ಮಡಿಕೇರಿ ಮೇ 16 NEWS DESK : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ, ಅಗ್ನಿ ಶಾಮಕ ದಳ, ಗೃಹ ರಕ್ಷಕ ದಳ, ಸ್ಥಳೀಯಾಡಳಿತಗಳು ಜಂಟಿಯಾಗಿ ಮಳೆಗಾಲ ಮುನ್ನೆಚ್ಚರಿಕೆ ಕುರಿತು ಪ್ರಾತ್ಯಕ್ಷಿಕೆ ನಡೆಸಿದವು. ಹಾರಂಗಿ ಹಿನ್ನೀರಿನಲ್ಲಿ ಬೋಟ್ ಹಾಗೂ ಲೈಫ್ ಜಾಕೆಟ್ ಬಳಸಿ ಪ್ರವಾಹ ಸಂದರ್ಭ ಜನ,ಜಾನುವಾರು, ಅಮೂಲ್ಯ ಆಸ್ತಿ ರಕ್ಷಣೆ ಕುರಿತಂತೆ ಪೊಲೀಸ್, ಅಗ್ನಿ ಶಾಮಕ ದಳ ಸಿಬ್ಬಂದಿಗಳು ಪೂರ್ವ ತರಬೇತಿ ಪಡೆದರು. 3 ಡಿವೈಎಸ್ ಪಿ, 3 ಸಿಪಿಐ, 15 ಪಿಎಸ್ ಐ, 15 ಅಗ್ನಿ ಶಾಮಕ ದಳ, 7 ಗೃಹ ರಕ್ಷಕ ದಳ ಹಾಗೂ 41 ಪೊಲೀಸ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಮಾಹಿತಿ ನೀಡಿದ್ದಾರೆ.
ಲೇಖಕ: admin
ವಿರಾಜಪೇಟೆ ಮೇ 16 NEWS DESK : ವಿರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಮಂಗಲ, ಮಗ್ಗುಲ ಮತ್ತು ವೈಪಡ ಗ್ರಾಮಗಳ ಗ್ರಾಮ ದೇವತೆಗಳಾಗಿ ನೆಲೆನಿಂತ ಶ್ರೀ ಭದ್ರಕಾಳಿಯ ಬೋಡ್ ನಮ್ಮೆ ಆರಂಭಗೊಂಡಿದೆ. ಐಮಂಗಲ ಗ್ರಾಮದ ಶ್ರೀ ಭದ್ರಕಾಳಿ ದೇವಾಲಯದ ಆವರಣದಲ್ಲಿ ಮೂರು ಗ್ರಾಮಗಳ ದೇವತಕ್ಕರು, ಗ್ರಾಮಗಳ ಅಧ್ಯಕ್ಷರುಗಳು, ಗ್ರಾಮಸ್ಥರ ಸಮ್ಮುಖದಲ್ಲಿ ಕೊಟ್ಟಿಯಂಡ ಜೀವನ್ ಅವರು ಕಟ್ಟು ವಿಧಿ ಅನುಸರಿಸುವ ವಿಧಾನಗಳು ದೇವ ನೆಲೆಯಲ್ಲಿ ಓದಿ ತಿಳಿಸುವ ಮೂಲಕ ಬೋಡ್ ನಮ್ಮೆಗೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಕೊಟ್ಟಿಯಂಡ ಜೀವನ್ ಅವರು ಐಮಂಗಲ ಗ್ರಾಮದಲ್ಲಿ ಹಿರಿಯ ಅಕ್ಕ ಎರಡನೇಯವರು ವೈಪಡ ಗ್ರಾಮದಲ್ಲಿ ಕೊನೆ ತಂಗಿಯಾಗಿ ಮಗ್ಗುಲ ಗ್ರಾಮದಲ್ಲಿ ಶ್ರೀ ಭದ್ರಕಾಳಿಯಾಗಿ ನೆಲೆ ನಿಂತಿದ್ದಾರೆ, ಎರಡು ವರ್ಷಗಳಿಗೊಮ್ಮೆ ಮೂರು ಗ್ರಾಮಗಳು ಸೇರಿ ಹಬ್ಬ ಆಚರಣೆ ಮಾಡಲಾಗುತ್ತದೆ ಎಂದರು. ಮೇ 16, 17, 18 ರಂದು ಮೂರು ದಿನಗಳ ಕಾಲ ಸಂಜೆ ವೇಳೆಯಲ್ಲಿ 1101 ಸುತ್ತು ಪೀಲಿ ಆಟ್ ಮತ್ತು ತಾಲಿಪಾಟ್ ಕಾರ್ಯಕ್ರಮ…
ಮಡಿಕೇರಿ ಮೇ 16 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗ ಹಾಗೂ ಪ್ರವಾಸೋದ್ಯಮ ಮತ್ತು ಪ್ರವಾಸ ನಿರ್ವಹಣಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ “ವೃತ್ತಿ ನಿರ್ಮಾಣ ಮತ್ತು ವೃತ್ತಿಪರ ಕೌಶಲ್ಯಗಳು” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಘವ ಬಿ. ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಲು ಶಿಸ್ತು, ಆತ್ಮವಿಶ್ವಾಸ, ಪರಿಶ್ರಮ ಹಾಗೂ ಕೌಶಲ್ಯಾಭಿವೃದ್ಧಿಯ ಮಹತ್ವವನ್ನು ತಿಳಿಸಿದರು. ಶ್ರೀನಿವಾಸ್ ವಿಶ್ವವಿದ್ಯಾಲಯದ ಬಿಸಿನೆಸ್ ಅಡ್ಮಿನಿಸ್ಟ್ರೇಶನ್ ವಿಭಾಗ ಮುಖ್ಯಸ್ಥರಾದ ಡಾ. ಕಾವ್ಯಶ್ರೀ ವೃತ್ತಿಪರ ಕೌಶಲ್ಯಾಭಿವೃದ್ಧಿ ಕುರಿತು ಉಪನ್ಯಾಸ ನೀಡಿ, ಸಂವಹನ ಕೌಶಲ್ಯ, ನಾಯಕತ್ವ, ತಂಡದೊಂದಿಗೆ ಕಾರ್ಯನಿರ್ವಹಣೆ, ವೃತ್ತಿಪರ ನೈತಿಕತೆ ಹಾಗೂ ಸಕಾರಾತ್ಮಕ ಮನೋಭಾವದ ಮಹತ್ವವನ್ನು ವಿವರಿಸಿದರು. ಸಹಾಯಕ ಪ್ರಾಧ್ಯಾಪಕರಾದ ಸಾಗರ್ ಶ್ರೀನಿವಾಸ್ ಮಾತನಾಡಿ, ಉತ್ತಮ ರೆಸ್ಯೂಮ್ ತಯಾರಿಸುವ ವಿಧಾನ ಹಾಗೂ ವೃತ್ತಿ ಸಿದ್ಧತೆಯ ಕುರಿತು ಮಾಹಿತಿ…
ಮಡಿಕೇರಿ ಮೇ 16 NEWS DESK : ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರ ಮಗ್ಗುಲದಲ್ಲಿ ಮೇ 19 ರಂದು ಬೆಳಗ್ಗೆ 10 ರಿಂದ 05 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ಶಾಖಾ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ವಿರಾಜಪೇಟೆ ಪಟ್ಟಣ, ಕಾಕೋಟುಪರಂಬು, ಕದನೂರು, ಕೆದಮುಳ್ಳೂರು, ಬಿಟ್ಟಂಗಾಲ, ಬಿ ಶೆಟ್ಟಿಗೇರಿ, ಆರ್ಜಿ, ಬೇಟೋಳಿ, ಸಿದ್ದಾಪುರ ಪಟ್ಟಣ, ಮಾಲ್ದಾರೆ, ಕರಡಿಗೋಡು, ಗುಹ್ಯ, ಅಮ್ಮತ್ತಿ, ಚೆಂಬೆಬೆಳ್ಳೂರು, ಹಾಲುಗುಂದ, ಕಣ್ಣಂಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ ಮಗ್ಗುಲ 66/33/11 ಕೆ.ವಿ. ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯನ್ನು ಕೈಗೆತ್ತಿಕೊಂಡಿರುವುದರಿಂದ 33ಕೆವಿ ಮೂರ್ನಾಡು ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು 33/11 ಕೆವಿ ಮೂರ್ನಾಡು ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಪಾರಾಣೆ, ನಾಪೋಕ್ಲು, ಮೂರ್ನಾಡು, ಹೊದ್ದೂರು ಹಾಗೂ ಮರಗೋಡು ಫೀಡರ್‍ನಲ್ಲಿ ಮೇ, 19 ರಂದು ಬೆಳಗ್ಗೆ 9.30…
ಮಡಿಕೇರಿ ಮೇ 16 NEWS DESK : ನಗರದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಯ ಸ್ಥಳಕ್ಕೆ ಪ್ರತಿಮೆ ನಿರ್ಮಾಣ ಶಿಲ್ಪಿ ಕೃಷ್ಣ ನಾಯಕ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಸುಮಾರು 2 ರಿಂದ 3 ಸೆಂಟ್ ಜಾಗದಲ್ಲಿ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, 9 ಅಡಿ ಎತ್ತರದ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಸ್ಥಾಪಿಸುವ ಬಗ್ಗೆ ಪ್ರತಿಮೆ ನಿರ್ಮಾಣ ಸಮಿತಿ ಸದಸ್ಯರ ಜೊತೆ ಚರ್ಚಿಸಿದರು. ಈ ಸಂದರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಸ್.ಸಿ.ಸತೀಶ್ ಮಾತನಾಡಿ ಶಾಸಕರು, ನಗರಸಭೆ ಅಧ್ಯಕ್ಷರು ಮತ್ತು ಸದಸ್ಯರ ಒಮ್ಮತದ ಸಹಕಾರದಿಂದ ನಗರದಲ್ಲಿ ಹಲವಾರು ವರ್ಷಗಳಿಂದ ಬೇಡಿಕೆಯಂತೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಈಗಾಗಲೇ ಕಾಮಗಾರಿ ಆರಂಭವಾಗಿದೆ. ಸುಮಾರು 44 ಲಕ್ಷ ರೂ. ವೆಚ್ಚದಲ್ಲಿ ಡಾ.ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಮತ್ತು ಉದ್ಯಾನವನ ನಿರ್ಮಾಣವಾಗಲಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು. ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಾರದ ನಾಗರಾಜ್, ನಗರಸಭೆ ಮಾಜಿ…
ಮಡಿಕೇರಿ ಮೇ 16 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಅತ್ಯಂತ ಕುಗ್ರಾಮ ಎಂದೇ ಬಿಂಬಿತರಾಗಿರುವ ಗಾಳಿಬೀಡು ಪಂಚಾಯತ್ ವ್ಯಾಪ್ತಿಯ 2 ನೇ ಮೊಣ್ಣಂಗೇರಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಗೆ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರು 35 ಲಕ್ಷ ರೂಗಳ ಭರಪೂರ ಅನುದಾನವನ್ನು ನೀಡಿದ್ದಾರೆ. ಅತ್ಯಂತ ದುರ್ಗಮವಾದ ಹಾದಿಗಳನ್ನು ಹೊಂದಿರುವ 2 ನೇ ಮೊಣ್ಣಂಗೇರಿ ಗ್ರಾಮ 2018 ರ ಪ್ರಕೃತಿ ವಿಕೋಪದಲ್ಲಿ ಬಹು ಸಂಕಷ್ಟಕ್ಕೆ ಒಳಗಾದ ಪ್ರದೇಶವಾಗಿದ್ದು, ಅಲ್ಲಿನ ಜನರ ಕೋರಿಕೆ ಮೇರೆಗೆ ಶಾಸಕರು 35 ಲಕ್ಷ ರೂ ವೆಚ್ಚದ ರಸ್ತೆ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ಸಲ್ಲಿಸಿದರು. ಕ್ಷೇತ್ರದ ಪ್ರತಿಯೊಬ್ಬ ಪ್ರಜೆಯು ಸರ್ಕಾರದ ಸೌಲಭ್ಯ ಪಡೆಯಲು ಅರ್ಹನಾಗಿದ್ದು ಅದನ್ನು ಒದಗಿಸುವ ಕರ್ತವ್ಯ ಜನಪ್ರತಿನಿಧಿಯ ಜವಾಬ್ದಾರಿ ಎಂದು ಮಾತನಾಡಿದ ಡಾ|| ಮಂತರ್ ಗೌಡ ರವರು ಕುಗ್ರಾಮ ಎಂದು ಅಪಖ್ಯಾತಿ ಹೊಂದಿರುವ 2 ನೇ ಮೊಣ್ಣಂಗೇರಿ ಗ್ರಾಮವನ್ನು ಸುಗ್ರಾಮವಾಗಿಸಲು ಬದ್ದನಾಗಿದ್ದೇನೆ ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು. ಶೀಘ್ರದಲ್ಲಿಯೇ ಕಾಮಗಾರಿಯನ್ನು ಉತ್ತಮ…
ಮಡಿಕೇರಿ ಮೇ 16 NEWS DESK : ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ ‘ಸಮಾಧಾನ ಸಮಾರೋಹ-2026’ ಎಂಬ ವಿಶೇಷ ಲೋಕ ಅದಾಲತ್‍ನ್ನು ಆ.21, 22 ಮತ್ತು 23 ರಂದು ಮೂರು ದಿನಗಳ ಕಾಲ ಹಮ್ಮಿಕೊಂಡಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ. ಸರ್ವೋಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಸಂಧಾನಕ್ಕಾಗಿ ಗುರುತಿಸಿ ಈ ವಿಶೇಷ ಲೋಕ ಅದಾಲತ್ ಆಯೋಜಿಸಿದ್ದು, ಆಸಕ್ತಿವುಳ್ಳವರು ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ನೋಂದಣಿಗೆ ಸಹ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸುವ ಮೂಲಕ ಸಾರ್ವಜನಿಕರು ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ಇಂದಿನಿಂದಲೇ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಆಯ್ಕೆಯಾದ ವ್ಯಾಜ್ಯಗಳನ್ನು ನೋಂದಾಯಿತ ಕಾನೂನು ಸಮನ್ವಯಕರ ಮಧ್ಯಸ್ಥಿಕೆಯಲ್ಲಿ ತಾವಿರುವ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿಯೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ…
ಮಡಿಕೇರಿ ಮೇ 16 NEWS DESK : ಮಡಿಕೇರಿ ತಾಲ್ಲೂಕಿನ 12ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 20 ರಂದು ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ಕಡಂಗ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಸಮ್ಮೇಳನದ ಕುರಿತು ಮಾಹಿತಿ ನೀಡಿದರು. ಜಾನಪದ ತಜ್ಞರಾದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ, ಕೊಡವ ಕೌಟುಂಬಿಕ ಹಾಕಿಯ ಸಂಸ್ಥಾಪಕರಾದ ಪಾಂಡಂಡ ಕುಟ್ಟಣಿ ಸಭಾ ಮಂಟಪದಲ್ಲಿ ನಡೆಯಲಿದೆ. *11 ಪ್ರವೇಶ ದ್ವಾರಗಳು* ಕನ್ನಡದ ಹಬ್ಬದ ಅಂಗವಾಗಿ ಕಡಂಗ ಪಟ್ಟಣದಲ್ಲಿ 11 ಮಂದಿ ಹಿರಿಯರ ನೆನಪಿನ ದ್ವಾರಗಳನ್ನು ರಚಿಸಲಾಗಿದೆ. ಅವುಗಳೆಂದರೆ ಕುಲ್ಲಚಂಡ ದಿ.ಲಾಲು ಮೇದಯ್ಯ ಮತ್ತು ದಿ.ದೇವಕ್ಕ ಪ್ರವೇಶ ದ್ವಾರ, ಕೋಡಿರ ದಿ.ಮನು ಮೊಣ್ಣಪ್ಪ ನೆನಪಿನ ದ್ವಾರ, ದೇಯಿರ ಕುಟುಂಬಸ್ಥರ ನೆನಪಿನ ಪ್ರವೇಶ ದ್ವಾರ, ಮೇದುರ ದಿ.ನಂಜಪ್ಪ ಹಾಗೂ ದಿ.ಸೀತಮ್ಮ ನೆನಪಿನ ಪ್ರವೇಶ…
ಮಡಿಕೇರಿ ಮೇ 16 NEWS DESK : ಆದಿವಾಸಿಗಳ ಹಕ್ಕಿಗಾಗಿ ಹೋರಾಟಗಳನ್ನು ನಡೆಸುತ್ತಿದ್ದ ಕಾರ್ಡ್ ಸಂಸ್ಥೆಯ ಪ್ರಮುಖ ಹಾಗೂ ಸಾಮಾಜಿಕ ಕಾರ್ಯಕರ್ತ ಕುಶಾಲನಗರದ ರಾಯ್ ಡೇವಿಡ್ (70) ಹೃದಯಾಘಾತದಿಂದ ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸೋಮವಾರಪೇಟೆ ತಾಲ್ಲೂಕು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಆರ್.ಕೆ.ಚಂದ್ರು, ಗಿರಿಜನ ಮುಖಂಡ ಜೆ.ಪಿ.ರಾಜು ಹಾಗೂ ಆದಿವಾಸಿ ಸಂಘಟನೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ಮಡಿಕೇರಿ ಮೇ 15 NEWS DESK : ವಿಶ್ವ ತಾಯಂದಿರ ದಿನದ ಅಂಗವಾಗಿ ಪ್ರತಿನಿಧಿ ಪತ್ರಿಕೆಯ ವತಿಯಿಂದ ಕೊಡ ಮಾಡುವ ಮಹಾತಾಯಿ ಪ್ರಶಸ್ತಿ ಯನ್ನು ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ಪೋಷಕರಾದ ಜಮೀಲ ಅವರು ಪಡೆದುಕೊಂಡರು. ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.






