೆ ಮಾರ್ಗದರ್ಶನ ನೀಡಿದರು.. ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಈ ಸಂದರ್ಭ ವಿದ್ಯಾರ್ಥಿಗಳು ಪ್ರಾಣಾಯಾಮ, ಸೂರ್ಯ ನಮಸ್ಕಾರ ಸೇರಿದಂತೆ ಹಲವು ಯೋಗಾಸನಗಳನ್ನು ಮಾಡಿದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜೂ.22 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿದ ಬಿಜೆಪಿ ಕ್ರಮ ಖಂಡನೀಯವೆಂದು ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಯಾವುದೇ ಕಾರಣವಿಲ್ಲದೆ ಒಬ್ಬ ಜನಪ್ರಿಯ ನಾಯಕ ಹಾಗೂ ನಿಸ್ವಾರ್ಥ ರಾಜಕಾರಣಿಯ ಪ್ರತಿಕೃತಿಯನ್ನು ದಹಿಸಿರುವುದು ಬಿಜೆಪಿ ಮಂದಿಯ ಕ್ಷುಲ್ಲಕ ರಾಜಕಾರಣಕ್ಕೆ ಸಾಕ್ಷಿಯಾಗಿದೆ. ಕೊಡಗು ಅತ್ಯಂತ ಪ್ರಬುದ್ಧ ರಾಜಕಾರಣಿಗಳಿಂದ ಕೂಡಿರುವ ಜಿಲ್ಲೆಯಾಗಿದೆ. ಆದರೆ ವಿರಾಜಪೇಟೆಯಲ್ಲಿ ನಡೆದ ಪ್ರತಿಭಟನೆ ಸಂದರ್ಭ ಪೊನ್ನಣ್ಣ ಅವರ ಪ್ರತಿಕೃತಿ ದಹಿಸುವ ಮೂಲಕ ಬಿಜೆಪಿ ಸಣ್ಣತನವನ್ನು ಪ್ರದರ್ಶಿಸಿದೆ ಎಂದು ಟೀಕಿಸಿದ್ದಾರೆ. ಜಾತ್ಯತೀತ ಮತ್ತು ಪಕ್ಷಾತೀತವಾಗಿ ಜನರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಿರುವ ಪೊನ್ನಣ್ಣ ಅವರು ವಿವಿಧ ಅಭಿವೃದ್ಧಿ ಕಾರ್ಯಗಳ ಮೂಲಕ ಜನಪ್ರಿಯತೆಯನ್ನು ಗಳಿಸುತ್ತಿದ್ದಾರೆ. ರಾಜ್ಯ ಮಟ್ಟದಲ್ಲಿ ಪ್ರಭಾವಿಯಾಗಿರುವ ಪೊನ್ನಣ್ಣ ಅವರ ಪರ ದಿನದಿಂದ ದಿನಕ್ಕೆ ಜನ ಬೆಂಬಲ ಹೆಚ್ಚಾಗುತ್ತಿದೆ. ಇದನ್ನು ಸಹಿಸದ ಬಿಜೆಪಿ, ಪ್ರತಿಭಟನೆಯ ನಿಯಮಗಳನ್ನು ಗಾಳಿಗೆ…
ನಾಪೋಕ್ಲು ಜೂ.22 NEWS DESK : ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಹಾಗೂ ನಾಪೋಕ್ಲು ಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಾಪೋಕ್ಲು ಭಗವತಿ ಸಮೂದಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಈ ಸಂದರ್ಭ ಮಾತನಾಡಿದ ಭಗವತಿ ದೇವಾಲಯದ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕುಲ್ಲೆಟಿರ ಗುರುವಪ್ಪ, ಮನುಷ್ಯ ಆರೋಗ್ಯವನ್ನು ಉತ್ತಮವಾಗಿ ಕಾಪಾಡುವಲ್ಲಿ ಯೋಗ ಸಹಕಾರಿಯಾಗಿದೆ. ನಿರಂತರವಾಗಿ ಯೋಗಾಭ್ಯಾಸ ಮಾಡವುದರಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ನೆಮ್ಮದಿಯನ್ನು ಕಾಯ್ದುಕೊಳ್ಳಬಹುದು ಎಂದರು. ಕಾರ್ಯಕ್ರಮದಲ್ಲಿ ಶಕ್ತಿ ಕೇಂದ್ರ ಪ್ರಮುಕ್ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಚಾಳಿಯಂಡ ಜಗದೀಶ್, ಮಡಿಕೇರಿ ಗ್ರಾಮಾಂತರ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಬಿ.ಎಂ.ಪ್ರತೀಪ, ಹಿಂದೂ ಸಂಘಟನೆಯ ಕಂಗಂಡ ಜಾಲಿ ಪೂವಪ್ಪ, ಸಾಬು ನಾಣಯ್ಯಟೋಳಿರ ಡಾಲಿ ಅಚ್ಚಪ್ಪ, ಲೋಕೇಶ, ಪ್ರಕಾಶ್, ಸೂರಜ್, ಅರೆಯಡ ರತ್ನ ಪೆಮ್ಮಯ್ಯ, ಚರಣ್ ಇನ್ನಿತರರು ಭಾಗವಹಿಸಿದ್ದರು.…
ಮಡಿಕೇರಿ ಜೂ.22 NEWS DESK : ಯೋಗ ವ್ಯಕ್ತಿಯನ್ನು ಆರೋಗ್ಯವಂತ ಮತ್ತು ಸದೃಢ ವ್ಯಕ್ತಿಯನ್ನಾಗಿಸುತ್ತದೆ ಎಂದು ವಿರಾಜಪೇಟೆ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕಾಡ್ಯಮಾಡ ಸುಬ್ಬಯ್ಯ ಹೇಳಿದರು. ಬಾಳೆಲೆ ಪ್ರತಿಭಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನುಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿನಿತ್ಯವೂ ಯೋಗಾಭ್ಯಾಸವನ್ನು ಮಾಡುವುದು ನಮ್ಮ ಆರೋಗ್ಯದ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅವರು ಯೋಗದ ಮಹತ್ವದ ಕುರಿತು ತಿಳಿಸಿದರು. ಶಾಲೆಯ ಮುಖ್ಯ ಶಿಕ್ಷಕರಾದ ಟಿ.ಸಿ.ಗೀತಾ ನಾಯ್ಡು ಮಾತನಾಡಿ, ಯೋಗವು ದೈನಂದಿನ ಉತ್ತಮ ಹವ್ಯಾಸಗಳಲ್ಲಿ ಒಂದು. ದಿನನಿತ್ಯದ ಯೋಗಭ್ಯಾಸ ನಮ್ಮ ದಿನವನ್ನು ಉತ್ಸಾಹ ಮತ್ತು ಲವಲವಿಕೆ ಇಂದ ಕೂಡಿರುವಂತೆ ಮಾಡುವುದು ದಿನವೂ ಯೋಗ ಮಾಡಿ ಉತ್ಸುಕರಾಗಿರುವುದು ಪ್ರತಿ ವ್ಯಕ್ತಿಗೂ ಅಗತ್ಯ ಎಂದು ನುಡಿದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕ ಮಾಚಂಗಡ ಅಯ್ಯಪ್ಪ, ಶಿಕ್ಷಕರುಗಳಾದ ಅಶ್ವಿನಿ ,ಯಶಸ್ವಿನಿ , ಸಾನಿಫಾ ಸೇರಿದಂತೆ ಇತರರು ಇದ್ದರು. ವಿದ್ಯಾರ್ಥಿಗಳು ವಿವಿಧ ಯೋಗಸನವನ್ನು ಮಾಡಿ ಗಮನ ಸೆಳದರು.
ಮಡಿಕೇರಿ ಜೂ.22 NEWS DESK : ಗೌಡಳ್ಳಿ ಬಿಜಿಎಸ್ ಪಬ್ಲಿಕ್ ಸ್ಕೂಲ್ ನಲ್ಲಿ ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶ್ರೀ ಆದಿ ಬಿಜಿಎಸ್ ಯೋಗ ಪರಿವರ್ತನಾ ದಿನ ಎಂಬ ಧ್ಯೇಯ ವಾಕ್ಯದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಗೌಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಅಜ್ಜಳ್ಳಿ, ದೈನಂದಿನ ಜೀವನದಲ್ಲಿ ಯೋಗ ಮತ್ತು ಪ್ರಾಣಾಯಾಮದ ಮಹತ್ವದ ಕುರಿತು ವಿವರಿಸಿದರು. ಆರ್ಟ್ ಆಫ್ ಲಿವಿಂಗ್ ನ ಯೋಗ ಶಿಕ್ಷಕಿ ರಾಗಿಣಿ ಹಾಗೂ ದೈಹಿಕ ಶಿಕ್ಷಕ ಗಣೇಶ್ ಪ್ರಸಾದ್ ಅವರು ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಮಾಡಿಸಿದರು. ವಿದ್ಯಾರ್ಥಿಗಳೊಂದಿಗೆ ಪೋಷಕರು ಕೂಡ ಭಾಗವಹಿಸಿದ್ದರು. ಮುಖ್ಯ ಶಿಕ್ಷಕಿ ರತ್ನ, ಸಹ ಶಿಕ್ಷಕರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ಮಡಿಕೇರಿ ಜೂ.22 NEWS DESK : ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಭಾರತದ್ದು ಎಂದು ಕೊಳ್ಳೇಗಾಲ ಸಮೀಪದ ಕಾಮಗೆರೆಯ ಸಂತ ಫ್ರಾನ್ಸಿಸ್ ಕ್ಷೇವಿಯರ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಮತ್ತು ಧರ್ಮಗುರುಗಳಾದ ರೆ.ಫಾ.ಐಸಾಕ್ ರತ್ನಾಕರ್ ಅಭಿಪ್ರಾಯಪಟ್ಟರು. ಶಾಲೆಯಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮತನಾಡಿ, ಭಾರತಕ್ಕೆ ಮಾತ್ರ ಸೀಮಿತವಾಗಿದ್ದ ಯೋಗವನ್ನು ಇಂದು ನಮ್ಮ ಪ್ರಧಾನಮಂತ್ರಿಗಳು ಇಡೀ ವಿಶ್ವಕ್ಕೆ ಪರಿಚಯಿಸಿದ್ದಾರೆ. ಆ ಮೂಲಕ ರಾಷ್ಟ್ರದ ಕೀರ್ತಿ ವಿಶ್ವಾಮಟ್ಟಕ್ಕೂ ಹಬ್ಬಿ, ಭಾರತವು ವಿಶ್ವಗುರುವಾಗಿದೆ ಎಂದ ಅವರು, ಯೋಗದ ಮಹತ್ವವನ್ನು ಮಕ್ಕಳಿಗೆ ಉದಾಹರಣೆ ಸಮೇತ ವಿವರಿಸಿದರು. ಈ ಸಂದರ್ಭ ಶಾಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಂದ ಯೋಗಾಭ್ಯಾಸವು ನಡೆಯಿತು. ಮಕ್ಕಳು ಅತೀ ಉತ್ಸಾಹಯಿಂದ ಬೆಳಿಗ್ಗೆ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರು. ಶಾಲಾ ಮುಖ್ಯೋಪಾಧ್ಯಾಯರಾದ ಅಂತೋಣಿ ರಾಜ್, ಸಹ ಶಿಕ್ಷಕರು, ಸಿಬ್ಬಂದಿಗಳು, ಪೋಷಕರು ಹಾಜರಿದ್ದರು.
ಮಡಿಕೇರಿ ಜೂ.22 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿಯನ್ನು ದಹಿಸಿದ ಬಿಜೆಪಿ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ಸಂಪಾಜೆ ಚೆಕ್ ಪೋಸ್ಟ್ ಬಳಿ ಪ್ರತಿಭಟನೆ ನಡೆಸಿತು. ಬಾಯಿಗೆ ಕಪ್ಪುಪಟ್ಟಿ ಧರಿಸಿ ಮೌನ ಮೆರವಣಿಗೆಯಲ್ಲಿ ಬಂದ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಬಿಜೆಪಿ ನಡೆಯನ್ನು ತೀವ್ರವಾಗಿ ಖಂಡಿಸಿದರು. ಬಿಜೆಪಿ ಮಂದಿ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ವಿಕೃತ ಮನಸ್ಥಿತಿಯ ಪ್ರತಿಕೃತಿಯನ್ನು ಸಾಂಕೇತಿಕವಾಗಿ ದಹಿಸಿ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ಸಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ಮಾತನಾಡಿ ಬಿಜೆಪಿ ಶಾಸಕ ಪೊನ್ನಣ್ಣ ಅವರ ಪ್ರತಿಕೃತಿ ದಹನ ಮಾಡುವ ಮೂಲಕ ತನ್ನ ಪ್ರಜ್ಞಾಹೀನ ಮನಸ್ಥಿತಿಯನ್ನು ಪ್ರದರ್ಶಿಸಿದೆ. ಪ್ರತಿಭಟನೆಯ ಹಿಂದಿನ ರಾಜಕೀಯ ದುರುದ್ದೇಶ ಬಯಲಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ವಲಯಾಧ್ಯಕ್ಷ ಸುರೇಶ್ ಪಿ.ಎಲ್, ಚೆಂಬು ಅಧ್ಯಕ್ಷ ರವಿ ಹೊಸೂರು, ಪೆರಾಜೆ ಅಧ್ಯಕ್ಷ ಜಯರಾಮ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಸಾಮಾಜಿಕ ಜಾಲತಾಣದ…
ಕಡಂಗ ಜೂ.22 NEWS DESK : ಅರಮೇರಿ ಎಸ್.ಎಮ್.ಎಸ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವಯೋಗ ದಿನಚರಣೆ ಆಚರಿಸಲಾಯಿತು. ಪದ್ಮಾಸನ, ವಜ್ರಾಸನ, ತ್ರಿಕೋನಾಸನ, ವೀರಭದ್ರಾಸನ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ನೌಫಲ್ ಕಡಂಗ






