ಕಡಂಗ ಜೂ.22 NEWS DESK : ಕೊಡಗು ಜಿಲ್ಲಾ ಸಖಾಫಿ ಕೌನ್ಸಿಲ್ ನ ಜಿಲ್ಲಾ ಮಟ್ಟದ ಸಂಗಮ ಹಾಗೂ ವಾರ್ಷಿಕ ಮಹಾಸಭೆ ಕೊಟ್ಟಮುಡಿ ಮರ್ಕಝುಲ್ ಹಿದಾಯ ಸಂಸ್ಥೆಯಲ್ಲಿ ನಡೆಯಿತು. ಪ್ರಮುಖರಾದ ಅಬ್ಬಸ್ ಸಖಾಫಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭ ಮಾತನಾಡಿದ ರಾಜ್ಯ ಸಮಿತಿ ನಾಯಕ ಮಹಮ್ಮದ್ ಅಲಿ ಸಖಾಫಿ ಅಶ್ ಅರಿಯ, ನಮ್ಮೆಲ್ಲರ ಆತ್ಮೀಯ ಗುರುಗಳಾದ ಶೈಖುನಾ ಸುಲ್ತಾನುಲ್ ಉಲಮಾ ಹಾಗೂ ಅವರ ಕಾರ್ಯಾಚರಣೆ, ಅವರೊಂದಿಗೆ ನಮಗಿರಬೇಕಾದ ಬಾಧ್ಯತೆ ಕುರಿತು ವಿವರಿಸಿದರು. ಜು.8ರಂದು ನಡೆಯುವ ಕರ್ನಾಟಕ ರಾಜ್ಯ ಸಖಾಫಿ ಬೃಹತ್ ಸಂಗಮ ಕಾರ್ಯಕ್ರಮದ ಯಶಸ್ವಿಗೆ ಕರೆ ನೀಡಿದರು. ಉಸ್ತುವಾರಿಗಳಾಗಿ ರಾಜ್ಯ ಸಮಿತಿ ಸದಸ್ಯರಾದ ಮುಹಮ್ಮದ್ ಅಲಿ ಸಖಾಫಿ, ಅಝೀಝ್ ಸಖಾಫಿ ಪರಪ್ಪು ಹಾಗೂ ಸತ್ತಾರ್ ಸಖಾಫಿ ಬೆಳ್ಳಾರೆ ಪಾಲ್ಗೊಂಡಿದ್ದರು. ಪ್ರಧಾನ ಕಾರ್ಯದರ್ಶಿ ಅಝೀಝ್ ಸಖಾಫಿ ಕೊಡ್ಲಿಪೇಟೆ 2020-24ರ ವರೆಗಿನ ವರ್ಷದ ವರದಿ ಮಂಡಿಸಿದರು. ಪ್ರಾರ್ಥನೆಯ ನೇತೃತ್ವವನ್ನು ರಾಜ್ಯ ಸಖಾಫಿ ಕೊಶಾಧಿಕಾರಿ ಸಯ್ಯದ್ ಇಲ್ಯಾಸ್ ಸಖಾಫಿ…
ಲೇಖಕ: admin
ಮಡಿಕೇರಿ ಜೂ.22 NEWS DESK : ಭಾರತೀಯ ಕಾಫಿಗೆ ವಿವಿಧ ಅವಕಾಶಗಳು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜಾಗತಿಕ ಮನ್ನಣೆ ಮತ್ತು ಬೇಡಿಕೆಯ ಹೊರತಾಗಿಯೂ ಭಾರತದಲ್ಲಿ ಕಾಫಿ ಸಮುದಾಯವು ಕಠಿಣ ಸವಾಲುಗಳನ್ನು ಎದುರಿಸುತ್ತಿದೆ. ಈ ಸಂಬಂಧವಾಗಿ, ಕಾಫಿ ಬೋರ್ಡ್ ಆಫ್ ಇಂಡಿಯಾವು 25 ಜೂನ್, 2024 ರಂದು ಬೆಳಿಗ್ಗೆ 10.30 ಗಂಟೆಗೆ ಕಾಫಿ ಪಾಲುದಾರರಿಗೆ ವರ್ಚುವಲ್ ಸಭೆಯನ್ನು ಆಯೋಜಿಸಿದೆ. ಸಭೆಯು ಮುಂದಿನ 10 ವರ್ಷಗಳ ಕಾಫಿ ಮಾರ್ಗ ನಕ್ಷೆಯನ್ನು ಯೋಜಿಸಲು ಮತ್ತು ಚರ್ಚಿಸಲು ಉದ್ದೇಶಿಸಿದೆ. ಆದ್ದರಿಂದ, ಈ ಸಭೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಮತ್ತು ಕಾಫಿ ಉದ್ಯಮದ ಸರ್ವಾಂಗೀಣ ಅಭಿವೃದ್ಧಿಗಾಗಿ ನಿಮ್ಮ ನವೀನ ಆಲೋಚನೆಗಳು ಮತ್ತು ಮೌಲ್ಯಯುತ ಸಲಹೆಗಳನ್ನು ನೀಡಲು ನಾನು ಕಾಫಿ ಪಾಲುದಾರರಲ್ಲಿ ವಿನಮ್ರವಾಗಿ ಮನವಿ ಮಾಡುತ್ತೇನೆ. >ಜನರ ಸಹಭಾಗಿತ್ವದೊಂದಿಗೆ ಕಾಫಿ ಸಮುದಾಯವನ್ನು ನಿರ್ಮಿಸೋಣ< (ಎಂ.ಜೆ.ದಿನೇಶ್ ಅಧ್ಯಕ್ಷರು, ಕಾಫಿ ಮಂಡಳಿ)
ಮೈಸೂರು ಜೂ.22 NEWS DESK : ಭಾರತೀಯರಾಗಿ ನಾವು ನಮ್ಮ ಗುರು ಪರಂಪರೆ ನೀಡಿರುವ ರೀತಿಯಲ್ಲಿಯೇ ಯೋಗವನ್ನು ಅನುಸರಿಸಬೇಕಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಓದುಗ ಪ್ರಕಾಶನ, ಮೈಸೂರು ಕಲ್ಚರಲ್ ಅಸೋಸಿಯೇಷನ್, ಭಾರತೀ ಯೋಗಧಾಮ ಸಹಯೋಗದಲ್ಲಿ ಮೈಸೂರಿನ ಉತ್ತನಹಳ್ಳಿಯ ವಿಜಯಗಿರಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಡೆದ ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಐತಿಚಂಡ ರಮೇಶ್ ಉತ್ತಪ್ಪ ಅವರ ‘ಯೋಗ ಸಂಗೀತ, ಮೈಸೂರು ಪರಂಪರೆ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. ‘‘ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಗೀತ ಮತ್ತು ಯೋಗಕ್ಕೆ ತನ್ನದೇ ಆದ ಪರಂಪರೆ ಇದೆ. ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರು 108 ಯೋಗಾಸನಗಳನ್ನು ಪ್ರದರ್ಶಿಸುತ್ತಿದ್ದರು. ಅದೇ ರೀತಿ ಮೈಸೂರಿನ ಯೋಗ ಗುರು ತಿರುಮಲೈ ಕೃಷ್ಣಮಾಚಾರ್ ದೇಶದಾದ್ಯಂತ ಯೋಗ ಪಸರಿಸಿದರು. ಮೂರು ಸಾವಿರಕ್ಕೂ ಹೆಚ್ಚು ಆಸನಗಳನ್ನು ಪರಿಚಯಿಸಿದರು. ಯೋಗದಲ್ಲಿ ದೇಹವನ್ನು ಸಹಜ ಸ್ಥಿತಿಯಿಂದ ಕ್ರಿಯಾಶೀಲತೆಗೆ ಹೇಗೆ ತೆಗೆದುಕೊಂಡು ಹೋಗಬೇಕೆಂಬುದನ್ನು ಹೇಳಿಕೊಟ್ಟಿದ್ದಾರೆ. ಮಾತ್ರವಲ್ಲದೇ ನಾವೆಲ್ಲರೂ ಭಾರತೀಯರಾಗಿ ಗುರು ಪರಂಪರೆ ನೀಡಿರುವ ರೀತಿಯಲ್ಲಿಯೇ…
ಮಡಿಕೇರಿ ಜೂ.22 NEWS DESK : ಸಿದ್ದಾಪುರ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಸಂಸ್ಥೆಯ ದೈಹಿಕ ಶಿಕ್ಷಕಿ ಮಾಲಿನಿ ವಿದ್ಯಾರ್ಥಿಗಳಿಗೆ ಯೋಗ ಪ್ರದರ್ಶನ ನಡೆಸಿ, ಯೋಗದಿಂದಾಗುವ ಪ್ರಯೋಜಗಳ ಕುರಿತು ಮಾಹಿತಿ ನೀಡಿದರು. ಬಿಜಿಎಸ್ ಪಬ್ಲಿಕ್ ಸ್ಕೂಲ್, ಬಿಜಿಎಸ್ ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಂಸ್ಥೆಯ ವ್ಯವಸ್ಥಾಪಕರಾದ ಮಂಜುನಾಥ್, ಪ್ರಾಂಶುಪಾಲರಾದ ಕಾಳೇಗೌಡ, ಬೋಧಕ ಹಾಗೂ ಬೋಧಕೇತರ ವರ್ಗದವರು ಯೋಗ ಆಚರಣೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಜೂ.22 NEWS DESK : ಮೂಲತಃ ಕಣಿವೆ ಗ್ರಾಮದ ವ್ಯಾಪಾರೋದ್ಯಮಿ ಕುಶಾಲನಗರದ ಕೆ.ಎಂ.ಶಂಕರನಾರಾಯಣ ಶೆಟ್ಟಿ( 85 ವರ್ಷ ) ಅವರು ಶನಿವಾರ ( ಜೂನ್ 22 ರಂದು ) ಕುಶಾಲನಗರದ ಐ.ಬಿ.ರಸ್ತೆಯ ಓಡಿಸ್ಸಿ ಕಲರ್ ಲ್ಯಾಬ್ ಸ್ಟುಡಿಯೋ ಕಟ್ಟಡದ ತಮ್ಮ ಮನೆಯಲ್ಲಿ ಬೆಳಿಗ್ಗೆ 5.00 ಗಂಟೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತರು ತಮ್ಮ ಪತ್ನಿ ಹಾಗೂ ತಮ್ಮ ಮಕ್ಕಳಾದ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ನಾಗೇಶ್( ಚೇಂಬರ್ ಆಫ್ ಕಾಮರ್ಸ್ ನ ಕಾರ್ಯದರ್ಶಿ), ವರ್ತಕರಾದ ಕೆ.ಎಸ್.ಮಹೇಶ್( ಹೆಬ್ಬಾಲೆ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ), ಕೆ.ಎಸ್.ಮಧು ಹಾಗೂ ಮಾಲಾ ಅವರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಮಧ್ಯಾಹ್ನ 2.00 ಗಂಟೆಗೆ ಕುಶಾಲನಗರ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮಡಿಕೇರಿ ಜೂ.22 NEWS DESK : ಕೊಣಂಜಗೇರಿ ಪಂಚಾಯಿತಿ ವ್ಯಾಪ್ತಿಯ ಪಾರಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಆಯುಷ್ ಆರೋಗ್ಯ ಮತ್ತು ಯೋಗ ಕೇಂದ್ರದ ಯೋಗ ತರಬೇತುದಾರರಾದ ಕನ್ನಿಕಾ, ಮತ್ತು ಪಾರಾಣೆ ಸರ್ಕಾರಿ ಹೋಮಿಯೋಪತಿ ವೈದ್ಯೆ ಡಾ. ವೃಂದ ಯೋಗದ ಮೂಲಕ ದೇಹ, ಆರೋಗ್ಯ ಮತ್ತು ಜೀವನ ಸಮತೋಲನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಕೊಣಂಜಗೇರಿ ಗ್ರಾ.ಪಂ ಅಧ್ಯಕ್ಷ ಪಾಡೆಯಂಡ ಕಟ್ಟಿಕುಶಾಲಪ್ಪ, ಮುಖ್ಯೋಪಾಧ್ಯಾಯರಾದ ವೇದ ಪ್ರಸಾದ್, ಸಹಶಿಕ್ಷಕ ಕಿಶೋರ್ ಕುಮಾರ್, ಅತಿಥಿ ಶಿಕ್ಷಕರಾದ ಸುಮಿತ್ರ, ಮಂಜುಳ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕೂಡಿಗೆ ಜೂ.22 NEWS DESK : ಯೋಗವು ಮಾನವನ ದೇಹವನ್ನು ಶಾರೀರಿಕವಾಗಿ, ಆಧ್ಯಾತ್ಮಿಕವಾಗಿ, ಬೌದ್ಧಿಕವಾಗಿ ಸಯೋಜನೆಗೊಳಿಸಿ ಸಮತೋಲನದಲ್ಲಿರಿಸಿ ಮನುಷ್ಯನನ್ನು ರೋಗಮುಕ್ತಗೊಳ್ಳುತ್ತದೆ ಎಂದು ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪುಷ್ಪ ಹೇಳಿದರು. ಕೂಡಿಗೆಯ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲಾ ಸಭಾಂಗಣದಲ್ಲಿ ಏರ್ಪಡಿಸಿದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶಾದ್ಯಂತ ಪ್ರಪಂಚದಾದ್ಯಂತ ಯೋಗ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಯೋಗ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿತ್ಯದ ದಿನಚರಿಯಾಗಬೇಕು. ಯೋಗದಿಂದ ಮಾನಸಿಕ ದೈಹಿಕವಾಗಿ ಸದೃಢವಾಗುವುದರ ಮೂಲಕ ಸ್ವಾಸ್ಥ ಸಮಾಜ ನಿರ್ಮಾಣಕ್ಕೆ ನಾಂದಿಯಾಗುತ್ತದೆ ಎಂದು ತಿಳಿಸಿದರು. ಶಿಕ್ಷಕ ಸೋಮಯ್ಯ ಮಾತನಾಡಿ. ಊಟ ಬಲ್ಲವನಿಗೆ ರೋಗವಿಲ್ಲ ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಹಿರಿಯರ ನಾನ್ನುಡಿಯಂತೆ ಯೋಗ ಮತ್ತು ಧ್ಯಾನ ಮಾಡುವುದರಿಂದ ಸದೃಢ ಆರೋಗ್ಯವಂತ ಜೀವನ ನಡೆಸಬಹುದು ಎಂಬ ಸತ್ಯವನ್ನು ಅರಿತು ಪ್ರತಿದಿನವೂ ಯೋಗ ಮಾಡಿ ರೋಗ ರುಜಿನಗಳಿಂದ ದೂರವಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಶಾಲಾ ಶಿಕ್ಷಕಿ ಕುಸುಮ ಮಾತನಾಡಿ, ವಿಶ್ವಕ್ಕೆ ಯೋಗ ಮತ್ತು…
ಸುಂಟಿಕೊಪ್ಪ ಜೂ.22 NEWS DESK : ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜು ಆವರಣದಲ್ಲಿ ಕಾಲೇಜು ವಿದ್ಯಾರ್ಥಿಗಳು ವಿವಿಧ ಯೋಗಾಸನ ಮಾಡಿ ಗಮನ ಸೆಳೆದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಶ್ರೀಲತಾ ಯೋಗಭ್ಯಾಸದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ವಿದ್ಯಾರ್ಥಿಗಳು ದೈಹಿಕ, ಮಾನಸಿಕವಾಗಿ ಸದೃಢರಾಗಿ ಹಾಗೂ ಏಕಾಗ್ರತೆಯನ್ನು ಸಾಧಿಸಲು ಪ್ರತಿದಿನ ಯೋಗಭ್ಯಾಸ ಮಾಡುವುದು ಒಳಿತು ಎಂದರು. ಸ್ವಸ್ಥ ಸಮಾಜ ನಿರ್ಮಾಣಕ್ಕೆ ಯೋಗಭ್ಯಾಸವು ಇಂದಿನ ದಿನಮಾನಗಳಲ್ಲಿ ಅಗತ್ಯವಾಗಿದೆ ಎಂದು ನುಡಿದರು. ಮಾರ್ಗದರ್ಶಕರಾದ ಅಭಿಷೇಕ್ ಮಾತನಾಡಿ ದೇಹ ಮನಸ್ಸನ್ನು ಸಂಯೋಜಿಸುವ ಶೇಷ್ಠ ವಿದ್ಯೆಯೇ ಯೋಗಭ್ಯಾಸ ಎಂದು ನುಡಿದ ಅವರು ಪತಂಜಲಿ ಮಹರ್ಷಿಯ ಕೊಡುಗೆಯನ್ನು ಧನ್ಯತಾ ಭಾವದಿಂದ ಸ್ಮರಿಸಿದರು. ರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ತುತ್ತಾಗಿ ಯೋಗಭ್ಯಾಸದ ದಿನಾಚರಣೆಯನ್ನು ಅಳವಡಿಸಿಕೊಳ್ಳಬೇಕಾಗಿರುವುದರ ಮಹತ್ವ ತಿಳಿಸಿದರು. ನಂತರ ವಿದ್ಯಾರ್ಥಿಗಳಿಗೆ ವೃಕ್ಷಾಸನ, ತಾಡಾಸನ, ವಜ್ರಾಸನ, ಕಪಾಲಭಾತಿ, ಸೂರ್ಯನಮಸ್ಕಾರ ಇತ್ಯಾದಿ ಕೆಲವು ಸರಳ ಆಸನಗಳನ್ನು ಮಾಡಿ ತೋರಿಸಿ, ವಿದ್ಯಾರ್ಥಿಗಳು ಅನುಸರಿಸುವಂತೆ ಹೇಳಿದರು.
ಮಡಿಕೇರಿ ಜೂ.22 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗಮೇಳವು ಜೂ.27 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ನಡೆಯಲಿದೆ. ಉದ್ಯೋಗ ಮೇಳದಲ್ಲಿ ಪ್ಯಾಲೇಸ್ ಟೊಯಾಟೋ, ಕುಶಾಲನಗರ, ಅಟೋಲೈವ್ ಮಲ್ಟಿನ್ಯಾಷನಲ್ ಕಂಪನಿ, ಮೈಸೂರು, ಕ್ಲಬ್ ಮಹೀಂದ್ರ, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಪೆಂಟಟೆಕ್, ಮಡಿಕೇರಿ, ಕಾವೇರಿ ಹೋಂಡಾ, ಕುಶಾಲನಗರ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ಸ್ವಯಂ-ವಿವರ (ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಈ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ…
ಮಡಿಕೇರಿ ಜೂ.21 NEWS DESK : ಸಿದ್ದಾಪುರದ ಕಾಫಿ ತೋಟ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ತಕ್ಷಣ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಜೂ.24 ರಂದು ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಸಿಎನ್‌ಸಿ ವತಿಯಿಂದ ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಶಾಂತಿಯುತ ಮಾನವ ಸರಪಳಿ ನಿರ್ಮಿಸಿ ಕೊಡವ ಲ್ಯಾಂಡ್ ನ ರಕ್ಷಣೆಗಾಗಿ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಭೂಮಾಫಿಯಾಗಳು ಹಾಗೂ ರಾಜಕೀಯ ಬೆಂಬಲಿತರು ಕೊಡಗಿನ ಕಾವೇರಿ ಜಲಾನಯನ ಪ್ರದೇಶದ ಭೂಮಿಗಳನ್ನು ದೊಡ್ಡ ಮಟ್ಟದಲ್ಲಿ ಖರೀದಿಸುತ್ತಿದ್ದು, ಕಪ್ಪು ಹಣದ ಚಲಾವಣೆಯಾಗುತ್ತಿದೆ. ಬೃಹತ್ ಕಾಫಿ ತೋಟಗಳ ಖರೀದಿಯ ನಂತರ ಅಕ್ಕಪಕ್ಕದ ಸಣ್ಣ ಹಿಡುವಳಿದಾರರ ಭೂಮಿಯನ್ನು ಹಣದ ಆಮಿಷವೊಡ್ಡಿ ಕಬಳಿಸಲಾಗುತ್ತಿದೆ. ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮೂಲಕ ರೆಸಾರ್ಟ್ಗಳು, ದೈತ್ಯಾಕಾರದ ವಿಲ್ಲಾಗಳು, ಲೇಔಟ್ ಗಳು, ಮನೆಗಳು ಟೌನ್ ಶಿಪ್ ಗಳು, ವಾಣಿಜ್ಯ…






