ಲೇಖಕ: admin

ಸೋಮವಾರಪೇಟೆ ಜೂ.21 NEWS DESK : ಸೋಮವಾರಪೇಟೆಯ ನಿರಂತರ ಯೋಗ ಕೇಂದ್ರ, ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ,ಒಕ್ಕಲಿಗರ ಪ್ರಗತಿಪರ ಮಹಿಳಾ ವೇದಿಕೆ, ಆಯುಷ್ ಇಲಾಖೆ, ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆ ಹಾಗು ಯೋಗ ಕರ್ಮಸ್ಯ ಕೌಶಲ ಕೇಂದ್ರ ವತಿಯಿಂದ ಸೋಮವಾರಪೇಟೆಯ ಮಾನಸ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ದಿನದ ಮಹತ್ವದ ಕುರಿತು ಯೋಗ ಶಿಕ್ಷಕರಾದ ಕಿಬ್ಬೆಟ್ಟ ಗಣೇಶ್, ಪ್ರಶಾಂತ್ ಹಾಗು ಆಯುಷ್ ಇಲಾಖೆ ವೈದ್ಯರಾದ ಶ್ವೇತಾ ಮಾತನಾಡಿದರು.

Read More

ಸೋಮವಾರಪೇಟೆ ಜೂ.21 NEWS DESK : ಶಾಲಾ ಶಿಕ್ಷಣ ಇಲಾಖೆ ಜಂಟಿ ನಿರ್ದೆಶಕರಾದ ಗೀತಾಂಬ ಅವರು ಸೋಮವಾರಪೇಟೆ ತಾಲೂಕಿನ ಸರಕಾರಿ ಪದವಿಪೂರ್ವ ಕಾಲೇಜಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ನಂತರ ನೇರುಗಳಲೆ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಶಾಲಾ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಸಂಪನ್ಮೂಲ ಸಮನ್ವಯಾಧಿಕಾರಿ ಹೇಮಂತ್ ಇದ್ದರು.

Read More

ಸೋಮವಾರಪೇಟೆ ಜೂ.21 NEWS DESK : ಶಾಲಾ ಶಿಕ್ಷಣ ಇಲಾಖೆ, ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ, ಸರಕಾರಿ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಇಲ್ಲಿನ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಿದರು. ವಿಶ್ವ ಯೋಗ ದಿನದ ಮಹತ್ವದ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಮಾತನಾಡಿ, ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಸಹಕಾರಿ. ವಿದ್ಯಾರ್ಥಿಗಳು ನಿರಂತರವಾಗಿ ಯೋಗಾಭ್ಯಾಸ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು. ಯೋಗದ ಪ್ರಯೋಜನ ಕುರಿತು ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಬೆಳ್ಯಪ್ಪ, ಉಪನ್ಯಾಸಕಿ ತಿಲೋತ್ತಮೆ ಮಾತನಾಡಿದರು. ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಮಿಲ್‌ಡ್ರೆಡ್ ಗೋನ್ಸಾಲ್‌ವೇಸ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಗೋವಿಂದೇಗೌಡ ಇದ್ದರು.

Read More

ಸೋಮವಾರಪೇಟೆ ಜೂ.21 NEWS DESK : ಆಕಸ್ಮಿಕ ಬೆಂಕಿಯಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಶುಕ್ರವಾರ ಮಧ್ಯಾಹ್ನ ಹಾನಗಲ್ಲು ಬಾಣೆಯಲ್ಲಿ ಸಂಭವಿಸಿದೆ. ಲೀಲಾವತಿ ಎಂಬವರಿಗೆ ಸೇರಿದ ಮನೆಯಾಗಿದ್ದು, ಸೊಸೆಯೊಂದಿಗೆ ವಾಸವಾಗಿದ್ದರು. ಸೊಸೆ ಪಟ್ಟಣಕ್ಕೆ ತೆರಳಿದ್ದಾಗ, ಲೀಲಾವತಿ ಅವರು ಮನೆಯ ಹೊರಗೆ ಕೆಲಸ ಮಾಡುತ್ತಿದ್ದ ಸಂದರ್ಭ ಇದ್ದಕ್ಕಿದ್ದಂತೆ ಮನೆಗೆ ಬೆಂಕಿ ಹತ್ತಿಕೊಂಡಿದೆ. ಟಿ.ವಿ. ಫ್ರಿಡ್ಜ್, ಬಟ್ಟೆ ಇತರ ಸಾಮಾಗ್ರಿಗಳು ಸುಟ್ಟ ಹೋಗಿವೆ. ತುಂಬ ಹಳೆಯದಾದ ಹೆಂಚಿನ ಮನೆಯಾಗಿದ್ದು, ಮರಮುಟ್ಟುಗಳು ಗೆದ್ದಲು ಹಿಡಿದಿದ್ದ ಪರಿಣಾಮ, ಬೇಗನೆ ಬೆಂಕಿ ಹತ್ತಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದರು. ಸ್ಥಳಕ್ಕೆ ಆಗ್ನಿಶಾಮಕ ದಳದ ಸಿಬ್ಬಂದಿ ತೆರಳಿ ಬೆಂಕಿಯನ್ನು ಆರಿಸಿದ್ದಾರೆ. ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ. ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More

ಮಡಿಕೇರಿ ಜೂ.21 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿಯನ್ನು ರಾಜಕೀಯ ದುರುದ್ದೇಶದಿಂದ ದಹಿಸಿದ ಬಿಜೆಪಿ ಮಂದಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣದ ಜಿಲ್ಲಾ ಉಪಾಧ್ಯಕ್ಷ ಆರ್.ಪಿ.ಚಂದ್ರಶೇಖರ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಯಾವುದೇ ಕಾರಣವಿಲ್ಲದೆ ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿದ ಪ್ರಕರಣ ಹಿಂದೆ ರಾಜಕೀಯ ದುರುದ್ದೇಶ ಇರುವುದು ಸ್ಪಷ್ಟವಾಗಿದೆ. ಶುದ್ಧ ರಾಜಕಾರಣದಿಂದ ಜನರ ಮನಗೆದ್ದು ಪೊನ್ನಣ್ಣ ಅವರನ್ನು ರಾಜಕೀಯವಾಗಿ ಎದುರಿಸಲಾಗದವರು ಪ್ರತಿಕೃತಿ ದಹಿಸಿ ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಕಳಕಳಿ ಇರುವ ಉತ್ತಮ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪೊನ್ನಣ್ಣ ಅವರನ್ನು ಇಡೀ ರಾಜ್ಯದ ರಾಜಕೀಯ ಕ್ಷೇತ್ರವೇ ಗೌರವದಿಂದ ಕಾಣುತ್ತಿದೆ. ಆದರೆ ಅವರ ತವರು ಜಿಲ್ಲೆಯಲ್ಲೇ ಬಿಜೆಪಿ ಮಂದಿ ಅಗೌರವ ತೋರುವ ಮೂಲಕ ಕೊಡಗಿನ ಜನರನ್ನು ಅವಮಾನಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎ.ಎಸ್.ಪೊನ್ನಣ್ಣ ಅವರು ತಮ್ಮ ದಕ್ಷ ಆಡಳಿತ ಮತ್ತು…

Read More

ಮಡಿಕೇರಿ ಜೂ.21 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಹಾಗೂ ಸದಸ್ಯರಾದ ಚಂದ್ರಶೇಖರ ಪೆರಾಲು, ತೇಜಕುಮಾರ್ ಕುಡೆಕಲ್, ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಡಾ.ಎನ್.ಎ.ಜ್ಞಾನೇಶ್ ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಪುಷ್ಪಗುಚ್ಛ ನೀಡಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಎರಡು ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರನ್ನು ಅಭಿನಂದಿಸಿದರು. ಕೊಡಗು ಜಿಲ್ಲೆಯಲ್ಲಿ ಎರಡು ಅಕಾಡೆಮಿಗಳನ್ನು ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸುವಂತೆ ಪೊನ್ನಣ್ಣ ಸಲಹೆ ನೀಡಿದರು. ಕೊಡವ ಮತ್ತು ಅರೆಭಾಷೆಗಳಿಗೆ ತನ್ನದೇ ಆದ ಇತಿಹಾಸ ಮತ್ತು ವೈವಿಶಿಷ್ಟತೆ ಇದ್ದು, ಕೊಡವ ಮತ್ತು ಅರೆಭಾಷೆ ಬೆಳವಣಿಗೆಗೆ ಹೆಚ್ಚಿನ ಪರಿಶ್ರಮ ಅಗತ್ಯ. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕಾರ್ಯ ಪ್ರವೃತ್ತರಾಗುವಂತೆ ಶಾಸಕರು ಸಲಹೆ ನೀಡಿದರು.

Read More

ಮಡಿಕೇರಿ ಜೂ.21 NEWS DESK : `ನೀಟ್’ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಶಂಕೆ ಇದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಮರು ಪರೀಕ್ಷೆಯಾಗಬೇಕು ಎಂದು ಒತ್ತಾಯಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ (ಚೌಕಿ) ವೃತ್ತದಿಂದ ಮೆರವಣಿಗೆ ಮೂಲಕ ಸಾಗಿದ ಒಕ್ಕೂಟದ ಪ್ರಮುಖರು ಹಾಗೂ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಮಾಯಿಸಿ ಬೇಡಿಕೆಯ ಈಡೇರಿಕೆಗಾಗಿ ಘೋಷಣೆಗಳನ್ನು ಕೂಗಿ, ಮರು ಪರೀಕ್ಷೆ ನಡೆಸುವಂತೆ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಎಂ.ಅಬ್ದುಲ್ ರಾಶೀದ್, ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಭಾರೀ ಅಕ್ರಮ ನಡೆದಿರುವ ಸಾಧ್ಯತೆ ಇದೆ. ನೀಟ್ ಪರೀಕ್ಷೆಯ ಪಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಾಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟ್ ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ಕಳೆದ ಸಾಲಿನ ನೀಟ್ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಬೆರಳೆಣಿಕೆಯ ವಿದ್ಯಾರ್ಥಿಗಳಿಗೆ ಬಂದಿದ್ದರೆ, ಈ ಬಾರಿ ಒಟ್ಟು 67 ವಿದ್ಯಾರ್ಥಿಗಳಿಗೆ ಮೊದಲ…

Read More

ಮಡಿಕೇರಿ ಜೂ.21 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಹಾಗೂ ಸದಸ್ಯರಾದ ಚಂದ್ರಶೇಖರ ಪೆರಾಲು, ತೇಜಕುಮಾರ್ ಕುಡೆಕಲ್, ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಡಾ.ಎನ್.ಎ.ಜ್ಞಾನೇಶ್ ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಪುಷ್ಪಗುಚ್ಛ ನೀಡಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಎರಡು ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರನ್ನು ಅಭಿನಂದಿಸಿದರು. ಕೊಡಗು ಜಿಲ್ಲೆಯಲ್ಲಿ ಎರಡು ಅಕಾಡೆಮಿಗಳನ್ನು ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸುವಂತೆ ಪೊನ್ನಣ್ಣ ಸಲಹೆ ನೀಡಿದರು. ಕೊಡವ ಮತ್ತು ಅರೆಭಾಷೆಗಳಿಗೆ ತನ್ನದೇ ಆದ ಇತಿಹಾಸ ಮತ್ತು ವೈವಿಶಿಷ್ಟತೆ ಇದ್ದು, ಕೊಡವ ಮತ್ತು ಅರೆಭಾಷೆ ಬೆಳವಣಿಗೆಗೆ ಹೆಚ್ಚಿನ ಪರಿಶ್ರಮ ಅಗತ್ಯ. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕಾರ್ಯ ಪ್ರವೃತ್ತರಾಗುವಂತೆ ಶಾಸಕರು ಸಲಹೆ ನೀಡಿದರು.

Read More

ಮಡಿಕೇರಿ ಜೂ.21 NEWS DESK : ಇದೇ ಜೂ.27 ರಿಂದ ಜು.2 ರವರೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೈನಿಕ ಕಲ್ಯಾಣ ಇಲಾಖೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯು ಒಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು, ಯಾರಿಗೂ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು. ವಸತಿ ಊಟೋಪಚಾರ ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸ್ಪಷ್ಟ ನಿರ್ದೇಶನ ನೀಡಿದರು. ಸೈನಿಕ ಭರ್ತಿ ಕಾರ್ಯಾಲಯದ ನಿರ್ದೇಶಕರಾದ ಕರ್ನಲ್ ಗೌರವ್ ತಾಪ ಮಾತನಾಡಿ, ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕಿದೆ. ಲೋಕೋಪಯೋಗಿ, ಸೆಸ್ಕ್, ಪದವಿ ಪೂರ್ವ ಶಿಕ್ಷಣ, ಅಗ್ನಿಶಾಮಕ ದಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವೈದ್ಯಕೀಯ ಶಿಕ್ಷಣ, ಸೆಸ್ಕ್, ಬಿಎಸ್‍ಎನ್‍ಎಲ್ ಹೀಗೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಸಹಕಾರ ನೀಡುವಂತೆ ನಿರ್ದೇಶನ…

Read More

ಮಡಿಕೇರಿ ಜೂ.21 NEWS DESK : ದೇಹ ಮತ್ತು ಮನಸ್ಸಿನ ನಡುವೆ ಸಮನ್ವಯ ಸಾಧಿಸಲು ಯೋಗಾಭ್ಯಾಸ ಅಗತ್ಯವಾಗಿದೆ ಜಿಲ್ಲಾಧಿಕಾರಿ ವೆಂಕಟ್‍ರಾಜಾ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೊಡಗು ವೈದ್ಯಕೀಯ ಶಿಕ್ಷಣ, ಜಿಲ್ಲಾ ಪೊಲೀಸ್, ಯುವ ಸಬಲೀಕರಣ ಮತ್ತು ಕ್ರೀಡೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಸಮಾಜ ಕಲ್ಯಾಣ, ಪದವಿ ಪೂರ್ವ ಶಿಕ್ಷಣ, ಎನ್‍ಎಸ್‍ಎಸ್ ಮತ್ತು ಎನ್‍ಸಿಸಿ ಘಟಕ, ನೆಹರು ಯುವ ಕೇಂದ್ರ, ಕೊಡಗು ಯುವ ಒಕ್ಕೂಟ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಯೋಗ ಭಾರತಿ, ಪ್ರಣವ ಯೋಗ ಕೇಂದ್ರ, ಪತಂಜಲಿ ಯೋಗ ಶಿಕ್ಷಣ, ಆರ್ಟ್ ಆಪ್ ಲಿವಿಂಗ್, ಸ್ಕೌಟ್ಸ್ ಮತ್ತು ಗೈಡ್ಸ್, ನೀಮಾ ಸಂಸ್ಥೆ ಹೀಗೆ ಸರ್ಕಾರಿ ಮತ್ತು ಸರ್ಕಾರೇತರ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ `ಯೋಗ ಫಾರ್ ಸೆಲ್ಫ್ ಅಂಡ್ ಸೊಸೈಟಿ’ ಹೆಸರಿನಲ್ಲಿ ನಗರದ ಗೌಡ ಸಮಾಜದಲ್ಲಿ ನಡೆದ ಅಂತರರಾಷ್ಟ್ರೀಯ 10ನೇ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯವೇ ಭಾಗ್ಯವಾಗಿದ್ದು, ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗ ಸಹಕಾರಿಯಾಗಿದೆ…

Read More