ಲೇಖಕ: admin

ಮಡಿಕೇರಿ ಮೇ 12 NEWS DESK : ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಾಪೋಕ್ಲು ಸಮೀಪ ಬಲ್ಲಮಾವಟಿಯಲ್ಲಿ ನಡೆದಿದೆ. ಅಯ್ಯಂಗೇರಿ ನಿವಾಸಿಗಳು ಗಾಯಗೊಂಡವರು ಎಂದು ತಿಳಿದು ಬಂದಿದೆ. (ವರದಿ : ದುಗ್ಗಳ ಸದಾನಂದ)

Read More

ಕುಶಾಲನಗರ ಮೇ 12 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಂಗ  ಸಂಸ್ಥೆಯಾದ ಕದಳಿ ವೇದಿಕೆಗೆ ಕೊಡಗು  ಜಿಲ್ಲಾಧ್ಯಕ್ಷರಾಗಿ ಸೋಮವಾರಪೇಟೆಯ ಜಲಜಾ ಶೇಖರ್ ಅವರನ್ನು ನೇಮಕ ಮಾಡಲಾಗಿದೆ. ಕೊಡಗು ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಕದಳಿ ವೇದಿಕೆಗೆ ಪದಾಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಶರಣ ಸಾಹಿತ್ಯ ಹಾಗೂ ಸಂಸ್ಕ್ರತಿಯನ್ನು ಬೆಳೆಸಬೇಕೆಂದು ಅಖಿಲ ಭಾರತ  ಶರಣ ಸಾಹಿತ್ಯ ಪರಿಷತ್ತಿನ ರಾಜ್ಯ ಸಂಚಾಲಕರಾದ ಸುಶೀಲಾ ಸೋಮಶೇಖರ್ ನೇಮಕ ಮಾಡಿದ್ದಾರೆ ಎಂದು ಕೊಡಗು  ಜಿಲ್ಲಾ ಶಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಶಾಲನಗರ ಮೇ 12 NEWS DESK : ಕೊಡಗು ಜಿಲ್ಲೆಯ ವಾತಾವರಣ ಪ್ರವಾಸೋದ್ಯಮಕ್ಕೆ ಪೂರಕವಾಗಿದೆ ಎಂದು ಕೊಡಗು ಜಿಲ್ಲಾ ಚೇಂಬರ್ ಅಪ್ ಕಾಮರ್ಸ್ ನ ಉಪಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರ ಚೇಂಬರ್ ಅಪ್ ಕಾಮರ್ಸ್ ವತಿಯಿಂದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ  ಆಯೋಜಿಸಿದ್ದ ವರ್ತಕರ ಸ್ನೇಹ ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಸಿಗರಿಗೆ ಉತ್ತಮ ಸೌಲಭ್ಯ ಸೇವೆಗಳನ್ನು ಒದಗಿಸಿದಲ್ಲಿ ಜಿಲ್ಲೆಯ ಉದ್ಯಮಗಳ ಬೆಳವಣಿಗೆ ಸಾಧ್ಯ ಎಂದರು. ಕುಶಾಲನಗರದಲ್ಲಿ ಮೂರು ದಶಕಗಳಿಂದ ಚೇಂಬರ್ ಅಪ್ ಕಾಮರ್ಸ್ ತನ್ನ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ. ಹಿಂದಿನ ಕಾಲದಲ್ಲಿ ಸರ್ಕಾರಿ ಅಧಿಕಾರಿಗಳು ವರ್ತಕರಿಗೆ ಅನಾವಶ್ಯಕ ಕಿರುಕುಳ ನೀಡಿ ವರ್ತಕರಿಗೆ ಸಮಸ್ಯೆಗಳನ್ನು ಉಂಟು ಮಾಡುತ್ತಿದ್ದರು. ಅಂತಹ ಸಂದರ್ಭದಲ್ಲಿ ಚೇಂಬರ್ ಮೂಲಕ ವರ್ತಕರ ಪರವಾಗಿ ನಿಂತು ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿದಿದೆ ಎಂದು ನೆನಪಿಸಿದರು. ಕೊಡಗು ಜಿಲ್ಲಾ ಚೇಂಬರ್ ಅಪ್ ಕಾಮರ್ಸ್ ನ ನಿರ್ದೇಶಕ ಎಸ್.ಕೆ.ಸತೀಶ್ ಮಾತನಾಡಿ, ನಿರಂತರ ಕೆಲಸಗಳ ಒತ್ತಡದ ಜಂಜಾಟದಲ್ಲಿರುವ ಉದ್ಯಮಿಗಳು ವರ್ತಕರ ದಿನಾಚರಣೆಯನ್ನು ಆಚರಿಸುವಂತಾಗಬೇಕು. ಕುಶಾಲನಗರ ಸ್ಥಾನಿಯ…

Read More

ಮಡಿಕೇರಿ ಮೇ 12 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ನಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಅಂತಿಮ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕ್ರೀಡಾಕೂಟಗಳಲ್ಲಿ ಕಾಣುವ ಸಾಮರಸ್ಯ ಸಮಾಜದಲ್ಲೂ ಕಾಣಬೇಕು, ಸಾಮರಸ್ಯವನ್ನು ಬೆಳೆಸಲು ಎಲ್ಲರೂ ಕೈಜೋಡಿಸಬೇಕು ಎಂದರು. ಕೊಡಗು ಜಿಲ್ಲೆಯಲ್ಲಿ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹದಾಯಕವಾಗಿ ಹೆಚ್ಚು ಹೆಚ್ಚು ಕ್ರೀಡಾಕೂಟಗಳು ನಡೆಯುತ್ತಿರುವುದು ಶ್ಲಾಘನೀಯವೆಂದ ಶಾಸಕರು ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಬಹುಮಾನ ವಿತರಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಪ್ರೋತ್ಸಾಹ ಅಗತ್ಯವೆಂದರು. ತಾವು ಕೂಡ ಒಳ್ಳೆಯ ಕ್ರಿಕೆಟ್ ಆಟಗಾರನಾಗಿದ್ದು, ಲೆದರ್ ಬಾಲ್ ಪಂದ್ಯವನ್ನು ಹೆಚ್ಚು ಇಷ್ಟ ಪಡುತ್ತಿದೆ. ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಉತ್ತೇಜಿಸುತ್ತಿರುವ…

Read More

ಮಡಿಕೇರಿ ಮೇ 12 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಲೆದರ್ ಬಾಲ್ “ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್” ಅಂತಿಮ ಪಂದ್ಯಾಟದಲ್ಲಿ ಕೂರ್ಗ್ ಬ್ಲಾಸ್ಟರ್ಸ್ ತಂಡ 28 ರನ್‌ಗಳ ಜಯ ಸಾಧಿಸಿ ಚಾಂಪಿಯನ್ ಆಗಿ ಹೊರ ಹೊಮ್ಮಿತು. ಕೂರ್ಗ್ ಯುನೈಟೆಡ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಟಾಸ್ ಗೆದ್ದ ಕೂರ್ಗ್ ಯುನೈಟೆಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಕೂರ್ಗ್ ಬ್ಲಾಸ್ಟರ್ಸ್ ತಂಡ 10 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 117 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಕೂರ್ಗ್ ಯುನೈಟೆಡ್ ತಂಡ 10 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 89 ರನ್ ಗಳನ್ನು ಗಳಿಸಿ ಸೋಲು ಒಪ್ಪಿಕೊಂಡಿತು. ಕೂರ್ಗ್ ಬ್ಲಾಸ್ಟರ್ಸ್ ತಂಡದ ಆಟಗಾರ ಸಿ.ಎ.ಕಾರ್ತಿಕ್ 35 ಬಾಲ್ ಗಳಲ್ಲಿ 95 ರನ್ ಗಳನ್ನು ಸಿಡಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.…

Read More

ಮಡಿಕೇರಿ ಮೇ 12 NEWS DESK : ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ  ಕೆ.ಕೆ.ಮಂಜುನಾಥ್ ಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿ ಫಾರಂ ನೀಡಿ ಶುಭ ಹಾರೈಸಿದರು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಜರಿದ್ದರು. ಈ ಬಾರಿ ನನ್ನ ಗೆಲುವು ಖಚಿತವೆಂದು ಇದೇ ಸಂದರ್ಭ ಕೆ.ಕೆ.ಮಂಜುನಾಥ್ ಕುಮಾರ್  ತಿಳಿಸಿದರು.

Read More

ಮಡಿಕೇರಿ ಮೇ 12 NEWS DESK : ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯ ವಿವಿಧೆಡೆ ನಸುಕಿನಲ್ಲಿ ಅಥವಾ ರಾತ್ರಿ ವೇಳೆ ಗಾಳಿ, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಸಿಡಿಲಬ್ಬರ ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ. ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯ ಕಾಲೂರು ಗ್ರಾಮದ ಬಾರಿಕೆ ಮೊಟ್ಟೆ ಎಂಬಲ್ಲಿ ಶನಿವಾರ ರಾತ್ರಿ ಜೋರಾಗಿ ಮಳೆ ಸುರಿದು ಸಿಡಿಲು ಬಡಿದ ಪರಿಣಾಮ ಮನೆಯೊಂದಕ್ಕೆ ಹಾನಿಯಾಗಿದೆ. ಸಿಡಿಲಬ್ಬರಕ್ಕೆ ಮನೆಯ ಒಂದು ಭಾಗ ಬಿದ್ದು ಹೋಗಿದೆ. ಮನೆಯಲ್ಲಿದ್ದ ಲಿಂಗಮ್ಮ ಹಾಗೂ ಅವರ ಪುತ್ರ ಕಿರಣ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಬಿದ್ದು ಸುಮಾರು 10 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಮನೆಯವರು ಹೇಳಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗಾಳಿಬೀಡು ಗ್ರಾಮ ಪಂಚಾಯ್ತಿ ಪಿಡಿಓ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಲಿಂಗಮ್ಮ ಅವರಿಗೆ ಧೈರ್ಯ ತುಂಬಿದರು. ಸರಕಾರದ ಮೂಲಕ ಅಗತ್ಯ ಸಹಕಾರ…

Read More

ಮಡಿಕೇರಿ ಮೇ 12 NEWS DESK : ಪ್ರತಿ ಮಳೆಗಾಲದಲ್ಲಿ ಪ್ರವಾಹದಿಂದ ದ್ವೀಪದಂತ್ತಾಗುತ್ತಿದ್ದ ಭಾಗಮಂಡಲದಲ್ಲಿ ಮೇಲುಸೇತುವೆ ಕಾಮಗಾರಿ ಕೊನೆಗೂ ಪೂರ್ಣಗೊಂಡಿದೆ. ಇದೀಗ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಸೇತುವೆಯನ್ನು ಮುಕ್ತಗೊಳಿಸಲಾಗಿದೆ. ಕಾವೇರಿ ನೀರಾವರಿ ನಿಗಮದ ಮೂಲಕ ಕಾಮಗಾರಿ ಅನುಷ್ಠಾನಗೊಂಡಿದ್ದು, ಒಟ್ಟು 28 ಕೋಟಿ ರೂ.ಗಳಲ್ಲಿ ಸೇತುವೆ ನಿರ್ಮಾಣಗೊಂಡಿದೆೆ. ಈ ಮೇಲ್ಸೇತುವೆ ಭಾಗಮಂಡಲ ಪ್ರವೇಶ ದ್ವಾರದ ಮುಂದಿನಿಂದ ಪ್ರಾರಂಭವಾಗಿ ತಲಕಾವೇರಿ ರಸ್ತೆಯನ್ನು ಸಂಪರ್ಕಿಸುತ್ತದೆ. ಮಾತ್ರವಲ್ಲದೇ ಭಾಗಮಂಡಲ ಹೃದಯ ಭಾಗದಿಂದ ಮೇಲ್ಭಾಗವಾಗಿ ಮತ್ತೊಂದು ಸಂಪರ್ಕ ರಸ್ತೆ ನಾಪೋಕ್ಲು ಕಡೆಗೆ ತೆರಳುವ ಸೇತುವೆ ಬಳಿ ಕೊನೆಗೊಳ್ಳುತ್ತದೆ. ಒಟ್ಟು 880 ಮೀಟರ್ ಉದ್ದವಿದ್ದು, ಮಡಿಕೇರಿ-ಭಾಗಮಂಡಲ, ಭಾಗಮಂಡಲ-ತಲಕಾವೇರಿ, ಭಾಗಮಂಡಲ-ಅಯ್ಯಂಗೇರಿ ಎಂಬಂತೆ ಒಟ್ಟು 3 ಭಾಗಗಳಾಗಿ ವಿಂಗಡಿಸಲಾಗಿದೆ. ಸೇತುವೆಯಲ್ಲಿ 60 ಟನ್ ಗೂ ಮೇಲ್ಪಟ್ಟ ಭಾರದ ವಾಹನಗಳು ಸಂಚರಿಸಬಹುದಾಗಿದ್ದು, 40 ಕಿ.ಮೀ ವೇಗದ ಮಿತಿ ನಿಗಧಿ ಮಾಡಲಾಗಿದೆ. ವಿದ್ಯುತ್ ದೀಪಗಳು, ಕೇಬಲ್, ಮಳೆ ನೀರು ಹರಿಯಲು ಪೈಪ್ ಗಳನ್ನು ಅಳವಡಿಸಲಾಗಿದ್ದು, ಸುಣ್ಣಬಣ್ಣ ಬಳಿಯುವ ಕಾರ್ಯ ಪೂರ್ಣಗೊಂಡಿದೆ. ಭಾಗಮಂಡಲ ಹಾಗೂ ತಲಕಾವೇರಿ…

Read More

ಮಡಿಕೇರಿ ಮೇ 12 NEWS DESK : ಕೇರಳದ ಕ್ಯಾಲಿಕಟ್ ನಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮಾದಾಪುರದ ಇಗ್ಗೋಡ್ಲು ಗ್ರಾಮದ ರಾಘವೇಂದ್ರ ಎಚ್.ಎಸ್ ಅವರ ಪುತ್ರಿ ಬೃಂದಾ ಎಚ್.ಆರ್ ಬೆಳ್ಳಿಯ ಪದಕ ಹಾಗೂ ಸತೀಶ್ ಕುಮಾರ್ ಅವರ ಪುತ್ರಿ ಸಾತ್ವಿಕ ಬಿ.ಎಸ್ ಕಂಚಿನ ಪದಕ ಗೆದ್ದಿದ್ದಾರೆ. ಈ ಇಬ್ಬರು ವಿದ್ಯಾರ್ಥಿನಿಯರಿಗೆ ಸುದರ್ಶನ್ ಮಕ್ಕಂದೂರು ಅವರು ತರಬೇತಿ ನೀಡಿದ್ದಾರೆ.

Read More

ACCIDENT ಪಾವಗಡ ಮೇ 12 NEWS DESK : ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಮುಖ್ಯ ಶಿಕ್ಷಕರು ಮೃತಪಟ್ಟಿರುವ ಘಟನೆ ಪಾವಗಡ ತುಮಕೂರು ಮಾರ್ಗದ ಕಣಿವೆನಹಳ್ಳಿ ಗೇಟ್ ಬಳಿ ಶನಿವಾರ ರಾತ್ರಿ ನಡೆದಿದೆ. ಪಾವಗಡ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಪ್ರೌಢಶಾಲಾ ವಿಭಾಗದ ಪ್ರಾಂಶುಪಾಲರಾದ ಓ.ಧನಂಜಯ ಹಾಗೂ ಗೌಡೇಟಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಕೃಷ್ಣ ಮೃತ ದುರ್ದೈವಿಗಳು. ಇದೇ ವಾಹನದಲ್ಲಿದ್ದ ಶಿಕ್ಷಕರಗಳಾದ ಆರ್.ಎಂ.ನರಸಿಂಹ ಹಾಗೂ ವೆಂಕಟಾಚಲಪತಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ತುಮಕೂರಿನಲ್ಲಿ ಶಿಕ್ಷಕಿ ಶೋಭಾ ಎನ್ನುವವರ ಪುತ್ರಿಯ ವಿವಾಹದ ಆರಕ್ಷತೆಯನ್ನು ಮುಗಿಸಿ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಪಾವಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More