ಮಡಿಕೇರಿ ಜೂ.20 NEWS DESK : ಹಳೆಯ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪ ಪಟ್ಟಣದಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಕಟ್ಟಡ ನೆಲಸಮಗೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಒಬ್ಬರನ್ನು ಮೈಸೂರು ಆಸ್ಪತೆಗೆ ಸ್ಥಳಾಂತರಿಸಲಾಗಿದೆ. ಇನ್ನೂ ಮೂವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕಟ್ಟಡದಲ್ಲಿದ್ದ ಮಳಿಗೆಯಲ್ಲಿ ಬಿರಿಯಾನಿ ಸೆಂಟರ್ ನಡೆಯುತ್ತಿತ್ತು.
ಲೇಖಕ: admin
ಮಡಿಕೇರಿ ಜೂ.20 NEWS DESK : ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮೈಸೂರು ಹಾಗೂ ಮೈಸೂರು-ಮಂಡ್ಯ ಮತ್ತು ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ಜೂ.22 ರಂದು ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯಕಾರ್ಯನಿರ್ವಾಹಕರುಗಳಿಗೆ ವಿಷಯಾಧಾರಿತ ತರಬೇತಿ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಹೋಟೆಲ್ ದಿ ಫೋರ್ಟ್ ಮರ್ಕರಾ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಜಿ ನಂಜನಗೌಡ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮಾಜಿ ನಿರ್ದೇಶಕ ಎಸ್.ಕೆ.ಮಂಜುನಾಥ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮಾಜಿ ನಿರ್ದೇಶಕ ಹಾಗೂ ಪೊನ್ನಂಪೇಟೆ ಇಗ್ಗುತ್ತಪ್ಪ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ನಿರ್ದೇಶಕ ಎಂ.ಕೆ.ಸೋಮಯ್ಯ, ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಎಸ್.ಆರ್. ನಾರಾಯಣ ರಾವ್, ಸಹಕಾರ ಸಂಘಗಳ ನಿವೃತ್ತ ಹಿರಿಯ…
ಮಡಿಕೇರಿ ಜೂ.20 NEWS DESK : ಭಾರತೀಯ ಜನತಾ ಪಾರ್ಟಿ ಸೋಮವಾರಪೇಟೆ ಮಂಡಲ ಮತ್ತು ಕುಶಾಲನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಜೂ.21 ರಂದು 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ ಎಂದು ಸೋಮವಾರಪೇಟೆ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ. ಕುಶಾಲನಗರದ ರೈತ ಸಹಕಾರ ಭವನದಲ್ಲಿ ಬೆಳಿಗ್ಗೆ 7.15ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಬಿಜೆಪಿಯ ಹಿರಿಯ ಮುಖಂಡ ಜಿ.ಎಲ್.ನಾಗರಾಜ್ ಉದ್ಘಾಟಿಸಲಿದ್ದಾರೆ. ಯೋಗ ಶಿಕ್ಷಕ ಶಿವರಾಂ ಯೋಗ ತರಬೇತಿ ನೀಡಲಿದ್ದಾರೆ. ಆಸಕ್ತರು ಯೋಗ ಮ್ಯಾಟ್ ತರುವಂತೆ ಅವರು ಮನವಿ ಮಾಡಿದ್ದಾರೆ.
ವಿರಾಜಪೇಟೆ ಜೂ.20 NEWS DESK : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ವಿರೋಧಿಸಿ ವಿರಾಜಪೇಟೆ ಪಟ್ಟಣದಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗಡಿಯಾರ ಕಂಬದ ಬಳಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಕಾಂಗ್ರೆಸ್ ನಾಯಕರುಗಳ ಪ್ರತಿಕೃತಿಯನ್ನು ದಹಿಸಿ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ರಾಜ್ಯ ಕಾಂಗ್ರೆಸ್ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದರಿಂದ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿ ಜನಸಾಮಾನ್ಯರ ಜೀವನ ಸಂಕಷ್ಟಕ್ಕೆ ಸಿಲುಕಲಿದೆ. ಆಟೋ, ಟ್ಯಾಕ್ಸಿ ಚಾಲಕರು ಕೂಡ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಆರೋಪಿಸಿದರು. ಸರಕಾರ ತಕ್ಷಣ ಬೆಲೆ ಇಳಿಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬಿಜೆಪಿ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ, ಪ್ರಧಾನ ಕಾರ್ಯದರ್ಶಿಗಳಾದ ಮಂಜು ಗಣಪತಿ, ಅಜಿತ್ ಕರುಂಬಯ್ಯ, ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ವಿವಿಧ ಮೋರ್ಚಾ, ಪ್ರಕೋಷ್ಠ, ಶಕ್ತಿ ಕೇಂದ್ರ, ಬೂತ್ ಮತ್ತಿತರ ಘಟಕಗಳ ಪ್ರಮುಖರು…
ಕುಶಾಲನಗರ ಜೂ.20 NEWS DESK : ಶಿಕ್ಷಕರು ಶಾಲಾ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸುವ ಮೂಲಕ ಅವರನ್ನು ಭವಿಷ್ಯದಲ್ಲಿ ಉತ್ತಮ ಪರಿಸರ ಸಂರಕ್ಷಕರಾಗಿ ರೂಪಿಸುವಲ್ಲಿ ವಿಶೇಷ ಗಮನ ಹರಿಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಸಲಹೆ ನೀಡಿದರು. ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕದ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಇಕೋ ಕ್ಲಬ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ವತಿಯಿಂದ ಶಾಲಾವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಸಂಭ್ರಮಾಚರಣೆಯಲ್ಲಿ ನೇರಳೆ ಗಿಡ ನೆಟ್ಟು ಮಾತನಾಡಿದರು. ಅರಣ್ಯ ಮತ್ತು ಪರಿಸರ ಸಂರಕ್ಷಣೆ ನೆಮ್ಮಲ್ಲರ ಕರ್ತವ್ಯವಾಗಿದೆ. ಹಣ ಆಸ್ತಿಗಳಿಕೆಗಿಂತಲೂ ಉತ್ತಮ ಪರಿಸರ ಮನುಕುಲದ ಸಂಪತ್ತು. ಮಾನವ ಪ್ರಕೃತಿ ಒಂದು ಅವಿಭಾಜ್ಯ ಅಂಗ. ಪ್ರಕೃತಿ ಉಳಿದರೆ ಮಾತ್ರ ಮಾನವನ ಉಳಿವು ಸಾಧ್ಯವಾಗುತ್ತಿದೆ. ಪ್ರಕೃತಿ ಮತ್ತು ಮನುಷ್ಯ ಒಂದೇ ನಾಣ್ಯದ ಎರಡು ಮುಖಗಳಂತೆ. ಮಾನವ…
ಮಡಿಕೇರಿ ಜೂ.20 NEWS DESK : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಕೆ ಮಾಡುವ ಮೂಲಕ ಬಡವರು ಹಾಗೂ ಕಾರ್ಮಿಕ ವರ್ಗವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಆರೋಪಿಸಿ ಸಿಪಿಐಎಂನ ವಿರಾಜಪೇಟೆ ಘಟಕ ಪ್ರತಿಭಟನೆ ನಡೆಸಿತು. ವಿರಾಜಪೇಟೆ ಪಟ್ಟಣದ ಗಡಿಯಾರ ಕಂಬದ ಬಳಿ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಸಿಪಿಐಎಂ ಪ್ರಮುಖರು ಹಾಗೂ ಕಾರ್ಯಕರ್ತರು ಸರಕಾರ ತನ್ನ ನಿರ್ಧಾರವನ್ನು ಬದಲಾಯಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಜಿಲ್ಲಾ ಸಮಿತಿಯ ಕಾರ್ಯದರ್ಶಿ ಎ.ಸಿ.ಸಾಬು ಮಾತನಾಡಿ ಅಧಿಕಾರಕ್ಕೆ ಬರುವ ಮೊದಲು ಹಲವು ಗ್ಯಾರಂಟಿಗಳ ಆಮಿಷವೊಡ್ಡಿದ್ದ ಕಾಂಗ್ರೆಸ್ ಇದೀಗ ಸರಕಾರ ರಚನೆಯಾದ ನಂತರ ಜನಸಾಮಾನ್ಯರಿಗೆ ಹೊರೆಯಾಗುವ ರೀತಿಯಲ್ಲಿ ಬೆಲೆ ಏರಿಕೆಯಲ್ಲಿ ತೊಡಗಿದೆ ಎಂದು ಟೀಕಿಸಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳೆರಡೂ ಅಧಿಕ ತೆರಿಗೆ ವಿಧಿಸಿರುವುದರಿಂದ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿದೆ. ಇದು ಬಡವರು ಹಾಗೂ ಕಾರ್ಮಿಕ ವರ್ಗದ ಮೇಲೆ ಪರಿಣಾಮ ಬೀರುತ್ತಿದ್ದು, ಜೀವನ ಸಾಗಿಸುವುದೇ…
ಸಿದ್ದಾಪುರ ಜೂ.19 NEWS DESK (ಅಂಚೆಮನೆ ಸುಧಿ) : ನೆಲ್ಲಿಹುದಿಕೇರಿ, ಅಭ್ಯತ್ ಮಂಗಲ, ವಾಲ್ನೂರು ತ್ಯಾಗತ್ತೂರು, ರಂಗಸಮುದ್ರ, ಅರೆಕಾಡು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಕಾಡಾನೆಗಳಿಂದಾಗುತ್ತಿರುವ ನಷ್ಟಕ್ಕೆ ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡಬೇಕೆಂದು ಬೆಳೆಗಾರರು ಒತ್ತಾಯಿಸಿದ್ದಾರೆ. ನೀರು ಮತ್ತು ಆಹಾರ ಹುಡುಕಿಕೊಂಡು ಬರುತ್ತಿರುವ ಆನೆಗಳ ಹಿಂಡು ಕಾಫಿ ತೋಟಗಳು ಮಾತ್ರವಲ್ಲದೆ ಮನೆಯಂಗಳಕ್ಕೂ ದಾಳಿ ಮಾಡಿ ದಾಂಧಲೆ ನಡೆಸುತ್ತಿವೆ. ಕಾಡಾನೆಗಳ ದಾಳಿಯಿಂದ ಇಲ್ಲಿನ ಜನ ಆತಂಕದಲ್ಲಿದ್ದು, ಅರಣ್ಯ ಇಲಾಖೆ ಅಸಹಾಯಕವಾಗಿದೆ. ಅರಣ್ಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರೆ ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ಮತ್ತು ತೋಟಗಳಿಗೆ ಆನೆಗಳು ಸ್ಥಳಾಂತರಗೊಳ್ಳುತ್ತಿವೆಯೇ ಹೊರತು ಮರಳಿ ಕಾಡು ಸೇರುತ್ತಿಲ್ಲ. ಈ ಭಾಗದಲ್ಲಿ 6 ರಿಂದ 10 ಕಾಡಾನೆಗಳ ಹಿಂಡು ಸೇರಿಕೊಂಡಿದ್ದು, ಇವುಗಳಲ್ಲಿ ಕಾಲು ನೋವಿನಿಂದ ಕುಂಟುತ್ತಿರುವ ಆನೆಯೂ ಇದೆ. ಇದು ತೋಟಗಳ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ದೃಶ್ಯ ಸೆರೆಯಾಗಿದೆ. ಹತ್ತಾರು ಕಾಡಾನೆಗಳು ತೋಟ ಮತ್ತು ಕೃಷಿಭೂಮಿಗೆ ಹಾನಿಗೊಳಿಸುತ್ತಿದ್ದು, ಕೃಷಿಕ ವರ್ಗ ಆತಂಕದೊಂದಿಗೆ ಅಸಹಾಯಕತೆಯನ್ನು ವ್ಯಕ್ತಪಡಿಸುತ್ತಿದೆ.…
ಮಡಿಕೇರಿ ಜೂ.20 NEWS DESK : ಸುಂಟಿಕೊಪ್ಪದ ಕೆ.ಸೌಮ್ಯಶ್ರಿ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ದೊರಕಿದೆ. ಮಂಗಳೂರು ವಿ,ವಿ,ಯ ಅನ್ವಯಿಕ ಸಸ್ಯಶಾಸ್ತ್ರವಿಭಾಗದ ಪ್ರೊ.ರಾಜು ಕೃಷ್ಣ ಚಲನ್ನಾವರ್ ಮಾಗ೯ದಶ೯ನದಲ್ಲಿ ಸೌಮ್ಯಶ್ರೀ ಮಂಡಿಸಿದ ಔಷಧೀಯ ಸಸ್ಯಗಳ ಸಾರಗಳಿಂದ ಸಂಭಾವ್ಯ ನೈಸಗಿ೯ಕ ಜೈವಿಕ ಸಕ್ರಿಯ ಸಂಯುಕ್ತಗಳ ತಪಾಸಣೆ ಮತ್ತು ಮಲೇರಿಯಾ ಹರಡುವ ಸೊಳ್ಳೆಗಳ ಮೇಲೆ ಅವುಗಳ ಪರಿಣಾಮ ಎಂಬ ವಿಚಾರದ ಪ್ರಬಂಧಕ್ಕಾಗಿ ಮಂಗಳೂರು ವಿಶ್ವವಿದ್ಯಾನಿಲಯದ 42ನೇ ಘಟಿಕೋತ್ಸವದಲ್ಲಿ ಪಿ.ಎಚ್.ಡಿ ಲಭ್ಯವಾಗಿದೆ. ಡಾ.ಸೌಮ್ಯ ಶ್ರೀ ಸುಂಟಿಕೊಪ್ಪದ ಅಶ್ವಿನಿ ಮೆಡಿಕಲ್ಸ್ ನ ಗೋಪಾಲಭಟ್, ತಾರಾ ದಂಪತಿಯ ಸೊಸೆಯಾಗಿದ್ದು. ಕೆ.ನಿಖಿಲ್ ಭಟ್ ಅವರ ಪತ್ನಿಯಾಗಿದ್ದಾರೆ. ಕಾಸರಗೋಡು ಕಾಕುಂಜೆಯ ಶಂಕರನಾರಾಯಣ ಭಟ್, ಮಾಲತಿ ಭಟ್ ಅವರ ದ್ವಿತೀಯ ಪುತ್ರಿಯಾಗಿದ್ದಾರೆ.
ಮಡಿಕೇರಿ ಜೂ.20 NEWS DESK : ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ವತಿಯಿಂದ (ಐ.ಎಮ್.ಎ) 2024ನೇ ಸಾಲಿನ ‘ಕರ್ನಾಟಕ ರಾಜ್ಯ ಶಾಖೆ ವೈದ್ಯರ ದಿನ’ ಪ್ರಶಸ್ತಿಗೆ ಮಡಿಕೇರಿಯ ಡಾ.ಮೋಹನ್ ಅಪ್ಪಾಜಿ ಅವರು ಆಯ್ಕೆಯಾಗಿದ್ದಾರೆ. ಜು.1 ರಂದು ಬೆಂಗಳೂರಿ ಮೆಡಿಕಲ್ ಕಾಲೇಜು ಆವರಣದಲ್ಲಿ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿ ಮೋಹನ್ ಅಪ್ಪಾಜಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ನಾಪೋಕ್ಲು ಜೂ.20 NEWS DESK : ಮೈಸೂರಿನಲ್ಲಿ ನಡೆದ ಗೋಜು ವಾರಿಯರ್ಸ್ ಕಪ್ ರಾಷ್ಟ್ರಮಟ್ಟದ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ನಾಪೋಕ್ಲು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಹಳೆ ತಾಲೂಕಿನ ಅಂಕುರ್ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಸಿಂತ್ಯಾ ಕಟಾ ವಿಭಾಗದಲ್ಲಿ ತೃತೀಯ, ಬೇತು ಗ್ರಾಮದ ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಕೆ.ಪಿ.ಅಂಜನ್ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ತೃತೀಯ ಹಾಗೂ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿ ಅದ್ವಿಕ್ ಭೀಮಯ್ಯ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಇವರು ಚೆಟ್ಟಿಯಾರಂಡ ದಿಲನ್ ತಿಮ್ಮಯ್ಯ ಮತ್ತು ಧೀರಜ್ ಕಾರ್ಯಪ್ಪ ಸಹೋದರರಿಂದ ತರಬೇತಿ ಪಡೆಯುತ್ತಿದ್ದಾರೆ. ವರದಿ : ದುಗ್ಗಳ ಸದಾನಂದ.






