ಮಡಿಕೇರಿ ಜೂ.15 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಒಡೆಯರ್ ಅವರು ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಂಸದರಾಗಿ ಗೆಲುವು ಸಾಧಿಸಿದ ನಂತರ ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಗೆ ಆಗಮಿಸಿದ ಯದುವೀರ್ ಅವರಿಗೆ ಗಡಿಭಾಗ ಕೊಪ್ಪದಲ್ಲಿ ಬಿಜೆಪಿ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ನಂತರ ಸಂಸದರು ತಲಕಾವೇರಿ, ಭಾಗಮಂಡಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಾಪೋಕ್ಲುವಿಗೆ ತೆರಳಿದ ಅವರು ಶ್ರೀಭಗವತಿ ದೇವಾಲಯದಲ್ಲಿ ಸೂಜೆ ಸಲ್ಲಿಸಿ, ದೇವಾಲಯದ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದರು. ತಮ್ಮ ಗೆಲುವಿಗಾಗಿ ಶ್ರಮಿಸಿದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಅವರು ಜಿಲ್ಲೆಯ ಜನರ ನಿರೀಕ್ಷೆಯಂತೆ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವುದಾಗಿ ಭರವಸೆ ನೀಡಿದರು. ಪಾಡಿ ಶ್ರೀಇಗ್ಗುತ್ತಪ್ಪ ದೇವಾಲಯಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದ ಯದುವೀರ್ ಅವರು ದೇವಾಲಯದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು. ಕುಶಾಲನಗರದಲ್ಲಿ…
ಲೇಖಕ: admin
ಕೂಡಿಗೆ ಜೂ.15 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ದೈಹಿಕ ಶಿಕ್ಷಣ ವಿಭಾಗ, ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಾಲಾ ಘಟಕ, ಹಾಗೂ ರೆಡ್ ರಿಬ್ಬನ್ ಕ್ಲಬ್, ಘಟಕ ಹಾಗೂ ಭಾರತ್ ಸ್ಕೌಟ್ಸ್ & ಗೈಡ್ಸ್ ಘಟಕದ ಸಹಯೋಗದೊಂದಿಗೆ ಶಾಲಾ ಮಕ್ಕಳಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂ.21 ರಂದು ನಡೆಯಲಿರುವ ವಿಶ್ವ ಯೋಗೋತ್ಸವ ಪೂರ್ವಭಾವಿಯಾಗಿ ಮಕ್ಕಳ ಯೋಗಾಭ್ಯಾಸಕ್ಕೆ ಚಾಲನೆ ನೀಡಲಾಯಿತು. ವಿಶ್ವ ಯೋಗದ ದಿನದ ಮಹತ್ವ ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗಾಭ್ಯಾಸವು ತುಂಬಾ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ನಿರಂತರವಾಗಿ ಯೋಗಾಭ್ಯಾಸ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು. ಬೆಳಗಿನ ಯೋಗವು ನಮ್ಮ ಮೆದುಳಿನ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ನಮ್ಮ ಮೆದುಳನ್ನು ಅಧ್ಯಯನ ಮಾಡಲು ಅಥವಾ ಕೆಲಸ ಮಾಡಲು ಹೆಚ್ಚು ಸಕ್ರಿಯವಾಗಿಸುತ್ತದೆ. ಇದು ಸಂತೋಷ ಮತ್ತು…
ಮಡಿಕೇರಿ ಜೂ.15 NEWS DESK : ನಾಲಡಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು. ನಾಲಡಿ ಗ್ರಾಮಸ್ಥರಾದ ಪರದಂಡ ವಿಠಲ, ಕೋಡಿಮಣಿಯಂಡ ರವಿ ಹಾಗೂ ಪಟ್ಟೇಮನೆ ಕೃಷ್ಣ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಡ್ ಪುಸ್ತಕವನ್ನು ಕೊಡುಗೆಯಾಗಿ ನೀಡಿದರು. ಇದೇ ಸಂದರ್ಭ ಶಾಲೆಯ ಶಿಕ್ಷಕರು ಹಾಗೂ ಪೋಷಕರು ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.
ಮಡಿಕೇರಿ ಜೂ.15 NEWS DESK : ಸಿದ್ದಾಪುರದ ಕಾಫಿ ತೋಟ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಬೃಹತ್ ಭೂಪರಿವರ್ತನೆಯನ್ನು ವಿರೋಧಿಸಿ ಜೂ.17ರಂದು ಸಿದ್ದಾಪುರದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಶಾಂತಿಯುತ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಸಿದ್ದಾಪುರ ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಬೃಹತ್ ಭೂಪರಿವರ್ತನೆ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ. ಬೃಹತ್ ಭೂಪರಿವರ್ತನೆಯಿಂದ ಕೊಡಗಿನಲ್ಲಿ ಜನಸಂಖ್ಯಾ ಸ್ಫೋಟ ಸಂಭವಿಸಿ ಆದಿಮಸಂಜಾತ ಬುಡಕಟ್ಟು ಜನಾಂಗ ಮೂಲನಿವಾಸಿ ಕೊಡವರ ಅಸ್ತಿತ್ವಕ್ಕೆ ದಕ್ಕೆ ಬರಬಹುದು. ಕಾಫಿ ತೋಟವನ್ನು ಪರಿವರ್ತಿಸುವ ಮೂಲಕ ದೈತ್ಯಾಕಾರದ ವಿಲ್ಲಾಗಳು, ಮೆಗಾ ಟೌನ್‍ಶಿಪ್‍ಗಳು ಮತ್ತು ಮನೆ ನಿವೇಶನಗಳನ್ನು ನಿರ್ಮಿಸಲು ಅವಕಾಶ ಮಾಡಿಕೊಡಲಾಗುತ್ತಿದೆ. ಯುನೆಸ್ಕೋದ ವಿಶ್ವ ಪರಂಪರೆಯ ತಾಣದಡಿಯಲ್ಲಿ ಬರುವ ತಡಿಯಂಡಮೋಲ್‍ನ ಕೆಳಗೆ ಕಾಫಿ ತೋಟಗಳು ಪರಿವರ್ತನೆಯಾಗಿದೆ. ಮಕ್ಕಂದೂರಿನ ಪಶ್ಚಿಮಘಟ್ಟಗಳ ವಲಯದಲ್ಲಿ ರೆಸಾರ್ಟ್ ಅನ್ನು ನಿರ್ಮಿಸಲಾಗಿದೆ. ಗಾಳಿಬೀಡಿನ ಹಸಿರು ಬೆಲ್ಟ್…
ಮಡಿಕೇರಿ ಜೂ.15 NEWS DESK : ಇದೀಗ ಜಿಲ್ಲೆಗೆ ಮುಂಗಾರು ಕಾಲಿಟ್ಟಿದೆ.ಬಹುತೇಕ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ ಸಿಕ್ಕಿದೆ.ಆದರೆ ವಿರಾಜಪೇಟೆ ತಾಲ್ಲೂಕಿನ ಹಾಲುಗುಂದ ಗ್ರಾ.ಪಂ ವ್ಯಾಪ್ತಿಯ ಎಲಿಯಂಗಾಡು ಹಾಗೂ ಅತ್ತಪಟ್ಟಿ ವ್ಯಾಪ್ತಿಯ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರಿನ ಪೂರೈಕೆ ಮಾಡಲಾಗುತ್ತಿತ್ತು. ಆದರೆ ಇದೀಗ ಮಳೆ ಬಂದಿರುವುದರಿಂದ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಪೂರೈಕೆಯನ್ನು ಸ್ಥಗಿತಮಾಡಲಾಗಿದೆ. ಗ್ರಾಮದಲ್ಲಿ ಕೊಳವೆ ಬಾವಿಗಳು ಸಂಪೂರ್ಣ ಬತ್ತಿಹೋಗಿದ್ದು, ಅದಲ್ಲದೇ ಜಲಜೀವನ್ ಕುಡಿಯುವ ನೀರಿನ ಯೋಜನೆ ಕೂಡ ಯಾರಿಗೂ ಪ್ರಯೋಜನಕ್ಕೆ ಬಂದಿಲ್ಲ. ಎರಡು ದಿನಗಳ ಹಿಂದೆ ಗ್ರಾಮಕ್ಕೆ ಇ.ಒ ಕೂಡ ಭೇಟಿ ನೀಡಿದ್ದರು. ಸಮಸ್ಯೆ ಬಗ್ಗೆ ಅವರ ಗಮನಕ್ಕೆ ತಂದಿದ್ದರು ಕೂಡ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಗ್ರಾ.ಪಂ ಸದಸ್ಯ ಅಬ್ದುರೆಹಮಾನ್ (ಅಂದಾಯಿ) ಮಾತನಾಡಿ, ಕುಡಿಯುವ…
ಮಡಿಕೇರಿ ಜೂ.15 NEWS DESK : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಕೊಡಗು ವತಿಯಿಂದ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಜೂ.18 ರಿಂದ 24 ರವರೆಗೆ ಶಿಕ್ಷಕರಿಗೆ ನಡೆಯುವ ಮೂಲ ತರಬೇತಿ ಮತ್ತು ಮುಂದುವರೆದ ತರಬೇತಿ ನಡೆಯಲಿದೆ. ಈ ಶಿಬಿರದ ಉದ್ಘಾಟನೆಯು ಜೂ.19 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ.
ಮಡಿಕೇರಿ ಜೂ.15 NEWS DESK : ಜನಪ್ರತಿನಿಧಿಯಾಗಿ ಆಯ್ಕೆಯಾದವರು ತಮ್ಮ ಭೇಟಿಗೆ ಬರಲಿ ಎಂದು ಕಾಯುವುದರ ಬದಲು ಜನರ ಬಳಿ ತೆರಳಿ ಅವರ ಸಮಸ್ಯೆ ಆಲಿಸಿ ಬಗೆಹರಿಸಿದರೆ ಮಾತ್ರ ನೈಜ ಪ್ರಜಾಪ್ರಭುತ್ವ ಕಾಣಲು ಸಾಧ್ಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಇಂಗಿತ ವ್ಯಕ್ತಪಡಿಸಿದ್ದಾರೆ. ವಿಧಾನ ಸೌಧದಲ್ಲಿರುವ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಪೊನ್ನಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನಾ ಕಾರ್ಯಕ್ರಮಗಳನ್ನು ಕ್ಷೇತ್ರದಲ್ಲಿ ನಡೆಸಲು ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಜೂ.19 ರಂದು ವಿರಾಜಪೇಟೆ ಪಟ್ಟಣಕ್ಕೆ ಸಂಭಂದಿಸಿದಂತೆ ಜನರ ಅಹವಾಲು ಆಲಿಸಲು ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ. ನಂತರ ಪ್ರತಿ ಗ್ರಾಮೀಣ ಭಾಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಆಯಾ ಭಾಗಕ್ಕೆ ಸಂಬಂಧಿಸಿದ ನಾಗರಿಕರು ಭಾಗವಹಿಸಬಹುದು ಎಂದು ವಿನಂತಿ ಮಾಡಿದ್ದಾರೆ. ಜನಸ್ಪಂದನಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಹಿರಿಯ, ಕಿರಿಯ ಅಧಿಕಾರಿಗಳು ಉಪಸ್ಥಿತರಿದ್ದು ಜನರ ಸಮಸ್ಯೆ ಬಗೆ ಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದಾರೆ. ನಾಗರೀಕರು…
ಮಡಿಕೇರಿ ಜೂ.15 NEWS DESK : ಮೂಲತಃ ಬಾಳೆಲೆ ಗ್ರಾಮದವರಾದ ಈ ಹಿಂದೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಕ್ಯಾಪ್ಟನ್ ಮಲಚೀರ ಅಯ್ಯಪ್ಪ ಅವರು ಕೇಂದ್ರ ಸಿವಿಲ್ ಏವಿಯೇಷನ್ ಇಲಾಖೆಯ ಅಧೀನದ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯೂರಿಟಿಯ ಜಂಟಿ/ವಿಭಾಗೀಯ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಅಯ್ಯಪ್ಪ ಅವರು (2014 ಬ್ಯಾಚ್ ಐ.ಪಿ.ಎಸ್) ಕೊಡಗಿನಲ್ಲಿ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ ಬಳಿಕ ಕರ್ನಾಟಕ ಲೋಕಾಯುಕ್ತದ ಎಸ್.ಪಿ. ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಕೇಂದ್ರದ ಸೇವೆಗೆ ಅವರನ್ನು ನಿಯೋಜಿಸಲಾಗಿದೆ.
ಮಡಿಕೇರಿ ಜೂ.15 NEWS DESK: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕುಶಾಲನಗರ ವ್ಯಾಪ್ತಿಯ ಮುಳ್ಳುಸೋಗೆ ಶ್ರೀ ಕನ್ನಂಬಾಡಿಯಮ್ಮ ಮಾರಮ್ಮ ದೇವಾಲಯದ ಅಭಿವೃದ್ಧಿಗೆ ದೇಣಿಗೆ ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 1,50,000 ಚೆಕ್‍ಅನ್ನು ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ದೇವಾಲಯದ ಆಡಳಿತ ಮಂಡಳಿಗೆ ವಿತರಣೆ ಮಾಡಿದರು. ಈ ಸಂದರ್ಭ ಮಾತನಾಡಿದ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಗಣೇಶ್, ಶ್ರೀ ಕ್ಷೇತ್ರದಿಂದ ಪ್ರಸಾದ ರೂಪವಾಗಿ ಕೊಡಮಾಡಿದ ಮೊತ್ತವನ್ನು ಕೃತಜ್ಞತಾ ಪೂರಕವಾಗಿ ಸ್ವೀಕರಿಸಿದ್ದೇವೆ ಎಂದರು. ಈ ಸಂದರ್ಭ ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ರೋಹಿತ್, ವಲಯದ ಮೇಲ್ವಿಚಾರಕರಾದ ಪೂರ್ಣಿಮಾ, ಸೇವಾ ಪ್ರತಿನಿಧಿ ಕುಸುಮ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಳ್ಳುಸೋಗೆ ಒಕ್ಕೂಟದ ಅಧ್ಯಕ್ಷರಾದ ರಾಧಾ, ದೇವಸ್ಥಾನ ಆಡಳಿತ ಮಂಡಳಿಯ ನಿರ್ದೇಶಕರುಗಳು, ಸದಸ್ಯರುಗಳು ಹಾಜರಿದ್ದರು.
ಮಡಿಕೇರಿ ಜೂ.14 NEWS DESK : ಮಾನ್ಯ ಸರ್ವೋಚ್ಚ ನ್ಯಾಯಾಲಯವು ವಿಶೇಷ ಲೋಕ್ ಅದಾಲತ್‍ನ್ನು ಜುಲೈ, 29 ರಿಂದ ಆಗಸ್ಟ್, 03 ರವರೆಗೆ ನಡೆಸಲು ಉದ್ದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಪಕ್ಷಕಾರರುಗಳಿಗೆ, ಎದುರುದಾರರ ಜೊತೆ ಪೂರ್ವಭಾವಿ ಲೋಕ್ ಅದಾಲತ್‍ನ್ನು ನಡೆಸಲು ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಮಾಡಲಾಗಿರುತ್ತದೆ. ಎಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳಲ್ಲಿ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಕೇಂದ್ರಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ. ಎಲ್ಲಾ ಪಕ್ಷಕಾರರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾನ್ಯ ಸರ್ವೋಚ್ಚ ನ್ಯಾಯಾಲಯವು ನಡೆಸುವ ಪೂರ್ವಭಾವಿ ಲೋಕ್ ಅದಾಲತ್‍ನಲ್ಲಿ ಭಾಗವಹಿಸಲು ಅನುಕೂಲ ಮಾಡಲಾಗಿರುತ್ತದೆ. ಈ ವಿಶೇಷ ಲೋಕ್ ಅದಾಲತ್‍ನಲ್ಲಿ ರಾಜೀ ಸಂಧಾನಕ್ಕೆ ಗುರುತಿಸಲಾದ ಪ್ರಕರಣಗಳ ಪಟ್ಟಿಯನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ವರದಿಯಾಗಿರುತ್ತದೆ. ಇದರಿಂದ ಈ ಪ್ರಕರಣಗಳಲ್ಲಿನ ಎಲ್ಲಾ ಪಕ್ಷಕಾರರುಗಳು ತಮ್ಮ ವಾಸಸ್ಥಳಗಳ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳಲ್ಲಿ ತೆರೆಯಲಾಗಿರುವ ವಿಡಿಯೋ ಕಾನ್ಫರೆನ್ಸ್ ಕೇಂದ್ರಗಳಿಗೆ ಭೇಟಿ ಕೊಟ್ಟು ಜು.29…






