ಲೇಖಕ: admin

ಸೋಮವಾರಪೇಟೆ ಏ.21 NEWS DESK : ಸಿಮೆಂಟ್ ತುಂಬಿದ ಭಾರೀ ಲಾರಿಯೊಂದು ಚಲಿಸಿದ ಪರಿಣಾಮ ಶನಿವಾರಸಂತೆ ರಸ್ತೆಯಲ್ಲಿ ಇಂಟರ್ ಲಾಕ್  ಗಳಿಗೆ ಹಾನಿಯಾಗಿದೆ. ಶಿವಕುಮಾರ ಸ್ವಾಮೀಜಿ ಬಸ್ ನಿಲ್ದಾಣದ ಬಳಿ ಸುಸಜ್ಜಿತವಾಗಿ ಇಂಟರ್ ಲಾಕ್  ಅಳವಡಿಸಲಾಗಿತ್ತು. ಇದು ಪ್ರಯಾಣಿಕರಿಗೆ ಅನುಕೂಲಕರ ವ್ಯವಸ್ಥೆಯಾಗಿತ್ತು. ಆದರೆ 40 ಟನ್ ಸಿಮೆಂಟ್ ತುಂಬಿದ ಭಾರೀ ಲಾರಿ ಚಲಿಸಿದ ಪರಿಣಾಮ ಇಂಟರ್ ಲಾಕ್ ಗಳು ಒಡೆದು ಹೋಗಿದೆ. ಸಾರ್ವಜನಿಕರ ದೂರಿನ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡರು.

Read More

ಮಡಿಕೇರಿ ಏ.21 NEWS DESK : ವಿಶ್ವಕಲಾ ದಿನಾಚರಣೆಯ ಅಂಗವಾಗಿ ಕೊಡಗು ವಿದ್ಯಾಲಯದ ವತಿಯಿಂದ ಮಡಿಕೇರಿಯ  ರಾಜಾಸೀಟಿನಲ್ಲಿ ಸಮಾಗಮ ಬೇಸಿಗೆ ಶಿಬಿರದ ಸುಮಾರು 50ಕ್ಕೂ ಹೆಚ್ಚು ಶಿಬಿರಾರ್ಥಿಗಳು ಹಾಗೂ ಕಲಾ ಶಿಕ್ಷಕರಾದ ಬಿ ಪ್ರಸನ್ನ ಕುಮಾರ್, ಪ್ರದೀಪ್ ಹಾಗೂ ಪವನ್ ಆವರೊಂದಿಗೆ   ಸ್ಥಳದಲ್ಲಿಯೇ ಪ್ರಕೃತಿ ರಮಣೀಯ ಹಸಿರ ಸೊಬಗನ್ನು ತಮ್ಮ ಕುಂಚದಲ್ಲಿ ಅರಳಿಸುವ ಮೂಲಕ ವಿಶ್ವ ಕಲಾ ದಿನಾಚರಣೆಯನ್ನು ಆಚರಿಸಿದರು. ಮುಖ್ಯ ಅತಿಥಿಯಾಗಿದ್ದ  ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ವರ್ಣಿತ್ ನೇಗಿ  ಮಾತನಾಡಿ ಚಿತ್ರಕಲೆ ಹವ್ಯಾಸವನ್ನಾಗಿ ಇದ್ದಲ್ಲಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸಹಾಯವಾಗುತ್ತದೆ ಎಂದರು. ಈ ಸಂದರ್ಭ ಅವರು ತಮ್ಮ ತಂದೆಯ ಕೊಡುಗೆಯ ಬಗ್ಗೆ ಹೇಳುತ್ತಾ ಅವರಿಂದಾಗಿ ತಾನು ಕ್ರೀಡೆ  ಹಾಗೂ ಕಲೆಯಲ್ಲಿ ಅಭಿರುಚಿ ಬೆಳೆಸಿಕೊಳ್ಳಲು ಕಾರಣವಾಯಿತು.  ತನ್ನ ಐ ಎ ಎಸ್ ಸಂದರ್ಶನ ವೇಳೆಯಲ್ಲಿ  ಹವ್ಯಾಸದ ಕುರಿತು ಹೆಚ್ಚಿನ ಪ್ರಶ್ನೆಗಳಿದುದ್ದನ್ನು ಸಹ ಸ್ಮರಿಸಿಕೊಂಡರು . ನಾವು ಹವ್ಯಾಸ ವನ್ನು ಬೆಳೆಸಿಕೊಂಡರೆ ನಮ್ಮ ಜೀವನದಲ್ಲಿ ತಾಳ್ಮೆ ಮತ್ತು ಸಹನೆಯನ್ನು ಬೆಳೆಸಿಕೊಳ್ಳಬಹುದು…

Read More

ಸೋಮವಾರಪೇಟೆ NEWS DESK : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಹತ್ಯೆಗಳು ನಡೆಯುತ್ತಿದೆ. ಸರ್ಕಾರದ ನಿರ್ಲಕ್ಷ್ಯದಿಂದ ಅಪರಾಧ ಪ್ರಕರಣಗಳು ಮಿತಿ ಮೀರಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಪದಾಧಿಕಾರಿಗಳು ಸೋಮವಾರಪೇಟೆ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ವಾಲ್ನೂರು ಗ್ರಾಮದಲ್ಲಿ ಚುನಾವಣೆ ಪ್ರಚಾರದ ಸಂದರ್ಭ ಕಾರ್ಯಕರ್ತ ರಾಮಪ್ಪ ಅವರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಮೃತರ ಕುಟುಂಬಕ್ಕೆ ಮತ್ತು ಗಾಯಾಳುಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು  ಆಗ್ರಹಿಸಿದರು. ಹುಬ್ಬಳಿ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವಳನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಪ್ರಧಾನಿ ಮೋದಿ ಅವರ ಕುರಿತು ಹಾಡು ಮಾಡಿದ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ತಾಲ್ಲೂಕು ಮಂಡಲ ಅಧ್ಯಕ್ಷ ಗೌತಮ್, ಪ್ರಧಾನ ಕಾರ್ಯದರ್ಶಿ ದರ್ಶನ್ ಜೋಯಪ್ಪ, ವಿಶ್ವ ಹಿಂದೂ…

Read More

ಮಡಿಕೇರಿ ಏ.20 NEWS DESK : ರಾಜಕೀಯ ಯಜಮಾನರಿಗೆ ಕೊಡವರು ಊಳಿಗಮಾನ್ಯ ನಿಷ್ಠೆಯನ್ನು ವ್ಯಕ್ತಪಡಿಸುವುದನ್ನು ನಿಲ್ಲಿಸಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ  ಎನ್.ಯು.ನಾಚಪ್ಪ ಕರೆ ನೀಡಿದ್ದಾರೆ. ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನಂದಿನೆರವಂಡ ಒಕ್ಕದ ವತಿಯಿಂದ ಸನ್ಮಾನ ಸ್ವೀಕರಿಸಿದ ಮಾತನಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, ಸಂವಿಧಾನವು ಅದರ ನಾಗರಿಕರನ್ನು ಆಳುವ ಅತ್ಯುನ್ನತ ದಾಖಲೆಯಾಗಿದೆ. ಈ ಘನವೆತ್ತ ಸಂವಿಧಾನದಡಿಯಲ್ಲಿ ಸೂಕ್ಷ್ಮಾತಿಸೂಕ್ಷ್ಮ ಕೊಡವರ ಹೆಗ್ಗುರುತು ರಕ್ಷಿಸುವ ಸಲುವಾಗಿ ಕೊಡವಲ್ಯಾಂಡ್ ಸಾಧಿಸುವ ಮೂಲಕ ಅಸ್ತಿತ್ವ ಮತ್ತು ಅಸ್ಮಿತೆಗಾಗಿ ಶ್ರಮಿಸೋಣ ಎಂದರು. ಕೊಡವರ ಪರ ಹೋರಾಟ ಕಠಿಣ ಕಾರ್ಯವಾಗಿದೆ. ಸರ್ಕಾರ ಮತ್ತು ಕೊಡವ ವಿರೋಧಿ ಅಂಶಗಳಿಂದ ಹಗೆತನವನ್ನು ಅನುಭವಿಸುತ್ತಿದ್ದೇವೆ. 34 ವರ್ಷಗಳ ನಿರಂತರ ಹೋರಾಟ ಕಹಿ ಸಿಹಿ ಅನುಭವದ ಸುದೀರ್ಘ ಪ್ರಯಾಣವಾಗಿದೆ. ದುಃಖವಿಲ್ಲದೆ ಗೆಲುವಿಲ್ಲ, ತ್ಯಾಗವಿಲ್ಲದೆ ಸ್ವಾತಂತ್ರ್ಯವಿಲ್ಲ ಎಂದರು. ನಾವು ನಮ್ಮ ಇತಿಹಾಸವನ್ನು ತಿಳಿದುಕೊಳ್ಳಬೇಕು, ಆಗ ಮಾತ್ರ ನಾವು ಹೊಸ ಇತಿಹಾಸವನ್ನು ರಚಿಸಬಹುದು. ಇತಿಹಾಸ ಗೊತ್ತಿಲ್ಲದವರು ಇತಿಹಾಸ ಸೃಷ್ಟಿಸಲು ಸಾಧ್ಯವೇ ಇಲ್ಲ. ನಾವು ಕೊಡವರು ಈ…

Read More

ಮಡಿಕೇರಿ ಏ.20 NEWS DESK : ಭಾರತದ ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡಿ, ರಾಜ್ಯಗಳು ಹೊಂದಿರುವ ಅವಕಾಶಗಳನ್ನು ಕಿತ್ತು ಕೊಂಡು, ಅವುಗಳನ್ನು ‘ತಬ್ಬಲಿ’ಯನ್ನಾಗಿಸುವ ಪ್ರಯತ್ನ ಕೇಂದ್ರದ ಬಿಜೆಪಿ ಸರ್ಕಾರದಿಂದ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ರಾಜ್ಯ ಪ್ರಮುಖರಾದ ಇಂದುಧರ್ ಹೊನ್ನಾಪುರ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ನಿರ್ಮೂಲನೆ ಮಾಡುವುದಾಗಿ ಹೇಳಿಕೊಂಡು ಬಂದ ಕೇಂದ್ರದ ಬಿಜೆಪಿ, ಎಲ್ಲಾ ಪಕ್ಷಗಳಲ್ಲಿದ್ದ ಭ್ರಷ್ಟರನ್ನು ತನ್ನೊಂದಿಗೆ ಸೇರಿಸಿಕೊಳ್ಳುವ ಮೂಲಕ ಕಡು ಭ್ರಷ್ಟ ಪಕ್ಷವಾಗಿದೆ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಸರ್ವಜನಾಂಗದ ಶಾಂತಿಯ ತೋಟವಾಗಿದ್ದ ಸಮಾಜದಲ್ಲಿ ಜಾತಿ ಧರ್ಮಗಳ ನಡುವೆ ವೈಷಮ್ಯದ ವಿಷ ಬೀಜವನ್ನು ಬಿತ್ತುವ ಮೂಲಕ, ದೇವರು, ಧರ್ಮದ ಹೆಸರಿನಲ್ಲೆ ರಾಜಕೀಯ ಮಾಡುತ್ತಿರುವ ಬಿಜೆಪಿ, ದೇವರು ಮತ್ತು ಧರ್ಮವನ್ನೆ ವಂಚಿಸಿದೆ. ದೇಶದ ಶ್ರೀಮಂತರ ಮೇಲಿನ ತೆರಿಗೆಯನ್ನು ತೆಗೆದು ಹಾಕಿ, ಸಮಾಜದ ರೈತರು, ಬಡವರ್ಗ ಸೇರಿದಂತೆ…

Read More

ಮಡಿಕೇರಿ ಏ.20 NEWS DESK : ಗೌಡ ಇವ್‍ನಿಂಗ್ ಸ್ಟಾರ್ಸ್ ವತಿಯಿಂದ ಅರೆಭಾಷೆ ಗೌಡ ಜನಾಂಗದ ಕ್ರಿಕೆಟ್ ಪಂದ್ಯಾವಳಿಯ 25ನೇ ವರ್ಷದ ಪ್ರಯುಕ್ತ ಮೇ14 ರಿಂದ 16ರವರೆಗೆ ಮರಗೋಡಿನ ಭಾರತಿ ಜೂನಿಯರ್ ಕಾಲೇಜು ಮೈದಾನದಲ್ಲಿ ‘ಗೌಡ ಕ್ರಿಕೆಟ್ ಲೀಗ್’ ಟೆನ್ನಿಸ್ ಬಾಲ್ ಚುಟುಕು ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮರಗೋಡಿನ ಗೌಡ ಇವ್‍ನಿಂಗ್ ಸ್ಟಾರ್‌ ನ ಅಧ್ಯಕ್ಷರಾದ ರೋಶನ್ ಕಟ್ಟೆಮನೆ, ಸಮಾಜ ಬಾಂಧವರಲ್ಲಿ ಸೌಹಾರ್ದ ಬಾಂಧವ್ಯ ಬೆಸೆಯುವ ಚಿಂತನೆಯಡಿ ಆಯೋಜಿಸಲಾಗುತ್ತಿರುವ ಗೌಡ ಕ್ರಿಕೆಟ್ ಲೀಗ್‍ನಲ್ಲಿ 14 ಫ್ರಾಂಚೈಸಿ ತಂಡಗಳು ಪಾಲ್ಗೊಳ್ಳಲಿದ್ದು, ಮೊದಲು ನೋಂದಾವಣೆ ಮಾಡಿಕೊಂಡ 182 ಆಟಗಾರರಿಗೆ ಅವಕಾಶ ನೀಡಲಾಗುತ್ತದೆಂದರು. ಪಂದ್ಯಾವಳಿ ವಿಜೇತ ತಂಡಕ್ಕೆ 55,555ರೂ. ನಗದು ಮತ್ತು ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ 33,333 ರೂ. ಮತ್ತು ಟ್ರೋಫಿ, ದ್ವಿತೀಯ ಮತ್ತು ನಾಲ್ಕನೇ ಸ್ಥಾನ ಪಡೆಯುವ ತಂಡಗಳಿಗೂ ಬಹುಮಾನಗಳನ್ನು ನೀಡುವುದಲ್ಲದೆ, ವೈಯಕ್ತಿಯ ಬಹುಮಾನಗಳು ಇರುವುದಾಗಿ ಮಾಹಿತಿ ನೀಡಿದರು. ಪಂದ್ಯಾವಳಿಯಲ್ಲಿ ಭಾಗವಹಿಸಲು ಇಚ್ಛಿಸುವ…

Read More

ಮಡಿಕೇರಿ ಏ.20 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್‍ನ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಏ.23 ರಂದು ನಗರದ ಡಾ.ಅಂಬೇಡ್ಕರ್ ಭವನದಲ್ಲಿ ‘ಪರಿಶಿಷ್ಟ ಜಾತಿ ಸಮಾವೇಶ’ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಸದಸ್ಯ ಹೆಚ್.ಎಂ.ನಂದಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಬೆಳಗ್ಗೆ 11 ಗಂಟೆಗೆ ನಡೆಯುವ ಸಮಾವೇಶದಲ್ಲಿ ಸಚಿವ ಹೆಚ್.ಸಿ.ಮಹದೇವಪ್ಪ, ಕೊಡಗು-ಮೈಸೂರು ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ, ಜಿಲ್ಲೆಯ ಶಾಸಕರುಗಳಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಸೇರಿದಂತೆ ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು. ::: ಬಡವರ ನಿರ್ಮೂಲನೆ ::: ಪ್ರಧಾನಿ ಮೋದಿ ಅವರು ಅಚ್ಛೇ ದಿನ್ ಎನ್ನುತ್ತಲೆ ಬಡವರ್ಗವನ್ನೆ ನಿರ್ಮೂಲನ ಮಾಡುವ ಕೆಲಸ ಮಾಡುತ್ತಿದ್ದಾರೆ, ಪ್ರಸ್ತುತ ಕೇಂದ್ರ ಸರ್ಕಾರ ಆರ್‍ಎಸ್‍ಎಸ್ ಅಜೆಂಡಾದಂತೆ ಮುಂದುವರಿಯುತ್ತಿದೆ. ಈ ಬಾರಿ ನಾಲ್ಕು ನೂರಕ್ಕೂ ಹೆಚ್ಚಿನ ಸ್ಥಾನಗಳನ್ನು ಪಡೆಯುವ ಬಿಜೆಪಿ ಉದ್ದೇಶ ಕೇವಲ ಸಂವಿಧಾನವನ್ನು ಬದಲಾಯಿಸುವ ಚಿಂತನೆಯದ್ದಾಗಿದೆ ಎಂದು ಟೀಕಿಸಿದ ನಂದಕುಮಾರ್, ಸಂವಿಧಾನವನ್ನು ರಕ್ಷಿಸಿ ಪ್ರಜಾಪ್ರಭುತ್ವ…

Read More

ಮಡಿಕೇರಿ ಏ.20 NEWS DESK : ನಗರದ ಕನ್ನಂಡ ಬಾಣೆಯ ಶ್ರೀ ದೃಷ್ಠಿ ಗಣಪತಿ ದೇವಾಲಯದ 20ನೇ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಏ.22 ಮತ್ತು 23 ರಂದು ನಡೆಯಲಿದೆ. ದೇವಾಲಯದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ಜರುಗಲಿದೆ. ಏ.22 ರಂದು ಸಂಜೆ 6 ಗಂಟೆಗೆ ವಾಸ್ತು ಹೋಮ, ಸ್ಥಳ ಶುದ್ಧಿ, ಬಿಂಬ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಬಲಿ, ಪ್ರಸಾದ ಶುದ್ಧಿ, ಸುದರ್ಶನ ಹೋಮ, ತೀರ್ಥ ಪ್ರಸಾದ ಹಾಗೂ ಅನ್ನದಾನ ನಡೆಯಲಿದೆ. ಏ.23 ರಂದು ಬೆಳಿಗ್ಗೆ 7 ಗಂಟೆಯಿಂದ ಸಾಮೂಹಿಕ ಗಣಹೋಮ, ಆಶ್ಲೇಷಬಲಿ, ಕಲಶಪೂಜೆ, ನಾಗತಂಬಿಲ, ಕಲಶಾಭಿಷೇಕ, ಮಹಾಪೂಜೆ, ನಾಗದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ 9449292643, 9036082678, 9945459189 ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಏ.20 NEWS DESK : ವಾಲ್ನೂರು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಅಪಘಾತ ಪ್ರಕರಣವನ್ನು ಕೊಲೆ ಎಂದು ಬಿಂಬಿಸಿ ರಾಜಕೀಯ ಲಾಭ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಬಿಜೆಪಿ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ. ಇದು ಅಪಘಾತ ಪ್ರಕರಣವಾಗಿದೆ, ಆದರೆ ಬಿಜೆಪಿಯ ಮಾಜಿ ಶಾಸಕರುಗಳು ಹಾಗೂ ಪ್ರಮುಖರು ಇದು ಕೊಲೆ ಎಂದು ಹೇಳಿಕೆ ನೀಡಿ ಪ್ರತಿಭಟನೆ ನಡೆಸುವ ಮೂಲಕ ಅಶಾಂತಿಯ ವಾತಾವರಣ ಸೃಷ್ಟಿಗೆ ಮುಂದಾಗಿದ್ದಾರೆ. ಕೊಡಗಿನ ವಿವಿಧೆಡೆ ಹುಲಿ, ಆನೆ ದಾಳಿಗಳಾಗಿ ಕೃಷಿಕರು ಹಾಗೂ ಕಾರ್ಮಿಕರು ಪ್ರಾಣ ಕಳೆದುಕೊಂಡಾಗ ಪ್ರತಿಭಟನೆ ಮಾಡದೆ ಇದ್ದವರು, ಇದೀಗ ಅಪಘಾತ ಪ್ರಕರಣವನ್ನು ಮುಂದಿಟ್ಟುಕೊಂಡು ಜನರ ಹಾದಿ ತಪ್ಪಿಸುವ ಯತ್ನವಾಗಿ ಚುನಾವಣಾ ಗಿಮಿಕ್ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಕೊಡಗಿನ ಮತದಾರರು ಪ್ರಜ್ಞಾವಂತರಾಗಿದ್ದು, ಬಿಜೆಪಿಯ ಈ ರೀತಿಯ ಕ್ಷುಲ್ಲಕ ರಾಜಕಾರಣಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ…

Read More

ವಿರಾಜಪೇಟೆ ಏ.20 NEWS DESK : ಕಾವೇರಿ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಇರ್ಪುವಿನಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಎನ್.ಎಸ್.ಎಸ್. ಸ್ವಯಂ ಸೇವಾ ವಿದ್ಯಾರ್ಥಿಗಳು ಇರ್ಪು ಶ್ರೀ ರಾಮೇಶ್ವರ ದೇವಸ್ಥಾನದ ಆವರಣ, ಹಿಂಭಾಗದ ನದಿ ಪ್ರದೇಶದ ಹಾಗೂ ಇರ್ಪು ಫಾಲ್ಸ್ ಬಳಿಯೂ ಸ್ವಚ್ಛ ಗೊಳಿಡಿದರು. ಅಲ್ಲಲ್ಲಿ ಎಸೆದಿದ್ದ ಪ್ಲಾಸ್ಟಿಕ್, ಪೇಪರ್ಸ್, ನೀರಿನ ಬಾಟಲಿಗಳು ಮುಂತಾದ ಕಸವನ್ನು ತೆಗೆದರು. ವಿದ್ಯಾರ್ಥಿಗಳ ಈ ಸೇವಾ ಕಾರ್ಯವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಬಿ.ಬಿ.ಸುನಿಲ್ ಕುಮಾರ್, ಉಪನ್ಯಾಸಕರಾದ ಬೋಜಮ್ಮ, ಕನ್ನಿಕಾ, ಶ್ರೀಮಂಗಲದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ಹಾಜರಿದ್ದರು. ಸುಮಾರು 60 ಎನ್.ಎಸ್.ಎಸ್. ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Read More