ಮಡಿಕೇರಿ ಮೇ 10 NEWS DESK : ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ಕಾವೇರಿ ಜಲಾನಯನ ಪ್ರದೇಶದ ಜಮೀನುಗಳನ್ನು ಕೃಷಿಯೇತರ ಭೂಮಿಯನ್ನಾಗಿ ಪರಿವರ್ತಿಸಬಾರದು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಧರಣಿ ನಡೆಸಿದ ಪ್ರಮುಖರು ಭೂಪರಿವರ್ತನೆಗೆ ಅವಕಾಶ ನೀಡುವ ಸರಕಾರದ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು. ವಾಣಿಜ್ಯೋದ್ಯಮ ಉದ್ದೇಶಕ್ಕಾಗಿ ಭೂಪರಿವರ್ತಿಸುವುದನ್ನು ಸಂಪೂರ್ಣವಾಗಿ ತಡೆಯಬೇಕು. ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ ಭೂಪರಿವರ್ತನಾ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಎನ್.ಯು.ನಾಚಪ್ಪ ಅವರು ಮಾತನಾಡಿ ಕೊಡಗಿನ ಕಾಫಿ ತೋಟಗಳನ್ನು ಭೂಪರಿವರ್ತಿಸುವ ಮೂಲಕ ಭೂಮಾಫಿಯಾ, ರೆಸಾರ್ಟ್ ದೊರೆಗಳು, ರಿಯಲ್ ಎಸ್ಟೇಟ್ ದಣಿಗಳು, ಅನಿವಾಸಿ ಭಾರತೀಯ ಉದ್ಯಮಪತಿಗಳು, ಬಹುರಾಷ್ಟ್ರೀಯ ಕಂಪನಿಗಳು ಮತ್ತು ಕಾರ್ಪೋರೇಟ್ ವಲಯಗಳಿಗೆ ವಿಲಾ, ಬೃಹತ್ ಬಂಗಲೆ ಹಾಗೂ ಟೌನ್ ಶಿಪ್ ಗಳನ್ನು ನಿರ್ಮಿಸಲು ಸರಕಾರ ಅವಕಾಶ ನೀಡಲು ಮುಂದಾಗಿದೆ. ಕಾವೇರಿ…
ಲೇಖಕ: admin
ನಾಪೋಕ್ಲು ಮೇ 10 NEWS DESK : ಮೈಸೂರಿನ ಡೀ ಪೌಲ್ ಇಂಟರ್ನ್ಯಾಷನಲ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಪಂದ್ಯಾಟದಲ್ಲಿ ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಯುವಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ರೇಖಾ ಚಿಣ್ಣಪ್ಪ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಮೇ 10 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ ಲೆದರ್ ಬಾಲ್ ‘ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್’ನ ದಿನದ ಎರಡು ಪಂದ್ಯಗಳನ್ನು ಮುಂಜಾನೆ ನಗರದಲ್ಲಿ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ರದ್ದುಗೊಳಿಸಿ ತಂಡಗಳಿಗೆ ಸಮಾನ ಅಂಕಗಳನ್ನು ಹಂಚಲಾಯಿತು. ಭಾರೀ ಮಳೆಯಿಂದ ಮೈದಾನ ಸಂಪೂರ್ಣ ಕೆಸರು ಮಯವಾಗಿ, ಕ್ರಿಕೆಟ್ ಆಡಲು ಅಸಾಧ್ಯವಾಗಿ ಪರಿಣಮಿಸಿದ ಹಿನ್ನೆಲೆ ಆಯೋಜಕರು ಪಂದ್ಯಗಳನ್ನು ರದ್ದುಗೊಳಿಸಿದರು. ದಿನದ ಮೊದಲ ಪಂದ್ಯ ಕೂರ್ಗ್ ಯುನೈಟೆಡ್ ಮತ್ತು ಕೊಡವ ವಾರಿಯರ್ಸ್ ನಡುವೆ ನಡೆಯಬೇಕಿತ್ತಾದರು, ಆಟ ಸಾಧ್ಯವಾಗದ ಹಿನ್ನೆಲೆ ಎರಡೂ ತಂಡಗಳಿಗೆ ಸಮಾನ ಅಂಕಗಳನ್ನು ಹಂಚಲಾಯಿತು. ಕೂರ್ಗ್ ಬ್ಲಾಸ್ಟರ್ಸ್ ಮತ್ತು ರಾಯಲ್ ಟೈಗರ್ಸ್ ನಡುವಿನ ದಿನದ ದ್ವಿತೀಯ ಪಂದ್ಯವನ್ನು ರದ್ದುಗೊಳಿಸಿ, ಅಂಕಗಳನ್ನು ಹಂಚಿರುವುದಾಗಿ ಆಯೋಜಕರು ತಿಳಿಸಿದ್ದಾರೆ.
ನಾಪೋಕ್ಲು ಮೇ 10 NEWS DESK : ಮೂರ್ನಾಡು ಪ್ರಥಮ ದರ್ಜೆ ಕಾಲೇಜು ಹಾಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು. ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಡಾ.ಕರುoಬಯ್ಯ ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವ ಹಾಗೂ ಅದರ ಅಗತ್ಯತೆಯ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿನಿ ಹರ್ಷಿತ ರಕ್ತದಾನದ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸ್ವಯಂ ಪ್ರೇರಿತರಾಗಿ ರಕ್ತದಾನವನ್ನು ಮಾಡಿದರು. ಸುಮಾರು 41 ಯೂನಿಟ್ ಗಳಷ್ಟು ರಕ್ತವನ್ನು ಸಂಗ್ರಹಿಸಲಾಯಿತು. ಕಾರ್ಯಕ್ರಮದಲ್ಲಿ ಮೂರ್ನಾಡು ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾ. ಚೌರಿರ ಜಗತ್ ತಿಮ್ಮಯ್ಯ, ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಖಜಾಂಚಿ ವಿ.ಎ.ಯತೀಶ್, ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಖಾ ಚಿಣ್ಣಪ್ಪ, ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಕಲ್ಪನಾ ಸಾಮ್ರಾಟ್, ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಸೋಮವಾರಪೇಟೆ ಮೇ 10 NEWS DESK : ಬಸವಣ್ಣ ಈ ನಾಡಿನ ಸಾಂಸ್ಕೃತಿಕ ಅಡಿಪಾಯದ ಬುನಾದಿ ಕಟ್ಟಿದ ಮಹಾನ್ ಪುರುಷ, ಈ ರಾಷ್ಟ್ರದ ಸಾಂಸ್ಕೃತಿಕ ನಾಯಕನಾಗಬೇಕು ಎಂದು ಸರ್ವಧರ್ಮ ಗುರುಗಳು ಬಣ್ಣಿಸಿದರು. ಸೋಮವಾರಪೇಟೆಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ, 891 ಬಸವ ಜಯಂತಿ ಅಂಗವಾಗಿ ಪಟ್ಟಣದ ಕಕ್ಕೆಹೊಳೆ ಬಳಿಯಲ್ಲಿರುವ ಬಸವೇಶ್ವರ ಪ್ರತಿಮೆಗೆ ಸರ್ವದರ್ಮೀಯರು ಸೇರಿ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಕರ್ನಾಟಕ ರಾಜ್ಯ ಸರ್ಕಾರ ಬಸವೇಶ್ವರರನ್ನು ರಾಜ್ಯದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಮೊದಲ ಬಸವ ಜಯಂತಿ ಕಾರ್ಯಕ್ರಮದಲ್ಲಿ ಹಿಂದೂ, ಕ್ರೈಸ್ತ, ಮುಸಲ್ಮಾನ ಧರ್ಮಗುರುಗಳು ಸೇರಿದಂತೆ ಎಲ್ಲಾ ಜನಾಂಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾವೈಕ್ಯತೆ ಮೆರೆದಿದ್ದು ವಿಶೇಷವಾಗಿತ್ತು. ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, 12ನೇ ಶತಮಾನದಲ್ಲಿಯೇ ಬಸವಣ್ಣನವರು ಜಾತಿ, ಮತ, ಬೇಧ ತೊಡೆದು ಎಲ್ಲಾರೂ ಒಂದೇ ಎಂದು ಸಮಾನತೆ ಸಾರಿದ ಮಹಾನ್ ಪುರುಷ, ಅವರ ತತ್ವ ಆದರ್ಶಗಳನ್ನು ಇಂದಿನ ಜನಾಂಗ ಅನುಸರಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದರು. ಹಟ್ಟಿಹೊಳೆ…
ಕುಶಾಲನಗರ ಮೇ 10 NEWS DESK : ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಆಶ್ರಯದಲ್ಲಿ ಮೇ 12 ರಂದು ವರ್ತಕರ ಸ್ನೇಹ ಮಿಲನ ಕಾರ್ಯಕ್ರಮ ನಡೆಯಲಿದೆ ಎಂದು ಅಧ್ಯಕ್ಷ ರವೀಂದ್ರ ರೈ ತಿಳಿಸಿದ್ದಾರೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30 ಕ್ಕೆ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಚೇಂಬರ್ ಅಪ್ ಕಾಮರ್ಸ್ ಉಪಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಚೇಂಬರ್ ಪ್ರಮುಖರಾದ ಎಸ್.ಕೆ.ಸತೀಶ್, ಪಿ.ಪಿ.ಸತ್ಯನಾರಾಯಣ, ಬಿ.ಅಮೃತ್ ರಾಜ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಮಡಿಕೇರಿಯ ವಿಕ್ರಂ ಜಾದುಗಾರ ಅವರಿಂದ ಮ್ಯಾಜಿಕ್ ಶೋ ನಡೆಯಲಿದೆ. ವರ್ತಕರ ಕುಟುಂಬ ಸದಸ್ಯರಿಗೆ ವಿವಿಧ ರೀತಿಯ ಆಟೋಟಗಳನ್ನು ಹಮ್ಮಿಕೊಳ್ಳಲಾಗಿದೆ. ಸಂಜೆ 4.30 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಎಸ್.ಎಲ್.ಎನ್. ಸಂಸ್ಥೆಯ ಎನ್.ವಿಶ್ವನಾಥನ್, ಚೇಂಬರ್ ನ ಕೊಡಗು ಜಿಲ್ಲಾ ನಿರ್ದೇಶಕ ಎಂ.ಡಿ.ರಂಗಸ್ವಾಮಿ, ಕೆ.ಎಸ್.ರಾಜಶೇಖರ್, ಟಿ.ಆರ್.ಶರವಣಕುಮಾರ್ ಪಾಲ್ಗೊಳ್ಳಲಿದ್ದಾರೆ. ಕಾರ್ಕಳದ ವಾಗ್ಮಿ ರಾಜೇಂದ್ರ ಭಟ್ ಮುಖ್ಯ ಭಾಷಣಕಾರರಾಗಿ ಪಾಲ್ಗೊಳ್ಳುವರು…
ನಾಪೋಕ್ಲು ಮೇ 10 NEWS DESK : ಕೊಡಗು ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚೇರಂಬಾಣೆಯ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಯಶಸ್ ಮಂದಣ್ಣ ಸಾಧನೆ ಮಾಡಿದ್ದಾನೆ. 11 ವರ್ಷದೊಳಗಿನ ಬಾಲಕರ ಪಂದ್ಯಾವಳಿಯಲ್ಲಿ ಸಿಂಗಲ್ಸ್ ನಲ್ಲಿ ರನ್ನರ್ಸ್ ಪ್ರಶಸ್ತಿ ಹಾಗೂ ಡಬಲ್ಸ್ ನಲ್ಲಿ ವಿನ್ನರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾನೆ. ಕೆಕ್ಕಡ ಬೋಪಣ್ಣ ಮತ್ತು ಗೀತಾ ದಂಪತಿಯ ಪುತ್ರನಾಗಿರುವ ಯಶಸ್ ಮಂದಣ್ಣ, ಚೇರಂಬಾಣೆಯ ರಾಜರಾಜೇಶ್ವರಿ ವಿದ್ಯಾ ಸಂಸ್ಥೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಇವನು ವಿದ್ಯಾಸಂಸ್ಥೆಯ ನಾಟೋಳಂಡ ವಿಜು ಅವರಲ್ಲಿ ತರಬೇತಿ ಪಡೆಯುತ್ತಿದ್ದಾನೆ. ವರದಿ : ದುಗ್ಗಳ ಸದಾನಂದ.
ಮಂಗಳೂರು, ಮೇ 10 NEWS DESK : ಉತ್ತಮ ಸಾಮಾಜದ ನಿರ್ಮಾಣದ ಶಕ್ತಿ ಮಾಧ್ಯಮ ಗಳಿಗಿದೆ. ಮುಖ್ಯವಾಗಿ ಯುವಜನರಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸಬೇಕಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾಭವನದಲ್ಲಿ ಹಮ್ಮಿಕೊಂಡ ಪ.ಗೋ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆ.ಎಂ. ಇಸ್ಮಾಯಿಲ್ ಕಂಡಕರೆ ಗೆ ಪ.ಗೋ ಪ್ರಶಸ್ತಿ ವಿತರಿಸಿ ಮಾತನಾಡಿದರು. ಮಾಧ್ಯಮಗಳು ಪರಂಪರೆಯ ಕೊಂಡಿಯಾಗಿ ಉತ್ತಮ ಭವಿಷ್ಯ ರೂಪಿಸುವಲ್ಲಿ ಕಾರ್ಯ ನಿರ್ವಹಿಸು ತ್ತಾ ಬಂದಿದೆ. ಮಂಗಳೂರು ವಿಶ್ವ ವಿದ್ಯಾನಿಲಯದ ಬೆಳವಣೆಗೆಯಲ್ಲಿ ಮಹತ್ವದ ಪಾತ್ರವಹಿಸಿದೆ.ಯುವ ಜನರಲ್ಲಿ ಕಲಿಕೆಯ ಬಗ್ಗೆ ಇರುವ ನಿರಾಸಕ್ತಿಯನ್ನು ದೂರ ಮಾಡಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಪಿ.ಎಲ್.ಧರ್ಮ ತಿಳಿಸಿದ್ದಾರೆ. ಮಾಧ್ಯಮ ಗಳು ಪದ ಬಳಕೆಯ ಬಗ್ಗೆ ಎಚ್ಚರಿಕೆ ವಹಿಸಬೇಕು.ಸಮಾಜದಲ್ಲಿನ ವಿಕೃತಿಗಳನ್ನು ಮೀರಿ ಮಾಧ್ಯಮಗಳು ಸಮಾಜದ ಉತ್ತಮ ಭವಿಷ್ಯವನ್ನು ರೂಪಿಸುವ ಶಕ್ತಿ ಯನ್ನು ಹೊಂದಿದೆ ಈ ನಿಟ್ಟಿನಲ್ಲಿ ಮಾಧ್ಯಮಗಳು ಗಮನಹರಿಸಲು ಮನವಿ ಮಾಡುವುದಾಗಿ ಪ್ರೊ.ಪಿ. ಎಲ್.ಧರ್ಮ ತಿಳಿಸಿದ್ದಾರೆ. ಸಮಾರಂಭದಲ್ಲಿ ಮುಖ್ಯ…
ಮಡಿಕೇರಿ ಮೇ 10 NEWS DESK : ಗಾಂಧಿ ಯುವಕ ಸಂಘ ಕಂಡಕರೆ ಹಾಗೂ ಸರ್ವಧಮೀಯ ಬಡ ಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ವತಿಯಿಂದ ಇದೇ ಮೊದಲ ಬಾರಿಗೆ ನೀಡಲಾಗುತ್ತಿರುವ “ಭರವಸೆಯ ನಾಯಕ” ಪ್ರಶಸ್ತಿಗೆ ಅಂತರಾಷ್ಟ್ರೀಯ ಮಾಜಿ ರಗ್ಬಿ ಆಟಗಾರ ಹಾಗೂ ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಜೂ.9 ರಂದು ಕಂಡಕೆಯಲ್ಲಿ ನಡೆಯಲಿರುವ ಸರ್ವಧರ್ಮೀಯ ಬಡಹೆಣ್ಣ ಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ ಎಂದು ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಮೇ 10 NEWS DESK : ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಸರಳವಾಗಿ ಆಚರಿಸಲಾಯಿತು. ನಗರದ ಜಿಲ್ಲಾಡಳಿತ ಭವನದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಡಿನ ಸಾಂಸ್ಕೃತಿಕ ನಾಯಕ ಬಸವೇಶ್ವರರು ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಕರ್ನಾಟಕ ಸಾಂಸ್ಕೃತಿಕ ನಾಯಕ, ವಿಶ್ವ ಗುರು ಬಸವಣ್ಣ ಅವರ ಚಿಂತನೆಗಳು ಸಾರ್ವಕಾಲಿಕ ಎಂದು ಬಣ್ಣಿಸಿದರು. 12ನೇ ಶತಮಾನದಲ್ಲಿ ಕಾಯಕ ಜೀವಿಗಳ ಚಳುವಳಿಯ ಮೂಲಕ ಸಾಮಾಜಿಕ ಕ್ರಾಂತಿಯನ್ನೇ ನಡೆಸಿ ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದರು ಎಂದರು. ಬಸವೇಶ್ವರರು ವಚನಗಳ ಮೂಲಕ ನಾಡಿಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ವರ್ಣಿತ್ ನೇಗಿ ಹೇಳಿದರು. ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸೇರಿದಂತೆ ಬಸವಾದಿ ಶರಣರು ವಚನಕಾರರ ಬಗ್ಗೆ ಅಧ್ಯಯನ ಮಾಡಬೇಕು. ಜೊತೆಗೆ…






