ಮಡಿಕೇರಿ ಜೂ.12 NEWS DESK : ಸೋಮವಾರಪೇಟೆ ಬಸವೇಶ್ವರ ರಸ್ತೆಯ ನಿವಾಸಿಗಳಾದ ಶಾರದ ಮತ್ತು ಎ.ಪಿ.ಶಂಕರಪ್ಪ ಅವರು 3.50 ಲಕ್ಷ ರೂ. ವೆಚ್ಚದಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿಕೊಟ್ಟ ಹಿನ್ನೆಲೆಯಲ್ಲಿ, ಶ್ರೀಗಂಧ ಹಾಲ್‌ನಲ್ಲಿ ನಡೆದ ಲಯನ್ಸ್ ಕಾರ್ಯಕ್ರಮದಲ್ಲಿ ಇಬ್ಬರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿಸೋಜಾ, ಲಯನ್ಸ್ ಅಧ್ಯಕ್ಷ ಎ.ಎಸ್.ಮಹೇಶ್, ಪದಾಧಿಕಾರಿಗಳಾದ ಕೆ.ಡಿ.ವೀರಪ್ಪ, ರೋಹಿತ್, ಕೆ.ಎಂ. ಜಗದೀಶ್, ಲಿಯೋ ಜಿಲ್ಲಾಧ್ಯಕ್ಷೆ ರಂಜಿತಾ ಶೆಟ್ಟಿ, ಅಧ್ಯಕ್ಷೆ ಪ್ರತೀಕ್ಷ ಇದ್ದರು.
ಲೇಖಕ: admin
ಸೋಮವಾರಪೇಟೆ ಜೂ.12 NEWS DESK : ಜಿಲ್ಲಾ ಲೋಕಾಯುಕ್ತ ವತಿಯಿಂದ ಸಾರ್ವಜನಿಕರ ಕೊಂದುಕೊರತೆ ಸಭೆ ಹಾಗೂ ಅಹವಾಲು ಸ್ವೀಕಾರ ಸಭೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆಯಿತು. ಲೋಕಾಯುಕ್ತ ಡಿವೈಎಸ್‌ಪಿ ಪವನ್‌ಕುಮಾರ್ ಸಾರ್ವಜನಿಕರ ಸಮಸ್ಯೆ ಆಲಿಸಿದರು. ಕೃಷಿ ಜಮೀನಿಗೆ ತೆರಳಲು ಸೂಕ್ತ ರಸ್ತೆಯಿಲ್ಲ. ಒತ್ತುವರಿ ತೆಗೆಸುವಂತೆ ಕಂದಾಯ ಇಲಾಖೆಗೆ 2020ರಲ್ಲಿ ದೂರು ನೀಡಿದ್ದೇನೆ. ರಸ್ತೆಗೆ ಬೇಲಿ ಹಾಕಿಕೊಂಡಿರುವವರಿಂದ ಜೀವಬೆದರಿಕೆ ಇದೆ. ಪೊಲೀಸ್ ಠಾಣೆಗೆ ದೂರು ನೀಡಿದರೂ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ತಲ್ತಾರೆಶೆಟ್ಟಳ್ಳಿ ಗ್ರಾಮದ ಕೆ.ಡಿ.ಗುರುಪ್ಪ ಸಮಸ್ಯೆ ಹೇಳಿಕೊಂಡರು. ದೂರು ನೀಡಿದಾಗ ಪೊಲೀಸ್ ಇಲಾಖೆ ಎರಡು ಕಡೆಯವರನ್ನು ಕರೆಸಿ ಚರ್ಚಿಸಿ ಸಮಸ್ಯೆಯನ್ನು ಇತ್ಯರ್ಥ ಪಡಿಸಬೇಕು. ಒಂದು ಕಡೆಯಿಂದ ಕರೆದು ಚರ್ಚಿಸಿದರೆ ಯಾವುದೇ ಪ್ರಯೋಜನವಿಲ್ಲ. ಕೂಡಲೇ ಇಬ್ಬರನ್ನು ಕರೆದು ಸಮಸ್ಯೆ ಪರಿಹರಿಸುವಂತೆ ಠಾಣಾಧಿಕಾರಿ ರಮೇಶ್ ಅವರಿಗೆ ಸೂಚಿಸಿದರು. ಕಂದಾಯ ಇಲಾಖಾಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಪೈಸಾರಿ ಜಾಗವಾದಲ್ಲಿ ಕೂಡಲೇ ಬಿಡಿಸಿಕೊಡುವ ಕೆಲಸ ಮಾಡಬೇಕು ಎಂದು ಡಿವೈಎಸ್‌ಸಿ ಸೂಚಿಸಿದರು. ಕೊಡ್ಲಿಪೇಟೆ ಹೇಮಾವತಿ ಹಿನ್ನೀರಿನಲ್ಲಿ ಇಟ್ಟಿಗೆ…
ಹುಣುಸೂರು ಜೂ.12 NEWS DESK : ಐದು ವರ್ಷದ ಗಂಡು ಹುಲಿಯೊಂದರ ಕಳೇಬರ ನಾಗರಹೊಳೆ ಉದ್ಯಾನವನದಲ್ಲಿ ಪತ್ತೆಯಾಗಿದೆ. ಹುಲಿಗಳ ಕಾದಾಟದಲ್ಲಿ ಈ ಹುಲಿ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ. ಹುಣಸೂರು ವನ್ಯಜೀವಿ ವಲಯದ ಲಕ್ಷ್ಮೀಪುರ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿಗಳು ಕೊಳೆತ ಸ್ಥಿತಿಯಲ್ಲಿದ್ದ ಹುಲಿ ಕಳೇಬರವನ್ನು ಪತ್ತೆ ಹಚ್ಚಿದ್ದಾರೆ. ಹಿರಿಯ ಅರಣ್ಯ ಅಧಿಕಾರಿಗಳ ಮಾರ್ಗದರ್ಶನದಂತೆ ಹುಲಿಯ ಮೃತದೇಹವನ್ನು ದಹನ ಮಾಡಲಾಯಿತು.
ಕುಶಾಲನಗರ ಜೂ.12 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು( ಕ.ಸಾ.ಪ.), ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹೆಬ್ಬಾಲೆ ವಲಯ ಕ.ಸಾ.ಪ.ಘಟಕ ಹಾಗೂ ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಭಾಷಾ ಸಂಘದ ಸಂಯುಕ್ತಾಶ್ರಯದಲ್ಲಿ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿರಾಜಪೇಟೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಳವಣಿಗೆ ಹಾಗೂ ಕ.ಸಾ.ಪ.ಅಧ್ಯಕ್ಷರುಗಳು ಕುರಿತು ಬಿ.ಜಿ.ರಘುನಾಥನಾಯಕ್ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ವಿರಾಜಪೇಟೆ ತಾಲ್ಲೂಕಿನಲ್ಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರುಗಳ ಸೇವೆಗಳು ಕುರಿತು ಏರ್ಪಡಿಸಿದ್ದ ಬಿ.ಜಿ.ರಘುನಾಥನಾಯಕ್ ಕನ್ನಡ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಮಕ್ಕಳಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯ ಅರಿವು ಮೂಡಿಸುವುದು ಮತ್ತು ಅವರನ್ನು ಉತ್ತಮ ಸತ್ಪ್ರಜೆಗಳನ್ನಾಗಿ ರೂಪಿಸುವುದು ಕನ್ನಡ ಸಾಹಿತ್ಯ ಪರಿಷತ್ತಿನ ಉದ್ದೇಶವಾಗಿದೆ ಎಂದರು. ಮಕ್ಕಳು ಕಲೆ, ಸಾಹಿತ್ಯ, ವಿಜ್ಞಾನದ ಪುಸ್ತಕಗಳನ್ನು ಓದುವ ಪ್ರವೃತ್ತಿಯೊಂದಿಗೆ ಬರವಣಿಗೆಯ ಕೌಶಲ್ಯ ಬೆಳೆಸಿಕೊಂಡು…
ಕೊಡ್ಲಿಪೇಟೆ ಜೂ.12 NEWS DESK : ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಹಾಗೂ ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಜಮಾಅತ್ ವ್ಯಾಪ್ತಿಯಲ್ಲಿ ಅತ್ಯುತ್ತಮ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್‍ಕೆಎಸ್‍ಎಸ್‍ಎಫ್ ಹಾಗೂ ಎಸ್‍ವೈಎಸ್ ಕೊಡ್ಲಿಪೇಟೆ ಶಾಖೆಯ ವತಿಯಿಂದ ಬಹುಮಾನ ವಿತರಿಸಲಾಯಿತು. ನೂರ್ ಮಹಲ್ ನಲ್ಲಿ ನಡೆದ ಮಾಸಿಕ ಮಜ್ಲಿಸುನ್ನೂರ್ ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಮುಹಮ್ಮದ್ ಆಶಿರ್ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಫಾತಿಮಾ ರಿಲಾ ಬಹುಮಾನವನ್ನು ಪಡೆದುಕೊಂಡಿದ್ದಾರೆ. ಮದ್ರಸ +2 ತರಗತಿಯಲ್ಲಿ ನಜ್ಮಾ, 10 ನೇ ತರಗತಿಯಲ್ಲಿ ಫಾತಿಮತ್ ಸ್ವಾಲಿಹ, 7 ನೇ ತರಗತಿಯಲ್ಲಿ ಸಬೀಲ್ ಹಾಗೂ 5 ನೇ ತರಗತಿಯಲ್ಲಿ ಆಯಿಷಾ ತಸೀರ ಪ್ರಥಮ ಬಹುಮಾನವನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಮಸ್ಜಿದುನ್ನೂರ್ ಖತೀಬರಾದ ಶಾಫಿ ಫೈಝಿ, ತಜಲ್ಲಿಯಾತ್ ಮದರಸ ಮುಖ್ಯೋಪಾಧ್ಯಾಯರಾದ ರಝಾಕ್ ಫೈಝಿ, ಮಸ್ಜಿದುನ್ನೂರ್ ಅಧ್ಯಕ್ಷರಾದ ಸುಲೈಮಾನ್, ಎಸ್‍ಕೆಎಸ್‍ಎಸ್‍ಎಫ್ ಕೊಡಗು ಜಿಲ್ಲಾ ಕೋಶಾಧಿಕಾರಿ ಬಾಸಿತ್ ಹಾಜಿ, ರಾಜ್ಯ ಸಮಿತಿ ಸದಸ್ಯ ಸಿದ್ದೀಕ್ ಹಾಜಿ, ಎಸ್‍ವೈಎಸ್ ಕೊಡ್ಲಿಪೇಟೆ ಶಾಖಾಧ್ಯಕ್ಷರಾದ ಇಬ್ರಾಹಿಂ,…
ಮಡಿಕೇರಿ ಜೂ.12 NEWS DESK : ವೀರನಾಡು ರಕ್ಷಣಾ ವೇದಿಕೆಯ ನಿರಂತರ ಹೋರಾಟದ ಫಲವಾಗಿ ಮಡಿಕೇರಿ ನಗರದ ಗೌಳಿಬೀದಿಯ ಮುನೀಶ್ವರ ದೇವಾಲಯದ ರಸ್ತೆಯಿಂದ ರಾಜಾಸೀಟ್ ಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಅತ್ಯಂತ ಗುಣಮಟ್ಟದ ಕಾಮಗಾರಿ ನಡೆದಿದೆ ಎಂದು ವೇದಿಕೆಯ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮುನೀಶ್ವರ ದೇವಾಲಯದ ಬಳಿಯಿಂದ ಮೇಲ್ಭಾಗದ ರಾಜಾಸೀಟು ರಸ್ತೆಗೆ ಸಂಪರ್ಕ ಕಲ್ಪಿಸುವ ಹಾದಿ ಸುಮಾರು 30 ವರ್ಷಗಳಿಂದ ಹದಗೆಟ್ಟು ವಾಹನ ಸಂಚಾರ ಅಸಾಧ್ಯವಾಗಿತ್ತು. ಪಕ್ಕದ ಶಾಲಾ ವಿದ್ಯಾರ್ಥಿಗಳು ಮನೆಗಳಿಗೆ ತೆರಳಲು ಈ ದಾರಿಯನ್ನೇ ಅವಲಂಬಿಸಿದ್ದರಾದರೂ ತೀರಾ ಹದಗೆಟ್ಟ ಕಾರಣ ಸಮೀಪದ ಹಾದಿಯೊಂದು ನಿಷ್ಪ್ರಯೋಜಕವಾಗಿತ್ತು. ರಾಜಾಸೀಟ್ ರಸ್ತೆಯಲ್ಲಿ ವಾಹನದಟ್ಟಣೆ ಹೆಚ್ಚಾಗುತ್ತಿರುವುದರಿಂದ ಇಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಗೊಂಡರೆ ಇದರ ಮೂಲಕವೂ ಸಂಚಾರಕ್ಕೆ ಅನುವು ಮಾಡಿಕೊಡಬಹುದಾಗಿತ್ತು. ಇದನ್ನು ಮನಗಂಡ ವೀರನಾಡು ರಕ್ಷಣಾ ವೇದಿಕೆಯ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಅವರು ಸ್ಥಳೀಯ ನಿವಾಸಿಗಳ ಸಹಕಾರದೊಂದಿಗೆ ಕಳೆದ ಕೆಲವು ವರ್ಷಗಳಿಂದ ರಸ್ತೆ ನಿರ್ಮಾಣಕ್ಕಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಲೇ ಬಂದಿದ್ದರು.…
ಮಡಿಕೇರಿ ಜೂ.12 NEWS DESK : ಭಾರತೀಯ ಭಾಷಾ ಸಂಸ್ಥಾನ, ಉನ್ನತ ಶಿಕ್ಷಣ ಇಲಾಖೆ, ಶಿಕ್ಷಣ ಸಚಿವಾಲಯ, ಭಾರತ ಸರ್ಕಾರ ಸಹಯೋಗದಲ್ಲಿ ಮೈಸೂರಿನಲ್ಲಿ ಆಯೋಜಿಸಿದ್ದ ಭಾರತೀಯ ಶಾಸ್ತ್ರೀಯ ಭಾಷೆಗಳ ರಾಷ್ಟ್ರೀಯ ಸಮ್ಮೇಳನ (ಸಿ.ಸಿ.ಎಲ್.ಐ-24) ದಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸಿ.ಎಂ.ರೇವತಿ (ಡಾ. ಮುಲ್ಲೇಂಗಡ ರೇವತಿ ಪೂವಯ್ಯ) ಆಹ್ವಾನಿತ ಸಂಪನ್ಮೂಲ ವ್ಯಕ್ತಿಯಾಗಿ ವಿಚಾರ ಮಂಡಿಸಿದ್ದರು. ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ಸಭಾಂಗಣದಲ್ಲಿ ನಡೆದ ವಿಚಾರ ಗೋಷ್ಠಿಯಲ್ಲಿ ‘ಕನ್ನಡ ಜನಪದದೊಳಗಣ ಕೊಡವ ಜಾನಪದ’ ಎಂಬ ವಿಷಯವಾಗಿ ವಿಚಾರ ಮಂಡಿಸಿ ಗಮನಸೆಳೆದರು. ದೇಶದ ವಿವಿಧ ರಾಜ್ಯಗಳ ವಿವಿಧ ಭಾಷೆಯ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡಿದ್ದರು.
ಮಡಿಕೇರಿ ಜೂ.12 NEWS DESK : ಅವಘಡದಿಂದ ವ್ಯಕ್ತಿಯೊಬ್ಬರ ಸಾವಿಗೆ ಕಾರಣನಾದ ಆರೋಪದಡಿ ದ್ವಿಚಕ್ರ ವಾಹನವನ್ನು ಚಲಾಯಿಸಿದ್ದ ಅಪ್ರಾಪ್ತ ಬಾಲಕನನ್ನು ನ್ಯಾಯಾಲಯದ ಸೂಚನೆಯಂತೆ ಸುಧಾರಣೆಗಾಗಿ ಮೈಸೂರಿನ ಸರ್ಕಾರಿ ವೀಕ್ಷಣಾಲಯಕ್ಕೆ ಕಳುಹಿಸಲಾಗಿದೆ. ವಾಹನದ ಮಾಲೀಕರಾದ ಆತನ ತಾಯಿ ಯಶೋಧ ಎಂಬುವವರ ವಿರುದ್ಧ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯ ದುಂಡಳ್ಳಿ ಪಂಚಾಯತ್ ರಸ್ತೆಯಲ್ಲಿ ಜೂ.1 ರಂದು ರಾತ್ರಿ ಸುಮಾರು 7.15 ಗಂಟೆಗೆ ಪಾದಾಚಾರಿ ಜಯಪ್ಪ ಎಂಬುವರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹಾಸನ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಜೂ.2 ರಂದು ಕೊನೆಯುಸಿರೆಳೆದಿದ್ದರು. ಘಟನೆಗೆ ಸಂಬಂಧಿಸಿದಂತೆ ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಅಪ್ರಾಪ್ತನಿಂದ ಅಪಘಾತವಾಗಿದೆ ಎಂದು ತಿಳಿದು ಬಂದಿತ್ತು. ಸಕಲೇಶಪುರ ತಾಲ್ಲೂಕು ಚಂಗಡಹಳ್ಳಿ ಗ್ರಾಮದ ನಿವಾಸಿ ಯಶೋಧ ಎಂಬುವವರ ಅಪ್ರಾಪ್ತ ವಯಸ್ಸಿನ ಪುತ್ರ ಸ್ಕೂಟಿಯನ್ನು ಚಲಾಯಿಸುತ್ತಿದ್ದ ಎಂದು ಆರೋಪಿಸಲಾಗಿದೆ. ದ್ವಿಚಕ್ರ ವಾಹನದ ಮಾಲೀಕರಾದ ಯಶೋಧ ಹಾಗೂ ಬಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡ…
ಮಡಿಕೇರಿ ಜೂ.12 NEWS DESK : ಅಕ್ರಮವಾಗಿ ಬೀಟೆ ಮರದ ನಾಟಾಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ವಲಯ ಅರಣ್ಯ ಸಿಬ್ಬಂದಿಗಳು ಪತ್ತೆ ಹಚ್ಚಿದ್ದಾರೆ. ಕುಶಾಲನಗರದಿಂದ ಮೈಸೂರು ಕಡೆಗೆ ತೆರಳುತ್ತಿದ್ದ ವಾಹನವೊಂದನ್ನು ನಸುಕಿನ 2ಗಂಟೆ ವೇಳೆಗೆ ಅರಣ್ಯ ತಪಾಸಣಾ ಕೇಂದ್ರದ ಬಳಿ ತಪಾಸಣೆ ನಡೆಸಿದಾಗ ಲಕ್ಷಾಂತರ ರೂ. ಮೌಲ್ಯದ ಬೀಟೆ ಮರವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗುತ್ತಿದ್ದಂತೆ ಚಾಲಕ ಹಾಗೂ ಮತ್ತೊಬ್ಬ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾರೆ. ಬೀಟೆ ಮರದ 22 ನಾಟಗಳು ಮತ್ತು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಕುಶಾಲನಗರ ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್ ಪ್ರಕರಣದ ಕುರಿತು ಮಾಹಿತಿ ನೀಡಿದರು. ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರತನ್ ಕುಮಾರ್, ಉಪವಲಯ ಅರಣ್ಯಾಧಿಕಾರಿ ದೇವಯ್ಯ, ಸಿದ್ದರಾಮ ನಾಟಿಕಾರ್, ಸಾಹೇಬಣ್ಣ ತಳವಾರ್, ತಪಾಸಣಾ ಕೇಂದ್ರದ ಸಿಬ್ಬಂದಿಗಳಾದ ಮೇದಪ್ಪ ಹಾಗೂ ಹೆಚ್.ವಿ.ಧರ್ಮರಾಜು ಪಾಲ್ಗೊಂಡಿದ್ದರು.
ಮಡಿಕೇರಿ ಜೂ.12 NEWS DESK : ರಾಷ್ಟ್ರವು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯತ್ತ ಹೆಜ್ಜೆ ಹಾಕುತ್ತಿದ್ದು, ಆ ದಿಸೆಯಲ್ಲಿ ಮತ್ತಷ್ಟು ಪರಿಣಾಮಕಾರಿ ಕಾರ್ಯಗಳು ಆಗಬೇಕಿದೆ ಎಂದು ವಕೀಲರಾದ ಯಾಲದಾಳು ಮನೋಜ್ ಬೋಪಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 14 ವರ್ಷದೊಳಗಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಶಾಲೆಯಲ್ಲಿ ಓದಿಕೊಂಡು ತಮ್ಮ ಕುಟುಂಬದಲ್ಲಿ ಕೃಷಿ, ಮನೆ ಕೆಲಸಗಳನ್ನು ಮಾಡಿದರೆ ಬಾಲ ಕಾರ್ಮಿಕ ಪದ್ಧತಿ ಆಗುವುದಿಲ್ಲ. ಮಕ್ಕಳು ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು ಎಂದು ಮನೋಜ್ ಬೋಪಯ್ಯ ವಿವರಿಸಿದರು. ನಾವೂ…






